Tag: ಚುನಾವಣೆ

  • 21 ವರ್ಷದ ಬಳಿಕ ದೇಶಾದ್ಯಂತ ಎಸ್‌ಐಆರ್‌: ಚುನಾವಣಾ ಆಯೋಗ

    21 ವರ್ಷದ ಬಳಿಕ ದೇಶಾದ್ಯಂತ ಎಸ್‌ಐಆರ್‌: ಚುನಾವಣಾ ಆಯೋಗ

    – ಎರಡನೇ ಹಂತದಲ್ಲಿ 12 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿ
    – ಕರ್ನಾಟಕದಲ್ಲಿ ಈ ಬಾರಿ ಎಸ್‌ಐಆರ್‌ ಇಲ್ಲ

    ನವದೆಹಲಿ: ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

    ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್, ಬಿಹಾರದಲ್ಲಿ ನಡೆಸಿದ SIR ಯಶಸ್ವಿಯಾಗಿದೆ. ಈಗ ಎರಡನೇ ಹಂತದಲ್ಲಿ ಮುಂದೆ 1-2 ವರ್ಷದ ಒಳಗಡೆ  ಚುನಾವಣೆ ನಡೆಯಲಿರುವ  12 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ SIR ಶುರುವಾಗಲಿದೆ ಎಂದು ತಿಳಿಸಿದರು.

    ಆಯೋಗದ ಕಾನೂನಿನ ಪ್ರಕಾರ ಮತದಾರರ ಪಟ್ಟಿ ಪರಿಷ್ಕರಣೆ ಅಗತ್ಯವಿದೆ. ಪ್ರತಿಯೊಂದು ರಾಜಕೀಯ ಪಕ್ಷವೂ ಪರಿಷ್ಕರಣೆ ನಡೆಸದ ಬಗ್ಗೆ ದೂರು ನೀಡಿವೆ. ಇಲ್ಲಿಯವರಗೆ ಎಂಟು ಬಾರಿ SIR ನಡೆಸಿದೆ. 2002-2004 ರಲ್ಲಿ ಕೊನೆಯದಾಗಿ SIR ನಡೆಸಲಾಗಿತ್ತು. ಎರಡು ದಶಕದ ಬಳಿಕ ಈಗ SIR ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಕಳೆದ 20 ವರ್ಷದ ಅವಧಿಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಸಾಕಷ್ಟು ಮತದಾರರ ವಿಳಾಸ ಬದಲಾವಣೆಯಾಗಿರುತ್ತದೆ, ವಿದೇಶಿಗರು ಪಟ್ಟಿಯಲ್ಲಿ ಸೇರಿರುತ್ತಾರೆ. ಕೆಲವರು ಮರಣದ ಬಳಿಕವೂ ಪಟ್ಟಿಯಲ್ಲಿ ಹೆಸರು ಉಳಿದುಕೊಂಡಿರುತ್ತದೆ. ಇದನ್ನು ತೆರವು ಮಾಡಲು SIR ಅಗತ್ಯವಿದೆ ಎಂದು ಆಯೋಗದ ನಿರ್ಧಾರವನ್ನು ಸಮರ್ಥಿಸಿಕೊಂಡರು.

    ಎಲ್ಲೆಲ್ಲಿ ಎಸ್‌ಐಆರ್‌?
    ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗೋವಾ, ಪುದುಚೇರಿ, ಛತ್ತೀಸ್‌ಗಢ, ಗುಜರಾತ್, ಕೇರಳ, ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಲಕ್ಷದ್ವೀಪ.

  • ಒಬಿಸಿ ಮೀಸಲಾತಿ ಏರಿಸಿದ್ದ ತೆಲಂಗಾಣಕ್ಕೆ ಭಾರೀ ಹಿನ್ನಡೆ – ಸುಪ್ರೀಂನಲ್ಲಿ ಅರ್ಜಿ ವಜಾ

    ಒಬಿಸಿ ಮೀಸಲಾತಿ ಏರಿಸಿದ್ದ ತೆಲಂಗಾಣಕ್ಕೆ ಭಾರೀ ಹಿನ್ನಡೆ – ಸುಪ್ರೀಂನಲ್ಲಿ ಅರ್ಜಿ ವಜಾ

    ನವದೆಹಲಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳು ಅಥವಾ ಒಬಿಸಿ ಸಮುದಾಯಗಳಿಗೆ (OBC Community) ಮೀಸಲಾತಿ ಹೆಚ್ಚಿಸಿದ್ದ ತೆಲಂಗಾಣ ಸರ್ಕಾರಕ್ಕೆ (Telangana Government) ಭಾರೀ ಹಿನ್ನಡೆಯಾಗಿದೆ.

    ಒಬಿಸಿ ಮೀಸಲಾತಿ (Resevartion) ವಿಸ್ತರಿಸಿ ತಾನು ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಪ್ರಶ್ನಿಸಿ ತೆಲಂಗಾಣ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.

    ನ್ಯಾ. ವಿಕ್ರಮ್ ನಾಥ್ ಮತ್ತು ನ್ಯಾ.ಸಂದೀಪ್ ಮೆಹ್ತಾ ಅವರಿದ್ದ ಪೀಠವು ಇಂದು ಅರ್ಜಿ ವಿಚಾರಣೆ ನಡೆಸಿ, ಹೈಕೋರ್ಟ್‌ ಆದೇಶದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಒಬಿಸಿ ಮೀಸಲಾತಿಯಲ್ಲಿ ಯಾವುದೇ ಪ್ರಸ್ತಾವಿಸಿದಂತೆ ಹೆಚ್ಚಳ ಮಾಡದೇ ಸ್ಥಳೀಯ ಚುನಾವಣೆಗಳನ್ನು ನಡೆಸಬಹುದು ಸೂಚಿಸಿದೆ. ಇದನ್ನೂ ಓದಿ:  ರಸ್ತೆ ಗುಂಡಿ, ತೆರೆದ ಮ್ಯಾನ್‌ಹೋಲ್‌ಗಳಿಗೆ ಬಿದ್ದು ಮೃತಪಡುವವರ ಕುಟುಂಬಕ್ಕೆ 6 ಲಕ್ಷ ಪರಿಹಾರ ನೀಡಿ: ಬಾಂಬೆ ಹೈಕೋರ್ಟ್‌ ಆದೇಶ

     

    ತೆಲಂಗಾಣ ಸರ್ಕಾರ ಇತರೇ ಹಿಂದುಳಿದ ವರ್ಗಕ್ಕೆ ಶೇ.42ರಷ್ಟು ಮೀಸಲಾತಿ ನೀಡಿದ್ದರಿಂದ ಒಟ್ಟು ಮೀಸಲಾತಿ ಪ್ರಮಾಣ ಶೇ.67ಕ್ಕೆ ಏರಿಕೆಯಾಗಿತ್ತು. 1992 ರ ಇಂದಿರಾ ಸಾಹ್ನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೀಸಲಾತಿ ಪ್ರಮಾಣ ಶೇ.50 ಮಿತಿಯನ್ನು ಏರುವಂತಿಲ್ಲ ತೀರ್ಪು ನೀಡಿತ್ತು. ಸುಪ್ರೀಂ ತೀರ್ಪು ಉಲ್ಲಂಘನೆಯಾಗಿದ್ದರಿಂದ ಅ.10 ರಂದು ತೆಲಂಗಾಣ ಹೈಕೋರ್ಟ್‌ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು.

    ತನ್ನ ಆದೇಶದಲ್ಲಿ ಒಬಿಸಿ ಕೋಟಾದಲ್ಲಿ ಹೆಚ್ಚು ಮಾಡಲಾದ ಶೇ.17ರಷ್ಟು ಸೀಟುಗಳನ್ನು ಸಾಮಾನ್ಯ ಎಂದು ಪರಿಗಣಿಸಿ ಚುನಾವಣೆ ನಡೆಸಲು ಹೈಕೋರ್ಟ್‌ ಸೂಚಿಸಿತ್ತು. ಜತೆಗೆ ವಿವರವಾದ ಅಫಿಡವಿಟ್‌ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ 4 ವಾರ, ಅರ್ಜಿದಾರರಿಗೆ 2 ವಾರಗಳ ಗಡುವು ವಿಧಿಸಿತ್ತು.

  • ಪಕ್ಷ ನಿಷ್ಠನಾಗಿ ಅಂದು ಜೈಲುವಾಸ ಆಯ್ಕೆ ಮಾಡಿಕೊಂಡೆ – ಬಿಜೆಪಿ ಆಫರ್‌ ಬಗ್ಗೆ ಡಿಕೆಶಿ ಬಾಂಬ್‌

    ಪಕ್ಷ ನಿಷ್ಠನಾಗಿ ಅಂದು ಜೈಲುವಾಸ ಆಯ್ಕೆ ಮಾಡಿಕೊಂಡೆ – ಬಿಜೆಪಿ ಆಫರ್‌ ಬಗ್ಗೆ ಡಿಕೆಶಿ ಬಾಂಬ್‌

    – ಶಾಲಾ ಚುನಾವಣೆಯಲ್ಲಿಯೇ ಅನೇಕ ಒತ್ತಡಗಳಿಂದ ನನಗೆ ಬೇರೆ ಸ್ಥಾನ ನೀಡಲಾಗಿತ್ತು
    – 400 ಮತಗಳಿಂದ ಗೆಲ್ತೀಯಾ ಅಂದ್ರು, ಬೆಳಗ್ಗೆ ಯಾವ್ದೋ ಹುಡ್ಗಿ ಹೆಸರು ಘೋಷಣೆ ಮಾಡಿದ್ರು

    ಬೆಂಗಳೂರು: ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವ ವೇಳೆ ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ಬಿಜೆಪಿ ಆಫರ್‌ ಬಗ್ಗೆ ಹೊಸ ಬಾಂಬ್‌ ಸಿಡಿಸಿದರು.

    ನಗರದ ಎಫ್ ಕೆಸಿಸಿಐ ಸಭಾಂಗಣದಲ್ಲಿ ನಡೆದ ಕೆ.ಎಂ.ರಘು ಡೈರೆಕ್ಟರ್ ಅವರು ಬರೆದಿರುವ ಡಿ.ಕೆ. ಶಿವಕುಮಾರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಡಿಸಿಎಂ ಮಾತನಾಡಿದರು. ಇದನ್ನೂ ಓದಿ: ಐನಾಕ್ಸ್‌ವಿಂಡ್‌ ಕಂಪನಿಯಿಂದ ಕುಷ್ಟಗಿಯಲ್ಲಿ 400 ಕೋಟಿ ಹೂಡಿಕೆ: ಎಂಬಿ ಪಾಟೀಲ್‌

    ಸಮ್ಮಿಶ್ರ ಸರ್ಕಾರದಲ್ಲಿ 10 ಜನ‌ ಶಾಸಕರು ರಾಜಿನಾಮೆ ನೀಡಲು ಹೊರಟಿದ್ದರು. ಕನಕಪುರದಲ್ಲಿದ್ದ ನಾನು ಬೆಂಗಳೂರಿಗೆ ಬಂದು ಐದಾರು ಜನರನ್ನು ವಾಪಸ್ ಕ್ವಾಟ್ರಸ್‌ಗೆ ಕರೆದುಕೊಂಡು ಬಂದೆ.‌ ಆಗ ನನಗೆ ಒಬ್ಬ ಆದಾಯ ತೆರಿಗೆ (Income Tax) ಆಡಿಟರ್ ಫೋನ್ ನಿಂದ ಕರೆ ಬಂದಿತ್ತು. ಬಿಜೆಪಿಯ (BJP) ಯಾರಿಂದ ಬಂತು ಅಂತ ಹೆಸರು ಹೇಳೋದು ಬೇಡ ಈಗ. ನನ್ನ ಜೊತೆ ಡಿಜಿಯೂ ಇದ್ದ‌ರು, ಡಿಕೆ ಸುರೇಶ್‌ ಕೂಡ ಇದ್ದರು. ಅವರು ದೂರವಾಣಿ ಕರೆಯಲ್ಲಿ ಮಾತನಾಡಿದರು. ಕರೆ ಮಾಡಿದವರು ʻನೀವು ಡಿಸಿಎಂ ಆಗುವಿರಾ ಅಥವಾ ಜೈಲಿಗೆ ಹೋಗುವಿರಾ?ʼ ಎಂದು ಕೇಳಿದರು. ಎಲ್ಲಾ ಶಾಸಕರನ್ನ ವಾಪಸ್‌ ಕರೆದುಕೊಂಡು ಬನ್ನಿ ಎಂದು ತಿಳಿಸಿದರು.

    ಆಗ ನಾನು ನನಗೆ ಇಷ್ಟೆಲ್ಲಾ ಸ್ಥಾನ ನೀಡಿರುವ ಪಕ್ಷವನ್ನ ಬಿಡುವುದಿಲ್ಲ. ಪಕ್ಷನಿಷ್ಠೆಗಾಗಿ ಬೇಕಾದರೆ ಜೈಲಿಗೆ ಹೋಗುತ್ತೇನೆ ಎಂದೆ. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ರಾಜೀವ್ ಗಾಂಧಿ ಅವರು ನನಗೆ ಟಿಕೆಟ್ ನೀಡಿ, ಮಂತ್ರಿ ಮಾಡಿದ್ದರು. ಬಂಗಾರಪ್ಪ ಅವರು ನನಗೆ ಸಹಕಾರ ನೀಡಿದ್ದರು. ಈ ಪಕ್ಷದಿಂದ ಈ ಮಟ್ಟಕ್ಕೆ ಬೆಳೆದಿದ್ದೇನೆ ಎಂದು ಜೈಲು ಆಯ್ಕೆ ಮಾಡಿಕೊಂಡೆ. ಅಂದು ನಾನು ಬೇರೆ ಆಯ್ಕೆ ಮಾಡಿದ್ದರೆ ಏನೇನು ಆಗುತ್ತಾ ಇತ್ತೋ ಗೊತ್ತಿಲ್ಲ ಎಂದರು. ಇದನ್ನೂ ಓದಿ: ಜಾತಿ ಸಮೀಕ್ಷೆಯಲ್ಲಿ ಭಾಗವಹಿಸಲ್ಲ ಎಂದ ಸುಧಾ, ನಾರಾಯಣ ಮೂರ್ತಿ ದಂಪತಿ

    ಯಾವುದೋ ಹುಡುಗಿಯ ಹೆಸರು ಘೋಷಣೆ ಮಾಡಲಾಯಿತು
    ನಾನು ವಿದ್ಯಾರ್ಥಿ ದೆಸೆಯಿಂದಲೇ ರಾಜಕೀಯ ನಾಯಕನಾಗಬೇಕು ಎನ್ನುವ ಅಭಿಲಾಷೆ ಹೊಂದಿದ್ದವನು. ಮೌಂಟ್ ಕಾರ್ಮೆಲ್ ಶಾಲಾ ಚುನಾವಣೆಯಲ್ಲಿ ಗೆದ್ದಿದ್ದ ನನಗೆ ಅಂದೇ ಅನೇಕ ಒತ್ತಡಗಳಿಂದ ಪ್ರತ್ಯೇಕ ಸ್ಥಾನ ನೀಡಲಾಯಿತು. ಚುನಾವಣೆಯ ಕೌಂಟಿಂಗ್ ಪ್ರತಿನಿಧಿಯಾಗಿದ್ದ ನನ್ನ ಸಹಪಾಠಿ ಮಾಧವ ನಾಯಕ್ ನೀನು 400 ಮತಗಳಿಂದ ಗೆಲ್ಲುತ್ತೀಯಾ ಎಂದಿದ್ದನು. ಆದರೆ ಬೆಳಗ್ಗೆ ಫಲಿತಾಂಶ ಘೋಷಣೆ ಮಾಡುವಾಗ ಬೇರೆ ಯಾವುದೋ ಹುಡುಗಿಯ ಹೆಸರನ್ನು ಘೋಷಣೆ ಮಾಡಲಾಯಿತು. ನನಗೆ ಪ್ರತ್ಯೇಕವಾಗಿ ಕ್ರೀಡಾ ಕಾರ್ಯದರ್ಶಿ ಹುದ್ದೆ ನೀಡಲಾಯಿತು ಎಂದರು.

    ರಾಜಕಾರಣದಲ್ಲಿಯೂ ಸುಮಾರು ಶೇ.80‌ ರಷ್ಟು ಜನ ದುಡಿಯುತ್ತಲೇ ಇದ್ದಾರೆ. ಶೇ.20 ರಷ್ಟು ಜನರಿಗೆ ಮಾತ್ರ ಸಣ್ಣಪುಟ್ಟ ಸ್ಥಾನಮಾನ ಸಿಕ್ಕಿದೆ. ನನಗೂ 63 ವರ್ಷವಾಯಿತು.‌ ನಾವುಗಳೇ ಇನ್ನೆಷ್ಟು ದಿನ ರಾಜಕಾರಣ ಮಾಡಲು ಸಾಧ್ಯ.? ಹೊಸಬರು ಬರಬೇಕು. ಐದು ಪಾಲಿಕೆಗಳು ಮಾಡಿದ‌ ಕಾರಣಕ್ಕೆ ಬೆಂಗಳೂರಿನಲ್ಲಿ ಹೊಸದಾಗಿ 500ಕ್ಕೂ ಹೆಚ್ಚು ನಾಯಕರು ಬೆಳಕಿಗೆ ಬರಲಿದ್ದಾರೆ ಎಂದರು.

    ನಾನು ಜಾತ್ಯತೀತ ತತ್ವದಲ್ಲಿ ಬೆಳೆದವನು
    ಜಾತ್ಯಾತೀತ ತತ್ವದಲ್ಲಿ ಬೆಳೆದವನು ನಾನು. ಸದನದಲ್ಲಿ ಆರ್‌ಎಸ್‌ಎಸ್‌ ಬಗ್ಗೆ ತಿಳಿದಿದೆ ಎಂದು ಹೇಳಿದೆ ಅಷ್ಟೇ ‌ಅದನ್ನೇ ದೊಡ್ಡದಾಗಿ ಬಿಂಬಿಸಲಾಯಿತು. ಕಾರ್ಯಕರ್ತರಿಗೆ, ನನ್ನ ನಂಬಿಕೊಂಡವರಿಗೆ ನೋವಾಗಬಾರದು ಎಂದು ನಾನು ಏನೂ ಮಾತನಾಡಲಿಲ್ಲ. ನಾನು ಪುಸ್ತಕ ಓದುವವನಲ್ಲ. ಶಾಲಾ, ಕಾಲೇಜುಗಳಲ್ಲಿ ಓದಲಿಲ್ಲ. ಅಂದಿನಿಂದಲೂ ರಾಜಕಾರಣ ಮಾಡಿಕೊಂಡು ಬೆಳೆದವನು ನಾನು. ಅಂತಿಮ ಪದವಿ ಓದುವಾಗ ಟಿಕೆಟ್ ದೊರೆಯಿತು. ಇದನ್ನು ಯಾರೂ ಸಹ ಊಹಿಸಲೂ ಸಾಧ್ಯವಿಲ್ಲ. ಅಂದಿನಿಂದ 8 ಬಾರಿ ಶಾಸಕನಾಗಿ ಇಂದು ಉಪಮುಖ್ಯಮಂತ್ರಿಯಾಗಿದ್ದೇನೆ ಎಂದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕೇಸ್ – ಕರೆ ಮಾಡಿದವನ ಮೂಲ ಪತ್ತೆ, ಅರೆಸ್ಟ್‌ಗೆ ಮುಂದಾದ ಪೊಲೀಸರು

    ನಾನು ರಾಜೀವ್ ಗಾಂಧಿ ಮಾತಿನ ಮೇಲೆ ನಂಬಿಕೆ ಇಟ್ಟವನು
    ಈ ಪುಸ್ತಕ ರಾಜಕೀಯದಲ್ಲಿ ಬೆಳೆಯಬೇಕು ಎನ್ನುವವರಿಗೆ ಒಂದಷ್ಟು ಮಾರ್ಗದರ್ಶನ ‌ನೀಡಬಹುದು. ಏಕೆಂದರೆ ನಾನು ರಾಜೀವ್ ಗಾಂಧಿ ಅವರ ಮಾತಿನ ಮೇಲೆ ನಂಬಿಕೆ ಇಟ್ಟವನು. ಹಿಂಬಾಲಕರನ್ನ ಸೃಷ್ಟಿಸಬೇಡಿ ನಾಯಕರನ್ನು ಸೃಷ್ಟಿಸಿ ಎನ್ನುವ ಮಾತನ್ನು ಹೆಚ್ಚು ನಂಬುವವನು. ನಾನು ಇಷ್ಟು ‌ಎತ್ತರಕ್ಕೆ ಬೆಳೆಯಲು ನನ್ನ ಕ್ಷೇತ್ರದ ಜನತೆ ಹಾಗೂ ಪಕ್ಷದ ಕಾರ್ಯಕರ್ತರು ಕಾರಣ.‌ ತಿಹಾರ್ ಜೈಲಿಗೆ ನನ್ನ ಮೇಲೆ ಷಡ್ಯಂತ್ರ ‌ಮಾಡಿ ಕಳುಹಿಸಿದಾಗಲೂ ಈ ಜನ ನನ್ನ ಜೊತೆ ನಿಂತಿದ್ದಾರೆ‌. ಲಕ್ಷಾಂತರ ಜನರು, ತಾಯಂದಿರು ಹರಕೆ ಕಟ್ಟಿಕೊಂಡು ನನ್ನ ಪರವಾಗಿ ಪ್ರಾರ್ಥನೆ ಮಾಡಿದ್ದರು. ಎಲ್ಲರ ಹರಕೆ,‌ ಹಾರೈಕೆಯಿಂದ ನಾನು ನಿಮ್ಮ ಮುಂದೆ ನಿಂತಿದ್ದೇನೆ ಎಂದರು.

    ಟೀಕೆಗಳನ್ನು ಮುಕ್ತವಾಗಿ ಸ್ವೀಕರಿಸುವೆ
    ಟೀಕೆಗಳನ್ನು ಮುಕ್ತವಾಗಿ ನಾನು ಸ್ವೀಕಾರ ಮಾಡುತ್ತೇನೆ. ಸ್ನೇಹಿತರು ಟೀಕೆ ಮಾಡುತ್ತಾರೆ. ವೈರಿಗಳು ನನ್ನ ಬಗ್ಗೆ ಇಲ್ಲ ಸಲ್ಲದ ಸಂಗತಿಗಳನ್ನು ಕಟ್ಟಿ ಮಾತನಾಡುತ್ತಾರೆ. ಆಪಾದನೆಗಳನ್ನು ‌ಮಾಡುತ್ತಾರೆ. ಆದರೂ ನಾನು ಸಂತೋಷದಿಂದ ಕೇಳಿಸಿಕೊಳ್ಳುತ್ತೇನೆ ಎಂದರು.

    “ದೇವೆಗೌಡರು, ಕುಮಾರಸ್ವಾಮಿ ವಿರುದ್ಧ ರಾಜಕೀಯ ‌ಮಾಡಿದ್ದೇನೆ. ಜಾತ್ಯಾತೀತತೇ ಉಳಿಯಬೇಕು ಎನ್ನುವ ಕಾರಣಕ್ಕೆ, ಹೈಕಮಾಂಡ್ ಹೇಳಿದಕ್ಕೆ ಅವರ ಕೈ ಹಿಡಿದು ಮೇಲಕ್ಕೆತ್ತಿ ಮುಖ್ಯಮಂತ್ರಿ ಮಾಡಿದ್ದೇವೆ. ನನ್ನ ಮನಸ್ಸು ಒಪ್ಪಿತೋ ಇಲ್ಲವೋ ಬೇರೆ ವಿಚಾರ‌. ಆದರೆ ಪಕ್ಷದ ಮಾತಿಗೆ ನಿಷ್ಠನಾಗಿ ನಡೆದುಕೊಂಡೆ. ನಾನು ಜೈಲಿಗೆ ಹೋದ ತಕ್ಷಣ ನಾವೇನಾದರೂ ದುಡ್ಡು ಹೊಡೆಯಲು ಹೇಳಿದ್ದೆವೇಯೇ ಎನ್ನುವ ಮಾತನ್ನೂ ಇದೇ ಕಿವಿಯಲ್ಲಿ ಕೇಳಿದ್ದೇನೆ ಎಂದರು.

    ಪುಸ್ತಕದಲ್ಲಿ 99%ರಷ್ಟು ಸತ್ಯ ಸಂಗತಿಗಳು ಕಾಣುತ್ತಿವೆ
    “ಪುಸ್ತಕದ ಲೇಖಕ ರಘು ನನಗೆ ಪರಿಚಿತನಲ್ಲ, ಪುಸ್ತಕ ಬರೆಯುತ್ತೇನೆ ಎಂದು ಅನುಮತಿ ಪಡೆದಿಲ್ಲ, ನನ್ನ ಬಳಿ ಹತ್ತು ನಿಮಿಷ ಮಾತನಾಡಿಲ್ಲ. ಆದರೆ ತನ್ನದೇ ಆದ ಮಾದರಿಯಲ್ಲಿ ಸಂಶೋಧನೆ ಮಾಡಿದ್ದಾರೆ. ನನ್ನ ಭಾಷಣಗಳು ಸೇರಿದಂತೆ ಇತರೇ ಮಾತುಗಳನ್ನು ಕೇಳಿ ಮಾಹಿತಿ ಸಂಗ್ರಹ ಮಾಡಿದ್ದಾರೆ‌. ಇದರಲ್ಲಿ ಶೇ.99 ರಷ್ಟು ಸತ್ಯ ಸಂಗತಿಗಳು ‌ಕಾಣುತ್ತಿವೆ” ಎಂದರು.

    “ಮೈಸೂರಿನ ರಮ್ಯ ಎಂಬ ಪಿಹೆಚ್‌ಡಿ ವಿದ್ಯಾರ್ಥಿನಿ ನನ್ನ ಬಗ್ಗೆ ಕಳೆದ 6-7 ವರ್ಷಗಳಿಂದ ಸಂಶೋಧನೆ ನಡೆಸಿ ಡಾಕ್ಟರೇಟ್ ಪಡೆದಿದ್ದಾರೆ. ಆಕೆ ಸಹ ನನ್ನ ಬಗ್ಗೆ ಬರೆದಿರುವ ಪುಸ್ತಕ ಬಿಡುಗಡೆಗೆ ಬಂದಿಲ್ಲ. ಈಗ ನನ್ನ ಬಗ್ಗೆ ಅತ್ಯುತ್ತಮವಾಗಿ ಸಂಶೋಧನೆ ನಡೆಸಿ ರಘು ಅವರು ಪುಸ್ತಕ ಬರೆದಿದ್ದಾರೆ. ನನ್ನ ಬಗ್ಗೆ ತಿಳಿದುಕೊಳ್ಳಲು, ನನ್ನ ಹೆಜ್ಜೆಗಳನ್ನು ಅರಿಯಲು ಈ ಪುಸ್ತಕ ನೆರವಾಗುತ್ತದೆ.‌ ನನ್ನ ಶ್ರಮ, ಫಲವನ್ನು ಈ ಪುಸ್ತಕದ ‌ಮೂಲಕ ತಿಳಿದುಕೊಳ್ಳಬಹುದು ಎಂದರು.

    ಸಮಾರಂಭದ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಡಿಸಿಎಂ ಅವರು ಜಾತಿಗಣತಿಗೆ ಮಾಹಿತಿ ನೀಡುವುದಿಲ್ಲ ಎನ್ನುವ ಸುಧಾಮೂರ್ತಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ʻಯಾರನ್ನೂ ಮಾಹಿತಿ ನೀಡಿ ಎಂದು ಬಲವಂತ ಮಾಡಲು ಆಗುವುದಿಲ್ಲ. ಇದು ಅವರ ಇಚ್ಚೆʼ ಎಂದರು.

  • ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ – ಜಾರಕಿಹೊಳಿ ಕುಟುಂಬದ ಎರಡನೇ ಪೀಳಿಗೆ ಎಂಟ್ರಿ

    ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ – ಜಾರಕಿಹೊಳಿ ಕುಟುಂಬದ ಎರಡನೇ ಪೀಳಿಗೆ ಎಂಟ್ರಿ

    – ಜಾರಕಿಹೊಳಿ ಗುಂಪಿಗೆ ಆರಂಭಿಕ ಮೇಲುಗೈ
    – 6 ತಾಲೂಕಿನಲ್ಲಿ ಅವಿರೋಧ ಆಯ್ಕೆ

    ಬೆಳಗಾವಿ: ಜಿಲ್ಲೆಯಲ್ಲಿ ಜಿದ್ದಾಜಿದ್ದಿಗೆ ಕಾರಣವಾಗಿರುವ ಡಿಸಿಸಿ ಬ್ಯಾಂಕ್ ಚುನಾವಣೆಗೆ (DCC Bank) ಶನಿವಾರ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ. 16 ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣಾ ಕಣದಲ್ಲಿ ಘಟಾನುಘಟಿ ನಾಯಕರೇ ಅಖಾಡಕ್ಕೆ ಇಳಿದಿದ್ದಾರೆ. ಆರಂಭದ ಹಂತದಲ್ಲೇ ಜಾರಕಿಹೊಳಿ ಬ್ರದರ್ಸ್ (Jarkiholi Brothers) ಗುಂಪು ಮೆಲುಗೈ ಸಾಧಿಸಿದೆ.

    ಅ.19 ರಂದು ನಡೆಯಲಿರುವ ಮತದಾನಕ್ಕೆ ಈ ವರೆಗೂ ಒಟ್ಟು 64 ನಾಮಪತ್ರ ಸಲ್ಲಿಕೆಯಾಗಿವೆ. ಈ ಪೈಕಿ ಆರು ತಾಲೂಕಿನಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದು ಆರಂಭದಲ್ಲೇ ಜಾರಕಿಹೊಳಿ ಗುಂಪು ಮೇಲುಗೈ ಸಾಧಿಸಿದೆ.

    ಹಾಲಿ, ಮಾಜಿ ಶಾಸಕರು ಸೇರಿದಂತೆ ಮಾಜಿ ಸಂಸದರು ಕೂಡ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದಾರೆ. ಅದರಲ್ಲೂ ಈಗಾಗಲೇ ಜಾರಕಿಹೊಳಿ ಬ್ರದರ್ಸ್ 13 ಜನರ ತಂಡವನ್ನು ಸಿದ್ಧಪಡಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಥಣಿ, ಕಾಗವಾಡ ಮತ್ತು ಚಿಕ್ಕೋಡಿ ತಾಲೂಕಿನಲ್ಲಿ ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಬೇರೆ ಕಡೆಗಳಲ್ಲಿ ತಮ್ಮವರನ್ನು ಅಖಾಡಕ್ಕಿಳಿಸಿದ್ದಾರೆ.

    ರಮೇಶ್ ಕತ್ತಿ (Ramesh Katti) ಮತ್ತು ಲಕ್ಷ್ಮಣ ಸವದಿ (Laksham savdi) ನಡೆ ಇನ್ನೂ ನಿಗೂಢವಾಗಿದ್ದು ಜಾರಕಿಹೊಳಿ ಸಹೋದರರಿಗೆ ಶಾಕ್ ಕೊಡಲು ಮಾಸ್ಟರ್ ಪ್ಲ್ಯಾನ್ ಮಾಡ್ತಿದ್ದಾರೆ. ಸದ್ಯ ಆರಂಭಿಕ ಹಂತದಲ್ಲಿ ಜಾರಕಿಹೊಳಿ ಬ್ರದರ್ಸ್ ಮೇಲುಗೈ ಸಾಧಿಸಿದ್ದು ಆರು ತಾಲೂಕಿನ ಪೈಕಿ ಐದು ಜಾರಕಿಹೊಳಿ ಬ್ರದರ್ಸ್ ಗುಂಪಿನವರು ಆಯ್ಕೆಯಾಗಿದ್ದಾರೆ. ಇದನ್ನೂ ಓದಿ:  DCC Bank Election| ಮೇಲೆ ಕುಳಿತವನು ಆಟ ಆಡಿಸ್ತಾನೆ, ನಾವೆಲ್ಲ ಗೊಂಬೆಗಳು: ಲಕ್ಷ್ಮಣ ಸವದಿ

     

    ಅವಿರೋಧ ಆಯ್ಕೆ: ಗೋಕಾಕ್‌ನಿಂದ ಶಾಸಕ ರಮೇಶ್‌ ಜಾರಕಿಹೊಳಿ ಪುತ್ರ ಅಮರನಾಥ್ ಜಾರಕಿಹೊಳಿ, ಯಮಕನಮರಡಿ ಶಾಸಕ ಸತೀಶ್‌ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಬೆಳಗಾವಿ ತಾಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಯರಗಟ್ಟಿಯಿಂದ ವಿಶ್ವಾಸ್ ವೈದ್ಯ, ಸವದತ್ತಿಯಿಂದ ವಿರೂಪಾಕ್ಷ ಮಾಮನಿ, ಮೂಡಲಗಿ ನೀಲಕಂಠ ಜಾರಕಿಹೊಳಿ ಗುಂಪಿನಲ್ಲಿದ್ದವರು ಅವಿರೋಧ ಆಯ್ಕೆಯಾದರೆ ಇತ್ತ ಯಾವುದೇ ಗುಂಪಿನಲ್ಲಿ ಗುರುತಿಸಿಕೊಳ್ಳದೇ ಚಿಕ್ಕೋಡಿಯಿಂದ ನಾಮಪತ್ರ ಸಲ್ಲಿಸಿದ್ದ ಶಾಸಕ ಗಣೇಶ್ ಹುಕ್ಕೇರಿ ಕೂಡ ಆಯ್ಕೆಯಾಗಿದ್ದಾರೆ.

     

    ಶನಿವಾರ ಮಧ್ಯಾಹ್ನ ಮೂರು ಗಂಟೆಯವರೆಗೂ ಕಾದು ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆ ಶಾಸಕ ವಿಶ್ವಾಸ್ ವೈದ್ಯ, ನೀಲಕಂಠ, ಗಣೇಶ್ ಹುಕ್ಕೇರಿ ಬೆಂಬಲಿಗರು ಗುಲಾಲ್ ಹಚ್ಚಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಜಾರಕಿಹೊಳಿ ಪರ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದರು.

    ಒಂದು ಕಡೆ ಜಾರಕಿಹೊಳಿ ಬ್ರದರ್ಸ್ ಆರಂಭಿಕ ಹಂತದಲ್ಲಿ ಮೇಲುಗೈ ಸಾಧಿಸಿದರೂ ಠಕ್ಕರ್ ಕೊಡಲು ಲಕ್ಷ್ಮಣ ಸವದಿ ಹಾಗೂ ರಮೇಶ್ ಕತ್ತಿ ಮಾಸ್ಟರ್ ಪ್ಲ್ಯಾನ್ ಮಾಡ್ತಿದ್ದಾರೆ. ಹೇಗಾದರೂ ಮಾಡಿ ಅಧ್ಯಕ್ಷಗಾದಿ ಹಿಡಿಯಬೇಕು ತಮ್ಮ ಹಿಡಿತದಲ್ಲಿ ಡಿಸಿಸಿ ಬ್ಯಾಂಕ್ ಸಾಧಿಸಬೇಕು ಎಂಬ ನಿಟ್ಟಿನಲ್ಲಿ ಪ್ಲ್ಯಾನ್ ಮಾಡ್ತಿದ್ದು ಅ.19ರ ವರೆಗೂ ಕಾದು ನೋಡಿ ಅಂತಿದ್ದಾರೆ.

    ಇದೇ ಮೊದಲ ಬಾರಿಗೆ ಅಣ್ತಮ್ಮಂದಿರು ತಾವು ಸ್ಪರ್ಧೆ ಮಾಡುವುದನ್ನ ಬಿಟ್ಟು ತಮ್ಮ ಕುಡಿಗಳಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದು ಈ ಮೂಲಕ ಜಾರಕಿಹೊಳಿ ಮನೆತನದ ಎರಡನೇ ಪೀಳಿಗೆ ಅಧಿಕೃತವಾಗಿ ರಾಜಕೀಯ ರಂಗ ಪ್ರವೇಶ ಮಾಡಿದೆ. ಈ ಕುರಿತು ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ತಾವು ಎಳೆದುಕೊಂಡು ಹೋಗುತ್ತಿರುವ ತೇರನ್ನು ಮಕ್ಕಳು ಎಳೆಯಬೇಕು ಜನರ ಸೇವೆ ಮಾಡಬೇಕೆನ್ನುವ ಉದ್ದೇಶದಿಂದ ಚುನಾವಣೆಗೆ ನಿಲ್ಲಿಸಿದ್ದಾಗಿ ಹೇಳಿದ್ದಾರೆ.

    ತಾನು ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎನ್ನುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ಎಂಟ್ರಿಯಾಗಿದ್ದಾರೆ. ಸಹಕಾರಿ ಸಂಘಗಳ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿದ್ದು ಜಾರಕಿಹೊಳಿ ಸಹೋದರರ ಮತ್ತೊಂದು ದಾಳ ಅಂತಾ ಹೇಳಲಾಗುತ್ತಿದ್ದು ಬಾಲಚಂದ್ರ ಜಾರಕಿಹೊಳಿ ಕೂಡ ರಾಜಕಾರಣದಲ್ಲಿ ಎಲ್ಲವೂ ಮಾಡಬೇಕು ಅಂತಾ ಹೇಳಿದ್ದಾರೆ.

    ಒಟ್ಟಿನಲ್ಲಿ ಸಾಕಷ್ಟು ಜಿದ್ದಾಜಿದ್ದಿಗೆ ಕಾರಣವಾಗಿರುವ ಡಿಸಿಸಿ ಬ್ಯಾಂಕ್ ಚುನಾವಣೆಗೆ ಅಕ್ಟೋಬರ್ 19ರಂದು ಮತದಾನ ನಡೆಯಲಿದ್ದು ಈಗಾಗಲೇ ಆರು ತಾಲೂಕಿನಲ್ಲಿ ಯಾವುದೇ ನಾಮ ಪತ್ರ ಸಲ್ಲಿಕೆಯಾಗದ ಹಿನ್ನೆಲೆ ಅವಿರೋಧ ಆಯ್ಕೆ ಖಚಿತವಾಗಿದ್ದು ಅಧಿಕೃತ ಘೋಷಣೆ ಒಂದೇ ಬಾಕಿ ಇದೆ. ಇತ್ತ ಜಾರಕಿಹೊಳಿ ಬ್ರದರ್ಸ್ ಕಡೆಯಿಂದ ಡಿಸಿಸಿ ಬ್ಯಾಂಕ್ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಲಿಂಗಾಯತ ಅಸ್ತ್ರ ಪ್ರಯೋಗ ಆಗಿದ್ದು ಇದರಿಂದ ತಮ್ಮ ಗುಂಪು ಗೆದ್ದರೆ ಲಿಂಗಾಯತರೇ ಅಧ್ಯಕ್ಷ ಅಂತಾ ಬಾಲಚಂದ್ರ ಹೇಳಿದ್ದು ಮತ್ತಷ್ಟು ರೋಚಕತೆ ಹೆಚ್ಚಿಸಿದೆ.

  • ಕರ್ನಾಟಕದಲ್ಲಿ ಕೇಂದ್ರಕ್ಕೂ ಮೊದಲೇ ರಾಜ್ಯ ಚುನಾವಣಾ ಆಯೋಗದಿಂದ SIR

    ಕರ್ನಾಟಕದಲ್ಲಿ ಕೇಂದ್ರಕ್ಕೂ ಮೊದಲೇ ರಾಜ್ಯ ಚುನಾವಣಾ ಆಯೋಗದಿಂದ SIR

    ಬೆಂಗಳೂರು: ಕರ್ನಾಟಕದಲ್ಲಿ (Karnataka) ಮೊದಲು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision -SIR) ಮಾಡುವವರು ಯಾರು? ಕೇಂದ್ರ ಚುನಾವಣಾ ಆಯೋಗ ಮೊದಲೋ? ರಾಜ್ಯ ಚುನಾವಣಾ ಆಯೋಗ (State Election commsion) ಮೊದಲೋ? ಎಂಬ ಕುತೂಹಲ ಮನೆ ಮಾಡಿದೆ.

    ಹೌದು.ಈಗ ರಾಜ್ಯ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಗೆ ಭರ್ಜರಿ ಸಿದ್ಧತೆ ನಡೆದಿದ್ದು, ನಾವು ನವೆಂಬರ್ 1 ರಿಂದ‌ ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತೇವೆ. ಕೇಂದ್ರ ಚುನಾವಣಾ ಆಯೋಗ ಎಸ್‌ಐಆರ್‌ ಮುಂದೂಡಲಿ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ ಹೇಳಿದ್ದಾರೆ.  ಇದನ್ನೂ ಓದಿ:  3 ತಿಂಗಳು ನನ್ನ ಮನೆಮುಂದೆ ಮಾಧ್ಯಮಗಳು ಕಾಯೋ ಹಾಗೇ ಮಾಡಿದ್ದು ಯಾರ ಪ್ರೇರಣೆಯಿಂದ – HDD ಕಿಡಿ

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮಾಡಲಿ. ಆದರೆ ರಾಜ್ಯ ಚುನಾವಣಾ ಆಯೋಗಕ್ಕೂ ಅಧಿಕಾರ ಇದೆ. ಈಗಾಗಲೇ ಕೇರಳದಲ್ಲಿ ಮಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ಮಾಡ್ತಿದ್ದಾರೆ. ಹಾಗಾಗಿ ಕೇಂದ್ರ ಚುನಾವಣಾ ಆಯೋಗ ಎಸ್‌ಐಆರ್‌ ಮುಂದಕ್ಕೆ ಹಾಕಬೇಕು. ಕೇಂದ್ರ ಚುನಾವಣಾ ಆಯೋಗಕ್ಕೆ ನಾವು ಪತ್ರ ಬರೆದಿದ್ದು ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದರು.

    ನವೆಂಬರ್ ಅಂತ್ಯದೊಳಗೆ ಸುಪ್ರೀಂಕೋರ್ಟ್‌ಗೆ  (Supreme Court) ನಾವು ಗ್ರೇಟರ್‌ ಬೆಂಗಳೂರು ಅಥಾರಿಟಿ(GBA) ವಾರ್ಡ್ ಮೀಸಲಾತಿ ಪಟ್ಟಿ ಸಲ್ಲಿಸಬೇಕು. ಹಾಗಾಗಿ ನಾವೇ ಮತದಾರರ ಪರಿಷ್ಕರಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

    ಯಾವುದೇ ಡಿಲಿಟೇಶನ್ ಗೊಂದಲ ಆಗುವುದಿಲ್ಲ. ಕೇಂದ್ರ, ರಾಜ್ಯದ ಪರಿಷ್ಕರಣೆಯಲ್ಲಿ ದೊಡ್ಡ ವ್ಯತ್ಯಾಸ ನಡೆಯುವುದಿಲ್ಲ. ಕೇಂದ್ರ ಸರ್ಕಾರದ ರೀತಿಯಲ್ಲೇ ನಾವು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತೇವೆ. 2026ಮೇ ಒಳಗೆ ಗ್ರಾಮ ಪಂಚಾಯ್ತಿ, ತಾಲ್ಲೂಕು, ಜಿಲ್ಲಾ ಪಂಚಾಯ್ತಿ, ಜಿಬಿಎ ಪಾಲಿಕೆಗಳ ಚುನಾವಣೆ ಮುಗಿಸಬೇಕು.ಹಾಗಾಗಿ ನಾವು ಮತದಾರರ ಪಟ್ಟಿ ಪರಿಷ್ಕರಣೆ ಮಾಡಲೇಬೇಕು. ನಮಗೂ ಸಂವಿಧಾನಿಕ ಅಧಿಕಾರ ಇದೆ ಎಂದು ಹೇಳಿದರು.

  • ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಗೀತಾ ಶಿವರಾಜ್‌ಕುಮಾರ್ ಘೋಷಣೆ

    ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಗೀತಾ ಶಿವರಾಜ್‌ಕುಮಾರ್ ಘೋಷಣೆ

    ಶಿವಮೊಗ್ಗ: ಇನ್ನುಮುಂದೆ ನಾನು ಚುನಾವಣೆಗೆ (Election) ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಮಹತ್ವದ ಘೋಷಣೆ ಹೊರಡಿಸಿದ್ದಾರೆ.

    ಮಹಿಳಾ ಕಾಂಗ್ರೆಸ್ (Congress) ಸಮಾರಂಭದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಈ ಹಿಂದೆ ಸ್ಪರ್ಧಿಸಿದ್ದರೂ ಕೂಡ ಪಕ್ಷ ಸಂಘಟನೆಯಲ್ಲಿ ಜೊತೆಗೆ ಇರುತ್ತೇನೆ. ನಿಮ್ಮೊಂದಿಗೆ ಕೆಲಸ ಮಾಡುತ್ತೇನೆ, ಯಾವಾಗ ಕರೆದರೂ ನಾನು ಬರುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಆಯುಧ ಪೂಜೆ ಹಬ್ಬಕ್ಕೂ ಸಾರಿಗೆ ಇಲಾಖೆಯಲ್ಲಿ ದುಡ್ಡಿಲ್ವಾ?- ಒಂದು ಬಸ್‌ಗೆ ಕೇವಲ 150 ರೂ. ಬಿಡುಗಡೆ

    ನೂತನ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶ್ವೇತಾ ಬಂಡಿಯವರನ್ನು ಅಭಿನಂದಿಸಿದ ಅವರು, ಶ್ವೇತಾ ಬಂಡಿಯವರು ತಮ್ಮ ಚುನಾವಣೆಯ ಪ್ರಚಾರದಲ್ಲಿ ಶ್ರಮಿಸಿದ್ದಾರೆ. ಇಂದಿನ ಸಮಾವೇಶ ಖುಷಿ ತಂದಿದೆ. ಮಹಿಳೆಯರು ಅಬಲೆಯರಲ್ಲ. ಅವರಿಗೆ ಎಲ್ಲಾ ಶಕ್ತಿಯಿದೆ ಅವರು ಎಲ್ಲರನ್ನ ಜೊತೆಗೂಡಿಸಿಕೊಂಡು ಅವರು ಪಕ್ಷ ಸಂಘಟಿಸಲಿ ಎಂದು ಸಲಹೆ ನೀಡಿದರು. ನಾನು ಇನ್ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಆದರೆ ಪಕ್ಷದ ಎಲ್ಲರ ಜೊತೆಗೂ ದೃಢವಾಗಿ ಇರುತ್ತೇನೆ ಎಂದು ಪುನರುಚ್ಚರಿಸಿದರು. ಇದನ್ನೂ ಓದಿ: ಮೂರು ಅಂತಸ್ತಿಗೆ ಅನುಮತಿ.. ಕಟ್ಟಿದ್ದು ಐದು ಅಂತಸ್ತು – ವಾಲಿದ ಬಿಲ್ಡಿಂಗ್‌ ತೆರವು ಕಾರ್ಯಾಚರಣೆ

    ಗೀತಾ ಶಿವರಾಜ್‌ಕುಮಾರ್ ಚುನಾವಣೆಯಿಂದ ದೂರ ಸರಿದಿದ್ದಾರೆ. 2024ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್ ಕುಮಾರ್, ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಇದೀಗ ಶಿವಮೊಗ್ಗದಲ್ಲೇ ತಮ್ಮ ಚುನಾವಣಾ ನಿವೃತ್ತಿ ಬಗ್ಗೆ ಘೋಷಿಸಿದ್ದಾರೆ. ಇನ್ಮುಂದೆ ನಾನು ಯಾವುದೇ ಚುನಾವಣೆಗೆ ನಿಲ್ಲೋದಿಲ್ಲ ಅಂತ ಗೀತಾ ಶಿವರಾಜ್‌ಕುಮಾರ್ ಘೋಷಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ: ಜಾತಿಗಣತಿ ಬಹಿಷ್ಕಾರಕ್ಕೆ ತೇಜಸ್ವಿ ಸೂರ್ಯ ಕರೆ

  • 7 ದಿನಗಳಲ್ಲಿ ಅಫಿಡವಿಟ್‌ ಸಲ್ಲಿಸಿ ಇಲ್ಲವೇ ದೇಶದ ಕ್ಷಮೆ ಕೇಳಿ: ರಾಹುಲ್‌ಗೆ ಚುನಾವಣಾ ಆಯೋಗ ಡೆಡ್‌ಲೈನ್‌

    7 ದಿನಗಳಲ್ಲಿ ಅಫಿಡವಿಟ್‌ ಸಲ್ಲಿಸಿ ಇಲ್ಲವೇ ದೇಶದ ಕ್ಷಮೆ ಕೇಳಿ: ರಾಹುಲ್‌ಗೆ ಚುನಾವಣಾ ಆಯೋಗ ಡೆಡ್‌ಲೈನ್‌

    ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು 7 ದಿನಗಳ ಒಳಗಡೆ ಸಾಕ್ಷ್ಯಾಧಾರಗಳೊಂದಿಗೆ ಅಫಿಡವಿಟ್ ಸಲ್ಲಿಸಬೇಕು ಅಥವಾ ಸಾರ್ವಜನಿಕ ಕ್ಷಮೆಯಾಚಿಸಬೇಕು ಎಂದು ಚುನಾವಣಾ ಆಯೋಗ ಹೇಳಿದೆ.

    ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಈ ವಿಚಾರದಲ್ಲಿ ಮೂರನೇ ಆಯ್ಕೆ ಇಲ್ಲ. ನಿಗದಿತ ಸಮಯದೊಳಗೆ ಅಫಿಡವಿಟ್ ಸಲ್ಲಿಸದೇ ಇದ್ದರೆ ಆ ಆರೋಪಗಳನ್ನು ಆಧಾರರಹಿತವೆಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.  ಇದನ್ನೂ ಓದಿ: ಬಿಹಾರದಲ್ಲಿ ಮತದಾರರ ಹಕ್ಕುಗಳ ಯಾತ್ರೆಗೆ ಚಾಲನೆ ಬಿಜೆಪಿ, ಚು. ಆಯೋಗ ವಿರುದ್ಧ ರಾಗಾ ವಾಗ್ದಾಳಿ

    ರಾಹುಲ್ ಗಾಂಧಿಯವರ ಡಬಲ್ ವೋಟಿಂಗ್ ಮತ್ತು ಮತ ಕಳ್ಳತನ ಆರೋಪಗಳನ್ನು ತಿರಸ್ಕರಿಸಿದ ಅವರು, ಬಿಹಾರದ ಏಳು ಕೋಟಿಗೂ ಹೆಚ್ಚು ಮತದಾರರು ಚುನಾವಣಾ ಆಯೋಗದ ಜೊತೆ ನಿಂತಿರುವಾಗ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯ ಬಗ್ಗೆ ಅಥವಾ ಮತದಾರರ ವಿಶ್ವಾಸಾರ್ಹತೆಯ ಬಗ್ಗೆ ಯಾವುದೇ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.  ಇದನ್ನೂ ಓದಿ: ರಿಸಲ್ಟ್‌ ಪ್ರಕಟವಾದ ಬಳಿಕ ದೂರು ದಾಖಲಿಸದೇ ಆರೋಪ ಮಾಡೋದು ಸಂವಿಧಾನಕ್ಕೆ ಮಾಡೋ ಅವಮಾನ: ಚುನಾವಣಾ ಆಯೋಗ

    ಮಷಿನ್ ರೀಡೆಬೆಲ್ ಡೇಟಾ ನೀಡುವುದರಿಂದ ಮತದಾರರ ಗೌಪ್ಯತೆ ಬಹಿರಂಗವಾಗಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಸುಪ್ರೀಂಕೋರ್ಟ್ ಆದೇಶದ ಹಿನ್ನಲೆ ಅದನ್ನು ನೀಡಲು ಸಾಧ್ಯವಿಲ್ಲ. ವಿಶೇಷ ಪರಿಷ್ಕರಣೆ ಬಿಹಾರದಲ್ಲಿ ಮೊದಲ ಬಾರಿಗೆ ನಡೆಯುತ್ತಿಲ್ಲ. ಈ ಹಿಂದೆ 2003 ರಲ್ಲೇ ಪರಿಷ್ಕರಣೆ ಮಾಡಲಾಗಿತ್ತು. ಈಗ ಈ ಪರಿಷ್ಕರಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಸುಮ್ಮನೇ ಆರೋಪ ಮಾಡಲಾಗುತ್ತಿದೆ ಎಂದರು.

  • ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ: ಬಿ.ಕೆ ಹರಿಪ್ರಸಾದ್‌ ಬಾಂಬ್‌

    ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ: ಬಿ.ಕೆ ಹರಿಪ್ರಸಾದ್‌ ಬಾಂಬ್‌

    – ಬಿಜೆಪಿ, ಚುನಾವಣಾ ಆಯೋಗದ ವಿರುದ್ಧ ಹರಿಪ್ರಸಾದ್ ಕೆಂಡಾಮಂಡಲ

    ಮಡಿಕೇರಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ (Voter List Scam) ನಡೆದಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ (BK Hariprasad) ಬಾಂಬ್‌ ಸಿಡಿಸಿದ್ದಾರೆ.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೊಡಗಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ – ಬಂಧಿತರು ದರ್ಶನ್‌ ಅಭಿಮಾನಿಗಳೇ‌ ಅಂತ ಪರಿಶೀಲಿಸ್ತಿದ್ದೇವೆ: ಸೀಮಂತ್‌ ಕುಮಾರ್‌ ಸಿಂಗ್‌

    ಕಳ್ಳ ಪಟ್ಟಿ ಸೃಷ್ಟಿಸಿ ವೋಟ್‌ ಹಾಕಿಸಿಕೊಂಡಿದ್ದಾರೆ:
    ರಾಜ್ಯದಲ್ಲಿ ಮಾತ್ರವಲ್ಲ ಇಡೀ ರಾಷ್ಟ್ರದಲ್ಲೇ ಮತದಾರರ ಪಟ್ಟಿಯಲ್ಲಿ (Voter List) ಅಕ್ರಮ ಮಾಡಿರುವುದು ಕಂಡುಬರುತ್ತಿದೆ. ಚುನಾವಣಾ ಆಯೋಗ ಅಂತೂ ನಾವು ಪಕ್ಷ ಸೇರಲ್ಲ, ಹೊರಗೆ ನಿಂತು ಬೆಂಬಲ ಕೋಡುತ್ತೇವೆ ಅನ್ನೋ ಪರಿಸ್ಥಿತಿಗೆ ಬಂದಿದೆ. ಮಹಾರಾಷ್ಟ್ರದಲ್ಲಿ ಲೋಕಸಭಾ (Lok Sabha Electrion) ಹಾಗೂ ವಿಧಾನಸಭಾ ಚುನಾವಣೆ ನಡೆಯುವ ಸಮಯದಲ್ಲಿ ಸುಮಾರು 60 ಲಕ್ಷ ಮತದಾರರ ಸಂಖ್ಯೆ ಜಾಸ್ತಿಯಾಗಿದೆ. ಹರಿಯಾಣದಲ್ಲೂ ಅದೇ ಪರಿಸ್ಥಿತಿ ಇದೆ. ಕರ್ನಾಟಕದ ಕೆಲ ಜಿಲ್ಲೆಗಳಲ್ಲೂ ಮತಗಳ್ಳತನ ಮಾಡಿದ್ದಾರೆ. ಕಳ್ಳ ಮತದಾರರ ಪಟ್ಟಿ ಸೃಷ್ಟಿ ಮಾಡಿ ಮತಗಳನ್ನ ಹಾಕಿಸಿಕೊಂಡಿರುವುದು ಕಂಡುಬಂದಿದೆ‌‌. ಹಾಗಾಗಿ ರಾಹುಲ್‌ ಗಾಂಧಿ ಅವರೇ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ʻಕಾಂಗ್ರೆಸ್‌ ಗೆದ್ದಾಗ ಮತದಾರರ ಪಟ್ಟಿ ದುರುಪಯೋಗ ಆಗಿಲ್ವಾ?ʼ ಎಂಬ ಬಿಜೆಪಿಗರ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್‌ 136 ಹಾಗೂ 140 ಸ್ಥಾನ ಗೆದ್ದಿದ್ದೇವೆ. ಆದ್ರೆ ಕೆಲ ಭಾಗದಲ್ಲಿ ವಲಸಿಗರು ಜಾಸ್ತಿ ಇದ್ದಾರೆ. ಅವರನ್ನ ದುರುಪಯೋಗ ಮಾಡಿಕೊಂಡು ಮತದಾನ ಮಾಡಿಸಿದ್ದಾರೆ. ಬೆಂಗಳೂರಿನ ರಾಜಾಜೀನಗರ, ಮಹದೇವಪುರದಲ್ಲಿ ಇನ್ನೂ ಕೆಲ ಭಾಗಗಳಲ್ಲಿ ಅಕ್ರಮ ನಡೆಸಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಕೋಮುವಾದ ಹರಡಲು ಯತ್ನಿಸಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ನೀಡಿರೋದು ಭಾರತ ಚಿತ್ರರಂಗಕ್ಕೆ ಅವಮಾನ: ಪಿಣರಾಯಿ ವಿಜಯನ್

    ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಸೋತ್ತಿರುವುದು 33,000 ಸಾವಿರದಲ್ಲಿ ಮಾತ್ರ, ಅದು ಹೊರಗಡೆ ಬಂದಾಗ ಗೋತ್ತಾಗುತ್ತೆ. ಒಂದೇ ಮನೆಯಲ್ಲಿ 1,000 ಮತ ತೋರಿಸಿದಾಗ ಅಕ್ರಮ ಅಲ್ಲದೇ ಬೇರೇನು ಗೊತ್ತಾಗುತ್ತೆ ಅಂತಲೂ ಬಿಜೆಪಿ ವಿರುದ್ಧ ಕುಟುಕಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶ | ಭಾರೀ ಮಳೆಯಿಂದ ನೀರಿನ ಮಟ್ಟ ದಿಢೀರ್‌ ಏರಿಕೆ – ಡ್ಯಾಂ ಕುಸಿತ

    ಇದೇ ವೇಳೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ದೇಶದಲ್ಲಿ ಕಾನೂನು ಸಂವಿಧಾನ ಇದೆ. ಅದರ ಅಡಿಯಲ್ಲಿ ತನಿಖೆ ನಡೆಯುತ್ತಿದೆ, ಈ ಸಂದರ್ಭ ಪ್ರತಿಕ್ರಿಯೆ ಕೊಡೋದು ತಪ್ಪಾಗುತ್ತೆ. ತನಿಖೆಯ ಬಳಿಕ ಸುಳ್ಳು ಯಾವುದು, ಸತ್ಯ ಯಾವುದು ಗೊತ್ತಾಗುತ್ತೆ. ಅಲ್ಲಿಯವರೆಗೆ ಎಲ್ಲರೂ ತಾಳ್ಮೆಯಿಂದ ಕಾಯಬೇಕು ಎಂದು ತಿಳಿಸಿದ್ರು. ಇದನ್ನೂ ಓದಿ: ವಾರಣಾಸಿ | 2,200 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

  • 2011ರಿಂದಲೂ ಚುನಾವಣೆಯಲ್ಲಿ ಅಕ್ರಮ ನಡೆಯುತ್ತಲೇ ಇದೆ: ರಾಮಲಿಂಗಾ ರೆಡ್ಡಿ

    2011ರಿಂದಲೂ ಚುನಾವಣೆಯಲ್ಲಿ ಅಕ್ರಮ ನಡೆಯುತ್ತಲೇ ಇದೆ: ರಾಮಲಿಂಗಾ ರೆಡ್ಡಿ

    ಬೆಂಗಳೂರು: ಕಾಂಗ್ರೆಸ್ ನಾಯಕರು, ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ (Bengaluru) ಚುನಾವಣೆಯಲ್ಲಿ (Election) ಅಕ್ರಮ ನಡೆದಿದೆ ಎಂಬ ಹೇಳಿಕೆಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಪ್ರತಿಕ್ರಿಯೆ ನೀಡಿದ್ದು ಇದು 2011ರಿಂದಲೂ ನಡೆಯುತ್ತಿರುವ ಅಕ್ರಮ ಎಂದು ಹೇಳಿದ್ದಾರೆ.

    ಈ ಕುರಿತು ಮಾತನಾಡಿದ ಅವರು, ಜರ್ಮನಿ, ಜಪಾನ್ ದೇಶದಲ್ಲಿ ಇವಿಎಂ ಮಿಷನ್‌ಗಳನ್ನು ತಯಾರು ಮಾಡುತ್ತಾರೆ. ಆದರೆ ಅಲ್ಲೇ ಇದನ್ನ ಬಳಕೆ ಮಾಡಲ್ಲ. ಹಾಗೆಯೇ ಅಮೆರಿಕ ಲಂಡನ್ನಲ್ಲೂ ಇವಿಎಂ (EVM) ಬಳಕೆ ಮಾಡಲ್ಲ. ನಮ್ಮ ದೇಶದಲ್ಲಿ ಇವಿಎಂ ಬಳಕೆಯನ್ನ ನಮ್ಮ ಪಕ್ಷವೇ ಜಾರಿಗೆ ತಂದಿದ್ದು, ಆದರೆ ಅದನ್ನ ಬಿಜೆಪಿಯವರು ಅಕ್ರಮಕ್ಕೆ ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: Mysuru | ಸಿಡಿಮದ್ದು ಸ್ಫೋಟ – ಮಹಿಳೆಗೆ ಗಾಯ

    2011ರಿಂದಲೂ ಇವಿಎಂಗಳನ್ನು ದುರ್ಬಳಕೆ ಮಾಡಿಕೊಂಡೇ ಬರುತ್ತಿದ್ದಾರೆ. ಬರೀ ಇವಿಎಂ ಮಾತ್ರವಲ್ಲ ಚುನಾವಣೆ ಅಂದರೆ ಬಿಜೆಪಿಯವರಿಗೆ ಅಕ್ರಮ. ಪ್ರತಿ ಹಂತದಲ್ಲೂ ಅಕ್ರಮ ಮಾಡಿಕೊಂಡು ಬರುತ್ತಿದ್ದಾರೆ ಎಂದರು. ಇದನ್ನೂ ಓದಿ: ಕಾಂಬೋಡಿಯಾ-ಥೈಲ್ಯಾಂಡ್‌ ಘರ್ಷಣೆ – ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯ ಪ್ರಜೆಗಳಿಗೆ ಸಲಹೆ

  • ಮುಂದೆ ರಾಮನಗರದಲ್ಲೇ ಚುನಾವಣೆಗೆ ನಿಲ್ಲುತ್ತೇನೆ – ನಿಖಿಲ್‌ ಕುಮಾರಸ್ವಾಮಿ

    ಮುಂದೆ ರಾಮನಗರದಲ್ಲೇ ಚುನಾವಣೆಗೆ ನಿಲ್ಲುತ್ತೇನೆ – ನಿಖಿಲ್‌ ಕುಮಾರಸ್ವಾಮಿ

    ರಾಮನಗರ: ನಾನು ಮುಂದೆ ಚುನಾವಣೆ ನಿಲ್ಲುವ ಸಂದರ್ಭ ಬಂದರೆ ನಾನು ರಾಮನಗರದಲ್ಲೇ ನಿಲ್ತೇನೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.

    ಜಿಲ್ಲೆಯಲ್ಲಿ ಎರಡನೇ ದಿನದ ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನ ಮುಂದುವರೆದಿದ್ದು, ರಾಮನಗರ ವಿಧಾನಸಭಾ ಕ್ಷೇತ್ರದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡಿದ್ರು. ಬಳಿಕ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ಕುಮಾರಣ್ಣನವರು ನನಗೆ ಸಾಕಷ್ಟು ಬಾರಿ ಹೇಳಿದ್ದಾರೆ. ರಾಮನಗರಕ್ಕೆ ಒಂದೇ ಒಂದು ದಿನ ಹೋಗಿಲ್ಲ ಅಂದ್ರೂ ಅಲ್ಲಿನ ಜನ ನನ್ನ ಮುಖ್ಯಮಂತ್ರಿ ಮಾಡಿದ್ರು ಅಂತ. ಅಷ್ಟು ಪ್ರೀತಿ ರಾಮನಗರ ಜನ ತೋರಿಸ್ತಾರೆ. ನಮ್ಮ ಕುಟುಂಬಕ್ಕೆ 6 ಬಾರಿ ಇಲ್ಲಿಂದ ಅವಕಾಶ ಕೊಟ್ಟಿದ್ದೀರಿ. ನಾನು ಮುಂದೆ ಚುನಾವಣೆ ನಿಲ್ಲುವ ಸಂದರ್ಭ ಬಂದರೆ ನಾನು ರಾಮನಗರದಲ್ಲೇ ನಿಲ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕೋಮುಲ್ ಚುನಾವಣೆಯಲ್ಲಿ ಹಣದ ಹೊಳೆ – ಒಂದೊಂದು ಮತಕ್ಕೆ 5 ರಿಂದ 7 ಲಕ್ಷ ಸಂದಾಯ

    ಯಾರು ಕೂಡ ಮನಸ್ಸಿನಲ್ಲಿ ಗೊಂದಲ ಇಟ್ಟುಕೊಳ್ಳಬೇಡಿ. ನಾನು ಕಳೆದ ಚುನಾವಣೆಯಲ್ಲಿ ಕೊನೇ ಕ್ಷಣದಲ್ಲಿ ರಾಮನಗರ ನಿಲ್ಲಬೇಕು ಅಂತಾ ತೀರ್ಮಾನ ಮಾಡಿದ್ದೆ. ನಾನು ಬೇರೆ ತೀರ್ಮಾನ ಕೂಡ ತೆಗೆದುಕೊಳ್ಳಬಹುದಿತ್ತು. ಆದ್ರೆ ಈ ಕ್ಷೇತ್ರದ ಜನ ನಮ್ಮ ಕುಟುಂಬದ ಮೇಲೆ ಇಟ್ಟಿರೋ ಪ್ರೀತಿಗೆ ನಾವು ಜಿಲ್ಲೆ ಬಿಡಬಾರದು ಅಂತಾ ಇಲ್ಲೆ ಸ್ಪರ್ಧೆ ಮಾಡಿದೆ. ನಾವೇನಾದ್ರೂ ಜಿಲ್ಲೆ ಬಿಟ್ಟು ಹೋದ್ರೆ ಜಿಲ್ಲೆಯ ಜನರ ಪರಿಸ್ಥಿತಿ ಏನು ಅಂತಾ ಯೋಚನೆ ಮಾಡಿದ್ವಿ. ನಾನು ಬಹಳ ಚಿಕ್ಕೋನು, ಇಲ್ಲಿ ಸಾಕಷ್ಟು ಹಿರಿಯರಿದ್ದಾರೆ‌. ನನ್ನಿಂದ ಏನಾದ್ರೂ ತಪ್ಪು ನಡೆದಿದ್ರೆ ಕ್ಷಮೆ ಕೇಳ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಅವಧಿಗೂ ಮುನ್ನ ಅರ್ಧದಷ್ಟು ಭರ್ತಿಯಾದ ಟಿಬಿ ಡ್ಯಾಂ – ಜು.1ಕ್ಕೆ ಕಾಲುವೆಗೆ ನೀರು ಬಿಡುಗಡೆ ಸಾಧ್ಯತೆ

    ದಯಮಾಡಿ ನನ್ನನ್ನು ಕ್ಷಮಿಸಿ ಬಿಡಿ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಇದೇ ರೀತಿ, ಬೆಂಕಿ ಜ್ವಾಲೆ ಇತ್ತು. ನನ್ನ ಚುನಾವಣೆ ಇಡೀ ರಾಜ್ಯ ನೋಡುತ್ತೆ. ರಾಜ್ಯದ ಜನರಿಗೆ ನನ್ನ ಸೋಲಿನ ವಾಸ್ತವದ ಅರಿವಿಲ್ಲ. ನನ್ನ ಸೋಲಿನ ಬಗ್ಗೆ ಈಗ ಮಾತಾಡೊಲ್ಲ, ಯಾಕೆಂದ್ರೆ ನಾವು ಎರಡು ಪಕ್ಷದವರು ಮೈತ್ರಿ ಮಾಡಿಕೊಂಡು ರಾಜ್ಯದ ಸಮಗ್ರ ಅಭಿವೃದ್ಧಿಗೆ ಒಂದಾಗಿದ್ದೇವೆ‌ ಎಂದ ನಿಖಿಲ್ ಕುಮಾರಸ್ವಾಮಿ, ಮುಂದಿನ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧೆ ಬಗ್ಗೆ ಕಾರ್ಯಕರ್ತರ ಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಸೈಬರ್‌ ಪೊಲೀಸರ ಸೋಗಿನಲ್ಲಿ ಬ್ಲ್ಯಾಕ್‌ಮೇಲ್‌ – ಖರ್ತನಾಕ್‌ ಲೇಡಿ ಸೇರಿ 7 ಲಕ್ಷ ಸುಲಿಗೆ ಮಾಡಿದ್ದ ಐವರು ಅರೆಸ್ಟ್‌