Tag: ಚುನಾವಣಾ

  • ದೇವಿ ಹೇಳಿದಂತೆ ಎರಡು ಕ್ಷೇತ್ರದಲ್ಲಿ ನಿಲ್ಲಲು ಮುಂದಾದ್ರಾ ಸಿದ್ದರಾಮಯ್ಯ?

    ದೇವಿ ಹೇಳಿದಂತೆ ಎರಡು ಕ್ಷೇತ್ರದಲ್ಲಿ ನಿಲ್ಲಲು ಮುಂದಾದ್ರಾ ಸಿದ್ದರಾಮಯ್ಯ?

    ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಚಿಕ್ಕಮ್ಮತಾಯಿ ಹೇಳಿದಂತೆ ಎರಡು ಕ್ಷೇತ್ರದಲ್ಲಿ ನಿಲ್ಲಲು ಮುಂದಾಗಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.

    ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ‌ ಗ್ರಾಮ ಆದಿನಾಡು ಚಿಕ್ಕಮ್ಮತಾಯಿ ಈ ಹಿಂದೆ ಸಿದ್ದರಾಮಯ್ಯಗೆ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ನುಡಿದಿತ್ತು. ದೇವಿಯ ಮಾತಿಗೋ ಅಥವಾ ರಾಜಕೀಯ ಕಾರಣಕ್ಕೋ‌ ಗೊತ್ತಿಲ್ಲ ಈಗ ಸಿದ್ದರಾಮಯ್ಯ ಎರಡು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ.

    ದೇವಿ ಹೇಳಿದ್ದೇನು?
    ಜನವರಿ ತಿಂಗಳಿನಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ (Yathindra Siddaramaiah) ಆದಿನಾಡು ಚಿಕ್ಕಮ್ಮತಾಯಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ಅರ್ಚಕ ಲಿಂಗಣ್ಣ ಮೈ ಮೇಲೆ ಚಿಕ್ಕಮ್ಮತಾಯಿ ಬಂದು ಸಿದ್ದರಾಮಯ್ಯ ಸ್ಪರ್ಧೆಯ ವಿಚಾರವಾಗಿ ಮಾತನಾಡಿತ್ತು.

    ನಾನು ನಿಮ್ಮ ಮನೆಯ ಮೂಲ ದೇವರು. ನಿಮ್ಮ ತಂದೆ ಒಂದು ಕಡೆ ಸ್ಪರ್ಧೆ ಮಾಡಿದರೆ ಕೆಡುಕು ಆಗುತ್ತದೆ. ಎರಡು ಕಡೆ ಸ್ಪರ್ಧೆ ಮಾಡಿದರೆ ಒಳ್ಳೆಯದು. ಎರಡು ಬಾಹುಗಳನ್ನು ಎರಡು ಕಡೆ ಚಾಚಿದರೆ ನಾನು ಒಳ್ಳೆಯದು‌ ಮಾಡುತ್ತೇನೆ ಎಂದು ನುಡಿದಿತ್ತು.  ಇದನ್ನೂ ಓದಿ: ಪ್ರಧಾನಿ ವಾಹನದ ಬಳಿ ನುಗ್ಗಲು ಯತ್ನಿಸಿದ ಯುವಕ- ಭದ್ರತಾ ಲೋಪವಾಗಿಲ್ಲ ಅಂದ್ರು ಎಸ್‍ಪಿ

    ಕಾಂಗ್ರೆಸ್‌ (Congress) ಟಿಕೆಟ್‌ ಪಟ್ಟಿ ಶನಿವಾರ ಪ್ರಕಟವಾಗಿದ್ದು ಹೈಕಮಾಂಡ್‌ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದ ಟಿಕೆಟ್‌ ನೀಡಿದೆ. ಆದರೆ ಸಿದ್ದರಾಮಯ್ಯ ಅವರು ನಾನು ಎರಡು ಕಡೆ ಸ್ಪರ್ಧೆ ಮಾಡುವಂತೆ ಕುಟುಂಬಸ್ಥರು ಹೇಳುತ್ತಿದ್ದಾರೆ. ಹೀಗಾಗಿ ನಾನು ಕೋಲಾರದಲ್ಲೂ ಟಿಕೆಟ್‌ ಕೇಳಿದ್ದೇನೆ ಎಂದು ಹೇಳಿದ್ದಾರೆ.

    ಸಿದ್ದರಾಮಯ್ಯ ಅವರ ನಿರ್ಧಾರದ ಹಿಂದೆ ಆದಿನಾಡು ಚಿಕ್ಕಮ್ಮತಾಯಿ ಅಂದು ನುಡಿದ ಮಾತೇ ಕಾರಣ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಕ್ಷೇತ್ರ ಆಯ್ಕೆ ವಿಚಾರ ಬಂದಾಗ ಪತ್ನಿ, ಪುತ್ರನ ಜೊತೆ ಕೇಳಿ ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದರು. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ದೇವರನ್ನು ಹೆಚ್ಚಾಗಿ ನಂಬುತ್ತಾರೆ. ಹೀಗಾಗಿ ಸಿದ್ದರಾಮಯ್ಯ ಎರಡು ಕಡೆ ಟಿಕೆಟ್‌ ಕೇಳಿದ್ದು ಹೈಕಮಾಂಡ್‌ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ಎಂಬ ಕುತೂಹಲ ಹೆಚ್ಚಾಗಿದೆ.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಜಿ.ಟಿ.ದೇವೇಗೌಡರ ವಿರುದ್ಧ ಸೋಲು ಅನುಭವಿಸಿದ್ದರೆ, ಬಾದಾಮಿಯಲ್ಲಿ ಶ್ರೀರಾಮುಲು ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಗೆಲುವು ಪಡೆಯುವ ಮೂಲಕ ನಿಟ್ಟುಸಿರು ಬಿಟ್ಟಿದ್ದರು.

    ಒಂದೂವರೆ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಕಾಂಗ್ರೆಸ್‌ಗೆ ಬಹುಮತ ಬಂದರೆ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುವ ಆಸೆಯಲ್ಲಿ ಇದ್ದಾರೆ. ಈ ಕಾರಣಕ್ಕೆ ಬಾದಾಮಿ ಬೆಂಗಳೂರು ಹಾಗೂ ಮೈಸೂರಿನಿಂದ ದೂರವಾಗುತ್ತದೆ ಎಂಬ ಕಾರಣ ನೀಡಿ ವರುಣಾದಿಂದ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ.

  • ಮತದಾರರ ಪಟ್ಟಿಯಲ್ಲಿ ಹೆಸ್ರು ಕೈತಪ್ಪಿದ್ಯಾ? – ನೀವೇ ಪರಿಶೀಲನೆ ಮಾಡಿ

    ಮತದಾರರ ಪಟ್ಟಿಯಲ್ಲಿ ಹೆಸ್ರು ಕೈತಪ್ಪಿದ್ಯಾ? – ನೀವೇ ಪರಿಶೀಲನೆ ಮಾಡಿ

    ಬೆಂಗಳೂರು: ವಿಧಾನಸಭಾ ಚುನಾವಣೆ (Karnataka Election) ಹತ್ತಿರ ಬರುತ್ತಿದ್ದಂತೆ ಈಗ ಚುನಾವಣಾ ಆಯೋಗದಿಂದ (Election Commission) 221 ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ.

    ಚಿಲುಮೆಯ ಗೊಂದಲದಲ್ಲಿರುವ ಚಿಕ್ಕಪೇಟೆ ಶಿವಾಜಿನಗರ, ಮಹಾದೇವಪುರ ವಿಧಾನಸಭಾ ಕ್ಷೇತ್ರದ ಅಂತಿಮ ಪಟ್ಟಿ ಮಾತ್ರ ಇನ್ನೂ ಪ್ರಕಟವಾಗಿಲ್ಲ. ಇನ್ನುಳಿದಂತೆ ಎಲ್ಲಾ ಕ್ಷೇತ್ರದ ಪಟ್ಟಿಯೂ ಸಾರ್ವಜನಿಕ ರಿಗೆ ಲಭ್ಯವಿದೆ.

    ಮತದಾರರ ಪಟ್ಟಿಯಲ್ಲಿ (Voter List) ಗೊಂದಲವಿದ್ದರೆ www.ceo.karnataka.gov.in ವೆಬ್ ಸೈಟ್ ನಲ್ಲಿ ಪಿಡಿಎಫ್ ಮಾದರಿಯಲ್ಲಿ ಮತದಾರರು ತಮ್ಮ ಹೆಸರು ಮುಂತಾದ ವಿವರಗಳು ಪರಿಶೀಲಿಸಬಹುದು ಅಥವಾ www.nvsp.in ಅಥವಾ Voter Portal ಅಥವಾ Voter Helpline Mobile App ಮೂಲಕ ಮತದಾರರು ತಮ್ಮ ಮಾಹಿತಿ ತಪ್ಪಿದ್ದಲ್ಲಿ ಮತ್ತೆ ಬದಲಾವಣೆಗೆ ಅರ್ಜಿ ಸಲ್ಲಿಸಬಹುದು ಎಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಯಾರೇ ಬಂದ್ರು ಹಳೆಮೈಸೂರು ಭಾಗದಲ್ಲಿ ಜೆಡಿಎಸ್‍ನ್ನು ಅಲ್ಲಾಡಿಸಲು ಆಗಲ್ಲ: ನಿಖಿಲ್ ಕುಮಾರಸ್ವಾಮಿ

    ಪ್ರಸ್ತುತ ರಾಜ್ಯದಲ್ಲಿ ಒಟ್ಟು 5,05,48,553 ಮತದಾರರಿದ್ದಾರೆ. ಈ ಪೈಕಿ ಪುರುಷರು 2,54,49,725, ಮಹಿಳೆಯರು 2,50,94,326, ಇತರರು 4,502 ಮಂದಿ ಇದ್ದಾರೆ.

    ಪ್ರಸ್ತುತ ಪ್ರಕಟವಾಗಿರುವ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರು (6,50,532) ಇದ್ದರೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾರರು (1,66,521) ಇದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮತಗಟ್ಟೆಯಲ್ಲಿ ಸೆಲ್ಫಿ ತೆಗೆದಿದ್ದಕ್ಕೆ ಮೇಯರ್ ವಿರುದ್ಧ ಕೇಸ್

    ಮತಗಟ್ಟೆಯಲ್ಲಿ ಸೆಲ್ಫಿ ತೆಗೆದಿದ್ದಕ್ಕೆ ಮೇಯರ್ ವಿರುದ್ಧ ಕೇಸ್

    ಲಕ್ನೋ: ಚುನಾವಣಾ ಆಯೋಗವು ಮತದಾನ ಕೇಂದ್ರಗಳ ಒಳಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಿದೆ. ಆದರೆ ಮತಗಟ್ಟೆಯಲ್ಲಿ ಸೆಲ್ಫಿ ತೆಗೆದಿದ್ದಕ್ಕೆ ಕಾನ್ಪುರ ಮೇಯರ್ ಪ್ರಮೀಳ ಪಾಂಡೆ ವಿರುದ್ಧ ಪ್ರಕರಣ ದಾಖಲಾಗಿದೆ.

    ಉತ್ತರ ಪ್ರದೇಶದಲ್ಲಿ ಫೆ.20 ರಿಂದ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಈ ವೇಳೆ ಮತಚಲಾಯಿಸಿದ ಬಳಿಕ ಪ್ರಮೀಳ ಪಾಂಡೆ ಸೆಲ್ಫಿ ಕ್ಲಿಕ್ಕಿಸಿ ವೀಡಿಯೋ ತೆಗೆದಿದ್ದಾರೆ. ಇದು ಚುನಾವಣೆ ನಿಯಮಗಳ ಉಲ್ಲಂಘನೆಯಾಗಿದ್ದು ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ:  ಪಂಜಾಬ್ ರಾಜ್ಯವನ್ನು ಇಷ್ಟ ಪಡುವವರು, ಮಾಫಿಯಾ ನಡುವಿನ ಚುನಾವಣೆ ಸ್ಪರ್ಧೆಯಾಗಿದೆ: ಸಿಧು

    ಕಾನ್ಪುರ ಮೇಯರ್ ಪ್ರಮೀಳಾ ಪಾಂಡೆ ಅವರು ಇಂದು ಮತಗಟ್ಟೆಯೊಳಗೆ ಚಿತ್ರಗಳು ಮತ್ತು ವೀಡಿಯೊಗಳನ್ನು ಕ್ಲಿಕ್ ಮಾಡಿ ವಿವಾದವನ್ನು ಸೃಷ್ಟಿಸಿದರು. ಮತದಾನದಲ್ಲಿ ವಿದ್ಯುನ್ಮಾನ ಮತಯಂತ್ರದ (ಇವಿಎಂ) ಫೋಟೋವನ್ನು ಎಂಎಸ್ ಪಾಂಡೆ ಹಂಚಿಕೊಂಡಿದ್ದಾರೆ. ಶ್ರೀಮತಿ ಪಾಂಡೆ ಅವರು ಕಾನ್ಪುರದ ಹಡ್ಸನ್ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಅವರು ಮತದಾನ ಮಾಡುತ್ತಿರುವಾಗ ವೀಡಿಯೊವನ್ನು ಚಿತ್ರೀಕರಿಸಿದರು ಮತ್ತು ಹಲವಾರು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡಿದ್ದಾರೆ.

    ವಿಷಯ ತಿಳಿದು ಜಿಲ್ಲಾಧಿಕಾರಿಗಳು ಆಕೆಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಮೇಯರ್ ಪಾಂಡೆ ಅವರು ಹಡ್ಸನ್ ಶಾಲೆಯ ಮತಗಟ್ಟೆಯೊಳಗೆ ತಮ್ಮ ಮೊಬೈಲ್ ಫೋನ್ ತೆಗೆದುಕೊಂಡು ಮತದಾನ ಮಾಡುವಾಗ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ನೇಹಾ ಶರ್ಮಾ ಹೇಳಿದ್ದಾರೆ.

    ಉತ್ತರ ಪ್ರದೇಶದ 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ರಾಜ್ಯದಲ್ಲಿ ಇದು ಮೂರನೇ ಹಂತದ ವಿಧಾನಸಭೆ ಚುನಾವಣೆಯಾಗಿದ್ದು, ಏಳು ಸುತ್ತುಗಳಲ್ಲಿ ಚುನಾವಣೆ ನಡೆಯಲಿದೆ. ಈ ಹಂತದಲ್ಲಿ 627 ಅಭ್ಯರ್ಥಿಗಳು ಕಣದಲ್ಲಿದ್ದು, 2.15 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ.

  • ಡಿ.27 ರಂದು ಸ್ಥಳೀಯ ಚುನಾವಣೆ ಘೋಷಿಸಿದ ರಾಜ್ಯ ಚುನಾವಣಾ ಆಯೋಗ

    ಡಿ.27 ರಂದು ಸ್ಥಳೀಯ ಚುನಾವಣೆ ಘೋಷಿಸಿದ ರಾಜ್ಯ ಚುನಾವಣಾ ಆಯೋಗ

    ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಡಿ.27 ರಂದು ಚುನಾವಣೆ ಘೋಷಣೆ ಮಾಡಲಾಗಿದೆ.

    ವಿವಿಧ ಜಿಲ್ಲೆಗಳ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ. ಈಗಾಗಲೇ ವೇಳಾ ಪಟ್ಟಿಯನ್ನು ಸಿದ್ದಪಡಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಇಲ್ಲ, ವದಂತಿ ಹಬ್ಬಿಸಿದ್ರೆ ಕಠಿಣ ಕ್ರಮ: ಡಾ. ಕೆ. ಸುಧಾಕರ್

    VOTE

    ಡಿ.27 ರಂದು ಮತದಾನ, ಡಿಸೆಂಬರ್ 30 ರಂದು ಮತ ಎಣಿಕೆ, ಡಿಸೆಂಬರ್ 8ರಿಂದ ಅಧಿಸೂಚನೆ ಪ್ರಕಟ, ಡಿಸೆಂಬರ್ 15 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ, ಡಿಸೆಂಬರ್ 18 ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನಾಂಕ ಎಂದು ಈಗಾಗಲೇ ಚುನಾವಣೆಯ ವೇಳಾ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ನೀಡಿದೆ.

  • ಪ್ರಜ್ವಲ್ ರೇವಣ್ಣನ ಅತಂಕವನ್ನು ದೂರ ಮಾಡಿದ ಡಿಸಿ ಪತ್ರ

    ಪ್ರಜ್ವಲ್ ರೇವಣ್ಣನ ಅತಂಕವನ್ನು ದೂರ ಮಾಡಿದ ಡಿಸಿ ಪತ್ರ

    ಹಾಸನ: ಚುನಾವಣಾ ಆಯೋಗಕ್ಕೆ ಹಾಸನ ಡಿಸಿ ಬರೆದ ಪತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಅಪೂರ್ಣ ಅಫಿಡವಿಟ್ ಸಲ್ಲಿಕೆ ಆರೋಪ ಪ್ರಕರಣದಲ್ಲಿ ಪಾರಾಗಿದ್ದಾರೆ.

    ಬಿಜೆಪಿ ಅಭ್ಯರ್ಥಿ ಎ. ಮಂಜು ಅವರು ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಕೆಯ ವೇಳೆ ಸುಳ್ಳು ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಆರೋಪಿಸಿ ಇದರ ಬಗ್ಗೆ ತನಿಖೆ ಆಗಬೇಕು ಎಂದು ಚುನಾವಣೆ ಅಯೋಗಕ್ಕೆ ದೂರು ನೀಡಿದ್ದರು.

    ಈ ದೂರಿನ ಅನ್ವಯ ಪ್ರಜಾ ಪ್ರಾತಿನಿಧ್ಯ ಕಾಯಿದೆ 1951 ಕಲಂ 125ಚಿ ಪ್ರಕಾರ ಕ್ರಮ ಕೈಗೊಳ್ಳುವಂತೆ ಚುನಾವಣೆ ಆಯೋಗ ಹಾಸನ ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ಪತ್ರ ಬರೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಗಕ್ಕೆ ಉತ್ತರ ನೀಡಿರುವ ಡಿಸಿ ಚುನಾವಣಾ ಆಯೋಗದ ನಿರ್ದೇಶನಗಳನ್ನೇ ಉಲ್ಲೇಖಿಸಿ ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳುವುದು ಅಸಾಧ್ಯ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅಫಿಡವಿಟ್‍ನಲ್ಲಿ ತಪ್ಪು ಮಾಹಿತಿ ಬಗ್ಗೆ ಚುನಾವಣಾ ಅಧಿಕಾರಿ ನೇರ ಕ್ರಮ ಅಸಾಧ್ಯ. ಈ ಬಗ್ಗೆ ದೂರುದಾರರೇ ಸೂಕ್ತ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಬಹುದು ಎಂದು ಮರು ಪತ್ರ ಬರೆದಿದ್ದಾರೆ.

    ಅರೋಪವೇನು?
    ನಾಮಪತ್ರ ಸಲ್ಲಿಕೆ ಮಾಡುವ ವೇಳೆ ಪ್ರಜ್ವಲ್ ರೇವಣ್ಣ ಅವರು ಸುಳ್ಳು ಅಫಿಡವಿಟ್ ಸಲ್ಲಿಕೆ ಮಾಡಿದ್ದಾರೆ. ಅವರು 7 ಕೋಟಿಗೂ ಹೆಚ್ಚು ಆದಾಯ ತೋರಿಸಿದ್ದಾರೆ. ಆದರೆ ಕೇವಲ ಮೂರು ಕೋಟಿಯಷ್ಟು ಆದಾಯದ ಮೂಲ ತೋರಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು 23 ಲಕ್ಷ ಪ್ರಜ್ವಲ್‍ಗೆ ಸಾಲ ನೀಡಿರೋದಾಗಿ ಹೇಳಿದ್ದಾರೆ. ಆದರೆ ಪ್ರಜ್ವಲ್ ಅಫಿಡವಿಟ್‍ನಲ್ಲಿ ಇದರ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಎ. ಮಂಜು ಆರೋಪಿಸಿದ್ದರು.

  • ಚುನಾವಣಾ ಭಾಗ್ಯಕ್ಕೆ ಚಿಕ್ಕಬಳ್ಳಾಪುರದ ಬಾಲಕ ಬಲಿ?

    ಚುನಾವಣಾ ಭಾಗ್ಯಕ್ಕೆ ಚಿಕ್ಕಬಳ್ಳಾಪುರದ ಬಾಲಕ ಬಲಿ?

    ಚಿಕ್ಕಬಳ್ಳಾಪುರ: ಚುನಾವಣಾ ಪ್ರವಾಸ ಭಾಗ್ಯಕ್ಕೆ ಬಾಲಕ ಬಲಿಯಾದನಾ ಅನ್ನೋ ಅನುಮಾನದ ಪ್ರಕರಣವೊಂದು ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ.

    ಚಿಕ್ಕಬಳ್ಳಾಪುರ ತಾಲೂಕಿನ ಪೂಜನಹಳ್ಳಿ ಗ್ರಾಮದಿಂದ ತಮಿಳುನಾಡಿನ ಮೇಲ್ ಮರವತ್ತೂರು ಓಂ ಶಕ್ತಿ ದೇವಸ್ಥಾನಕ್ಕೆ ಬಸ್ ಮೂಲಕ 50ಕ್ಕೂ ಹೆಚ್ಚು ಮಂದಿ ಪ್ರವಾಸಕ್ಕೆ ತೆರಳಿದ್ದರು. ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ಸಾಗುವಾಗ ಮಹಾಬಲೀಪುರಂ ಬೀಚ್ ನಲ್ಲಿ ಆಟ ಆಡುವ ವೇಳೆ ಬಾಲಕ ಅಭಿಷೇಕ್ (14) ಅಲೆಗಳ ಅಬ್ಬರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ.

    ಈ ಪ್ರವಾಸವನ್ನ ಗ್ರಾಮದ ಚಂದ್ರಕಲಾ ಎಂಬವರು ಆಯೋಜನೆ ಮಾಡಿದ್ದರು. ಹೀಗಾಗಿ ಚಂದ್ರಕಲಾ ಯಾವುದೋ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದು, ಚುನಾವಣಾ ಸಮಯದಲ್ಲಿ ಮತದಾರರ ಓಲೈಕೆಗೆ ಪ್ರವಾಸ ಭಾಗ್ಯ ಆಯೋಜಿಸಿರಬಹದು ಅಂತ ಶಂಕಿಸಲಾಗಿದೆ.

    ಘಟನೆ ನಡೆದ ನಂತರ ಬಾಲಕನ ಮೃತದೇಹ ಹುಡುಕಾಟದ ಕಾರ್ಯ ನಡೆಸುವುದರ ಬದಲು, ಪ್ರವಾಸಕ್ಕೆ ಕರೆದುಕೊಂಡು ಹೋದವರನ್ನ ವಾಪಸ್ ಕರೆದುಕೊಂಡು ಬಂದಿದ್ದಾರೆ. ಇದೆಲ್ಲದರ ನಡುವೆ ಪ್ರವಾಸ ಆಯೋಜನೆ ಮಾಡಿದ್ದ ಚಂದ್ರಕಲಾ ಊರಿಗೆ ಬಾರದೇ ಅರ್ಧ ದಾರಿಯಲ್ಲಿ ಬಸ್ ನಿಂದ ಇಳಿದು ನಾಪತ್ತೆಯಾಗಿದ್ದಾರೆ. ಇದ್ರಿಂದ ಚಂದ್ರಕಲಾ ವಿರುದ್ಧ ಮೃತನ ಪೋಷಕರು ಹಾಗೂ ಗ್ರಾಮಸ್ಥರು ಕೆಂಡಾಮಂಡಲರಾಗಿದ್ದಾರೆ. ಮತ್ತೊಂದೆಡೆ 20 ವರ್ಷಗಳ ನಂತರ ಹುಟ್ಟಿದ್ದ, ಇಡೀ ವಂಶಕ್ಕೆ ಗಂಡು ದಿಕ್ಕಾಗಿದ್ದ ಒಬ್ಬ ಮಗನನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

    ಘಟನೆ ಸಂಬಂಧ ಮಹಾಬಲೀಪುರಂ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದ್ರೆ ಇತ್ತ ಸ್ಥಳೀಯ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಚಂದ್ರಕಲಾ ವಿರುದ್ಧ ದೂರು ದಾಖಲಿಸಲು ಹೋದ್ರೆ, ಕೆಲ ರಾಜಕೀಯ ಮುಖಂಡರು ದೂರು ದಾಖಲಿಸದಂತೆ ಒತ್ತಡ ಹಾಕಿರುವ ವಿಚಾರ ತಿಳಿದು ಬಂದಿದೆ. ಒಟ್ಟಿನಲ್ಲಿ ಇದೀಗ ಪ್ರವಾಸ ಭಾಗ್ಯದಿಂದ ಬಾಲಕ ಸಾವನ್ನಪ್ಪಿರುವ ಪ್ರಕರಣ ಸಹಜವಾಗಿ ರಾಜಕೀಯ ತಿರುವು ಪಡೆದುಕೊಂಡಿದೆ.