ವಿಂಡ್‌ಹೋಕ್: ಭಾರತಕ್ಕೆ ಚೀತಾಗಳನ್ನು ಉಡುಗೊರೆಯಾಗಿ ನೀಡಿದ ನಮೀಬಿಯಾಗೆ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. ಇದು ಎರಡೂ ರಾಷ್ಟ್ರಗಳ ನಡುವಿನ ಸಹಕಾರ, ಸಂರಕ್ಷಣೆ ಮತ್ತು ಸಹಾನುಭೂತಿಯ ಕಥೆ ಎಂದು ಮೋದಿ ಬಣ್ಣಿಸಿದ್ದಾರೆ.
ನಮೀಬಿಯಾ ಗಣರಾಜ್ಯದ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ, ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಚೀತಾಗಳನ್ನು ವೈಯಕ್ತಿಕವಾಗಿ ಕೊಡುಗೆ ನೀಡಿದ ನಮೀಬಿಯಾ ಔದಾರ್ಯವನ್ನು ಸ್ಮರಿಸಿದ್ದಾರೆ.
ನಮ್ಮ ದೇಶದಲ್ಲಿ ಚೀತಾಗಳ ಸಂತತಿಯನ್ನು ಪುನಃ ಪರಿಚಯಿಸುವಲ್ಲಿ ನೀವು ನಮಗೆ ಸಹಾಯ ಮಾಡಿದ್ದೀರಿ. ಭಾರತ ಮತ್ತು ನಮೀಬಿಯಾ ಸಹಕಾರ, ಸಂರಕ್ಷಣೆ ಮತ್ತು ಸಹಾನುಭೂತಿಯ ಪ್ರಬಲ ಕಥೆಯನ್ನು ಹೊಂದಿವೆ. ನಿಮ್ಮ ಉಡುಗೊರೆಗೆ ನಾವು ತುಂಬಾ ಕೃತಜ್ಞರಾಗಿರುತ್ತೇವೆ ಎಂದು ತಿಳಿಸಿದ್ದಾರೆ.
ಚೀತಾಗಳು ಹೊಸ ಮನೆಯಲ್ಲಿ ಚೆನ್ನಾಗಿ ಹೊಂದಿಕೊಂಡಿವೆ. ಅವುಗಳ ಸಂಖ್ಯೆಯೂ ಹೆಚ್ಚಾಗಿದೆ. ಭಾರತದಲ್ಲಿ ತಮ್ಮ ಸುಂದರ ಕ್ಷಣಗಳನ್ನು ಆನಂದಿಸುತ್ತಿವೆ ಎಂದು ಚೀತಾಗಳ ಬಗ್ಗೆ ಮೋದಿ ಹೇಳಿದ್ದಾರೆ.
ಅತಿಯಾದ ಬೇಟೆಯಾಡುವಿಕೆಯಿಂದಾಗಿ ಭಾರತದಲ್ಲಿ ಅಳಿವಿನಂಚಿನಲ್ಲಿರುವ ಚೀತಾಗಳ ಸಂತತಿಯನ್ನು ಭಾರತದಲ್ಲಿ ಮತ್ತೆ ಹೆಚ್ಚಿಸಲು ಎಂಟು ಚೀತಾಗಳನ್ನು ನಮೀಬಿಯಾದಿಂದ ತರಲಾಗಿತ್ತು. ಐದು ಹೆಣ್ಣು ಮತ್ತು ಮೂರು ಗಂಡು ಚೀತಾಗಳನ್ನು 2022ರಲ್ಲಿ ವಿಮಾನದಲ್ಲಿ ಕುನೊದ ಕ್ವಾರಂಟೈನ್ ಆವರಣದಲ್ಲಿ ತಂದು ಬಿಡಲಾಗಿತ್ತು.
ಕರಾವಳಿ ನಟಿ ಮೇಘಾ ಶೆಟ್ಟಿ (Megha Shetty) ಅವರು ಇಂದು (ಆ.4) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ದಿನ ಅವರ ಮುಂದಿನ ಸಿನಿಮಾದ ಲುಕ್ ಅನ್ನು ಚಿತ್ರತಂಡ ಅನಾವರಣ ಮಾಡುವ ಮೂಲಕ ಫ್ಯಾನ್ಸ್‌ಗೆ ಸೂಪರ್ ಸರ್ಪ್ರೈಸ್ ಕೊಟ್ಟಿದ್ದಾರೆ. ಇದನ್ನೂ ಓದಿ:ಬದುಕಿನಲ್ಲಿ ಎದುರಿಸಿದ ಏರಿಳಿತಗಳ ಬಗ್ಗೆ ಮಾತನಾಡಿದ ಸಮಂತಾ
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ಮೇಘಾ ಶೆಟ್ಟಿ ಇದೀಗ ಅವರ ಮುಂಬರುವ 3 ಸಿನಿಮಾಗಳ ಪೋಸ್ಟರ್ ರಿವೀಲ್ ಆಗಿದೆ. ಈ ಮೂಲಕ ಅಭಿಮಾನಿಗಳ ಕುತೂಹಲಕ್ಕೆ ಚಿತ್ರತಂಡ ತೆರೆ ಎಳೆದಿದ್ದಾರೆ. ಆಪರೇಷನ್ ಲಂಡನ್ ಕೆಫೆ, ಗ್ರಾಮಾಯಣ, ಚೀತಾ (Cheetah) ಸಿನಿಮಾಗಳ ಪೋಸ್ಟರ್‌ನಲ್ಲಿ ಡಿಫರೆಂಟ್ ಲುಕ್‌ನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.
‘ಆಪ್ಟರ್ ಆಪರೇಷನ್ ಲಂಡನ್ ಕೆಫೆ’ (After Operation London Cafe) ಸಿನಿಮಾದಲ್ಲಿ ಲಂಗ ದಾವಣಿ ಧರಿಸಿ ನಟಿ ಮುದ್ದಾಗಿ ಕಾಣಿಸಿಕೊಂಡಿರುವ ಲುಕ್ ರಿವೀಲ್ ಆಗಿದೆ. ಈ ಚಿತ್ರಕ್ಕೆ ಸಡಗರ ರಾಘವೇಂದ್ರ ನಿರ್ದೇಶನ ಮಾಡಿದ್ದಾರೆ. ಸದ್ಯದಲ್ಲೇ ಚಿತ್ರದ ಟೀಸರ್ ಮತ್ತು ರಿಲೀಸ್ ಬಗ್ಗೆ ಮಾಹಿತಿ ಸಿಗಲಿದೆ. ಕವೀಶ್ ಶೆಟ್ಟಿಗೆ ಮೇಘಾ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡ, ಮರಾಠಿ ಸೇರಿದಂತೆ ಹಲವು ಭಾಷೆಗಳಲ್ಲಿ ಚಿತ್ರ ಮೂಡಿ ಬಂದಿದೆ.
‘ಗ್ರಾಮಾಯಣ’ (Gramayana) ಸಿನಿಮಾದಲ್ಲಿ ವಿನಯ್ ರಾಜ್ ಕುಮಾರ್‌ಗೆ ಮೇಘಾ ಹೀರೋಯಿನ್ ಆಗಿ ನಟಿಸಿದ್ದಾರೆ. ಈ ಚಿತ್ರದಲ್ಲೂ ಭಿನ್ನ ಪಾತ್ರಕ್ಕೆ ನಟಿ ಜೀವ ತುಂಬಿದ್ದಾರೆ. ಈ ಚಿತ್ರವನ್ನು ಜಿ. ಮನೋಹರ್ ಮತ್ತು ಶ್ರೀಕಾಂತ್ ಕೆ.ಪಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ದೇವನೂರು ಚಂದ್ರು ನಿರ್ದೇಶನ ಮಾಡಿದ್ದಾರೆ.
ಪ್ರಜ್ವಲ್ ದೇವರಾಜ್ ನಟನೆಯ ‘ಚೀತಾ’ (Cheetah) ಸಿನಿಮಾದಲ್ಲಿ ಮೇಘಾ ಶೆಟ್ಟಿ ಲೀಡ್ ರೋಲ್‌ನಲ್ಲಿ ನಟಿಸಿದ್ದು, ರೌದ್ರಾವತಾರದಲ್ಲಿ ಕಾಣಿಸಿಕೊಂಡಿರುವ ನಟಿಯ ಪೋಸ್ಟರ್ ಈಗ ರಿವೀಲ್ ಆಗಿದೆ. ಮೇಘಾ ನಟಿಸಿರುವ 3 ಸಿನಿಮಾಗಳ ಪೋಸ್ಟರ್ ಲುಕ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ನೆಚ್ಚಿನ ನಟಿಯ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಶುಭಕೋರಿದ್ದಾರೆ.
ಅಂದಹಾಗೆ, ‘ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಮೂಲಕ ಅನು ಸಿರಿಮನೆ ಪಾತ್ರದಿಂದ ಮನಗೆದ್ದ ನಟಿ ಮೇಘಾ ಬೆಳ್ಳಿಪರದೆಯಲ್ಲಿ ಬ್ಯಾಕ್ ಟು ಬ್ಯಾಕ್ ಚಿತ್ರಗಳ ಮೂಲಕ ಮಿಂಚುತ್ತಿದ್ದಾರೆ.
ಭೋಪಾಲ್: ದಕ್ಷಿಣ ಆಫ್ರಿಕಾದಿಂದ ತರಿಸಲಾಗಿದ್ದ 5 ವರ್ಷದ ಚೀತಾ (African Cheetah) 5 ಮರಿಗಳಿಗೆ ಜನ್ಮ ನೀಡಿದ್ದು, ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಒಟ್ಟು ಚೀತಾಗಳ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಇದರಲ್ಲಿ ಭಾರತದಲ್ಲಿ ಜನಿಸಿದ 13 ಮರಿಗಳೂ ಸೇರಿವೆ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ (Bhupendra Yadav) ತಿಳಿಸಿದ್ದಾರೆ.
High Five, Kuno!
Female cheetah Gamini, age about 5 years, brought from Tswalu Kalahari Reserve, South Africa, has given birth to 5 cubs today.
This takes the tally of the Indian born cubs to 13. This is the fourth cheetah litter on Indian soil and the first litter of… pic.twitter.com/2II0QIc7LY
— Bhupender Yadav (मोदी का परिवार) (@byadavbjp) March 10, 2024
ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ, ಸುಮಾರು 5 ವರ್ಷ ಪ್ರಾಯದ ಹೆಣ್ಣು ಚೀತಾ ಗಾಮಿನಿ ಭಾನುವಾರ 5 ಮರಿಗಳಿಗೆ (Cheetah Cubs) ಜನ್ಮ ನೀಡಿದ್ದು, ಭಾರತದಲ್ಲಿ ಜನಿಸಿದ ಚೀತಾ ಮರಿಗಳ ಸಂಖ್ಯೆ 13ಕ್ಕೆ ಏರಿಕೆಯಾಗಿದೆ, ಈ ಚೀತಾವನ್ನು ದಕ್ಷಿಣ ಆಫ್ರಿಕಾದ ತ್ಸ್ವಾಲು ಕಲಹರಿ ಮೀಸಲು ಪ್ರದೇಶದಿಂದ ತರಲಾಗಿತ್ತು ಎಂದು ತಿಳಿಸಿದ್ದಾರೆ.
ಇಲ್ಲಿನ ಅರಣ್ಯಾಧಿಕಾರಿಗಳು (Forest Officers), ಪಶು ವೈದ್ಯರು ಹಾಗೂ ರಕ್ಷಣಾ ಸಿಬ್ಬಂದಿ ತಂಡವು ಚೀತಾಗಳಿಗೆ ಒತ್ತಡ ರಹಿತ ವಾತಾವರಣವನ್ನು ಕಲ್ಪಿಸಿಕೊಟ್ಟಿದ್ದಾರೆ. ಇದು ಚೀತಾಗಳ ಜನನ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಇದೀಗ ಕುನೋದಲ್ಲಿ ಒಟ್ಟು ಚೀತಾಗಳ ಸಂಖ್ಯೆ 26 ಆಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 2 ಚೀತಾಗಳ ಸಾವಿಗೆ ಕಾರಣ ಕತ್ತಿಗೆ ಅಳವಡಿಸಲಾಗಿದ್ದ ರೇಡಿಯೋ ಕಾಲರ್!
ಇದಕ್ಕೂ ಮುನ್ನ ಜ್ವಾಲಾ ಎಂಬ ಚೀತಾ ಕಳೆದ ಜನವರಿ 20 ರಂದು ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. ಆಶಾ ಹೆಸರಿನ ಮತ್ತೊಂದು ಚೀತಾ ಅದೇ ತಿಂಗಳ ಆರಂಭದಲ್ಲಿ 3 ಮರಿಗಳಿಗೆ ಜನ್ಮ ನೀಡಿತು.
1952 ರಲ್ಲಿ ಭಾರತದಲ್ಲಿ ಚೀತಾಗಳು ಅಳಿವಿನಂಚಿನಲ್ಲಿವೆ ಎಂದು ಘೋಷಿಸಲಾಗಿತ್ತು. ಆ ನಂತರ ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು (Wildlife) ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ (Namibia) ಭಾರತಕ್ಕೆ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು ವಿಶೇಷ ವಿಮಾನದಲ್ಲಿ ತರಲಾಗಿತ್ತು. ಚೀತಾಗಳನ್ನು ಎರಡು ಬ್ಯಾಚ್‌ಗಳಲ್ಲಿ ಆಮದು ಮಾಡಿಕೊಳ್ಳಲಾಯಿತು. 2022 ರಲ್ಲಿ ನಮೀಬಿಯಾದಿಂದ ಮೊದಲ ಬ್ಯಾಚ್ ಅನ್ನು ಆಮದು ಮಾಡಿಕೊಳ್ಳಲಾಗಿತ್ತು. ಸೆ.17 ರಂದು ಪ್ರಧಾನಿ ಮೋದಿ (Narendra Modi) ಈ ಚೀತಾಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಿದ್ದರು.
ಆರಂಭದ ಒಂದು ವರ್ಷದ ಅವಧಿಯಲ್ಲಿ ಸುಮಾರು 10 ಚೀತಾಗಳು ಸಾವಿಗೀಡಾಗಿದ್ದವು. ಆದ್ರೆ ಪ್ರಸಕ್ತ ವರ್ಷದ ಮೊದಲ ಮೂರು ತಿಂಗಳಲ್ಲೇ 12 ಮರಿಗಳ ಜನನವಾಗಿದ್ದು, ಅಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ವರ್ಷದಿಂದಲೇ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಚೀತಾ ಸಫಾರಿ ಆರಂಭಿಸುವ ಬಗ್ಗೆಯೂ ಅಧಿಕಾರಿಗಳು ಸುಳಿವು ನೀಡಿದ್ದಾರೆ. ಇದನ್ನೂ ಓದಿ: ಕಾರಿನಲ್ಲಿ ಮಲಗಿದ್ದ ವ್ಯಾಪಾರಿ; ಆಚೆಗೆಳೆದು 35 ಸುತ್ತು ಗುಂಡು ಹಾರಿಸಿ ಕೊಂದ ದುರುಳರು!
ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ ನಟಿಸುತ್ತಿರುವ ‘ಚೀತಾ’ (Cheetah) ಚಿತ್ರದ ಚಿತ್ರೀಕರಣ (Shooting) ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಈ ಚಿತ್ರಕ್ಕಾಗಿ ನಗರದ ಹೆಚ್ ಎಂ ಟಿ ಫ್ಯಾಕ್ಟರಿ ಆವರಣದಲ್ಲಿ ಬೃಹತ್ ಮಾರ್ಕೆಟ್ ಸೆಟ್ ಹಾಕಲಾಗಿದೆ. ಮಾಧ್ಯಮದವರನ್ನು ಚಿತ್ರೀಕರಣ ಸ್ಥಳಕ್ಕೆ ಆಹ್ವಾನಿಸಿದ್ದ ಚಿತ್ರತಂಡದ ಸದಸ್ಯರು ಚೀತಾ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.
ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡ್ಯಾನ್ಸರ್ ಆಗಿ, ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ಮಾತನಾಡಿದ ನಿರ್ದೇಶಕ ರಾಜ ಕಲೈ ಕುಮಾರ್, ಇದು ನನ್ನ ನಿರ್ದೇಶನದ ಮೊದಲ ಚಿತ್ರ. ನಾನು ಮೊದಲು ನೃತ್ಯ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದು ಪ್ರಜ್ವಲ್ ಅವರ ಜೊತೆ. ಈಗ ನನ್ನ ಮೊದಲ ನಿರ್ದೇಶನದ ಚಿತ್ರಕ್ಕೂ ಅವರೆ ನಾಯಕ. ಚೀತಾ, ಮಾರ್ಕೆಟ್ ನಲ್ಲೇ ನಡೆಯುವ ಕಥೆ. ಮಾರುಕಟ್ಟೆಯಲ್ಲೇ ಹುಟ್ಟಿಬೆಳೆದ ಹುಡುಗನೊಬ್ಬನ ಕಥೆಯೂ ಹೌದು. ಪ್ರಜ್ವಲ್ ಅವರದು ಈ ಚಿತ್ರದಲ್ಲಿ ಮಾರುಕಟ್ಟೆಯಲ್ಲಿ ನಡೆಯುವ ಅವ್ಯವಹಾರಗಳ ವಿರುದ್ದ ಹೋರಾಟ ಮಾಡುವ ಹೋರಾಟಗಾರನ ಪಾತ್ರ. ಅಲ್ಲೇ ಬೆಳೆದು ಅಲ್ಲೇ ಇರುವ ಆ ಹುಡುಗನ ಕಂಡರೆ ಅಲ್ಲಿನ ಜನರಿಗೆ ಅಚ್ಚುಮೆಚ್ಚು. ಈಗಿನ ಜನರಿಗೆ ಬೇಕಾಗುವ ಎಲ್ಲಾ ರೀತಿಯ ಅಂಶಗಳು ಈ ಚಿತ್ರದಲ್ಲಿದೆ. ಕಲಾ ನಿರ್ದೇಶಕ ಶಿವಕುಮಾರ್ ಬೃಹತ್ ಮಾರುಕಟ್ಟೆ ಸೆಟ್ ಹಾಕಿದ್ದಾರೆ. ಸುಮಾರು ಎರಡು ತಿಂಗಳ ಕಾಲ ಇನ್ನೂರಕ್ಕೂ ಅಧಿಕ ಜನರ ಪರಿಶ್ರಮದಲ್ಲಿ ಈ ಅದ್ದೂರಿ ಸೆಟ್ ನಿರ್ಮಾಣವಾಗಿದೆ. ಹೆಚ್ಚಿನ ಚಿತ್ರೀಕರಣ ಇದೇ ಜಾಗದಲ್ಲಿ ನಡೆಯುತ್ತದೆ.
ಒಂದು ವಾರಗಳ ಕಾಲ ಮಾತ್ರ ಮೈಸೂರಿನಲ್ಲಿ ಚಿತ್ರೀಕರಣ ಮಾಡಲಿದ್ದೇವೆ. ಹಿರಿಯ ನೃತ್ಯ ನಿರ್ದೇಶಕ ಚಿನ್ನಿಪ್ರಕಾಶ್ ಅವರು ನಮ್ಮ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನಾಯಕಿಯಾಗಿ ಮೇಘ ಶೆಟ್ಟಿ ನಟಿಸುತ್ತಿದ್ದಾರೆ. ಗುರು ಜಗ್ಗೇಶ್, ಶೃತಿ ಹರಿಹರನ್, ರಂಗಾಯಣ ರಘು, ಶಿವರಾಜ್ ಕೆ ಆರ್ ಪೇಟೆ, ಸಿದ್ಲಿಂಗು ಶ್ರೀಧರ್, ಟೆನ್ನಿಸ್ ಕೃಷ್ಣ, ವಾಮನ ಚಿತ್ರದ ನಿರ್ದೇಶಕ ಶಂಕರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ದಿನ ನಿತ್ಯ ಸುಮಾರು 150 ರಿಂದ 200 ಜನ ಚಿತ್ರೀಕರಣದಲ್ಲಿ ಭಾಗಿಯಾಗಿರುತ್ತೇವೆ. ಯಾವುದಕ್ಕೂ ಕೊರತೆ ಬಾರದ ಹಾಗೆ ನಿರ್ಮಾಣ ಮಾಡುತ್ತಿರುವ ನಿರ್ಮಾಪಕಿ ಪ್ರತಿಭಾ ನರೇಶ್ ಅವರಿಗೆ ಹಾಗೂ ಸಹಕಾರ ನೀಡುತ್ತಿರುವ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸುತ್ತೇನೆ.
ನಿರ್ದೇಶಕರು ಹೇಳಿದ ಹಾಗೆ ಮಾರ್ಕೆಟ್ ನಲ್ಲೇ ಬೆಳೆಯುವ ಹುಡುಗನ ಪಾತ್ರ ನನ್ನದು. ಹಿರಿಯ ನಟರೊಂದಿಗೆ ಕೆಲಸ ಮಾಡುತ್ತಿರುವುದು ಖುಷಿಯಾಗಿದೆ. ಮಾರ್ಕೆಟ್ ನಲ್ಲಿ ಎಲ್ಲಾ ಕೆಲಸಗಳು ವೇಗವಾಗಿ ನಡೆಯುತ್ತಿರುತ್ತದೆ. ನನ್ನ ಪಾತ್ರ ಕೂಡ ಅದೇ ರೀತಿ. ಹಾಗಾಗಿ ಚಿತ್ರಕ್ಕೆ ಚೀತಾ ಎಂದು ಹೆಸರಿಡಲಾಗಿದೆ. ಚಿತ್ರದ ಕಥೆಯೂ ತುಂಬಾ ಚೆನ್ನಾಗಿದೆ ಎಂದರು ನಾಯಕ ಪ್ರಜ್ವಲ್ ದೇವರಾಜ್.
ನಾನು ನಿರ್ದೇಶಕರ ನಟ. ಅವರು ಹೇಳಿದ ಹಾಗೆ ಮಾಡುತ್ತಿದ್ದೇನೆ. ಹಿಂದೆ ತಮಿಳು ಚಿತ್ರವೊಂದರಲ್ಲಿ ನಟಿಸಿದ್ದೆ. ಬಹಳ ದಿನಗಳ ನಂತರ ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದಾಗಿ ಹಿರಿಯ ನೃತ್ಯ ನಿರ್ದೇಶಕ ಚಿನ್ನಿಪ್ರಕಾಶ್ ತಿಳಿಸಿದರು. ನಾಯಕಿ ಮೇಘ ಶೆಟ್ಟಿ ಕೂಡ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ನಟರಾದ ಶಿವರಾಜ್ ಕೆ ಆರ್ ಪೇಟೆ, ಸಿದ್ಲಿಂಗು ಶ್ರೀಧರ್, ಟೆನ್ನಿಸ್ ಕೃಷ್ಣ, ಶಂಕರ್, ಬೇಬಿ ಲೇಖನ ಹಾಗೂ ಛಾಯಾಗ್ರಾಹಕ ಗುರುಪ್ರಸಾದ್ “ಚೀತಾ” ಕುರಿತು ಮಾತನಾಡಿದರು. ನಿರ್ಮಾಪಕಿ ಪ್ರತಿಭಾ ನರೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದ (Kuno National Park) ಸಫಾರಿ ಝೋನ್‌ಗೆ (Safari Zone) ಎರಡು ಗಂಡು ಚೀತಾಗಳನ್ನ (Cheetah) ಬಿಡುಗಡೆಗೊಳಿಸಿದ್ದು, ಜನರಿಗೆ ಚೀತಾ ವೀಕ್ಷಣೆ ಭಾಗ್ಯ ಸಿಗಲಿದೆ.
ʻಅಗ್ನಿʼ ಮತ್ತು ʻವಾಯುʼ ಹೆಸರಿನ ಎರಡು ಗಂಡು ಚೀತಾಗಳನ್ನ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಅಹೆರಾ ಪ್ರವಾಸೋದ್ಯಮ (Tourism) ವಿಭಾಗದ ಪರೋಂಡ್ ಅರಣ್ಯ ವಲಯಕ್ಕೆ ಬಿಡಲಾಗಿದೆ. ಅರಣ್ಯ ವಿಭಾಗದ ಪಶುವೈದ್ಯರು ಈ ಎರಡೂ ಚೀತಾಗಳ ಆರೋಗ್ಯ ಉತ್ತಮವಾಗಿರುವುದನ್ನು ಖಚಿತಪಡಿಸಿದ ಬಳಿಕ ಸಫಾರಿ ಝೋನ್‌ಗೆ ಬಿಡಲಾಗಿದ್ದು, ಇದು ಪ್ರವಾಸೋದ್ಯಮ ಮತ್ತಷ್ಟು ಆಕರ್ಷಣೆ ತರಲಿದೆ. ಪ್ರವಾಸಿಗರೂ (Tourists) ಚೀತಾ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದಾಗಿದೆ.
ಚೀತಾ ಮರುಪರಿಚಯಿಸುವ ಯೋಜನೆ ಅಡಿಯಲ್ಲಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ (Namibia) ಆ ನಂತರ ದಕ್ಷಿಣ ಆಫ್ರಿಕಾದಿಂದ ತರಲಾದ 20 ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಬಿಡಲಾಗಿತ್ತು. ಅಂದಿನಿಂದ ಅಲ್ಲಿ 4 ಮರಿಗಳು ಜನಿಸಿದ್ದವು. ಆದ್ರೆ ವಿವಿಧ ಕಾರಣಗಳಿಂದಾಗಿ ಮಾರ್ಚ್‌ನಿಂದ 6 ವಯಸ್ಕ ಚೀತಾಗಳು ಸಾವನ್ನಪ್ಪಿದ್ದವು. ಮೂರು ಮರಿಗಳು ಸೇರಿದಂತೆ ಒಟ್ಟು 9 ಚೀತಾಗಳು ಮೃತಪಟ್ಟವು. ಆ ನಂತರ ಉಳಿದ ಚೀತಾಗಳನ್ನು ಪಶುವೈದ್ಯರ ನಿಗಾದಲ್ಲಿ ಇರಿಸಲಾಗಿತ್ತು. ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು – 9 ಕ್ಕೇರಿದ ಸಾವಿನ ಸಂಖ್ಯೆ
ಚೀತಾ ಹಿನ್ನೆಲೆ ನಿಮ್ಗೆ ಗೊತ್ತಾ?
ಮಚ್ಚೆ ಗುರುತಿನ ಚೀತಾಗಳ ಸಂತತಿ ಈಗಾಗಲೇ ಭಾರತದಲ್ಲಿ ನಾಶವಾಗಿದೆ. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 1952ರಲ್ಲಿ ಈ ಪ್ರಭೇದ ಭಾರತದಲ್ಲಿ ಇಲ್ಲ ಎಂದು ಘೋಷಣೆ ಮಾಡಲಾಗಿತ್ತು. 2009ರಲ್ಲಿ ಆಫ್ರಿಕನ್ ಚಿರತೆ ಯೋಜನೆ ಮಾಡಲಾಗಿತ್ತು. ಆದ್ರೆ ಕಾರಣಾಂತರಗಳಿಂದ ಅನುಷ್ಠಾನವಾಗಿರಲಿಲ್ಲ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ (Namibia) ಭಾರತಕ್ಕೆ 2 ರಿಂದ 6 ವರ್ಷ ವಯಸ್ಸಿನ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು ವಿಶೇಷ ವಿಮಾನದಲ್ಲಿ ತರಲಾಗಿತ್ತು. ತಮ್ಮ ಜನ್ಮದಿನವಾದ ಸೆ.17 ರಂದು ಪ್ರಧಾನಿ ಮೋದಿ ಈ ಚಿರತೆಗಳು ಉದ್ಯಾನವನಕ್ಕೆ ಬಿಡುಗಡೆ ಮಾಡಿದ್ದರು. ನವೆಂಬರ್‌ನಲ್ಲಿ ದೊಡ್ಡ ಆವರಣಕ್ಕೆ ಸ್ಥಳಾಂತರಿಸಿದ ಬಳಿಕ ಕಾಡಿಗೆ ಬಿಡುಗಡೆ ಮಾಡಲಾಗಿತ್ತು. ನಂತರ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ತರಿಸಲಾಗಿತ್ತು.
ಕನ್ನಡದ ಸಿನಿಮಾ ರಂಗದ ಪ್ರತಿಭಾವಂತ ನಟ ಪ್ರಜ್ವಲ್ ದೇವರಾಜ್ ನಟನೆಯ ಹೊಸ ಸಿನಿಮಾದಲ್ಲಿ ಮೇಘಾ ಶೆಟ್ಟಿ (Megha Shetty) ಕೂಡ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ. ಮೊನ್ನೆಷ್ಟೇ ಈ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದ್ದು, ಈ ಚಿತ್ರದಲ್ಲಿ ಶ್ರುತಿ ಹರಿಹರನ್ ಕೂಡ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.
ರಾಜಲಕ್ಷ್ಮಿ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ (Raja Kalai Kumar) ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ ನಟಿಸುತ್ತಿರುವ ‘ಚೀತಾ’ (Cheeta) ಚಿತ್ರದ ಮುಹೂರ್ತ ಸಮಾರಂಭ ಕನ್ನಡ ರಾಜ್ಯೋತ್ಸವದ ಶುಭದಿನದಂದು ಹೆಚ್. ಎಂ. ಟಿ ಶಾಲೆ ಆಟದ ಮೈದಾನದಲ್ಲಿ ನೆರವೇರಿದೆ. ಪ್ರಜ್ವಲ್ ದೇವರಾಜ್ ಕನ್ನಡ ಬಾವುಟ ಹಾರಿಸುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು.
ಮುಹೂರ್ತ ಸಮಾರಂಭದ ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದ್ದರು. ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡಾನ್ಸರ್ ಆಗಿ, ಡಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ಮಾತನಾಡಿದ ನಿರ್ದೇಶಕ ರಾಜ ಕಲೈ ಕುಮಾರ್, ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಪ್ರಜ್ವಲ್ ಅವರ ಮೂವತ್ತೊಂಭತ್ತನೇ ಚಿತ್ರವನ್ನು ನಾನು ನಿರ್ದೇಶಿಸುತ್ತಿದ್ದೇನೆ. ಇನ್ನು ಚಿತ್ರದ ಕುರಿತು ಹೇಳುವುದಾದರೆ, ಇದೊಂದು ಮಾರ್ಕೆಟ್ ನಲ್ಲಿ ನಡೆಯುವ ಕಥೆ. ಮಾರ್ಕೆಟ್ ನಲ್ಲಿನ ವ್ಯಾಪಾರ, ವಹಿವಾಟು ಹಾಗೂ ಅಲ್ಲಿ ಕೆಲಸ ಮಾಡುವವರು ಎಲ್ಲಾ ಸೂಪರ್ ಫಾಸ್ಟ್. ನಮ್ಮ ಚಿತ್ರದ ನಾಯಕ ಕೂಡ ಚಿರತೆಯಷ್ಟೇ ವೇಗದವನು. ಹಾಗಾಗಿ ನಮ್ಮ ಚಿತ್ರಕ್ಕೆ ಚೀತಾ ಎಂದು ಹೆಸರಿಟ್ಟಿದ್ದೇವೆ. ಕಲಾ ನಿರ್ದೇಶಕ ಶಿವು ಅವರು ಅದ್ದೂರಿ ಮಾರ್ಕೆಟ್ ಸೆಟ್ ನಿರ್ಮಾಣ ಮಾಡುತ್ತಿದ್ದಾರೆ. ಆ ಸೆಟ್ ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆಯುತ್ತದೆ. ಶೃತಿ ಹರಿಹರನ್, ಗುರುರಾಜ್ ಜಗ್ಗೇಶ್, ಶಿವರಾಜ ಕೆ.ಆರ್ ಪೇಟೆ, ತೆಲುಗು ನಟ ಸುನೀಲ್, ಗೋವಿಂದೇ ಗೌಡ, ಅಭಯ್ ಪುನೀತ್ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನವೆಂಬರ್ ಆರರಿಂದ ಚಿತ್ರೀಕರಣ ಆರಂಭವಾಗಲಿದೆ ಎಂದಿದ್ದರು.
ಕಲೈ ಮಾಸ್ಟರ್ ನೃತ್ಯ ನಿರ್ದೇಶಕರಾದಾಗ ನೃತ್ಯ ಸಂಯೋಜಿಸಿದ ಮೊದಲ ಗೀತೆಗೂ ನಾನೇ ನಾಯಕನಾಗಿದ್ದೆ. ಈಗ ಅವರು ನಿರ್ದೇಶಿಸುತ್ತಿರುವ ಮೊದಲ ಚಿತ್ರಕ್ಕೂ ನಾನೇ ನಾಯಕ. ನಿರ್ದೇಶಕರು ಒಳ್ಳೆ ಕಥೆ ಸಿದ್ದ ಮಾಡಿಕೊಂಡಿದ್ದಾರೆ. ಮಾರ್ಕೆಟ್ ನಲ್ಲೇ ಹುಟ್ಟಿ, ಅಲ್ಲೇ ಬೆಳೆಯುವ ಹುಡುಗನ ಪಾತ್ರ ನನ್ನದು ಎಂದು ನಾಯಕ ಪ್ರಜ್ವಲ್ ದೇವರಾಜ್ ತಿಳಿಸಿದ್ದರು.
ನಾನು ಚಿತ್ರದಲ್ಲಿ ಪ್ರಜ್ವಲ್ ಅವರ ಸ್ನೇಹಿತನ ಪಾತ್ರ ನಿರ್ವಹಿಸುತ್ತಿರುವುದಾಗಿ ಗುರುರಾಜ್ ಜಗ್ಗೇಶ್ ಹೇಳಿದರು. ಶೃತಿ ಹರಿಹರನ್ (Shruti Hariharan), ಶಿವರಾಜ್ ಕೆ.ಆರ್ ಪೇಟೆ, ಗೋವಿಂದೇ ಗೌಡ ಮುಂತಾದ ಕಲಾವಿದರು ಚಿತ್ರದ ಬಗ್ಗೆ ಮಾತನಾಡಿದರು. ನಿರ್ಮಾಪಕಿ ಪ್ರತಿಭಾ ನರೇಶ್ ಎಲ್ಲರಿಗೂ ಧನ್ಯವಾದ ತಿಳಿಸಿದರು. ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಮೊದಲ ಬಾರಿಗೆ ಸಿನಿಮಾದ ಅಷ್ಟು ತಂತ್ರಜ್ಞರ ಫೋಟೊ ಶೂಟ್ ಮಾಡಿಸುವುದರ ಮೂಲಕ ತೆರೆಯ ಹಿಂದೆ ದುಡಿಯುವ ತಂತ್ರಜ್ಞರಿಗೆ ವಿಶೇಷ ಗೌರವ ನೀಡಿದ್ದಾರೆ.
ರಾಜಲಕ್ಷ್ಮಿ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ (Raja Kalai Kumar) ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ ನಟಿಸುತ್ತಿರುವ ‘ಚೀತಾ’ (Cheeta) ಚಿತ್ರದ ಮುಹೂರ್ತ ಸಮಾರಂಭ ಕನ್ನಡ ರಾಜ್ಯೋತ್ಸವದ ಶುಭದಿನದಂದು ಹೆಚ್. ಎಂ. ಟಿ ಶಾಲೆ ಆಟದ ಮೈದಾನದಲ್ಲಿ ನೆರವೇರಿತು. ಪ್ರಜ್ವಲ್ ದೇವರಾಜ್ ಕನ್ನಡ ಬಾವುಟ ಹಾರಿಸುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.
ಮುಹೂರ್ತ ಸಮಾರಂಭದ ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡಾನ್ಸರ್ ಆಗಿ, ಡಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ಮಾತನಾಡಿದ ನಿರ್ದೇಶಕ ರಾಜ ಕಲೈ ಕುಮಾರ್, ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಪ್ರಜ್ವಲ್ ಅವರ ಮೂವತ್ತೊಂಭತ್ತನೇ ಚಿತ್ರವನ್ನು ನಾನು ನಿರ್ದೇಶಿಸುತ್ತಿದ್ದೇನೆ. ಇನ್ನು ಚಿತ್ರದ ಕುರಿತು ಹೇಳುವುದಾದರೆ, ಇದೊಂದು ಮಾರ್ಕೆಟ್ ನಲ್ಲಿ ನಡೆಯುವ ಕಥೆ. ಮಾರ್ಕೆಟ್ ನಲ್ಲಿನ ವ್ಯಾಪಾರ, ವಹಿವಾಟು ಹಾಗೂ ಅಲ್ಲಿ ಕೆಲಸ ಮಾಡುವವರು ಎಲ್ಲಾ ಸೂಪರ್ ಫಾಸ್ಟ್. ನಮ್ಮ ಚಿತ್ರದ ನಾಯಕ ಕೂಡ ಚಿರತೆಯಷ್ಟೇ ವೇಗದವನು. ಹಾಗಾಗಿ ನಮ್ಮ ಚಿತ್ರಕ್ಕೆ ಚೀತಾ ಎಂದು ಹೆಸರಿಟ್ಟಿದ್ದೇವೆ. ಕಲಾ ನಿರ್ದೇಶಕ ಶಿವು ಅವರು ಅದ್ದೂರಿ ಮಾರ್ಕೆಟ್ ಸೆಟ್ ನಿರ್ಮಾಣ ಮಾಡುತ್ತಿದ್ದಾರೆ. ಆ ಸೆಟ್ ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆಯುತ್ತದೆ. ಶೃತಿ ಹರಿಹರನ್, ಗುರುರಾಜ್ ಜಗ್ಗೇಶ್, ಶಿವರಾಜ ಕೆ.ಆರ್ ಪೇಟೆ, ತೆಲುಗು ನಟ ಸುನೀಲ್, ಗೋವಿಂದೇ ಗೌಡ, ಅಭಯ್ ಪುನೀತ್ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನವೆಂಬರ್ ಆರರಿಂದ ಚಿತ್ರೀಕರಣ ಆರಂಭವಾಗಲಿದೆ ಎಂದರು.
ಕಲೈ ಮಾಸ್ಟರ್ ನೃತ್ಯ ನಿರ್ದೇಶಕರಾದಾಗ ನೃತ್ಯ ಸಂಯೋಜಿಸಿದ ಮೊದಲ ಗೀತೆಗೂ ನಾನೇ ನಾಯಕನಾಗಿದ್ದೆ. ಈಗ ಅವರು ನಿರ್ದೇಶಿಸುತ್ತಿರುವ ಮೊದಲ ಚಿತ್ರಕ್ಕೂ ನಾನೇ ನಾಯಕ. ನಿರ್ದೇಶಕರು ಒಳ್ಳೆ ಕಥೆ ಸಿದ್ದ ಮಾಡಿಕೊಂಡಿದ್ದಾರೆ. ಮಾರ್ಕೆಟ್ ನಲ್ಲೇ ಹುಟ್ಟಿ, ಅಲ್ಲೇ ಬೆಳೆಯುವ ಹುಡುಗನ ಪಾತ್ರ ನನ್ನದು ಎಂದು ನಾಯಕ ಪ್ರಜ್ವಲ್ ದೇವರಾಜ್ ತಿಳಿಸಿದರು.
ನಾನು ಚಿತ್ರದಲ್ಲಿ ಪ್ರಜ್ವಲ್ ಅವರ ಸ್ನೇಹಿತನ ಪಾತ್ರ ನಿರ್ವಹಿಸುತ್ತಿರುವುದಾಗಿ ಗುರುರಾಜ್ ಜಗ್ಗೇಶ್ ಹೇಳಿದರು. ಶೃತಿ ಹರಿಹರನ್ (Shruti Hariharan), ಶಿವರಾಜ್ ಕೆ.ಆರ್ ಪೇಟೆ, ಗೋವಿಂದೇ ಗೌಡ ಮುಂತಾದ ಕಲಾವಿದರು ಚಿತ್ರದ ಬಗ್ಗೆ ಮಾತನಾಡಿದರು. ನಿರ್ಮಾಪಕಿ ಪ್ರತಿಭಾ ನರೇಶ್ ಎಲ್ಲರಿಗೂ ಧನ್ಯವಾದ ತಿಳಿಸಿದರು. ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಮೊದಲ ಬಾರಿಗೆ ಸಿನಿಮಾದ ಅಷ್ಟು ತಂತ್ರಜ್ಞರ ಫೋಟೊ ಶೂಟ್ ಮಾಡಿಸುವುದರ ಮೂಲಕ ತೆರೆಯ ಹಿಂದೆ ದುಡಿಯುವ ತಂತ್ರಜ್ಞರಿಗೆ ವಿಶೇಷ ಗೌರವ ನೀಡಿದ್ದಾರೆ.
ನವದೆಹಲಿ: ಭಾರತದಲ್ಲಿ ಚೀತಾ ಯೋಜನೆ (Project Cheetah) ಮರುಪರಿಚಯಿಸುವ ಕಾರ್ಯಕ್ರಮಗಳ ಬಗ್ಗೆ ಸರ್ಕಾರವನ್ನು ಪ್ರಶ್ನಿಸಲು ಯಾವುದೇ ಕಾರಣವಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಸೋಮವಾರ ಹೇಳಿದೆ. ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) 9 ಚೀತಾಗಳ ಸಾವಿನ ಕುರಿತು ಸಲ್ಲಿಸಿದ್ದ ಅರ್ಜಿ ವಿಚಾರಣೆ ಬಳಿಕ ಕೋರ್ಟ್ ಹೀಗೆ ಹೇಳಿದೆ.
ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನದಲ್ಲಿ ಸಾವನ್ನಪ್ಪಿದ 9 ಚೀತಾಗಳಲ್ಲಿ ಮೂರು ಮರಿಗಳು ಸೇರಿವೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ತರಲಾದ 20 ಚೀತಾಗಳನ್ನು ರಾಷ್ಟ್ರೀಯ ಉದ್ಯಾನದಲ್ಲಿ ಬಿಡಲಾಗಿತ್ತು. ಅಂದಿನಿಂದ ಅಲ್ಲಿ ನಾಲ್ಕು ಮರಿಗಳು ಜನಿಸಿದ್ದವು. ಇದನ್ನೂ ಓದಿ: ಕಳವಳ ಉಂಟುಮಾಡಿದ ರೇಡಿಯೋ ಕಾಲರ್ – ಮತ್ತೊಂದು ಚೀತಾ ಕತ್ತಿನಲ್ಲಿ ತೀವ್ರ ಗಾಯಗಳು ಪತ್ತೆ
ಕಳೆದ ತಿಂಗಳು ನಾಲ್ಕು ದಿನಗಳ ಅಂತರದಲ್ಲಿ ಎರಡು ಗಂಡು ಚೀತಾಗಳು ಸಾವನ್ನಪ್ಪಿದ್ದು, ತೇಜಸ್ ಹೆಸರಿನ ಚೀತಾ ಜುಲೈ 11 ರಂದು ಸಾವನ್ನಪ್ಪಿತ್ತು. ಜುಲೈ 14 ರಂದು ಸೂರಜ್ ಹೆಸರಿನ ಚೀತಾದ ಶವ ಪತ್ತೆಯಾಗಿತ್ತು. ಇದಕ್ಕೂ ಮೊದಲು ಮಾರ್ಚ್ 27 ರಂದು ಸಶಾ ಎಂಬ ಹೆಣ್ಣು ಚೀತಾ ಮೂತ್ರಪಿಂಡದ ಕಾಯಿಲೆಯಿಂದ ಮೃತಪಟ್ಟಿತ್ತು. ಉದಯ್ ಹೆಸರಿನ ಚೀತಾ ಏಪ್ರಿಲ್ 23 ರಂದು ಹೃದಯ-ಶ್ವಾಸಕೋಶದ ವೈಫಲ್ಯದಿಂದ ಸಾವನ್ನಪ್ಪಿತ್ತು. ದಕ್ಷಾ ಹೆಸರಿನ ಹೆಣ್ಣು ಚೀತಾ ಮೇ 9 ರಂದು ಸಾವಿಗೀಡಾಗಿತ್ತು. ಹವಾಮಾನ ವೈಪರೀತ್ಯ ಮತ್ತು ನಿರ್ಜಲೀಕರಣದಿಂದ ಮೇ 25 ರಂದು ಎರಡು ಚಿರತೆ ಮರಿಗಳು ಹಾಗೂ ಮೇ 23 ರಂದು ಮತ್ತೊಂದು ಮರಿ ಸಾವನ್ನಪ್ಪಿದ್ದವು. ಇದನ್ನೂ ಓದಿ: ಕುನೋ ನ್ಯಾಷನಲ್ ಪಾರ್ಕ್‌ನಲ್ಲಿ ಇನ್ನೆರಡು ಚೀತಾ ಮರಿಗಳ ಸಾವು – ಕಳೆದ ಎರಡು ತಿಂಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಳ
ಮಚ್ಚೆ ಗುರುತಿನ ಚೀತಾಗಳ ಸಂತತಿ ಈಗಾಗಲೇ ಭಾರತದಲ್ಲಿ ನಾಶವಾಗಿದೆ. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 1952ರಲ್ಲಿ ಈ ಪ್ರಭೇದ ಭಾರತದಲ್ಲಿ ಇಲ್ಲ ಎಂದು ಘೋಷಣೆ ಮಾಡಲಾಗಿತ್ತು. 2009ರಲ್ಲಿ ಆಫ್ರಿಕನ್ ಚಿರತೆ ಯೋಜನೆ ಮಾಡಲಾಗಿತ್ತು. ಆದ್ರೆ ಕಾರಣಾಂತರಗಳಿಂದ ಅನುಷ್ಠಾನವಾಗಿರಲಿಲ್ಲ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ (Namibia) ಭಾರತಕ್ಕೆ 2 ರಿಂದ 6 ವರ್ಷ ವಯಸ್ಸಿನ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು ವಿಶೇಷ ವಿಮಾನದಲ್ಲಿ ತರಲಾಗಿತ್ತು. ತಮ್ಮ ಜನ್ಮದಿನವಾದ ಸೆ.17 ರಂದು ಪ್ರಧಾನಿ ಮೋದಿ ಈ ಚಿರತೆಗಳು ಉದ್ಯಾನವನಕ್ಕೆ ಬಿಡುಗಡೆ ಮಾಡಿದ್ದರು. ನವೆಂಬರ್‌ನಲ್ಲಿ ದೊಡ್ಡ ಆವರಣಕ್ಕೆ ಸ್ಥಳಾಂತರಿಸಿದ ಬಳಿಕ ಕಾಡಿಗೆ ಬಿಡುಗಡೆ ಮಾಡಲಾಗಿತ್ತು. ನಂತರ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ತರಿಸಲಾಗಿತ್ತು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸರ್ಕಾರ, ಕುನೋ ಉದ್ಯಾನಕ್ಕೆ ಬಿಡಲಾದ ಒಂದು ವರ್ಷ ಅವಧಿ ಪೂರೈಸುವುದರ ಒಳಗೆ ಮೂರು ಮರಿಗಳು ಸೇರಿದಂತೆ 9 ಚೀತಾಗಳು ಸಾವನ್ನಪ್ಪಿವೆ. ಇಲ್ಲಿನ ಹವಾಮಾನ ಪರಿಸ್ಥಿತಿ ಮತ್ತು ಅದರಿಂದಾಗುವ ಪರಿಣಾಮಗಳನ್ನು ತಿಳಿಯಲು ನಿರಂತರವಾಗಿ ಕೆಲಸ ನಡೆಯುತ್ತಿದೆ. ಅಲ್ಲದೇ ಪ್ರತಿ ವರ್ಷ 12 ರಿಂದ 14 ಹೊಸ ಚೀತಾಗಳನ್ನು ತರಿಸಲಾಗುತ್ತದೆ. ಕುನೋದಲ್ಲಿ ಸಮಸ್ಯೆಗಳಿವೆ ಆದ್ರೆ ಆತಂಕಕಾರಿ ಏನೂ ಅಲ್ಲ ಎಂದು ಸರ್ಕಾರ ಕೋರ್ಟ್‌ಗೆ ತಿಳಿಸಿದೆ.
ಭೋಪಾಲ್: ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) ಚೀತಾ (Cheetah) ಸರಣಿ ಸಾವಿನ ಕುರಿತಂತೆ ಸುಪ್ರೀಂ ಕೋರ್ಟ್ (Supreme Court) ಗುರುವಾರ ಕೇಂದ್ರದ (Central Government) ಪ್ರತಿಕ್ರಿಯೆಯನ್ನು ಕೇಳಿದೆ. ಒಂದು ವರ್ಷದೊಳಗೆ ಸಂಭವಿಸಿರುವ 8 ಚೀತಾಗಳ ಸಾವು ಉತ್ತಮ ಬೆಳವಣಿಗೆಯಲ್ಲ ಎಂದು ಕೋರ್ಟ್ ಹೇಳಿದೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯ ಕೇಂದ್ರಕ್ಕೆ ಇದನ್ನು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಬೇಡಿ ಎಂದಿದೆ. ಅಲ್ಲದೇ ಮೇ ತಿಂಗಳಿನ ತನ್ನ ಶಿಫಾರಸ್ಸನ್ನು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ. ಈಗ ನೆಲೆಗೊಂಡಿರುವ ರಾಜ್ಯವನ್ನು ಲೆಕ್ಕಿಸದೆ ಅವುಗಳಿಗೆ ಪರ್ಯಾಯ ಆವಾಸ ಸ್ಥಾನಗಳ ಆಯ್ಕೆಗಳನ್ನು ಹುಡುಕಲು ಕೇಂದ್ರಕ್ಕೆ ಹೇಳಿದೆ. ಈ ವಿಚಾರದಲ್ಲಿ ಪ್ರತಿಕ್ರಿಯೆ ಸಲ್ಲಿಸುವುದಾಗಿ ಸರ್ಕಾರ ಹೇಳಿದೆ. ಇದೀಗ ಆಗಸ್ಟ್ 1 ರಂದು ಈ ಪ್ರಕರಣದ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಕಳವಳ ಉಂಟುಮಾಡಿದ ರೇಡಿಯೋ ಕಾಲರ್ – ಮತ್ತೊಂದು ಚೀತಾ ಕತ್ತಿನಲ್ಲಿ ತೀವ್ರ ಗಾಯಗಳು ಪತ್ತೆ
ನಮಿಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಒಟ್ಟು 20 ಚೀತಾಗಳನ್ನು ತರಲಾಗಿತ್ತು. ಕಳೆದ ನಾಲ್ಕು ತಿಂಗಳಲ್ಲಿ ಮೂರು ಮರಿಗಳು ಸೇರಿದಂತೆ ಒಟ್ಟು ಎಂಟು ಚೀತಾಗಳು ಸಾವನ್ನಪ್ಪಿವೆ. ಅವುಗಳಲ್ಲಿ ಎರಡು ಇತ್ತೀಚೆಗೆ ರೇಡಿಯೊ ಕಾಲರ್‌ಗಳಿಂದ ಉಂಟಾದ ಸೆಪ್ಟಿಸೆಮಿಯಾ ಎಂಬ ಚರ್ಮದ ಸೋಂಕಿನಿಂದ ಸಾವನ್ನಪ್ಪಿವೆ ಎನ್ನಲಾಗಿದೆ. ಇದು ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳ ನಿರ್ವಹಣೆ ಕುರಿತಂತೆ ಚರ್ಚೆಗೆ ಗ್ರಾಸವಾಗಿದೆ.
ಈಗ ಪ್ರಸ್ತುತ ಉದ್ಯಾನವನದಲ್ಲಿ 15 ಚೀತಾಗಳಿವೆ. 4 ಆವರಣದಲ್ಲಿ ಮತ್ತು 11 ಕಾಡಿನಲ್ಲಿವೆ. ಒಂದು ಮರಿ ತನ್ನ ತಾಯಿಯಿಂದ ತಿರಸ್ಕಾರಕ್ಕೊಳಗಾಗಿದ್ದು ಅದನ್ನು ಅರಣ್ಯಾಧಿಕಾರಿಗಳು ಆರೈಕೆ ಮಾಡುತ್ತಿದ್ದಾರೆ. ಇದನ್ನೂ ಓದಿ: 2 ಚೀತಾಗಳ ಸಾವಿಗೆ ಕಾರಣ ಕತ್ತಿಗೆ ಅಳವಡಿಸಲಾಗಿದ್ದ ರೇಡಿಯೋ ಕಾಲರ್!
ಭೋಪಾಲ್: ಕಳೆದ ವಾರ ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನದಲ್ಲಿ (Kuno National Park) 2 ಚೀತಾಗಳು (Cheetah) ಸಾವನ್ನಪ್ಪಿದ್ದು, ಅವುಗಳ ಕತ್ತಿಗೆ ಅಳವಡಿಸಲಾಗಿದ್ದ ರೇಡಿಯೋ ಕಾಲರ್‌ನ (Radio Collar) ಸುತ್ತಲೂ ತೀವ್ರವಾದ ಗಾಯಗಳು ಕಂಡುಬಂದಿತ್ತು. ಇದೀಗ ರೇಡಿಯೋ ಕಾಲರ್‌ನಿಂದಾಗಿ ಮತ್ತೊಂದು ಚೀತಾಗೆ ತೀವ್ರ ಗಾಯಗಳಾಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ತಿಳಿದುಬಂದಿದೆ. ಇದು ತೀವ್ರ ಕಳವಳಕ್ಕೆ ಕಾರಣವಾಗಿದೆ.
ಇತ್ತೀಚೆಗೆ ತೇಜಸ್ ಹಾಗೂ ಸೂರಜ್ ಎಂಬ ಚೀತಾಗಳ ಸಾವಿನ ಬಳಿಕ ವೈದ್ಯರ ತಂಡ ಪವನ್ ಎಂಬ ಚೀತಾವನ್ನು ಪ್ರಜ್ಞಾಹೀನಗೊಳಿಸಿ, ಅದನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆ ಅದರ ಕುತ್ತಿಗೆಗೆ ಜೋಡಿಸಲಾಗಿದ್ದ ರೇಡಿಯೋ ಕಾಲರ್‌ನ ಸುತ್ತ ನಂಜು ಹಾಗೂ ತೀವ್ರವಾದ ಗಾಯ ಕಂಡುಬಂದಿದೆ. ತಕ್ಷಣವೇ ಅದರ ರೇಡಿಯೋ ಕಾಲರ್ ಅನ್ನು ತೆಗೆದುಹಾಕಲಾಗಿದ್ದು, ಸೋಂಕನ್ನು ಗುಣಪಡಿಸಲು ಚಿಕಿತ್ಸೆ ಪ್ರಾರಂಭಿಸಿದ್ದಾರೆ.
ಪ್ರಸ್ತುತ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ 4 ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೂ ಪರಿಸ್ಥಿತಿಯ ತೀವ್ರತೆಯನ್ನು ಗುರುತಿಸಿ ಚಿಕಿತ್ಸೆಯಲ್ಲಿ ಇನ್ನಷ್ಟು ಸಹಾಯ ಮಾಡಲು ಗ್ವಾಲಿಯರ್ ಹಾಗೂ ಭೋಪಾಲ್‌ನಿಂದ ಹೆಚ್ಚುವರಿ ನಾಲ್ವರು ವೈದ್ಯರನ್ನು ಕರೆಸಲಾಗಿದೆ. 8 ವೈದ್ಯರ ತಂಡ ಚೀತಾಗಳನ್ನು ಶಾಂತಗೊಳಿಸಲು ಹಾಗೂ ಅಗತ್ಯ ಔಷಧಿಗಳನ್ನು ನೀಡಲು ಜಂಟಿಯಾಗಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: 2 ಚೀತಾಗಳ ಸಾವಿಗೆ ಕಾರಣ ಕತ್ತಿಗೆ ಅಳವಡಿಸಲಾಗಿದ್ದ ರೇಡಿಯೋ ಕಾಲರ್!
ಸದ್ಯ ರೇಡಿಯೋ ಕಾಲರ್‌ಗಳಿಲ್ಲದಿದ್ದರೂ ಚೀತಾಗಳ ಚಲನವಲನಗಳ ಬಗ್ಗೆ ಗಮನಹರಿಸಲು ಡ್ರೋನ್ ಕ್ಯಾಮೆರಾಗಳ ಬಳಕೆ ಸಹಾಯವಾಗಲಿದೆ. ಭಾರತದಲ್ಲಿ ಚೀತಾಗಳ ಸಂತತಿಯನ್ನು ಮರುಸ್ಥಾಪಿಸುವ ಉದ್ದೇಶದಿಂದ ಕಳೆದ ವರ್ಷ ನಮೀಬಿಯಾ ಹಾಗೂ ದಕ್ಷಿಣ ಆಫ್ರಿಕಾದಿಂದ ಒಟ್ಟು 20 ಚೀತಾಗಳನ್ನು ತರಿಸಲಾಯಿತು. ಆದರೆ ಕಳೆದ 5 ತಿಂಗಳಿನಿಂದ ಅವುಗಳಲ್ಲಿ ಒಟ್ಟು 8 ಚೀತಾಗಳು ಸಾವನ್ನಪ್ಪಿವೆ. ಇದನ್ನೂ ಓದಿ: ISI ನಂಟಿನ ಶಂಕೆ – ಅಕ್ರಮವಾಗಿ ಭಾರತ ಪ್ರವೇಶಿಸಿದ ಸೀಮಾ ಹೈದರ್ ತೀವ್ರ ವಿಚಾರಣೆ