ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, ‘ಕರ್ವ’ ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಛೂ ಮಂತರ್’ (Choo Mantar) ಚಿತ್ರ ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು. ಈಗ ಸಿನಿಮಾ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ.
ಚಿತ್ರವನ್ನು ವೀಕ್ಷಿಸಿರುವ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು, ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಹಾರಾರ್ ಚಿತ್ರವಾಗಿದ್ದು, ಉತ್ತಮವಾಗಿ ಮೂಡಿಬಂದಿದೆ ಎಲ್ಲಾ ಭಾಷೆಗಳ ಜನರು ನೋಡುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಈಗ ದೇಶಾದ್ಯಂತ ಚುನಾವಣೆ ಕೂಡ ನಡೆಯುತ್ತಿದೆ. ಹಾಗಾಗಿ, ಸರಿಯಾದ ಸಮಯ ನೋಡಿಕೊಂಡು ಚಿತ್ರ ಬಿಡುಗಡೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಕಾರಣಗಳಿಂದ ನಮ್ಮ ಚಿತ್ರವನ್ನು ಮೇ 10 ರಂದು ಬಿಡುಗಡೆ ಮಾಡುತ್ತಿಲ್ಲ. ಮುಂದಿನ ದಿನಾಂಕವನ್ನು ಸದ್ಯದಲ್ಲೇ ತಿಳಿಸುತ್ತವೆ ಎಂದು ನಿರ್ಮಾಪಕ ತರುಣ್ ಶಿವಪ್ಪ ತಿಳಿಸಿದ್ದಾರೆ. .
ಈಗಾಗಲೇ ಟೀಸರ್, ಟ್ರೇಲರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ತಾರಾಬಳಗದಲ್ಲಿ ಶರಣ್ , ಚಿಕ್ಕಣ್ಣ, ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಂತಾದವರಿದ್ದಾರೆ.
ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿರುವ “ಛೂ ಮಂತರ್” ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.
ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, ಕರ್ವ ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಛೂ ಮಂತರ್ ಚಿತ್ರ ಇದೇ ಮೇ 10 ರಂದು ರಾಜ್ಯಾದ್ಯಂತ. ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್ ಹಾಗೂ ಪೋಸ್ಟರ್ ಗಳ ಮೂಲಕ “ಛೂ ಮಂತರ್” ಚಿತ್ರ ಜನರ ಮನ ತಲುಪಿದೆ. ಏಪ್ರಿಲ್ 19(ಶುಕ್ರವಾರ) ರಂದು ಟ್ರೇಲರ್ ಬರಲಿದ್ದು, ಚಿತ್ರ ಮೇ 10 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.
ಇದೊಂದು ಹಾರಾರ್ ಚಿತ್ರ. ಕನ್ನಡದಲ್ಲಿ ಸಾಕಷ್ಟು ಹಾರಾರ್ ಚಿತ್ರಗಳು ಬಂದಿದೆಯಾದರೂ ಇದು ಸ್ವಲ್ಪ ವಿಭಿನ್ನವಾಗಿದೆ. ಚಿತ್ರದ ಮೇಕಿಂಗ್ ನೋಡಿದಾಗ ಹಾಲಿವುಡ್ ಚಿತ್ರಗಳನ್ನು ನೋಡಿದ ಹಾಗೆ ಭಾಸವಾಗುತ್ತದೆ. ಶರಣ್ ಅವರ ಪಾತ್ರ ಕೂಡ ಈ ಹಿಂದಿನ ಚಿತ್ರಗಳಿಗಿಂತ ಬೇರೆ ರೀತಿಯಲ್ಲಿಯೇ ಇದೆ. ಉಪಾಧ್ಯಕ್ಷನಾಗಿ ಯಶಸ್ಸು ಕಂಡಿರುವ ಚಿಕ್ಕಣ್ಣ ಕೂಡ ಈ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ. ಮತ್ತೊಮ್ಮೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಈ ಚಿತ್ರದಲ್ಲಿ ಒಟ್ಟಾಗಿ ನೋಡಬಹುದು. ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಖ್ಯಭೂಮಿಕೆಯಲ್ಲಿದ್ದಾರೆ.
ಕರ್ವ ಚಿತ್ರದ ಮೂಲಕ ಭರವಸೆ ಮೂಡಿಸಿದ್ದ ನಿರ್ದೇಶಕ ನವನೀತ್ ಅವರಿಂದ ಮತ್ತೊಂದು ಸದಭಿರುಚಿಯ ಚಿತ್ರ ಬರುತ್ತಿದೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿರುವ “ಛೂ ಮಂತರ್” ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.
ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, ‘ಕರ್ವ’ ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಛೂ ಮಂತರ್’ ಚಿತ್ರ ಇದೇ ಏಪ್ರಿಲ್ 5 ರಂದು ರಾಜ್ಯಾದ್ಯಂತ. ಬಿಡುಗಡೆಯಾಗುತ್ತಿದೆ.
ಈಗಾಗಲೇ ಟೀಸರ್ ಮೂಲಕ ಮನೆಮಾತಾಗಿರುವ ಛೂ ಮಂತರ್ ಚಿತ್ರದ ಟ್ರೇಲರ್ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಇದೊಂದು ಹಾರಾರ್ ಚಿತ್ರವಾಗಿದ್ದು, ಈ ಹಿಂದೆ ಬಂದಿರುವ ಹಾರಾರ್ ಚಿತ್ರಗಳಿಗಿಂತ ಸ್ವಲ್ಪ ವಿಭಿನ್ನವಾಗಿದೆ. ಮೇಕಿಂಗ್ ನೋಡಿದಾಗ ಹಾಲಿವುಡ್ ಚಿತ್ರಗಳನ್ನು ನೋಡಿದ ಹಾಗೆ ಭಾಸವಾಗುತ್ತದೆ.
ಶರಣ್ ಅವರ ಪಾತ್ರ ಕೂಡ ಈ ಹಿಂದಿನ ಚಿತ್ರಗಳಿಗಿಂತ ಬೇರೆ ರೀತಿಯಲ್ಲಿಯೇ ಇದೆ. ಉಪಾಧ್ಯಕ್ಷನಾಗಿ ಯಶಸ್ಸು ಕಂಡಿರುವ ಚಿಕ್ಕಣ್ಣ ಕೂಡ ಈ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ. ಮತ್ತೊಮ್ಮೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸಮ್ಮಿಲನ ಈ ಚಿತ್ರದಲ್ಲಾಗಿದೆ. ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಖ್ಯಭೂಮಿಕೆಯಲ್ಲಿದ್ದಾರೆ.
ಕನ್ನಡ ಸಿನಿಮಾ ರಂಗದ ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಗುರುಕಿರಣ್ (Gurukiran) ಮತ್ತೆ ಬಣ್ಣ ಹಚ್ಚಿದ್ದಾರೆ. ಬರೋಬ್ಬರಿ ದಶಕದ ನಂತರ ಅವರು ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಶರಣ್ (Sharan) ನಟನೆಯ ಛೂ ಮಂತರ್ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದು, ಅದಕ್ಕೂ ಮುನ್ನ 2007ರಲ್ಲಿ ತೆರೆಕಂಡ ಏಕದಂತ ಸಿನಿಮಾದಲ್ಲಿ ಗುರುಕಿರಣ್ ನಟಿಸಿದ್ದರು.
ಶರಣ್ ಈ ಸಿನಿಮಾದ ಮೂಲಕ ನಗಿಸಿ, ಹೆದರಿಸೋಕೆ ಬರುತ್ತಿದ್ದು, ಟೀಸರ್ ಮೂಲಕ ಕಮಾಲ್ ಕೂಡ ಮಾಡಿದ್ದಾರೆ. ಮಾನಸ ತರುಣ್, ತರುಣ್ ಶಿವಪ್ಪ ನಿರ್ಮಾಣದಲ್ಲಿ `ಛೂ ಮಂತರ್’ ಸಿನಿಮಾ ಮೂಡಿ ಬಂದಿದೆ. ಸದ್ಯ `ಛೂ ಮಂತರ್’ (Choo Mantar) ಟೀಸರ್ ಹಾರರ್ ಝಲಕ್ ಪ್ರೇಕ್ಷಕರನ್ನ ಬಡಿದೆಬ್ಬಿಸಿದೆ. ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ನಟಿಸಿರುವ ಶರಣ್ ಅವರ ಹೊಸ ಅವತಾರ ಅಭಿಮಾನಿಗಳಿಗೆ ಇಷ್ಟವಾಗಿದೆ. ಇದನ್ನೂ ಓದಿ: ಅವಳಿ ಮಕ್ಕಳ ಮುದ್ದಾದ ಫೋಟೋ ಹಂಚಿಕೊಂಡ ಅಮೂಲ್ಯ
ಹಾಲಿವುಡ್ (Hollywood) ಸಿನಿಮಾಗಳನ್ನು ನೆನಪಿಸುವ ವಿಷ್ಯುವಲ್ಸ್ `ಛೂ ಮಂತರ್’ ಸಿನಿಮಾದಲ್ಲಿದೆ ಎನ್ನುವುದು ಟೀಸರ್ ನೋಡಿದ್ರೆ ಅರ್ಥವಾಗುತ್ತದೆ. ಪಾಳು ಬಿದ್ದ ಉತ್ತರಾಕಾಂಡದ ಮಾರ್ಗನ್ ಹೌಸ್ ಪ್ಯಾಲೇಸ್‌ನಲ್ಲಿ ಚಿತ್ರವಿಚಿತ್ರ ಘಟನೆಗಳು ನಡೆಯುತ್ತಿರುತ್ತದೆ. ಭೂತ ಪ್ರೇತ ಇರುವ ಆತಂಕ ಮನೆಯಲ್ಲಿರುವವರನ್ನು ಕಾಡುತ್ತಿರುತ್ತದೆ. ಆ ಪ್ರಶ್ನೆಗಳಿಗೆ ಉತ್ತರ ಹುಡುಕುವ ನಾಯಕನಾಗಿ ಶರಣ್ ಎಂಟ್ರಿ ಕೊಡುತ್ತಾರೆ. ಟೀಸರ್ ನೋಡುಗರನ್ನು ಕಥೆಯ ಒಳಗೆ ಕರೆದುಕೊಂಡು ಹೋಗುತ್ತದೆ.
ನಟ ಶರಣ್ ಈ ಸಿನಿಮಾದಲ್ಲಿ ಒಬ್ಬ ಮಂತ್ರವಾದಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಮೇಘನಾ ಗಾಂವ್ಕರ್, ಅದಿತಿ, ನಟ ಚಿಕ್ಕಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. `ಕರ್ವ’ (Karva) ಖ್ಯಾತಿಯ ನವನೀತ್ (Navaneeth) `ಛೂ ಮಂತರ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಯ ಮೇಲೆ ತೋರಿಸಲು ಹೊರಟಿದ್ದಾರೆ. ಸದ್ಯ ಸಿನಿಮಾದ ಪೋಸ್ಟರ್, ಟೀಸರ್ ಮೂಲಕ `ಛೂ ಮಂತರ್’ ಚಿತ್ರ ಸಂಚಲನ ಸೃಷ್ಟಿಸಿದೆ. ಸಿನಿಮಾ ಚಿತ್ರೀಕರಣ ಕೂಡ ಕಂಪ್ಲಿಟ್ ಆಗಿದ್ದು, ಸದ್ಯದಲ್ಲಿಯೇ ತೆರೆಯ ಮೇಲೆ ಅಬ್ಬರಿಸಲಿದೆ.
`ಗುರು ಶಿಷ್ಯರು’ (Guru Shishyaru) ಸಿನಿಮಾದಲ್ಲಿ ಪಿಟಿ ಮಾಸ್ಟರ್ ಆಗಿ ಗೆದ್ದಿದ್ದ ನಟ ಶರಣ್ `ಛೂ ಮಂತರ್’ (Choo Mantar Film) ಮಾಡಲು ಬರುತ್ತಿದ್ದಾರೆ. ಶರಣ್ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಬಿಗ್ ಗಿಫ್ಟ್ ನೀಡಿದ್ದಾರೆ. `ಛೂ ಮಂತರ್’ ಟೀಸರ್‌ನಿಂದ ಶರಣ್ ಸದ್ದು ಮಾಡ್ತಿದ್ದಾರೆ.
ನಟ ಶರಣ್ ನಗಿಸಿ, ಹೆದರಿಸೋಕೆ ಬರುತ್ತಿದ್ದಾರೆ. ನಟ ಶರಣ್ ಈಗ `ಛೂ ಮಂತರ್’ ಚಿತ್ರದ ಟೀಸರ್ ಮೂಲಕ ಕಮಾಲ್ ಮಾಡ್ತಿದ್ದಾರೆ. ಮಾನಸ ತರುಣ್, ತರುಣ್ ಶಿವಪ್ಪ ನಿರ್ಮಾಣದಲ್ಲಿ `ಛೂ ಮಂತರ್’ ಸಿನಿಮಾ ಮೂಡಿ ಬಂದಿದೆ. ಸದ್ಯ `ಛೂ ಮಂತರ್’ ಟೀಸರ್ ಹಾರರ್ ಝಲಕ್ ಪ್ರೇಕ್ಷಕರನ್ನ ಬಡಿದೆಬ್ಬಿಸಿದೆ. ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ನಟಿಸಿರುವ ಶರಣ್ ಅವರ ಹೊಸ ಅವತಾರ ಅಭಿಮಾನಿಗಳಿಗೆ ಇಷ್ಟವಾಗಿದೆ. ಇದನ್ನೂ ಓದಿ: `ಆರ್‌ಆರ್‌ಆರ್’ ಸಕ್ಸಸ್ ನಂತರ ಮುಂದಿನ ಚಿತ್ರದ ಬಗ್ಗೆ ಜ್ಯೂ.ಎನ್‌ಟಿಆರ್ ಪ್ರತಿಕ್ರಿಯೆ
ಹಾಲಿವುಡ್ (Hollywood) ಸಿನಿಮಾಗಳನ್ನು ನೆನಪಿಸುವ ವಿಷ್ಯುವಲ್ಸ್ `ಛೂ ಮಂತರ್’ ಸಿನಿಮಾದಲ್ಲಿದೆ ಎನ್ನುವುದು ಟೀಸರ್ ನೋಡಿದ್ರೆ ಅರ್ಥವಾಗುತ್ತದೆ. ಪಾಳು ಬಿದ್ದ ಉತ್ತರಾಕಾಂಡದ ಮಾರ್ಗನ್ ಹೌಸ್ ಪ್ಯಾಲೇಸ್‌ನಲ್ಲಿ ಚಿತ್ರವಿಚಿತ್ರ ಘಟನೆಗಳು ನಡೆಯುತ್ತಿರುತ್ತದೆ. ಭೂತ ಪ್ರೇತ ಇರುವ ಆತಂಕ ಮನೆಯಲ್ಲಿರುವವರನ್ನು ಕಾಡುತ್ತಿರುತ್ತದೆ. ಆ ಪ್ರಶ್ನೆಗಳಿಗೆ ಉತ್ತರ ಹುಡುಕುವ ನಾಯಕನಾಗಿ ಶರಣ್ ಎಂಟ್ರಿ ಕೊಡುತ್ತಾರೆ. ಟೀಸರ್ ನೋಡುಗರನ್ನು ಕಥೆಯ ಒಳಗೆ ಕರೆದುಕೊಂಡು ಹೋಗುತ್ತದೆ.
ನಟ ಶರಣ್ ಈ ಸಿನಿಮಾದಲ್ಲಿ ಒಬ್ಬ ಮಂತ್ರವಾದಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಮೇಘನಾ ಗಾಂವ್ಕರ್, ಅದಿತಿ, ನಟ ಚಿಕ್ಕಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. `ಕರ್ವ’ (Karva) ಖ್ಯಾತಿಯ ನವನೀತ್ (Navaneeth) `ಛೂ ಮಂತರ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಯ ಮೇಲೆ ತೋರಿಸಲು ಹೊರಟಿದ್ದಾರೆ.
ಸದ್ಯ ಸಿನಿಮಾದ ಪೋಸ್ಟರ್, ಟೀಸರ್ ಮೂಲಕ `ಛೂ ಮಂತರ್’ ಚಿತ್ರ ಸಂಚಲನ ಸೃಷ್ಟಿಸಿದೆ. ಸಿನಿಮಾ ಚಿತ್ರೀಕರಣ ಕೂಡ ಕಂಪ್ಲಿಟ್ ಆಗಿದ್ದು, ಸದ್ಯದಲ್ಲಿಯೇ ತೆರೆಯ ಮೇಲೆ ಅಬ್ಬರಿಸಲಿದೆ.
Live Tv
[brid partner=56869869 player=32851 video=960834 autoplay=true]
ತಮ್ಮ ಸಹಜ ನಟನೆಯ ಮೂಲಕ ಮನೆಮಾತಾಗಿರುವ ಶರಣ್ ನಾಯಕರಾಗಿ ನಟಿಸಿರುವ “ಛೂ ಮಂತರ್” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಕುತೂಹಲ ಮೂಡಿಸಿರುವ ಈ ಚಿತ್ರದ ಮೋಷನ್ ಪೋಸ್ಟರ್ ಎಲ್ಲರ ಗಮನ ಸೆಳೆಯುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.
ಇದು ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಐದನೇ ಸಿನಿಮಾ. ನಾನು ಹಾಗೂ ಮಾನಸ ತರುಣ್ ಈ ಚಿತ್ರದ ನಿರ್ಮಾಪಕರು. ನಿರ್ದೇಶಕ ನವನೀತ್ ಹಾಗೂ ನಾನು, ಉಪೇಂದ್ರ ಅವರ ಸಿನಿಮಾ ಮಾಡಬೇಕಿತ್ತು. ಕಾರಣಾಂತರದಿಂದ ಆ ಚಿತ್ರ ಸ್ವಲ್ಪ ಮುಂದೆ ಹೋಯಿತು. ಅಷ್ಟರಲ್ಲಿ ನವನೀತ್ ಹಾರಾರ್ ಜಾನರ್ ನ ಈ ಚಿತ್ರದ ಕಥೆ ಸಿದ್ಧಮಾಡಿಕೊಂಡಿದ್ದರು. ಶರಣ್ ಹಾಗೂ ತರುಣ್ ಸುಧೀರ್ ಅವರ ಬಳಿ ಕಥೆ ಹೇಳಿದ್ದರು. ಇಬ್ಬರಿಗೂ ಕಥೆ ಹಿಡಿಸಿತು. ಚಿತ್ರ ಆರಂಭವಾಯಿತು. ಬೆಂಗಳೂರು, ಮೈಸೂರು, ಉತ್ತರಾಖಂಡದಲ್ಲಿ ಚಿತ್ರೀಕರಣ ಮಾಡಿದ್ದೇವೆ. ಶರಣ್ ಅವರೊಟ್ಟಿಗೆ ಚಿಕ್ಕಣ್ಣ, ಅದಿತಿ, ಪ್ರಭುದೇವ, ಪ್ರಭು ಮುಂಡ್ಕರ್, ಮೇಘನಾ ಗಾಂವ್ಕರ್, ಧರ್ಮ, ರಜನಿ ಭಾರದ್ವಾಜ್ ಮುಂತಾದವರು ಅಭಿನಯಿಸಿದ್ದಾರೆ. ಅವಿನಾಶ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಚಂದನ್ ಶೆಟ್ಟಿ ಸಂಗೀತ ನೀಡಿದ್ದಾರೆ ಎಂದು ನಿರ್ಮಾಪಕ ತರುಣ್ ಶಿವಪ್ಪ ತಿಳಿಸಿದರು.
ಶರಣ್ ಸರ್ ಜೊತೆ ಕೆಲಸ ಮಾಡಿದ್ದು ಖುಷಿಯಿದೆ. “ಛೂ ಮಂತರ್” ಎಂದರೆ ಫ್ಯಾನ್ಸಿ ವರ್ಡ್. ಈ ಪದ ತುಂಬಾ ಕಡೆ ಬಳಸುತ್ತಾರೆ. ಚಿತ್ರದಲ್ಲಿ ಮೂರು ಕಥೆಗಳಿರುತ್ತದೆ. ಎಲ್ಲಾ ಕಥೆಗಳಿಗೂ ಮೂಲ ನಾಯಕ ಆಗಿರುತ್ತಾರೆ. ನನ್ನ ಕಥೆ ಕೇಳಿ ಶರಣ್ ಹಾಗೂ ತರುಣ್ ಸುಧೀರ್ ಇಷ್ಟಪಟ್ಟರು. ಕಂಪ್ಲೀಟ್ ಹಾರರ್ ಸಿನಿಮಾದಲ್ಲಿ ಶರಣ್ ಅವರು ಅಭಿನಯಿಸಿರಲಿಲ್ಲ. ಇದೇ ಮೊದಲು ಎನ್ನಬಹುದು. ನಮ್ಮ ಚಿತ್ರದಲ್ಲಿ ಹಾರಾರ್ ಜೊತೆ ಕಾಮಿಡಿ ಹಾಗೂ ಥ್ರಿಲ್ಲರ್ ಕೂಡ ಇದೆ ಎಂದರು “ಕರ್ವ” ಖ್ಯಾತಿಯ ನಿರ್ದೇಶಕ ನವನೀತ್. ಇದನ್ನೂ ಓದಿ: ರೂಪೇಶ್ ಗೆ ಬಿಗ್ ಬಾಸ್ ಕೊಟ್ಟಿದ್ದು 60 ಲಕ್ಷ: ನಿಜವಾಗಿಯೂ ಅವರ ಕೈಗೆ ಬರೋದೆಷ್ಟು?
ನಾನು ಚಿಕ್ಕವಯಸ್ಸಿನಿಂದಲೂ ಹಾರಾರ್ ಚಿತ್ರಗಳ ಅಭಿಮಾನಿ. ಸಾಕಷ್ಟು ಹಾರಾರ್ ಚಿತ್ರ ನೋಡಿದ್ದೇನೆ. ಈ ಚಿತ್ರದ ಕಥೆಯನ್ನು ನವನೀತ್ ಅದ್ಭುತವಾಗಿ ಮಾಡಿಕೊಂಡಿದ್ದಾರೆ. ಅವರ ಜೊತೆ ಕೆಲಸ ಮಾಡಿರುವುದು ಸಂತೋಷವಾಗಿದೆ. ನನ್ನ ಮಿತ್ರ ತರುಣ್ ಸುಧೀರ್ ಈ ಚಿತ್ರದ ಕಥೆ ಕೇಳಿ ಮೆಚ್ಚುಗೆ ಸೂಚಿಸಿದ್ದಾರೆ. ನನ್ನ ಹಾಗೂ ಚಿಕ್ಕಣ್ಣ ಅವರ ಕಾಂಬಿನೇಶನ್ ಎಂದರೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇರುತ್ತದೆ. ಈ ಚಿತ್ರದಲ್ಲೂ ನಮ್ಮ ಜೋಡಿ ಮೋಡಿ ಮಾಡಲಿದೆ. ಈ ಚಿತ್ರದ ಮತ್ತೊಂದು ಹೈಲೈಟ್ ಎಂದರೆ ಅನೂಪ್ ಅವರ ಛಾಯಾಗ್ರಹಣ ಎನ್ನುತ್ತಾರೆ ಶರಣ್.
ತರುಣ್ ಶಿವಪ್ಪ ನಿರ್ಮಾಣದ ಹಿಂದಿನ ಚಿತ್ರದಲ್ಲೇ ಅಭಿನಯಿಸಬೇಕಿತ್ತು, ಆದ್ರೆ ಆಗಿರಲಿಲ್ಲ. ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನನ್ನ ಪಾತ್ರ ಚೆನ್ನಾಗಿದೆ ಎಂದರು ಮೇಘನಾ ಗಾಂವ್ಕರ್. ನನಗೂ ಹಾರಾರ್ ಚಿತ್ರಗಳೆಂದರೆ ಪ್ರಾಣ. ನವನೀತ್ ಅವರ “ಕರ್ವ” ಚಿತ್ರವನ್ನು ಸಾಕಷ್ಟು ಸಲ ನೋಡಿದ್ದೇನೆ. ಶರಣ್ ಸರ್ ಜೊತೆ ನಟಿಸಿರುವ ಸಂತಸವಿದೆ. ಒಳ್ಳೆಯ ಪಾತ್ರ ನೀಡಿರುವ ನಿರ್ದೇಶಕ ಹಾಗೂ ನಿರ್ಮಾಪಕರಿಗೆ ಧನ್ಯವಾದ ಎಂದರು ಅದಿತಿ ಪ್ರಭುದೇವ. ಫಾರಿನ್ ರಿಟರ್ನ್ ಪಾತ್ರದಲ್ಲಿ ಅಭಿನಯಿಸಿರುವುದಾಗಿ ಪ್ರಭು ಮುಂಡ್ಕರ್, ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ಧರ್ಮ ಹೇಳಿದರು. ರಜನಿ ಭಾರದ್ವಾಜ್ ಸಹ “ಛೂ ಮಂತರ್” ಬಗ್ಗೆ ಮಾತನಾಡಿದರು.
Live Tv
[brid partner=56869869 player=32851 video=960834 autoplay=true]