Tag: ಜನೋತ್ಸವ

  • ಮುಂದೂಡಲಾಗಿದ್ದ ಜನೋತ್ಸವ ಕಾರ್ಯಕ್ರಮ ಇದೇ 8 ರಂದು ನಡೆಯಲಿದೆ: ವೇಣುಗೋಪಾಲ್

    ಮುಂದೂಡಲಾಗಿದ್ದ ಜನೋತ್ಸವ ಕಾರ್ಯಕ್ರಮ ಇದೇ 8 ರಂದು ನಡೆಯಲಿದೆ: ವೇಣುಗೋಪಾಲ್

    ಕೋಲಾರ: ಬಿಜೆಪಿ ಪಕ್ಷದ ಕಾರ್ಯಕರ್ತನ ಕೊಲೆಯಿಂದ ಮುಂದೂಡಲಾಗಿದ್ದ ಜನೋತ್ಸವ ಕಾರ್ಯಕ್ರಮವು ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಡಾ. ವೇಣುಗೋಪಾಲ್ ತಿಳಿಸಿದರು.

    ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ 2 ವರ್ಷ, ಬಸವರಾಜ ಬೊಮ್ಮಾಯಿ ನೇತೃತ್ವದ 1 ವರ್ಷದ ಸಾಧನೆಯನ್ನು ಕಾರ್ಯಕರ್ತರಿಗೆ ತಿಳಿಸುವುದು ಈ ಜನೋತ್ಸವದ ಉದ್ದೇಶವಾಗಿದೆ. ರಾಜ್ಯದಲ್ಲಿ ಹಲವಾರು ಸಂಕಷ್ಟದ ಸವಾಲುಗಳ ಮಧ್ಯೆಯೂ ಉತ್ತಮ ಆಡಳಿತ ನೀಡಿದ್ದಾರೆ. ಅದಕ್ಕಾಗಿ ಕಾರ್ಯಕರ್ತರಿಗೆ ಸರ್ಕಾರಗಳ ಯೋಜನೆಗಳ ಕುರಿತು ತಿಳಿಸಲು ಜನೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಸಿಇಟಿ ರ್‍ಯಾಂಕ್ ರದ್ದು- ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ

    ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರದಿಂದ ಕೊರೊನಾವನ್ನು ಎದುರಿಸಲಾಯಿತು. ಅದರಂತೆ ವಿಶೇಷ ಪ್ಯಾಕೇಜ್ ಘೋಷಣೆ, ಆರೋಗ್ಯ ವ್ಯವಸ್ಥೆಯನ್ನು ಪ್ರಬಲವಾಗಿ ಮಾಡಿದ್ದು, ಸಾಮಾನ್ಯ ಜನತೆಗೆ ಮೂಲಸೌಕರ್ಯಗಳನ್ನು ಒದಗಿಸಲಾಯಿತು. ರೈತರು ಸೇರಿದಂತೆ ಕಾರ್ಮಿಕರು ಮಹಿಳೆಯರಿಗೆ ಸೌಲಭ್ಯಗಳನ್ನು ಒದಗಿಸಲಾದೆ. ಅತ್ಯುತ್ತಮ ಆರೋಗ್ಯ ಸೇವೆಯಿಂದ ಇಲಾಖೆ ಪ್ರಶಂಸೆಗೆ ಒಳಪಟ್ಟಿತ್ತು. ಕೋವಿಡ್ ಸಂದರ್ಭದಲ್ಲಿ 10 ಲಕ್ಷ ಲಸಿಕಾ ಕಾರ್ಯವನ್ನೂ ಯಶಸ್ವಿಯಾಗಿ ನೀಡಲಾಗಿದೆ. ಬಿಪಿಎಲ್ ಕಾರ್ಡುದಾರರಿಗೆ 2 ವರ್ಷಗಳ ಕಾಲ ಅಕ್ಕಿ, ಆಹಾರ ಕಿಟ್ ವಿತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಪಿಎಸ್‍ಐ ಅಕ್ರಮ ಕೇಸ್‍ಗೆ ಟ್ವಿಸ್ಟ್ – ಲಂಚ ಪಡೆದ ಬಿಜೆಪಿ ಶಾಸಕರ ಆಡಿಯೋ ವೈರಲ್

    ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಲು 4 ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸುಮಾರು ಎರಡೂವರೆ ಲಕ್ಷ ಮಂದಿ ಸೇರಿದಂತೆ ಜಿಲ್ಲೆಯಾದ್ಯಂತ 60 ಸಾವಿರ ಮಂದಿಗೆ 1,200ಕ್ಕೂ ಅಧಿಕ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ನಳೀನ್ ಕುಮಾರ್ ಕಟೀಲ್ ಸೇರಿದಂತೆ ರಾಷ್ಟ್ರೀಯ ಮತ್ತು ರಾಜ್ಯ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಸೆಪ್ಟೆಂಬರ್ 8ಕ್ಕೆ ಬಿಜೆಪಿ ಜನೋತ್ಸವ ಕಾರ್ಯಕ್ರಮ: ಸುಧಾಕರ್

    ಸೆಪ್ಟೆಂಬರ್ 8ಕ್ಕೆ ಬಿಜೆಪಿ ಜನೋತ್ಸವ ಕಾರ್ಯಕ್ರಮ: ಸುಧಾಕರ್

    ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮಕ್ಕೆ ಸಿದ್ಧತೆ ಮತ್ತೆ ಪ್ರಾರಂಭವಾಗಿದೆ. ಸೆಪ್ಟೆಂಬರ್ 8ಕ್ಕೆ ನಿಂತು ಹೋಗಿದ್ದ ಜನೋತ್ಸವ ನಡೆಯಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದರು.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ 3 ವರ್ಷದ ಆಡಳಿತದ ಸಂಭ್ರಮವನ್ನು ಹಂಚಿಕೊಳ್ಳಲು ಸೆಪ್ಟಂಬರ್‌ 8 ರಂದು ಜನೋತ್ಸವ ಕಾರ್ಯಕ್ರಮ ನಡೆಸಲಾಗುತ್ತದೆ. ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಜೊತೆಗೆ ಹಲವು ರಾಷ್ಟ್ರೀಯ ನಾಯಕರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು. ಇದನ್ನೂ ಓದಿ: ಮಧ್ಯಾಹ್ನ ಮಾಂಸಾಹಾರ ತಿಂದು ಸಂಜೆ ದೇವಸ್ಥಾನಕ್ಕೆ ಹೋಗಬಾರದಾ : ಸಿದ್ದರಾಮಯ್ಯ ಪ್ರಶ್ನೆ

    ಮಾಜಿ ಸಿಎಂ ಯಡಿಯೂರಪ್ಪ, ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರು, ಎಲ್ಲಾ ನಾಯಕರು, ಸಚಿವರು, ಶಾಸಕರು, ಕಾರ್ಯಕರ್ತರು ಇದರಲ್ಲಿ ಭಾಗಿಯಾಗಲಿದ್ದಾರೆ. 3 ಜಿಲ್ಲೆಯ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 2 ರಿಂದ 3 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.

    ಜನೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರದ ಯೋಜನೆಗಳ ಫಲಾನುಭವಿಗಳು ಕೂಡ ಭಾಗಿಯಾಗಲಿದ್ದಾರೆ. ಸರ್ಕಾರದ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಅಭಿನಂದಿಸಲು ಬರಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಗೋಕಾಕ್‍ನಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋ ಹರಿದು ಹಾಕಿದ್ದ ಆರೋಪಿ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ಸೆ. 8ಕ್ಕೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ: ಸುಧಾಕರ್

    ಸೆ. 8ಕ್ಕೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ: ಸುಧಾಕರ್

    ಚಿಕ್ಕಬಳ್ಳಾಪುರ: ಸೆಪ್ಟೆಂಬರ್ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವವನ್ನು ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದರು.

    ಸಾದಲಿ ಗ್ರಾಮದಲ್ಲಿ ಮಾತನಾಡಿದ ಅವರು, ಬಿಜೆಪಿ ಜನೋತ್ಸವ ಕಾರ್ಯಕ್ರಮದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ನನಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಜನೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಬರುವುದು ಖಚಿತವಾಗಿದೆ. ಸೆಪ್ಟೆಂಬರ್ 8ರಂದು ಗುರುವಾರ 11 ಗಂಟೆಗೆ ಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಕಾರ್ಯಕರ್ತರು ಆಗಮಿಸುವಂತೆ ಮನವಿ ಮಾಡಿದರು. ಇದನ್ನೂ ಓದಿ: ಮೊಟ್ಟೆ ಎಸೆದವ ಕಾಂಗ್ರೆಸ್‌ ಕಾರ್ಯಕರ್ತ ಅಲ್ಲ; ನಾವು ಸಾಕ್ಷ್ಯ ಬಿಡುಗಡೆ ಮಾಡಿದ್ದೇವೆ – ಮಿಥುನ್‌ ಗೌಡ

    bjP

    ಬಿಜೆಪಿ ಸರ್ಕಾರದ 3 ವರ್ಷದ ಸಾಧನೆ ಕುರಿತು ಬಿಜೆಪಿ ಜನೋತ್ಸವ ಕಾರ್ಯಕ್ರಮವಾಗಿದೆ. ಈ ಹಿಂದೆ ಎರಡು ಬಾರಿ ಕಾರ್ಯಕ್ರಮ ನಿಗದಿಯಾಗಿ ರದ್ದಾಗಿತ್ತು. ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ ಒಮ್ಮೆ ರದ್ದಾಗಿತ್ತು. ಆನಂತರ ಮತ್ತೆ ಆಗಸ್ಟ್ 28 ಗಣೇಶ ಹಬ್ಬ ಹತ್ರ ಇದೆ ಎಂದು ಕಾರ್ಯಕ್ರಮ ರದ್ದು ಮಾಡಿದ್ದರು. ಇದನ್ನೂ ಓದಿ: ಸ್ಪೈಸ್‌ಜೆಟ್‌ ಪೈಲಟ್‌ನ ಲೈಸನ್ಸ್ 6 ತಿಂಗಳು ಅಮಾನತು – DGCA ಆದೇಶ

    Live Tv
    [brid partner=56869869 player=32851 video=960834 autoplay=true]

  • ಸರ್ಕಾರದ ಜನೋತ್ಸವಕ್ಕೆ ಸಿದ್ಧತೆ – ರಾಜ್ಯಕ್ಕೆ ಮೋದಿ ಮತ್ತೊಮ್ಮೆ ಆಗಮನದ ನಿರೀಕ್ಷೆ

    ಸರ್ಕಾರದ ಜನೋತ್ಸವಕ್ಕೆ ಸಿದ್ಧತೆ – ರಾಜ್ಯಕ್ಕೆ ಮೋದಿ ಮತ್ತೊಮ್ಮೆ ಆಗಮನದ ನಿರೀಕ್ಷೆ

    ಬೆಂಗಳೂರು: ಜುಲೈ 28 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸಮಾವೇಶ ನಡೆಸಲು ಉದ್ದೇಶಿಸಲಾಗಿತ್ತು. ಬಳಿಕ ಕೊನೆ ಗಳಿಗೆಯಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಇದೀಗ ಸರ್ಕಾರ ಜನೋತ್ಸವವನ್ನು ಮತ್ತೆ ನಡೆಸಲು ತೀರ್ಮಾನಿಸಿದೆ.

    ಜುಲೈ 28ರ ಜನೋತ್ಸವ ಸಮಾವೇಶ ದಕ್ಷಿಣ ಕನ್ನಡದಲ್ಲಿ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಕೊನೆ ಗಳಿಗೆಯಲ್ಲಿ ರದ್ದುಗೊಳಿಸಲಾಗಿತ್ತು. ಇದೀಗ ಮತ್ತೆ ದೊಡ್ಡಬಳ್ಳಾಪುರದಲ್ಲೇ ಸಮಾವೇಶ ನಡೆಸಲು ಸರ್ಕಾರ ಮುಂದಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಮತ್ತು ಸಿದ್ದರಾಮೋತ್ಸವ ಬಳಿಕ ಕಳೆದುಕೊಂಡಿದ್ದ ರಾಜಕೀಯ ಚಾರ್ಮ್ ಪಡೆದುಕೊಳ್ಳಲು, ಪಕ್ಷ, ಸರ್ಕಾರದಲ್ಲಿ ಉತ್ಸಾಹ ತರಲು ದೊಡ್ಡಬಳ್ಳಾಪುರ ಜನೋತ್ಸವ ನಡೆಸಲು ನಿರ್ಧರಿಸಲಾಗಿದೆ. ಇದೇ ತಿಂಗಳ 28 ರಂದು ದೊಡ್ಡಬಳ್ಳಾಪುರದಲ್ಲೇ ಸಮಾವೇಶ ನಡೆಸಿ 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಇದನ್ನೂ ಓದಿ: ಇಂದಿನಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾನ

    ಸಮಾವೇಶಕ್ಕೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಭಾಗದಿಂದ ಜನ ಕರೆತರಲಾಗುತ್ತಿದೆ. ಈ ಬಾರಿ ಸರ್ಕಾರದ 3 ವರ್ಷದ ಜನೋತ್ಸವ ಎಂದು ಬಿಂಬಿಸಲು ತೀರ್ಮಾನಿಸಲಾಗಿದೆ. ಇತ್ತ ರದ್ದಾಗಿದ್ದ ದೊಡ್ಡಬಳ್ಳಾಪುರ ಜನೋತ್ಸವವನ್ನು ಮತ್ತೆ ನಡೆಸುತ್ತಿರುವ ಸರ್ಕಾರದ ನಡೆ ಪಕ್ಷದಲ್ಲಿ ನಾನಾ ಚರ್ಚೆಗಳಿಗೆ ಕಾರಣವಾಗಿದೆ. ಅದೂ ಅಲ್ಲದೇ ಮೊದಲ ಬಾರಿ ಜನೋತ್ಸವ ಸಮಾವೇಶ ಮಾಡಲು ನಿರ್ಧರಿಸಿದಾಗ ಇದ್ದ ಉತ್ಸಾಹ ಈಗ ಸರ್ಕಾರ ಮತ್ತು ಪಕ್ಷದಲ್ಲಿ ಕಂಡುಬರುತ್ತಿಲ್ಲ. ಕೆಲ ನಾಯಕರಿಗೆ ಮತ್ತೆ ಜನೋತ್ಸವ ಅಚ್ಚರಿ ತಂದಿದೆ. ಯಡಿಯೂರಪ್ಪ ಜೊತೆ ಸಿಎಂ ಚರ್ಚಿಸಿದ್ದು, ಈಗಿನ ಸಮಾವೇಶಕ್ಕೂ ಹೈಕಮಾಂಡ್ ನಾಯಕರಿಗೆ ಆಹ್ವಾನ ಕೊಡ್ತಾರಾ ಅನ್ನೋ ಬಗ್ಗೆ ಸ್ಪಷ್ಟತೆ ಇಲ್ಲ. ಮೂಲಗಳ ಪ್ರಕಾರ ಸದ್ಯದ ಸನ್ನಿವೇಶ ಸರಿ ಇಲ್ಲದ ಕಾರಣ ದೊಡ್ಡಬಳ್ಳಾಪುರದಲ್ಲಿ ರಾಜ್ಯ ನಾಯಕರೇ ಯಡಿಯೂರಪ್ಪ ನೇತೃತ್ವದಲ್ಲಿ ಜನೋತ್ಸವ ನಡೆಸಲುದ್ದೇಶಿಸಿದ್ದಾರೆ ಎನ್ನಲಾಗಿದೆ. ಈ ಸಮಾವೇಶದ ಬಳಿಕ ಜಿಲ್ಲಾ ಸಮಾವೇಶಗಳ ಬಳಿಕ ಅಕ್ಟೋಬರ್ ಅಂತ್ಯದಲ್ಲಿ ಸಮಾರೋಪ ಸಮಾವೇಶವನ್ನು ದಾವಣಗೆರೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸಮಾರೋಪಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅಥವಾ ಜೆ.ಪಿ ನಡ್ಡಾ ಕರೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ವೈಯಕ್ತಿಕ ಬಳಕೆಗಾಗಿ ಬಾಡಿಗೆ ನೀಡಿದ್ದರೆ ಜಿಎಸ್‌ಟಿ ಇಲ್ಲ- ಕೇಂದ್ರ

    ಇತ್ತ ಸರ್ಕಾರದ ಜನೋತ್ಸವಕ್ಕೆ ಕಾಂಗ್ರೆಸ್‍ನ ಜನಾಕ್ರೋಶದ ಕೌಂಟರ್‌ಗೆ ಸಿದ್ಧತೆ ಆರಂಭವಾಗಿದೆ. ಆಗಸ್ಟ್ 15ರ ಬಳಿಕ 4 ತಂಡವಾಗಿ ರಾಜ್ಯ ಪ್ರವಾಸಕ್ಕೆ ಕಾಂಗ್ರೆಸ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮಳೆ ಹಾನಿ, ಅತಿವೃಷ್ಟಿ ಪ್ರದೇಶಗಳಿಗೆ ಭೇಟಿ ಮಾಡಿ ಜನಾಕ್ರೋಶವನ್ನು ಸರ್ಕಾರದ ಮುಂದಿಡಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಜನೋತ್ಸವಕ್ಕೆ ಮೊದಲೇ ಜನಾಕ್ರೋಶವನ್ನು ಬಹಿರಂಗ ಪಡಿಸಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಸರ್ಕಾರ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳುವ ಸಿದ್ಧತೆ ಮಾಡಿಕೊಳ್ಳುತ್ತಿರುವಾಗಲೇ ವಿಪಕ್ಷ ಕಾಂಗ್ರೆಸ್ ಸರ್ಕಾರದ ತಪ್ಪುಗಳನ್ನು ಎತ್ತಿ ಹಿಡಿಯಲು ಮುಂದಾಗಿದೆ. ಜನೋತ್ಸವ ಇಲ್ಲಾ ರಾಜ್ಯದಲ್ಲಿ ಜನಾಕ್ರೋಶ ಇದೆ ಎಂಬುದನ್ನು ಬಿಂಬಿಸುವುದು ಕಾಂಗ್ರೆಸ್ ಲೆಕ್ಕಾಚಾರ ಹಾಕಿರುವಂತಿದೆ.

    Live Tv
    [brid partner=56869869 player=32851 video=960834 autoplay=true]

  • ರಕ್ತದೋಕುಳಿಯ ಸ್ವಾಗತ ನಮಗೆ ಬೇಡ – ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ

    ರಕ್ತದೋಕುಳಿಯ ಸ್ವಾಗತ ನಮಗೆ ಬೇಡ – ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ

    ಬೆಂಗಳೂರು: ಪ್ರವೀಣ್ ಹತ್ಯೆ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಸ್ವಪಕ್ಷದ ವಿರುದ್ಧ ಕಾರ್ಯಕರ್ತರ ಜೊತೆಗೆ ಕೆಲ ನಾಯಕರೂ ಕಿಡಿಕಾರುತ್ತಿದ್ದಾರೆ. ಈ ಹೊತ್ತಲ್ಲಿ ಜನೋತ್ಸವ ಸಾಧನಾ ಸಮಾವೇಶ ಮಾಡಲು ಹೊರಟ ಸಿಎಂ ಅವರನ್ನು ಹೈಕಮಾಂಡ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

    ರಕ್ತದೋಕುಳಿಯ ಸ್ವಾಗತ ನಮಗೆ ಬೇಡ. ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ ಎಂದು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಖಡಕ್ ಸಂದೇಶ ರವಾನೆ ಮಾಡಿದ್ದರು. ದೂರವಾಣಿ ಮೂಲಕ ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‍ಗೆ ಬಿಸಿ ಮುಟ್ಟಿಸಿದ್ದರು. ಇದನ್ನೂ ಓದಿ: ಬಿಜೆಪಿಯ ಜನೋತ್ಸವ ರದ್ದು – ಮಧ್ಯರಾತ್ರಿ ಸಿಎಂ ಘೋಷಣೆ

    ಘಟನೆಯ ಎಲ್ಲ ಮಾಹಿತಿ ಪಡೆದುಕೊಂಡಿದ್ದ ಹೈಕಮಾಂಡ್ ನಾಯಕರು, ನಾವು ಈಗ ಜನೋತ್ಸವ ಮಾಡಿದರೆ ಕಾರ್ಯಕರ್ತರಿಗೆ ಕೊಡುವ ಸಂದೇಶ ಏನು? ಕಾರ್ಯಕರ್ತನ ಹತ್ಯೆಯಾಗಿರುವಾಗ ನಾವು ಬಂದು ಸರ್ಕಾರದ ಸಾಧನೆ ಬಗ್ಗೆ ಮಾತನಾಡಬೇಕೇ? ನಮಗೆ ಕಾರ್ಯಕರ್ತರೇ ಮುಖ್ಯ ಎನ್ನುವುದನ್ನು ಸಾಬೀತುಪಡಿಸಿ ಅಂತ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಹೈಕಮಾಂಡ್ ಸಂದೇಶದ ಬೆನ್ನಲ್ಲೇ ಎಚ್ಚೆತ್ತ ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ಕಟೀಲ್ ಮತ್ತು ಸಚಿವ ಸುಧಾಕರ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಚರ್ಚೆ ನಡೆಸಿದರು. ಬಳಿಕ ಸುದ್ದಿಗೊಷ್ಠಿ ನಡೆಸಿ ಜನೋತ್ಸವ ಕಾರ್ಯಕ್ರಮ ರದ್ದುಗೊಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿಯ ಜನೋತ್ಸವ ರದ್ದು – ಮಧ್ಯರಾತ್ರಿ ಸಿಎಂ ಘೋಷಣೆ

    ಬಿಜೆಪಿಯ ಜನೋತ್ಸವ ರದ್ದು – ಮಧ್ಯರಾತ್ರಿ ಸಿಎಂ ಘೋಷಣೆ

    ಬೆಂಗಳೂರು: ಬಿಜೆಪಿ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಒಂದು ವರ್ಷದ ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಬುಧವಾರ ಮಧ್ಯರಾತ್ರಿ ಆರ್ ಟಿ ನಗರದ ನಿವಾಸದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸಿಎಂ ಬೊಮ್ಮಾಯಿ, ನನಗೆ ನಿನ್ನೆ ರಾತ್ರಿ ಪ್ರವೀಣನ ಹತ್ಯೆ ಸುದ್ದಿ ಬಂದಾಗ ಬಹಳ ಸಂಕಟ ನೋವು ಉಂಟಾಯಿತು. ಒಬ್ಬ ಅತ್ಯಂತ ಅಮಾಯಕನನ್ನು ಯೋಜನಾ ಬದ್ಧವಾಗಿ ಕೊಲೆಯಾಗಿರುವುದು ಅಮಾನವೀಯ. ನಮ್ಮೆಲ್ಲರ ಮನದಲ್ಲಿ ಆಕ್ರೋಶ ಇದೆ. ಹರ್ಷನ ಕೊಲೆ ಆದ ಕೆಲವೇ ದಿನಗಳಲ್ಲಿ ಈ ಪ್ರಕರಣ ಆಗಿರುವುದು ನೋವು ತಂದಿದೆ. ಈ ಸಂದರ್ಭದಲ್ಲಿ ನಮ್ಮ ಪಕ್ಷದ ಅಧ್ಯಕ್ಷರು ಹೋಗಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ ಎಂದರು.

    ನಮ್ಮ ಪಕ್ಷದ ಕಾರ್ಯಕರ್ತನ ಕೊಲೆಯಾಗಿದೆ. ಜನಪರವಾಗಿ ನಾವು ಮಾಡಿರುವ ಕೆಲಸದ ಬಗ್ಗೆ ಜನರಿಗೆ ಆತ್ಮವಿಶ್ವಾಸ ತುಂಬಲು ಜನೋತ್ಸವ ಆಯೋಜನೆ ಮಾಡಿದ್ದೇವು. ನಾನು ಆ ಹುಡುಗನ ತಾಯಿಯ ಆಕ್ರಂದನ ನೋಡಿದೆ. ಹೀಗಾಗಿ ನಾಳೆ ದೊಡ್ಡಬಳ್ಳಾಪುರ ಕಾರ್ಯಕ್ರಮವನ್ನು ರದ್ದು ಮಾಡಿದ್ದೇವೆ. ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮ ರದ್ದು ಮಾಡಿದ್ದೇವೆ. ಯಾವುದೇ ಕಾರ್ಯಕ್ರಮ ಇರುವುದಿಲ್ಲ. ಕಾರ್ಯಕ್ರಮಕ್ಕೆ ಬರುವ ಜನರ ಕ್ಷಮೆ ಕೋರುತ್ತೇನೆ. ಈ ಬಾರಿ ಆ ಭಾಗದಲ್ಲಿ ಹೆಚ್ಚಿನ ರಾಜಕೀಯ ಬೆಂಬಲ ದೊರೆಯುವ ನಿರೀಕ್ಷೆ ಇತ್ತು. ಜನರ ಕ್ಷಮೆ ಕೋರುತ್ತೇನೆ ಎಂದು ತಿಳಿಸಿದರು.


    ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 22 ಕ್ಕೂ ಹೆಚ್ಚು ಹಿಂದು ಕಾರ್ಯಕರ್ತರ ಹತ್ಯೆಯಾಯಿತು. ಅಲ್ಲದೇ ಅನೇಕರ ಮೇಲೆ ಇದ್ದ ಪ್ರಕರಣಗಳನ್ನು ಹಿಂಪಡೆಯಲಾಗಿತ್ತು. ಈ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು. ಈಗಾಗಲೇ ಕೇರಳ ಹೈಕೋರ್ಟ್ ಒಂದು ಆದೇಶ ನೀಡಿದೆ. ರಾಜ್ಯದಲ್ಲಿ ಆಂಟಿ ಟೆರರಿಸ್ಟ್ ಕಮಾಂಡೊ ಪಡೆಯನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

    ನಮಗೆ ನನ್ನ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಜೀವ ಮುಖ್ಯ ಅಷ್ಟೇ ಅಲ್ಲದೇ ಸಾಮಾನ್ಯ ಪ್ರಜೆಯ ಜೀವ ಮುಖ್ಯ. ಅಮಾಯಕನ ಜೀವ ಪಡೆಯುವವರ ಪಾಪದ ಕೊಡ ತುಂಬಿದೆ. ನಾನು ಯುವ ಜನತೆಯ ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದೇನೆ ಅವರ ಭಾವನೆಗೆ ತಕ್ಕಂತೆ ಕ್ರಮ ಆಗುತ್ತದೆ. ನಾನು ಗೃಹ ಸಚಿವನಾಗಿದ್ದಾಗ 15 ಕ್ಕೂ ಹೆಚ್ಚು ಜನರನ್ನು ತಿಹಾರ್ ಜೈಲಿಗೆ ಕಳುಹಿಸಿದ್ದೇನೆ. ಇದನ್ನು ಮಟ್ಟ ಹಾಕಲು ನಮಗೆ ಶಕ್ತಿ ಇದೆ. ಹೀಗಾಗಿ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದು ಅಂತಾರಾಜ್ಯ ಪ್ರಕರಣ ಆಗಿದೆ. ಈ ಸಂದರ್ಭದಲ್ಲಿ ಏನೇ ಹೇಳಿದರೂ ತನಿಖೆ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಈಗ ಏನೂ ಹೇಳುವುದಿಲ್ಲ. ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡುವ ಬಗ್ಗೆ ಎಲ್ಲ ರಾಜ್ಯಗಳ ಒಪ್ಪಿಗೆ ಪಡೆದು ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮೋತ್ಸವಕ್ಕೆ ಟಕ್ಕರ್ – ಬಿಜೆಪಿಯಿಂದ ಜನೋತ್ಸವ

    ಸಿದ್ದರಾಮೋತ್ಸವಕ್ಕೆ ಟಕ್ಕರ್ – ಬಿಜೆಪಿಯಿಂದ ಜನೋತ್ಸವ

    ಬೆಂಗಳೂರು: ಸಿದ್ದರಾಮೋತ್ಸವಕ್ಕೆ ಪ್ರತಿಯಾಗಿಯೋ ಏನೋ ಬಿಜೆಪಿ ಸರ್ಕಾರದ ಸಾಧನಾ ಸಮಾವೇಶಕ್ಕೆ `ಜನೋತ್ಸವ’ ಎಂದು ಹೆಸರಿಡಲಾಗಿದೆ. ಈ ಮೂಲಕ ನಮ್ಮಲ್ಲಿ ವ್ಯಕ್ತಿ ಪೂಜೆ ಇಲ್ಲ, ಏನಿದ್ದರೂ ಜನರ ಪೂಜೆ ಎಂಬ ಸಂದೇಶವನ್ನು ಕೇಸರಿ ಪಡೆ ಕೊಟ್ಟಂತೆ ಕಾಣುತ್ತಿದೆ.

    ದೊಡ್ಡಬಳ್ಳಾಪುರದಲ್ಲಿ ಬೃಹತ್ ಜನೋತ್ಸವ ಸಮಾವೇಶಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ಜುಲೈ 29 ಮತ್ತು 30ರಂದು ಎಲ್ಲಾ ಜಿಲ್ಲೆಗಳಲ್ಲಿ ಜನೋತ್ಸವ ಸಮಾವೇಶ ಆಯೋಜಿಸಲು ಬಿಜೆಪಿ ತೀರ್ಮಾನಿಸಿದೆ. ಜನೋತ್ಸವದ ಕಾರ್ಯಕ್ರಮದ ಲೋಗೋ ಬಿಡುಗಡೆ ಮಾಡಿದ್ದು, 3 ಮತ್ತು 1 ಸಂಖ್ಯೆಯನ್ನು ಲೋಗೋದಲ್ಲಿ ಬಳಸಿಕೊಂಡಿದೆ. ಇದನ್ನೂ ಓದಿ: ನೂತನ ಸಂಸತ್ ಭವನದಲ್ಲಿ ಅನುಭವ ಮಂಟಪ ಕಲಾಕೃತಿ ಸ್ಥಾಪನೆ ಕರ್ನಾಟಕದ ಹೆಮ್ಮೆ: ಪ್ರಹ್ಲಾದ್ ಜೋಶಿ

    3 ಸಂಖ್ಯೆಯ ಅರ್ಥ ಬಿಜೆಪಿ ಸರ್ಕಾರಕ್ಕೆ 3 ವರ್ಷವಾದರೆ, 1 ಎಂದರೆ ಬೊಮ್ಮಾಯಿ ಸರ್ಕಾರಕ್ಕೆ 1 ವರ್ಷ ಎಂಬ ಅರ್ಥ ಇದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ಬೇಬಿಬೆಟ್ಟದ ಆ ಜಾಗ ಮೈಸೂರು ಅರಮನೆಗೆ ಸೇರಿದ್ದು: ಯದುವೀರ್

    ಬಿಜೆಪಿಯ ಜನೋತ್ಸಕ್ಕೆ ಕಾಂಗ್ರೆಸ್ ನಾಯಕರು ಟೀಕೆ ವ್ಯಕ್ತಪಡಿಸಿದ್ದಾರೆ. ಇದು ಜನೋತ್ಸವ ಅಲ್ಲ, ಭ್ರಷ್ಟೋತ್ಸವ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಬೊಮ್ಮಾಯಿ ಸರ್ಕಾರದ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿ, ಎಲ್ಲಾ ವಿಚಾರಗಳಲ್ಲಿ ಸರ್ಕಾರ ವಿಫಲವಾಗಿದೆ. ಭ್ರಷ್ಟಾಚಾರವೇ ಈ ಸರ್ಕಾರದ ಸಾಧನೆ ಎಂದು ಕಾಂಗ್ರೆಸ್ ಬಿಂಬಿಸಿದೆ. ಬನ್ನಿ, ನನ್ನ ಸಾಧನೆ ಸಮಾರಂಭದಲ್ಲಿ ಪಾಲ್ಗೊಳ್ಳಿ ಎಂದು ಸಿಎಂ ಬೊಮ್ಮಾಯಿ ಆಹ್ವಾನ ನೀಡಿರುವಂತೆ ಕಾರ್ಡ್ನಲ್ಲಿ ವ್ಯಂಗ್ಯ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]