Tag: ಜನ್ಮ ದಿನಾಚರಣೆ

  • 36 ನೇ ವಸಂತಕ್ಕೆ ಕಾಲಿಟ್ಟ ರಾಕಿಂಗ್ ಸ್ಟಾರ್ ಯಶ್

    36 ನೇ ವಸಂತಕ್ಕೆ ಕಾಲಿಟ್ಟ ರಾಕಿಂಗ್ ಸ್ಟಾರ್ ಯಶ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 36ನೇ ವಸಂತಕ್ಕೆ ಕಾಲಿಟ್ಟಿರುವ ಅವರು ಕುಟುಂಬದವರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

    ಓಮಿಕ್ರಾನ್‌, ಕೊರೊನಾ ಸೋಂಕಿನ ಭೀತಿ ಎಲ್ಲೆಡೆ ಇರುವುದರಿಂದ ಮನೆಯಲ್ಲಿಯೇ ಆಚರಿಸಿಕೊಳ್ಳುತ್ತಿದ್ದಾರೆ.  ಯಶ್ ಜನ್ಮದಿನವಾದ ಇಂದು ಕರ್ನಾಟಕದಲ್ಲಿ ವಾರಾಂತ್ಯದ ಕರ್ಫ್ಯೂ ಇದೆ. ಈ ಕಾರಣಕ್ಕೆ ಯಶ್ ಮನೆ ಸಮೀಪ ತೆರಳೋಕೆ ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ  ಸೋಶಿಯಲ್ ಮೀಡಿಯಾ ಮೂಲಕವಾಗಿ ಶುಭಕೋರುತ್ತಿದ್ದಾರೆ. ಇದನ್ನೂ ಓದಿ: ಚಿರು ಹುಟ್ಟುಹಬ್ಬದ ನೆನಪಿನಲ್ಲಿ ಮೇಘನಾ ಹೊಸ ಸಿನಿಮಾ ಘೋಷಣೆ

    ಯಶ್ ಜನ್ಮದಿನಕ್ಕೆ ಕೇವಲ ಕರ್ನಾಟಕದ ಫ್ಯಾನ್ಸ್ ಮಾತ್ರವಲ್ಲದೆ, ಆಂಧ್ರ ಪ್ರದೇಶ, ತಮಿಳು ನಾಡು, ಮಹಾರಾಷ್ಟ್ರ ಮೊದಲಾದ ರಾಜ್ಯಗಳ ಅಭಿಮಾನಿಗಳು ವಿಶ್‌ ಮಾಡುತ್ತಿದ್ದಾರೆ. ಯಶ್ ಹೆಸರು ಟ್ವಿಟರ್‌ನಲ್ಲಿ  ಟ್ರೆಂಡ್ ಆಗಿದೆ. ಯಶ್ ಅವರ ಫೋಟೋಗಳನ್ನು ಹಂಚಿಕೊಂಡು ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ಶೂಟಿಂಗ್‍ನಲ್ಲಿ ಪಾಲ್ಗೊಂಡ ಮೇಘನಾ ರಾಜ್

    2007ರಲ್ಲಿ ತೆರೆಗೆ ಬಂದ ಜಂಬದ ಹುಡುಗಿ ಚಿತ್ರದ ಮೂಲಕ ಚಂದನವನ ಪ್ರವೇಶಿಸಿದ್ದರು. 2014ರಲ್ಲಿ ತೆರೆಗೆ ಬಂದ Mr & Mrs ರಾಮಾಚಾರಿ ಬಾಕ್ಸ್ ಆಫೀಸ್‍ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ನಂತರ ಯಶ್ ಅವರ ಲಕ್ ಬದಲಾಯಿತ್ತು. ಒಳ್ಳೆಯ ಪಾತ್ರಗಳು ಅವರ ಪಾಲಿಗೆ ಒಲಿದು ಬಂದವು.

    ಯಶ್ ನಟನೆಯ ಕೆಜಿಎಫ್ ಸಿನಿಮಾದಿಂದ ಕನ್ನಡ ಚಿತ್ರರಂಗದ ದಿಕ್ಕೆ ಬದಲಾಯಿತು. ರಾಕಿಂಗ್ ಸ್ಟಾರ್ ಯಶ್ ಅವರ ರೇಂಜ್ ಕೂಡ ಬದಲಾಗಿದೆ. ಕೆಜಿಎಫ್ ಚಾಪ್ಟರ್ 2 ಸಿನಿಮಾ ಏಪ್ರಿಲ್ 14 ರಂದು ತೆರೆಗೆ ಬರಲಿದೆ. ಈ ಸಿನಿಮಾವನ್ನು ಪರದೆ ಮೇಲೆ ನೋಡಲು ಅವರ ಅಭಿಮಾನಿಗಳ ಬಳಗ ಮತ್ತು ಸಿನಿಪ್ರಿಯರು ಕಾದು ಕುಳಿತಿದ್ದಾರೆ.

  • ಮೋದಿ ಹುಟ್ಟುಹಬ್ಬ ಪ್ರಯುಕ್ತ ಮಕ್ಕಳಿಗೆ ಬ್ಯಾಗ್, ಪೆನ್ನು ವಿತರಿಸಿದ ನಾರಾಯಣ ಸ್ವಾಮಿ

    ಮೋದಿ ಹುಟ್ಟುಹಬ್ಬ ಪ್ರಯುಕ್ತ ಮಕ್ಕಳಿಗೆ ಬ್ಯಾಗ್, ಪೆನ್ನು ವಿತರಿಸಿದ ನಾರಾಯಣ ಸ್ವಾಮಿ

    ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಶಾಲಾ ಮಕ್ಕಳಿಗೆ ಬ್ಯಾಗ್ ಪುಸ್ತಕ ಮತ್ತು ಪೆನ್ನುಗಳನ್ನು ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ವಿತರಿಸಿದ್ದಾರೆ.

    ನಾರಾಯಣ ಸ್ವಾಮಿ ಇಂದು ಪ್ರಧಾನಿ ನರೇಂದ್ರ ಮೋದಿರವರ 71 ಜನ್ಮದಿನವನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೋಗಿಹಟ್ಟಿ (ಗೊಲ್ಲರ ಹಟ್ಟಿ) ಗ್ರಾಮದಲ್ಲಿ ಆಚರಿಸಿ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜೋಗಿಹಟ್ಟಿ ಗ್ರಾಮದ ಪ್ರಾರ್ಥಮಿಕ ಶಾಲೆಗೆ ಹೆಚ್ಚಿನ ಕೊಠಡಿಗಳನ್ನು ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ನೀಡುವ ಭರವಸೆ ನೀಡಿದ್ದಾರೆ.

    ಶಿಕ್ಷಣದಿಂದ ಮಾತ್ರ ಸಮಾಜ ಮತ್ತು ದೇಶದ ಅಭಿವೃಧ್ಧಿ ಸಾಧ್ಯ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ. ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸರ್ಕಾರಿ ಬಸ್ ಬಿಡುವಂತೆ ನಿರ್ದೇಶನ ನೀಡುವುದಾಗಿ ಹೇಳಿದರು.

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್, ಪುಸ್ತಕ, ಪೆನ್ಸಿಲ್, ಪೆನ್ ವಿತರಣೆ ಮಾಡಿದ್ದಾರೆ.

  • ಜನ್ಮದಿನಾಚರಣೆಯ ಸಂಭ್ರಮದಲ್ಲಿ ಸಿಂಪಲ್ ನಟಿ ಶ್ವೇತಾ ಶ್ರೀವಾತ್ಸವ್

    ಜನ್ಮದಿನಾಚರಣೆಯ ಸಂಭ್ರಮದಲ್ಲಿ ಸಿಂಪಲ್ ನಟಿ ಶ್ವೇತಾ ಶ್ರೀವಾತ್ಸವ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಶ್ವೇತಾ ಶ್ರೀವಾತ್ಸವ್ ಹುಟ್ಟು ಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಸೆಲೆಬ್ರೆಷನ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಸೋಶಿಯಲ್ ಮೀಡಿಯಾದ ಕ್ವೀನ್ ಎಂದೇ ಕರೆಸಿಕೊಳ್ಳುವ ನಟಿ ಶ್ವೇತಾ ಶ್ರೀವಾತ್ಸವ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಪತಿ ಅಮಿತ್ ಶ್ರೀವಾತ್ಸವ್ ಮತ್ತು ಮಗಳು ಅಶ್ಮಿತಾ ಶ್ರೀ ವಾತ್ಸವ್ ಜೊತೆಗೆ ಸೆಲೆಬ್ರೆಟ್ ಮಾಡಿದ್ದಾರೆ. ಸಂತೋಷದ ಕ್ಷಣಗಳನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಂಡು ನಿಮ್ಮ ಶುಭಹಾರೈಕೆಗೆ ಪ್ರೀತಿಯ ಧನ್ಯವಾದಗಳು ಎಂದು ಬರೆದುಕೊಂಡು ಮುದ್ದಾದ ಕೆಲವು ಫೋಟೋ ಶೇರ್ ಮಾಡಿದ್ದಾರೆ. ಇದನ್ನೂ ಓದಿ: ದೇವಸ್ಥಾನಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಕಳ್ಳ ಅಂದರ್

     

    View this post on Instagram

     

    A post shared by Shwetha Srivatsav (@shwethasrivatsav)

    35ನೇ ವಸಂತಕ್ಕೆ ಕಾಲಿಟ್ಟಿರುವ ನಟಿಗೆ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ. ಸ್ಯಾಂಡಲ್‍ವುಡ್ ಸ್ಟಾರ್‍ಗಳ ಪೈಕಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯವಾಗಿರುವ ನಟಿಯರಲ್ಲಿ ಶ್ವೇತಾ ಶ್ರೀವಾತ್ಸವ ಅವರು ಸದಾ ಮುಂದಿರುತ್ತಾರೆ. ವಾರದಲ್ಲಿ 2-3 ಪೋಸ್ಟ್ ಮಾಡುವ ಮೂಲಕ ನೆಟ್ಟಿಗರ ಜೊತೆ ಸಂಪರ್ಕದಲ್ಲಿರುತ್ತಾರೆ. ಇದನ್ನೂ ಓದಿ: ಮಹಿಳೆಯರ ಲೇಟೆಸ್ಟ್ ಚೋಕರ್ ನೆಕ್ಲೆಸ್ ಡಿಸೈನ್‍ಗಳು

     

    View this post on Instagram

     

    A post shared by Shwetha Srivatsav (@shwethasrivatsav)

    ಮಗುವಾದ ನಂತರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯವಾಗಿರುವ ಶ್ವೇತಾ, ಮಗಳು ಅಶ್ಮಿತಾ ಜೊತೆ ಫೋಟೋಶೂಟ್‍ಗಳಲ್ಲಿ ಟ್ವಿನ್ನಿಂಗ್ ಮಾಡುತ್ತಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.

  • ಸತೀಶ್ ಜಾರಕಿಹೊಳಿ ಹುಟ್ಟುಹಬ್ಬ- 10 ಸಾವಿರ ಮಾಸ್ಕ್, ಸ್ಯಾನಿಟೈಸರ್ ವಿತರಣೆ

    ಸತೀಶ್ ಜಾರಕಿಹೊಳಿ ಹುಟ್ಟುಹಬ್ಬ- 10 ಸಾವಿರ ಮಾಸ್ಕ್, ಸ್ಯಾನಿಟೈಸರ್ ವಿತರಣೆ

    ಬೆಳಗಾವಿ: ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಜನ್ಮದಿನದ ನಿಮಿತ್ತ ಇಂದು ಜಾರಕಿಹೊಳಿ ಬೆಂಬಲಿಗರು ತಾಲೂಕಿನ ಕೊರೊನಾ ವಾರಿಯರ್ಸ್‍ಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಿದರು.

    ಕೊರೊನಾ ವೇಳೆ ಹಗಲಿರುಳು ಶ್ರಮಿಸುತ್ತಿರುವ ಸತೀಶ್ ಜಾರಕಿಹೊಳಿ ಫೌಂಡೇಶನ್ ಹಾಗೂ ಸತೀಶ್ ಶುಗರ್ಸ್ ವತಿಯಿಂದ ಕೊರೊನಾ ವಾರಿಯರ್ಸ್‍ಗಳಾದ ಪೊಲೀಸ್ ಇಲಾಖೆ ಸಿಬ್ಬಂದಿ, ಅಂಗನವಾಡಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಬೆಂಬಲಿಗರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ಕರೆದೊಯ್ದ ಪುತ್ರ ಯತೀಂದ್ರ

    ಈ ವೇಳೆ ಮಾತನಾಡಿದ ಜಾರಕಿಹೊಳಿ ಆಪ್ತ ಸಹಾಯಕ ಕಿರಣ ರಜಪೂತ, ಸತೀಶ್ ಜಾರಕಿಹೊಳಿ ಅವರ ಜನ್ಮದಿನದ ಅಂಗವಾಗಿ ಜಿಲ್ಲೆಯಾದ್ಯಂತ ಕೊರೊನಾ ನಿಯಂತ್ರಣದಲ್ಲಿ ಮುಂಚೂಣಿಯಲ್ಲಿರುವ ವಾರಿಯರ್ಸ್‍ಗಳಿಗೆ ಜಿಲ್ಲೆಯಾದ್ಯಂತ ಸೂಮಾರು 10 ಸಾವಿರಾರ ಸ್ಯಾನಿಟೈಸರ್ 10 ಸಾವಿರ ಮಾಸ್ಕ್ ವಿತರಣೆ ಮಾಡಲಾಗುತ್ತಿದೆ. ಇದಲ್ಲದೇ ಸತೀಶ್ ಜಾರಕಿಹೊಳಿ ಫೌಂಡೇಶನ್ ಹಾಗೂ ಸತೀಶ್ ಶುಗರ್ಸ್ ತಾಲೂಕಿನಲ್ಲಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳನ್ನು ಆಯಾ ಧರ್ಮದ ಅನುಸಾರ ಸರಕಾರದ ನಿಯಮದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಗುತ್ತಿದೆ ಎಂದು ಹೆಳಿದರು. ಇದನ್ನೂ ಓದಿ: ನಾವು ಪವರ್ ಬೆಗ್ಗರ್ಸ್ ಬಗ್ಗೆ ಮಾತನಾಡಲ್ಲ: ಡಿಕೆಶಿ

    ಈ ಸಂಧರ್ಭದಲ್ಲಿ ಯಮಕನಮರಡಿ ಬ್ಲಾಕ್ ಕಾಂಗ್ರೆಸ್ ಯುವ ಘಟಕ ಅಧ್ಯಕ್ಷ ವಿನಯ ಪಾಟೀಲ, ಇಲಿಯಾಸ ಇನಾಮದಾರ, ಅಕ್ಷಯ ವಿರಮುಖ, ಸಂಜು ಗಂಡ್ರಾಳಿ, ಜಿ.ಪಂ ಸದಸ್ಯ ಮಹಾಂತೇಶ ಮಗದುಮ್ಮ ಸೇರಿದಂತೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಇದ್ದರು.

  • ಮಿಸ್ ಮಾಡಿಕೊಳ್ಳುತ್ತಿದ್ದೇವೆ ಅಂಬಿ ಮಾಮ: ಸುದೀಪ್

    ಮಿಸ್ ಮಾಡಿಕೊಳ್ಳುತ್ತಿದ್ದೇವೆ ಅಂಬಿ ಮಾಮ: ಸುದೀಪ್

    – ಸುಮಲತಾ, ಅಭಿಷೇಕ್ ಹೇಳಿದ್ದೇನು..?

    ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರ 69ನೇ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್, ರಮೇಶ್ ಅರವಿಂದ್, ದರ್ಶನ್ ಸೇರಿದಂತೆ ಇತರೆ ಸ್ಯಾಂಡಲ್‍ವುಡ್ ಮಂದಿ ಶುಭ ಕೋರಿದ್ದಾರೆ. ಅಂಬಿ ಅವರನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತದ್ದೇವೆ ಎಂಬುದನ್ನು ಸೋಶಿಯಲ್ ಮೀಡಿಯಾದಲ್ಲಿ ವಿಶೇಷವಾಗಿ ನೆನಪಿಸಿಕೊಂಡಿದ್ದಾರೆ.

    ನಿಜಕ್ಕೂ ಮಿಸ್ ಯೂ ಮಾಮ ಎಂದು ಬರೆದುಕೊಂಡು ಅಂಬರೀಶ್ ಅವರ ಕೆಲವು ಫೊಟೋಗಳನ್ನು ಟ್ವೀಟ್ ಮಾಡುವಮೂಲಕವಾಗಿ ತಾವು ಎಷ್ಟು ಅಂಬಿ ಅವರುನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎನ್ನುವುದನ್ನು ಕೆಲವು ಪದಗಳ ಮೂಲಕವಾಗಿ ಸುದೀಪ್ ಹೇಳಿದ್ದಾರೆ.

    ಅಜರಾಮರ ನೆನಪುಗಳು, ಚಿರಂತನ ಚೈತನ್ಯ, ಅಪಾರ ಅಕ್ಕರೆ, ಸಂಜೀವಿನಿ ಸ್ನೇಹ, ಎಲ್ಲರನ್ನೂ ಎಲ್ಲವನ್ನೂ ಪ್ರೀತಿಸಿ ಹೃದಯವಂತಿಕೆ ಶಾಶ್ವತ ನಲ್ಮೆ, ಧನ್ಯ ಬದುಕು ಎಂದು ಸುಮಲತಾ ಅಂಬರೀಶ್ ಟ್ವೀಟ್ ಮೂಲಕ ಪತಿಯನ್ನು ಸ್ಮರಿಸಿದ್ದಾರೆ. ಅಪ್ಪನ ಹುಟ್ಟುಹಬ್ಬಕ್ಕೆ ಇನ್‍ಸ್ಟಾಗ್ರಾಮ್‍ನಲ್ಲಿ ಶುಭಕೋರಿರುವ ಅಭಿಷೇಕ್, ಹ್ಯಾಪಿ ಬರ್ತ್ ಡೇ ಲೆಜೆಂಡ್ ಎಂದು ಅಪ್ಪನ ಜೊತೆಗಿರುವ ಫೋಟೋ ಹಂಚಿಕೊಂಡು ಶುಭಾಶಯ ಕೋರಿದ್ದಾರೆ.

    ಅಂಬರೀಶಣ್ಣ ಅಮರ, ಅಜರಾಮರ ಎಂದು ನಿರ್ದೇಶಕ ಪವನ್ ಒಡೆಯರ್ ಶುಭಕೋರಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಸಹ ಅಂಬಿಗೆ ವಿಶ್ ಮಾಡಿದ್ದು, ಇಂದು “ರೆಬೆಲ್ ಸ್ಟಾರ್” ಅಂಬರೀಷ್ ರವರ ಜನ್ಮ ದಿನ… ಅವರ ನಟನೆ..ಕೆಲಸ.,ಮಾತು ..ನೆನಪು ಎಂದಿಗು ಮರೆಯೋಕೆ ಚಾನ್ಸೆ ಇಲ್ಲ… No way ಎಂದಿದ್ದಾರೆ. ಇದನ್ನೂ ಓದಿ: ಅಪ್ಪಾಜಿಯ ಭಾಷಾಭಿಮಾನ, ಖಡಕ್ ಜೀವನ ಶೈಲಿ ಎಲ್ಲರಿಗೂ ಸ್ಫೂರ್ತಿ: ದರ್ಶನ್

     

    View this post on Instagram

     

    A post shared by Abishek Ambareesh (@abishekambareesh)

    ಅಂಬರೀಶ್ ಜೊತೆ ಕಾರಿನಲ್ಲಿ ಪ್ರಯಾಣ ಮಾಡುತ್ತಿರುವ ಫೋಟೋವನ್ನು ದರ್ಶನ್ ಹಂಚಿಕೊಂಡಿದ್ದಾರೆ. ಎಂದಿಗೂ ಮಾಸದ ಅಂಬಿ ಅಪ್ಪಾಜಿಯ ಸವಿನೆನಪು. ಅವರ ಭಾಷಾಭಿಮಾನ, ಖಡಕ್ ಜೀವನ ಶೈಲಿ ಎಲ್ಲರಿಗೂ ಸ್ಫೂರ್ತಿಯಾಗಿರುತ್ತದೆ. ಮತ್ತೊಮ್ಮೆ ಕರುನಾಡಲ್ಲೇ ಹುಟ್ಟಿಬರಲಿ ನಮ್ಮ ನೆಚ್ಚಿನ ಮಂಡ್ಯದ ಗಂಡು ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ, ಅಂಬರೀಶ್ ಬುಲ್‍ಬುಲ್ ಮುಂತಾದ ಸಿನಿಮಾಗಳಲ್ಲಿ ದರ್ಶನ್ ಮತ್ತು ಅಂಬರೀಶ್ ಜೊತೆಯಾಗಿ ನಟಿಸಿದ್ದರು.

    ಅಂಬರೀಶ್ ಜನ್ಮದಿನದ ಪ್ರಯುಕ್ತ ಇಂದು ಸಂಸದೆ ಸುಮಲತಾ ಅಂಬರೀಶ್ ಅವರು ಹಲವು ಕೆಲಸಗಳನ್ನು ಮಾಡುತ್ತಿದ್ದಾರೆ. ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿ ಇರುವ ಅಂಬರೀಶ್ ಸಮಾಧಿಗೆ ಅವರು ಕುಟುಂಬಸ್ಥರ ಜೊತೆ ಪೂಜೆ ಸಲ್ಲಿಸಿದ್ದಾರೆ. ಎಲ್ಲವೂ ಸುಸ್ಥಿತಿಯಲ್ಲಿದ್ದರೆ ಅಂಬಿ ಜನ್ಮದಿನವನ್ನು ಅಭಿಮಾನಿಗಳು ಅದ್ದೂರಿಯಾಗಿ ಆಚರಿಸುತ್ತಿದ್ದರು. ಅನೇಕ ಕಡೆಗಳಲ್ಲಿ ಅನ್ನಸಂತರ್ಪಣೆ ನಡೆಯುತ್ತಿತ್ತು. ಕೆಲವು ಕಡೆಗಳಲ್ಲಿ ಅಂಬಿ ಕಟೌಟ್ ಹಾಕಿ ಹಾಲಿನ ಅಭಿಷೇಕ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಸರ್ಕಾರ ಕೊವಿರೊನಾ ಇರುವುದರಿಂದ ಯಾರೊಬ್ಬರೂ ಮನೆಯಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಯಾರೂ ಅಂಬರೀಷ್ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ಸುಮಲತಾ ಹೇಳಿದ್ದಾರೆ. ಇದನ್ನೂ ಓದಿ: ಇಂದು ಅಂಬರೀಶ್ ಜನ್ಮದಿನ, ಯಾವುದೇ ಸಂಭ್ರಮಾಚರಣೆ ಬೇಡ: ಸುಮಲತಾ

    ನಮ್ಮೆಲ್ಲರ ಪ್ರೀತಿಯ ಅಂಬರೀಶ್ ಅವರ 69ನೇ ಜನ್ಮ ಜಯಂತಿ ಸಂಭ್ರಮದಿಂದ ಆಚರಿಸಲು ನೀವೆಲ್ಲರೂ ಕಾಯುತ್ತಿರುತ್ತೀರಿ. ಆದರೆ ಕೊರೊನಾ ತಡೆಯಲು ದೇಶವೆಲ್ಲ ಶ್ರಮಿಸುತ್ತಿರುವಾಗ ನಾವು ಯಾವುದೇ ಸಾರ್ವಜನಿಕ ಆಚರಣೆ ಅಥವಾ ಸಮಾರಂಭ ಮಾಡುವುದು ಬೇಡವೆಂದು ನನ್ನ ವಿನಮ್ರ ಮನವಿ. ಈ ವರ್ಷ ಅವರನ್ನು ನಮ್ಮ ಮನೆ-ಮನಗಳಲ್ಲೇ ಆಚರಿಸೋಣ ಎಂದು ಸುಮಲತಾ ಮೊದಲೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಅಭಿಮಾನಿಗಳಲ್ಲಿ ಮನವಿಮಾಡಿದ್ದರು.

  • ಹುಟ್ಟುಹಬ್ಬದಂದು ಫೋಟೋ ತೆಗೆಯಲು ಹೋದ 6 ಮಂದಿ ದುರ್ಮರಣ

    ಹುಟ್ಟುಹಬ್ಬದಂದು ಫೋಟೋ ತೆಗೆಯಲು ಹೋದ 6 ಮಂದಿ ದುರ್ಮರಣ

    ಪುಣೆ: ಹುಟ್ಟುಬ್ಬದಂದು ಡ್ಯಾಂ ಎದುರು ಗ್ರೂಪ್ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋದ 6 ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ವಲ್ದೇವಿ ಡ್ಯಾಮ್‍ನಲ್ಲಿ ನಡೆದಿದೆ.

    ಸೋನಿ ಗೇಮ್(12) ಖುಷಿ ಮಣಿಯಾರ್ (10), ಜ್ಯೋತಿ ಗೇಮ್ (16), ಹಿಮ್ಮತ್ ಚೌಧರಿ (16), ನಾಜಿಯಾ ಮಣಿಯಾರ್ (19) ಮತ್ತು ಆರತಿ ಭಲೇರಾವ್ (22) ಮೃತರಾಗಿದ್ದಾರೆ. ಸೋನಿ ಗೇಮ್ ಹುಟ್ಟುಹಬ್ಬದ ಆಚರಣೆಗೆಂದು ಹೋಗಿದ್ದರು. ಗ್ರೂಪ್ ಫೋಟೋ ಕ್ಲಿಕ್ಕಿಸುವ ವೇಳೆ ಆಯತಪ್ಪಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ.

    ಗ್ರೂಪ್ ಫೋಟೋ ಕ್ಲಿಕ್ಕಿಸುವ ವೇಳೆ ಆಯತಪ್ಪಿ ಕೆಲವರು ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋದ ಇತರರು ಕೂಡಾ ನೀರು ಪಾಲಾಗಿದ್ದಾರೆ. ಈ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಂಡದಲ್ಲಿದ್ದ ಮೂವರು ಸಾವಿನಿಂದ ಪಾರಾಗಿದ್ದಾರೆ. ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ- ನಳಿನ್ ಕುಮಾರ್ ಗೌರವ

    ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ- ನಳಿನ್ ಕುಮಾರ್ ಗೌರವ

    ಮಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ನಗರದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

    ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್, ದೇಶದ ಅಭ್ಯುದಯಕ್ಕೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಅವರ ಚಿಂತನೆಗಳು ರಾಷ್ಟ್ರಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟಿವೆ ಎಂದರು.

    ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಸುರೇಂದ್ರ ಜಪ್ಪಿನಮೊಗರು, ರೂಪಾ.ಡಿ.ಬಂಗೇರ, ಮಂಡಲ ಎಸ್.ಸಿ ಮೋರ್ಚಾ ಅಧ್ಯಕ್ಷ ರಘುವೀರ್ ಬಾಬುಗುಡ್ಡೆ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಸಂಧ್ಯಾ ಮೋಹನ್ ಆಚಾರ್, ಭಾನುಮತಿ, ಶೈಲೇಶ್ ಶೆಟ್ಟಿ, ಗಣೇಶ್ ಕುಲಾಲ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಮೇಶ್ ಕಂಡೆಟ್ಟು ಮತ್ತಿತರರು ಉಪಸ್ಥಿತರಿದ್ದರು.