Tag: ಚಿನ್ನಾಭರಣ ದರೋಡೆ

  • Bengaluru | ಲೇಡಿಸ್ ಪಿಜಿಗೆ ನುಗ್ಗಿ ಎಂಜಿನಿಯರ್ ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದರೋಡೆ

    Bengaluru | ಲೇಡಿಸ್ ಪಿಜಿಗೆ ನುಗ್ಗಿ ಎಂಜಿನಿಯರ್ ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದರೋಡೆ

    ಬೆಂಗಳೂರು: ಪಿಜಿಯಲ್ಲಿದ್ದ ಬೆಸ್ಕಾಂ ಅಸಿಸ್ಟೆಂಟ್ ಎಂಜಿನಿಯರ್ (BESCOM Assistant Engineer) ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದೋಚಿದ (Gold Theft) ಘಟನೆ ಯಲಹಂಕ (Yelahanka) ಪೊಲೀಸ್ ಠಾಣಾ ವ್ಯಾಪ್ತಿಯ ಜುಡಿಷಿಯಲ್ ಲೇಔಟ್‌ನಲ್ಲಿ ನಡೆದಿದೆ.

    ಆ.11ರಂದು ಮಧ್ಯಾಹ್ನ 3ಗಂಟೆ ಸುಮಾರಿಗೆ ಲೇಡಿಸ್ ಪಿಜಿಯಲ್ಲಿ (Ladies PG) ಘಟನೆ ನಡೆದಿದೆ. ಕಳೆದ ಹದಿನೈದು ದಿನಗಳ ಹಿಂದಷ್ಟೇ ಪಿಜಿಗೆ ಸೇರಿದ್ದ ಮಹಿಳೆ ಮಧ್ಯಾಹ್ನ ಊಟಕ್ಕೆಂದು ರೂಮಿಗೆ ಬಂದಿದ್ದಾರೆ. ಪಿಜಿಯಲ್ಲಿನ ಮೂರನೇ ಮಹಡಿಯಲ್ಲಿರೋ ತನ್ನ ರೂಮಿಗೆ ಬಂದಾಗ, ಡೋರ್ ಬಡಿದ ಶಬ್ದ ಕೇಳಿ ಪಿಜಿಯವರು ಇರಬಹುದು ಎಂದು ಡೋರ್ ಓಪನ್ ಮಾಡಿದ್ದರು. ಕೂಡಲೇ ಮಹಿಳೆಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿದ್ದ ಆರೋಪಿ ಆಕೆಯ ಅಂಗಾಂಗಗಳನ್ನ ಮುಟ್ಟಿ, ಆಕೆ ಮೈಮೇಲಿದ್ದ ಚಿನ್ನಾಭರಣಗಳನ್ನ ಬಿಚ್ಚಿಸಿಕೊಂಡು ಆಕೆಯ ಬೆಡ್ ಮೇಲಿದ್ದ ಎರಡು ಮೊಬೈಲ್‌ಗಳನ್ನು ತೆಗೆದುಕೊಂಡು ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಆನ್‌ಲೈನ್ ಬೆಟ್ಟಿಂಗ್ – ಇಡಿ ವಿಚಾರಣೆಗೆ ಹಾಜರಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ

    ಈ ಬಗ್ಗೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್; 16 ಸ್ಪಾಟ್‌ಗಳಲ್ಲಿ ಸಿಗದ ಕುರುಹು – ದೂರುದಾರನ ಮಂಪರು ಪರೀಕ್ಷೆಗೆ ಎಸ್‌ಐಟಿ ಚಿಂತನೆ

  • ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿ ದರೋಡೆ – ಗನ್ ತೋರಿಸಿ 3 ಕೆಜಿ ಚಿನ್ನಾಭರಣ ದೋಚಿದ ಗ್ಯಾಂಗ್

    ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿ ದರೋಡೆ – ಗನ್ ತೋರಿಸಿ 3 ಕೆಜಿ ಚಿನ್ನಾಭರಣ ದೋಚಿದ ಗ್ಯಾಂಗ್

    ಕಲಬುರಗಿ: ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿದ ದರೋಡೆಕೊರರು ಮಾಲೀಕನಿಗೆ ಮಾರಕಾಸ್ತ್ರಗಳನ್ನು ತೋರಿಸಿ 2ರಿಂದ 3 ಕೆಜಿ ಚಿನ್ನಾಭರಣ ದೋಚಿರುವ ಘಟನೆ ಕಲಬುರಗಿ (Kalaburagi) ನಗರದ ಸರಾಫ್ ಬಜಾರ್‌ನಲ್ಲಿ ನಡೆದಿದೆ.

    ನಗರದಲ್ಲಿರುವ ಚಿನ್ನದ ಅಂಗಡಿಗೆ ಮಧ್ಯಾಹ್ನ 12:30ರ ಸುಮಾರಿಗೆ 4 ಮಂದಿ ದರೋಡೆಕೋರರು ಗ್ರಾಹಕರ ಸೋಗಿನಲ್ಲಿ ನುಗ್ಗಿದ್ದರು. ಬಳಿಕ ಅಂಗಡಿ ಮಾಲೀಕ ಸಬಕಾ ಮಾಲೀಕ್ ಅವರಿಗೆ ಗನ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ, ನಂತರ ಆತನ ಕೈ ಕಾಲು ಕಟ್ಟಿ ಬಾಯಿಗೆ ಸೆಲ್ಲೋ ಟೆಪ್ ಸುತ್ತಿ ಎರಡುವರೆ ಕೆಜಿಗೂ ಅಧಿಕ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಸಚಿವನ ಕೊಠಡಿಯಲ್ಲಿ ಕಂತೆ ಕಂತೆ ನೋಟು ಪತ್ತೆ!

    ಬಳಿಕ ಅಂಗಡಿ ಮಾಲೀಕ ಶಟ್ಟರ್‌ಗೆ ಕಾಲಿನಿಂದ ಬಡಿದಿದ್ದಾರೆ. ಇದರಿಂದ ಅನುಮಾನಗೊಂಡು ಧಾವಿಸಿದ ಅಕ್ಕಪಕ್ಕದ ಅಂಗಡಿಯವರು ಮಾಲೀಕನನ್ನು ರಕ್ಷಿಸಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮತಾಂತರ ಮಾಸ್ಟರ್‌ಮೈಂಡ್‌ ಛಂಗುರ್ ಬಾಬಾನ 5 ಕೋಟಿ ಮೌಲ್ಯದ ಮನೆ ಉಡೀಸ್‌ – ಬುಲ್ಡೋಜರ್‌ನಿಂದ ನೆಲಸಮ

    ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಂಗಡಿ ಮಾಲೀಕ ಸಬಕಾ ಮಾಲೀಕ್ ಅವರು ಈ ಹಿಂದೆ ಇದೇ ಅಂಗಡಿಯಲ್ಲಿ ಕೆಲಸ ಮಾಡಿದವರು ಭಾಗಿಯಾಗಿದ್ದಾರೆ ಎಂದು ಶಂಕಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಐದು ತಂಡಗಳನ್ನು ರಚಿಸಿ, ದರೋಡೆಕೋರರಿಗೆ ಬಲೆ ಬೀಸಿದ್ದಾರೆ.

  • ಪೊಲೀಸರ ಸೋಗಿನಲ್ಲಿ ಬಂದಾತ ದರೋಡೆ ಮಾಡಿ ಎಸ್ಕೇಪ್- 20 ಗ್ರಾಂ ಚಿನ್ನಾಭರಣ ಕಳ್ಳತನ

    ಪೊಲೀಸರ ಸೋಗಿನಲ್ಲಿ ಬಂದಾತ ದರೋಡೆ ಮಾಡಿ ಎಸ್ಕೇಪ್- 20 ಗ್ರಾಂ ಚಿನ್ನಾಭರಣ ಕಳ್ಳತನ

    ಕಲಬುರಗಿ: ಬೆಳ್ಳಂಬೆಳಗ್ಗೆ ಪೊಲೀಸರ ಸೋಗಿನಲ್ಲಿ ಬಂದ ಖದೀಮ ನಗರದ ಪಂಜಾಬ್ ಬೂಟ್ ಹೌಸ್ ಬಳಿ ನಿಂತಿದ್ದ ವ್ಯಕ್ತಿಯೋರ್ವನನ್ನು ನಂಬಿಸಿ ಆತನ ಬಳಿ ಇದ್ದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾನೆ.

    ಸುರೇಶ್ ಮಂಠಾಳೆ ಎಂಬವರ ಬಳಿಯಿಂದ ಕಳ್ಳ ಚಿನ್ನಾಭರಣ ದೋಚಿದ್ದಾನೆ. ಬೆಳಗ್ಗೆ 7 ಗಂಟೆ ಸುಮಾರಿಗೆ ನಗರದ ರುದ್ರವಾಡಿಗೆ ತೆರಳಲು ಸುರೇಶ್, ಪಂಜಾಬ್ ಬೂಟ್ ಹೌಸ್ ಬಳಿ ಬಂದಿದ್ದರು. ಈ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ಸೋಗಿನಲ್ಲಿ ಬಂದ ಖದೀಮ ನಕಲಿ ಐಡಿ ಕಾರ್ಡ್ ತೋರಿಸಿ ತಾನು ಪೊಲೀಸ್ ಎಂದು ಸುರೇಶ್ ರನ್ನು ನಂಬಿಸಿದ್ದಾನೆ. ನಗರದಲ್ಲಿ ನಕ್ಸಲೈಟ್ ಹಾಗೂ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ ಮೈ ಮೇಲೆ ಚಿನ್ನಾಭರಣ ಧರಿಸಬೇಡಿ ಎಂದು ಸುರೇಶ್ ಬಳಿಯಿದ್ದ ಚಿನ್ನವನ್ನು ಪಡೆದನು. ಬಳಿಕ ಕರ್ಚಿಫ್ ಪಡೆದು ಚಿನ್ನವನ್ನು ಅದರಲ್ಲಿ ಹಾಕುವಂತೆ ಮಾಡಿ ಮೊಬೈಲ್ ವಾಪಸ್ ಇಟ್ಟುಕೊಟ್ಟು ಪರಾರಿಯಾಗಿದ್ದಾನೆ.

    ನಕಲಿ ಪೊಲೀಸ್ ಅಲ್ಲಿಂದ ತೆರಳುತ್ತಿದ್ದಂತೆಯೇ ಕರ್ಚಿಫ್ ಬಿಚ್ಚಿ ನೋಡಿದಾಗ ಚಿನ್ನಾಭರಣ ಕಾಣದೆ ಸುರೇಶ್ ಕಂಗಾಲಾಗಿದ್ದಾರೆ. ಸುಮಾರು 20 ಗ್ರಾಂ ಚಿನ್ನಾಭರಣ ಕಳ್ಳತನವಾಗಿದೆ ಎಂದು ಸುರೇಶ್, ಪೊಲೀಸರಿಗೆ ದೂರು ನೀಡಿದ್ದಾರೆ.

    ಸದ್ಯ ಘಟನೆ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews