Tag: ಜಮೀರ್ ಅಹಮ್ಮದ್

  • ಕೇಂದ್ರದ ಹರ್ ಘರ್ ತಿರಂಗಾ ಅಭಿಯಾನವನ್ನು ಹೊಗಳಿದ ಜಮೀರ್

    ಕೇಂದ್ರದ ಹರ್ ಘರ್ ತಿರಂಗಾ ಅಭಿಯಾನವನ್ನು ಹೊಗಳಿದ ಜಮೀರ್

    ಬೆಂಗಳೂರು: ಬಿಜೆಪಿ ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕಾಂಗ್ರೆಸ್ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

    ರಾಷ್ಟ್ರಧ್ವಜಕ್ಕೂ ಹಣ ಪಡೆದು ಮಾರಾಟ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ಕಿಡಿ ಕಾರುತ್ತಿದ್ದಾರೆ. ಆದರೆ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನ ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ನಿಮ್ಮ ಸ್ಪೂರ್ತಿದಾಯಕ ಸಾಧನೆಯೊಂದಿಗೆ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕಾಲಿಡುತ್ತಿರುವುದು ವಿಶೇಷ: ಮೋದಿ

    ಚಾಮರಾಜಪೇಟೆಯ ಮಕ್ಕಳ ಕೂಟದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಶ್ಲಾಘಿಸಿದ್ದಾರೆ. ಜೊತೆಗೆ ರಾಷ್ಟ್ರಧ್ವಜಕ್ಕೆ 25 ರೂ. ಹಣ ಪಡೆಯುತ್ತಿರುವುದನ್ನು ಸಮರ್ಥಿಸಿಕೊಂಡಿದ್ದು, ರಾಷ್ಟ್ರಧ್ವಜದ ಮುಂದೆ ಹಣ ಏನು ಅಲ್ಲಾ ಎಂದು ಹೇಳಿದ್ದಾರೆ. ಇದನ್ನೂ ಓದಿ: ತ್ರಿವರ್ಣ ಧ್ವಜ ಭಾರತೀಯರಿಗಷ್ಟೇ ಅಲ್ಲ, ವಿದೇಶದಲ್ಲಿರುವ ಪ್ರಜೆಗಳಿಗೂ ರಕ್ಷಣಾತ್ಮಕ ಗುರಾಣಿ: ಮೋದಿ ಬಣ್ಣನೆ

    ಕಾಂಗ್ರೆಸ್ ನಾಯಕರ ವಿರೋಧದ ನಡುವೆ ಜಮೀರ್ ಹರ್ ಘರ್ ತಿರಂಗಾ ಅಭಿಯಾನವನ್ನು ಮೆಚ್ಚಿಕೊಂಡಿದ್ದು ಅಚ್ಚರಿ ಮೂಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ನನ್ನ ಲೆವಲ್‍ಗೆ ಮಾತನಾಡೋರು ಇದ್ರೆ ನಾನು ಮಾತಾಡ್ತೇನೆ- ಜಮೀರ್‌ಗೆ ಡಿಕೆಶಿ ಟಾಂಗ್

    ನನ್ನ ಲೆವಲ್‍ಗೆ ಮಾತನಾಡೋರು ಇದ್ರೆ ನಾನು ಮಾತಾಡ್ತೇನೆ- ಜಮೀರ್‌ಗೆ ಡಿಕೆಶಿ ಟಾಂಗ್

    ಬೆಂಗಳೂರು: ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ. ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

    ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳು ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿತಿಸಿದ ಅವರು, ನನ್ನ ಲೆವೆಲ್‌ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತನ್ನು ಹೇಳುತ್ತಿದ್ದೇನೆ ಎಂದರು. ಇದನ್ನೂ ಓದಿ: ಶಿವಸೇನೆಯಲ್ಲಿ ಸಿಂಬಲ್ ಫೈಟ್- ಉದ್ಧವ್, ಶಿಂಧೆ ಬಣಕ್ಕೆ ಚುನಾವಣೆ ಆಯೋಗ ನೋಟಿಸ್

    ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು ಎಂಬ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ನಾನು ಪ್ರಮೋದ್ ಮುತಾಲಿಕ್ ಅವರಿಗೆ ಉತ್ತರ ನೀಡುವುದಿಲ್ಲ. ರಾಜ್ಯದಲ್ಲಿ ಸಂವಿಧಾನ ಬದ್ಧವಾಗಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಪ್ರಮಾಣ ಮಾಡಿರುವ ಮುಖ್ಯಮಂತ್ರಿಗಳು, ಸಚಿವರು ಈ ಬಗ್ಗೆ ಉತ್ತರ ನೀಡಬೇಕು. ಈ ಎಲ್ಲವನ್ನು ಬಿಜೆಪಿ ಹಾಗೂ ಬಿಜೆಪಿ ಸರ್ಕಾರವೇ ಹೇಳಿಸುತ್ತಿದೆ. ಹಳೇ ಮೈಸೂರು ಸೇರಿದಂತೆ ಅನೇಕ ಭಾಗಗಳಲ್ಲಿ ಅವರು ಈ ರೀತಿ ಪ್ರಚೋದಿಸುತ್ತಿದ್ದಾರೆ. ಇದೆಲ್ಲದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಆಮೇಲೆ ಮಾತಾಡುತ್ತೇನೆ. ಈ ವಿಚಾರವಾಗಿ ಮೊದಲು ಮುಖ್ಯಮಂತ್ರಿಗಳು ಉತ್ತರಿಸಲಿ ಎಂದು ತಿಳಿಸಿದರು. ಇದನ್ನೂ ಓದಿ: ಈದ್ಗಾ ಮೈದಾನ ನಮ್ಮದೇ ಬಿಬಿಎಂಪಿಗೆ ವಾರ್ನಿಂಗ್ ನೀಡಿದ ವಕ್ಫ್ ಬೋರ್ಡ್ – ಸಿಎಂ ಮಧ್ಯಪ್ರವೇಶಕ್ಕೆ ಕಸರತ್ತು

    ಕೋಲಾರದಲ್ಲಿ ಬೇರೆ, ಬೇರೆ ಬಣಗಳ ಪ್ರತಿಭಟನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಕೋಲಾರದಲ್ಲಿ ಯಾವುದೇ ಬಣ ಇಲ್ಲ. ಸೋನಿಯಾ ಗಾಂಧಿ ಅವರಿಗೆ ರಕ್ಷಣೆ ಸಿಗಬೇಕು ಎಂದು ಎಲ್ಲರೂ ಹೋರಾಟ ಮಾಡುತ್ತಿದ್ದೇವೆ. ನಾವು ಎಲ್ಲ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲು ಸೂಚಿಸಿದ್ದು, ಅವರು ಮಾಡಿದ್ದಾರೆ ಎಂದು ಉತ್ತರಿಸಿದರು.

    ನಾನು ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರ ಸ್ಪರ್ಧೆಯ ಮಧ್ಯೆ ಹೋಗುವುದಿಲ್ಲ, ನನ್ನದೇ ಆದ ಪ್ರತ್ಯೇಕ ಗುರುತು ಇದೆ ಎಂಬ ಎಂ.ಬಿ. ಪಾಟೀಲ್ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, 224 ಕ್ಷೇತ್ರಗಳಲ್ಲಿ ಗೆಲ್ಲುವ ಎಲ್ಲರೂ ಮುಖ್ಯಮಂತ್ರಿ ಸ್ಥಾನಕ್ಕೆ ಆಸೆ ಪಟ್ಟರೆ ತಪ್ಪಿಲ್ಲ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿದ್ದು – ಜಮೀರ್ ಈ ಪ್ರಕರಣದಲ್ಲಿ ಕೈಯಾಡಿಸುತ್ತಿದ್ದಾರೆ: ಮುತಾಲಿಕ್

    ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿದ್ದು – ಜಮೀರ್ ಈ ಪ್ರಕರಣದಲ್ಲಿ ಕೈಯಾಡಿಸುತ್ತಿದ್ದಾರೆ: ಮುತಾಲಿಕ್

    ಚಿಕ್ಕೋಡಿ: ಬೆಂಗಳೂರಿನ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿದ್ದು ಶಾಸಕ ಜಮೀರ್ ಅಹ್ಮದ್ ಖಾನ್ ಈ ಪ್ರಕರಣದಲ್ಲಿ ಕೈಯಾಡಿಸುತ್ತಿದ್ದಾರೆ ಎಂದು ಶ್ರೀ ರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾತನಾಡಿದ ಅವರು, ಜಮೀರ್ ಅವರಿಗೆ ಎಚ್ಚರಿಕೆ ನೀಡುತ್ತೇನೆ, ಆ ಮೈದಾನದಲ್ಲಿ ವರ್ಷಕ್ಕೆ ಒಮ್ಮೆ ಪ್ರಾರ್ಥನೆ ನೀಡಲು ಅವಕಾಶ ನೀಡಲಾಗಿದೆ. ಸುಪ್ರೀಂಕೋರ್ಟ್ ಕೂಡ ಅದು ಬಿಬಿಎಂಪಿಗೆ ಸೇರಿದ್ದು ಎಂದು ಹೇಳಿದೆ. ಜಮೀರ್ ಪ್ರಭಾವದಿಂದ ಅಧಿಕಾರಿಗಳು ದಾರಿ ತಪ್ಪಿಸುತ್ತಿದ್ದಾರೆ. ಶೀಘ್ರವೇ ಬಿಜೆಪಿ ಸರ್ಕಾರ ಮೈದಾನವನ್ನು ಕೈಗೆ ತೆಗೆದುಕೊಳ್ಳಬೇಕು ಇಲ್ಲವಾದಲ್ಲಿ ಮತ್ತೆ ಹೋರಾಟ ಆರಂಭಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಹಿಂದಿನಂತೆ 5 ರೂಪಾಯಿ ಚಿಕಿತ್ಸೆ ಮುಂದುವರಿಸುತ್ತೇನೆ – ಸಂಪೂರ್ಣ ಚೇತರಿಕೆ ಕಂಡ ಡಾ.ಶಂಕರೇಗೌಡ

    ಪ್ರಧಾನಿ ಮೋದಿಗೆ ಸುಪ್ರಿಂಕೋರ್ಟ್ ಕ್ಲೀನ್ ಚೀಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಕಾಲಾವಧಿಯಲ್ಲಿ ವಿರೋಧಿಗಳನ್ನು ಮಟ್ಟಹಾಕುವ ಪ್ರಯತ್ನ ಆಗಿದೆ. ಮೋದಿಗೆ ಹಾಗೂ ಅಮಿತ್ ಶಾ ಅವರ ಮೇಲೆ ಸಾಕಷ್ಟು ತೊಂದರೆ ನೀಡಿ ಸುಳ್ಳು ಆಪಾದನೆ ಹೊರಿಸಲಾಗಿದೆ. ಸುಳ್ಳು ಆಪಾದನೆಗೆ ಕ್ಲೀನ್ ಚೀಟ್ ನೀಡಲೇಬೇಕು. ಸುಳ್ಳು ಆಪಾದನೆಗಳಿಂದ ನಿರ್ದೋಷಿ ಆಗಿ ಹೊರಬರಲೇಬೇಕು ಎನ್ನುವದನ್ನು ಕೋರ್ಟ್ ಮತ್ತೊಮ್ಮೆ ಸಾಬೀತು ಪಡಿಸಿದೆ ಎಂದರು. ಇದನ್ನೂ ಓದಿ: ಪ್ರಭಾವಿ ವ್ಯಕ್ತಿಗಳನ್ನ ಫೇಸ್‍ಬುಕ್‍ನಲ್ಲಿ ಪರಿಚಯ ಮಾಡ್ಕೊಂಡು ಹಣಕ್ಕೆ ಬ್ಲಾಕ್‍ಮೇಲ್ ಮಾಡ್ತಿರೋ ಖರ್ತನಾಕ್ ಲೇಡಿ

    Live Tv

  • ಕೊರೊನಾ ನಿಯಮ ಮರೆತು ಕ್ರಿಕೆಟ್ ಪಂದ್ಯಾಟ – ಬ್ಯಾಟ್‍ಬೀಸಿ ಸಂಭ್ರಮಿಸಿದ ಜಮೀರ್

    ಕೊರೊನಾ ನಿಯಮ ಮರೆತು ಕ್ರಿಕೆಟ್ ಪಂದ್ಯಾಟ – ಬ್ಯಾಟ್‍ಬೀಸಿ ಸಂಭ್ರಮಿಸಿದ ಜಮೀರ್

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಏರಿಳಿತವಾಗುತ್ತಿದೆ. ಈ ನಡುವೆ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಜಾರಿಗೆ ತಂದಿದೆ. ಆದರೆ ಜನಪ್ರತಿನಿಧಿಗಳು ಮಾತ್ರ ಕೋವಿಡ್ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಇದೀಗ ಶಾಸಕ ಜಮೀರ್ ಅಹ್ಮದ್ ಖಾನ್ ಮಾಸ್ಕ್ ಧರಿಸದೇ ಗುಂಪು ಕಟ್ಟಿಕೊಂಡು ಕ್ರಿಕೆಟ್ ಪಂದ್ಯವಾಡಿ ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ.

    ಸರ್ಕಾರ ಜನಸಾಮಾನ್ಯರಿಗೆ ಕೊರೊನಾ ಟಫ್ ರೂಲ್ಸ್ ಜಾರಿಗೆ ಮಾಡಿದೆ. ಆದರೆ ಜನಪ್ರತಿನಿಧಿಗಳು ಮಾತ್ರ ಬಿಂದಾಸ್ ಆಗಿ ಓಡಾಡುತ್ತಿದ್ದಾರೆ. ಚಾಮರಾಜಪೇಟೆಯಲ್ಲಿ ಆನಂದಪುರಂ ವೆಲ್ ಫೇರ್ ಅಸೋಸಿಯೇಷನ್‍ನಿಂದ ನಿನ್ನೆ ಕ್ರಿಕೆಟ್ ಪಂದ್ಯಾಟ ಆಯೋಜನೆಯಾಗಿತ್ತು. ಪಂದ್ಯಾಟದಲ್ಲಿ ಜಮೀರ್ ಮಾಸ್ಕ್ ಕೂಡ ಧರಿಸದೆ ಜನರನ್ನು ಗುಂಪುಗೂಡಿಸಿಕೊಂಡು ಕ್ರಿಕೆಟ್ ಆಡಿದ್ದಾರೆ. ಜೊತೆಗೆ ತಾವು ಬ್ಯಾಟ್‌ನಿಂದ ಹೊಡೆದ ಚೆಂಡನ್ನು ಕ್ಯಾಚ್‌ ಹಿಡಿದಾತನಿಗೆ ಗರಿಗರಿ ನೋಟು ನೀಡಿದ್ದಾರೆ. ಇದನ್ನೂ ಓದಿ: ಅಶ್ಲೀಲ ಫೋಟೋ ವಾಟ್ಸಪ್ ಗ್ರೂಪ್‍ಗೆ ಹಾಕಿ ಪೇಚೆಗೆ ಸಿಲುಕಿದ ಬಿಜೆಪಿ ಮುಖಂಡ

    ಮಾಸ್ಕ್ ಧರಿಸದೇ ಗುಂಪು ಕಟ್ಟಿಕೊಂಡು ಜಮೀರ್ ಆಂಡ್ ಟೀಮ್ ಕ್ರಿಕೆಟ್ ಆಡುತ್ತಿದ್ದಂತೆ ಅವರ ಬೆಂಗಾವಲಿಗೆ ಬಂದಿದ್ದಂತಹ ಪೊಲೀಸರು ಕೂಡ ಮೂಕಪ್ರೇಕ್ಷರಂತೆ ನೋಡಿ ಸುಮ್ಮನಿದ್ದರು. ಇತ್ತ ಜನಸಾಮಾನ್ಯರು ಮಾಸ್ಕ್ ಧರಿಸದೇ ಓಡಾಡಿದರೆ ಮಾರ್ಷಲ್‍ಗಳು ದಂಡ ಹಾಕುತ್ತಾರೆ. ಆದರೆ ಜನಪ್ರತಿನಿಧಿಗಳಿಗೆ ಮಾತ್ರ ಯಾಕೆ ದಂಡ ಹಾಕುತ್ತಿಲ್ಲ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ನನ್ನ ಟ್ವಿಟ್ಟರ್ ರೀಚ್ ಇದ್ದಕ್ಕಿದ್ದಂತೆ ಕಡಿಮೆಯಾಗಿದೆ – ದಾಖಲೆ ಮುಂದಿಟ್ಟು ಪರಾಗ್‍ಗೆ ರಾಹುಲ್ ಪತ್ರ

  • ವಾಚ್‍ಮ್ಯಾನ್ ಆಗ್ಲಿಲ್ಲ, ಇನ್ನೂ ಆಸ್ತಿ ಬರ್ದು ಕೊಡ್ತೀರಾ -ಜಮೀರ್‌ಗೆ ಕುಟುಕಿದ ರಾಮದಾಸ್

    ವಾಚ್‍ಮ್ಯಾನ್ ಆಗ್ಲಿಲ್ಲ, ಇನ್ನೂ ಆಸ್ತಿ ಬರ್ದು ಕೊಡ್ತೀರಾ -ಜಮೀರ್‌ಗೆ ಕುಟುಕಿದ ರಾಮದಾಸ್

    ಮೈಸೂರು: ವಾಚ್‍ಮ್ಯಾನ್ ಆಗುತ್ತೇನೆ ಎಂದು ಆಗಲಿಲ್ಲ. ಇನ್ನೂ ಆಸ್ತಿ ಬರ್ದು ಕೊಡುತ್ತೀರಾ ಎಂದು ಬಿಜೆಪಿ ಶಾಸಕ ರಾಮದಾಸ್ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರನ್ನು ಕುಟುಕಿದ್ದಾರೆ.

    ಸದ್ಯ ರಾಜ್ಯದಲ್ಲಿ ಬೀರುಗಾಳಿಯಂತೆ ಬೀಸುತ್ತಿರುವ ಡ್ರಗ್ ಪ್ರಕರಣದಲ್ಲಿ ಜಮೀರ್ ಅವರು ಕೊಲಂಬೋಗೆ ಹೋಗಿ ಬಂದಿದ್ದಾರೆ ಎಂಬ ಆರೋಪ ಬಂದಿದೆ. ಈ ವಿಚಾರವಾಗಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್ ಅವರು, ನನ್ನ ಮೇಲೆ ಕೇಳಿ ಬಂದಿರುವ ಆರೋಪ ಸಾಬೀತಾದರೆ ನಾನು ನನ್ನೆಲ್ಲ ಆಸ್ತಿಯನ್ನು ಸರ್ಕಾರಕ್ಕೆ ಬರೆದು ಕೊಡುತ್ತೇನೆ ಎಂದು ಹೇಳಿದ್ದರು.

    ಈ ಹೇಳಿಕೆಗೆ ಟಾಂಗ್ ನೀಡಿ ಟ್ವೀಟ್ ಮಾಡಿರುವ ರಾಮದಾಸ್, ಯಡಿಯೂರಪ್ಪನವರು ಮುಖ್ಯಮಂತ್ರಿ ಆದರೆ ಅವರ ಮನೆ ಮುಂದೆ ನಾನು ವಾಚ್‍ಮ್ಯಾನ್ ಆಗುತ್ತೇನೆ ಎಂದು ಹೇಳಿ ವರ್ಷಗಳು ಉರುಳಿದವು. ಇನ್ನೂ ಅದರ ಕುರುಹು ಕಾಣುತ್ತಿಲ್ಲ. ಇನ್ನು ಸಂಜನಾ ಜೊತೆ ಕೊಲಂಬೋ ಹೋಗಿದ್ದು ಸಾಬೀತಾದರೆ ನೀವು ನಿಜಕ್ಕೂ ಆಸ್ತಿ ಬರೆದುಕೊಡುತ್ತೀರೆ ಜಮೀರ್ ಎಂದು ವ್ಯಂಗ್ಯವಾಗಿ ಪ್ರಶ್ನೆ ಮಾಡಿದ್ದಾರೆ. ಇದನ್ನು ಓದಿ: ಹಿಂದೆ ಹೇಳಿದ್ದ 3 ಸ್ಫೋಟಕ ಒಗಟುಗಳಲ್ಲಿ ಮೂರು ಸತ್ಯವಾಗಿದೆ – ಪ್ರಶಾಂತ್‌ ಸಂಬರಗಿ

    ಕಳೆದ ವಿಧಾನಸಭೆ ಚುನವಾಣೆ ವೇಳೆ ಬಿಜೆಪಿ ಪಕ್ಷ ಗೆದ್ದು ಯಡಿಯೂರಪ್ಪನವರು ಮುಖ್ಯಮಂತ್ರಿಯಾದರೆ, ನಾನು ಒಂದು ದಿನ ವಾಚ್‍ಮ್ಯಾನ್ ಡ್ರೆಸ್ ಹಾಕಿಕೊಂಡು ಅವರ ಮನೆಯ ಬಳಿ ವಾಚ್‍ಮ್ಯಾನ್ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಯಡಿಯೂರಪ್ಪ ಸಿಎಂ ಅದರೂ ಕೂಡ ಜಮೀರ್ ಹೇಳಿದಂತೆ ನಡೆಯಲಿಲ್ಲ. ಈ ಅಂಶವನ್ನು ಇಟ್ಟುಕೊಂಡು ರಾಮದಾಸ್ ಈ ರೀತಿ ಟ್ವೀಟ್ ಮಾಡಿದ್ದಾರೆ.

  • ಜಮೀರ್ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ: ಪ್ರಶಾಂತ್ ಸಂಬರಗಿ

    ಜಮೀರ್ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ: ಪ್ರಶಾಂತ್ ಸಂಬರಗಿ

    – ಫೈಲ್ ಹಿಡಿದು ಸಿಸಿಬಿ ಕಚೇರಿಗೆ ಸಂಬರಗಿ

    ಬೆಂಗಳೂರು: ಶಾಸಕ ಜಮೀರ್ ಅಹಮ್ಮದ್ ಅವರ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತೇನೆ ಎಂದು ಉದ್ಯಮಿ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಯವರು ಹೇಳಿದ್ದಾರೆ.

    ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆ ಪ್ರಶಾಂತ್ ಸಂಬರಿಗಿ ಇಂದು ವಿಚಾರಣೆಗೆ ಹಾಜಾರಾಗಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸತ್ಯಕ್ಕೆ ಆಯಸ್ಸು ಜಾಸ್ತಿ ಇದೆ. ಇಂದು ಸತ್ಯದ ದೀಪ ಬೆಳಗುತ್ತಿದ್ದೇನೆ ಎಂದು ಹೇಳಿದ್ದಾರೆ.

    ಸರ್ಕಾರಕ್ಕೆ ತೆರಿಗೆ ಕಟ್ಟುವ ನಾನು ಇವತ್ತು ಸರ್ಕಾರಕ್ಕೆ ಇನ್ನೊಂದು ಆದಾಯವನ್ನು ತಂದು ಕೊಡುತ್ತೇನೆ. ಜಮೀರ್ ಅವರ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ. ಜಮೀರ್ ಅಹಮ್ಮದ್ ಖಂಡಿತ ಅವರ ಆಸ್ತಿಯನ್ನು ಸರ್ಕಾರಕ್ಕೆ ನೀಡಬೇಕಾಗುತ್ತೆ. ಅದಕ್ಕೆ ಸಂಬಂಧಿಸಿದ ದಾಖಲಾತಿಗಳು ನನ್ನ ಬಳಿ ಇದೆ ಎಂದು ಫೈಲ್ ತೋರಿಸಿದ ಪ್ರಶಾಂತ್ ಸಂಬರಗಿ, ಸಿಸಿಬಿ ಕಚೇರಿಗೆ ತೆರಳಿದ್ದಾರೆ. ಇದನ್ನು ಓದಿ: ಹಿಂದೆ ಹೇಳಿದ್ದ 3 ಸ್ಫೋಟಕ ಒಗಟುಗಳಲ್ಲಿ ಮೂರು ಸತ್ಯವಾಗಿದೆ – ಪ್ರಶಾಂತ್‌ ಸಂಬರಗಿ

    ಈ ಹಿಂದೆ ಮಾತನಾಡಿದ್ದ ಸಂಬರಗಿ, ಜಮೀರ್ ಅವರು ಕಳೆದ ವರ್ಷ ಜೂನ್ ತಿಂಗಳಲ್ಲಿ ಶ್ರೀಲಂಕಾದ ರಾಜಧಾನಿ ಕೊಲಂಬೋಗೆ ನಟಿ ಸಂಜನಾ ಜೊತೆ ಹೋಗಿದ್ದಾರೆ ಎಂದು ಆರೋಪ ಮಾಡಿದ್ದರು. ಇದಕ್ಕೆ ಉತ್ತರಿಸಿದ್ದ ಜಮೀರ್ ಅಹಮ್ಮದ್, ನನ್ನ ಮೇಲೆ ಕೇಳಿ ಬಂದಿರುವ ಆರೋಪ ಸಾಬೀತಾದರೆ, ನಾನು ಸಂಜನಾ ಜೊತೆ ಕೊಲಂಬೋಗೆ ಹೋಗಿದ್ದರೆ ನಾನು ನನ್ನ ಆಸ್ತಿಯನ್ನು ಸರ್ಕಾರಕ್ಕೆ ಬರೆದು ಕೊಡುತ್ತೇನೆ ಎಂದು ಹೇಳಿದ್ದರು.

    ಇದಕ್ಕೂ ಮುನ್ನಾ ಮಾತನಾಡಿದ್ದ ಅವರು, ನಾನು ದಾಖಲೆ ಇಟ್ಟುಕೊಂಡೇ ಮಾತನಾಡುತ್ತೇನೆ. ನಾನು ಸಂಜನಾ ಜೊತೆಯಲ್ಲೇ ಜಮೀರ್ ಶ್ರೀಲಂಕಾಗೆ ಹೋಗಿದ್ದಾರೆ ಎಂದು ಹೇಳಿಲ್ಲ. ಆದರೆ 2019ರ ಜೂನ್ 8, 9, 10ರಂದು ಜಮೀರ್ ಅಹ್ಮದ್ ಎಲ್ಲಿದ್ದರು? ಅವರು ಶ್ರೀಲಂಕಾದಲ್ಲಿ ಇದ್ದರೋ ಇಲ್ಲವೋ ಎನ್ನುವುದನ್ನು ಹೇಳಲಿ. ನನಗೆ ಜಮೀರ್ ಉತ್ತರ ನೀಡುವ ಅಗತ್ಯವಿಲ್ಲ. ಜನತೆ ಪಾಸ್‍ಪೋರ್ಟ್ ತೋರಿಸಿದರೆ ಸಾಕು. ನನ್ನ ಒಂದು ಸಣ್ಣ ಪ್ರಶ್ನೆಗೆ ಉತ್ತರ ನೀಡಲಿ ಎಂದು ಸವಾಲು ಎಸೆದಿದ್ದರು.

    ಜೊತೆಗೆ ನನ್ನನ್ನು ಕಾಜಿಪಿಂಜಿ ಎಂದು ಕರೆಯುತ್ತಾರೆ. ಆದರೆ ನಾನು ಕಾಜಿಪಿಂಜಿ ಅಲ್ಲ. ಕಾನೂನು ಗೊತ್ತಿರುವ ನಾನು ಒಬ್ಬ ಜನ ಪ್ರತಿನಿಧಿಯ ವಿರುದ್ಧ ದಾಖಲೆ ಇಲ್ಲದೇ ಸುಳ್ಳು ಆರೋಪ ಮಾಡುವುದಿಲ್ಲ. ನನ್ನ ವಿರುದ್ಧ ಈಗ ಸುಳ್ಳು ಕೇಸ್ ಹಾಕಿದ್ದಾರೆ. ಈ ರೀತಿ ಕೇಸ್ ಬೀಳುತ್ತದೆ ಎಂಬುದು ನನಗೆ ಮೊದಲೇ ಗೊತ್ತಿತ್ತು. ಇದರ ವಿರುದ್ಧ ಹೋರಾಡುತ್ತೇನೆ ಎಂದು ಹೇಳಿದ್ದರು.

  • ನನ್ನ ವಿರುದ್ಧ ತನಿಖೆ ನಡೆಸಿ – ರಾಜ್ಯ ಸರ್ಕಾರಕ್ಕೆ ಜಮೀರ್ ಸವಾಲ್

    ನನ್ನ ವಿರುದ್ಧ ತನಿಖೆ ನಡೆಸಿ – ರಾಜ್ಯ ಸರ್ಕಾರಕ್ಕೆ ಜಮೀರ್ ಸವಾಲ್

    ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರು ರಾಜ್ಯ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.

    ಇಂದು ಸರಣಿ ಟ್ವೀಟ್ ಮಾಡಿರುವ ಜಮೀರ್, 2019 ಜೂನ್ 08ರಂದು ನಾನು, ಸಂಜನಾ ಅವರ ಜೊತೆ ಶ್ರೀಲಂಕಾಕ್ಕೆ ಹೋಗಿದ್ದೆ ಎಂದು ಆರೋಪಿಸಲಾಗಿದೆ. ಹಾಗಿದ್ದಲ್ಲಿ ವಿಮಾನ ಪ್ರಯಾಣದ ಟಿಕೆಟ್‍ಗಳಿರಬೇಕಲ್ಲಾ? ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದರೆ ಅಲ್ಲಿಯೂ ದಾಖಲೆಗಳು ಇರಬೇಕಲ್ಲಾ? ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ನನ್ನ ಓಡಾಟದ ಚಿತ್ರಗಳೂ ಇರಬೇಕಲ್ವಾ? ಈ ಬಗ್ಗೆಯೂ ತನಿಖೆ ನಡೆಯಲಿ ಎಂದಿದ್ದಾರೆ.

    ನಾನು ರಾಜಕೀಯದಲ್ಲಿರುವ ವ್ಯಕ್ತಿ, ಸುಳ್ಳು ಆರೋಪಗಳು, ಚಾರಿತ್ರ್ಯ ಹರಣದ ಪ್ರಯತ್ನಗಳು ನನಗೆ ಹೊಸತೇನಲ್ಲ. ಅವೆಲ್ಲವನ್ನು ಜನಾಶೀರ್ವಾದದ ಬಲದಿಂದ ಎದುರಿಸುತ್ತಾ ಬಂದಿದ್ದೇನೆ. ನಾನು ಏನೆನ್ನುವುದು ನಾನು ನಂಬಿರುವ ಜನ ಮತ್ತು ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ಎಂದು ಇನ್ನೊಂದು ಟ್ವೀಟ್ ಮಾಡಿರುವ ಜಮೀರ್ ತಮ್ಮ ಮೇಲೆ ಆರೋಪ ಮಾಡುವವರ ಮೇಲೆ ಕಿಡಿಕಾರಿದ್ದಾರೆ.

    ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿ ಸರ್ಕಾರ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ನಾನೇನೋ ಪ್ರಭಾವ ಬೀರುತ್ತಿದ್ದೆ ಎಂದು ಹೇಳಬಹುದಿತ್ತು. ಈಗ ನಟಿ ಸಂಜನಾ ಪೊಲೀಸರ ವಶದಲ್ಲಿದ್ದಾರೆ. ಆದ್ದರಿಂದ ಪೊಲೀಸರು ಆಕೆಯನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಿ. ಅದೇ ರೀತಿ ಶ್ರೀಲಂಕಾ ಪ್ರವಾಸದ ಬಗ್ಗೆಯೂ ತನಿಖೆ ನಡೆಸಲಿ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಪೊಲೀಸರು ನಡೆಸುವ ತನಿಖೆಯಲ್ಲಿ ಸಂಬರಗಿ ಮಾಡಿರುವ ಆರೋಪಗಳು ಸಾಬೀತಾದರೆ ನನ್ನ ಸಂಪೂರ್ಣ ಆಸ್ತಿಯನ್ನು ರಾಜ್ಯ ಸರ್ಕಾರಕ್ಕೆ ಬರೆದುಕೊಡಲು ಸಿದ್ಧನಿದ್ದೇನೆ. ನನ್ನ ಮೇಲಿನ ಆರೋಪಗಳು ಸುಳ್ಳು ಎಂದು ಕಂಡುಬಂದರೆ ಆರೋಪಿಗಳನ್ನು ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಪಡಿಸಲಿ. ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದ್ದು. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಸಿಎಂ ಯಡಿಯೂರಪ್ಪ ಅವರಿಗೆ ಹಾಗೂ ಗೃಹ ಸಚಿವ ಬೊಮ್ಮಾಯಿಯವರಿಗೆ ಒತ್ತಾಯಿಸುತ್ತೇನೆ ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.

  • ಅವನು ದಡ್ಡನಲ್ಲ, ಕಿಲಾಡಿ – ಜಮೀರ್‌ನನ್ನು ಹಾಡಿಹೊಗಳಿದ ಸೋಮಣ್ಣ

    ಅವನು ದಡ್ಡನಲ್ಲ, ಕಿಲಾಡಿ – ಜಮೀರ್‌ನನ್ನು ಹಾಡಿಹೊಗಳಿದ ಸೋಮಣ್ಣ

    – ಎಲ್ಲ ಮುಸ್ಲಿಮರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ

    ಬೆಂಗಳೂರು: ಎಲ್ಲ ಮುಸ್ಲಿಮರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

    ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ವಾರ್ಡ್‍ನಲ್ಲಿ ಈದ್ಗಾ ಮೈದಾನ ಕಾಂಪೌಂಡ್ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಸೋಮಣ್ಣ, ಈ ಕಾಂಪೌಂಡ್ ಅನ್ನು ಆರು ತಿಂಗಳಿನಲ್ಲಿ ಕಟ್ಟಿಕೊಡುತ್ತೇನೆ. ಎಲ್ಲ ಜಾತಿ ಧರ್ಮಗಳಲ್ಲೂ ಒಳ್ಳೆಯವರು ಇರುತ್ತಾರೆ, ಕೆಟ್ಟವರು ಇರುತ್ತಾರೆ. ದೇವರು ಇದ್ದಾನೆ ಅಂದರೆ ಅಲ್ಲಿ ದೆವ್ವ-ಸೈತಾನ್‍ಗಳು ಇದ್ದೇ ಇರುತ್ತವೆ ಎಂದು ತಿಳಿಸಿದ್ದಾರೆ.

    ಇದೇ ವೇಳೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರನ್ನು ಹಾಡಿಹೊಗಳಿದ ಸೋಮಣ್ಣ, ಈ ಕಾರ್ಯಕ್ರಮಕ್ಕೆ ನಾನು ಜಮೀರ್ ನನ್ನು ಕರೆದುಕೊಂಡು ಬರಬೇಕು ಎಂದುಕೊಂಡಿದ್ದೆ. ಆದರೆ ಅವನು ಬರಲಿಲ್ಲ. ಅವನು ನನ್ನ ಆತ್ಮೀಯ, ಅವನು ದಡ್ಡ ಅಲ್ಲ, ಕಿಲಾಡಿ ಎಂದು ಹಾಡಿ ಹೊಗಳಿದರು. ಜಮೀರ್ ಕೇವಲ ಮುಸಲ್ಮಾರ ಎಂಎಲ್‍ಎ ಅಲ್ಲ, ಎಲ್ಲಾ ವರ್ಗದವರ ಎಂಎಲ್‍ಎ ಎಂದು ಹೇಳಿದರು.

    ನನಗೆ ಜಮೀರ್ ಸಿಗಲಿಲ್ಲ. ಅವನನ್ನು ಹಿಡಿದುಕೊಂಡು ಬರೋಣ ಅಂದುಕೊಂಡೆ. ಇಲ್ಲಿ ಬಂದು ನಮ್ಮ ಕೆಲಸದ ಬಗ್ಗೆ ಮಾತಾಡು, ಏನೇನೋ ಹೇಳಿಬಿಟ್ಟು ಬೆಂಕಿ ಇಟ್ಟು ಓಡಿ ಹೋಗಬೇಡ ಎಂದು ಅವನಿಗೆ ಹೇಳೋಣ ಅಂದುಕೊಂಡಿದ್ದೆ ಎಂದು ಸೋಮಣ್ಣ ಹಾಸ್ಯ ಚಟಾಕಿ ಹಾಕಿದರು.

  • ಮುಗ್ಧರು, ಅಮಾಯಕರು ಮಧ್ಯರಾತ್ರಿ ದೊಂಬಿ ಮಾಡುವುದಿಲ್ಲ: ಡಿಸಿಎಂ ತಿರುಗೇಟು

    ಮುಗ್ಧರು, ಅಮಾಯಕರು ಮಧ್ಯರಾತ್ರಿ ದೊಂಬಿ ಮಾಡುವುದಿಲ್ಲ: ಡಿಸಿಎಂ ತಿರುಗೇಟು

    – ಸಾರಿಗೆ ಇಲಾಖೆಯಿಂದ ಕೋರಿಯರ್ ಸೇವೆ ಆರಂಭ
    – ಪಟ್ಟಣ ಪ್ರದೇಶದಲ್ಲಿ ಬಸ್‍ನಲ್ಲಿ ಸೈಕಲ್ ಇಡಲು ವ್ಯವಸ್ಥೆ

    ರಾಯಚೂರು: ಅಖಂಡ ಶ್ರೀನಿವಾಸ್ ಮನೆ ಮೇಲಿನ ದಾಳಿ ಪ್ರಕರಣದಲ್ಲಿ ಭಾಗಿಯಾಗಿದ್ದವರು ಮುಗ್ಧ ಹಾಗೂ ಅಮಾಯಕರು ಎಂಬ ಶಾಸಕ ಜಮೀರ್ ಹೇಳಿಕೆಗೆ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ.

    ರಾಯಚೂರಿನಲ್ಲಿ ಮಾತನಾಡಿದ ಲಕ್ಷ್ಮಣ ಸವದಿ, ಒಳ್ಳೆಯವರು ಮಧ್ಯರಾತ್ರಿ ಬಂದು ದೊಂಬಿ ಮಾಡುವುದಿಲ್ಲ. ನವೀನ್ ಎಂಬಾತ ಡಿಕೆಶಿ ನಮ್ಮ ಬಾಸ್, ರಾಹುಲ್, ಪ್ರಿಯಾಂಕ ನಮ್ಮ ನಾಯಕರು ಎಂದು ಪೋಸ್ಟ್ ಹಾಕುತ್ತಿದ್ದ. ಕಾಂಗ್ರೆಸ್ ತಮ್ಮ ಹುಳುಕು ಮುಚ್ಚಿಕೊಳ್ಳಲು ನವೀನ್ ಬಿಜೆಪಿಯವನು ಎಂದು ಬಿಂಬಿಸುತ್ತಿದೆ. ಚುನಾವಣೆ ವೇಳೆ ನವೀನ್ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾನೆ. ಈ ಎಲ್ಲಾ ಮಾಹಿತಿ ನಮ್ಮ ಗೃಹ ಇಲಾಖೆ ಬಳಿ ಇವೆ. ಸಮಾಜಕ್ಕೆ ತಪ್ಪು ಸಂದೇಶ ಕಾಂಗ್ರೆಸ್ ಪಕ್ಷ ನೀಡುತ್ತಿದೆ ಅಂತ ತಿಳಿಸಿದ್ದಾರೆ.

    ಗುರುವಾರ ಸಚಿವ ಸಂಪುಟ ಸಭೆ ಬಳಿಕ ಗಣೇಶ ಉತ್ಸವದ ಬಗ್ಗೆ ಚಿಂತನೆ ಮಾಡಲಾಗುವುದು. ನಾನು ಮೊನ್ನೆ ದೆಹಲಿಗೆ ಹೋಗಿದ್ದು, ನನ್ನ ಇಲಾಖೆ ಕಾರ್ಯಗಳಿಗೆ. ಒಂದು ವರ್ಷದ ಬಿಜೆಪಿ ಅಧಿಕಾರ ಪೂರೈಸಿದ ಹಿನ್ನೆಲೆ ನಾನು ದೆಹಲಿಗೆ ಹೋಗಿದ್ದೆ. ಆಸೆ ಸನ್ಯಾಸಿಗಳನ್ನೂ ಬಿಟ್ಟಿಲ್ಲ. ನಾನು ರಾಜಕೀಯ ಸನ್ಯಾಸಿಯಲ್ಲ. ಆದರೆ ಸದ್ಯಕ್ಕೆ ನಾನು ಸಿಎಂ ಆಗುವ ಯಾವ ಪ್ರಸ್ತಾವವೂ ಇಲ್ಲ. ಯಡಿಯೂರಪ್ಪನವರು ಮುಂದಿನ ಮೂರು ವರ್ಷಕಾಲ ಮುಖ್ಯಮಂತ್ರಿಗಳಾಗಿರುತ್ತಾರೆ ಎಂದು ಸವದಿ ಹೇಳಿದ್ದಾರೆ.

    ಸದ್ಯ ಸಾರಿಗೆ ಇಲಾಖೆ ಭಾರೀ ನಷ್ಟದಲ್ಲಿದೆ. ಅಗತ್ಯಕ್ಕೆ ಅನುಗುಣವಾಗಿ ಮಾತ್ರ ಸಾರಿಗೆ ಬಸ್ ಓಡಾಡಿಸುತ್ತಿದ್ದೇವೆ. ಸಾರಿಗೆ ಇಲಾಖೆಯ ಒಟ್ಟು ಸಿಬ್ಬಂದಿ 1 ಲಕ್ಷ 30 ಸಾವಿರ ಜನರಿಗೆ ತಿಂಗಳಿಗೆ 326 ಕೋಟಿ ಸಂಬಳವಾಗುತ್ತದೆ. ಸರ್ಕಾರದ ಖಜಾನೆಯಿಂದ ಸಂಬಳ ಕೊಡಲು ಸಿಎಂಗೆ ಮನವಿ ಮಾಡಿದ್ದೇವೆ. ಹಣಕಾಸಿನ ತೊಂದರೆಯಿರುವುದರಿಂದ ಎರಡು ತಿಂಗಳ ಸಂಬಳವನ್ನು 75:25 ಅನುಪಾತದಲ್ಲಿ ಕೊಡಲು ಮನವಿ ಮಾಡಲಾಗಿದೆ. 25 ಪ್ರತಿಶತ ಸಂಬಳ ಮಾತ್ರ ನಿಗಮ ಕೊಡಲು ಸಾಧ್ಯವಾಗುತ್ತದೆ. ಸಿಬ್ಬಂದಿ ಸಂಬಳವನ್ನು ಕಷ್ಟಕಾಲದಲ್ಲೂ ಕೊಡುತ್ತೇವೆ ಎಂದರು.

    ಸಾರಿಗೆ ಇಲಾಖೆ ನಷ್ಟ ಕಡಿಮೆ ಮಾಡಲು ನಾವು ಹೊಸ ವ್ಯವಸ್ಥೆ ಪ್ರಾರಂಭಿಸಿದ್ದೇವೆ. ಪಟ್ಟಣ, ಪ್ರವಾಸಿ ಪ್ರದೇಶಗಳಲ್ಲಿ ಬಸ್ ನಲ್ಲಿ ಸೈಕಲ್ ವ್ಯವಸ್ಥೆ ಮಾಡುತ್ತಿದ್ದೇವೆ. ಸದ್ಯ ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿದ್ದು, ಬಳಿಕ ಎಲ್ಲೆಡೆ ವಿಸ್ತರಣೆ ಮಾಡುವ ಯೋಚನೆಯಿದೆ. ಇಲಾಖೆಯಿಂದ ಕೋರಿಯರ್ ಸೇವೆ ಪ್ರಾರಂಭಿಸಲು ಟೆಂಡರ್ ಪ್ರಕ್ರಿಯೆ ಮುಗಿದಿದೆ. ಖಾಸಗಿಯವರಿಗಿಂತಲೂ ಪರಿಣಾಮಕಾರಿಯಾಗಿ ಕೋರಿಯರ್ ಸರ್ವಿಸ್ ಕೊಡುತ್ತೇವೆ. ಇದರ ಬಗ್ಗೆ ಎಲ್ಲ ರೂಪುರೇಷೆ ಸಿದ್ಧವಾಗುತ್ತಿದೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

  • ಯುದ್ಧ ಗೆದ್ದು ಬಂದಂತೆ ಮೆರವಣಿಗೆ – ಪಾಷಾ ವಿರುದ್ಧ ಕ್ರಮಕ್ಕೆ ಜಮೀರ್ ಆಗ್ರಹ

    ಯುದ್ಧ ಗೆದ್ದು ಬಂದಂತೆ ಮೆರವಣಿಗೆ – ಪಾಷಾ ವಿರುದ್ಧ ಕ್ರಮಕ್ಕೆ ಜಮೀರ್ ಆಗ್ರಹ

    ಬೆಂಗಳೂರು: ಯುದ್ಧ ಗೆದ್ದು, ಬಂದಂತೆ ಮೆರವಣಿಗೆ ಮಾಡಿದ್ದನ್ನು ನಾನು ಖಂಡಿಸುತ್ತೇನೆ ಎಂದು ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ವಿರುದ್ಧ ಶಾಸಕ ಜಮೀರ್ ಅಹಮ್ಮದ್ ಅವರು ಕಿಡಿಕಾರಿದ್ದಾರೆ.

    ಕೊರೊನಾ ಸೋಂಕಿಗೆ ತುತ್ತಾಗಿದ್ದ ಪಾಷಾ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ವೇಳೆ ಆಸ್ಪತ್ರೆಯಿಂದ ಹೊರೆ ಬಂದ ಅವರನ್ನು ಅವರ ಬೆಂಬಲಿಗರು ತೆರೆದ ಕಾರಿನಲ್ಲಿ ಮೆರವಣಿಗೆ ಮಾಡಿಕೊಂಡು ಹೂಮಾಲೆ ಹಾಕಿ ಸ್ವಾಗತ ಕೋರಿದ್ದರು. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ರೂಲ್ಸ್ ಬ್ರೇಕ್ ಮಾಡಿದ್ದರು.

    ಈಗ ಈ ವಿಚಾರವಾಗಿ ಟ್ವೀಟ್ ಮಾಡಿರುವ ಜಮೀರ್ ಅಹಮ್ಮದ್, ರಾಜ್ಯಕ್ಕೆ ರಾಜ್ಯವೇ ಕೊರೊನಾ ಇಂದ ಕಂಗಾಲಾಗಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಜನರನ್ನು ಗುಂಪುಗೂಡಿಸಿ ಮೆರವಣಿಗೆ ಮಾಡುವುದು ಬೇಜವಾಬ್ದಾರಿಯ ನಡವಳಿಕೆಯಾಗುತ್ತದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಿಗೆ ತಿಳಿಹೇಳಬೇಕಾದವರೆ ಈ ರೀತಿ ವರ್ತಿಸಿದರೆ ಹೇಗೆ ಎಂದು ಪ್ರಶ್ನೆ ಮಾಡಿ ಇಮ್ರಾನ್ ಪಾಷಾ ವಿರುದ್ಧ ಟ್ವೀಟ್ ಮಾಡಿದ್ದಾರೆ.

    ಇದರ ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಜಮೀರ್, ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಕೊರೊನಾ ಇಂದ ಗುಣಮುಖರಾಗಿ ಬಂದಿದ್ದು ನನಗೂ ಸಂತೋಷವಾಗಿತ್ತು, ಆದರೆ ಈ ರೀತಿ ಯುದ್ಧ ಗೆದ್ದು ಬಂದವರಂತೆ ಮೆರವಣಿಗೆ ಮೂಲಕ ಬಂದಿದ್ದನ್ನು ನಾನು ಖಂಡಿಸುತ್ತೇನೆ. ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿ ಎಂದು ತಿಳಿಸಿದ್ದಾರೆ.

    ಈ ಸಂಬಂಧ ಈಗಾಗಲೇ ಇಮ್ರಾನ್ ಪಾಷಾ ಅವರನ್ನು ಬಂಧಿಸಲಾಗಿದೆ. ಪೊಲೀಸರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯ ಅಡಿ ಪ್ರಕರಣ ದಾಖಲಿಸಿ ಪಾಷಾನನ್ನು ಬಂಧಿಸಿದ್ದಾರೆ. ಕೊರೊನಾ ಸಮಯದಲ್ಲಿ ರಾಜಕೀಯ ಮೆರವಣಿಗೆ ನಡೆಸಬಾರದು ಎಂದು ಸೂಚಿಸಿದ್ದರೂ ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಮೆರವಣಿಗೆ ನಡೆಸಿ ಕೋವಿಡ್ 19 ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕೆ ಪಾಷಾ ವಿರುದ್ಧ ಪ್ರಕರಣ ದಾಖಲಾಗಿದೆ.