Tag: ಛತ್ರಪತಿ ಸಂಭಾಜಿನಗರ

  • Maharashtra: ಶಾಲೆಯಲ್ಲಿ ಬಿಸ್ಕೆಟ್ ತಿಂದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

    Maharashtra: ಶಾಲೆಯಲ್ಲಿ ಬಿಸ್ಕೆಟ್ ತಿಂದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

    ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ (Chhatrapati Sambhajinagar) ಜಿಲ್ಲೆಯ ಕೆಕೆಟ್ ಜಲಗಾಂವ್ ಗ್ರಾಮದ ಶಾಲೆಯಲ್ಲಿ ಬಿಸ್ಕೆಟ್ ತಿಂದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು (Students) ಅಸ್ವಸ್ಥರಾಗಿರುವ ಘಟನೆ ನಡೆದಿದೆ.

    ಶನಿವಾರ ಶಾಲೆಯಲ್ಲಿ ಪೌಷ್ಠಿಕ ಆಹಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಿಸ್ಕೆಟ್ ವಿತರಿಸಲಾಗಿತ್ತು. ಬಿಸ್ಕೆಟ್ (Biscuits) ತಿಂದ ನಂತರ ವಿದ್ಯಾರ್ಥಿಗಳಲ್ಲಿ ವಾಕರಿಕೆ ಮತ್ತು ವಾಂತಿಯಾಗಿ, ಕೆಲವೇ ಕ್ಷಣಗಳಲ್ಲಿ ಅಸ್ವಸ್ಥರಾಗಿದ್ದಾರೆ.

    ಸ್ಥಳಕ್ಕೆ ಆಗಮಿಸಿದ ಗ್ರಾಮದ ಮುಖ್ಯಸ್ಥರು ತಕ್ಷಣ ವಾಹನದ ವ್ಯವಸ್ಥೆ ಮಾಡಿ ವಿದ್ಯಾರ್ಥಿಗಳನ್ನು ನಗರದ ಆಸ್ಪತ್ರೆಗೆ ದಾಖಲಿಸದ್ದಾರೆ. ಇದನ್ನೂ ಓದಿ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ – ಸಿದ್ದರಾಮಯ್ಯ ಎದುರಿಸಲಿರೋ ಸಂಕಷ್ಟಗಳೇನು?

    ಶನಿವಾರ ಮುಂಜಾನೆ ಸುಮಾರು 8:30ಕ್ಕೆ ವಿದ್ಯಾರ್ಥಿಗಳನ್ನ ಆಸ್ಪತ್ರೆಗೆ ದಾಖಲಿಸಲಾಯಿತು. 257 ವಿದ್ಯಾರ್ಥಿಗಳಲ್ಲಿ ಫುಡ್ ಪಾಯಿಸನ್ ಆಗಿತ್ತು. ಅದರಲ್ಲಿ 153 ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. 7 ವಿದ್ಯಾರ್ಥಿಗಳ ಸ್ಥಿತಿ ಗಂಭೀರವಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಛತ್ರಪತಿ ಶಂಭಾಜಿನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ನಗರದ ವೈದ್ಯಾಧಿಕಾರಿ ಡಾ. ಬಾಬಾಸಾಹೇಬ್ ಘುಘೆ ತಿಳಿಸಿದ್ದಾರೆ.

    ಶಾಲೆಯಲ್ಲಿ ಒಟ್ಟು 296 ವಿದ್ಯಾರ್ಥಿಗಳಿದ್ದಾರೆ. ಸದ್ಯ ಪ್ರಕರಣ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ ನಿಂತಿರುವ ಅನುಮಾನ ಮೂಡಿಸುತ್ತಿದೆ: ವಿಜಯೇಂದ್ರ ಕಿಡಿ 

  • ರಾಮ ಮಂದಿರದ ಹೊರಗೆ ಗಲಾಟೆ- ಉದ್ರಿಕ್ತರಿಂದ ಪೊಲೀಸ್ ವಾಹನಕ್ಕೆ ಬೆಂಕಿ

    ರಾಮ ಮಂದಿರದ ಹೊರಗೆ ಗಲಾಟೆ- ಉದ್ರಿಕ್ತರಿಂದ ಪೊಲೀಸ್ ವಾಹನಕ್ಕೆ ಬೆಂಕಿ

    ಮುಂಬೈ: ಇಬ್ಬರ ನಡುವೆ ಗಲಾಟೆ ನಡೆದು, ನೆರೆದಿದ್ದ ಜನ ಕಲ್ಲು ತೂರಾಟ ನಡೆಸಿ ಖಾಸಗಿ ಹಾಗೂ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಛತ್ರಪತಿ ಸಂಭಾಜಿನಗರದ (Chhatrapati Sambhajinagar) ಕಿರದಪುರದ (Kiradpura) ರಾಮಮಂದಿರದ ಹೊರಗೆ ಬುಧವಾರ ರಾತ್ರಿ ನಡೆದಿದೆ.

    ಪೊಲೀಸರು ಅಶ್ರವಾಯು ಸಿಡಿಸಿ ಉದ್ರಿಕ್ತ ಗುಂಪನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ವಾಹನಗಳಿಗೆ ತಗುಲಿದ್ದ ಬೆಂಕಿಯನ್ನು ಮೂರು ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ ನಡೆಸಿ ಆರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮತದಾರರಿಗೆ ನಕಲಿ ಬಾಂಡ್ ಆಮಿಷ ಪ್ರಕರಣ – ಜೆಡಿಎಸ್ ಶಾಸಕ ಗೌರಿಶಂಕರಗೆ ಅನರ್ಹತೆಯ ಭೀತಿ

     

    ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ನಿಖಿಲ್ ಗುಪ್ತಾ ತಿಳಿಸಿದ್ದಾರೆ.

    ಔರಂಗಾಬಾದ್ (Aurangabad) ಸಂಸದ ಇಮ್ತಿಯಾಜ್ ಜಲೀಲ್ ರಾಮ ಮಂದಿರಕ್ಕೆ (Ram temple) ತೆರಳಿದ್ದ ವೀಡಿಯೋ ಒಂದನ್ನು ಎಐಎಂಐಎಂನ (AIMIM) ರಾಷ್ಟ್ರೀಯ ಕಾರ್ಪೋರೇಟರ್ ಮೊಹಮ್ಮದ್ ನಾಸಿರುದ್ದೀನ್ ಹಂಚಿಕೊಂಡಿದ್ದರು. ಇದನ್ನು ಕೆಲವು ಕಿಡಿಗೇಡಿಗಳು ದೇವಾಲಯದ ಮೇಲೆ ದಾಳಿ ಎಂದು ಬಿಂಬಿಸಿ ಹಂಚಿಕೊಂಡಿದ್ದರು.

    ಸುಳ್ಳು ಸುದ್ದಿಗಳನ್ನು ಪೊಲೀಸರು ಸಾಮಾಜಿಕ ಜಾಲತಾಣಗಳಿಂದ ತೆಗೆಸಿದ್ದು. ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಳ್ಳನೆಂದು ಶಂಕಿಸಿ ಹತ್ಯೆ- ಇಬ್ಬರ ಬಂಧನ