Tag: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ

  • ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ | RCB ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಕ್ಯಾಬಿನೆಟ್‌ ಒಪ್ಪಿಗೆ

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ | RCB ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಕ್ಯಾಬಿನೆಟ್‌ ಒಪ್ಪಿಗೆ

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stampede Case) ಸಂಬಂಧಿಸಿದಂತೆ ನ್ಯಾ.ಕುನ್ಹಾ ವರದಿ ಶಿಫಾರಸು ಜಾರಿಗೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. ಅರ್‌ಸಿಬಿ (RCB), ಕೆಎಸ್‍ಸಿಎ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕ್ಯಾಬಿನೆಟ್ ಅಧಿಕೃತ ಒಪ್ಪಿಗೆ ಸೂಚಿಸಿದೆ.

    ಈ ಪ್ರಕರಣದಲ್ಲಿ ಪೊಲೀಸರ ತಪ್ಪಿದೆ. ಅವರ ವಿರುದ್ಧ ಸಹ ಇಲಾಖಾ ತನಿಖೆ ಆಗಬೇಕು ಎಂದು ಸಚಿವರು ಒಮ್ಮತದ ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೇ ಡಿಎನ್‍ಎ ವಿರುದ್ಧವೂ ಕ್ರಿಮಿನಲ್ ಕೇಸ್ ದಾಖಲಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ.

    ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗವು ಐಪಿಎಲ್ ವಿಜಯೋತ್ಸವದ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ತನಿಖಾ ವರದಿಯನ್ನು ಜುಲೈ 12 ರಂದು ಸರ್ಕಾರಕ್ಕೆ ಸಲ್ಲಿಸಿತ್ತು. ಆರ್‌ಸಿಬಿಯ ಜೊತೆ ಬೆಂಗಳೂರು ಪೊಲೀಸರು (Bengaluru Police) ಶಾಮೀಲಾಗಿರುವ ಕಾರಣ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ಆರ್‌ಸಿಬಿ ಜೊತೆ ಬೆಂಗಳೂರು ಪೊಲೀಸರು ಶಾಮೀಲು: ಮೈಕೆಲ್ ಡಿ ಕುನ್ಹಾ ವರದಿಯಲ್ಲಿ ಏನಿದೆ?

    ವರದಿಯಲ್ಲಿ ಇದ್ದಿದ್ದೇನು?
    ಪೊಲೀಸರು ಸಂಪೂರ್ಣವಾಗಿ ಕರ್ತವ್ಯಲೋಪ ಎಸಗಿದ್ದಾರೆ. ಆರ್‌ಸಿಬಿ (RCB) ಕಾನೂನಿನ ದುರ್ಬಳಕೆ ಮಾಡಿಕೊಂಡಿದೆ. ಕಾರ್ಯಕ್ರಮದ ನಡೆಸಲು 7 ದಿನ ಮುಂಚಿತವಾಗಿ ಅನುಮತಿ ಕೋರಬೇಕಿತ್ತು. ಅನುಮತಿ ಕೊಡದೇ ಇದ್ದರೂ ಕೂಡ ಕಾರ್ಯಕ್ರಮ ನಡೆಸಿದೆ. ಕಾರ್ಯಕ್ರಮಕ್ಕೆ ಅನುಮತಿ ನೀಡದೇ ಪೊಲೀಸರು ಬಂದೋಬಸ್ತ್ ಮಾಡಿದ್ದಾರೆ. ದುರಂತ ನಡೆಯಬಹುದು ಎನ್ನುವ ವಿಚಾರ ತಿಳಿದಿದ್ದರೂ ತಡೆಯುವ ಪ್ರಯತ್ನ ಮಾಡಲಿಲ್ಲ. ಹೀಗಾಗಿ ಆರ್‌ಸಿಬಿಯ ಜೊತೆ ಪೊಲೀಸರು ಶಾಮೀಲಾಗಿದ್ದಾರೆ.

    ಆರ್‌ಸಿಬಿ ತನ್ನ ಅಧಿಕೃತ ಹ್ಯಾಂಡಲ್‌ನಲ್ಲಿ ಬೆಳಗ್ಗೆ ಎರಡು ಪೋಸ್ಟ್‌ ಮಾಡಿದ ನಂತರ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರೂ ಕ್ರೀಡಾಂಗಣಕ್ಕೆ ಪ್ರವೇಶದ ವಿಧಾನದ ವಿವರಗಳನ್ನು ನಿರ್ದಿಷ್ಟವಾಗಿ ತಿಳಿಸಿರಲಿಲ್ಲ.

    ಗೇಟ್‌ಗಳ ಪ್ರವೇಶವನ್ನು ನಿಯಂತ್ರಿಸದಿರುವುದು ಮತ್ತು ಕ್ರೀಡಾಂಗಣದ ಪ್ರವೇಶಕ್ಕೆ ಸಂಬಂಧಿಸಿದಂತೆ ಸರಿಯಾದ ವಿವರಣೆ ನೀಡದ ಕಾರಣ ಆಯೋಜಕರೇ ಕಾಲ್ತುಳಿತಕ್ಕೆ ಕಾರಣರಾಗಿದ್ದಾರೆ. ಸರಿಯಾಗಿ ಪೊಲೀಸರಿಂದ ಅನುಮತಿ ಪಡೆಯದೇ ಆತುರದ ನಿರ್ಧಾರ ಕೈಗೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಉಲ್ಲೇಖಿಸಲಾಗಿತ್ತು.

    ಏನಿದು ಘಟನೆ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನ ಮುಡಿಗೇರಿಸಿಕೊಂಡಿತ್ತು. ಆರ್‌ಸಿಬಿ ಫ್ಯಾನ್ಸ್‌ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜೂ.4 ಸಂಭ್ರಮಾಚರಣೆಗೆ ಬಂದಿದ್ದಾಗ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 11 ಮಂದಿ ಸಾವಿಗೀಡಾಗಿದ್ದರು. ಉಚಿತ ಪ್ರವೇಶ ಘೋಷಣೆಯಿಂದ ಮಿತಿಮೀರಿದ ಜನ ಬಂದಿದ್ದರಿಂದ ಈ ಅವಘಡ ನಡೆದಿತ್ತು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ‌ ಪ್ರಕರಣ | ಆರ್‌ಸಿಬಿ A1, ಡಿಎನ್‌ಎ A2 – ಮ್ಯಾಜಿಸ್ಟ್ರೇಟ್ ತನಿಖಾ ವರದಿ

  • ಚಿನ್ನಸ್ವಾಮಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನ ಕರೆಯಲು ಅಶೋಕ್ ಆಗ್ರಹ

    ಚಿನ್ನಸ್ವಾಮಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನ ಕರೆಯಲು ಅಶೋಕ್ ಆಗ್ರಹ

    – ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಅಧಿವೇಶದಲ್ಲಿ ಚರ್ಚೆ

    ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಆರ್. ಅಶೋಕ್ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಈ ದುರ್ಘಟನೆಯು ಸಾರ್ವಜನಿಕ ಸುರಕ್ಷತೆ, ಗುಂಪು ನಿಯಂತ್ರಣ, ಕ್ರೀಡಾ ಹಾಗೂ ಇತರೇ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದಂತೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಈ ದುರಂತ ಜನರಲ್ಲಿ ಆತಂಕ ಮತ್ತು ಕಳವಳ ಉಂಟುಮಾಡಿದೆ ಎಂದಿದ್ದಾರೆ. ಇದನ್ನೂ ಓದಿ: ಪುಣೆಯ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು ಕನಿಷ್ಠ 20 ಮಂದಿ ನೀರುಪಾಲು

    ಸತ್ಯ ಮರೆಮಾಚಲು 3 ರೀತಿಯ ತನಿಖೆ
    ಘಟನೆಗೆ ಸಂಬಂಧಿಸಿದಂತೆ ಆಡಳಿತದಲ್ಲಿ ಆಗಿರುವ ಲೋಪಗಳು, ಘಟನೆ ನಂತರ ಸರ್ಕಾರದ ಕ್ರಮಗಳು ಅನೇಕ ಸಂಶಯಗಳನ್ನು ಹುಟ್ಟುಹಾಕಿದೆ. ಕಾಲ್ತುಳಿತಕ್ಕೆ ಕಾರಣರಾದ ಬಲಾಢ್ಯರನ್ನು ರಕ್ಷಿಸಲಾಗುತ್ತಿದೆ. ಸತ್ಯವನ್ನು ಮರೆಮಾಚಲು 3 ರೀತಿಯ ತನಿಖೆಗಳನ್ನು ಮಾಡಲಾಗುತ್ತಿದೆ. ಅಸಹಾಯಕ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ ಎಂದು ದೂರಿದ್ದಾರೆ. ಇದನ್ನೂ ಓದಿ: ಕಾಂತಾರ ಶೂಟಿಂಗ್‌ – ಯಾವುದೇ ಅವಘಡ ಸಂಭವಿಸಿಲ್ಲ: ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

    ಭವಿಷ್ಯದಲ್ಲಿ ಇಂತಹ ದುರ್ಘಟನೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಚರ್ಚೆಯ ಅಗತ್ಯವಿದೆ. ಇದಕ್ಕಾಗಿ ಮೂರು ದಿನಗಳ ತುರ್ತು ಅಧಿವೇಶನ ಕರೆಯಬೇಕಿದೆ. ಕಾಲ್ತುಳಿತ ಘಟನೆಗೆ ಕಾರಣವಾದ ಸಂದರ್ಭಗಳ ಸಂಪೂರ್ಣ ತನಿಖೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗುಂಪು ನಿಯಂತ್ರಣ ಮತ್ತು ಸುರಕ್ಷತಾ ಕ್ರಮಗಳ ಬಲವರ್ಧನೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ವ್ಯವಸ್ಥೆ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಬೇಕಿದೆ ಎಂದು ಎಂದಿದ್ದಾರೆ. ಇದನ್ನೂ ಓದಿ: ನಮ್ಮ ತಂಟೆಗೆ ಬಂದ್ರೆ ಹಿಂದೆಂದೂ ನೋಡಿರದ ಮಿಲಿಟರಿ ಬಲವನ್ನು ಎದುರಿಸಬೇಕಾಗುತ್ತೆ – ಇರಾನ್‌ಗೆ ಟ್ರಂಪ್‌ ಬಿಗ್‌ ವಾರ್ನಿಂಗ್‌

    ಈ ತುರ್ತು ಅಧಿವೇಶನವು ರಾಜ್ಯ ಸರ್ಕಾರ ಬದ್ಧತೆಯನ್ನು ಜನರಿಗೆ ತೋರಿಸಲು ಮತ್ತು ದುರಂತದಿಂದ ಕಲಿತ ಪಾಠಗಳ ಆಧಾರದಲ್ಲಿ ಭವಿಷ್ಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗಲಿದೆ. ಹಾಗೆಯೇ ಘಟನೆಗೆ ಕಾರಣಗಳೇನು ಎಂಬುದನ್ನು ಜನತೆಗೆ ತಿಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

  • Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

    Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

    ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕ್ಟರಿ ಸೆಲೆಬ್ರೇಷನ್ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿದ್ದಾರೆ. ಈ ಪ್ರಕರಣದ (Chinnaswamy Stampede Case) ತನಿಖೆ ನಡೆಸಿರುವ ಇದೀಗ ಯುಡಿಆರ್ ಬದಲಿಗೆ ಎಫ್‌ಐಆರ್‌ (FIR) ದಾಖಲಿಸಿದ್ದಾರೆ.

    ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ಮತ್ತು ಡಿಎನ್‌ಎ ಇವೆಂಟ್ ಮ್ಯಾನೇನ್ಮೆಂಟ್‌ ಸಂಸ್ಥೆ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್‌ 105 (ಮಾನವ ನರಹತ್ಯೆ), BNS 106, 118(1), 118(2), 190, 132, 125A,125(B) ಅಡಿಯಲ್ಲಿ ಕೇಸ್ ದಾಖಲು ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…

    ಈ ಮೊದಲು ಯುಡಿಆರ್‌ (UDR) ದಾಖಲಿಸಲಾಗಿತ್ತು, ಇದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಬಗ್ಗೆ ʻಪಬ್ಲಿಕ್‌ ಟಿವಿʼ ಪ್ರಶ್ನೆ ಮಾಡಿತ್ತು. ಯುಡಿಆರ್ ಅಂದ್ರೆ, ಅನ್ ನ್ಯಾಚುರಲ್ ಡೆತ್ ರಿಪೋರ್ಟ್ (ಅಸಹಜ ಸಾವಿನ ವರದಿ) ಈ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್‌ ಇಲಾಖೆ ಎಫ್‌ಐಆರ್‌ ದಾಖಲಿಸಿದೆ. ಇದನ್ನೂ ಓದಿ: ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ: ಸರ್ಕಾರದ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

    ಅನುಮಾನ ಮೂಡಲು ಮೂರು ಕಾರಣ
    ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯನ್ನು (KSCA) ಹೊಣೆಗಾರರನ್ನಾಗಿ ಮಾಡಿಲ್ಲ. ಪೊಲೀಸ್ ಇಲಾಖೆಯ ಅನುಮತಿ ಪಡೆಯದೇ ಸಾಮಾಜಿಕ ಜಾಲತಾಣದಲ್ಲಿ ಇವತ್ತು (ಜೂ. 4) ಆರ್‌ಸಿಬಿ ತಂಡದ ವಿಕ್ಟರಿ ಪರೇಡ್ ಇದೆ ಅಂತ ಪ್ರಕಟಣೆ ನೀಡಿ, ಆ ಮೂಲಕ ಲಕ್ಷಾಂತರ ಜನರು ಜಮಾವಣೆಯಾಗಲು ನೇರ ಕಾರಣವಾಗಿರುವ ಆರ್‌ಸಿಬಿ ಮ್ಯಾನೇಜ್ ಮೆಂಟ್ ಅನ್ನು ಹೊಣೆಗಾರರನ್ನಾಗಿಸಿಲ್ಲ. ಇನ್ನು, ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ನಿರ್ವಹಿಸುವ ಜವಾಬ್ದಾರಿ ಹೊತ್ತಿದ್ದ ಡಿಎನ್ಎ ಇವೆಂಟ್ ಮ್ಯಾನೇಜ್ ಮೆಟ್ ಸಂಸ್ಥೆಯನ್ನು ಹೊಣೆಗಾರರನ್ನಾಗಿ ಮಾಡಿಲ್ಲ. ಇದು ಅನುಮಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಗಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

    ಏನಿದು ಪ್ರಕರಣ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು. ಇದನ್ನೂ ಓದಿ: ಮಗಳಿಗೆ ಮದುವೆ ಮಾಡಲು ಯೋಜಿಸಿದ್ದೆವು, ನಮ್ಮ ಕಷ್ಟ ಯಾವ ತಂದೆ-ತಾಯಿಗೂ ಬೇಡ: ಮೃತ ಟೆಕ್ಕಿ ತಂದೆ ಕಣ್ಣೀರು

    ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

  • ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ – ಮಕ್ಕಳ ಸಾವು ನೆನೆದು ಕಣ್ಣೀರಿಟ್ಟ ಡಿಕೆಶಿ

    ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ – ಮಕ್ಕಳ ಸಾವು ನೆನೆದು ಕಣ್ಣೀರಿಟ್ಟ ಡಿಕೆಶಿ

    – ನನ್ನ ಹೊಟ್ಟೆ ಉರಿಯುತ್ತಿದೆ ಎಂದು ಗದ್ಗದಿತರಾದ ಡಿಸಿಎಂ

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ (Stampede) ಉಂಟಾದ ಸಾವು-ನೋವು ನೆನೆದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಕಣ್ಣೀರಿಟ್ಟಿದ್ದಾರೆ. ಮಕ್ಕಳ ಸಾವು ನೆನೆದು ಗದ್ಗದಿತರಾಗಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ ಅವರು, ನನಗೆ ಹೊಟ್ಟೆ ಉರಿಯುತ್ತಿದೆ, ಆ ಮಕ್ಕಳ ತಾಯಿ ಮಾತನಾಡೋದನ್ನ ಸಹಿಸೋಕೆ ಆಗ್ತಾ ಇಲ್ಲ ಅಂತ ಕಣ್ಣೀರು ಹಾಕಿದ್ರು. ಇದನ್ನೂ ಓದಿ: Stampede Case | ಕಾಲ್ತುಳಿತ ಬಗ್ಗೆ ʻಪಬ್ಲಿಕ್‌ ಟಿವಿʼ ಪ್ರಶ್ನೆಗೆ ಉತ್ತರ ನೀಡದೇ ನುಣುಚಿದ KSCA

    ಇದನ್ನ ಯಾವ ಫ್ಯಾಮಿಲಿ ಕೂಡ ತಡೆದುಕೊಳ್ಳಲ್ಲ. ಪೊಲೀಸ್ ಇಲಾಖೆ (Police Department) ಕೂಡಲೇ ಹೇಳ್ತು ಇದನ್ನ ತಡೆಯಿರಿ ಅಂತ. ನಾನೂ ಕೂಡಲೇ ಮ್ಯಾನೇಜ್ಮೆಂಟ್‌ಗೆ ಹೇಳಿದೆ, ಅವರು ಹೋಗೋದಕ್ಕೂ ಕೂಡ ಜಾಗ ಇರಲಿಲ್ಲ. ಕೂಡಲೇ ಅವರನ್ನ ನಾನು ಕಾರ್‌ನಲ್ಲಿ ಕೂರಿಸಿಕೊಂಡು ಹೋದೆ, ಮಾಧ್ಯದವರು ಹೇಳಿದ ಬಳಿಕವೇ ನಮಗೆ ಗೊತ್ತಾಯ್ತು ಎಂದು ತಿಳಿಸಿದ್ರು. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

    ಯಾರು ಏನೇ ಹೇಳಿದರೂ ಟೀಕೆ ಮಾಡಲಿ, ಸದನದಲ್ಲಿ ಎಲ್ಲವೂ ಬರಲಿದೆ. ಅವರವರ ಕಾಲದಲ್ಲಿ ಏನಾಯ್ತು ಅಂತ ಗೊತ್ತಿದೆ. ರಾಜ್ ಕುಮಾರ್ ಸತ್ತಾಗ ಏನಾಯ್ತು ಅಂತ ಗೊತ್ತಿದೆ. ನಾನು ಆಗ ದೆಹಲಿಯಲ್ಲಿ ಇದ್ದೆ, ಕುಮಾರಸ್ವಾಮಿ ಟೀಕೆ ಮಾಡುತ್ತಲೇ ಇರಲಿ. ಡರ್ಟಿ ಪಾಲಿಟಿಕ್ಸ್ ನಾನು ಮಾತಾಡಲ್ಲ. ಹೌದು ಯಾರೇ ಮಾಡಿದರೂ ಕೂಡ ಸರ್ಕಾರ ಜವಬ್ದಾರಿ ತೆಗೆದುಕೊಳ್ಳುತ್ತದೆ. ಇದು ಕರ್ನಾಟಕದ ಇಮೇಜ್‌, ನಮ್ಮ ಮನಸ್ಸಿಗೆ, ನಮ್ಮ ಕುಟುಂಬಕ್ಕೂ ನೋವಾಗಿದೆ. ಒಬ್ಬರು ತಾಯಿ ಹೇಳ್ತಾರೆ ಪೋಸ್ಟ್ ಮಾರ್ಟಮ್ ಮಾಡಬೇಡಿ ಅಂತ, ಎಷ್ಟು ಹೊಟ್ಟೆ ಉರಿಯಬೇಕು ಅಲ್ವ? ಈ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ ಅಂತ ಕಣ್ಣೀರಿಟ್ಟಿದ್ದಾರೆ.

    ಮುಂದುವರಿದು.. ಇವರು ಸಾವಿನ ಮೇಲೆಯೇ ರಾಜಕೀಯ ಮಾಡೋದು. ಬಿಜೆಪಿ, ಜೆಡಿಎಸ್‌ನ ಪೊಲಿಟಿಕಲ್ ಅಜೆಂಡಾನೇ ಅದು, 18 ವರ್ಷದ ಬಳಿಕ ಕಪ್ ಬಂದಿದೆ ಅಂದಾಗ ಸಹಜವಾಗಿ ಅಭಿಮಾನ ಇರುತ್ತದೆ. ಸಿಎಂ, ಗೃಹ ಸಚಿವರು, ಸರ್ಕಾರ ಶಾಕ್ ನಲ್ಲಿ ಇದೆ. ಇಷ್ಟು ದೊಡ್ಡ ಘಟನೆ ಆಗುತ್ತೆ ಅಂತ ಅಂದುಕೊಂಡೇ ಇರಲಿಲ್ಲ. ಈ ಪ್ರಕರಣ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ನಾನು ಪೊಲಿಟಿಕಲ್ ಬಗ್ಗೆ, ವಿಪಕ್ಷದ ಟೀಕೆಗೆ ಮಾತನಾಡಲ್ಲ. ನಾನು ಜನರಿಗೆ ಮಾತ್ರ ಉತ್ತರ ಕೊಡ್ತೀನಿ. ಇವರೆಲ್ಲಾ ಪಾಲಿಟಿಕ್ಸ್ ಮಾಡೋ ಮಾಸ್ಟರ್ ಮೈಂಡ್ಸ್ ಅಷ್ಟೆ ಅಂತ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾದ್ದು 5 ದಿನ, ಸಿಎಸ್‌ಕೆ 3 ದಿನದ ನಂತರ ಆಚರಣೆ ಮಾಡಿದ್ರೆ ಒಂದೇ ದಿನದಲ್ಲಿ ವಿಜಯೋತ್ಸವ ಆಚರಿಸಿದ್ದು ಯಾಕೆ? – ಜೆಡಿಎಸ್‌ ಆಕ್ರೋಶ

    ಏನಿದು ಪ್ರಕರಣ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು.

    ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

  • ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ – ಇಂದು ಭೂಮಿಕ್ ಅಂತ್ಯಕ್ರಿಯೆ

    ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ – ಇಂದು ಭೂಮಿಕ್ ಅಂತ್ಯಕ್ರಿಯೆ

    ಬೆಂಗಳೂರು/ಹಾಸನ: ಬುಧವಾರ ಆರ್‌ಸಿಬಿ (RCB) ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ನಡೆದ ಕಾಲ್ತುಳಿತದಲ್ಲಿ (Stampede) ಮೃತಪಟ್ಟ ಹಾಸನ ಮೂಲದ ಭೂಮಿಕ್ ಅಂತ್ಯಕ್ರಿಯೆ ಇಂದು (ಗುರುವಾರ) ನಡೆಯಲಿದೆ.

    ಭೂಮಿಕ್ ಹುಟ್ಟೂರಾದ ಹಾಸನ (Hassan) ಜಿಲ್ಲೆ ಬೇಲೂರು ತಾಲೂಕಿನ ಕುಪ್ಪುಗೋಡು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಭೂಮಿಕ್ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿದೆ. ಇಂದು ಮಧ್ಯಾಹ್ನದ ವೇಳೆಗೆ ಭೂಮಿಕ್ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಮಾತೇ ಬರುತ್ತಿಲ್ಲ, ತುಂಬಾ ದುಃಖವಾಗಿದೆ: ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಸಂತಾಪ

    ಭೂಮಿಕ್ ಡಿ.ಟಿ.ಲಕ್ಷ್ಮಣ-ಅಶ್ವಿನಿ ದಂಪತಿಯ ಏಕೈಕ ಪುತ್ರ. ಕಳೆದ ಇಪ್ಪತ್ತು ವರ್ಷಗಳಿಂದ ಡಿ.ಟಿ.ಲಕ್ಷ್ಮಣ ಕುಟುಂಬಸ್ಥರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಡಿ.ಟಿ.ಲಕ್ಷ್ಮಣ ಬೆಂಗಳೂರಿನಲ್ಲಿ ಸಣ್ಣ ಕೈಗಾರಿಕೆ ನಡೆಸುತ್ತಿದ್ದಾರೆ. ಭೂಮಿಕ್ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದು ಬುಧವಾರ ಕೂಡ ಕಾಲೇಜಿಗೆ ತೆರಳಿದ್ದರು. ನಂತರ ಸ್ನೇಹಿತರ ಜೊತೆ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿದ್ದು, ಕಾಲ್ತುಳಿತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ; ಫ್ಯಾನ್ಸ್‌ ಸಾವು-ನೋವಿಗೆ ಆರ್‌ಸಿಬಿ ಶೋಕ