Tag: ಜಗದೀಶ ಶೆಟ್ಟರ್

  • ಮುಡಾ, ವಾಲ್ಮೀಕಿ ಹಗರಣದಲ್ಲಿ ಸರ್ಕಾರ ಮುಳುಗಿ ಹೋಗಿದೆ: ಜಗದೀಶ ಶೆಟ್ಟರ್

    ಮುಡಾ, ವಾಲ್ಮೀಕಿ ಹಗರಣದಲ್ಲಿ ಸರ್ಕಾರ ಮುಳುಗಿ ಹೋಗಿದೆ: ಜಗದೀಶ ಶೆಟ್ಟರ್

    ಬೆಳಗಾವಿ: ರಾಜ್ಯದಲ್ಲಿ ಮುಡಾ, ವಾಲ್ಮೀಕಿ ಹಗರಣದಲ್ಲಿ ಸರ್ಕಾರ ಮುಳುಗಿ ಹೋಗಿದೆ. ಇದರಿಂದ ಕಾಂಗ್ರೆಸ್ ರಾಜ್ಯದಲ್ಲಿ ನಿರ್ಣಾಮವಾಗಲಿದೆ. ರಾಜ್ಯ ಸರಕಾರ ತನ್ನ ತಪ್ಪಿನಿಂದ ಪತನಗೊಳ್ಳಲಿದೆ ಎಂದು ಸಂಸದ ಜಗದೀಶ ಶೆಟ್ಟರ್ (Jagadish Shettar) ಭವಿಷ್ಯ ನುಡಿದರು.

    ಬೆಳಗಾವಿಯಲ್ಲಿ (Belagavi) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ನಡೆದಿದೆ. ಇಲ್ಲಿಯವರೆಗೂ ಒಳಗಡೆ ನಡೆಯುತ್ತಿದ್ದ ಚರ್ಚೆ ಈಗ ಬಹಿರಂಗವಾಗಿ ನಡೆಯುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಕೇಂದ್ರ ಸರ್ಕಾರದ ವೈಫಲ್ಯ: ಶಾಸಕ ರಂಗನಾಥ್

    ಒಳಗಡೆ ನಾವು ಸಿದ್ದರಾಮಯ್ಯ (CM Siddaramaiah) ಅವರ ಪರವಾಗಿದ್ದೇವೆ. ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಸಚಿವರು, ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಆದರೆ ತೆರೆಮರೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಜೋರಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಈಗ ಹತ್ತಾರು ಮುಖ್ಯಮಂತ್ರಿಗಳು ಹುಟ್ಟಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಸಿಎಂ ಸ್ಥಾನ ಖಾಲಿ ಇಲ್ಲ – ಖಾಲಿ ಇಲ್ಲದ ಸ್ಥಾನದ ಬಗ್ಗೆ ಚರ್ಚೆ ಅಪ್ರಸ್ತುತ: ಡಾ.ರಂಗನಾಥ್

    ನಾವು ಆಪರೇಷನ್ ಕಮಲ ಮಾಡುವುದು ಬೇಕಾಗಿಲ್ಲ. ಅವರ ಶಾಸಕ, ಸಚಿವರೇ ಒಬ್ಬರಿಗೊಬ್ಬರು ಕಾಲು ಎಳೆಯುವುದು ಆರಂಭವಾಗಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಆರ್ಥಿಕ ದಿವಾಳಿಯಾಗುವ ಪ್ರಶ್ನೆಗೆ ಉತ್ತರಿಸಿದ ಅವರು, ಪಾಲಿಕೆಯನ್ನು ಆರ್ಥಿಕವಾಗಿ ಸುಧಾರಣೆ ಮಾಡಲು ನನ್ನಿಂದ ಮಾತ್ರ ಸಾಧ್ಯವಿಲ್ಲ. ಎಲ್ಲರ ಜೊತೆಗೆ ಚರ್ಚೆ ಮಾಡಿ ತೀರ್ಮಾನ ಮಾಡಬೇಕಿದೆ. ಅಧಿಕಾರಿಗಳ ಯಡವಟ್ಟಿನಿಂದ ಸಮಸ್ಯೆ ಆಗಿದೆ. ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲದೇ ಇದ್ದರೆ ಈ ರೀತಿಯ ಸಮಸ್ಯೆ ಆಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಪ್ರತಿಭಟನೆ ನಿಲ್ಲಿಸಿ, ದುರ್ಗಾಪೂಜೆಗೆ ಗಮನ ಹರಿಸಿ – ದೀದಿ ಹೇಳಿಕೆಗೆ ಮೃತ ಟ್ರೈನಿ ವೈದ್ಯೆಯ ತಾಯಿ ಆಕ್ರೋಶ

  • ನನ್ನ ಜೊತೆ ಜನಾರ್ದನ ರೆಡ್ಡಿ ಮಾತನಾಡಿಲ್ಲ : ಜಗದೀಶ್‌ ಶೆಟ್ಟರ್

    ನನ್ನ ಜೊತೆ ಜನಾರ್ದನ ರೆಡ್ಡಿ ಮಾತನಾಡಿಲ್ಲ : ಜಗದೀಶ್‌ ಶೆಟ್ಟರ್

    ಧಾರವಾಡ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರ ಜೊತೆ ಮಾತನಾಡುತ್ತೇನೆ. ಈ ಬಗ್ಗೆ ನನ್ನ ಜೊತೆ ರೆಡ್ಡಿ ಮತ್ತು ಯಾರೂ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ತಿಳಿಸಿದರು.

    ಧಾರವಾಡದಲ್ಲಿ ಮಾತನಾಡಿರುವ ಅವರು, ರೆಡ್ಡಿ ಅವರು ಹೊಸ ಪಕ್ಷ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ನಾಯಕರ ಜೊತೆ ಮಾತನಾಡುತ್ತೇವೆ. ಕೆಜೆಪಿ ರೀತಿಯಲ್ಲಿ ಪರಿಣಾಮ ಬೀರಬಹುದೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇವೆ. ನಮ್ಮ ಜೊತೆ ರೆಡ್ಡಿ ಮತ್ತು ಯಾರೂ ಮಾತನಾಡಿಲ್ಲ. ಇತ್ತೀಚೆಗೆ ರೆಡ್ಡಿ ಅವರು ನನ್ನ ಜೊತೆ ವೈಯಕ್ತಿಕ ಸಂಪರ್ಕದಲ್ಲಿಲ್ಲ ಎಂದರು.

    ಇಂದು ಬೆಂಗಳೂರಿನ (Bengaluru) ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ (Janardhan Reddy) ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದಾರೆ. ಬಸವಣ್ಣ ಹಾದಿಯಲ್ಲಿ ನಡೆಯಲು ಸಂಕಲ್ಪ ಮಾಡಿದ್ದೇನೆ. ಜಾತಿ,‌ ಮತ, ಬೇಧ, ಭಾವ ಇಲ್ಲದೇ ಮೇಲು ಕೇಳು ಇಲ್ಲದ ಹಾಗೆ ಕೆಲಸ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇನೆ. ಬಸವಣ್ಣನವರ ಸ್ಮರಣೆ ಮಾಡುತ್ತಾ ಸಾರ್ವಜನಿಕ ಬದುಕಿಗೆ ಬರುತ್ತಿದ್ದೇನೆ. ಬಿಜೆಪಿ ‌ಜೊತೆ ನಾನು ಬಾಂಧವ್ಯವನ್ನು ಕಡಿದುಕೊಳ್ಳುತ್ತಿದ್ದೇನೆ. ಈ ಕಾರಣಕ್ಕೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ನಿರ್ಮಾಣ ಮಾಡ್ತಿದ್ದೇನೆ ಎಂದು ತಿಳಿಸಿದ್ದರು.  ಇದನ್ನೂ ಓದಿ: ನಾನು ಕಷ್ಟದಲ್ಲಿ ಇದ್ದಾಗ ಬಿಎಸ್‌ವೈ, ಜಗದೀಶ್ ಶೆಟ್ಟರ್ ಬಿಟ್ಟು ಇನ್ಯಾರು ನನ್ನ ಮನೆಗೆ ಬಂದಿರಲಿಲ್ಲ: ಜನಾರ್ದನ ರೆಡ್ಡಿ

    ಇದೇ ವೇಳೆ ತಮ್ಮ ರಾಜಕೀಯ ಜೀವನ ಹಾಗೂ ಕಷ್ಟದ ದಿನಗಳನ್ನು ನೆನಸಿಕೊಂಡ ಅವರು, ಬಿ.ಎಸ್‌ ಯಡಿಯೂರಪ್ಪ ಹಾಗೂ ಜಗದೀಶ್‌ ಶೆಟ್ಟರ್‌ ಅವರನ್ನು ಪ್ರಶಂಸಿಸಿದ್ದರು. ಈ ಬಗ್ಗೆ ಮಾತನಾಡಿ, ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ (BS Yediyurappa) ಹಾಗೂ ಜಗದೀಶ್‌ ಶೆಟ್ಟರ್‌ (Jagadish Shettar) ಇಬ್ಬರು ನನ್ನ ಕಷ್ಟದ ದಿನಗಳಲ್ಲಿ ಬಂದು ನನಗೆ ಧೈರ್ಯ ತುಂಬಿದ್ದರು. ಅದಕ್ಕಾಗಿ ನಾನು ಅವರನ್ನು ನೆನಪು ಮಾಡಿಕೊಳ್ಳುತ್ತೇನೆ. ಆದರೆ ನನ್ನವರೇ ಅಂತ ನಾನು ಎಲ್ಲರನ್ನು ಮೆರೆಸಿ ಮೋಸ ಹೋದೆ. ಇದನ್ನ ನನ್ನ ಸ್ನೇಹಿತರು ಈಗಲೂ ಹೇಳ್ತಾರೆ. ನನ್ನ ಜೊತೆ ಕಷ್ಟದಲ್ಲಿ ಯಾರು ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಬಿಜೆಪಿಗೆ ಸೆಡ್ಡು ಹೊಡೆದು ಹೊಸ ಪಕ್ಷ ಸ್ಥಾಪಿಸಿದ ರೆಡ್ಡಿ

    Live Tv
    [brid partner=56869869 player=32851 video=960834 autoplay=true]

  • ವೈಯಕ್ತಿಕ, ವ್ಯಕ್ತಿಗತವಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯುತ್ತವೆ: ಜಗದೀಶ್ ಶೆಟ್ಟರ್

    ವೈಯಕ್ತಿಕ, ವ್ಯಕ್ತಿಗತವಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯುತ್ತವೆ: ಜಗದೀಶ್ ಶೆಟ್ಟರ್

    ಹುಬ್ಬಳ್ಳಿ: ವೈಯಕ್ತಿಕ ಹಾಗೂ ವ್ಯಕ್ತಿಗತವಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯುತ್ತವೆ ಎಂದು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

    ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿರುವ ವಿಚಾರವಾಗಿ ನಗರದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿಗೂ ಹೆಚ್ಚಿನ ಬೆಂಬಲ ಸಿಕ್ಕಿದೆ. ಅಲ್ಲಿನ ಸ್ಥಳೀಯ ಹಿತಾಸಕ್ತಿಗೆ ಅನುಗುಣವಾಗಿ ಚುನಾವಣೆಗಳು ನಡೆದಿರುತ್ತವೆ. ವೈಯಕ್ತಿಕ ಹಾಗೂ ವ್ಯಕ್ತಿಗತವಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯುತ್ತವೆ. ಬೇರೆ ಬೇರೆ ನಗರಸಭೆ ಮತ್ತು ಪುರಸಭೆಗಳಲ್ಲಿ ನಮ್ಮ ಸ್ಥಾನಗಳ ಪ್ರಮಾಣ ಹೆಚ್ಚಾಗಿದೆ. ವಿಧಾನ ಪರಿಷತ್ ಚುನಾವಣೆಯಲ್ಲೂ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನ ಗಳಿಸಿದ್ದೇವೆ. ಕಳೆದ ಬಾರಿಗಿಂತಲೂ ನಮ್ಮ ಪಕ್ಷ ಹೆಚ್ಚು ಪ್ರಗತಿ ಸಾಧಿಸಿದೆ ಎಂದರು. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಕರ್ನಾಟಕ ಸೇರಿ ಎಂಟು ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಪತ್ರ

    ಬಿಜೆಪಿ ಶಾಸಕರಿದ್ದ ಕಡೆ ನಿರೀಕ್ಷಿತ ಫಲಿತಾಂಶ ಬಾರದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಶಾಸಕರಿದ್ದ ಕಡೆ ಅವರು ಹೆಚ್ಚಿನ ಸ್ಥಾನ ಗೆದ್ದಿದ್ದಾರಾ? ಸ್ಥಳೀಯ ಸಂಸ್ಥೆಗಳಲ್ಲಿ ಈ ರೀತಿಯ ಫಲಿತಾಂಶ ಸಹಜವಾಗಿದ್ದು, ಈ ಕುರಿತು ಪರಾಮರ್ಶೆ ಮಾಡುತ್ತೇವೆ ಎಂದು ನುಡಿದರು.

    ಧಾರವಾಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರವಿಂದ್ ಬೆಲ್ಲದ್ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನನ್ನ ಅಸಮಾಧಾನದ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದಾರೆಂಬುದು ಸುಳ್ಳು ಎಂದು ಜಾರಿಕೊಂಡರು. ಇದನ್ನೂ ಓದಿ:  ಹಿಂದೂಗಳಿಗೆ ಹಿಂದೂಗಳಾಗಿ ಹುಟ್ಟಿದ್ದೇ ತಪ್ಪು ಅನ್ನಿಸಬಾರದು: ಸಿ.ಟಿ.ರವಿ

    ಸಂಪುಟದಲ್ಲಿ ಹಿರಿಯರನ್ನ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕೆಂಬ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ವಿಚಾರವಾಗಿ ಮಾತನಾಡಿ, ಅದು ಅವರ ವೈಯಕ್ತಿಕ ವಿಚಾರ. ಅವರ ವಿಚಾರಗಳನ್ನ ಹೇಳಲು ಮುಕ್ತ ಅವಕಾಶವಿದೆ. ಈ ರೀತಿ ಹೇಳಿಕೆ ನೀಡುವುದು ಪಕ್ಷ ವಿರೋಧಿ ಚಟುವಟಿಕೆ ಎನ್ನಲಾಗಲ್ಲ. ನನ್ನ ವೈಯಕ್ತಿಕ ಅಭಿಪ್ರಾಯವನ್ನ ಪಕ್ಷದ ಆಂತರಿಕ ಸಭೆಯಲ್ಲಿ ವ್ಯಕ್ತಪಡಿಸುತ್ತೇನೆ ಎಂದರು.

    ಹುಬ್ಬಳ್ಳಿಯಲ್ಲಿ ಕೋರ್ ಕಮೀಟಿ ರದ್ದು ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಬಿಎಸ್‍ವೈ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಅರುಣ್ ಸಿಂಗ್ ಬೇಗನೇ ದೆಹಲಿಗೆ ಪ್ರಯಾಣ ಬೆಳೆಸಿದರು. ಈ ಕಾರಣದಿಂದಾಗಿಯೇ ಕೋರ್ ಕಮೀಟಿ ಸಭೆ ನಡೆಸಲಾಗಲಿಲ್ಲ. ಮುಂದಿನ ದಿನಗಳಲ್ಲಿ ಕೋರ್ ಕಮಿಟಿ ಸಭೆ ನಡೆಸಲಾಗುವುದು. ಆ ಸಭೆಯಲ್ಲಿ ಬೆಳಗಾವಿ ಸೋಲು ಸೇರಿದಂತೆ ಹಲವಾರು ವಿಚಾರಗಳನ್ನ ಚರ್ಚಿಸಲಾಗುವುದು ಎಂದು ನುಡಿದರು.

     

  • ಮುಂದಿನ ಒಂದು ವರ್ಷದವರೆಗೆ ಕೊರೊನಾ ಇರುತ್ತೆ: ಶೆಟ್ಟರ್

    ಮುಂದಿನ ಒಂದು ವರ್ಷದವರೆಗೆ ಕೊರೊನಾ ಇರುತ್ತೆ: ಶೆಟ್ಟರ್

    ಧಾರವಾಡ: ಮುಂದಿನ ಒಂದು ವರ್ಷದವರೆಗೂ ಕೊರೊನಾ ಇರುತ್ತೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ.

    ಧಾರವಾಡದಲ್ಲಿ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಕೊರೊನಾ ಎಲ್ಲರಿಗೂ ಒಂದು ಹೊಸ ಅನುಭವ, ಒಂದು ತಿಂಗಳು, ಎರಡು ತಿಂಗಳಿಗೆ ಮುಗಿದು ಹೋಯ್ತು ಎನ್ನುವಂತಹದ್ದಲ್ಲ. ಇದು ನಿರಂತರವಾಗಿ ವರ್ಷಗಟ್ಟಲೇ ಇರುವಂತಹದ್ದು ಎಂದು ಹೇಳಿದರು.

    ಕೆಲವು ಜನರಿಗೆ ಪಾಸಿಟಿವ್ ಬರುತ್ತಿರುತ್ತದೆ, ಅದೇ ರೀತಿ ಇನ್ನು ಕೆಲವರು ಡಿಸ್ಚಾರ್ಜ್ ಆಗತ್ತಿರುತ್ತಾರೆ. ಹೀಗೆ ನಿರಂತರವಾಗಿ ಪ್ರಕ್ರಿಯೆ ನಡೆಯುತ್ತಿರುತ್ತದೆ. ಹೀಗಾಗಿ ಆರ್ಥಿಕತೆಯನ್ನು ಹಂತ ಹಂತವಾಗಿ ರಿಲ್ಯಾಕ್ಸ್ ಮಾಡುತ್ತಿದ್ದೇವೆ. ಕೊರೊನಾ ವಿಚಾರವಾಗಿ ಜನರೇ ಸ್ವಯಂ ಪ್ರೇರಿತವಾಗಿ ಜಾಗೃತರಾಗಬೇಕು. ಕೇಂದ್ರ, ರಾಜ್ಯ ಸರ್ಕಾರದ ನಿರ್ದೇಶನವನ್ನು ಜನ ಪಾಲನೆ ಮಾಡಬೇಕು ಎಂದರು.

    ಲಾಕ್‍ಡೌನ್ ಸಡಿಲಿಕೆ ಮಾಡಿದ ಬಳಿಕ ಮುಂಜಾಗ್ರತೆ ವಹಿಸಬೇಕು. ಧಾರವಾಡ ಕೊರೊನಾದಲ್ಲಿ ಜಿರೋ ಹಂತಕ್ಕೆ ಬಂದು ಬಿಟ್ಟಿತ್ತು. ಆದರೆ ಹೊರಗಿನಿಂದ ಬಂದವರಿಂದ ಮತ್ತೆ ಹೆಚ್ಚಾಗಿದೆ. ಸಮುದಾಯ ಹರಡುವಿಕೆ ನಮ್ಮಲ್ಲಿ ಆಗಿಲ್ಲ ಎಂದು ತಿಳಿಸಿದರು.

  • ದಕ್ಷ, ಪ್ರಾಮಾಣಿಕ ಸರ್ಕಾರ ನೀಡುತ್ತೆನೆಂದು ರಕ್ತದಲ್ಲಿ ಬರೆದುಕೊಡ್ತೇನೆ: ಬಿಎಸ್‍ವೈ

    ದಕ್ಷ, ಪ್ರಾಮಾಣಿಕ ಸರ್ಕಾರ ನೀಡುತ್ತೆನೆಂದು ರಕ್ತದಲ್ಲಿ ಬರೆದುಕೊಡ್ತೇನೆ: ಬಿಎಸ್‍ವೈ

    ಧಾರವಾಡ: ಮುಂದಿನ ಚುನಾವಣೆಯಲ್ಲಿ ನಮ್ಮನ್ನ ಗೆಲ್ಲಿಸಿ ಆಡಳಿತಕ್ಕೆ ತಂದರೆ. ದಕ್ಷ ಹಾಗೂ ಪ್ರಾಮಾಣಿಕ ಸರ್ಕಾರ ನೀಡುತ್ತೇನೆ. ಇದನ್ನ ರಕ್ತದಲ್ಲಿ ಬರೆದುಕೊಡ್ತೆನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದರು.

    ಧಾರವಾಡ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಣ್ಣಿದ್ದರೂ ಕುರುಡರಂತೆ ಮಾಡುತ್ತಿದೆ. ಮಹದಾಯಿ ನದಿ ಜೋಡಣೆಗಾಗಿ 15 ದಿನಗಳಲ್ಲಿ ಗೋವಾ ಹಾಗೂ ಪ್ರಧಾನಿ ಮೋದಿಗೆ ಭೇಟಿ ಮಾಡಿ ಸಮಸ್ಯೆಯನ್ನು ಇತ್ಯರ್ಥ ಮಾಡುತ್ತೇವೆ. ಪರಿವರ್ತನ ಯಾತ್ರೆಯ ಮೊದಲೇ ಈ ಸಮಸ್ಯೆಯನ್ನು ಇತ್ಯರ್ಥ ಮಾಡಿ ಈ ಭಾಗಕ್ಕೆ ಬರುತ್ತೇನೆಂದು. ಇನ್ನು ಹಿಂದಿನ ಸರ್ಕಾರ ಮಾಡಿದ ತಪ್ಪಿನಿಂದ ಮಹದಾಯಿ ಸಮಸ್ಯೆ ಆಗಿದೆ. ಸದ್ಯ ಟ್ರಿಬ್ಯುನಲ್‍ನಲ್ಲಿ ಸಿಕ್ಕಿಕೊಳ್ಳಲು ಹಿಂದಿನ ಸರ್ಕಾರಗಳೇ ಕಾರಣ ಎಂದು ಕಿಡಿಕಾರಿದರು. ಹೋರಾಟಗಾರರು ತಮ್ಮ ಮಹದಾಯಿ ಹೋರಾಟ ನಿಲ್ಲಿಸಬೇಕು ಎಂದು ಮನವಿ ಮಾಡಿದರು.

    ಇದೇ ವೇಳೆ ಮಾತನಾಡಿದ ವಿಪಕ್ಷ ನಾಯಕ ಜಗದೀಶ ಶೆಟ್ಟರ್, ಪ್ರಧಾನ ಮಂತ್ರಿ ಫಸಲ ವಿಮಾ ಯೋಜನೆ ತಂದಿದೆ. ಆದರೆ ರಾಜ್ಯ ಸರ್ಕಾರದ ತಪ್ಪಿನಿಂದ ರೈತರಿಗೆ ತೊಂದರೆಯಾಗುತ್ತಿದೆ. ಯಡಿಯೂರಪ್ಪನವರು ಗುಡುಗಿದ ನಂತರ ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದೆ. ಹಿಂದೆ ಯಡಿಯೂರಪ್ಪ ಡಿಸಿಎಂ ಹಾಗೂ ನಾನು ಸಿಎಂ ಇದ್ದಾಗ ಕೂಡಾ ಸಾಲ ಮನ್ನಾ ಮಾಡಿದ್ದೇವೆ. ಸರ್ಕಾರ ಇವತ್ತು ಷರತ್ತುಗಳನ್ನ ಹಾಕಿ ಸಾಲ ಮನ್ನಾ ಮಾಡುತ್ತಿದೆ. ಆದರೆ ರೈತರಿಗೆ ಇದೂವರೆಗೆ ಅಕೌಂಟಿಗೆ ಹಣನೇ ಬಂದಿಲ್ಲ ಎಂದು ಗುಡುಗಿದರು.

    ಯುಪಿಯ ಆದಿತ್ಯನಾಥ ಸರ್ಕಾರ ರೈತರ 1 ಲಕ್ಷ ಸಾಲ ಮನ್ನಾ ಮಾಡಿದೆ. ಅವರು ಮಾಡಿದ ಸಾಲ ಮನ್ನಾ ಆರ್ಡರ್ ಕಾಪಿ ತಂದು ನೋಡಿ. ಅವರು ರಾಷ್ಟ್ರೀಕೃತ ಬ್ಯಾಂಕಿನ ಸಾಲ ಕೂಡಾ ಮನ್ನಾ ಮಾಡಿದ್ದಾರೆ. ನಿಮ್ಮಂತೆ ಕೇಂದ್ರದ ಕಡೆ ಅವರು ಬೊಟ್ಟು ಮಾಡಿಲ್ಲ ಎಂದು ಶೆಟ್ಟರ್ ಹೇಳಿದರು.