– ಶಿವರಾಜ್‌ಕುಮಾರ್‌ಗೆ ಸೊಂಡಿಲೆತ್ತಿ ಸೆಲ್ಯೂಟ್ ಮಾಡಿದ ಧನಂಜಯ
ಮೈಸೂರು: ಗುರುವಾರ ನಡೆದ ಮೈಸೂರು ದಸರಾ (Mysuru Dasara) ಮೆರವಣಿಗೆಯಲ್ಲಿ ನಟ ಶಿವರಾಜ್ ಕುಮಾರ್ (Shivarajkumar) ತಮಟೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ.
ದಸರಾ ಜಂಬೂ ಸವಾರಿ ಮೆರವಣಿಗೆ ವೀಕ್ಷಣೆ ಮಾಡಲು ಹೈ ಸರ್ಕಲ್ ಬಳಿಯಿರುವ ಖಾಸಗಿ ಹೋಟೆಲ್ ಮುಂಭಾಗ ಶಿವರಾಜ ಕುಮಾರ್ ಕುಟುಂಬ ಸಮೇತ ಕುಳಿತಿದ್ದರು. ಆಗ ಮೆರವಣಿಗೆಯಲ್ಲಿ ಸಾಗಿ ಬಂದ ತಮಟೆಯ ಟೀಂನ ಸದ್ದಿಗೆ ಖುಷಿಯಿಂದಲೇ ತಾವು ಕುಳಿತಿದ್ದ ಜಾಗದಲ್ಲೇ ಎದ್ದು ನಿಂತು ಸ್ಟೆಪ್ ಹಾಕಿದರು. ಇದನ್ನೂ ಓದಿ: ಚಿತ್ರಗಳಲ್ಲಿ ಮೈಸೂರು ಜಂಬೂಸವಾರಿ ನೋಡಿ
ಇದೇ ವೇಳೆ ಮೆರವಣಿಗೆಯಲ್ಲಿ ಸಾಗಿ ಬಂದ ಧನಂಜಯ ಆನೆ ಶಿವರಾಜ್ ಕುಮಾರ್‌ಗೆ ಸೆಲ್ಯೂಟ್ ಮಾಡಿತು.
ಮೈಸೂರು ದಸರಾ ಜಂಬೂ ಸವಾರಿಯು ಗುರುವಾರ ಅದ್ಧೂರಿಯಾಗಿ ನೆರವೇರಿದೆ. ಸತತ 6ನೇ ಬಾರಿಗೆ ಚಿನ್ನದಂಬಾರಿ ಹೊತ್ತು ಅಭಿಮನ್ಯು ಯಶಸ್ವಿಯಾಗಿ ಜಂಬೂಸವಾರಿ ನಡೆಸಿಕೊಟ್ಟಿದ್ದಾನೆ. ಲಕ್ಷಾಂತರ ಜನರು ವಿಶ್ವವಿಖ್ಯಾತ ದಸರಾವನ್ನು ಕಣ್ತುಂಬಿಕೊಂಡಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ
ವಿಜಯದಶಮಿಯ ಪ್ರಮುಖ ಆಕರ್ಷಣೆ, ಮೈಸೂರು ದಸರಾದ ವಿಶ್ವವಿಖ್ಯಾತ ಜಂಬೂಸವಾರಿ ಅದ್ಧೂರಿಯಾಗಿ ನಡೆದಿದೆ. 750 ಕೆಜಿ ತೂಕದ ಬಂಗಾರ ಅಂಬಾರಿಯನ್ನು 6ನೇ ಬಾರಿ ಹೊತ್ತ ಕ್ಯಾಪ್ಟನ್ ಅಭಿಮನ್ಯು ಗಂಭೀರವಾಗಿ ಹೆಜ್ಜೆ ಹಾಕಿದ್ದಾನೆ. ಅಭಿಮನ್ಯುಗೆ ಕುಮ್ಕಿ ಆನೆಗಳಾದ ಕಾವೇರಿ, ರೂಪ ಜೊತೆಗಿದ್ದವು. ಸಂಜೆ 4:42ರಿಂದ 5:06 ಗಂಟೆಯ ಕುಂಭಲಗ್ನದಲ್ಲಿ ತಾಯಿ ಚಾಮುಂಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿ ಜಂಬೂ ಸವಾರಿಗೆ ಚಾಲನೆ ನೀಡಿದರು.
ಜಂಬೂಸವಾರಿಗೆ ಚಾಲನೆ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ
ಜಂಬೂಸವಾರಿ ವೀಕ್ಷಿಸಲು ಅರಮನೆ ಮುಂಭಾಗ ಸೇರಿದ ಜನ
750 ಕೆಜಿ ಚಿನ್ನದ ಅಂಬಾರಿ ಹೊತ್ತು ಸಾಗುತ್ತಿರುವ ಅಭಿಮನ್ಯು
ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ
ದೊಡ್ಡ ಗಡಿಯಾರ ತಿರುವು, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗ ಸೇರಿದ ಜನ
ಅಭಿಮನ್ಯುವಿಗೆ ಸಾಥ್ ನೀಡಿದ ಕಾವೇರಿ, ರೂಪ
ಅಭಿಮಾನಿಗಳಿಗೆ ಕೈ ಬೀಸಿದ ಅಭಿಮನ್ಯು ಮಾವುತ ಜೆ.ಎಸ್.ವಸಂತ
ಜಂಬೂಸವಾರಿ ವೀಕ್ಷಿಸಲು ರಸ್ತೆ ಬದಿಯಲ್ಲಿ ಕಾದು ಕುಳಿತಿರುವ ಜನರು
ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿ (Jamboo Savari) ವೀಕ್ಷಣೆ ವೇಳೆ ನೂಕುನುಗ್ಗಲು ಉಂಟಾಗಿ ಯುವತಿ ಅಸ್ವಸ್ಥಗೊಂಡಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ.
ಜಂಬೂಸವಾರಿ ಕೆಆರ್ ಆಸ್ಪತ್ರೆ ಬಳಿ ತಲುಪುತ್ತಿದ್ದಂತೆ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳಲು ಭಾರೀ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಈ ವೇಳೆ ತಳ್ಳಾಟ-ನೂಕಾಟ ಉಂಟಾಗಿ ಯುವತಿ ಅಸ್ವಸ್ಥಗೊಂಡಿದ್ದಾಳೆ. ಇದನ್ನೂ ಓದಿ: ಶಿವಮೊಗ್ಗ ದಸರಾ | ಜಂಬೂ ಸವಾರಿಗೆ ಅದ್ದೂರಿ ಚಾಲನೆ
ಕೂಡಲೇ ಅಸ್ವಸ್ಥಗೊಂಡ ಯುವತಿಯನ್ನು ಬ್ಯಾರಿಕೇಡ್‌ನಿಂದ ಆಚೆ ತಂದ ಪೊಲೀಸರು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ
– ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ ಚಾಮುಂಡೇಶ್ವರಿ – ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು
ಮೈಸೂರು: ಲಕ್ಷಾಂತರ ಜನರು ಕಾತುರದಿಂದ ಕಾದಿದ್ದ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಜಂಬೂಸವಾರಿಗೆ(Jambusavari) ಅದ್ದೂರಿ ಚಾಲನೆ ಸಿಕ್ಕಿದೆ.
ಸಂಜೆ 4.42ರಿಂದ 5.06 ಅವಧಿಯ ಶುಭ ಕುಂಭ ಲಗ್ನದಲ್ಲಿ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಸಿಎಂ ಜೊತೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾಲಾಟ್ಕರ್ ಪುಷ್ಪಾರ್ಚನೆ ಮಾಡಿದರು.
ಅಲಂಕೃತಗೊಂಡ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ನಾಡ ಅಧಿದೇವತೆ ಚಾಮುಂಡಿತಾಯಿಯನ್ನು (Chamundeshwari) ಹೊತ್ತು 6ನೇ ಬಾರಿ ಅಭಿಮನ್ಯು (Abhimnyu) ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ.
ದಸರಾ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಧನಂಜಯ ಹೆಜ್ಜೆ ಹಾಕಿದರೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪ, ನೌಫತ್ ಆನೆಯಾಗಿ ಗೋಪಿ, ಪಟ್ಟದ ಆನೆಯಾಗಿ ಶ್ರೀಕಂಠ ಮತ್ತು ಲಕ್ಷ್ಮಿ ಹೆಜ್ಜೆ ಹಾಕುತ್ತಿವೆ. ಸಾಲಾನೆಯಾಗಿ ಮಹೇಂದ್ರ, ಭೀಮ, ಕಂಜನ್, ಏಕಲವ್ಯ, ಪ್ರಶಾಂತ, ಸುಗ್ರೀವ, ಹೇಮಾವತಿ ಈ ಆನೆಗಳು ಅಭಿಮನ್ಯುವಿಗೆ ಸಾಥ್ ನೀಡುತ್ತಿವೆ.
ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ಚಾಮುಂಡಿತಾಯಿಯನ್ನು ಕಣ್ತುಂಬಿಕೊಂಡು ಜನರು ಧನ್ಯತಾ ಭಾವ ಮೆರೆದರು. ದಸರಾ ಜಂಬೂಸವಾರಿ ವೀಕ್ಷಿಸಲು ಅರಮನೆ ಅಂಗಳದಲ್ಲಿ 48 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿತ್ತು.
ದಸರಾ ಜಂಬೂಸವಾರಿಗೆ ಸ್ತಬ್ಧಚಿತ್ರ ಹಾಗೂ ವಿವಿಧ ಕಲಾತಂಡಗಳು ಮೆರುಗು ನೀಡುತ್ತಿವೆ. ಒಟ್ಟು 57 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. ಮೆರವಣಿಗೆಯಲ್ಲಿ ಸಾಗುವ ದಾರಿಯಲ್ಲಿ 140ಕ್ಕೂ ಹೆಚ್ಚು ಕಲಾ ತಂಡಗಳು ಭಾಗಿಯಾಗಿವೆ.
ಉತ್ತರ ದ್ವಾರದ ಮೂಲಕ ತೆರಳಿರುವ ಜಂಬೂಸವಾರಿ ಮೆರವಣಿಗೆ ಕೆ.ಆರ್ ಸರ್ಕಲ್, ಸಯ್ಯಾಜಿರಾವ್ ರಸ್ತೆ, ಸರ್ಕಾರಿ ಆಯುರ್ವೇದ ಸರ್ಕಲ್, ಬಂಬೂ ಬಜಾರ್, ಹೈವೇ ಸರ್ಕಲ್ ಮೂಲಕ ಸಾಗಿ ಸಂಜೆ ವೇಳೆಗೆ ಬನ್ನಿಮಂಟಪ ಪಂಜಿನ ಕವಾಯತು ಮೈದಾನ ತಲುಪಲಿದೆ.
ಮೈಸೂರು: ನಾಡಹಬ್ಬ ಮೈಸೂರು ದಸರಾ (Mysuru Dasara) ಮೆರುಗು ಜೋರಾಗಿದ್ದು, ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ ನಡೆಯಲಿರುವ ಜಂಬೂಸವಾರಿ ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ ಸೇರಿ 150ಕ್ಕೂ ಕಲಾತಂಡಗಳು ಭಾಗಿಯಾಗಲಿವೆ.
ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಸಾಗಲು ಸಿದ್ಧಗೊಂಡಿವೆ. 31 ಜಿಲ್ಲೆಗಳು ಹಾಗೂ ವಿವಿಧ ಇಲಾಖೆಗಳು ಸೇರಿದಂತೆ 58 ಟ್ಯಾಬ್ಲೋಗಳು ಅಂಬಾವಿಲಾಸ ಅರಮನೆಯ ಆವರಣದಲ್ಲಿ ಸಿದ್ಧಗೊಂಡಿವೆ. ಈ ಮೂಲಕ ತಮ್ಮ ಸ್ಥಳೀಯ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಯೋಜನೆಗಳು ಸೇರಿದಂತೆ ಹಲವು ಮಹತ್ವ ಸಾರಲಿವೆ.ಇದನ್ನೂ ಓದಿ: ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್
ಎಲ್ಲಾ ಸ್ತಬ್ಧಚಿತ್ರಗಳು ಮೈಸೂರು ಬಂಡಿಪಾಳ್ಯದ ಎಪಿಎಂಸಿ ಆವರಣದಲ್ಲಿ ಸಿದ್ಧವಾಗಿ ನಿಂತಿವೆ. ಜೊತೆಗೆ ಮೆರವಣಿಗೆಯಲ್ಲಿ 150ಕ್ಕೂ ಅಧಿಕ ಕಲಾತಂಡಗಳು ಪಾಲ್ಗೊಳ್ಳಲಿದ್ದು, ಜಂಬೂಸವಾರಿಯಲ್ಲಿ ಭಾಗಿಯಾಗಲು ಕಾತುರದಿಂದ ಕಾಯುತ್ತಿವೆ.
ಇನ್ನೂ ಜಂಬೂ ಸವಾರಿ ಹಿನ್ನೆಲೆ ಮೈಸೂರಿನಾದ್ಯಂತ ಬಿಗಿಭದ್ರತೆ ಮಾಡಿಕೊಳ್ಳಲಾಗಿದ್ದು, ವಿವಿಧ ಜಿಲ್ಲೆಗಳಿಂದ ಪೊಲೀಸ್ ಪಡೆ ಆಗಮಿಸಿದೆ. ನಗರದಾದ್ಯಂತ 9 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು, ಚಿತ್ರದುರ್ಗ, ಚಿಕ್ಕಮಗಳೂರು, ಕೊಪ್ಪಳ, ಬೆಳಗಾವಿಯಿಂದ ಗರುಡ ಪಡೆ, ಶ್ವಾನದಳ, ಬಾಂಬ್ ಸ್ಕ್ವಾಡ್ ಆಗಮಿಸಿದೆ. ಜೊತೆಗೆ ಜಂಬೂಸವಾರಿ ಸಾಗುವ ಮಾರ್ಗದ ಉದ್ದಕ್ಕೂ ಭಾರಿ ಬಿಗಿ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಲಾಗಿದ್ದು, ಅರಮನೆ ಸುತ್ತಮುತ್ತ ಹಾಗೂ ಅಂಬಾರಿ ಸಾಗುವ ಮಾರ್ಗದಲ್ಲಿ ಹೆಚ್ಚುವರಿ ಸಿಸಿಟಿವಿ ನಿಯೋಜನೆ ಮಾಡಲಾಗಿದೆ. ಬನ್ನಿಮಂಟಪ ಸೇರಿದಂತೆ ರಾಜಮಾರ್ಗಗಳಲ್ಲಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ.ಇದನ್ನೂ ಓದಿ: ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್ ಚನ್ನುಲಾಲ್ ಮಿಶ್ರಾ ನಿಧನ
ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ (Mysuru Dasara) ಸಂಭ್ರಮ ಮನೆ ಮಾಡಿದೆ. ಸರ್ವಾಲಂಕಾರ ಭೂಷಿತಳಾಗಿ ತಾಯಿ ಚಾಮುಂಡೇಶ್ವರಿ ವಿರಾಜಮಾನಳಾಗುವ ಚಿನ್ನದಂಬಾರಿಯನ್ನು ಇಂದು ಗಜಪಡೆಯ ಕ್ಯಾಪ್ಟನ್ ಅಭಿಮನ್ಯು (Abhimanyu) ಹೊತ್ತು ಸಾಗಲಿದ್ದಾನೆ.
ಸತತ 6ನೇ ಬಾರಿಗೆ ಅಂಬಾರಿಯನ್ನು ಹೊತ್ತು ಅಭಿಮನ್ಯು ಜಂಬೂಸವಾರಿ (Jamboo Savari) ಮೆರವಣಿಗೆಯಲ್ಲಿ ಸಾಗಲಿದ್ದಾನೆ. ಅರ್ಜುನ ನಿವೃತ್ತಿ ಬಳಿಕ 2020ರಿಂದ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯು ನಿಭಾಯಿಸುತ್ತಿದ್ದಾನೆ. ಇದನ್ನೂ ಓದಿ: ಅರಮನೆ ನಗರಿಯಲ್ಲಿ ದಸರಾ ವೈಭವ – ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ
ದಸರಾ ಗಜಪಡೆಯ ಕ್ಯಾಪ್ಟನ್ ಕೂಲ್ ಎಂದೇ ಅಭಿಮನ್ಯು ಖ್ಯಾತಿ ಹೊಂದಿದ್ದಾನೆ. ಗುರುವಾರ ನಡೆಯಲಿರುವ ಜಂಬೂಸವಾರಿ ಮೆರವಣಿಯಲ್ಲಿ ಅಂಬಾರಿ ಹೊರುವ ಅಭಿಮನ್ಯುವನ್ನು ಮಾವುತ ವಸಂತ ಮುನ್ನಡೆಸಲಿದ್ದಾರೆ. ಯಶಸ್ವಿಯಾಗಿ ಅಭಿಮನ್ಯು ಈ ಬಾರಿಯೂ ಜವಾಬ್ದಾರಿ ನಿರ್ವಹಿಸುವ ವಿಶ್ವಾಸವನ್ನು ಅರಣ್ಯ ಇಲಾಖೆ ವ್ಯಕ್ತಪಡಿಸಿದೆ.
ಅಭಿಮನ್ಯು ಇತಿಹಾಸ ಏನು?
1977 ರಲ್ಲಿ ಕೊಡಗು ಜಿಲ್ಲೆಯ ಹೆಬ್ಬಾಳ ಅರಣ್ಯ ಪ್ರದೇಶದಲ್ಲಿ ಅಭಿಮನ್ಯು ಆನೆಯನ್ನು ಸೆರೆಹಿಡಿಯಲಾಯಿತು. ಕಳೆದ 25 ವರ್ಷಗಳಿಂದ ದಸರಾದಲ್ಲಿ ಭಾಗಿಯಾಗುತ್ತಿದ್ದಾನೆ. 2015 ರ ವರೆಗೂ ಕರ್ನಾಟಕ ವಾದ್ಯಗೋಷ್ಠಿಯವರು ಕುಳಿತುಕೊಳ್ಳುವ ಗಾಡಿ ಎಳೆಯುವ ಕೆಲಸ ನಿರ್ವಹಣೆ ಮಾಡಿದ್ದಾನೆ. ಇದನ್ನೂ ಓದಿ: ವಿಜಯ ದಶಮಿ| ದುರ್ಗಾ ನಮಸ್ಕಾರ ಪೂಜೆ ಮಾಡೋದರ ಉದ್ದೇಶ ಏನು?
ಕಳೆದ 5 ವರ್ಷಗಳಿಂದ ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯು ನಿರ್ವಹಿಸಿದ್ದಾನೆ. ಕಾಡಾನೆ ಪಳಗಿಸುವ ಸಾಮರ್ಥ್ಯ ಹೊಂದಿರುವ ಆನೆ. ಸುಮಾರು 200 ಕ್ಕೂ ಹೆಚ್ಚು ಕಾಡಾನೆ, 80 ಹುಲಿ ಯಶಸ್ವಿ ಕಾರ್ಯಚರಣೆ ನಡೆಸಿದ್ದಾನೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ದಸರಾ ವೈಭವ ಜೋರಾಗಿದ್ದು, ವಿಶ್ವವಿಖ್ಯಾತ ಜಂಬೂಸವಾರಿಗೆ (Jambu Savari) ಕ್ಷಣಗಣನೆ ಶುರುವಾಗಿದೆ. ಚಿನ್ನದ ಅಂಬಾರಿಯಲ್ಲಿ ಸಾಗುವ ತಾಯಿ ಚಾಮುಂಡೇಶ್ವರಿ ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿದ್ದಾಳೆ.
ಚಿನ್ನದ ಅಂಬಾರಿಯಲ್ಲಿ ಸಾಗಲಿರುವ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಅಲಂಕಾರ ಮಾಡಿ, ಪೂಜೆ ಮಾಡಲಾಗಿದೆ. ಬಳಿಕ ಉತ್ಸವ ಮೂರ್ತಿ ಚಾಮುಂಡಿ ಬೆಟ್ಟದಿಂದ ಅರಮನೆಯತ್ತ ತೆರೆದ ವಾಹನದಲ್ಲಿ ಮೆರವೆಣಿಗೆ ಸಾಗಲಿದೆ. ನಾಡದೇವಿ ಬೆಳ್ಳಿ ಪ್ರಭಾವಳಿಯಲ್ಲಿ ವಿರಾಜಮಾನಳಾಗಿ ಕಾಣಿಸಿಕೊಂಡಿದ್ದಾಳೆ.ಇದನ್ನೂ ಓದಿ: ಅರಮನೆ ನಗರಿಯಲ್ಲಿ ದಸರಾ ವೈಭವ – ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ
ತಾಯಿ ಚಾಮುಂಡೇಶ್ವರಿ ಸರ್ವಾಲಂಕೃತಗೊಂಡಿದ್ದು, ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿದ್ದಾಳೆ. ಅಂಬಾರಿಯಲ್ಲಿ ಸಾಗುವ ತಾಯಿ ಚಾಮುಂಡಿ ಉತ್ಸವಮೂರ್ತಿ ದರ್ಶನ ನೀಡುತ್ತಿದ್ದಂತೆ ಭಕ್ತರು ಹರ್ಷೋದ್ಘಾರ ವ್ಯಕ್ತಪಡಿಸಿದ್ದು, ತಾಯಿ ಚಾಮುಂಡಮ್ಮಕ್ಕೀ ಜೈ ಎಂದು ಜಯಘೋಷ ಕೂಗಿದ್ದಾರೆ.
-415ನೇ ದಸರಾ ಮಹೋತ್ಸವಕ್ಕೆ ಸಜ್ಜಾದ ಮೈಸೂರು
-ಸತತ 6ನೇ ಬಾರಿಗೆ ಅಂಬಾರಿ ಹೊರಲಿರುವ ಅಭಿಮನ್ಯು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ (Mysuru Dasara) ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ವಿಶ್ವವಿಖ್ಯಾತ ದಸರಾ ಜಂಬೂಸವಾರಿ ಕಣ್ತುಂಬಿಕೊಳ್ಳಲು ಜನ ಕಾತರರಾಗಿದ್ದಾರೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಗೆ ಕೌಂಟ್‌ಡೌನ್ ಶುರುವಾಗಿದೆ. ಇದಕ್ಕೂ ಮುನ್ನ ಅಂಬಾವಿಲಾಸ ಅರಮನೆ ಒಳಭಾಗ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ. ಜಂಬೂಸವಾರಿ ವೀಕ್ಷಣೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಿಗೆ ಸಿದ್ಧತೆಯಾಗಿದೆ.ಇದನ್ನೂ ಓದಿ: ವಿಜಯ ದಶಮಿ| ದುರ್ಗಾ ನಮಸ್ಕಾರ ಪೂಜೆ ಮಾಡೋದರ ಉದ್ದೇಶ ಏನು?
415ನೇ ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜಾಗಿದೆ. ಬೆಳಗ್ಗೆ 9:30ರಿಂದ 10ಕ್ಕೆ ಪಟ್ಟದ ಆನೆ, ಕುದುರೆ, ಹಸು ಮತ್ತು ಖಾಸಾ ಆಯುಧಗಳೊಂದಿಗೆ ಅರಮನೆ ವಾಹನಗಳಿಗೆ ಪೂಜೆ ಸಲ್ಲಿಸಲಾಗುತ್ತದೆ ಬೆಳಗ್ಗೆ 9:45ಕ್ಕೆ ವಜ್ರಮುಷ್ಠಿ ಕಾಳಗ ನಡೆಯಲಿದೆ. ಬೆಳಗ್ಗೆ 10:50ರಿಂದ 11:10ಕ್ಕೆ ಬನ್ನಿಪೂಜೆ ನಡೆಯಲಿದೆ. ಬಳಿಕ ಅರಮನೆ ಅಂಗಳದಲ್ಲಿರುವ ಭುವನೇಶ್ವರಿ ದೇಗುಲಕ್ಕೆ ವಿಜಯಯಾತ್ರೆ ನಡೆಯಲಿದೆ. ಬಳಿಕ ವಿಜಯಯಾತ್ರೆ ಅರಮನೆಗೆ ವಾಪಸ್ಸಾಗಲಿದೆ.
ಬೆಳಗ್ಗೆ 10ರಿಂದ 10:30ರ ಸುಮಾರಿಗೆ ಚಾಮುಂಡಿಬೆಟ್ಟದಿಂದ ತಾಯಿ ವಿಗ್ರಹ ಅರಮನೆಗೆ ಬರಲಿದೆ. ಮಧ್ಯಾಹ್ನ 1ರಿಂದ 1:8ರ ಶುಭ ಧನುರ್ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3:40ರ ಬಳಿಕ ಚಿನ್ನದ ಅಂಬಾರಿ ಕಟ್ಟಲಾಗುತ್ತೆ. ಸಂಜೆ 4:42ರಿಂದ 5:06 ಗಂಟೆಗೆ ಪುಷ್ಪಾರ್ಚನೆ ನೆರವೇರಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ನಡೆಯಲಿದ್ದು, ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಸಂಜೆ 7 ಗಂಟೆಗೆ ಪಂಜಿನ ಕವಾಯತು ನಡೆಯಲಿದೆ.
ಇನ್ನು ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲು ರೆಡಿಯಾಗಿದ್ದು, ಸತತ ಆರನೇ ಬಾರಿಗೆ ರಾಜಗಾಂಭೀರ್ಯದಲ್ಲಿ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದ್ದಾನೆ. ಅಭಿಮನ್ಯು ಸೇರಿ ಇತರ ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ. ಇದನ್ನೂ ಓದಿ: Navratri 2025: ವಿಜಯದಶಮಿಯ ಪೌರಾಣಿಕ ಮಹತ್ವವೇನು?
ದಸರಾ ಗಜಪಡೆ ಅಂಬಾರಿ ಆನೆ : ಕ್ಯಾಪ್ಟನ್ ಅಭಿಮನ್ಯು, 59 ವರ್ಷ, 6ನೇ ಬಾರಿ ಅಂಬಾರಿ ಕುಮ್ಕಿ ಆನೆ : ಕಾವೇರಿ ಮತ್ತು ರೂಪ ನಿಶಾನೆ ಆನೆ : ಧನಂಜಯ , 45 ವರ್ಷ ನೌಪತ್ ಆನೆ : ಗೋಪಿ, 42 ವರ್ಷ ಸಾಲಾನೆ : ಭೀಮ, 25 ವರ್ಷ ಪಟ್ಟದ ಆನೆ : ಶ್ರೀಕಂಠ ಮತ್ತು ಲಕ್ಷ್ಮಿ ಸಾಲಾನೆಗಳು: ಮಹೇಂದ್ರ, ಭೀಮ, ಕಂಜನ್, ಏಕಲವ್ಯ, ಪ್ರಶಾಂತ, ಸುಗ್ರೀವ, ಹೇಮಾವತಿ ಈ ಆನೆಗಳು ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ.
ಈ ಬಾರಿ ಅಂಬಾವಿಲಾಸ ಅರಮನೆ ಆವರಣದಲ್ಲಿ 48 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷ 60 ಸಾವಿರಕ್ಕೂ ಹೆಚ್ಚು ಜನರಿಗೆ ದಸರಾ ವೀಕ್ಷಣೆಗೆ ಅಂಬಾ ವಿಲಾಸ ಅರಮನೆ ಆವರಣದಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಇತ್ತೀಚಿನ ಕೆಲ ಕಾಲ್ತುಳಿತ ಅವಘಢ ಹಿನ್ನೆಲೆ ಸರ್ಕಾರ ಮತ್ತು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ವೀಕ್ಷಕರ ಸಂಖ್ಯೆ ಇಳಿಕೆ ಮಾಡಿದೆ. ಅಲ್ಲದೇ ಒಳಭಾಗದಲ್ಲಿ ಪೊಲೀಸ್ ಭದ್ರತೆ ಕೂಡ ಹೆಚ್ಚು ಮಾಡಿದೆ. ಇನ್ನೂ ಪಾಸ್ ಇದ್ದವರಿಗೆ ಮಾತ್ರ ಅರಮನೆ ಒಳಭಾಗ ದಸರಾ ವೀಕ್ಷಣೆಗೆ ಅವಕಾಶ ನೀಡಿಲಾಗಿದೆ. ಸಿಎಂ ಸೇರಿದಂತೆ ಹಲವು ಕ್ಯಾಬಿನೆಟ್ ಸಚಿವರು ಕೂಡ ಜಂಬೂಸವಾರಿಯಲ್ಲಿ ಭಾಗಿಯಾಗಲಿದ್ದಾರೆ. ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು, ರಾಜಮನೆತನದ ಕುಟುಂಬಸ್ಥರು, ನ್ಯಾಯಾಧೀಶರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ.
ಬೆಳಗ್ಗೆ 11ಗಂಟೆ ನಂತರ ಪಾಸ್ ಹೊಂದಿರುವ ಸಾರ್ವಜನಿಕರಿಗೆ ಅರಮನೆ ಪ್ರವೇಶ ನೀಡಲಾಗುತ್ತೆ. ಈಗಾಗಲೇ ನಗರ ವ್ಯಾಪ್ತಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಗರದಾದ್ಯಂತ 9 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆಯಾಗಿದ್ದು, ಅಂಬಾರಿ ಸಾಗುವ ರಾಜಮಾರ್ಗ ಸೇರಿದಂತೆ ನಗರ ವ್ಯಾಪ್ತಿ ಹೆಚ್ಚಿನ ಸಿಸಿಟಿವಿ ಅಳವಡಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೇ ಅಂಬಾರಿ ಸಾಗುವ ಮಾರ್ಗದುದ್ದಕ್ಕೂ ರಸ್ತೆಬದಿ ತಾತ್ಕಾಲಿಕ ತಡೆಗೋಡೆ ನಿರ್ಮಾಣ ಮಾಡಿದ್ದು, ಅಂಬಾರಿ ಸಾಗುವಾಗ ಜನ ದಾಟಿ ರಸ್ತೆಗೆ ಬಾರದಂತೆ ಕ್ರಮವಹಿಸಲಾಗಿದೆ.
ಒಟ್ಟಾರೆ ಜಂಬೂಸವಾರಿಗೆ ಸಕಲ ಸಿದ್ಧತೆಗಳೆಲ್ಲಾ ಆಗಿದ್ದು, ಅಂಬಾರಿ ಹೊತ್ತು ಸಾಗುವ ಅಭಿಮನ್ಯು ರಾಜಗಾಂಭೀರ್ಯತೆಯೊಂದಿಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದಕ್ಕೂ ಜನ ಕಾತುರದಿಂದ ಕಾಯುತ್ತಿದ್ದಾರೆ.ಇದನ್ನೂ ಓದಿ: ದಸರಾ ಜಂಬೂಸವಾರಿಗೆ ಕೌಂಟ್ ಡೌನ್ – ಭರದಿಂದ ಸಾಗಿದ ತಯಾರಿ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ (Mysuru Dasara Jamboo Savari) ಒಂದು ದಿನ ಮಾತ್ರ ಬಾಕಿ ಇದ್ದು, ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್ ಡೌನ್ ಶುರುವಾಗಿದೆ. ಇದಕ್ಕೂ ಮುನ್ನ ಅಂಬಾವಿಲಾಸ ಅರಮನೆ ಒಳಭಾಗ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿದ್ದು, ನಾಳೆಯ ಜಂಬೂಸವಾರಿ ವೀಕ್ಷಣೆ ಸೇರಿದಂತೆ ನಾಳಿನ ಎಲ್ಲಾ ಕಾರ್ಯಕ್ರಮಗಳಿಗೆ ಸಿದ್ಧತೆಯಾಗಿದೆ. ಇದನ್ನೂ ಓದಿ: ಮುಂದಿನ ವರ್ಷವೂ ಯಾಕೆ ಪುಷ್ಪಾರ್ಚನೆ ಮಾಡಬಾರದು? Hope So ನಾನೇ ಮಾಡಬಹುದು: ಸಿಎಂ
ಈ ಬಾರಿ ಅಂಬಾವಿಲಾಸ ಅರಮನೆ ಆವರಣದಲ್ಲಿ 48 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷ 60 ಸಾವಿರಕ್ಕೂ ಹೆಚ್ಚು ಜನರಿಗೆ ದಸರಾ ವೀಕ್ಷಣೆಗೆ ಅಂಬಾವಿಲಾಸ ಅರಮನೆ ಆವರಣದಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಇತ್ತೀಚಿನ ಕೆಲ ಕಾಲ್ತುಳಿತ ಅವಘಢ ಹಿನ್ನೆಲೆ ಸರ್ಕಾರ ಮತ್ತು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ವೀಕ್ಷಕರ ಸಂಖ್ಯೆ ಇಳಿಕೆ ಮಾಡಿದೆ. ಅಲ್ಲದೇ ಒಳಭಾಗ ಪೊಲೀಸ್ ಭದ್ರತೆ ಕೂಡ ಹೆಚ್ಚು ಮಾಡಿದೆ. ಇನ್ನೂ ಪಾಸ್ ಇದ್ದವರಿಗೆ ಮಾತ್ರ ಅರಮನೆ ಒಳಭಾಗ ದಸರಾ ವೀಕ್ಷಣೆಗೆ ಅವಕಾಶ ನೀಡಿಲಾಗಿದೆ. ಸಿಎಂ ಸೇರಿದಂತೆ ಹಲವು ಕ್ಯಾಬಿನೆಟ್ ಸಚಿವರು ಕೂಡ ಜಂಬೂಸವಾರಿಯಲ್ಲಿ ಭಾಗಿಯಾಗಲಿದ್ದಾರೆ. ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು, ರಾಜಮನೆತನದ ಕುಟುಂಬಸ್ಥರು, ನ್ಯಾಯಾಧೀಶರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಕರೂರ್ ಕಾಲುಳ್ತಿತ ದುರಂತ; 2 ವಾರ ತಮಿಳುನಾಡು ಪ್ರವಾಸ ರದ್ದಗೊಳಿಸಿದ ವಿಜಯ್
ಇನ್ನೂ ನಾಳೆ ಬೆಳಗ್ಗೆ 11 ಗಂಟೆ ನಂತರ ಪಾಸ್ ಹೊಂದಿರುವ ಸಾರ್ವಜನಿಕರಿಗೆ ಅರಮನೆ ಪ್ರವೇಶ ನೀಡಲಿದ್ದಾರೆ. ಈಗಾಗಲೇ ನಗರ ವ್ಯಾಪ್ತಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಗರದಾದ್ಯಂತ 9 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆಯಾಗಿದ್ದು, ಅಂಬಾರಿ ಸಾಗುವ ರಾಜ ಮಾರ್ಗ ಸೇರಿದಂತೆ ನಗರ ವ್ಯಾಪ್ತಿ ಹೆಚ್ಚಿನ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೇ ಅಂಬಾರಿ ಸಾಗುವ ಮಾರ್ಗದುದ್ದಕ್ಕೂ ರಸ್ತೆ ಬದಿ ತಾತ್ಕಾಲಿಕ ತಡೆಗೋಡೆ ನಿರ್ಮಾಣ ಮಾಡಿದ್ದು, ಅಂಬಾರಿ ಸಾಗುವಾಗ ಜನ ದಾಟಿ ರಸ್ತೆಗೆ ಬಾರದಂತೆ ಕ್ರಮವಹಿಸಲಾಗಿದೆ. ಇದನ್ನೂ ಓದಿ: 1 ಪಂದ್ಯದ ಆಟದಿಂದ ಕೊಹ್ಲಿ, ಸಾಲ್ಟ್ ಹಿಂದಿಕ್ಕಿ ಟಿ20ಯಲ್ಲಿ ಅಭಿಷೇಕ್ ಶರ್ಮಾ ವಿಶ್ವದಾಖಲೆ
– ಚಿನ್ನದಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ ಚಾಮುಂಡೇಶ್ವರಿ – 750 ಕೆ.ಜಿ ತೂಕದ ಚಿನ್ನದಂಬಾರಿ ಹೊತ್ತು ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು – ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ
ಮೈಸೂರು: ಲಕ್ಷಾಂತರ ಜನರು ಕಾತುರದಿಂದ ಕಾದಿದ್ದ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಜಂಬೂಸವಾರಿಗೆ ಅದ್ದೂರಿ ಚಾಲನೆ ಸಿಕ್ಕಿತು. ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು.
750 ಕೆ.ಜಿ. ತೂಕದ ಚಿನ್ನದಂಬಾರಿ ಹೊತ್ತು ಅರಮನೆ ಆವರಣದಲ್ಲಿ ಅಭಿಮನ್ಯು ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ. ಸರ್ವಾಲಂಕಾರ ಭೂಷಿತಳಾಗಿ ನಾಡ ಅಧಿದೇವತೆ ಚಾಮುಂಡೇಶ್ವರಿ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದನ್ನು ಕಂಡು ಜನರು ಹರ್ಷೋದ್ಘಾರ ವ್ಯಕ್ತಪಡಿಸಿದರು. ‘ಜೈ ಚಾಮುಂಡೇಶ್ವರಿ..’ ಎಂದು ಕೂಗಿ ಭಕ್ತಿ-ಭಾವ ಮೆರೆದರು. ಇದನ್ನೂ ಓದಿ: ದಸರಾ ಸಂಭ್ರಮದ ನಡುವೆ ವರುಣ ಎಂಟ್ರಿ – ಮಳೆಯ ನಡುವೆಯೂ ಜನರ ಸಂಭ್ರಮ
ಸತತ 5ನೇ ಬಾರಿಗೆ ಚಿನ್ನದಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಪುಷ್ಪಾರ್ಚನೆ ಸ್ಥಳಕ್ಕೆ ಸುಮಾರು 400 ಮೀ. ಸಾಗಿದ. ಅಭಿಮನ್ಯು ಎಡಬಲದಲ್ಲಿ ಕುಮ್ಕಿ ಆನೆಗಳಾಗಿ ಹಿರಣ್ಯ ಮತ್ತು ಲಕ್ಷ್ಮಿ ಆನೆಗಳು ಹೆಜ್ಜೆ ಹಾಕಿದವು. ಸಂಜೆ 5:02 ಕ್ಕೆ ತಾಯಿ ಚಾಮುಂಡೇಶ್ವರಿ ವಿರಾಜಮಾನಳಾಗಿದ್ದ ಜಂಬೂಸವಾರಿಗೆ (Jamboo Savari) ಸಿಎಂ ಸಿದ್ದರಾಮಯ್ಯ (Siddaramaiah) ಪುಷ್ಪಾರ್ಚನೆ ಮಾಡಿದರು. ಅರ್ಧ ಗಂಟೆ ತಡವಾಗಿ ಪುಷ್ಪಾರ್ಚನೆ ನೆರವೇರಿಸಲಾಯಿತು. ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸಚಿವ ಶಿವರಾಜ್ ತಂಗಡಗಿ, ಮೈಸೂರು ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಸಾಥ್ ನೀಡಿದರು. ಪುಷ್ಪಾರ್ಚನೆ ಬಳಿಕ ರಾಷ್ಟ್ರಗೀತೆಗೆ ಎಲ್ಲರೂ ಗೌರವ ಸಲ್ಲಿಸಿದರು.
ಜಂಬೂಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಧನಂಜಯ ಸಾಗಿದ್ದಾನೆ. ನೌಫತ್ ಆನೆಯಾಗಿ ಗೋಪಿ ಹೆಜ್ಜೆ ಹಾಕಿದ್ದಾನೆ. ಮೆರವಣಿಗೆಯುದ್ಧಕ್ಕೂ ಜಾನಪದ ಕಲಾತಂಡಗಳ ವೈಭವ ಸಾಗಿದೆ. 50ಕ್ಕೂ ಹೆಚ್ಚು ಸ್ತಬ್ದಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. ಉತ್ತರ ದ್ವಾರದ ಮೂಲಕ ತೆರಳಿರುವ ಜಂಬೂಸವಾರಿ ಮೆರವಣಿಗೆ ಕೆ.ಆರ್ ಸರ್ಕಲ್, ಸಯ್ಯಾಜಿರಾವ್ ರಸ್ತೆ, ಸರ್ಕಾರಿ ಆಯುರ್ವೇದ ಸರ್ಕಲ್, ಬಂಬೂ ಬಜಾರ್, ಹೈವೇ ಸರ್ಕಲ್ ಮೂಲಕ ಸಾಗಿ ಸಂಜೆ ವೇಳೆಗೆ ಬನ್ನಿಮಂಟಪ ಪಂಜಿನ ಕವಾಯತು ಮೈದಾನ ತಲುಪಲಿದೆ. ಇದನ್ನೂ ಓದಿ: Mysuru Dasara| ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ