Tag: ಜನಸಂಖ್ಯಾ ನಿಯಂತ್ರಣ

  • ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ ಜನಸಂಖ್ಯಾ ನಿಯಂತ್ರಣ ಮಸೂದೆ ಜಾರಿಗೊಳಿಸಿ – ಗಿರಿರಾಜ್ ಸಿಂಗ್

    ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ ಜನಸಂಖ್ಯಾ ನಿಯಂತ್ರಣ ಮಸೂದೆ ಜಾರಿಗೊಳಿಸಿ – ಗಿರಿರಾಜ್ ಸಿಂಗ್

    ನವದೆಹಲಿ: ಜನಸಂಖ್ಯಾ ನಿಯಂತ್ರಣ ಮಸೂದೆಗೆ ಸಂಬಂಧಿಸಿದಂತೆ ಬಿಜೆಪಿ (BJP) ನಾಯಕರ ಹೇಳಿಕೆಗಳು ಆಗಾಗ ಮುನ್ನೆಲೆಗೆ ಬರುತ್ತಿವೆ. ಕೇಂದ್ರ ಸಚಿವರೂ ಆಗಿರವ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ (Giriraj Singh) ಕೂಡ ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯ (Population) ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

    ಲಿಂಗ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಂಖ್ಯಾ ನಿಯಂತ್ರಣ ಮಸೂದೆ (Population Control Bill) ಬಗ್ಗೆ ಅವರು ಮತ್ತೊಮ್ಮೆ ದನಿ ಎತ್ತಿದ್ದು, ಭಾರತದಲ್ಲಿ ಸೀಮಿತ ಸಂಪನ್ಮೂಲ ಇರುವುದರಿಂದ ಜನಸಂಖ್ಯಾ ನಿಯಂತ್ರಣ ಮಸೂದೆ ನಿರ್ಣಾಯಕವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮೆಸ್ಸಿ ಆಟ ನೋಡಲು ಕಿಕ್ಕಿರಿದ ಅಭಿಮಾನಿಗಳು – 28 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟೊಂದು ಜನ!

    ನಮ್ಮಲ್ಲಿ ಸೀಮಿತ ಸಂಪನ್ಮೂಲ ಇರುವುದರಿಂದ ಜನಸಂಖ್ಯೆ ನಿಯಂತ್ರಿಸುವುದು ಅವಶ್ಯಕವಾಗಿದೆ. ಭಾರತವು ವೇಗವಾಗಿ ಅಭಿವೃದ್ಧಿ ಹೊಂದಬೇಕಾದರೆ, ಈ ಬಗ್ಗೆ ಕಾನೂನು ರೂಪಿಸಬೇಕು ಎಂದು ಗಿರಿರಾಜ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆ ಜೊತೆಗೆ 75 ಸಾವಿರ ಭಗವದ್ಗೀತೆ ಪುಸ್ತಕ ವಿತರಣೆ – 132 ಜೋಡಿಗೆ ಮದುವೆ ಭಾಗ್ಯ

    ಚೀನಾ (China) ಜನಸಂಖ್ಯೆ ನಿಯಂತ್ರಿಸುವುದಕ್ಕಾಗಿ `ಒನ್ ಚೈಲ್ಡ್ ಪಾಲಿಸಿ’ (ಒಂದು ಮಗುವನ್ನು ಹೊಂದುವ ನೀತಿ) ಜಾರಿಗೆ ತಂದಿತು. ಈ ಮೂಲಕ ಜನಸಂಖ್ಯೆಯನ್ನು ನಿಯಂತ್ರಿಸಿ ಅಭಿವೃದ್ಧಿ ಸಾಧಿಸಿತು. ಇಂದು ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ 30 ಮಕ್ಕಳು ಜನಿಸುತ್ತಿದ್ದಾರೆ. ಹೀಗಿರುವಾಗ ನಾವು ಚೀನಾದೊಂದಿಗೆ ಸ್ಪರ್ಧಿಸೋದು ಹೇಗೆ? ಆದ್ದರಿಂದ ಮಸೂದೆಯನ್ನು ಧರ್ಮ ಅಥವಾ ಪಂಗಡವನ್ನು ಲೆಕ್ಕಿಸದೇ ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ ಜಾರಿಗೊಳಿಸಬೇಕು. ಅನುಸರಿಸದವರ ಮತದಾನದ ಹಕ್ಕನ್ನೂ ಕಸಿದುಕೊಳ್ಳಬೇಕು ಎಂದು ಕೇಂದ್ರ ಸಚಿವ ಸಲಹೆ ನೀಡಿದ್ದಾರೆ.

    ಸರ್ಕಾರ ಮಹಿಳೆಯರ ಮೇಲಿನ ಯಾವುದೇ ದೌರ್ಜನ್ಯವನ್ನು ಧರ್ಮದ ಚೌಕಟ್ಟಿನಲ್ಲಿ ನೋಡಬಾರದು. ಅಂತಹ ಘಟನೆಗಳನ್ನು ಪೂರ್ವಾಗ್ರಹ ರಹಿತವಾಗಿ ಎಲ್ಲರೂ ಖಂಡಿಸಬೇಕು ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕದಲ್ಲಿ ಜಾರಿಯಾಗುತ್ತಾ ಯುಪಿ ಮಾದರಿ ಜನಸಂಖ್ಯಾ ನಿಯಂತ್ರಣ ಕಾನೂನು?

    ಕರ್ನಾಟಕದಲ್ಲಿ ಜಾರಿಯಾಗುತ್ತಾ ಯುಪಿ ಮಾದರಿ ಜನಸಂಖ್ಯಾ ನಿಯಂತ್ರಣ ಕಾನೂನು?

    – ಪರಿಷತ್‍ನಲ್ಲಿ ಶಾಸಕಿ ಭಾರತಿ ಶೆಟ್ಟಿ ಪ್ರಸ್ತಾಪ

    ಬೆಂಗಳೂರು: ಕರ್ನಾಟಕದಲ್ಲಿ ಹಿಜಬ್ ವಿವಾದ, ದಿ ಕಾಶ್ಮೀರ್ ಫೈಲ್ಸ್ ಸಿನಿಮಾ, ಮುಸ್ಲಿಂ ವರ್ತಕರಿಗೆ ನಿರ್ಬಂಧ ಬಳಿಕ ಇದೀಗ ಬಿಜೆಪಿ ಶಾಸಕರಿಂದ ಜನಸಂಖ್ಯಾ ನಿಯಂತ್ರಣದ ಬಗ್ಗೆ ಒತ್ತಡ ಕೇಳಿಬಂದಿದೆ.

    ಈಗಾಗಲೇ ಉತ್ತರ ಪ್ರದೇಶದಲ್ಲಿ ಎರಡು ಮಕ್ಕಳಿಗಿಂತ ಹೆಚ್ಚಿದ್ರೆ ಸರ್ಕಾರಿ ಸೌಲಭ್ಯ ಕಡಿತ ಎಂಬ ನಿರ್ಣಯ ತೆಗೆದುಕೊಳ್ಳಲಾಗಿದೆ. ಉತ್ತರಾಖಂಡದಲ್ಲಿ ಏಕರೂಪ ನಾಗರೀಕ ಸಂಹಿತೆಗೆ ಕ್ಯಾಬಿನೆಟ್‍ನಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಇದನ್ನೆಲ್ಲ ಗಮನಿಸಿದ ಬಳಿಕ ಇದೀಗ ಕರ್ನಾಟಕದಲ್ಲಿ ಜನಸಂಖ್ಯಾ ನಿಯಂತ್ರಣ ಕಾನೂನು ಜಾರಿಗೆ ತರಲು ಒತ್ತಡ ಕೇಳಿ ಬರುತ್ತಿದೆ. ಈ ಮೂಲಕ ಮುಂದಿನ ಚುನಾವಣೆಗೆ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣ ಅಸ್ತ್ರ ಪ್ರಯೋಗಿಸುತ್ತಾ ಸರ್ಕಾರ ಕಣ್ಣಿಟ್ಟಿದೆ. ಇದನ್ನು ಗಮನಿಸಿದಾಗ ಕರ್ನಾಟಕದಲ್ಲಿ ಬಿಜೆಪಿ ಮುಂದಿನ ಅಸ್ತ್ರ ಜನಸಂಖ್ಯಾ ನಿಯಂತ್ರಣನಾ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಮಾರಾಮಾರಿ- ಐವರು ಬಿಜೆಪಿ ಶಾಸಕರು ಅಮಾನತು

    ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಬಿಜೆಪಿ ಎಮ್‍ಎಲ್‍ಸಿ ಭಾರತಿ ಶೆಟ್ಟಿ ಜನಸಂಖ್ಯಾ ನಿಯಂತ್ರಣದ ಪ್ರಸ್ತಾಪವನ್ನಿಟ್ಟಿದ್ದಾರೆ. ಸರ್ಕಾರದ ಪ್ರಯತ್ನಗಳ ಹೊರತಾಗಿಯೂ ಜನಸಂಖ್ಯೆ ಏರಿಕೆ ನಿಯಂತ್ರಣವಾಗುತ್ತಿಲ್ಲ. ಹೀಗಾಗಿ ಜನಸಂಖ್ಯಾ ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೆ ತರಬೇಕು. ಉತ್ತರ ಪ್ರದೇಶದ ಸರ್ಕಾರ ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳು ಇದ್ದವರಿಗೆ ಸರ್ಕಾರಿ ಸೌಲಭ್ಯ ಇಲ್ಲ ಅಂತ ಹೇಳಿದೆ. ಅದನ್ನು ಪರಿಶೀಲಿಸಿ ನಮ್ಮ ರಾಜ್ಯದಲ್ಲಿಯೂ ಅಂಥ ಕ್ರಮ ಜಾರಿ ಮಾಡಿ. ಎರಡು ಮಕ್ಕಳನ್ನು ಹೊಂದಿದ ಕುಟುಂಬಕ್ಕೆ ಮಾತ್ರ ಸರ್ಕಾರಿ ಸೌಲಭ್ಯ ಕೊಡಿ ಎಂದು ಒತ್ತಾಯಿಸಿದರು. ಇದನ್ನೂ ಓದಿ:  ಯುಗಾದಿ ವೇಳೆ ಹಲಾಲ್ ಮಾಂಸ ಬಹಿಷ್ಕರಿಸಿ – ಹಿಂದೂ ಜನಜಾಗೃತಿ ಸಮಿತಿ ಕರೆ

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ತೆರಿಗೆ ಹಣ ಪೋಲಾಗುತ್ತಿದೆ. ಜನರ ತೆರಿಗೆ ಸರಿಯಾಗಿ ವಿನಿಯೋಗ ಆಗಬೇಕು. ತೆರಿಗೆ ಹಣ ಕೊಡುವವರು ಯಾರೋ, ಫಲಾನುಭವಿಗಳು ಇನ್ಯಾರೋ ಆಗಬಾರದು. ಮಧ್ಯಮ ವರ್ಗದವರಿಂದಲೂ ತೆರಿಗೆ ಸಂಗ್ರಹವಾಗುತ್ತಿದೆ. ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ವರಿಗೂ ಸಮಪಾಲು ಅನ್ನೋದು ಅನ್ವಯ ಆಗಲ್ಲ. ಹೆಚ್ಚು ಮಕ್ಕಳಿದ್ದವರ ಮನೆಗೆ ಹೆಚ್ಚು ಅಕ್ಕಿ ಕೊಡುವಂಥ ಪರಿಸ್ಥಿತಿ ಇದೆ. ಒಂದು ಮನೆಗೆ ಒಂದು ಕ್ವಿಂಟಾಲ್ ಅಕ್ಕಿ ಸರ್ಕಾರ ಕೊಡುತ್ತಿದೆ. ಸಬ್ಸಿಡಿಯಲ್ಲಿ ಹೆಚ್ಚು ಮಕ್ಕಳಿರುವ ಮನೆಗೆ ಹೆಚ್ಚು ಅಕ್ಕಿ ಸರ್ಕಾರ ಕೊಡುತ್ತಿದೆ. ಜನಸಂಖ್ಯೆ ಹೆಚ್ಚಳ ಆರ್ಥಿಕ ಕುಸಿತಕ್ಕೂ ಕಾರಣವಾಗಿದೆ ಎಂದು ಹೇಳಿದರು.

    ನಾನು ಚುನಾವಣೆ ಹಿನ್ನೆಲೆಯಲ್ಲಿ ಈ ಒತ್ತಾಯ ಮಾಡಿಲ್ಲ. ಇಂದಿರಾಗಾಂಧಿ ಕಾಲದಿಂದಲೂ ಜನಸಂಖ್ಯೆ ನಿಯಂತ್ರಣ ಕ್ರಮಗಳಿವೆ. ನಾವಿಬ್ಬರೂ ನಮಗಿಬ್ಬರು ಅನ್ನೋದು ಬಂತು. ಬಳಿಕ ನಾವಿಬ್ಬರು ನಮಗೊಬ್ಬರು ಅಂತನೂ ಬಂತು. ಕೆಲವರು ನಾವಿಬ್ಬರು ನಮ್ಮೊಂದಿಗೆ 28 ಜನ ಅಂತ ಬದುಕುತ್ತಿದ್ದಾರೆ ಇದು ನ್ಯಾಯವಲ್ಲ. ಮುಸ್ಲಿಂ ಸಮುದಾಯದವರನ್ನು ದೃಷ್ಟಿಯಲ್ಲಿಟ್ಕೊಂಡು ನಾನು ಈ ಒತ್ತಾಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮುಸ್ಲಿಂ ವ್ಯಾಪಾರಸ್ಥರಿಗೆ ಆರ್ಥಿಕ ನಿರ್ಬಂಧ ಹೇರಲು ಅವಕಾಶ ಕೊಡುವುದಿಲ್ಲ: ಅನಿಲ ಬೆನಕೆ

    ನಮ್ಮ ಸರ್ಕಾರ ಅಲ್ಪಸಂಖ್ಯಾತರಿಗೆ ಅನೇಕ ಉತ್ತಮ ಕೆಲಸ ಮಾಡಿದೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಕೊಡಲು ಬಂದವರು. ನಾವು ರಾಜ್ಯದಲ್ಲಿ ಯಾವತ್ತು ಕೂಡ ಒಂದೇ ಸಮುದಾಯವನ್ನು ಮೆಚ್ಚಿಸಲು ಹೊರಟಿಲ್ಲ. ಕಾಂಗ್ರೆಸ್ ಈ ಹಿಂದೆ ಶಾದಿ ಭಾಗ್ಯ ನೀಡಿ ಮುಸ್ಲಿಂ ಸಮುದಾಯವನ್ನು ಮೆಚ್ಚಿಸಲು ಪ್ರಯತ್ನ ಪಟ್ಟಿತ್ತು. ನಾವು ಆ ರೀತಿ ಮಾಡಿಲ್ಲ. ಅಂಗೈ ಹುಣ್ಣಿಗೆ ಕನ್ನಡಿ ಬೇಡ ಎಂದು ಮಾರ್ಮಿಕವಾಗಿ ನುಡಿದರು.

  • ಸರ್ಕಾರ ಕಾನೂನು ರೂಪಿಸುವವರೆಗೂ ಮಕ್ಕಳನ್ನು ಹಡೆಯುತ್ತಲೇ ಇರು ಎಂದು ಪತ್ನಿಗೆ ಹೇಳಿದ್ದೀನಿ: ಬಿಜೆಪಿ ಶಾಸಕ

    ಸರ್ಕಾರ ಕಾನೂನು ರೂಪಿಸುವವರೆಗೂ ಮಕ್ಕಳನ್ನು ಹಡೆಯುತ್ತಲೇ ಇರು ಎಂದು ಪತ್ನಿಗೆ ಹೇಳಿದ್ದೀನಿ: ಬಿಜೆಪಿ ಶಾಸಕ

    ಮುಜಾಫರ್ ನಗರ್ : ಜನಸಂಖ್ಯೆ ನಿಯಂತ್ರಣಕ್ಕೆ ಸರ್ಕಾರ ನಿರ್ದಿಷ್ಟ ಕಾನೂನು ರೂಪಿಸುವವರೆಗೂ ನೀನು ಮಕ್ಕಳನ್ನು ಹಡೆಯುವುದನ್ನು ನಿಲ್ಲಿಸಬೇಡ ಎಂದು ಪತ್ನಿಗೆ ಹೇಳಿದ್ದೇನೆ ಎಂದು ಹೇಳುವ ಮೂಲಕ ಉತ್ತರ ಪ್ರದೇಶ ಬಿಜೆಪಿ ಶಾಸಕರೊಬ್ಬರು ವಿವಾದಕ್ಕೆ ಕಾರಣರಾಗಿದ್ದಾರೆ.

    ಖತೌಲಿ ಕ್ಷೇತ್ರದ ಬಿಜೆಪಿ ಶಾಸಕ ವಿಕ್ರಮ್ ಸೈನಿ ಶುಕ್ರವಾರ ಈ ಹೇಳಿಕೆಯನ್ನು ನೀಡಿದ್ದಾರೆ. ಮುಜಾಫರ್ ನಗರದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮಗೆ ಇಬ್ಬರು ಮಕ್ಕಳು ಸಾಕು ಎಂದು ನನ್ನ ಪತ್ನಿ ಹೇಳಿದ್ದಾಳೆ. ಆದರೆ ಸರ್ಕಾರ ಜನಸಂಖ್ಯಾ ನಿಯಂತ್ರಣ ಕಾನೂನು ರೂಪಿಸುವವರೆಗೂ ಮಕ್ಕಳನ್ನು ಹಡೆಯುತ್ತಾ ಇರಲು ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

    ನಾವು ಇಬ್ಬರು ಮಕ್ಕಳು ಸಾಕು ಎಂಬ ನಿಯಮವನ್ನು ಒಪ್ಪಿಕೊಂಡಿದ್ದೇವೆ. ಆದರೆ ಇತರರು ಅದನ್ನು ಒಪ್ಪಿಕೊಂಡಿಲ್ಲ. ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ಹಿಂದೂಗಳು ಮಕ್ಕಳಿಗೆ ಜನ್ಮ ನೀಡುವುದನ್ನು ನಿಲ್ಲಿಸಬಾರದು. ನನ್ನ ಪತ್ನಿ ನಮಗೆ ಮೂರನೇ ಮಗು ಬೇಡವೆಂದು ಹೇಳಿದ್ದಳು. ಆದರೆ ನಾನು 4 ರಿಂದ 5 ಮಕ್ಕಳನ್ನು ಪಡೆಯೋಣವೆಂದು ಹೇಳಿದ್ದೇನೆ ಎಂದು ಜನಸಂಖ್ಯಾ ನಿಯಂತ್ರಣ ವಿಷಯದ ಕುರಿತು ನಡೆದ ಕಾರ್ಯಕ್ರಮದಲ್ಲಿ ಹೇಳಿದರು.

    ಶಾಸಕರು ವಿವಾದತ್ಮಾಕ ಹೇಳಿಕೆ ಮೂಲಕವೇ ಹೆಚ್ಚು ಸುದ್ದಿಯಾಗುತ್ತಿದ್ದು, ಕಳೆದ ವರ್ಷ ಜನವರಿಯಲ್ಲಿ ಹಿಂದೂಸ್ತಾನ ಹಿಂದೂಗಳದ್ದು ಮಾತ್ರ, ಇತರರು ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳಿದ್ದರು. ಅಲ್ಲದೇ ಹೊಸ ವರ್ಷದ ಆಚರಣೆ ಕ್ರೈಸ್ತ ಸಮುದಾಯದ ಹಬ್ಬ. ಇದರಿಂದ ಹಿಂದೂಗಳು ದೂರವಿರಿ ಎಂದು ಹೇಳಿದ್ದರು. ಫೆಬ್ರವರಿ 14ರ ಪ್ರೇಮಿಗಳ ದಿನವನ್ನು ಆಚರಿಸಬೇಡಿ ಎಂದು ಯುವಕರಿಗೆ ಕರೆ ನೀಡಿದ್ದರು.