Tag: ಚಿತ್ತಗಾಂಗ್

  • ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್

    ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್

    ಢಾಕಾ: ‘ಇಸ್ಕಾನ್’ ವಿರುದ್ಧ ಮುಸ್ಲಿಂ ವ್ಯಾಪಾರಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಖಂಡಿಸಿ ಹಿಂದೂಗಳು ಬಾಂಗ್ಲಾದೇಶದ (Bangladesh) ಬಂದರು ನಗರವಾದ ಚಿತ್ತಗಾಂಗ್‌ನಲ್ಲಿ (Chittagong) ಪ್ರತಿಭಟನೆ ನಡೆಸಿದರು. ಈ ಕಾರಣಕ್ಕೆ ಬಾಂಗ್ಲಾ ಭದ್ರತಾ ಪಡೆಗಳು ಹಿಂದೂ ಸಮುದಾಯದ ಮೇಲೆ ಭಾರಿ ದಬ್ಬಾಳಿಕೆಯನ್ನು ನಡೆಸಿದೆ.

    ನ.5 ರಂದು ಹಜಾರಿ ಗಲಿ ಪ್ರದೇಶದಲ್ಲಿ ಈ ಘಟನೆಯು ಆರಂಭವಾಯಿತು. ಇಸ್ಲಾಮಿಕ್ ಗುಂಪಾದ ಜಮಾತ್-ಎ-ಇಸ್ಲಾಮಿ ಸದಸ್ಯ ಉಸ್ಮಾನ್ ಅಲಿ ಸಾಮಾಜಿಕ ಮಾಧ್ಯಮದಲ್ಲಿ ಹಿಂದೂ ಧರ್ಮ ಮತ್ತು ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ISKON) ವಿರುದ್ಧ ಅವಹೇಳನಕಾರಿ ಹೇಳಿಕೆಯ ಪೋಸ್ಟ್ ಹಾಕಿದ್ದ. ಇದನ್ನು ಖಂಡಿಸಿ ಹಿಂದೂ ನಿವಾಸಿಗಳು ಅಲಿ ಅಂಗಡಿಯ ಹೊರಗೆ ಜಮಾಯಿಸಿ ಪ್ರತಿಭಟಿಸಿದರು. ಇದು ಎರಡು ಸಮುದಾಯಗಳ ನಡುವೆ ಘರ್ಷಣೆಗೆ ಕಾರಣವಾಯಿತು. ಸುವ್ಯವಸ್ಥೆಯನ್ನು ಸರಿಪಡಿಸಲು ಬಾಂಗ್ಲಾದೇಶ ಸೇನೆ ಸೇರಿದಂತೆ ಭದ್ರತಾ ಪಡೆಗಳನ್ನು ನಿಯೋಜಿಸಿದಾಗ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತು. ಬಹಿಷ್ಕೃತ ಬಾಂಗ್ಲಾದೇಶಿ ಲೇಖಕಿ ತಸ್ಲೀಮಾ ನಸ್ರೀನ್ ಕೂಡ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮೂವರು ಮಕ್ಕಳನ್ನು ತುಂಗಭದ್ರಾ ನದಿಗೆ ತಳ್ಳಿ ವ್ಯಕ್ತಿ ಆತ್ಮಹತ್ಯೆ ಕೇಸ್‌ – ಇಬ್ಬರ ಮೃತದೇಹ ಪತ್ತೆ

    ಭದ್ರತಾ ಸಿಬ್ಬಂದಿ ನಾಗರಿಕರೊಂದಿಗೆ ಘರ್ಷಣೆ, ಅವರನ್ನು ಬೆನ್ನಟ್ಟಿ ಸೇನಾ ಸಿಬ್ಬಂದಿ ಹಾಗೂ ಪೊಲೀಸರು ಲಾಠಿ ಪ್ರಹಾರ ಮಾಡುತ್ತಿರುವ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಕೆಲವರು ಸಿಸಿಟಿವಿ ಕ್ಯಾಮೆರಾಗಳನ್ನು ಹಾಳುಗೆಡವಿದ್ದಾರೆ. ಚಿತ್ತಗಾಂಗ್ ಮೆಟ್ರೋಪಾಲಿಟನ್ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರಿಗೆ, ಪ್ರತಿಭಟನಾಕಾರರು ಇಟ್ಟಿಗೆ ಮತ್ತು ಆಸಿಡ್ ಎಸೆದಿದ್ದಾರೆ. ಒಂಬತ್ತು ಅಧಿಕಾರಿಗಳು ಗಾಯಗೊಂಡಿದ್ದಾರೆ. ಮಂಗಳವಾರ ಅಧಿಕಾರಿಗಳು 582 ವ್ಯಕ್ತಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ. ಕೃತ್ಯವೆಸಗಿದ 49 ಜನರನ್ನು ಬಂಧಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ. ಇದನ್ನೂ ಓದಿ: ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಬ್ರೇಕ್‌ ಹಾಕಲು ಮುಂದಾದ ಟ್ರಂಪ್‌

    ಹಿಂದೂ ಪ್ರಾಬಲ್ಯದ ವ್ಯಾಪಾರ ಪ್ರದೇಶವಾದ ಹಜಾರಿ ಗಲಿಯು ಭಾರೀ ಕಣ್ಗಾವಲಿನಲ್ಲಿದೆ ಮತ್ತು ನಡೆಯುತ್ತಿರುವ ಕಾರ್ಯಾಚರಣೆಗಳಿಂದಾಗಿ ಅನೇಕ ನಿವಾಸಿಗಳು ಹೊರಹೋಗಲು ಸಾಧ್ಯವಾಗುತ್ತಿಲ್ಲ. ಪೊಲೀಸರು ಆ ಪ್ರದೇಶದಲ್ಲಿ ಮನೆ-ಮನೆಗೆ ತೆರಳಿ ಶೋಧ ನಡೆಸುತ್ತಿರುವ ಬಗ್ಗೆಯೂ ವರದಿಯಾಗಿದೆ. ಇದನ್ನೂ ಓದಿ: ಜಮ್ಮು & ಕಾಶ್ಮೀರ | ಸೇನೆಯ ಗುಂಡಿಗೆ ಉಗ್ರ ಬಲಿ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

  • ಕಂಟೈನರ್ ಡಿಪೋದಲ್ಲಿ ಬೆಂಕಿ: 16 ಸಾವು, 450ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ಕಂಟೈನರ್ ಡಿಪೋದಲ್ಲಿ ಬೆಂಕಿ: 16 ಸಾವು, 450ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ಢಾಕಾ: ಬಾಂಗ್ಲಾದೇಶದ ಕಂಟೈನರ್ ಡಿಪೋಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 16 ಜನರು ಸಜೀವ ದಹನವಾಗಿದ್ದು, 450ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.

    ಚಿತ್ತಗಾಂಗ್‍ನ ಸೀತಾಕುಂಡ ಉಪಜಿಲಾದಲ್ಲಿರುವ ಕಡಮ್ರಸುಲ್ ಪ್ರದೇಶದ ಬಿಎಂ ಕಂಟೈನರ್ ಡಿಪೋದಲ್ಲಿ ಶನಿವಾರ ರಾತ್ರಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, 16 ಜನರು ಸಾವನ್ನಪ್ಪಿದ್ದಾರೆ ಮತ್ತು 450 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿತ್ತಗಾಂಗ್ ವೈದ್ಯಕೀಯ ಕಾಲೇಜು ಆಸ್ಪತ್ರೆ(ಸಿಎಂಸಿಎಚ್)ಗೆ ರವಾನಿಸಲಾಗಿದೆ. ಇದನ್ನೂ ಓದಿ: ಸಿಡಿಲು ಬಡಿದು ಅಸ್ಸಾಂನಲ್ಲಿ ಬಾಗಲಕೋಟೆ ಯೋಧ ಸಾವು

    ಪೊಲೀಸ್ ಔಟ್‍ಪೋಸ್ಟ್ ಸಬ್-ಇನ್‍ಸ್ಪೆಕ್ಟರ್(ಎಸ್‍ಐ) ನೂರುಲ್ ಆಲಂ ಅವರು ಮಾತನಾಡಿದ್ದು, ಈ ಘಟನೆಯ ಪ್ರಾಥಮಿಕ ತನಿಖೆ ವೇಳೆ, ಕಂಟೈನರ್ ಡಿಪೋಗೆ ರಾಸಾಯನಿಕಗಳಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ಇದೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಮುನ್ನವೇ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ ಬೆಂಕಿ ಮತ್ತಷ್ಟು ವ್ಯಾಪಿಸಿದೆ. ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ನಂತರ ರಾತ್ರಿ 11:45ಕ್ಕೆ ಭಾರೀ ಸ್ಫೋಟ ಸಂಭವಿಸಿದೆ ಎಂದು ವಿವರಿಸಿದರು.

    ಈ ಬೆನ್ನಲ್ಲೇ ಕಂಟೈನರ್ ಒಂದರಲ್ಲಿ ರಾಸಾಯನಿಕ ಅಂಶವಿದ್ದ ಕಾರಣ ಬೆಂಕಿ ಒಂದು ಕಂಟೇನರ್ ನಿಂದ ಮತ್ತೊಂದು ಕಂಟೇನರ್ ಗೆ ವ್ಯಾಪಿಸಿದೆ. ಈ ಸ್ಫೋಟವು ನೆರೆಹೊರೆಯನ್ನು ಬೆಚ್ಚಿಬೀಳಿಸಿದೆ. ಹತ್ತಿರದ ಮನೆಗಳ ಕಿಟಕಿ ಗಾಜುಗಳು ಒಡೆದುಹೋಗಿವೆ ಎಂದರು. ಇದನ್ನೂ ಓದಿ: ಗ್ಯಾಂಗ್ ರೇಪ್: ಅಪ್ರಾಪ್ತ ಆರೋಪಿ ಫೋಟೋ ರಿಲೀಸ್ – ಬಿಜೆಪಿ ಶಾಸಕನ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ 

    ಚಿತ್ತಗಾಂಗ್ ಅಗ್ನಿಶಾಮಕ ಸೇವೆ ಮತ್ತು ಸಿವಿಲ್ ಡಿಫೆನ್ಸ್ ಸಹಾಯಕ ನಿರ್ದೇಶಕ ಎಂಡಿ ಫಾರುಕ್ ಹೊಸೈನ್ ಸಿಕ್ದರ್ ಸೇರಿ ಸುಮಾರು 19 ಅಗ್ನಿಶಾಮಕ ಘಟಕಗಳು ಬೆಂಕಿ ನಂದಿಸಲು ಕೆಲಸ ಮಾಡುತ್ತಿವೆ. ಆರು ಆಂಬ್ಯುಲೆನ್ಸ್‌ಗಳು ಸಹ ಸ್ಥಳದಲ್ಲಿದೆ.