Tag: ಚಿರಂಜೀವಿ ಕೊನಿಡೆಲಾ

  • ಕೊನೆಗೂ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ರಾಮ್ ಚರಣ್ ದಂಪತಿ

    ಕೊನೆಗೂ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ರಾಮ್ ಚರಣ್ ದಂಪತಿ

    ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ರಾಮ್ ಚರಣ್ (Ramcharan) ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾ ಮೂಲಕ ನಟ ಚಿರಂಜೀವಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ರಾಮ್ ಚರಣ್ (Ramcharan) ಮತ್ತು ಉಪಾಸನಾ (Upasana) ಒಬ್ಬರನೊಬ್ಬರು ಪ್ರೀತಿಸಿ, ಜೂನ್ 14, 2012ರಂದು ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದರು. ಇದೀಗ ಹತ್ತು ವರ್ಷಗಳು ರಾಮ್ ಚರಣ್ ಜೋಡಿ ವೈವಾಹಿಕ ಜೀವನ ಪೂರೈಸಿರುವ ಬೆನ್ನಲ್ಲೇ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ರಾಮ್ ಚರಣ್ ದಂಪತಿ ಪೋಷಕರಾಗುತ್ತಿರುವ ಬಗ್ಗೆ ಚಿರಂಜೀವಿ ಸಾಮಾಜಿಕ ಜಾಲತಾಣದ ಮೂಲಕ ಸಿಹಿ ಸುದ್ದಿ ತಿಳಿಸಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ಮಗಳ ಮುಖ ಪರಿಚಯಿಸಿದ `ಯುವರತ್ನ’ ನಟಿ

    ಇನ್ನೂ 2023ಕ್ಕೆ ರಾಮ್ ಚರಣ್ ಮತ್ತು ಉಪಾಸನಾ ವೈವಾಹಿಕ ಜೀವನಕ್ಕೆ ಕಾಲಿಟ್ಟು 10 ವರ್ಷವಾಗಿದೆ. ಮೊದಲ ಮಗುವಿನ ಆಗಮನದ ಸಂತಸದಲ್ಲಿದ್ದಾರೆ ಕೊನಿಡೆಲಾ ಕುಟುಂಬ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ರಾಮ್ ಚರಣ್ ದಂಪತಿ ಸಿಹಿಸುದ್ದಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಟಾಲಿವುಡ್ ನಟ ಚಿರಂಜೀವಿಗೆ ಕೊರೊನಾ ಪಾಸಿಟಿವ್

    ಟಾಲಿವುಡ್ ನಟ ಚಿರಂಜೀವಿಗೆ ಕೊರೊನಾ ಪಾಸಿಟಿವ್

    ಹೈದರಾಬಾದ್: ಟಾಲಿವುಡ್ ಖ್ಯಾತ ನಟ ಚಿರಂಜೀವಿ ಕೊನಿಡೆಲಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

    ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರು ಖಚಿತಪಡಿಸಿದ್ದು, ಆಚಾರ್ಯ ಸಿನಿಮಾ ಚಿತ್ರೀಕರಣ ಆರಂಭಿಸುವುದಕ್ಕೂ ಮುನ್ನ ಕೊರೊನಾ ಟೆಸ್ಟ್ ಗೆ ಒಳಗಾದೆ. ಈ ವೇಳೆ ಪಾಸಿಟಿವ್ ವರದಿ ಬಂದಿದೆ. ನನಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ. ಹೀಗಾಗಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.

    ಇತ್ತೀಚೆಗೆ ಕಳೆದ 5 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆಗೆ ಒಳಗಾಗಬೇಕೆಂದು ವಿನಂತಿಸುತ್ತೇನೆ. ನನ್ನ ಆರೋಗ್ಯದ ಸ್ಥಿತಿಯ ಬಗ್ಗೆ ನಿಮಗೆ ಶೀಘ್ರವೇ ಅಪ್‍ಡೇಟ್ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಲೆಟರ್ ಹೆಡ್ ಇರುವ ಪತ್ರವನ್ನು ಹಂಚಿಕೊಳ್ಳುವ ಮೂಲಕ ಚಿರಂಜೀವಿ ಈ ಕುರಿತು ಖಚಿತಪಡಿಸಿದ್ದಾರೆ. ಸದ್ಯ ಹೋಮ್ ಐಸೋಲೇಶನ್‍ಗೆ ಒಳಪಟ್ಟಿದ್ದಾರೆ.

    ಇಂದಿನಿಂದ ಆಚಾರ್ಯ ಸಿನಿಮಾ ಶೂಟಿಂಗ್ ಆರಂಭವಾಗಿದ್ದು, ಚಿರಂಜೀವಿ ಹಾಗೂ ಕೊರಟಾಲ ಶಿವ ತಮ್ಮ ಭಾಗದ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಕೊರೊನಾ ನಿಯಮದಂತೆ ಚಿತ್ರ ತಂಡದ ಎಲ್ಲ ಸದಸ್ಯರಿಗೆ ಪರೀಕ್ಷೆ ಮಾಡಲಾಗಿದ್ದು, ಈ ವೇಳೆ ಚಿರಂಜೀವಿ ಅವರಿಗೆ ಪಾಸಿಟಿವ್ ವರದಿ ಬಂದಿದೆ.

    ಕೊರೊನಾ ಲಾಕ್‍ಡೌನ್‍ನಿಮದಾಗಿ ಆಚಾರ್ಯ ಸಿನಿಮಾ ಚಿತ್ರೀಕರಣ ಸ್ಥಗಿತವಾಗಿತ್ತು. ಇದೀಗ ಮತ್ತೆ ಆರಂಭವಾಗಿದ್ದು, ಹೈದರಾಬಾದ್‍ನಲ್ಲಿ ಚಿತ್ರಕರಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಇಂದು ಚಿರಂಜೀವಿಗೆ ಪಾಸಿಟಿವ್ ಬಂದಿದೆ. ಚಿರಂಜೀವಿ ಸೇರಿದಂತೆ ಇತರ ಪ್ರಮುಖ ಪಾತ್ರಗಳ ಶೂಟಿಂಗ್ ಮಾಡಲು ಚಿತ್ರತಂಡ ಯೋಜಿಸಿತ್ತು. ಈ ಚಿತ್ರವನ್ನು ಮ್ಯಾಟನಿ ಎಂಟರ್ ಟೈನ್ಮೆಂಟ್ ಸಹಯೋಗದೊಂದಿಗೆ ಕೊನಿಡೆಲಾ ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ಕಾಜಲ್ ಅಗರ್ವಾಲ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.