Tag: ಚುನಾವಣಾ ನೀತಿ ಸಂಹಿತೆ

  • ನಾಗಮಂಡಲಕ್ಕೂ ನೀತಿಸಂಹಿತೆ ಎಫೆಕ್ಟ್- ಸಾಸ್ತಾನದಲ್ಲಿ ಅಧಿಕಾರಿಗಳ ರಾದ್ಧಾಂತ

    ನಾಗಮಂಡಲಕ್ಕೂ ನೀತಿಸಂಹಿತೆ ಎಫೆಕ್ಟ್- ಸಾಸ್ತಾನದಲ್ಲಿ ಅಧಿಕಾರಿಗಳ ರಾದ್ಧಾಂತ

    ಉಡುಪಿ: ಕರಾವಳಿಯ ಧಾರ್ಮಿಕ ಆಚರಣೆಗಳಿಗೆ ಚುನಾವಣಾ ನೀತಿ ಸಂಹಿತೆ ಅಡ್ಡ ಬರುತ್ತಿದೆ. ಅತ್ಯಂತ ಶೃದ್ಧೆ ಭಕ್ತಿಯಿಂದ ಆಚರಿಸುವ ನಾಗಮಂಡಲ ಸೇವೆಗೂ ಚುನಾವಣೆಯ ಬಿಸಿತಟ್ಟಿದೆ. ಉಡುಪಿ ಜಿಲ್ಲೆಯ ಸಾಸ್ತಾನದಲ್ಲಿ ನಾಗಮಂಡಲ ನಡೆಯುತ್ತಿದ್ದಲ್ಲಿಗೆ ಬಂದ ಚುನಾವಣಾಧಿಕಾರಿಗಳು ರಾದ್ಧಾಂತ ಮಾಡಿದ್ದಾರೆ.

    ಸಾಸ್ತಾನದ ಸ್ಥಳೀಯ ಕುಟುಂಬಸ್ಥರು ಅದ್ಧೂರಿಯಾಗಿ ನಾಗ ಮಂಡಲ ಸೇವೆ ಆಯೋಜನೆ ಮಾಡಿದ್ದರು. ಹತ್ತು ಸಾವಿರಕ್ಕೂ ಅಧಿಕ ಭಕ್ತಾಧಿಗಳು ಸೇರಿದ್ದರು. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಧಾರ್ಮಿಕ ಕಾರ್ಯಕ್ರಮ ಆಯೋಜನೆಯಾಗಿತ್ತು. ಚುನಾವಣೆ ಘೋಷಣೆಯಾಗುವ ಮುನ್ನವೇ ಈ ನಾಗಮಂಡಲ ನಿಗದಿಯಾಗಿತ್ತು. ಯಾವುದೇ ಪೂರ್ವ ಸೂಚನೆ ನೀಡದೆ ಚುನಾವಣಾ ಅಧಿಕಾರಿಗಳ ನಾಗಮಂಡಲ ನಡೆಯುತ್ತಿದ್ದ ಪರಿಸರಕ್ಕೆ ಬಂದು ಪರವಾನಿಗೆ ಕೇಳಿದಾಗ ಗೊಂದಲದ ವಾತಾವರಣ ನಿರ್ಮಾಣವಾಯ್ತು.

    ಚುನಾವಣಾ ನೀತಿ ಸಂಹಿತೆಯ ಹಿನ್ನೆಯಲ್ಲಿ ಎಲ್ಲಾ ಕಾರ್ಯಕ್ರಮಗಳುಗೂ ಹೊಸದಾಗಿ ಪರವಾನಿಗೆ ಪಡೆಯುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಈ ಬಗ್ಗೆ ಮಾಹಿತಿ ಇರದ ನಾಗಮಂಡಲ ಆಯೋಜಕರು ಚುನಾವಣಾಧಿಕಾರಿಗಳ ಅನಿರೀಕ್ಷಿತ ಭೇಟಿಯಿಂದ ಕೆಲಕಾಲ ಕಕ್ಕಾಬಿಕ್ಕಿಯಾದರು. ನಾಗಮಂಡಲದಲ್ಲಿ ಇದ್ದ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯರಿಗೂ ಚುನಾವಣಾ ಅಧಿಕಾರಿಗಳಿಗೂ ಮಾತಿನ ಚಕಮಕಿ ನಡೆಯಿತು. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆಕ್ಷೇಪಿಸಿದ ಜನರು ಯಾವುದೇ ಕಾರಣಕ್ಕೂ ಚಟುವಟಿಕೆ ನಿಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಕೊನೆಗೆ ಆಯೋಜಕರು ಅಲ್ಲಿ ಅಳವಡಿಸಿದ್ದ ಬ್ಯಾನರ್, ಬಂಟಿಗ್ಸ್ ಗಳನ್ನು ತೆರವು ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ನಂತರ ನಾಗಮಂಡಲ ಸೇವೆ ಮುಂದುವರಿಯಿತು.

    ಕರಾವಳಿಯಲ್ಲಿ ಧಾರ್ಮಿಕ ಆಚರಣೆಗಳು ಈ ಸಂದರ್ಭ ಹೆಚ್ಚು ಹೆಚ್ಚು ನಡೆಯುತ್ತದೆ. ಕರಾವಳಿಯ ನಂಬಿಕೆ, ಆಚರಣೆಗಳ ಮೇಲೆ ದಾಳಿ ಮಾಡಲು ಬಂದ್ರೆ ಇಲ್ಲಿನ ಜನ ಸುಮ್ಮನಿರಲ್ಲ. ಚುನಾವಣೆಗಿಂತ ನಮಗೆ ನಮ್ಮ ಧಾರ್ಮಿಕ ನಂಬಿಕೆ ಹೆಚ್ಚು. ಚುನಾವಣೆ ಘೋಷಣೆಯಾಗುವ ಮೊದಲೇ ನಾಗಮಂಡಲ, ಯಕ್ಷಗಾನ, ಭೂತಾರಾಧನೆ ನಿಗದಿಯಾಗಿರುತ್ತದೆ. ಈ ಬಗ್ಗೆ ಜಿಲ್ಲಾಡಳಿತ ವಿನಾಯಿತಿ ಮಾಡದಿದ್ದರೆ ಜನ ಆಕ್ರೋಶಗೊಳ್ಳುತ್ತಾರೆ ಎಂದು ಜಾನಪದ ವಿದ್ವಾಂಸ ಅಲೆವೂರು ರಾಜೇಶ್ ಹೇಳಿದ್ದಾರೆ. ಚುನಾವಣಾ ಅಧಿಕಾರಿಗಳಿಗೂ ಈ ಬೆಳವಣಿಗೆ ತಲೆನೋವಾಗಿದೆ.

  • ಚುನಾವಣಾ ನೀತಿ ಸಂಹಿತೆಯಿಂದ ಪಾರಾಗಲು ಡಿಕೆಶಿ ಆಪ್ತ ಮಾಸ್ಟರ್ ಪ್ಲಾನ್

    ಚುನಾವಣಾ ನೀತಿ ಸಂಹಿತೆಯಿಂದ ಪಾರಾಗಲು ಡಿಕೆಶಿ ಆಪ್ತ ಮಾಸ್ಟರ್ ಪ್ಲಾನ್

    ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಆದ್ರೂ ಕೆಲ ರಾಜಕೀಯ ಮುಖಂಡರು ಮತ್ತು ಆಪ್ತರು ಸರ್ಕಾರ ನೀಡಿರುವ ಸೌಲಭ್ಯಗಳನ್ನು ಮಾತ್ರ ಹಿಂದಕ್ಕೆ ನೀಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ, ಸಚಿವರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಸರ್ಕಾರಿ ವಾಹನಗಳನ್ನು ಬಿಟ್ಟು, ಖಾಸಗಿ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದಾರೆ.

    ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಕೆ. ಶೇಷಾದ್ರಿ ಈಗಲೂ ಸರ್ಕಾರಿ ವಾಹನವನ್ನೇ ಬಳಕೆ ಮಾಡ್ತಿದ್ದಾರೆ. ಆದ್ರೆ ಚುನಾವಣಾ ಅಧಿಕಾರಿಗಳಿಗೆ ತಿಳಿಯದಂತೆ ಸರ್ಕಾರಿ ವಾಹನವನ್ನು ಮಾರ್ಪಾಡು ಮಾಡಿಕೊಂಡಿದ್ದಾರೆ.

    ಏನದು ಮಾರ್ಪಾಡು?: ಸರ್ಕಾರಿ ವಾಹನ ಅಂತ ಇರೋ ಸ್ಟಿಕ್ಕರ್ ಗಳನ್ನ ತೆಗೆದು, ನಂಬರ್ ಪ್ಲೇಟ್ ನ್ನೂ ಕಿತ್ತು ಹಾಕಿ ರಾಜಾರೋಷವಾಗಿ ಓಡಾಡ್ತಿದ್ದಾರೆ. ಸ್ಟಿಕ್ಕರ್ ಗಳನ್ನು ಕಿತ್ತು ಹಾಕಿ ಸರ್ಕಾರಿ ವಾಹನದಲ್ಲಿ ಶೇಷಾದ್ರಿ ಅವರು ಪ್ರಯಾಣಿಸುವ ದೃಶ್ಯಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

  • ಸಿದ್ದಗಂಗಾ ಶ್ರೀಗಳ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದ ಫ್ಲೆಕ್ಸ್ ತೆರವು

    ಸಿದ್ದಗಂಗಾ ಶ್ರೀಗಳ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದ ಫ್ಲೆಕ್ಸ್ ತೆರವು

    ತುಮಕೂರು: ಚುನಾವಣಾ ನೀತಿ ಸಂಹಿತೆ ಜಾರಿ ಆದ ಹಿನ್ನೆಲೆಯಲ್ಲಿ ಸಿದ್ದಗಂಗಾ ಶ್ರೀಗಳ ಹುಟ್ಟುಹಬ್ಬಕ್ಕೆ ರಾಜಕೀಯ ನಾಯಕರು ಶುಭಾಶಯ ಕೋರಿದ್ದ ಫ್ಲೆಕ್ಸ್‍ಗಳನ್ನು ತೆರವುಗೊಳಿಸಲಾಗುತ್ತಿದೆ.

    ಸಿದ್ದಗಂಗಾ ಶ್ರೀಗಳ ಹುಟ್ಟುಹಬ್ಬಕ್ಕೆ ರಾಜಕೀಯ ಮುಖಂಡರು ಶುಭಾಶಯ ಕೋರಿ ಫ್ಲೆಕ್ಸ್ ಹಾಕಿದ್ದರು. ಆದರೆ ಈಗ ತುಮಕೂರು ಪಾಲಿಕೆಯಿಂದ ಫ್ಲೆಕ್ಸ್ ಗಳನ್ನು ತೆರವು ಮಾಡಿಸಲಾಗಿದೆ. ಏಪ್ರಿಲ್ 1 ರಂದು ಸಿದ್ದಗಂಗಾ ಶ್ರೀಗಳ 111ನೇ ಜನ್ಮದಿನೋತ್ಸವ ಆಚರಿಸಲಾಗುತ್ತಿದೆ.

    ಮೂರು ಪಕ್ಷದ ರಾಜಕೀಯ ಮುಖಂಡರು ಸಿದ್ದಗಂಗಾ ಶ್ರೀಗಳ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಫ್ಲೆಕ್ಸ್ ಗಳನ್ನು ಹಾಕಿಸಿದ್ದು, ನಗರದ ಬಿ.ಎಚ್. ರಸ್ತೆ ಸೇರಿದಂತೆ ನಗರದ ಹಲವೆಡೆ ಫ್ಲೆಕ್ಸ್ ಹಾಕಲಾಗಿತ್ತು. ಆದರೆ ಈಗ ಚುನಾವಣಾ ನೀತಿ ಸಂಹಿತೆ ಜಾರಿ ಆದ ಹಿನ್ನೆಲೆಯಲ್ಲಿ ತೆರವುಗೊಳಿಸಲಾಗುತ್ತಿದೆ.

  • ವಿಡಿಯೋ: ಚುನಾವಣಾ ನೀತಿ ಸಂಹಿತೆ ಎಚ್ಚರಿಸಿದ ಡಿಸಿಗೆ ತಲೆ ಮೊಟಕಿ ಹೆದರಬೇಡ ಅಂದ ಸಿಎಂ

    ವಿಡಿಯೋ: ಚುನಾವಣಾ ನೀತಿ ಸಂಹಿತೆ ಎಚ್ಚರಿಸಿದ ಡಿಸಿಗೆ ತಲೆ ಮೊಟಕಿ ಹೆದರಬೇಡ ಅಂದ ಸಿಎಂ

    ಚಿಕ್ಕಬಳ್ಳಾಪುರ: ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ ಅಂತಾ ಎಚ್ಚರಿಸಿದ ಜಿಲ್ಲಾಧಿಕಾರಿ ಡಿಸಿ ದೀಪ್ತಿ ಅದಿತ್ಯಾ ಕಾನಡೆ ತಲೆಗೆ ಮೊಟಕಿ ಹೆದರಬೇಡ ಅಂತಾ ಸಿಎಂ ಹೇಳಿರುವ ಘಟನೆಯೊಂದು ಇಂದು ನಡೆದಿದೆ.

    ಇಂದು ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರದ ನಂದಿ ಗ್ರಾಮದ ನೂತ ಮೆಗಾಡೈರಿ ಉದ್ಘಾಟನೆಗಾಗಿ ಆಗಮಿಸಿದ್ರು. ಆದ್ರೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಕೇವಲ ಭೇಟಿ ನೀಡಿ ವೀಕ್ಷಣೆ ಮಾಡಿದ್ರು. ಈ ವೇಳೆ ಜಿಲ್ಲಾಧಿಕಾರಿಗಳು ಸಿಎಂ ಗೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ ಅಂತಾ ಎಚ್ಚರಿಸಿದ್ರು. ಏನು ಆಗಲ್ಲ, ಊಟ ಮಾಡ್ಕೊಂಡು ಹೋಗ್ತೀನಿ ಅಂತಾ ಜಿಲ್ಲಾಧಿಕಾರಿ ತಲೆಗೆ ಮೊಟಕಿದ್ರು. ಇದನ್ನೂ ಓದಿ: ಹೆಂಗಸರು ಸೆಲ್ಫಿ ಸೆಲ್ಫಿ ಎಂದು ನನ್ನನ್ನು ಹಿಡಿದುಕೊಳ್ಳುತ್ತಾರೆ: ಸಿಎಂ

    ರಾಜ್ಯ ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಆದ ಹಿನ್ನೆಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಉದ್ಘಾಟನಾ ಕಾರ್ಯಕ್ರಮ ಹಾಗೂ ನಿಗದಿಯಾಗಿದ್ದ ಎಲ್ಲ ಕಾರ್ಯಕ್ರಮ ರದ್ದಾಗಿದೆ. ಕಾರ್ಯಕ್ರಮ ರದ್ದಾದ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ ಉದ್ಘಾಟನೆ ಮಾಡದೇ ಮೆಗಾಡೈರಿ ವೀಕ್ಷಿಸಿ ನಂತರ ಸರ್ಕಾರಿ ವಾಹನ ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣ ಬೆಳೆಸಿದರು. ಇದನ್ನೂ ಓದಿ: ವಿಡಿಯೋ: ಮಂಗ್ಳೂರು ಮೇಯರ್ ಗೆ ಪಂಚ್ ಕೊಟ್ರು ಸಿಎಂ!