Tag: ಜಂತಕಲ್ ಮೈನಿಂಗ್

  • ಸಂಕಷ್ಟದಲ್ಲಿದ್ದ ಮಾಜಿ ಸಿಎಂ ಬಚಾವ್ ಆದ ಸುದ್ದಿ-ಕುಮಾರಸ್ವಾಮಿಗೆ ಬಿಗ್ ರಿಲೀಫ್

    ಸಂಕಷ್ಟದಲ್ಲಿದ್ದ ಮಾಜಿ ಸಿಎಂ ಬಚಾವ್ ಆದ ಸುದ್ದಿ-ಕುಮಾರಸ್ವಾಮಿಗೆ ಬಿಗ್ ರಿಲೀಫ್

    ಬೆಂಗಳೂರು: ಜಂತಕಲ್ ಎಂಟರ್ ಪ್ರೈಸಸ್ ಗಣಿ ಪರವಾನಿಗೆ ನವೀಕರಣ ಪ್ರಕರಣದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಕುಮಾರಸ್ವಾಮಿಯವರ ಹೆಸರನ್ನು ಎಸ್‍ಐಟಿ ಪ್ರಕರಣದಿಂದ ಕೈ ಬಿಟ್ಟು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ವಿನೋದ್ ಘೋಯಲ್ ಹಾಗೂ ಗಗನ್ ಬಡೇರಿಯಾ ಮೇಲೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ ವಿನೋದ್ ಘೋಯಲ್‍ಗೆ ಭೂಮಿ ಮಂಜೂರು ಮಾಡುವಂತೆ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾಗೆ ಮೌಖಿಕವಾಗಿ ಆದೇಶಿಸಿದ್ದರಂತೆ. ಎಸ್‍ಐಟಿ ಅಧಿಕಾರಿಗಳು ಗಂಗಾರಾಮ್ ಬಡೇರಿಯಾ ಬಂಧಿಸಿದಾಗ ಈ ಹೇಳಿಕೆ ನೀಡಿದ್ದರು. ಕುಮಾರಸ್ವಾಮಿಯವರು ನನಗೆ ಹೇಳಿದ್ದಕ್ಕಾಗಿ ನಾನು ಭೂಮಿ ಮಂಜೂರು ಮಾಡಿದ್ದೆ ಎಂದಿದ್ದರು. ಬಡೇರಿಯಾ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರನ್ನು ಎಸ್‍ಐಟಿ ವಿಚಾರಣೆಗೆ ಒಳಪಡಿಸಿತ್ತು.

    ನಿರೀಕ್ಷಣಾ ಜಾಮೀನು ಪಡೆದಿದ್ದ ಕುಮಾರಸ್ವಾಮಿಯವರು ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ಬಳಿಕ ಕುಮಾರಸ್ವಾಮಿ ಅವರ ಮೇಲೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ. ಇನ್ನು ವಿನೋದ್ ಘೋಯಲ್ ಮೂಲಕ ತನ್ನ ಮಗ ಗಗನ್ ಬಡೇರಿಯಾ ಅಕೌಂಟ್‍ಗೆ ಗಂಗಾರಾಮ್ ಹಣ ಹಾಕಿಸಿಕೊಂಡಿದ್ದರು ಎನ್ನಲಾಗಿದೆ. ಗಂಗಾರಾಮ್ ಐಎಎಸ್ ಅಧಿಕಾರಿ ಆದ್ದರಿಂದ ಸರ್ಕಾರದ ಅನುಮತಿ ಕೇಳಬೇಕು. ಹೀಗಾಗಿ ಗಂಗಾರಾಮ್ ಬಡೇರಿಯಾ ಮೇಲೆ ದೋಷಾರೋಪ ಪಟ್ಟಿ ಹಾಕಲು ಸರ್ಕಾರದ ಅನುಮತಿ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ವಿನೋದ್ ಘೋಯಲ್ ಮತ್ತು ಗಗನ್ ಬಡೇರಿಯಾ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಇದನ್ನೂ ಓದಿ: ಏನಿದು ಜಂತಕಲ್ ಮೈನಿಂಗ್ ಕೇಸ್? ಎಚ್‍ಡಿಕೆ ಮೇಲಿನ ಆರೋಪ ಏನು?

    ಏನಿದು ಜಂತಕಲ್ ಮೈನಿಂಗ್ ಕೇಸ್?
    ವಿನೋದ್ ಗೋಯಲ್ ಮಾಲೀಕತ್ವದ ಜಂತಕಲ್ ಮೈನಿಂಗ್ ಎಂಟರ್ ಪ್ರೈಸಸ್ ಕಂಪನಿಗೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೀರೆಕಂದವಾಡಿ ಮತ್ತು ತನಿಗೇಹಳ್ಳಿಯಲ್ಲಿ ಅದಿರು ಸಾಗಿಸಲು ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಆಗಿನ ಸರ್ಕಾರ 2007ರಲ್ಲಿ ಅನುಮತಿ ನೀಡಿತ್ತು. ಕಪ್ಪು ಪಟ್ಟಿಯಲ್ಲಿದ್ದ ವಿನೋದ್ ಗೋಯಲ್ ಮಾಲೀಕತ್ವದ ಕಂಪನಿಗೆ ಅನುಮತಿ ನೀಡಿದ ಪರಿಣಾಮ ಪಾಕಿಸ್ತಾನಕ್ಕೆ ಅಕ್ರಮ ಅದಿರು ಸಾಗಾಟವಾಗಿದ್ದು, ರಾಜ್ಯದ ಬೊಕ್ಕಸಕ್ಕೆ 250 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಹಿಂದಿನ ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ವರದಿ ನೀಡಿದ್ದರು.

  • ಜಂತಕಲ್ ಮೈನಿಂಗ್ ಅಕ್ರಮದಲ್ಲಿ ಕುಮಾರಸ್ವಾಮಿ ಪಾತ್ರ ಇದೆ: ಸುಪ್ರೀಂಗೆ ಎಸ್‍ಐಟಿ

    ಜಂತಕಲ್ ಮೈನಿಂಗ್ ಅಕ್ರಮದಲ್ಲಿ ಕುಮಾರಸ್ವಾಮಿ ಪಾತ್ರ ಇದೆ: ಸುಪ್ರೀಂಗೆ ಎಸ್‍ಐಟಿ

    ನವದೆಹಲಿ: ಕಾಂಗ್ರೆಸ್, ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್‍ಗೆ ಭರ್ಜರಿ ಸಿದ್ಧತೆ ನಡೆಸಿದ್ದರೆ, ಇತ್ತ ಪ್ರಾದೇಶಿಕ ಪಕ್ಷ ಜೆಡಿಎಸ್ ಸಾರಥಿಗೆ ಕಂಟಕ ಎದುರಾಗಿದೆ. ಜಂತಕಲ್ ಮೈನಿಂಗ್ ಅಕ್ರಮ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ಸುಪ್ರೀಂ ಕೋರ್ಟ್ ಗೆ ಎಸ್‍ಐಟಿ ಮಧ್ಯಂತರ ವರದಿ ಸಲ್ಲಿಸಿದೆ.

    150 ಕೋಟಿ ರೂಪಾಯಿ ಕಿಕ್‍ಬ್ಯಾಕ್ ಪಡೆದಿರುವ ಆರೋಪದಲ್ಲಿ ಕುಮಾರಸ್ವಾಮಿ ಪಾತ್ರ ಇದೆ ಅಂತ ವರದಿಯಲ್ಲಿ ಎಸ್‍ಐಟಿ ಉಲ್ಲೇಖಿಸಿದೆ. ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಬಂಧನದ ಬಳಿಕ ಕೊಟ್ಟಿರುವ ಮಾಹಿತಿ, ಅವರ ಬಳಿಯಿದ್ದ ಡೈರಿಯಲ್ಲಿ ವಿನೋದ್ ಗೋಯಲ್, ಎನ್‍ಕೌಂಟರ್ ಸ್ಪೆಷಲಿಸ್ಟ್ ದಯಾನಂದ್ ಭೇಟಿ ಹಾಗೂ ಎಚ್‍ಡಿ ಕುಮಾರಸ್ವಾಮಿ ಅವರನ್ನು ಮಾತನಾಡಿಸಿರುವ ವಿಷಯ ಡೈರಿಯಲ್ಲಿ ನಮೂದಾಗಿರೋದಾಗಿ ತಿಳಿದು ಬಂದಿದೆ.

    ವರದಿಯಲ್ಲಿ ಏನಿದೆ?:
    ಜಂತಕಲ್ ಕೇಸ್‍ನಲ್ಲಿ ಕುಮಾರಸ್ವಾಮಿ ವಿರುದ್ಧ ಸಾಕ್ಷ್ಯಗಳು ಸಿಕ್ಕಿದೆ. ಕಳೆದ ವಾರ ವಿನೋದ್ ಗೋಯಲ್ ಅವರನ್ನು ಸಾಕ್ಷಿಗೆ ಒದಗಿಸಿದ್ದಾರೆ. ಗಂಗರಾಮ್ ಪುತ್ರ ಗಗನ್ ಬಡೇರಿಯಾ ಬಗ್ಗೆಯೂ ಕೂಡಾ ಸಾಕ್ಷಿಯಿದೆ. ಸಾಕ್ಷಿ ಸಿಕ್ಕಿದ ಬಳಿಕ ಮಧ್ಯಂತರ ವರದಿ ಸಲ್ಲಿಕೆ ಮಾಡುತ್ತಿದ್ದೇವೆ. 3 ತಿಂಗಳ ಒಳಗೆ ಸಂಪೂರ್ಣ ವರದಿ ಸಾಧ್ಯವಿಲ್ಲ, ಹಾಗಾಗಿ  ಪ್ರಕರಣವನ್ನ ಶೀಘ್ರವಾಗಿ ಇತ್ಯರ್ಥ ಮಾಡಲು ಕಷ್ಟ ಇರುವ ಕಾರಣ ತನಿಖೆಯ ಅವಧಿಯನ್ನು ವಿಸ್ತರಿಸಬೇಕೆಂದು ಎಸ್‍ಐಟಿ ಕೇಳಿಕೊಂಡಿದೆ.

    ಏನಿದು ಜಂತಕಲ್ ಮೈನಿಂಗ್ ಕೇಸ್?
    ವಿನೋದ್ ಗೋಯಲ್ ಮಾಲೀಕತ್ವದ ಜಂತಕಲ್ ಮೈನಿಂಗ್ ಎಂಟರ್ ಪ್ರೈಸಸ್ ಕಂಪೆನಿಗೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೀರೆಕಂದವಾಡಿ ಮತ್ತು ತನಿಗೇಹಳ್ಳಿಯಲ್ಲಿ ಅದಿರು ಸಾಗಿಸಲು ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಆಗಿನ ಸರ್ಕಾರ 2007ರಲ್ಲಿ ಅನುಮತಿ ನೀಡಿತ್ತು. ಕಪ್ಪು ಪಟ್ಟಿಯಲ್ಲಿದ್ದ ವಿನೋದ್ ಗೋಯಲ್ ಮಾಲೀಕತ್ವದ ಕಂಪೆನಿಗೆ ಅನುಮತಿ ನೀಡಿದ ಪರಿಣಾಮ ಪಾಕಿಸ್ತಾನಕ್ಕೆ ಅಕ್ರಮ ಅದಿರು ಸಾಗಾಟವಾಗಿದ್ದು, ರಾಜ್ಯದ ಬೊಕ್ಕಸಕ್ಕೆ 250 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಹಿಂದಿನ ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ವರದಿ ನೀಡಿದ್ದರು.

    ಎಚ್‍ಡಿಕೆಯ ಮೇಲಿರುವ ಆರೋಪ ಏನು?
    ಹಿಂದೆ ಕಂಪೆನಿಯು ಸಂಗ್ರಹಿಸಿದ್ದ ಅದಿರು ಸಾಗಣೆಕೆಯ ಲೈಸೆನ್ಸ್ ನವೀಕರಣಕ್ಕೆ ಎನ್‍ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ 3 ಬಾರಿ ಹೆಚ್‍ಡಿಕೆಯನ್ನು ಭೇಟಿ ಮಾಡಿದ್ದಾರೆ. ಇದಾದ ಬಳಿಕ ಗಂಗಾರಾಮ್ ಬಡೇರಿಯಾಗೆ ಲೈಸೆನ್ಸ್ ನವೀಕರಣಕ್ಕೆ ಎಚ್‍ಡಿಕೆ ಸೂಚಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

    ಎಸ್‍ಐಟಿಯಲ್ಲಿರುವ ಸಾಕ್ಷ್ಯಗಳು ಏನು?
    ಕೇಂದ್ರದ ಗಣಿ ಮತ್ತು ಪರಿಸರ ಸಚಿವಾಲಯ 2009ರ ಡಿ.1 ಮತ್ತು ಡಿ.24ರಂದು ಆದಿರು ಸಾಗಾಣಿಕೆಗೆ ಸಂಬಂಧಿಸಿದಂತೆ ಜಂತಕಲ್ ಮೈನಿಂಗ್ ಕಂಪೆನಿ ಅಥವಾ ಯಾವುದೇ ಇಲಾಖೆಯ ಜೊತೆ ಪತ್ರ ವ್ಯವಹಾರ ನಡೆಸಿಲ್ಲ ಎಂದು ಪತ್ರ ಬರೆದಿತ್ತು. ಈ ಅಂಶವನ್ನು ಸಂತೋಷ್ ಹೆಗ್ಡೆ ತಮ್ಮ ವರದಿಯಲ್ಲಿ ಪ್ರಸ್ತಾಪಿಸಿದ್ದರು. ಈ ಪತ್ರದ ಸಾಕ್ಷ್ಯವನ್ನು ಇಟ್ಟುಕೊಂಡು ಎಸ್‍ಐಟಿ ಕೇಂದ್ರವೇ ಅನುಮತಿ ನೀಡದೇ ಇರುವಾಗ ಈ ಕಂಪೆನಿ ಆದಿರು ಸಾಗಾಟ ಮಾಡಲು ಅನುಮತಿ ಸಿಕ್ಕಿದ್ದು ಹೇಗೆ ಎಂದು ತನಿಖೆ ನಡೆಸಲು ಮುಂದಾಗಿದೆ.

    ಎಫ್‍ಐಆರ್‍ನಲ್ಲಿ ಯಾರ ಹೆಸರಿದೆ?
    ಎಸ್‍ಐಟಿ ಹೊಸದಾಗಿ ದಾಖಲಿಸಿರೋ ಎಫ್‍ಐಆರ್‍ನಲ್ಲಿ 1. ಎಸ್.ಎಂ ಕೃಷ್ಣ, 2. ಎನ್ ಧರ್ಮಸಿಂಗ್, 3. ಹೆಚ್.ಡಿ. ಕುಮಾರಸ್ವಾಮಿ, 4. ಡಾ.ಬಸಪ್ಪ ರೆಡ್ಡಿ, 5. ಗಂಗಾರಮ್ ಬಡೇರಿಯಾ (ಐಎಎಸ್), 6. ವಿ.ಉಮೇಶ್ (ಐಎಎಸ್), 7. ಐ.ಆರ್. ಪೆರುಮಾಳ್ (ಐಎಎಸ್), 8. ಕೆ.ಎಸ್ ಮಂಜುನಾಥ್ (ಐಎಎಸ್), 9. ಡಿ.ಎಸ್. ಅಶ್ವಥ್ (ಐಎಎಸ್), 10. ಜೀಜಾ ಮಾಧವನ್ ಹರಿಸಿಂಗ್ (ಐಪಿಎಸ್), 11. ಮಹೇಂದ್ರ ಜೈನ್ (ಐಎಎಸ್), 12. ಕೆ. ಶ್ರೀನಿವಾಸ್, 13. ಎಂ ರಾಮಪ್ಪ ಹಾಗೂ 14. ಶಂಕರ ಲಿಂಗಯ್ಯ.

    ಕೃಷ್ಣ ವಿರುದ್ಧ ತನಿಖೆ ನಡೆಯಲ್ಲ:
    ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿರುದ್ಧ ಯಾವುದೇ ತನಿಖೆ ನಡೆಯುತ್ತಿಲ್ಲ. ಯಾಕಂದ್ರೆ ಈಗಾಗಲೇ ಸುಪ್ರೀಂ ಕೋರ್ಟ್ ಕೃಷ್ಣ ಅವರ ವಿರುದ್ಧ ತನಿಖೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಆದರೂ ಮತ್ತೊಮ್ಮೆ ಎಫ್‍ಐಆರ್ ದಾಖಲಾಗಿದೆ. ಅದಕ್ಕೆ ಸಂಬಂಧಪಟ್ಟಂತೆ ಎಸ್.ಎಂ. ಕೃಷ್ಣ ಅವರ ಯಾವುದೇ ಪ್ರಕರಣವನ್ನು ವಿಚಾರಣೆ ಮಾಡಲ್ಲ ಎಂದು ಎಸ್‍ಐಟಿ ಎಸ್ಪಿ ಮಂಜುನಾಥ್ ಅಣ್ಣಗೇರಿ ಪತ್ರ ಬರೆದಿದ್ದಾರೆ.

    ಸುಪ್ರೀಂ ಸೂಚನೆ ಮೇರೆಗೆ ತನಿಖೆ: ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಹಿಂದಿನ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗಡೆಯವರ ವರದಿಯಲ್ಲಿದ್ದ ಹಲವಾರು ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಇನ್ನಿತರರ ವಿರುದ್ಧ ದೂರು ಸಲ್ಲಿಸಿದ್ದರು. ಅಪಾರ ಪ್ರಮಾಣದ ಅರಣ್ಯಭೂಮಿಯನ್ನು ಕಬಳಿಸಿ ಅಕ್ರಮ ಗಣಿಗಾರಿಕೆ ನಡೆಸಲು ಎಚ್.ಡಿ.ಕುಮಾರಸ್ವಾಮಿ, ಎನ್.ಧರಂಸಿಂಗ್, ಎಸ್.ಎಂ.ಕೃಷ್ಣ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ್ದರು. ಮಾರ್ಚ್ ನಲ್ಲಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಎಚ್.ಡಿ.ಕುಮಾರಸ್ವಾಮಿ ಹಾಗೂ ಎನ್.ಧರಂಸಿಂಗ್ ವಿರುದ್ಧ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಕರ್ನಾಟಕ ಪೊಲೀಸ್‍ನ ವಿಶೇಷ ತನಿಖಾ ತಂಡಕ್ಕೆ ಸೂಚಿಸಿತ್ತು.

     

    https://youtu.be/qYR4BTahwrM

  • ಜಂತಕಲ್ ಮೈನಿಂಗ್: ಹೆಚ್‍ಡಿಕೆ ವಿರುದ್ಧ ಎಸ್‍ಐಟಿಗಿಂದು ಸಾಕ್ಷಿ, ಕುಮಾರಸ್ವಾಮಿ ವಿರುದ್ಧ ರೆಡ್ಡಿ ಕೆಂಡಾಮಂಡಲ

    ಜಂತಕಲ್ ಮೈನಿಂಗ್: ಹೆಚ್‍ಡಿಕೆ ವಿರುದ್ಧ ಎಸ್‍ಐಟಿಗಿಂದು ಸಾಕ್ಷಿ, ಕುಮಾರಸ್ವಾಮಿ ವಿರುದ್ಧ ರೆಡ್ಡಿ ಕೆಂಡಾಮಂಡಲ

    ವಿಜಯಪುರ: ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಇವತ್ತು ಕೋರ್ಟ್‍ಗೆ ದಾಖಲೆ ನೀಡುತ್ತೇನೆ ಅಂತಾ ಮಾಜಿ ಸಚಿವ ಜನಾರ್ದನ ರೆಡ್ಡಿ ವಿಜಯಪುರದ ಕೋಲ್ಹಾರದಲ್ಲಿ ಹೇಳಿದ್ದಾರೆ.

    ನಾನು ಮಾಡಿರುವ ಆರೋಪದ ಬಗ್ಗೆ ದಾಖಲೆಯನ್ನು ಕೋರ್ಟ್‍ಗೆ ನೀಡುತ್ತೇನೆ. ನನ್ನ ಬಳಿ ದಾಖಲೆ ಇಲ್ಲ ಅಂತಾ ಹೇಳುವ ಕುಮಾರಸ್ವಾಮಿಗೆ ಹಣದ ಮದವೇರಿದೆ ಎಂದು ಹರಿಹಾಯ್ದರು. ನಾನು ನ್ಯಾಯವಾಗಿ ನಡೆದುಕೊಂಡಿದ್ದು, ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ. ಆದ್ರೂ ದೈವೀ ಇಚ್ಛೆಯಿಂದ ಎಲ್ಲದರಿಂದ ಪಾರಾಗಿದ್ದೇನೆ. ಕುಮಾರಸ್ವಾಮಿ ಮಾಡುವ ಆರೋಪಗಳ ಬಗ್ಗೆ ನಾನು ಹೇಳಿಕೆ ನೀಡುವುದಿಲ್ಲ ಅಂತಾ ಸ್ಪಷ್ಟಪಡಿಸಿದರು.

    ತಮ್ಮ ಮುಂದಿನ ನಡೆ ಬಗ್ಗೆ ಹೇಳಿಕೆ ನೀಡಿದ ರೆಡ್ಡಿ, ನಾನು ಬಿಜೆಪಿಯ ಕಾರ್ಯಕರ್ತನಾಗಿ ಮುಂದುವರೆಯಲಿದ್ದೇನೆ. ಯಾವುದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಹೈಕಮಾಂಡ್ ನಿರ್ಧಾರದಂತೆ ಕಾರ್ಯ ನಿರ್ವಹಿಸಲಿದ್ದೇನೆ ಎಂದರು. ಇನ್ನು ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಬಿಎಸ್‍ವೈ ಅಧಿಕಾರಕ್ಕೆ ಬರುವುದು ನಿಶ್ಚಿತ ಅಂದ್ರು.

    ಇವತ್ತು ಸಂಜೆಯೊಳಗೆ ಎಸ್‍ಐಟಿಗೆ 150 ಕೋಟಿ ರುಪಾಯಿ ಹಗರಣದ ಸಿಡಿಯನ್ನ ರೆಡ್ಡಿ ನೀಡಲಿದ್ದಾರೆ ಅಂತ ಹೇಳಲಾಗಿದೆ.

  • ಅಕ್ರಮ ಗಣಿಗಾರಿಕೆ: ಎಸ್‍ಐಟಿಯಿಂದ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಅರೆಸ್ಟ್

    ಅಕ್ರಮ ಗಣಿಗಾರಿಕೆ: ಎಸ್‍ಐಟಿಯಿಂದ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಅರೆಸ್ಟ್

    – ಸೇವೆಯಲ್ಲಿದ್ದಾಗಲೇ ಅರೆಸ್ಟ್ ಆದ ಮೊದಲ ಅಧಿಕಾರಿ
    – ಗಣಿ ಇಲಾಖೆಯ ನಿರ್ದೇಶಕರಾಗಿದ್ದ ವೇಳೆ ಅಕ್ರಮ

    ಬೆಂಗಳೂರು: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಕಂದಾಯ ಇಲಾಖೆ ಕಾರ್ಯದರ್ಶಿಯಾಗಿರುವ ಗಂಗಾರಾಮ್ ಬಡೇರಿಯಾ ಅವರನ್ನು ವಿಶೇಷ ತನಿಖಾ ತಂಡದ(ಎಸ್‍ಐಟಿ) ಪೊಲೀಸರು ಬಂಧಿಸಿದ್ದಾರೆ.

    ಈ ಹಿಂದೆ ಗಣಿ ಇಲಾಖೆಯ ನಿರ್ದೇಶಕರಾಗಿದ್ದ ಬಡೇರಿಯಾ ಅವಧಿಯಲ್ಲಿ ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟವಾಗಿತ್ತು. ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ಸಮನ್ಸ್ ಜಾರಿ ಮಾಡಿತ್ತು. ಇಂದು ಎಸ್‍ಪಿ ಅಣ್ಣಗಿರಿ ಮುಂದೆ ಬಡೇರಿಯಾ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಎಸ್‍ಐಟಿ ಪೊಲೀಸರ ತಂಡ ಬಡೇರಿಯಾ ಅವರನ್ನು ಬಂಧಿಸಿದೆ.

    ಏನಿದು ಜಂತಕಲ್ ಮೈನಿಂಗ್ ಪ್ರಕರಣ?
    ಚಿತ್ರದುರ್ಗ ಜಿಲ್ಲೆಯ ಮೀಸಲು ಅರಣ್ಯದಲ್ಲಿ ಗಣಿಗಾರಿಕೆ ನಡೆಸಲು ವಿನೋದ್ ಗೋಯಲ್ ಮಾಲೀಕತ್ವದ ಜಂತಕಲ್ ಮೈನಿಂಗ್ ಎಂಟರ್ ಪ್ರೈಸಸ್‍ಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಪಾಕಿಸ್ತಾನಕ್ಕೆ ಅಕ್ರಮವಾಗಿ ಅದಿರು ಸಾಗಿಸಿ ಕಪ್ಪು ಪಟ್ಟಿಯಲ್ಲಿದ್ದ ವಿನೋದ್ ಗೋಯಲ್ ಮಾಲೀಕತ್ವದ ಕಂಪೆನಿಗೆ ಗಣಿ ಗುತ್ತಿಗೆ ಮಾಡಿದ ಪರಿಣಾಮ ರಾಜ್ಯದ ಬೊಕ್ಕಸಕ್ಕೆ 250 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಹಿಂದಿನ ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ವರದಿ ನೀಡಿದ್ದರು. ಜಂತಕಲ್ ಮೈನಿಂಗ್ ಪರವನಾಗಿ ನೀಡುವ ವಿಚಾರದಲ್ಲಿ ಬಡೇರಿಯಾ ಅವರು ವಿನೋದ್ ಗೋಯಲ್ ಸಹಾಯ ಮಾಡಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ತನಿಖೆ ವೇಳೆ ಬಡೇರಿಯಾ ಮಗನ ಖಾತೆಗೆ ವಿನೋದ್ ಗೋಯಲ್ 10 ಲಕ್ಷ ರೂ. ಹಣ ಹಾಕಿದ್ದ ವಿಚಾರ ಬೆಳಕಿಗೆ ಬಂದಿತ್ತು. ಮಗನ ಅಕೌಂಟ್ ಪರಿಶೀಲನೆ ಮಾಡಿದಾಗ ಬಡೇರಿಯಾ ರೆಡ್‍ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದರು. ಈ ಹಿಂದೆ ಮೂರು ಬಾರಿ ಎಸ್‍ಐಟಿ ವಿಚಾರಣೆಗೆ ಹಾಜರಾಗಿದ್ದ ಬಡೇರಿಯಾ ನಾಲ್ಕನೇಯ ಬಾರಿಯ ವಿಚಾರಣೆ ವೇಳೆ ಅರೆಸ್ಟ್ ಆಗಿದ್ದಾರೆ.

    ಮೊದಲ ಅಧಿಕಾರಿ: ಸೇವೆಯಲ್ಲಿ ಇದ್ದಾಗಲೇ ಇದೂವರೆಗೆ ಕರ್ನಾಟಕದಲ್ಲಿ ಯಾವೊಬ್ಬ ಐಎಎಎಸ್ ಅಧಿಕಾರಿಯ ಬಂಧನವಾಗಿರಲಿಲ್ಲ. ಆದರೆ ಈಗ ಬಡೇರಿಯಾ ಅರೆಸ್ಟ್ ಆಗುವ ಮೂಲಕ ಸೇವೆಯಲ್ಲಿರುವಾಗಲೇ ಬಂಧನಕ್ಕೊಳಗಾದ ಮೊದಲ ಐಎಎಸ್ ಅಧಿಕಾರಿ ಎಂಬ ಕುಖ್ಯಾತಿಗೆ ಪಾತ್ರರಾಗಿದ್ದಾರೆ.

    ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಹಿಂದಿನ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗಡೆಯವರ ಈ ಕುರಿತ ವರದಿಯಲ್ಲಿದ್ದ ಹಲವಾರು ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಇನ್ನಿತರರ ವಿರುದ್ಧ ದೂರು ಸಲ್ಲಿಸಿದ್ದರು. ಅಪಾರ ಪ್ರಮಾಣದ ಅರಣ್ಯಭೂಮಿಯನ್ನು ಕಬಳಿಸಿ ಅಕ್ರಮ ಗಣಿಗಾರಿಕೆ ನಡೆಸಲು ಎಚ್.ಡಿ.ಕುಮಾರಸ್ವಾಮಿ ಹಾಗೂ ಎನ್.ಧರಂಸಿಂಗ್, ಎಸ್.ಎಂ.ಕೃಷ್ಣ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ್ದರು. ಮಾರ್ಚ್ ನಲ್ಲಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಎಚ್.ಡಿ.ಕುಮಾರಸ್ವಾಮಿ ಹಾಗೂ ಎನ್.ಧರಂಸಿಂಗ್ ವಿರುದ್ಧ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಕರ್ನಾಟಕ ಪೊಲೀಸ್‌ನ ವಿಶೇಷ ತನಿಖಾ ತಂಡಕ್ಕೆ ಸೂಚಿಸಿತ್ತು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿರುದ್ಧ ತನಿಖೆಗೆ ಸುಪ್ರೀಂ ತಡೆಯಾಜ್ಞೆ ನೀಡಿದೆ.