Tag: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

  • ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಕೇಸ್ – ಇಂದೇ ತೀರ್ಪು

    ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಕೇಸ್ – ಇಂದೇ ತೀರ್ಪು

    ಬೆಂಗಳೂರು: ಕೆ.ಆರ್.ನಗರ (KR Nagar) ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ದೋಷಿನಾ? ನಿರ್ದೋಷಿನಾ? ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಆ.1) ತೀರ್ಪು ಪ್ರಕಟಿಸಲಿದೆ.

    ಈಗಾಗಲೇ ವಿಶೇಷ ನ್ಯಾಯಾಲಯ ಕೆಆರ್ ನಗರ ಸಂತ್ರಸ್ತೆಯ ಅತ್ಯಾಚಾರ ಕೇಸ್‌ಲ್ಲಿ 26 ಸಾಕ್ಷಿಗಳ ವಿಚಾರಣೆ ನಡೆಸಿ, ಜು.30ರಂದು ತೀರ್ಪು ಕಾಯ್ದಿರಿಸಿತ್ತು. ಆದರೆ ಬಳಿಕ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್.ಜಿ ಬಳಿ ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆಗಳನ್ನು ಕೇಳಿದ್ದರು. ಇದರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಗ್ಗೆ ಕೆಲ ಮಾಹಿತಿ ಕೇಳಿ ಆ.1ಕ್ಕೆ ಮೂಂದುಡಿತ್ತು.ಇದನ್ನೂ ಓದಿ:ಬಿಹಾರ ಸರ್ಕಾರದಿಂದ ಬಂಪರ್‌ ಗಿಫ್ಟ್‌ – ಬಿಸಿಯೂಟ ತಯಾರಕರು, ದೈಹಿಕ, ಆರೋಗ್ಯ ಶಿಕ್ಷಕರ ಗೌರವಧನ ಡಬಲ್‌ 

    ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಶುಕ್ರವಾರ (ಆ.1) ಹೊರಬೀಳಲಿರುವ ತೀರ್ಪು ಬಹಳ ಮಹತ್ವದ್ದಾಗಿರಲಿದೆ. ಇಂದಿನ ಪ್ರಕಣರದ ಕೇಸ್ ಖುಲಾಸೆಯಾದ್ರೂ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಇನ್ನೂ ಮೂರು ಪ್ರಕರಣಗಳು ಬಾಕಿ ಇರೋದ್ರಿಂದ ಕೇಸ್ ಖುಲಾಸೆಯಾದ್ರೂ ಬಿಡುಗಡೆ ಆಗೋದು ಅನುಮಾನವಾಗಿದೆ.

    ಏನಿದು ಪ್ರಕರಣ?
    ಕೆ.ಆರ್.ನಗರ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ನಂತರ ವಿಷಯ ಹೊರಗೆ ಬರುತ್ತೆ ಎಂದು ತಿಳಿದು ಸಂತ್ರಸ್ತೆಯನ್ನು ರೇವಣ್ಣ, ಭವಾನಿ, ಸತೀಶ್ ಬಾಬು ಸೇರಿದಂತೆ 9 ಜನ ಸೇರಿಕೊಂಡು ಅಪಹರಿಸಿದ್ದರು. ಬಳಿಕ ಆಕೆಯನ್ನು ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು. ಇದೇ ಅಪಹರಣ ಪ್ರಕರಣದಿಂದಲೇ ರೇವಣ್ಣ ಸೇರಿದಂತೆ 8 ಜನ ಜೈಲಿಗೆ ಹೋಗಿದ್ದರು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು.

    ಆನಂತರ ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ, ಆಕೆಯ ಹೇಳಿಕೆ ದಾಖಲು ಮಾಡಿ ಪ್ರಕರಣ ದಾಖಲಿಸಿತ್ತು. ಹೇಳಿಕೆಯ ಮೇಲೆ ತನಿಖೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಸಂತ್ರಸ್ತೆಯನ್ನು ಬೆತ್ತಲುಗೊಳಿಸಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋವೊಂದು ಪತ್ತೆಯಾಗಿತ್ತು. ಇದು ಪ್ರಕರಣದ ಬಹುದೊಡ್ಡ ಸಾಕ್ಷ್ಯವಾಗಿ ಪರಿಣಮಿಸಿತು. ಕೊನೆಗೆ ಎಫ್‌ಎಸ್‌ಎಸ್ ಮೂಲಕ ವಿಡಿಯೋ ತುಣುಕಿನಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದು ಸಾಬೀತಾಗಿತ್ತು.

    ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ದೃಶ್ಯವಿದ್ದ ಪೆನ್ ಡ್ರೈವ್‌ಗಳನ್ನು ಹಾಸನ ಕ್ಷೇತ್ರದಾದ್ಯಂತ ಹಂಚಲಾಗಿತ್ತು. ಬಳಿಕ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ತನಿಖೆ ಆರಂಭವಾಗಿತ್ತು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಇತ್ತೀಚಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಜ್ವಲ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.ಇದನ್ನೂ ಓದಿ: ಆನೇಕಲ್ | ಬಾಲಕ ನಿಶ್ಚಿತ್ ಬರ್ಬರ ಹತ್ಯೆ; ಆರೋಪಿಗಳ ಕಾಲಿಗೆ ಗುಂಡೇಟು, ಇಬ್ಬರು ಅರೆಸ್ಟ್

  • ಮಾಜಿ ಸಚಿವ ನಾಗೇಂದ್ರ ಇಂದು ಜೈಲಿಂದ ಬಿಡುಗಡೆ ಸಾಧ್ಯತೆ

    ಮಾಜಿ ಸಚಿವ ನಾಗೇಂದ್ರ ಇಂದು ಜೈಲಿಂದ ಬಿಡುಗಡೆ ಸಾಧ್ಯತೆ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಬಹುಕೋಟಿ ಹಗರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ನಾಗೇಂದ್ರಗೆ (Nagendra) ಜಾಮೀನು ಸಿಕ್ಕಿದೆ. ಇಂದು (ಮಂಗಳವಾರ) ಅವರು ಜೈಲಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

    ಸದ್ಯ ಪರಪ್ಪನ ಅಗ್ರಹಾರ ಜೈಲಲ್ಲಿ ನಾಗೇಂದ್ರ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಸೋಮವಾರ (ಅ.14) ಸಂಜೆ ಕೋರ್ಟ್‌ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಇಂದು ನಾಗೇಂದ್ರ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special MP/MLA Court) ನಿರೀಕ್ಷಣಾ ಜಾಮೀನು (Bail) ಮಂಜೂರು ಮಾಡಿತ್ತು. ಈ ಪ್ರಕರಣದಲ್ಲಿ ಜುಲೈ 12 ರಂದು ಜಾರಿ ನಿರ್ದೇಶನಾಲಯ (ED) ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ ಅವರನ್ನು ಬಂಧಿಸಿತ್ತು. 2 ಲಕ್ಷ ರೂ. ಬಾಂಡ್, ಎರಡು ಶ್ಯೂರಿಟಿ, ತನಿಖಾ ಸಂಸ್ಥೆಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕೆಂದು ಕೋರ್ಟ್‌ ಷರತ್ತು ವಿಧಿಸಿದೆ.

    ವಾಲ್ಮೀಕಿ ನಿಗಮದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಸ್ಪರ್ಧಿಸಿದ್ದ ಬಳ್ಳಾರಿ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ (B Nagendra) ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿತ್ತು.

    ನಾಗೇಂದ್ರ ಅವರ ಸೂಚನೆ ಮೇರೆಗೆ ವಿಜಯ್ ಕುಮಾರ್ ಗೌಡ ನಗದನ್ನು ನಿರ್ವಹಿಸುತ್ತಿದ್ದರು. ಅವರ ಮೊಬೈಲ್ ಫೋನ್‌ನಿಂದ ಚುನಾವಣಾ ವೆಚ್ಚದ ವಿವರಗಳನ್ನು ಪಡೆಯಲಾಗಿದೆ. ಹಗರಣ ಬೆಳಕಿಗೆ ಬಂದ ನಂತರ ರಾಜೀನಾಮೆ ನೀಡಿದ ಬಿ.ನಾಗೇಂದ್ರ ಅವರು ತಮ್ಮ ಮೊಬೈಲ್ ಫೋನ್‌ಗಳನ್ನು ನಾಶಪಡಿಸಿದ್ದಾರೆ. ಅಷ್ಟೇ ಅಲ್ಲದೇ ಉಳಿದವರಿಗೆ ಈ ಪ್ರಕರಣದಲ್ಲಿ ಮೌನವಾಗಿರುವಂತೆ ಸೂಚನೆ ನೀಡಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಇಡಿ ಹೇಳಿತ್ತು.

  • ಪ್ರಜ್ವಲ್ ರೇವಣ್ಣ ಕೇಸ್: 3ನೇ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನು ಅರ್ಜಿ ವಜಾ!

    ಪ್ರಜ್ವಲ್ ರೇವಣ್ಣ ಕೇಸ್: 3ನೇ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನು ಅರ್ಜಿ ವಜಾ!

    – ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ ಪಡೆದ ಎಸ್‌ಐಟಿ

    ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special Court of Representatives) ವಜಾಗೊಳಿಸಿದೆ.

    ಈಗಾಗಲೇ ಎರಡು ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣರನ್ನ ವಶಕ್ಕೆ ಪಡೆದು ಎಸ್‌ಐಟಿ ವಿಚಾರಣೆ (SIT Enquiry)  ನಡೆಸುತ್ತಿದೆ. ಇದೀಗ 3ನೇ ಪ್ರಕರಣದಲ್ಲೂ ಜಾಮೀನು (Bail) ಅರ್ಜಿ ವಜಾಗೊಂಡಿದೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ; ಮತ್ತೋರ್ವ ಆರೋಪಿ ಬಂಧನ

    ಇತ್ತೀಚೆಗಷ್ಟೇ ಲೈಂಗಿಕ ಕಿರುಕುಳ‌ ಪ್ರಕರಣದಲ್ಲಿ 42ನೇ ಎಸಿಎಂಎಂ ನ್ಯಾಯಾಲಯವು ಪ್ರಜ್ವಲ್‌ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಬುಧವಾರ ಸೈಬರ್ ಅಪರಾಧ ಠಾಣೆ FIR ಸಂಖ್ಯೆ.2/2024 ರಲ್ಲಿ ವಶಕ್ಕೆ ಪಡೆದಿದ್ದ ಎಸ್‌ಐಟಿ ಕೋರ್ಟ್ ಮುಂದೆ ಹಾಜರುಪಡಿಸಿತ್ತು. ಈ ವೇಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, 6 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇದನ್ನೂ ಓದಿ: ಕುವೈತ್ ಅಗ್ನಿ ದುರಂತದಲ್ಲಿ 40 ಮಂದಿ ಭಾರತೀಯರ ದುರ್ಮರಣ – ಮೋದಿ ಸಂತಾಪ

  • ಸಚಿವ ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

    ಸಚಿವ ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

    ಬೆಂಗಳೂರು: ಆದಾಯ ತೆರಿಗೆ ಇಲಾಖೆ (ಐಟಿ) ದಾಖಲಿಸಿದ್ದ ಮೂರು ಪ್ರಕರಣಗಳಲ್ಲಿ ಜಲಸಂಪಸ್ಮೂಲ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

    ಐಟಿ ದಾಳಿಯ ವೇಳೆ ಸಚಿವ ಡಿಕೆ ಶಿವಕುಮಾರ್ ಅವರು ಸಾಕ್ಷ್ಯನಾಶ, ತಪ್ಪು ಮಾಹಿತಿ, ಚಟಿ ಹರಿದ ಆರೋಪದ ಅಡಿ ಪ್ರಕರಣ ದಾಖಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ಪ್ರಕರಣಗಳನ್ನು ವಜಾಗೊಳಿಸಿದೆ.

    ನಾಲ್ಕನೇ ಪ್ರಕರಣ ಹವಾಲಾ ಸಂಬಂಧ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಮಾರ್ಚ್ 15ಕ್ಕೆ ಆದೇಶ ನೀಡಲಾಗುತ್ತದೆ ಎಂದು ವಿಶೇಷ ನ್ಯಾಯಾಲಯದ ನ್ಯಾ. ಬಿ.ವಿ.ಪಾಟೀಲ್ ಅವರು ತಿಳಿಸಿದ್ದಾರೆ.

    ಆರ್ಥಿಕ ವರ್ಷ ಮುಗಿಯುವ ಮುನ್ನವೇ ಐಟಿ ಇಲಾಖೆ ದೂರು ದಾಖಲು ಮಾಡಿದ್ದಾರೆ. ನಾನು ಸಂಪೂರ್ಣ ಲೆಕ್ಕ ನೀಡಲು ಸಿದ್ಧ ಎಂದು ಸಚಿವ ಡಿ.ಕೆ.ಶಿವಕುಮಾರ್ ಅವರು ಕೋರ್ಟ್ ಮುಂದೆ ಹೇಳಿಕೊಂಡಿದ್ದರು.

    ಮೂರು ಆರೋಪಗಳಿಂದ ಮುಕ್ತವಾದರೂ ಸಚಿವ ಡಿಕೆ ಶಿವಕುಮಾರ್ ಅವರಿಗೆ ಫುಲ್ ರಿಲೀಫ್ ಸಿಕ್ಕಿಲ್ಲ. ಏಕೆಂದರೆ ಸಚಿವರ ಬಳಿ ಅಘೋಷಿತ ಆಸ್ತಿ ಇದೆ ಎಂದು ಸಾಬೀತು ಪಡಿಸುವ ಸಾಕ್ಷಿಗಳಿದ್ದರೆ ಹೊಸದಾಗಿ ದೂರು ದಾಖಲಿಸಬಹುದು ಎಂದು ಐಟಿಗೆ ಕೋರ್ಟ್ ಅವಕಾಶ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv