Tag: ಜಪಾನ್

  • ಭಾರತದ ಸ್ಮಾರ್ಟ್ ಸಿಟಿ, 5ಜಿ ಯೋಜನೆಗೆ ಕೊಡುಗೆ ನೀಡಲು ಮುಂದಾದ ಜಪಾನ್

    ಭಾರತದ ಸ್ಮಾರ್ಟ್ ಸಿಟಿ, 5ಜಿ ಯೋಜನೆಗೆ ಕೊಡುಗೆ ನೀಡಲು ಮುಂದಾದ ಜಪಾನ್

    ಟೋಕಿಯೋ: ಭಾರತದ ಸ್ಮಾರ್ಟ್ ಸಿಟಿ ಹಾಗೂ 5ಜಿ ನೆಟ್‌ವರ್ಕ್ ಯೋಜನೆಗೆ ಜಪಾನ್ ಕೊಡುಗೆ ನೀಡುವುದಾಗಿ ಭರವಸೆ ನೀಡಿದೆ. ಈ ಮೂಲಕ ಭಾರತ-ಜಪಾನ್ ಸಹಕಾರಕ್ಕೆ ಹೊಸದೊಂದು ಆಯಾಮ ಸಿಗಲಿದೆ.

    ಸೋಮವಾರ ಟೋಕಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಮಾಹಿತಿ ಮಾಹಿತಿ ತಂತ್ರಜ್ಞಾನ ಕಂಪನಿ ಎನ್‌ಇಸಿ ಕಾರ್ಪೊರೇಶನ್ ಅಧ್ಯಕ್ಷ ನೊಬುಹಿರೊ ಎಂಡೋ ಭಾರತದಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಕೊಡುಗೆ ನೀಡುವುದಾಗಿ ತಿಳಿಸಿದ್ದಾರೆ.

    ಸ್ಮಾರ್ಟ್ ಸಿಟಿ ದೃಷ್ಟಿಕೋನವಾಗಿ ನಾವು ಅಪ್ಲಿಕೇಶನ್‌ಗಳಂತಹ ಕೊಡುಗೆಗಳನ್ನು ನೀಡಬಹುದು ಹಾಗೂ 5ಜಿ ಯಂತಹ ಸಂವಹನ ವೇದಿಕೆಯನ್ನೂ ಒದಗಿಸಬಹುದು. ಈ ಎಲ್ಲಾ ಕ್ಷೇತ್ರಗಳಲ್ಲಿ ನಾವು ಈಗಾಗಲೇ ಪರಿಹಾರ ಹೊಂದಿದ್ದೇವೆ ಎಂದು ನೊಬುಹಿರೊ ಎಂಡೊ ಪ್ರಧಾನಿ ಮೋದಿಯೊಂದಿಗಿನ ಮಾತುಕತೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು – ಭಾರತದಿಂದ ಅಗತ್ಯ ವಸ್ತುಗಳ ಪೂರೈಕೆ

    ನಾವು ಅಪ್ಲಿಕೇಶನ್‌ಗಳನ್ನು ಕಾರ್ಯಗತಗೊಳಿಸಲು ಭಾರತದೊಂದಿಗೆ ಸಂವಹನ ನಡೆಸುವ ಅಗತ್ಯವಿದೆ. 5ಜಿ ವ್ಯವಸ್ಥೆಯನ್ನು ಒದಗಿಸಲು ಭದ್ರತೆ ಹಾಗೂ ಸುರಕ್ಷತೆಯನ್ನು ನಾವು ದೃಢೀಕರಿಸಬೇಕಿದೆ. ಇದಕ್ಕಾಗಿ ನಾವು ಭಾರತದ ಆಪರೇಟರ್‌ಗಳ ಸಹಯೋಗವನ್ನು ಹೊಂದಬೇಕಿದೆ ಎಂದರು.

    ನಾವು ಭಾರತದ ಸುಮಾರು 6,000 ಎಂಜಿನಿಯರ್‌ಗಳನ್ನು ಹೊಂದಿದ್ದೇವೆ. ಅವರು ನಮ್ಮೊಂದಿಗೆ ಸಾಕಷ್ಟು ನಿಕಟವಾಗಿ ಕೆಲಸ ಮಾಡುತ್ತಾರೆ. ನಾವು ಈ ಯೋಜನೆಯನ್ನು ಅವರೊಂದಿಗೆ ಮುಂದುವರಿಸಲು ಬಯಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತದ ಮೊದಲ 5ಜಿ ಕರೆ ಯಶಸ್ವೀ ಪರೀಕ್ಷೆ

    ತಂತ್ರಜ್ಞಾನ ಮಾತ್ರವಲ್ಲದೇ ಇಬ್ಬರೂ ನಾಯಕರು ಕೈಗಾರಿಕಾ ಅಭಿವೃದ್ಧಿ, ತೆರಿಗೆ, ಕಾರ್ಮಿಕ ಕ್ಷೇತ್ರಗಳು ಸೇರಿದಂತೆ ಭಾರತದಲ್ಲಿ ಸುಲಭವಾಗಿ ವ್ಯಾಪಾರ ಮಾಡಲು ಕೈಗೊಳ್ಳಬಹುದಾದ ವಿವಿಧ ಸುಧಾರಣೆಗಳ ಕುರಿತು ಚರ್ಚಿಸಿದರು.

    ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಭೇಟಿಗೆ ಟೋಕಿಯೋಗೆ ತೆರಳಿದ್ದಾರೆ. ಮೇ 24ರಂದು ಟೋಕಿಯೋದಲ್ಲಿ ನಡೆಯಲಿರುವ 3ನೇ ಕ್ವಾಡ್ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ.

  • ಹಿಂದಿಯಲ್ಲಿ ಮಾತನಾಡಿದ ಜಪಾನ್ ಬಾಲಕನನ್ನು ನೋಡಿ ಮೋದಿ ರಿಯಾಕ್ಷನ್ ಹೇಗಿತ್ತು?

    ಹಿಂದಿಯಲ್ಲಿ ಮಾತನಾಡಿದ ಜಪಾನ್ ಬಾಲಕನನ್ನು ನೋಡಿ ಮೋದಿ ರಿಯಾಕ್ಷನ್ ಹೇಗಿತ್ತು?

    ಟೋಕಿಯೊ: ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಟೋಕಿಯೊದ ಹೋಟೆಲ್‍ನಲ್ಲಿ ಭಾರತೀಯ ವಲಸಿಗರು ಮತ್ತು ಜಪಾನ್ ನಾಗರಿಕರು ಅತ್ಯಂತ ಪ್ರೀತಿಯಿಂದ ಸ್ವಾಗತಿಸಿದರು. ಈ ವೇಳೆ ಅವರ ಜೊತೆಗಿನ ಸಂವಾದದಲ್ಲಿ ಜಪಾನಿನ ಮಕ್ಕಳೊಂದಿಗೆ ಅವರ ಸಂಭಾಷಣೆ ಎಲ್ಲರ ಗಮನ ಸೆಳೆಯಿತು.

    ಅಲ್ಲಿನ ಮಕ್ಕಳೊಂದಿಗಿನ ಮೋದಿಯವರ ಸಂವಾದದ ವೀಡಿಯೋಗಳು ಟ್ವಿಟ್ಟರ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಜಪಾನಿನ ಬಾಲಕನೊಬ್ಬ ಪ್ರಧಾನಿಯವರೊಂದಿಗೆ ಹಿಂದಿಯಲ್ಲಿ ಮಾತನಾಡಿದನು. ಇದನ್ನು ಕೇಳಿ ಅವರು ಆಶ್ಚರ್ಯಚಕಿತರಾಗಿದ್ದು, ಹುಡುಗನಿಗೆ ವಾಹ್! ನೀವು ಹಿಂದಿಯನ್ನು ಎಲ್ಲಿಂದ ಕಲಿತಿದ್ದೀರಿ.? ನೀವು ಅದನ್ನು ಚೆನ್ನಾಗಿ ಮಾತನಾಡುತ್ತೀರಿ ಎಂದು ಬಾಲಕನ ಜೊತೆ ಅಕ್ಕರೆಯಿಂದ ಮಾತನಾಡ ತೊಡಗಿದರು. ಇದನ್ನೂ ಓದಿ: ರಾಜ್ಯದಲ್ಲಿ ಶಾಂತನಾದ ವರುಣ, ತಗ್ಗಿದ ಪ್ರವಾಹ – ಚಿಕ್ಕಬಳ್ಳಾಪುರದ ಡ್ಯಾಮ್‍ನಲ್ಲಿ ಯುವಕನ ಕೋತಿಯಾಟ

    ಪ್ರಧಾನಿಯವರೊಂದಿಗೆ ಸಂವಾದ ನಡೆಸಿದ ಮಕ್ಕಳು ಅವರ ಆಟೋಗ್ರಾಫ್ ಸ್ವೀಕರಿಸಲು ಉತ್ಸುಕರಾಗಿದ್ದರು. ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಭಾರತೀಯ ವಲಸಿಗರು ಭಾರತ್ ಮಾ ಕಾ ಶೇರ್ (ಭಾರತದ ಸಿಂಹ) ಎಂದು ಘೋಷಣೆ ಕೂಗಲಾರಂಭಿಸಿದರು. ಇದನ್ನೂ ಓದಿ: ಮದರಸಾದಲ್ಲಿ ಓದಿದ ಬಳಿಕ ಡಾಕ್ಟರ್, ಇಂಜಿನಿಯರ್ ಆಗಲು ಸಾಧ್ಯವಿಲ್ಲ: ಹಿಮಂತ್ ಬಿಸ್ವಾ ಶರ್ಮಾ

    ಜಪಾನ್ ಅಧ್ಯಕ್ಷ ಫ್ಯೂಮಿಯೋ ಕಿಶಿಡಾ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನ ಜಪಾಸ್ ಪ್ರವಾಸ ಕೈಗೊಂಡಿದ್ದು, ಅವರು ಅಲ್ಲಿ ಕ್ವಾಡ್ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಭಾನುವಾರ ರಾತ್ರಿ ಭಾರತದಿಂದ ತೆರಳಿರುವ ಪ್ರಧಾನಿ ನಾಳೆ ಸಂಜೆವರೆಗೂ ಜಪಾನ್‍ನಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕ್ವಾಡ್ ಶೃಂಗ ಸಭೆಯಲ್ಲಿ ಎರಡು ದೇಶಗಳ ಉಪಕ್ರಮಗಳ ಬಗ್ಗೆ ಚರ್ಚೆಯಾಗಲಿದ್ದು, ಆಸಕ್ತಿಯ ವಿಷಯಗಳ ಬಗ್ಗೆ ಚರ್ಚಿಸಲು ಅವಕಾಶ ಇದೆ ಎಂದು ಪ್ರವಾಸಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

    ಇದೇ ವೇಳೆ ಅಮೇರಿಕ ಅಧ್ಯಕ್ಷ ಜೋ ಬೈಡನ್ ಜೊತೆಗೂ ಮೋದಿ ಸಭೆ ನಡೆಸಲಿದ್ದು, ಭಾರತದ ಅಮೇರಿಕದ ನಡುವೆ ದ್ವಿ ಪಕ್ಷೀಯ ಮಾತುಕತೆ ನಡೆಯಲಿದೆ. ಈ ಮಾತುಕತೆಯಲ್ಲಿ ಸಮಕಾಲಿಮ ಜಾಗತಿಕ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಯಲಿದೆ.

  • ಕ್ವಾಡ್ ಸಭೆಗಾಗಿ ನರೇಂದ್ರ ಮೋದಿ ಜಪಾನ್ ಪ್ರವಾಸ

    ಕ್ವಾಡ್ ಸಭೆಗಾಗಿ ನರೇಂದ್ರ ಮೋದಿ ಜಪಾನ್ ಪ್ರವಾಸ

    ನವದೆಹಲಿ: ಜಪಾನ್ ಅಧ್ಯಕ್ಷ ಫ್ಯೂಮಿಯೋ ಕಿಶಿಡಾ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನ ಜಪಾಸ್ ಪ್ರವಾಸ ಕೈಗೊಂಡಿದ್ದು, ಅವರು ಅಲ್ಲಿ ಕ್ವಾಡ್ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.

    ಭಾನುವಾರ ರಾತ್ರಿ ಭಾರತದಿಂದ ತೆರಳಿರುವ ಪ್ರಧಾನಿ ನಾಳೆ ಸಂಜೆವರೆಗೂ ಜಪಾನ್ ನಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕ್ವಾಡ್ ಶೃಂಗ ಸಭೆಯಲ್ಲಿ ಎರಡು ದೇಶಗಳ ಉಪಕ್ರಮಗಳ ಬಗ್ಗೆ ಚರ್ಚೆಯಾಗಲಿದ್ದು, ಆಸಕ್ತಿಯ ವಿಷಯಗಳ ಬಗ್ಗೆ ಚರ್ಚಿಸಲು ಅವಕಾಶ ಇದೆ ಎಂದು ಪ್ರವಾಸಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಶಾಂತನಾದ ವರುಣ, ತಗ್ಗಿದ ಪ್ರವಾಹ – ಚಿಕ್ಕಬಳ್ಳಾಪುರದ ಡ್ಯಾಮ್‍ನಲ್ಲಿ ಯುವಕನ ಕೋತಿಯಾಟ

    Joe Biden

    ಇದೇ ವೇಳೆ ಅಮೇರಿಕ ಅಧ್ಯಕ್ಷ ಜೋ ಬೈಡನ್ ಜೊತೆಗೂ ಮೋದಿ ಸಭೆ ನಡೆಸಲಿದ್ದು, ಭಾರತದ ಅಮೇರಿಕದ ನಡುವೆ ದ್ವಿ ಪಕ್ಷೀಯ ಮಾತುಕತೆ ನಡೆಯಲಿದೆ. ಈ ಮಾತುಕತೆಯಲ್ಲಿ ಸಮಕಾಲಿಮ ಜಾಗತಿಕ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಯಲಿದೆ.

  • ಜಪಾನ್ ಲಸಿಕೆ ಪಟ್ಟಿಯಲ್ಲಿ ಕೋವ್ಯಾಕ್ಸಿನ್‌ಗೆ ಮಾನ್ಯತೆ

    ಜಪಾನ್ ಲಸಿಕೆ ಪಟ್ಟಿಯಲ್ಲಿ ಕೋವ್ಯಾಕ್ಸಿನ್‌ಗೆ ಮಾನ್ಯತೆ

    ಹೊಸದಿಲ್ಲಿ: ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್ ಲಸಿಕೆಯನ್ನು ಜಪಾನ್ ಮಾನ್ಯತೆ ಪಡೆದ ಲಸಿಕೆಗಳ ಪಟ್ಟಿಯಲ್ಲಿ ಸೇರಿಸಿದೆ. ಇದು ಉಭಯ ದೇಶಗಳ ನಡುವಿನ ಪ್ರಯಾಣವನ್ನು ಸುಲಭಗೊಳಿಸುವ ಉದ್ದೇಶ ಹೊಂದಿದೆ.

    ಜಪಾನ್ ಸರ್ಕಾರವು ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್ ಅನ್ನು ಮಾನ್ಯತೆ ಪಡೆದ ಲಸಿಕೆಗಳ ಪಟ್ಟಿಯಲ್ಲಿ ಸೇರಿಸಿದ್ದು, ಏಪ್ರಿಲ್ 10ರಿಂದ ಭಾರತದಿಂದ ಜಪಾನ್‌ಗೆ ಪ್ರಯಾಣಿಸಲು ಮತ್ತಷ್ಟು ಅನುಕೂಲವಾಗುತ್ತದೆ ಎಂದು ಭಾರತ್ ಬಯೋಟೆಕ್ ಟ್ವೀಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಕೋವ್ಯಾಕ್ಸಿನ್ ಲಸಿಕೆ ಪೂರೈಕೆ ಸ್ಥಗಿತಗೊಳಿಸಿದ WHO

    ಆಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳೂ ಪ್ರಯಾಣಕ್ಕೆ ಅನುಕೂಲವಾಗುವಂತೆ ಕೋವ್ಯಾಕ್ಸಿನ್ ಗುರುತಿಸಿವೆ ಎನ್ನಲಾಗಿದೆ.

  • ಭಾರತದಲ್ಲಿ ಮುಂದಿನ ಐದು ವರ್ಷಗಳಲ್ಲಿ ಜಪಾನ್ 3.2 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಿದೆ: ಮೋದಿ

    ಭಾರತದಲ್ಲಿ ಮುಂದಿನ ಐದು ವರ್ಷಗಳಲ್ಲಿ ಜಪಾನ್ 3.2 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಿದೆ: ಮೋದಿ

    ನವದೆಹಲಿ: ಜಪಾನ್ ಮುಂದಿನ ಐದು ವರ್ಷಗಳಲ್ಲಿ ಭಾರತದಲ್ಲಿ 3.2 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

    ಇಂದಿನಿಂದ ಆರಂಭವಾದ ಭಾರತ-ಜಪಾನ್ ಆರ್ಥಿಕ ಶೃಂಗಸಭೆಯ ಕುರಿತಾಗಿ ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋದಿ, ವಿಶ್ವ ಕೊರೊನಾ ಮಹಾಮಾರಿಯ ಹೊಡೆತದಿಂದ ಮೇಲೆದ್ದು ಇದೀಗ ಅಭಿವೃದ್ಧಿಯತ್ತ ಸಾಗುತ್ತಿದೆ. ಜಾಗತಿಕ ಆರ್ಥಿಕತೆ ಮತ್ತೆ ಪ್ರಗತಿಯತ್ತ ಮುನ್ನುಗ್ಗುತ್ತಿದೆ. ಇದೀಗ ಪ್ರಗತಿ, ಸೌಹಾರ್ದತೆ ಮತ್ತು ಪಾಲುದಾರಿಕೆ ಭಾರತ-ಜಪಾನ್ ಸಂಬಂಧದ ಮೂಲ ವಾಗುತ್ತಿದೆ ಎಂದರು. ಇದನ್ನೂ ಓದಿ: ಕೋಲಾರದ ಕ್ಲಾಕ್ ಟವರ್ ಮೇಲೆ 74 ವರ್ಷಗಳ ಬಳಿಕ ರಾರಾಜಿಸಿದ ತ್ರಿವರ್ಣ ಧ್ವಜ

    ಭಾರತದಲ್ಲಿ ದೊಡ್ಡ ಹೂಡಿಕೆಯ ರಾಷ್ಟ್ರಗಳಲ್ಲಿ ಜಪಾನ್ ಕೂಡ ಒಂದಾಗಿದ್ದು, ಮುಂಬೈ-ಅಹಮದಾಬಾದ್ ಹೈ ಸ್ಪೀಡ್ ರೈಲು ಕಾರಿಡಾರ್‌ನ ಒನ್ ಟೀಮ್-ಒನ್ ಪ್ರಾಜೆಕ್ಟ್ ರೀತಿಯಲ್ಲಿ ಭಾರತ-ಜಪಾನ್ ಕಾರ್ಯನಿರ್ವಹಿಸುತ್ತಿದೆ. ಭಾರತದೊಂದಿಗೆ ಸೈಬರ್ ಭದ್ರತೆಯಲ್ಲಿ ಸಹಕಾರದ ಜಪಾನ್‍ನ ಒಪ್ಪಂದವನ್ನು ನಾವು ಸ್ವಾಗತಿಸುತ್ತೇವೆ. ಶೀಘ್ರದಲ್ಲಿಯೇ ಈ ಬಗ್ಗೆ ಮುಂದಿನ ಮಾತುಕತೆ ನಡೆಸುತ್ತೇವೆ. ಭಾರತ ಜಪಾನಿನ ಅತ್ಯಂತ ಪ್ರಮುಖ ಪಾಲುದಾರ ರಾಷ್ಟ್ರವಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಖಾಸಗಿ ಬಸ್‍ಗಳ ಲೈಸನ್ಸ್ ರದ್ದು ಮಾಡುತ್ತೇವೆ: ಶ್ರೀರಾಮುಲು

    ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಮಾತನಾಡಿ, ಭಾರತದೊಂದಿಗೆ ಸೇರಿ ಉಕ್ರೇನ್‍ನಲ್ಲಿ ನಡೆಯುತ್ತಿರುವ ರಷ್ಯಾ-ಉಕ್ರೇನ್ ನಡುವಿನ ಯುದ್ಧ ನಿಲ್ಲಿಸಲು ಪ್ರಯತ್ನಿಸುತ್ತೇವೆ. ಉಕ್ರೇನ್ ಮತ್ತು ಅದರ ನೆರೆಯ ರಾಷ್ಟ್ರಗಳಿಗೆ ನೆರವು ನೀಡಲು ಸಹಕರಿಸುತ್ತೇವೆ ಎಂದರು.

  • ಜಪಾನ್‍ನಲ್ಲಿ ಭಾರೀ ಭೂಕಂಪ- ನಾಲ್ವರು ಸಾವು, 90 ಜನರಿಗೆ ಗಾಯ

    ಟೋಕಿಯೋ: ಉತ್ತರ ಜಪಾನ್‍ನ ಫುಕುಶಿಮಾ ಕರಾವಳಿ ಭಾಗದಲ್ಲಿ ನಡೆದ ಭೂಕಂಪದಿಂದಾಗಿ 4 ಜನ ಸಾವನ್ನಪ್ಪಿದ್ದು, 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

    ಉತ್ತರ ಜಪಾನ್‍ನ ಫುಕುಶಿಮಾ ಕರಾವಳಿಯಲ್ಲಿ ಬುಧವಾರ ರಾತ್ರಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸಣ್ಣ ಮಟ್ಟದಲ್ಲಿ ಸುನಾಮಿಯ ಹಂತದಲ್ಲೂ ತಲುಪಿತ್ತು. ಭೂಕಂಪನದ ಹಿನ್ನೆಲೆಯಲ್ಲಿ ಪೀಠೋಪಕರಣ ಧ್ವಂಸಗೊಂಡಿದ್ದು, ವಿದ್ಯುತ್‍ಗೆ ನಾಲ್ವರು ಸಾವನ್ನಪ್ಪಿದ್ದಾರೆ.

    ಈ ಪ್ರದೇಶವು ಉತ್ತರ ಜಪಾನ್‍ನ ಭಾಗವಾಗಿದೆ. ಇಲ್ಲಿ ಕಳೆದ 11 ವರ್ಷಗಳ ಹಿಂದೆ 9.0 ತೀವ್ರತೆಯಲ್ಲಿ ಭೂಕಂಪ ಮತ್ತು ಸುನಾಮಿಯಾಗಿ ಅನೇಕ ಅನಾಹುತಗಳಾಗಿತ್ತು.

    ಈ ಬಗ್ಗೆ ಜಪಾನ್‍ನ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಗುರುವಾರ ಬೆಳಿಗ್ಗೆ ಸಂಸತ್ತಿನ ಅಧಿವೇಶನದಲ್ಲಿ ಭೂಕಂಪದಿಂದಾ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಜೊತೆಗೆ 97 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಜಪಾನ್‌ನಲ್ಲಿ 7.3 ತೀವ್ರತೆಯ ಭಾರೀ ಭೂಕಂಪ – ಸುನಾಮಿ ಎಚ್ಚರಿಕೆ

    ಜಪಾನ್‍ನಲ್ಲಿ 7.3 ತೀವ್ರತೆಯ ಭಾರೀ ಭೂಕಂಪ ಬುಧವಾರ ಸಂಜೆ ಸಂಭವಿಸಿದೆ. ಭಾರೀ ತೀವ್ರತೆಯ ಭೂಕಂಪದಿಂದ ಸುನಾಮಿ ಸಂಭವಿಸಬಹುದು ಎಂದು ಎಚ್ಚರಿಕೆ ನೀಡಲಾಗಿತ್ತು. ಇದನ್ನೂ ಓದಿ: ಕಾಶ್ಮೀರ್‌ ಫೈಲ್ಸ್‌ನಂತೆ ಲಖಿಂಪುರ್‌ ಫೈಲ್ಸ್‌ನ್ನು ಯಾಕೆ ಮಾಡ್ಬಾರ್ದು: ಅಖಿಲೇಶ್ ಯಾದವ್ ಪ್ರಶ್ನೆ

  • ಜಪಾನ್‌ನಲ್ಲಿ 7.3 ತೀವ್ರತೆಯ ಭಾರೀ ಭೂಕಂಪ – ಸುನಾಮಿ ಎಚ್ಚರಿಕೆ

    ಜಪಾನ್‌ನಲ್ಲಿ 7.3 ತೀವ್ರತೆಯ ಭಾರೀ ಭೂಕಂಪ – ಸುನಾಮಿ ಎಚ್ಚರಿಕೆ

    ಟೋಕಿಯೋ: ಜಪಾನ್‌ನಲ್ಲಿ 7.3 ತೀವ್ರತೆಯ ಭಾರೀ ಭೂಕಂಪ ಬುಧವಾರ ಸಂಜೆ ಸಂಭವಿಸಿದೆ. ಭಾರೀ ತೀವ್ರತೆಯ ಭೂಕಂಪದಿಂದ ಸುನಾಮಿ ಸಂಭವಿಸಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

    ಉತ್ತರ ಜಪಾನ್‌ನ ಫುಕುಶಿಮಾದಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸಮುದ್ರದ 60 ಕಿ.ಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ. ಇದನ್ನೂ ಓದಿ: ಚೀನಾ ಬಳಿಕ ದಕ್ಷಿಣ ಕೊರಿಯಾ – ಕೋವಿಡ್ ಪ್ರಕರಣಗಳಲ್ಲಿ ಭಾರೀ ಏರಿಕೆ!

    2011ರಲ್ಲಿ ಇದೇ ಪ್ರದೇಶದಲ್ಲಿ 9.0 ತೀವ್ರತೆಯ ಭಾರೀ ಭೂಕಂಪ ಸಂಭವಿಸಿತ್ತು. ಭೂಕಂಪದ ಪ್ರಭಾವದಿಂದ ಜಪಾನ್‌ನಲ್ಲಿ ಭಾರೀ ಸುನಾಮಿ ಸಂಭವಿಸಿ ಮಾರಣ ಹೋಮವೇ ನಡೆದಿತ್ತು. ಇದೀಗ 11 ವರ್ಷಗಳ ಬಳಿಕ ನಡೆದಿರುವ ಭೂಕಂಪ ಹಳೆಯ ಕಹಿ ಘಟನೆಯನ್ನು ನೆನಪಿಸುವಂತಿದೆ. ಇದನ್ನೂ ಓದಿ: ಇಮ್ರಾನ್‌ ಖಾನ್‌ ನೂರಕ್ಕೆ ನೂರರಷ್ಟು ತೊಂದರೆಯಲ್ಲಿದ್ದಾರೆ: ಮಿತ್ರ ಪಕ್ಷ ಹೇಳಿಕೆ

    ಇಲ್ಲಿವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿರುವ ವರದಿಯಾಗಿಲ್ಲ.

  • ಜಪಾನ್ ಶಾಲೆಗಳಲ್ಲಿ ಪೋನಿಟೇಲ್ ಹೇರ್‌ಸ್ಟೈಲ್ ಬ್ಯಾನ್!

    ಜಪಾನ್ ಶಾಲೆಗಳಲ್ಲಿ ಪೋನಿಟೇಲ್ ಹೇರ್‌ಸ್ಟೈಲ್ ಬ್ಯಾನ್!

    ಟೋಕಿಯೋ: ಹುಡುಗಿಯರಿಗೆ ಹೆಚ್ಚು ಸುಲಭ ಹಾಗೂ ಆರಾಮ ಎನಿಸುವ ಕೇಶವಿನ್ಯಾಸವೆಂದರೆ ಪೋನಿಟೇಲ್. ನೀಳವಾದ ಕೂದಲಿದ್ದೂ ಪೋನಿಟೇಲ್ ಹಾಕದಿರುವ ಮಹಿಳೆ ಇರಲು ಸಾಧ್ಯವೇ ಇಲ್ಲ. ಹೀಗಿರುವಾಗ ಜಪಾನ್ ದೇಶದ ಶಾಲೆಗಳಲ್ಲಿ ಪೋನಿಟೇಲ್ ಹೇರ್ ಸ್ಟೈಅನ್ನು ಬ್ಯಾನ್ ಮಾಡಲಾಗಿದೆ. ಇದಕ್ಕೆ ಕಾರಣ ಇಲ್ಲಿದೆ.

    ಮಹಿಳೆಯರ ಕತ್ತಿನ ಭಾಗ ಪುರುಷರಿಗೆ ಹೆಚ್ಚಿನ ಲೈಂಗಿಕ ಪ್ರಚೋದನೆ ನೀಡುತ್ತದೆ. ಮಹಿಳೆಯರು ಪೋನಿಟೇಲ್ ಹಾಕಿಕೊಂಡಲ್ಲಿ ಕತ್ತು ಸಂಪೂರ್ಣವಾಗಿ ಕಾಣಿಸಿಕೊಳ್ಳುತ್ತದೆ ಎಂಬ ಕಾರಣಕ್ಕೆ ಜಪಾನ್‌ನ ಶಾಲೆಗಳಲ್ಲಿ ಮಕ್ಕಳು ಪೋನಿಟೇಲ್ ಹೇರ್ ಸ್ಟೈಲ್ ಮಾಡಿಕೊಳ್ಳದಂತೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ಭಾರತದ ರಫೇಲ್ ಯುದ್ಧ ವಿಮಾನ ಎದುರಿಸಲು ಚೀನಾದ ಜೆ-10ಸಿ ಫೈಟರ್ ಜೆಟ್ ಖರೀದಿಸಿದ ಪಾಕಿಸ್ತಾನ

    ಜಪಾನ್ ಕೇವಲ ಕೇಶವಿನ್ಯಾಸದ ಬಗ್ಗೆ ನಿರ್ಬಂಧ ಹೇರಿರದೇ ಹುಡುಗಿಯರ ಒಳ ಉಡುಪುಗಳ ಬಗ್ಗೆಯೂ ನಿರ್ಬಂಧ ಹೇರಿದೆ. ಶಾಲೆಗೆ ಹೋಗುವ ಹುಡುಗಿಯರು ಕೇವಲ ಬಿಳಿ ಬಣ್ಣದ ಒಳ ಉಡುಪುಗಳನ್ನು ಮಾತ್ರವೇ ಧರಿಸುವಂತೆ ತಿಳಿಸಿದೆ. ಇದನ್ನೂ ಓದಿ: ನೆದರ್‌ಲ್ಯಾಂಡ್‌ನ ಅಮೆರಿಕ ರಾಯಭಾರಿಯಾಗಿ ಭಾರತ ಮೂಲದ ಮಹಿಳೆ ನಾಮನಿರ್ದೇಶನ

    ಈ ಹಿಂದೆ ಜಪಾನ್‌ನ ಪುಕುವೋಕಾ ಪ್ರದೇಶದಲ್ಲಿ ಒಂದು ಸಮೀಕ್ಷೆ ನಡೆಸಲಾಗಿತ್ತು. ಹುಡುಗಿಯರ ಕತ್ತು ಹುಡುಗರಿಗೆ ಹೆಚ್ಚು ಲೈಂಗಿಕ ಪ್ರಚೋದನೆ ನೀಡುತ್ತದೆ ಎಂಬ ವಿಚಾರ ಸಮೀಕ್ಷೆಯ ಮುಖಾಂತರ ಕಂಡುಕೊಳ್ಳಲಾಗಿತ್ತು. ಬಳಿಕ ಅಲ್ಲಿನ ಕೆಲವು ಶಾಲೆಗಳಲ್ಲಿ ಪೋನಿಟೇಲ್ ಅನ್ನು ನಿರ್ಬಂಧಿಸಲಾಗಿತ್ತು. ಅದರೊಂದಿಗೆ ಲಂಗದ ಉದ್ದ, ಸಾಕ್ಸ್ಗಳ ಬಗ್ಗೆಯೂ ನಿಯಮಗಳನ್ನು ಮಾಡಲಾಗಿತ್ತು.

  • ಜಪಾನ್ ಯೋಧರನ್ನು ಬೀಳ್ಕೊಟ್ಟ ಭಾರತೀಯ ಸೇನೆ

    ಜಪಾನ್ ಯೋಧರನ್ನು ಬೀಳ್ಕೊಟ್ಟ ಭಾರತೀಯ ಸೇನೆ

    ಬೆಳಗಾವಿ: ಮರಾಠಾ ಲೈಟ್ ಇನ್ಫಂಟ್ರಿ ರೆಜಿಮೆಂಟ್ ನೇತೃತ್ವದಲ್ಲಿ ಫೆ.27ರಿಂದ ಪ್ರಾರಂಭವಾಗಿದ್ದ ಹನ್ನೆರಡು ದಿನಗಳ ಕಾಲ ನಡೆದ ಭಾರತ-ಜಪಾನ್ ಜಂಟಿ ಸಮರಾಭ್ಯಾಸ ಇಂದು ಸಂಪನ್ನವಾಗಿದ್ದು, ಭಾರತೀಯ ಸೇನೆಯಿಂದ ಜಪಾನ್ ಯೋಧರಿಗೆ ಬೀಳ್ಕೊಡುಗೆ ನೀಡಲಾಯಿತು.

    ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಮರಾಠಾ ಲೈಟ್ ಇನ್ಫಂಟ್ರಿ ರೆಜಿಮೆಂಟ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿತ್ತು. ಹನ್ನೆರಡು ದಿನಗಳ ಕಾಲ ನಡೆದ ಜಂಟಿ ಸಮರಾಭ್ಯಾಸದಲ್ಲಿ ಎರಡು ದೇಶಗಳ ಯುದ್ಧದ ಕಾರ್ಯಾಚರಣೆ ಜೊತೆಗೆ ತಂತ್ರಜ್ಞಾನಗಳ ಬಗ್ಗೆ ತರಬೇತಿ ನಡೆಸಲಾಗಿತ್ತು.

    ಕೊನೆಯ ದಿನವಾದ ಇಂದು ಭಾರತೀಯ ಸೇನೆಯಿಂದ ಜಪಾನ್ ಯೋಧರಿಗೆ ಬಿಳ್ಕೊಡುಗೆ ನೀಡಲಾಯಿತು. ಭಾರತ- ಜಪಾನ್ ಜಂಟಿ ಸಮರಾಭ್ಯಾಸದಲ್ಲಿ ಭಾರತೀಯ ಸೇನೆಯ 15ನೇ ಬೆಟಾಲಿಯನ್‍ನ ಮರಾಠಾ ಲೈಟ್ ಇನ್ಫಂಟ್ರಿ ರೆಜಿಮೆಂಟ್ ಹಾಗೂ ಜಪಾನ್ ಗ್ರೌಂಡ್ ಸೆಲ್ಫ್ ಡಿಫೆನ್ಸ್ ಫೋರ್ಸ್‍ನ 30ನೇ ದಳದ ತಲಾ 40 ಯೋಧರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಉಕ್ರೇನ್ ‌ನಿಂದ ಬಂದ ಕನ್ನಡಿಗ ವೈದ್ಯ‌ವಿದ್ಯಾರ್ಥಿಗಳಿಗೆ ಪ್ರವೇಶ

    ವಾರ್ಷಿಕ ತರಬೇತಿ ಆಗಿರುವ ಧರ್ಮ ಗಾರ್ಡಿಯನ್ ಕಾರ್ಯಕ್ರಮ ಅಂಗವಾಗಿ ಕರುನಾಡಿನಲ್ಲೇ ಈ ಸಮರಾಭ್ಯಾಸ ನಡೆದಿರೋದು ಮತ್ತೊಂದು ವಿಶೇಷವಾಗಿತ್ತು. ಮೂರು ದಿನಗಳ ಕಾಲ ನಡೆದ ಸಮರಾಭ್ಯಾಸದ ಯೋಧರ ಕಾರ್ಯಾಚರಣೆ ಮೈನವಿರೇಳಿಸುವಂತಿತ್ತು.

    ಜಾಗತಿಕ ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಅನುಕೂಲಕರವಾಗಿರುವ ಈ ಸಮರಾಭ್ಯಾಸದಲ್ಲಿ ಕಾಡು, ಅರೆ ನಗರ, ನಗರ ಪ್ರದೇಶಗಳಲ್ಲಿನ ಕಾರ್ಯಾಚರಣೆಯ ಪ್ಲಟೂನ್ ಮಟ್ಟದ ತರಬೇತಿ ಕಾರ್ಯಕ್ರಮ, ಮನೆಗಳ ಮೇಲಿನ ಡ್ರಿಲ್‍ಗಳು, ಭಯೋತ್ಪಾದಕ ಅಡಗು ತಾಣಗಳ ಮೇಲೆ ದಾಳಿ ನಡೆದಾಗ ಕೈಗೊಳ್ಳಬೇಕಾದ ಕಾರ್ಯಾಚರಣೆಯ ತರಬೇತಿ ಸೇರಿ ವಿವಿಧ ಹಂತದ ಕಾರ್ಯಾಚರಣೆಗಳನ್ನು ನಡೆಸಲಾಯಿತು. ಇದನ್ನೂ ಓದಿ: ಜೈಲಿನಿಂದಲೇ ಅಜಂ ಖಾನ್‌ ವಿಧಾನಸಭೆಗೆ ಎಂಟ್ರಿ

  • ಬಾಹ್ಯಾಕಾಶ ರಾಕೆಟ್‌ನಿಂದ ಅಮೆರಿಕ, ಜಪಾನ್‌ ಧ್ವಜ ತೆಗೆದು ಭಾರತ ಧ್ವಜ ಉಳಿಸಿಕೊಂಡ ರಷ್ಯಾ- Video Viral

    ಬಾಹ್ಯಾಕಾಶ ರಾಕೆಟ್‌ನಿಂದ ಅಮೆರಿಕ, ಜಪಾನ್‌ ಧ್ವಜ ತೆಗೆದು ಭಾರತ ಧ್ವಜ ಉಳಿಸಿಕೊಂಡ ರಷ್ಯಾ- Video Viral

    ಮಾಸ್ಕೋ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆ ಹಾಗೂ ಸಾಮಾನ್ಯ ಸಭೆಯಲ್ಲಿ ತನ್ನ ವಿರುದ್ಧ ನಿರ್ಣಯ ಮಂಡಿಸಿರುವ ಅಮೆರಿಕ ಹಾಗೂ ಜಪಾನ್‌ ಸೇರಿದಂತೆ ಅನೇಕ ರಾಷ್ಟ್ರಗಳ ರಾಷ್ಟ್ರೀಯ ಧ್ವಜವನ್ನು ತೆರವುಗೊಳಿಸಿರುವ ರಷ್ಯಾ ಸರ್ಕಾರದ ಬಾಹ್ಯಾಕಾಶ ಸಂಸ್ಥೆಯು ಭಾರತದ ಧ್ವಜವನ್ನು ಮಾತ್ರ ಹಾಗೆಯೇ ಉಳಿಸಿಕೊಂಡಿದೆ.

    ಬೈಕೊನೂರ್ ಬಾಹ್ಯಾಕಾಶ ನಿಲ್ದಾಣದಲ್ಲಿ ಬೃಹತ್ ರಾಕೆಟ್ ಮೇಲೆ ಹಲವು ರಾಷ್ಟ್ರಗಳ ರಾಷ್ಟ್ರೀಯ ಧ್ವಜವನ್ನು ಚಿತ್ರಿಸಲಾಗಿತ್ತು. ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ರಷ್ಯಾ ಮತ್ತು ಇತರ ರಾಷ್ಟ್ರಗಳ ನಡುವಿನ ಸಂಬಂಧದ ಸಂಕೇತವಾಗಿತ್ತು. ಇದನ್ನೂ ಓದಿ: ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು- ಆಸ್ಪತ್ರೆಗೆ ದಾಖಲು

    ಬೈಕೊನೂರ್‌ನಲ್ಲಿರುವ ಉಡಾವಣಾ ಕೇಂದ್ರವು ಕೆಲವು ದೇಶಗಳ ಧ್ವಜಗಳಿಲ್ಲದೆಯೇ ನಮ್ಮ ರಾಕೆಟ್‌ ಹೆಚ್ಚು ಸುಂದರವಾಗಿ ಕಾಣುತ್ತದೆ ಎಂದು ನಿರ್ಧರಿಸಿದರು ಎಂದು ರೋಸ್ಕೊಸ್ಮಾಸ್‌ ಮಹಾನಿರ್ದೇಶಕ ಡಿಮಿಟ್ರಿ ಒಲೆಗೊವಿಚ್ ರೊಗೊಜಿನ್ ಟ್ವೀಟ್ ಮಾಡಿದ್ದಾರೆ.

    https://twitter.com/Rogozin/status/1499043075586469900?ref_src=twsrc%5Etfw%7Ctwcamp%5Etweetembed%7Ctwterm%5E1499043075586469900%7Ctwgr%5E%7Ctwcon%5Es1_&ref_url=https%3A%2F%2Fwww.ndtv.com%2Fworld-news%2Fvideo-russia-removes-flags-of-us-japan-from-space-rocket-keeps-indias-2801675

    ಅನೇಕ ರಾಷ್ಟ್ರಗಳ ಧ್ವಜಗಳನ್ನು ಅಳಿಸಿ ಹಾಕುತ್ತಿರುವ ಸಂಬಂಧದ ವೀಡಿಯೋ ಎಲ್ಲೆಡೆ ವೈರಲ್‌ ಆಗಿದೆ. ವೀಡಿಯೋದಲ್ಲಿ ಅಮೆರಿಕ, ಜಪಾನ್‌ ರಾಷ್ಟ್ರ ಧ್ವಜಗಳನ್ನು ಅಳಿಸಿ, ಭಾರತದ ಧ್ವಜದ ಚಿತ್ರವನ್ನು ಮಾತ್ರ ಹಾಗೆಯೇ ಬಿಡಲಾಗಿದೆ. ಇದನ್ನೂ ಓದಿ: ನಾನೇನು ಕಚ್ಚುವುದಿಲ್ಲ, ಮತ್ತೇಕೆ ನಿಮಗೆ ಭಯ? – ಪುಟೀನ್‍ಗೆ ವ್ಯಂಗ್ಯ ಮಾಡಿದ ಉಕ್ರೇನ್ ಅಧ್ಯಕ್ಷ

    ರಷ್ಯಾದ ಫೆಡರಲ್ ಸ್ಪೇಸ್ ಏಜೆನ್ಸಿ ಎಂದು ಕರೆಯಲ್ಪಡುವ ರೋಸ್ಕೊಸ್ಮಾಸ್ ಅನ್ನು ಯುನೈಟೆಡ್ ರಾಕೆಟ್ ಮತ್ತು ಸ್ಪೇಸ್ ಕಾರ್ಪೊರೇಷನ್‌ನೊಂದಿಗೆ ವಿಲೀನಗೊಳಿಸಿದ ನಂತರ 1992ರಲ್ಲಿ ರಚಿಸಲಾಯಿತು. ಇದು ಬಾಹ್ಯಾಕಾಶ ವಲಯವನ್ನು ಉತ್ತೇಜಿಸುವ ಉದ್ದೇಶದ ಜಂಟಿ-ಸ್ಟಾಕ್ ಘಟಕವಾಗಿದೆ.

    ಪಾಶ್ಚಿಮಾತ್ಯ ರಾಷ್ಟ್ರಗಳ ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದ ನ್ಯಾಟೋ ಒಕ್ಕೂಟಕ್ಕೆ ಉಕ್ರೇನ್‌ ಸೇರುವುದನ್ನು ರಷ್ಯಾ ಹಿಂದಿನಿಂದಲೂ ವಿರೋಧಿಸಿತ್ತು. ಆದರೆ ಉಕ್ರೇನ್‌ ತನ್ನ ನಿಲುವಿನಿಂದ ಹಿಂದೆ ಸರಿಯದ ಕಾರಣ, ರಷ್ಯಾ ಯುದ್ಧ ನಡೆಸುತ್ತಿದೆ. ಇದನ್ನೂ ಓದಿ: ಗಡಿಗಳಲ್ಲಿ ಹೆಣ್ಮಕ್ಕಳ ಮೇಲೆ ಸೈನಿಕರಿಂದ ಹಲ್ಲೆ – ಕರಾಳತೆ ಬಿಚ್ಚಿಟ್ಟ ವಿದ್ಯಾರ್ಥಿನಿಯರು

    ಉಕ್ರೇನ್‌ನ ಪ್ರಮುಖ ನಗರಗಳ ಮೇಲೆ ರಷ್ಯಾ ಸೇನಾ ಪಡೆ ದಾಳಿಯನ್ನು ನಡೆಸುತ್ತಿದೆ. ರಷ್ಯಾ ಯುದ್ಧವನ್ನು ವಿರೋಧಿಸಿ ನ್ಯಾಟೋ ಒಕ್ಕೂಟದ ಸದಸ್ಯ ರಾಷ್ಟ್ರಗಳಾದ ಫ್ರಾನ್ಸ್‌, ಜರ್ಮನಿ, ಯುಕೆ, ಯುಎಸ್‌, ಜಪಾನ್‌ ಸೇರಿದಂತೆ ಅನೇಕ ರಾಷ್ಟ್ರಗಳು ರಷ್ಯಾಗೆ ಅನೇಕ ನಿರ್ಬಂಧಗಳನ್ನು ವಿಧಿಸಿವೆ.

    ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆ ಮತ್ತು ಸಾಮಾನ್ಯ ಸಭೆಯಲ್ಲಿ ಉಕ್ರೇನ್‌ ಮೇಲಿನ ರಷ್ಯಾ ದಾಳಿ ಖಂಡಿಸುವ ನಿರ್ಣಯದಿಂದ ಭಾರತ ದೂರ ಉಳಿದಿದೆ. ರಷ್ಯಾ, ಉಕ್ರೇನ್‌ ಯಾವುದೇ ರಾಷ್ಟ್ರದ ಪರವಹಿಸದೇ ತಟಸ್ಥ ಧೋರಣೆ ಅನುಸರಿಸಿದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಅತೀ ದೊಡ್ಡ ಅಣುಸ್ಥಾವರದ ಮೇಲೆ ರಷ್ಯಾ ದಾಳಿ