Tag: ಚಿನ್ನ ಕಳ್ಳಸಾಗಣೆ ಪ್ರಕರಣ

  • ರನ್ಯಾ ರಾವ್ ಶೋಕಿಗೆ ಅಧಿಕಾರಿಗಳೇ ಶಾಕ್ – ನಟಿ ಬಳಿಯಿತ್ತು ಕೋಟಿ ಮೌಲ್ಯದ 39 ವಿದೇಶಿ ವಾಚ್‌ಗಳು

    ರನ್ಯಾ ರಾವ್ ಶೋಕಿಗೆ ಅಧಿಕಾರಿಗಳೇ ಶಾಕ್ – ನಟಿ ಬಳಿಯಿತ್ತು ಕೋಟಿ ಮೌಲ್ಯದ 39 ವಿದೇಶಿ ವಾಚ್‌ಗಳು

    ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ (Ranya Rao) ಬಂಧನ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ನಟಿ ಬಳಿಯಿದ್ದ ಬರೋಬ್ಬರಿ 39 ವಾಚ್‌ಗಳು ಪತ್ತೆಯಾಗಿವೆ.

    ಈಗಾಗಲೇ ಡಿಆರ್‌ಐ ಮೂರು ದಿನ ಪೊಲೀಸ್ ಕಸ್ಟಡಿಗೆ ಪಡೆದಿದೆ. ಇಂದು ಪೊಲೀಸ್ ಕಸ್ಟಡಿಯೂ ಅಂತ್ಯ ಆಗಲಿದೆ. ಕಳೆದ ಐದು ದಿನಗಳ ಹಿಂದೆ ರನ್ಯಾ ಫ್ಲ್ಯಾಟ್‌ ಮೇಲೆ ದಾಳಿ ಮಾಡಿದ್ದ ಆರ್‌ಡಿಐ ಕೋಟ್ಯಂತರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿತ್ತು. ಇದನ್ನೂ ಓದಿ: EXCLUSIVE: ರನ್ಯಾ ಕೇಸ್‌ಗೆ ಟ್ವಿಸ್ಟ್; ನಟಿ ಒಡೆತನದ ಕಂಪನಿಗೆ ಸರ್ಕಾರದಿಂದಲೇ 12 ಎಕರೆ ಜಮೀನು ಮಂಜೂರು!

    ಈ ನಡುವೆ ಇನ್ನೊಂದು ಆಶ್ಚರ್ಯಕರ ವಿಚಾರ ಬೆಳಕಿಗೆ ಬಂದಿದೆ. ರನ್ಯಾ ರಾವ್‌ಗೆ ಇದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವಿದೇಶಿ ವಾಚ್‌ಗಳು ಸಿಕ್ಕಿವೆ. 39 ವಿದೇಶಿ ವಾಚ್‌ಗಳು ಪತ್ತೆಯಾಗಿವೆ. ಆದರೆ, ಚಿನ್ನಾಭರಣ ಮತ್ತು ಹಣವನ್ನು ಮಾತ್ರ ಡಿಆರ್‌ಐ ವಶಕ್ಕೆ ಪಡೆದಿದೆ.

    ವಾಚ್‌ಗಳನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿಲ್ಲ. ಸದ್ಯಕ್ಕೆ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಜಯಮಾಲಾ ಮಗಳ ಮದುವೆಯಲ್ಲಿ ಮಿಂಚಿದ್ದ ಆರೋಪಿ ರನ್ಯಾ ರಾವ್

    ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದಾಗ ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ನಟಿ ರನ್ಯಾ ರಾವ್ ಈಚೆಗೆ ಸಿಕ್ಕಿಬಿದ್ದಿದ್ದರು. ಆಕೆಯನ್ನು ಡಿಆರ್‌ಐ ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ನಟಿಯ ಅನೇಕ ಅಕ್ರಮ ಚಟುವಟಿಕೆಗಳು ಒಂದೊಂದಾಗಿ ಬಯಲಾಗುತ್ತಿವೆ.

  • ಚಿನ್ನ ಕಳ್ಳಸಾಗಣೆ ಪ್ರಕರಣ ಕರ್ನಾಟಕಕ್ಕೆ ವರ್ಗಾಯಿಸಲು ಕೋರಿದ್ದ ED ಮನವಿಗೆ ವಿರೋಧ – ಸುಪ್ರೀಂಗೆ ಕೇರಳ ಸರ್ಕಾರ ಅಫಿಡವಿಟ್‌

    ಚಿನ್ನ ಕಳ್ಳಸಾಗಣೆ ಪ್ರಕರಣ ಕರ್ನಾಟಕಕ್ಕೆ ವರ್ಗಾಯಿಸಲು ಕೋರಿದ್ದ ED ಮನವಿಗೆ ವಿರೋಧ – ಸುಪ್ರೀಂಗೆ ಕೇರಳ ಸರ್ಕಾರ ಅಫಿಡವಿಟ್‌

    ನವದೆಹಲಿ: ಚಿನ್ನ ಕಳ್ಳಸಾಗಣೆ ಪ್ರಕರಣವನ್ನು (Gold Smuggling Case) ಕರ್ನಾಟಕಕ್ಕೆ (Karnataka) ವರ್ಗಾಯಿಸಲು ಕೋರಿರುವ ಜಾರಿ ನಿರ್ದೇಶನಾಲಯದ (ED) ಮನವಿಗೆ ನಮ್ಮ ವಿರೋಧವಿದೆ. ತನಿಖಾ ಸಂಸ್ಥೆಯ ಮನವಿಯು ಆಧಾರರಹಿತ ಆರೋಪಗಳ ಮೂಲಕ ಸರ್ಕಾರಕ್ಕೆ ಕಳಂಕ ತರುವುದಾಗಿದೆ ಎಂದು ಕೇರಳ (Kerala) ಸರ್ಕಾರ ಸುಪ್ರೀಂ ಕೋರ್ಟ್‌ಗೆ (Supreme Court) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದೆ.

    ಕೇರಳ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಪಿಎಂಎಲ್‌ಎ ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸುವಂತೆ ಕೋರಿ ಇಡಿ ಸಲ್ಲಿಸಿರುವ ಅರ್ಜಿಯು ಆಧಾರರಹಿತ ಆರೋಪಗಳನ್ನು ಎತ್ತುವ ಮೂಲಕ ಕೇರಳ ಸರ್ಕಾರಕ್ಕೆ ಕಳಂಕ ತರುವ ದುರುದ್ದೇಶದಿಂದ ಕೂಡಿದೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ನೀವು ಒಬ್ಬರನ್ನ ಮದ್ವೆಯಾಗಿ ಮೂವರನ್ನ ಇಟ್ಟುಕೊಳ್ತೀರಾ – ಹಿಂದೂಗಳ ಟೀಕಿಸಿದ್ದ ಶೌಕತ್ ಅಲಿ ವಿರುದ್ಧ ಕೇಸ್

    ಪ್ರಕರಣ ವರ್ಗಾವಣೆಗೆ ಕೋರಿರುವ ಮನವಿಯಲ್ಲಿ ಉಲ್ಲೇಖಿಸಿರುವ ಅಂಶಗಳು ಆಧಾರರಹಿತವಾದದ್ದು, ಊಹಾಪೋಹಗಳಿಂದ ಕೂಡಿದೆ. ಪ್ರಕರಣದ ವಿಚಾರಣೆಯನ್ನು ಕೇರಳದಿಂದ ಕರ್ನಾಟಕಕ್ಕೆ ವರ್ಗಾಯಿಸಲು ವರ್ಗಾವಣೆ ಅರ್ಜಿಯಲ್ಲಿ ಯಾವುದೇ ನೈಜ ಕಾರಣಗಳನ್ನು ಹೇಳಲಾಗಿಲ್ಲ ಎಂದು ಸರ್ಕಾರ ಆರೋಪಿಸಿದೆ.

    ರಾಜ್ಯ ಪೊಲೀಸರು ಮತ್ತು ಕೇರಳ ಸರ್ಕಾರವು ಜಾರಿ ನಿರ್ದೇಶನಾಲಯವು ನಡೆಸುತ್ತಿರುವ ತನಿಖೆಯಲ್ಲಿ ಮಧ್ಯಪ್ರವೇಶಿಸುತ್ತಿದೆ ಎಂಬುದು ಸುಳ್ಳು. ಇಡಿ ತನಿಖಾಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಒಂದೇ ಒಂದು ಘಟನೆಯೂ ನಡೆದಿಲ್ಲ ಎಂದು ಅಫಿಡವಿಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: 10ರ ಬಾಲಕಿಯನ್ನು ರೇಪ್ ಮಾಡಿ ಕೊಲೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ

    ಎರ್ನಾಕುಲಂನ ಪಿಎಂಎಲ್‌ಎ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ರಾಜ್ಯದ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲು ಜಾರಿ ನಿರ್ದೇಶನಾಲಯವು ಮನವಿ ಸಲ್ಲಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಚಿನ್ನ ಕಳ್ಳಸಾಗಣೆ ಪ್ರಕರಣ- 15 ತಿಂಗಳ ಬಳಿಕ ಸ್ವಪ್ನಾ ಸುರೇಶ್‌ಗೆ ಜಾಮೀನು, ಜೈಲಿನಿಂದ ರಿಲೀಸ್‌

    ಚಿನ್ನ ಕಳ್ಳಸಾಗಣೆ ಪ್ರಕರಣ- 15 ತಿಂಗಳ ಬಳಿಕ ಸ್ವಪ್ನಾ ಸುರೇಶ್‌ಗೆ ಜಾಮೀನು, ಜೈಲಿನಿಂದ ರಿಲೀಸ್‌

    ತಿರುವನಂತಪುರ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸ್ವಪ್ನಾ ಸುರೇಶ್‌ ಅವರಿಗೆ 15 ತಿಂಗಳ ಬಳಿಕ ಜಾಮೀನು ಮಂಜೂರಾಗಿದ್ದು, ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

    ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ದಾಖಲಿಸಿದ್ದ ಯುಎಪಿಎ (ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ) ಪ್ರಕರಣದಲ್ಲಿ ಆರೋಪಿ ಸ್ವಪ್ನಾ ಅವರಿಗೆ ನವೆಂಬರ್‌ 2 ರಂದು ಕೇರಳ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. 25 ಲಕ್ಷ ರೂ. ಬಾಂಡ್‌ ಹಾಗೂ ಶೂರಿಟಿಯೊಂದಿಗೆ ಜಾಮೀನು ನೀಡಿತ್ತು. ಇದನ್ನೂ ಓದಿ: ಒಬ್ಬ ಡ್ಯಾನ್ಸರ್ ಬರಬಹುದು, ಫೈಟರ್ ಬರಬಹುದು, ಆದ್ರೆ ಅಪ್ಪು ಬರಲ್ಲ: ರಮೇಶ್ ಅರವಿಂದ್

    ಸ್ವಪ್ನಾ ಅವರೊಂದಿಗೆ ಇತರೆ 7 ಆರೋಪಿಗಳಾದ ಮೊಹಮ್ಮದ್ ಶಫಿ ಪಿ, ಜಲಾಲ್ ಎ.ಎಂ., ರಾಬಿನ್ಸ್ ಹಮೀದ್, ರಮೀಸ್ ಕೆ.ಟಿ., ಶರಫುದ್ದೀನ್ ಕೆ.ಟಿ., ಸರಿತಾ ಪಿ.ಎಸ್ ಮತ್ತು ಮೊಹಮ್ಮದ್ ಅಲಿ ಅವರಿಗೂ ನ.2ರಂದು ಕೋರ್ಟ್‌ ಜಾಮೀನು ನೀಡಿತ್ತು. ಇದನ್ನೂ ಓದಿ: ಸಾರ್ವಜನಿಕರ ಆಸ್ತಿಗೆ ಹಾನಿಗೊಳಿಸಿದ್ರೆ ಪ್ರತಿಭಟನಾಕಾರರಿಂದಲೇ ವಸೂಲಿ- ಮಸೂದೆ ಜಾರಿಗೆ ಮಧ್ಯಪ್ರದೇಶ ಚಿಂತನೆ

    ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ವಿನೋದ್‌ ಚಂದ್ರನ್‌ ಮತ್ತು ಜಯಚಂದ್ರನ್‌ ಅವರಿದ್ದ ಪೀಠವು, ಆರೋಪಿಗಳು ಭಯೋತ್ಪಾದನೆ ಕೃತ್ಯಗಳಲ್ಲಿ ತೊಡಗಿದ್ದರು ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರ ಲಭ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿತ್ತು.