ಬೆಂಗಳೂರು: ಹವಾಮಾನ ಇಲಾಖೆ ನೀಡುವ ಮಳೆಯ ಲೆಕ್ಕವಾದರೂ ತಪ್ಪಬಹುದು ಆದರೆ ಚುನಾವಣೆ ಹತ್ತಿರದಲ್ಲಿರುವಾಗ ಜೆಡಿಎಸ್ ನಾಯಕರ ಕಣ್ಣೀರಿನ ಮಳೆಯ ಲೆಕ್ಕ ಎಂದಿಗೂ ತಪ್ಪದು ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿಗೆ ಬಿಜೆಪಿ ಟ್ವೀಟ್ ಮೂಲಕ ಟಾಂಗ್ ನೀಡಿದೆ.

ಟ್ವೀಟ್‍ನಲ್ಲಿ ಏನಿದೆ:
ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ! ಮುಂದಿನ ಚುನಾವಣೆಯಲ್ಲಿ ಕಣ್ಣೀರಿನ ಮೂಲಕವಾದರೂ ಇರುವ 30 ಉಳಿಸಿಕೊಳ್ಳಲು ಜೆಡಿಎಸ್ ಹೆಣಗಾಡುತ್ತಿದೆ. ಹವಾಮಾನ ಇಲಾಖೆ ನೀಡುವ ಮಳೆಯ ಲೆಕ್ಕವಾದರೂ ತಪ್ಪಬಹುದು ಆದರೆ ಚುನಾವಣೆ ಹತ್ತಿರದಲ್ಲಿರುವಾಗ ಜೆಡಿಎಸ್ ನಾಯಕರ ಕಣ್ಣೀರಿನ ಮಳೆಯ ಲೆಕ್ಕ ಎಂದಿಗೂ ತಪ್ಪದು. ಇದನ್ನೂ ಓದಿ: ಫಾಝಿಲ್ ಹತ್ಯೆ ಪ್ರಕರಣ- ಪರಾರಿಯಾಗುವ ರಸ್ತೆ ಮಾರ್ಗ ಬದಲಿಸಲು ಹೇಳಿರುವ ರೌಡಿ ಸುಹಾಸ್
https://twitter.com/BJP4Karnataka/status/1553989085986885637
ಇಲ್ಲದ ಕಣ್ಣೀರು ಒತ್ತರಿಸಿ ಬರುವುದು ಇಲ್ಲಿ ಸಾಮಾನ್ಯ! ಒಂದೆಡೆ ಜನತಾ ಜಲಧಾರೆ ಮತ್ತೊಂದೆಡೆ ಕಣ್ಣೀರಧಾರೆ ಒಟ್ಟಿನಲ್ಲಿ ನೀರೋ, ನೀರು! ಮುಂದಿನ ಚುನಾವಣೆಯ ನಂತರ ಜೆಡಿಎಸ್ ಪಕ್ಷ ಮುಳುಗಲಿದೆ ಎಂಬುದರ ಸೂಚನೆಯಿದು. ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಇದನ್ನೂ ಓದಿ: ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಕೊಂದು ಬೆಂಗಳೂರಿನಲ್ಲಿ ಬಚ್ಚಿಟ್ಟುಕೊಂಡಿದ್ದ ಹಂತಕರು..!


