Tag: ಚೌ ಚೌ ಬಾತ್‌

  • ‘ಚೌ ಚೌ ಬಾತ್’: ಡಿಜಿಟಲ್ ಥಿಯೇಟರಿನಲ್ಲಿ ರಿಲೀಸ್

    ‘ಚೌ ಚೌ ಬಾತ್’: ಡಿಜಿಟಲ್ ಥಿಯೇಟರಿನಲ್ಲಿ ರಿಲೀಸ್

    ಕೇಂಜ ಚೇತನ್ ಕುಮಾರ್ (Kenj Chetan)  ನಿರ್ದೇಶನದ `ಚೌ ಚೌ ಬಾತ್’ (Chow Chow Bath) ಈ ವರ್ಷ ಬಿಡುಗಡೆಗೊಂಡಿರುವ ಚೆಂದದ ಚಿತ್ರಗಳಲ್ಲೊಂದಾಗಿ ಗುರುತಿಸಿಕೊಂಡಿದೆ. ಒಂದಷ್ಟು ಪ್ರಯೋಗಾತ್ಮಕ ಅಂಶಗಳು, ಪ್ರೇಕ್ಷಕರನ್ನೇ ತನ್ನೊಳಗಿಳಿಸಿಕೊಂಡು ಕರೆದೊಯ್ಯುವ ಗುಣದ ದೃಷ್ಯದಿಂದ ಕಳೆಗಟ್ಟಿಕೊಂಡಿದ್ದ ಚಿತ್ರ `ಚೌ ಚೌ ಬಾತ್’. ಅತ್ಯತ್ತಮ ವಿಮರ್ಶೆ ಪಡೆದಿದ್ದ ಈ ಸಿನಿಮಾವನ್ನು ನೋಡಿದ ಪ್ರೇಕ್ಷಕರೆಲ್ಲ ಥ್ರಿಲ್ ಆಗಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿಯೂ ಪ್ರದರ್ಶನಗೊಂಡಿದ್ದ ಚೌ ಚೌ ಬಾತ್ ಇದೀಗ ಸಿನಿ ಬಜಾರ್ ಎಂಬ ಡಿಜಿಟಲ್ ಥಿಯೇಟರಿನಲ್ಲಿ ಬಿಡುಗಡೆಗೊಂಡಿದೆ.

    ಸಿನಿ ಬಜಾರ್ ನಲ್ಲಿ ಬಿಡುಗಡೆಗೊಂಡ ಮೊದಲ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆ ಪಡೆದುಕೊಂಡಿದೆ. ಇನ್ನು ಐವತ್ತು ದಿನಗಳ ಕಾಲ ಈ ಸಿನಿಮಾ ಸಿನಿ ಬಜಾರಿನಲ್ಲಿ ಪ್ರದರ್ಶನ ಕಾಣಲಿದೆ. ಆರಂಭದಿಂದಲೂ ಚೌ ಚೌ ಬಾತ್ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಕೊಂಡಿತ್ತು. ಈ ಕಾರಣದಿಂದಲೇ ಈ ಸಿನಿಮಾ ಯಶ ಕಂಡಿದ್ದೀಗ ಇತಿಹಾಸ. ನಿರ್ದೇಶಕ ಕೇಂಜ ಚೇತನ್ ಕುಮಾರ್ ಅಂಥಾದ್ದೊಂದು ಸಮ್ಮೋಹಕ ಶೈಲಿಯಲ್ಲಿ ಈ ಚಿತ್ರವನ್ನು ಕಟ್ಟಿಕೊಟ್ಟಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ ಪ್ರೇಕ್ಷಕರಿಂದಲೇ ಈ ಚಿತ್ರ ಮೆಚ್ಚುಗೆ ಗಳಿಸಿಕೊಂಡಿತ್ತು. ಇಂಥಾ ಸದಭಿಪ್ರಾಯ ಕೇಳಿ ಸಿನಿಮಾ ಮಂದಿರಗಳಲ್ಲಿ ನೋಡಬೇಕಂದುಕೊಂಡು ಸಾಧ್ಯವಾಗದವರು, ಸಿನಿ ಬಜಾರ್ ಡಾಟ್ ಕಾಮ್ ನಲ್ಲಿ ಚೌ ಚೌ ಬಾತ್ ನ ಅಸಲೀ ಸವಿಯನ್ನು ಆಸ್ವಾದಿಸುವ ಅವಕಾಶವೀಗ ಒದಗಿ ಬಂದಿದೆ.

     

    ಇದು ಹೈಪರ್ ಲಿಂಕ್ ರೊಮ್ಯಾಂಟಿಕ್ ಜಾನರಿನ ಚಿತ್ರ. ಕನ್ನಡದ ಮಟ್ಟಿಗಿದು ಅಪರೂಪದ ಜಾನರ್. ಮೂರು ವಿಭಿನ್ನ ಪ್ರೇಮ ಕಥನಗಳನ್ನು ತೆರೆದಿಡುವ ಚೌ ಚೌ ಬಾತ್ ಎಲ್ಲ ವರ್ಗದ ಪ್ರೇಕ್ಷಕರನ್ನೂ ಸೆಳೆಯುವಂತಿದೆ. ಹೀಗೊಂದು ಅಭಿಪ್ರಾಯ ನೋಡಿದವರಿಂದಲೇ ಮೂಡಿಕೊಂಡಿದೆ. ಸನಾತನಯ್ ಪಿಕ್ಚರ್ಸ್ ಮತ್ತು ಕಾಮನಧೇನು ಫಿಲಂಸ್ ಅರ್ಪಿಸುವ ಈ ಚಿತ್ರ ಹಾರಿಜಾನ್ ಮೂವೀಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿದೆ. ಹೇಮಂತ್ ಜೋಯಿಸ್ ಸಂಗೀತ ನಿರ್ದೇಶನ, ರುದ್ರಮುನಿ ಬೆಳಗೆರೆ ಛಾಯಾಗ್ರಹಣ, ಪ್ರಮೋದ್ ಮರವಂತೆ ಗೀತ ಸಾಹಿತ್ಯವಿದೆ. ಸಾಗರ್ ಗೌಡ, ಸಂಕಲ್ಪ್ ಶರ್ಮಾ, ಸುಶ್ಮಿತಾ ಭಟ್, ಅರುಣಾ ಬಾಲರಾಜ್, ಧನುಶ್ ಬೈಕಂಪಾಡಿ, ಗೀತಾ ಬಂಗೇರ, ಪ್ರಕರ್ಷ ಶಾಸ್ತ್ರಿ ಮುಂತಾದವರ ತಾರಾಗಣವನ್ನು ಈ ಸಿನಿಮಾ ಒಳಗೊಂಡಿದೆ. ಸತೀಶ್ ಎಸ್.ಬಿ, ಸಂಕಲ್ಪ್ ಶರ್ಮಾ, ಪೂರ್ಣಚಂದ್ರ, ದ ಜೋಯ್ಸ್ ಪ್ರಾಜೆಕ್ಟ್, ಅಶೋಕ್ ಡಿ ಶೆಟ್ಟಿ, ಓಂ ಸ್ಟುಡಿಯೋ ಸಹ ನಿರ್ಮಾಣದೊಂದಿಗೆ `ಚೌ ಚೌ ಬಾತ್’ ಚಿತ್ರ ಮೂಡಿ ಬಂದಿದೆ.

  • `ಚೌ ಚೌ ಬಾತ್’ ಟ್ರೈಲರ್ ಬಿಡುಗಡೆ: ಅನೇಕ ಮೊದಲಗಳ ಸಾಕ್ಷಿಯಾಗಿ ಬರಲಿದೆ ಚಿತ್ರ

    `ಚೌ ಚೌ ಬಾತ್’ ಟ್ರೈಲರ್ ಬಿಡುಗಡೆ: ಅನೇಕ ಮೊದಲಗಳ ಸಾಕ್ಷಿಯಾಗಿ ಬರಲಿದೆ ಚಿತ್ರ

    ಕನ್ನಡದಲ್ಲಿ ಮತ್ತೊಂದು ಹೊಸ ಭರವಸೆಯ ಸಿನಿಮಾ ತಯಾರಾಗಿದೆ. ಸಿನಿಮಾದ ಭಾಗವಾಗಿ ಇಂದು ಕೇಂಜ ಚೇತನ್ ಕುಮಾರ್ ನಿರ್ದೇಶನದ `ಚೌ ಚೌ ಬಾತ್’ ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ. ಇಂದು ಬೆಳಗ್ಗೆ ಬೆಂಗಳೂರಿನ ಮಲ್ಲೇಶ್ವರದ ಎಸ್ ಆರ್ ವಿ ಥಿಯೇಟರ್ ನಲ್ಲಿ ಜರುಗಿದ  ಪತ್ರಿಕಾ ಗೋಷ್ಠಿಯಲ್ಲಿ  ಈ ಟ್ರೈಲರ್ ಅನ್ನು ಚಿತ್ರದ ನಿರ್ಮಾಪಕರಾದ ಸತೀಶ್ ಎಸ್.ಬಿ ತಮ್ಮ ಧರ್ಮಪತ್ನಿಯೊಂದಿಗೆ ಲೋಕಾರ್ಪಣೆಗೊಳಿಸಿದ್ದಾರೆ.

    ಬಿಗ್ ಬಾಸ್‍ಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ಅವಿನಾಶ್ ಶೆಟ್ಟಿ ಈ ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ಇನ್ನುಳಿದಂತೆ ಗೀತಸಾಹಿತಿ ಪ್ರಮೋದ್ ಮರವಂತೆ, ಸಂಗೀತ ನಿರ್ದೇಶಕ ಹೇಮಂತ್ ಜೋಯಿಸ್, ಛಾಯಾಗ್ರಾಹಕ ರುದ್ರಮೂರ್ತಿ ಬೆಳಗೆರೆ, ಸಾಗರ್ ಗೌಡ, ಪ್ರಕರ್ಷ ಶಾಸ್ತ್ರಿ, ಗೀತಾ ಬಂಗೇರ, ಹರ್ಷವರ್ಧನ್, ಪ್ರಸಾದ್, ನಿಶಾಂತ್ ಶೆಟ್ಟಿ ಸೇರಿದಂತೆ ಚಿತ್ರತಂಡ ಈ ಪತ್ರಿಕಾ ಗೋಷ್ಠಿಯಲ್ಲಿ ಭಾಗಿಯಾಗಿತ್ತು.

    ಈಗೊಂದಷ್ಟು ಕಾಲದಿಂದ ಚೌ ಚೌ ಬಾತ್ ಚಿತ್ರ ಸುದ್ದಿ ಕೇಂದ್ರದಲ್ಲಿದೆ. ಇದೀಗ ಬಿಡುಗಡೆಗೊಂಡಿರುವ ಟ್ರೈಲರ್ ಮೂಲಕ ನಿರೀಕ್ಷೆ ಮತ್ತಷ್ಟು ತೀವ್ರವಾಗುವ ಸಾಧ್ಯತೆಯಿದೆ. ಈ ಪತ್ರಿಕಾ ಗೋಷ್ಠಿಯಲ್ಲಿ ನಿರ್ದೇಶಕ ಕೇಂಜ ಚೇತನ್ ಕುಮಾರ್ ಅಂಥಾ ವಿಶೇಷವಾದ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

    ಅಂದಹಾಗೆ, ಚೌ ಚೌ ಬಾತ್ ಕನ್ನಡದ ಮಟ್ಟಿಗೆ ಅನೇಕ ಮೊದಲಗಳನ್ನು, ಹೊಸತನವನ್ನು ಬಚ್ಚಿಟ್ಟುಕೊಂಡಿರುವ ಸಿನಿಮಾ. ಅದು ಕನ್ನಡದ ಮೊಟ್ಟ ಮೊದಲ ಹೈಪರ್ ಲಿಂಕ್ ರಾಮ್‌ ಕಾಮ್‌ ಮಾದರಿಯ ಚಿತ್ರವೆಂಬ ಮಾಹಿತಿಯನ್ನೂ ಕೂಡಾ ನಿರ್ದೇಶಕರು ತೆರೆದಿಟ್ಟಿದ್ದಾರೆ. ಸನಾತನಯ್ ಪಿಕ್ಚರ್ಸ್ ಮತ್ತು ಕಾಮಧೇನು ಫಿಲಂಸ್ ಅರ್ಪಿಸುವ ಈ ಚಿತ್ರ ,ಹಾರಿಜಾನ್ ಮೂವೀಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿದೆ. ಹೇಮಂತ್ ಜೋಯಿಸ್ ಸಂಗೀತ ನಿರ್ದೇಶನ, ರುದ್ರಮೂರ್ತಿ ಬೆಳಗೆರೆ ಛಾಯಾಗ್ರಹಣ, ಪ್ರಮೋದ್ ಮರವಂತೆ ಗೀತ ಸಾಹಿತ್ಯವಿರುವ ಈ ಚಿತ್ರದ ಸಂಕಲನದ ಜವಾಬ್ದಾರಿಯನ್ನು ಖುದ್ದು ಕೇಂಜ ಚೇತನ್ ಕುಮಾರ್ ಅವರೇ ನಿಭಾಯಿಸಿದ್ದಾರೆ.

    ಸಾಗರ್ ಗೌಡ, ಸಂಕಲ್ಪ್ ಶರ್ಮಾ, ಸುಶ್ಮಿತಾ ಭಟ್, ಅರುಣಾ ಬಾಲರಾಜ್, ಧನುಶ್ ಬೈಕಂಪಾಡಿ, ಗೀತಾ ಬಂಗೇರ, ಪ್ರಕರ್ಷ ಶಾಸ್ತ್ರಿ ಮುಂತಾದವರ ತಾರಾಗಣವನ್ನು ಈ ಸಿನಿಮಾ ಒಳಗೊಂಡಿದೆ. ಸತೀಶ್ ಎಸ್.ಬಿ, ಸಂಕಲ್ಪ್ ಶರ್ಮಾ, ಪೂರ್ಣಚಂದ್ರ, ದ ಜೋಯ್ಸ್ ಪ್ರಾಜೆಕ್ಟ್, ಅಶೋಕ್ ಡಿ ಶೆಟ್ಟಿ, ಓಂ ಸ್ಟುಡಿಯೋ ಸಹ ನಿರ್ಮಾಣದೊಂದಿಗೆ `ಚೌ ಚೌ ಬಾತ್’ ಚಿತ್ರ ಮೂಡಿ ಬಂದಿದೆ.

  • ಪ್ರೀತಿಯ ಹೊಸ ಮಗ್ಗುಲಿಗೆ ಕಣ್ಣಾದ `ಚೌ ಚೌ ಬಾತ್’ ಸಿನಿಮಾ

    ಪ್ರೀತಿಯ ಹೊಸ ಮಗ್ಗುಲಿಗೆ ಕಣ್ಣಾದ `ಚೌ ಚೌ ಬಾತ್’ ಸಿನಿಮಾ

    – ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ ಭಿನ್ನ ಕಥಾನಕ

    ಒಂದು ಕಡೆಯಿಂದ ಪ್ಯಾನ್ ಇಂಡಿಯಾ ಸಿನಿಮಾಗಳ ಭರಾಟೆ ಜೋರಾಗಿರುವಾಗಲೇ, ಮತ್ತೊಂದು ದಿಕ್ಕಿನಲ್ಲಿ ಕಂಟೆಂಟ್‌ನ ಬಲದಿಂದಲೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಬಲ್ಲ ಒಂದಷ್ಟು ಸಿನಿಮಾಗಳು ತಯಾರಾಗಿವೆ. ಹೊಸತನ, ಪ್ರಯೋಗಾತ್ಮಕ ಗುಣಗಳಿಂದಾಗಿ ಈ ಬಗೆಯ ಸಿನಿಮಾಗಳು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ಸು ಕಾಣುತ್ತಿದೆ. ಹೀಗೆಯೇ ಹೊಸ ಪ್ರಕಾರ, ಭಿನ್ನ ಕಥೆಯೊಂದಿಗೆ ರೆಡಿಯಾಗಿರುವ ಚಿತ್ರ ಚೌ ಚೌ ಬಾತ್. ಈಗಾಗಲೇ ಪ್ರೇಮ ಗೀಮ ಜಾನೆ ದೋ, ದೇವರು ಬೇಕಾಗಿದ್ದಾನೆ ಎಂಬ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದ ಪ್ರತಿಭಾನ್ವಿತ ನಿರ್ದೇಶಕ ಕೆಂಜ ಚೇತನ್ ಕುಮಾರ್ ಈ ಸಿನಿಮಾದ ಸಾರಥ್ಯ ವಹಿಸಿಕೊಂಡಿದ್ದಾರೆ. ಯಾವ ಸದ್ದೂ ಇಲ್ಲದೆ ಚಿತ್ರೀಕರಣ ಮುಗಿಸಿಕೊಂಡಿರೋ ಈ ಚಿತ್ರವೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಇದೀಗ `CHOW CHOW ಬಾತ್’ ತನ್ನೊಡಲಿನ ಹೊಸತನಗಳ ಮೂಲಕವೇ ಸದ್ದು ಮಾಡುತ್ತಿದೆ.

    ಉಡುಪಿ (Udupi) ಮೂಲದವರಾದ ನಿರ್ದೇಶಕ ಕೆಂಜ ಚೇತನ್ ಕುಮಾರ್ (Kenja Chethan Kumar), ಬದುಕಿಗೂ ಆಸರೆಯಾಗಬೇಕು, ಸಿನಿಮಾಕ್ಕೂ ಪೂರಕವಾಗಿರಬೇಕೆಂಬ ಉದ್ದೇಶದಿಂದಲೇ ಆರಂಭಿಕವಾಗಿ ವೀಡಿಯೋ ಎಡಿಟಿಂಗ್ ಪಟ್ಟುಗಳನ್ನು ಕಲಿತುಕೊಂಡು ಕನ್ನಡದ ಪ್ರತಿಷ್ಟಿತ ಸುದ್ದಿ ವಾಹಿನಿಗಳಲ್ಲಿ ಹಲವಾರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. ಬಿಗ್ ಬಾಸ್ ಸೀಸನ್ 1ರಲ್ಲಿ ಕಾರ್ಯ ನಿರ್ವಹಿಸಿ, ವಾಹಿನಿಯ ಭಾಗವಾಗಿ ದುಡಿದಿದ್ದರು. ಬದುಕು ಕಂಫರ್ಟ್ ಜೋನಿನಲ್ಲಿದ್ದಾಗಲೇ ತನ್ನ ಕನಸಾದ ಸಿನಿಮಾ ನಿರ್ದೇಶನಕ್ಕಿಳಿದ ಅವರು ಈಗಾಗಲೇ ಎರಡು ವಿಭಿನ್ನ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಪ್ರೇಕ್ಷಕರನ್ನು ಸೆಳೆದುಕೊಂಡಿದ್ದಾರೆ. ಅವರ ಮೂರನೇ ಮಹಾ ಕನಸು `ಚೌ ಚೌ ಬಾತ್’. ಇದನ್ನೂ ಓದಿ: ನಿಮ್ಮ ಅಭಿನಯ- ವ್ಯಕ್ತಿತ್ವ ಎರಡು ಅದ್ಭುತ: ಅನುಪಮ್ ಖೇರ್ ಹೊಗಳಿದ ಶಿವಣ್ಣ

    ಶೀರ್ಷಿಕೆ ಕೇಳಿದಾಕ್ಷಣವೇ ಇದು ಯಾವ ಜಾನರಿನ ಚಿತ್ರ ಕಥೆ ಯಾವ ಸ್ವರೂಪದ್ದು ಎಂಬಂಥಾ ಪ್ರಶ್ನೆಗಳು ಕಾಡುವುದು ಸಹಜ. ಈ ಬಗ್ಗೆ ಚಿತ್ರತಂಡ ಒಂದಷ್ಟು ಇಂಟರೆಸ್ಟಿಂಗ್ ಸಂಗತಿಗಳನ್ನು ಬಿಟ್ಟು ಕೊಡುತ್ತದೆ. ಆ ಪ್ರಕಾರವಾಗಿ ಹೇಳೋದಾದರೆ, ಇದೊಂದು ಪ್ರೇಮ ಕಥಾನಕ. ಹಾಗಂತ ಈ ಚಿತ್ರವನ್ನು ಸಿದ್ಧಸೂತ್ರಗಳ ಚೌಕಟ್ಟಿನಲ್ಲಿ ಬಂಧಿಸುವಂತಿಲ್ಲ. ಯಾಕೆಂದರೆ, ಹೊಸತನ ಮತ್ತು ಪ್ರಯೋಗಾತ್ಮಕ ಅಂಶಗಳೊಂದಿಗೆ ಚೇತನ್ ಕುಮಾರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಹೈಪರ್ ಲಿಂಕ್ ರೊಮ್ಯಾಂಟಿಕ್ ಕಾಮಿಡಿ ಎಂಬ ವಿಶೇಷ ಜಾನರ್‌ನ ಚಿತ್ರ ಈ ಚೌ ಚೌ ಬಾತ್. ತಮಿಳು ಸೇರಿದಂತೆ ಕೆಲವೇ ಕೆಲ ಸಿನಿಮಾಗಳು ಈ ಜಾನರ್‌ನಲ್ಲಿ ಮೂಡಿ ಬಂದಿವೆ. ಸಮ್ಮೋಹಕ ಗೆಲುವು ದಾಖಲಿಸಿವೆ. ಕನ್ನಡದ ಮಟ್ಟಿಗೆ ಹೇಳೋದಾದರೆ ಇದು ಆ ಜಾನರಿನ ಮೊದಲ ಚಿತ್ರ.

    ಇಲ್ಲಿ ಮೂರು ಭಿನ್ನವಾದ ಲವ್ ಸ್ಟೋರಿಗಳಿವೆ. ಅದರಲ್ಲಿ ಮೂವರು ನಾಯಕರು ಮತ್ತು ಮೂವರು ನಾಯಕಿಯರಿರುತ್ತಾರೆ. ಆ ಕಥೆಗಳಿಗೆಲ್ಲ ಒಂದಕ್ಕೊಂದು ಸಂಬಂಧವಿರುತ್ತದೆ. ಅಲ್ಲಿ ಯಾರೂ ನಿರೀಕ್ಷಿಸದ ತಿರುವು, ರೋಮಾಂಚನಗೊಳಿಸುವ ಸರ್ಪ್ರೈಸ್‌ಗಳು ಮತ್ತು ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವ ಅಂಶಗಳು ದಂಡಿಯಾಗಿ ಎದುರುಗೊಳ್ಳಲಿವೆ. ಈ ಚಿತ್ರದಲ್ಲಿ ಪ್ರಕರ್ಷ ಶಾಸ್ತ್ರಿ, ಸುಶ್ಮಿತಾ ಭಟ್, ಗೀತಾ ಬಂಗೇರ, ಸಾಗರ್ ಗೌಡ, ಧನುಷ್, ಸಂಕಲ್ಪ, ಅರುಣಾ ಬಾಲರಾಜ್ ಮುಂತಾದವರು ಮುಖ್ಯ ಪಾತ್ರಗಳಿಗೆ ಜೀವ ತುಂಬಿದ್ದಾರೆ.

    ಹಾರಿಜಾನ್ ಮೂವೀಸ್ ಲಾಂಛನದಲ್ಲಿ ಚೌ ಚೌ ಬಾತ್ ನಿರ್ಮಾಣಗೊಂಡಿದೆ. ಸನಾತನೈ ಪಿಕ್ಚರ್ಸ್ ಸಂಸ್ಥೆ, ಓಂ ಸ್ಟುಡಿಯೋ, ಅವಿನಾಶ್ ಯು ಶೆಟ್ಟಿ, ಸತೀಶ್ ಎಸ್.ಬಿ ನಿರ್ಮಾಣದಲ್ಲಿ ಸಾಥ್ ಕೊಟ್ಟಿದೆ. ರುದ್ರಮುನಿ ಬೆಳೆಗೆರೆ ಛಾಯಾಗ್ರಹಣ, ಹೇಮಂತ್ ಜೋಯಿಸ್ ಸಂಗೀತ ನಿರ್ದೇಶನ, ಪ್ರಮೋದ್ ಮರವಂತೆ ಸಾಹಿತ್ಯ ಈ ಚಿತ್ರಕ್ಕಿದೆ. ಕಥೆ ಚಿತ್ರಕಥೆ ಸಂಭಾಷಣೆಯೊಂದಿಗೆ ನಿರ್ದೇಶನ ಮಾಡಿರುವ ಕೆಂಜ ಚೇತನ್ ಕುಮಾರ್ ಅವರೇ ಸಂಕಲನದ ಜವಾಬ್ದಾರಿಯನ್ನೂ ಹೊತ್ತುಕೊಂಡಿದ್ದಾರೆ. ಈಗಿನ ಟ್ರೆಂಡ್‌ಗೆ ತಕ್ಕಂತೆ, ಪ್ರೇಕ್ಷಕರ ಅಭಿರುಚಿಯನ್ನು ಗಮನದಲ್ಲಿಟ್ಟುಕೊಂಡೇ ಕೆಂಜ ಚೇತನ್ ಕುಮಾರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಇಷ್ಟರಲ್ಲಿಯೇ ಈ ಸಿನಿಮಾದ ಟ್ರೈಲರ್ ಕೂಡಾ ಲಾಂಚ್ ಆಗಲಿದೆ. ಅದರ ಬೆನ್ನಲ್ಲಿಯೇ ಬಿಡುಗಡೆ ದಿನಾಂಕವೂ ಘೋಷಣೆಯಾಗಲಿದೆ.