Tag: ಜಮೀರ್ ಅಹಮ್ಮದ್ ಖಾನ್

  • ಗೆಲ್ಲುವುದು 123 ಸ್ಥಾನವಲ್ಲ ಜೆಡಿಎಸ್ ತಪ್ಪಾಗಿ ಮುಂದೆ 1 ಸೇರಿಸಿದೆ- ಜಮೀರ್ ಅಹಮ್ಮದ್ ವ್ಯಂಗ್ಯ

    ಗೆಲ್ಲುವುದು 123 ಸ್ಥಾನವಲ್ಲ ಜೆಡಿಎಸ್ ತಪ್ಪಾಗಿ ಮುಂದೆ 1 ಸೇರಿಸಿದೆ- ಜಮೀರ್ ಅಹಮ್ಮದ್ ವ್ಯಂಗ್ಯ

    ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ (JDS) 23 ಕ್ಷೇತ್ರದಲ್ಲಿ ಮಾತ್ರ ಗೆಲ್ಲುವುದು. ಅವರು 123 ಎಂದು ತಪ್ಪಾಗಿ ಮುಂದೆ ಒಂದನ್ನು ಸೇರಿಸಿದ್ದಾರೆ ಎಂದು ಕಾಂಗ್ರೆಸ್ (Congress) ಶಾಸಕ ಜಮೀರ್ ಅಹಮ್ಮದ್ ಖಾನ್ (Zameer Ahmed Khan) ವ್ಯಂಗ್ಯ ಮಾಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಆದರೂ ದೇವೇಗೌಡರ (H.D.Deve Gowda) ಮನೆ ಬಾಗಿಲಿಗೆ ಬರಬೇಕು ಎಂದು ಮಾಜಿ ಸಚಿವ ರೇವಣ್ಣ ಹೇಳುತ್ತಾರೆ ಎಂದರೆ ಅವರಿಗೆ ಬಹುಮತ ಬರುವುದಿಲ್ಲ ಎಂದೇ ಅರ್ಥ ಅಲ್ಲವೇ ಎಂದು ಹೇಳಿದ್ದಾರೆ. ಹಾಸನ ಟಿಕೆಟ್ ಫೈಟ್ ಕುರಿತು, ಅವರ ಪಕ್ಷದ ವಿಚಾರವನ್ನು ನಾನು ಮಾತಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ಬಿಎಸ್‍ವೈಗೆ ಹೈಕಮಾಂಡ್ ಬಹುಪರಾಕ್ – ಸಕ್ಸಸ್ ಆಗುತ್ತಾ ನಮೋ ಗೇಮ್‍ಪ್ಲಾನ್?

    ಬಿಜೆಪಿಗೆ (BJP) ರಾಜ್ಯದ ಜನ ಬಹುಮತ ನೀಡಿಲ್ಲ. ಕಳೆದ ಸಲ ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (Amit Shah)  ಬಂದು 104 ಸ್ಥಾನ ಗೆದ್ದಿದ್ದರು. ಆದರೆ ಈ ಬಾರಿ ಅವರು ಬಂದರೂ ಏನು ಪ್ರಯೋಜನ ಆಗುವುದಿಲ್ಲ. ಬರುವ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬಹುಮತ ಸಿಗಲಿದೆ. 150 ಸ್ಥಾನವನ್ನು ಕಾಂಗ್ರೆಸ್ ಪಡೆದರೂ ಅಚ್ಚರಿಪಡಬೇಕಿಲ್ಲ ಎಂದಿದ್ದಾರೆ.


    ಉಮ್ರಾಗೆ ಹೊರಟಿದ್ದ ಆಶಾ ಕಾರ್ಯಕರ್ತೆಯರಿಗೆ 12 ಸಾವಿರ ರೂ ಹಂಚಿದ್ದೇನೆ. ಅದನ್ನು ಸೌಧಿಗೆ ಹೋಗಿ ಬದಲಾಯಿಸಿಕೊಳ್ಳುವಂತೆ ಹೇಳಿದ್ದೇನೆ. ಅಲ್ಲಿ ಅದರ ಮೌಲ್ಯ 500 ರಿಯಲ್ ಆಗಲಿದೆ. ನೋಟು ಹಂಚಿದ್ದು ಕಾನೂನು ತೊಡಕು ಉಂಟಾಗುವುದಿಲ್ಲ. ಆಶಾಕಾರ್ಯಕರ್ತೆಯರಿಗೆ ಸೂಕ್ತ ಮಾಹಿತಿ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: UK ನಲ್ಲಿ ಕೆಲಸ ಕೊಡಿಸೋದಾಗಿ ಮಹಿಳೆಯರಿಗೆ ವಂಚನೆ- ಬೆಂಗ್ಳೂರಲ್ಲಿ ನೈಜೀರಿಯಾ ಪ್ರಜೆ ಅರೆಸ್ಟ್

    Narendra Modi, Congress, BJP, JDS, Amit Shah, H.D.Deve Gowda, B.Z.Zameer Ahmed Khan

  • ಅಲ್ಪಸಂಖ್ಯಾತರು ಸಿದ್ದರಾಮಯ್ಯ ಋಣ ತೀರಿಸಬೇಕಿದೆ, ಅದಕ್ಕೆ ನಾನು ಹೆಚ್ಚು ಓಡಾಡ್ತಿದ್ದೀನಿ: ಜಮೀರ್

    ಅಲ್ಪಸಂಖ್ಯಾತರು ಸಿದ್ದರಾಮಯ್ಯ ಋಣ ತೀರಿಸಬೇಕಿದೆ, ಅದಕ್ಕೆ ನಾನು ಹೆಚ್ಚು ಓಡಾಡ್ತಿದ್ದೀನಿ: ಜಮೀರ್

    ಹಾವೇರಿ: ಅಲ್ಪಸಂಖ್ಯಾತರು ಸಿದ್ದರಾಮಯ್ಯ ಋಣ ತೀರಿಸಬೇಕಿದೆ ಎಂದು ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಅಲ್ಪಸಂಖ್ಯಾತರಿಗೆ ಕರೆ ಕೊಟ್ಟರು.

    ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ. ನಮ್ಮದು ಹೈಕಮಾಂಡ್ ಪಕ್ಷ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನಮ್ಮ ನಾಯಕರು. ಯಾರು ಮುಖ್ಯಮಂತ್ರಿ ಅನ್ನೋದನ್ನು ಅವರು ತೀರ್ಮಾನ ಮಾಡ್ತಾರೆ. ಅವರು ಹಾಕಿದ ಗೆರೆಯನ್ನು ನಾವು ದಾಟೋದಿಲ್ಲ. ಅಭಿಪ್ರಾಯ ಹೇಳಿದ್ದರಲ್ಲಿ ತಪ್ಪಿಲ್ಲ ಎಂದು ಸಮರ್ಥನೆ ಮಾಡಿಕೊಂಡರು. ಇದನ್ನೂ ಓದಿ: ಕಾರ್ ಡ್ರೈವರ್‌ಗೆ ಪಾಠ ಕಲಿಸಲು ಫೇಕ್ ಕಾಲ್ ಮಾಡಿದವ ಅರೆಸ್ಟ್ – ಅಸಲಿ ಕಾರಣವೇನು? 

    ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಬರಬೇಕು ಅಂತಾ ನಾನು ಓಡಾಡ್ತಿದ್ದೀನಿ. ಅಲ್ಪಸಂಖ್ಯಾತರು ಸಿದ್ದರಾಮಯ್ಯ ಅವರ ಋಣ ತೀರಿಸಬೇಕಿದೆ. ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸಿದ್ದರಾಮಯ್ಯ ಕಾಲದಲ್ಲಿ ಸಾಕಷ್ಟು ಹಣ ಕೊಟ್ಟಿದ್ದಾರೆ. ಹಿಂದಿನ ಯಾವ ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರ ಬಗ್ಗೆ ಸಿದ್ದರಾಮಯ್ಯರಷ್ಟು ಹಣ ಕೊಟ್ಟಿಲ್ಲ. ನಾವೆಲ್ಲ ಅವರ ಋಣ ತೀರಿಸಬೇಕೋ ಬೇಡ್ವೋ? ಎಂದು ಪ್ರಶ್ನೆ ಮಾಡಿದರು.

    ನನ್ನ ಅಭಿಪ್ರಾಯ ಹೇಳಿ ಬಿಟ್ಟಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಹುಟ್ಟುಹಬ್ಬವನ್ನು ನಾವೆಲ್ಲ ಸೇರಿ ಇದೆ ರೀತಿ ಮಾಡ್ತೀವಿ. ಅಭಿಮಾನಿಗಳ ಒತ್ತಡದಿಂದ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆ ಮಾಡ್ತಿದ್ದೇವೆ. ಕಾಂಗ್ರೆಸ್ ಪಕ್ಷದಿಂದ ಮಾಡುತ್ತಿರೋದು, ಅವರ ಅಭಿಮಾನಿಗಳು ಮಾಡ್ತಿರೋದು. ಅದರಲ್ಲಿ ಕಾಂಗ್ರೆಸ್ ಪಕ್ಷದವರು ಸೇರಿಕೊಂಡಿದ್ದಾರೆ. ಅದಕ್ಕೆ ರಾಹುಲ್ ಗಾಂಧಿ, ಸುರ್ಜೇವಾಲಾ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್ ಸೇರಿದಂತೆ ಕಾಂಗ್ರೆಸ್ ನ ಎಲ್ಲ ನಾಯಕರು ಬರ್ತಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: ಭಾರತದ ಗಡಿಯನ್ನು ಅಕ್ರಮವಾಗಿ ಪ್ರವೇಶಿದ್ದ ಪೋಲೆಂಡ್ ಪ್ರಜೆ ಅರೆಸ್ಟ್ 

    ಹಾವೇರಿ ಕಾಂಗ್ರೆಸ್‍ನ ಭದ್ರಕೋಟೆ. ಎಲ್ಲಿ ಹೋದರೂ ಜನರು ಕುಣಿತ್ತಿದ್ದಾರೆ. ಸಿದ್ದರಾಮಯ್ಯ ಎಂದೂ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿಲ್ಲ. ನಾವು ದೆಹಲಿಗೆ ಹೋದಾಗ ಸಿದ್ದರಾಮಯ್ಯಗೆ ಸಾಕಷ್ಟು ಫೋನ್ ಬಂದವು. ಜನರ ಒತ್ತಡ ಜಾಸ್ತಿಯಾದಾಗ ಸಿದ್ದರಾಮಯ್ಯ ಅವರು ಒಪ್ಪಿಕೊಂಡಿದ್ದಾರೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಡಿಕೆಶಿಗೆ ಜಮೀರ್ ಡಿಚ್ಚಿ – ಸಿದ್ದರಾಮಯ್ಯಗೆ ಜಮೀರ್ ಜಿಂದಾಬಾದ್

    ಡಿಕೆಶಿಗೆ ಜಮೀರ್ ಡಿಚ್ಚಿ – ಸಿದ್ದರಾಮಯ್ಯಗೆ ಜಮೀರ್ ಜಿಂದಾಬಾದ್

    ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ನಾನು ಈಗಲೂ ಹೇಳುತ್ತೇನೆ. ಆದರೆ ಯಾವುದೇ ಒಂದು ಸಮುದಾಯ ನಂಬಿಕೊಂಡು ಸಿಎಂ ಆಗಲು ಸಾಧ್ಯವಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕ ಜಮೀರ್ ಅಹಮ್ಮದ್ ಖಾನ್ ತಿರುಗೇಟು ನೀಡಿದ್ದಾರೆ.

    ಈ ಕುರಿತಂತೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ಹೇಳಿಕೆಗೆ ಈಗಲೂ ನಾನು ಬದ್ಧನಾಗಿದ್ದೇನೆ. ನಾನಷ್ಟೇ ಅಲ್ಲ. ರಾಜ್ಯದ ಜನ ಸಿದ್ದರಾಮಯ್ಯನವರ ಕಾರ್ಯಕ್ರಮವನ್ನು ಮೆಚ್ಚಿಕೊಂಡಿದ್ದಾರೆ. ಅವರು ಸಿಎಂ ಆಗಬೇಕು ಎಂದು ಬಯಸುತ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕು ಅಂತ ನಾನೂ ಹೇಳುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ತಡೆಗೆ ಬೆಂಕಿ ಹಚ್ಚಿಕೊಂಡ ಸಾಧು- ಗೆಹ್ಲೋಟ್ ಸರ್ಕಾರದ ವಿರುದ್ಧ ಆಕ್ರೋಶ

    ಡಿಕೆಶಿ ಒಕ್ಕಲಿಗರ ಓಲೈಕೆ ಮಾಡುತ್ತಿರಬಹುದು ಯಾವುದೇ ಒಂದು ಸಮುದಾಯ ನಂಬಿಕೊಂಡು ಸಿಎಂ ಆಗಲು ಸಾಧ್ಯವಾಗುವುದಿಲ್ಲ. ನನಗೂ ಸಿಎಂ ಆಗುವ ಆಸೆ ಇದೆ. ಆದರೆ ಅಲ್ಪಸಂಖ್ಯಾತ ಸಮುದಾಯ ಒಂದೇ ನಂಬಿಕೊಂಡು ನಾನು ಸಿಎಂ ಆಗುವುದಕ್ಕೆ ಆಗುವುದಿಲ್ಲ. ಎಲ್ಲಾ ಸಮುದಾಯಗಳು ಬೇಕು. ಸಿದ್ದರಾಮಯ್ಯ ಸಿಎಂ ಆಗಬೇಕು. ಅದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರಲ್ಲಿ ಯಾರು ಸಿಎಂ ಆಗಬೇಕು ಅಂದರೆ ನಾನು ಪಕ್ಷದ ಪರ ನಿಲ್ಲುತ್ತೇನೆ ಎಂದಿದ್ದಾರೆ. ಇದನ್ನೂ ಓದಿ:

    Live Tv
    [brid partner=56869869 player=32851 video=960834 autoplay=true]

  • ಈದ್ಗಾ ಆಟದ ಮೈದವಾಗಿಯೇ ಇರುತ್ತೆ – ನಾನಿರುವವರೆಗೆ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ: ಜಮೀರ್

    ಈದ್ಗಾ ಆಟದ ಮೈದವಾಗಿಯೇ ಇರುತ್ತೆ – ನಾನಿರುವವರೆಗೆ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ: ಜಮೀರ್

    ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ಮೈದಾನವಾಗಿಯೂ ಇರುತ್ತೆ. ಆಟದ ಮೈದವಾಗಿಯೂ ಇರುತ್ತೆ. ನಾನಿರುವವರೆಗೆ ಅದನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಅಂತ ಶಾಸಕ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.

    ಈದ್ಗಾ ಮೈದಾನ ಹಾಗೂ ಆಟದ ಮೈದಾನ ವಿವಾದದ ಬಗ್ಗೆ ಸ್ಪಷ್ಟಿಕರಣ ನೀಡಿರುವ ಜಮೀರ್, ನಾನು ಶಾಸಕನಾಗಿರುವವರೆಗೆ ಇದನ್ನ ಬದಲಿಸಲು ಯಾರಿಂದಲು ಸಾಧ್ಯವಿಲ್ಲ. ನಿನ್ನೆ ಸಭೆ ಮಾಡಿದ್ದಾರೆ ಅಂತ ಗೊತ್ತಾಯ್ತು. ಸಭೆಯ ಉದ್ದೇಶ ಏನು ಅಂತ ಅರ್ಥ ಆಗ್ತಿಲ್ಲ. ಆಟದ ಮೈದಾನ ಉಳಿಸಿ ಅಂತ ಸಭೆ, ಅಲ್ಲದೇ ಜುಲೈ 12ಕ್ಕೆ ಚಾಮರಾಜಪೇಟೆ ಬಂದ್ ಅಂತಿದ್ದಾರೆ. ಆಟದ ಮೈದಾನ ತೆಗೀತಾರೆ ಅಂತ ಯಾರು ಹೇಳಿದ್ದು? 2005ರವರೆಗೆ ಚಾಮರಾಜಪೇಟೆಯಲ್ಲಿ ಹಿಂದೂ, ಮುಸ್ಲಿಂ ಗಲಾಟೆ ಆಗುತಿತ್ತು. ನಾನು ಶಾಸಕನಾದ ಮೇಲೆ ಚಾಮರಾಜಪೇಟೆಯಲ್ಲಿ ಗಲಾಟೆ ಇಲ್ಲ. ಹಿಂದೂ, ಮುಸ್ಲಿಂ ಎಲ್ಲಾ ಶಾಂತಿಯಿಂದ ನೆಮ್ಮದಿಯಾಗಿ ಬದುಕುತ್ತಿದ್ದೇವೆ ಎಂದರು.  ಇದನ್ನೂ ಓದಿ: ಕಾಳಿಗೆ ಅವಮಾನ – ಸಾಕ್ಷ್ಯಚಿತ್ರ ಪ್ರದರ್ಶನ ಮಾಡದಂತೆ ಸೂಚನೆ

    ಈ ನಡುವೆ ಕಳೆದೊಂದು ತಿಂಗಳಿನಿಂದ ಈದ್ಗಾ ವಿವಾದಕ್ಕೆ ಹೊಸ ಹೊಸ ಟ್ವಿಸ್ಟ್ ಗಳು ಸಿಗುತ್ತಿದೆ. ಚಾಮರಾಜಪೇಟೆ ಆಟದ ಮೈದಾನ ಮುಸ್ಲಿಮರಿಗೆ ಸೇರಿಲ್ಲ. ಇದು ನಮ್ಮ ಸ್ವತ್ತು ಅಂತ ಸ್ಥಳೀಯರು, ಸಂಘಟನೆಗಳು ಕಿಡಿಕಾರಿವೆ. ಚಾಮರಾಜಪೇಟೆ ಆಟದ ಮೈದಾನ ಉಳಿವಿಗಾಗಿ ಇದೇ 12ಕ್ಕೆ ಚಾಮರಾಜಪೇಟೆ ಬಂದ್‍ಗೆ ಕರೆ ಕೊಟ್ಟಿವೆ. ಬೆಳಗ್ಗೆ 6 ರಿಂದ ಸಂಜೆ 6 ಘಂಟೆಯ ತನಕ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಸಂಪೂರ್ಣ ಸ್ಥಬ್ದಗೊಳ್ಳಲಿದೆ. ಆದ್ರೆ ಇದಕ್ಕೆ ಸೊಪ್ಪು ಹಾಕದ ಮುಸ್ಲಿಂ, ವ್ಯಾಪಾರಿಗಳು, ಬಂದ್‍ಗೆ ನಮ್ಮ ಬೆಂಬಲವಿಲ್ಲ. ನಮ್ಮ ಅಂಗಡಿಗಳನ್ನು ಯಾವ್ದೇ ಕಾರಣಕ್ಕೂ ಮುಚ್ಚಲ್ಲ. ಎಂದಿನಂತೆ ವ್ಯಾಪಾರ ಮಾಡ್ತೇವೆ. ಬಂದ್ ನಿಂದ ಲಾಸ್ ಆದ್ರೆ ಇವ್ರೇನು ತಂದು ಕೊಡ್ತಾರಾ ಅಂತ ಬಂದ್‌ಗೆ, ಟಕ್ಕರ್ ಕೊಟ್ಟಿದ್ದಾರೆ. ಇದನ್ನೂ ಓದಿ: ಬದಲಾಗುತ್ತಾ ಈದ್ಗಾ ಮೈದಾನದ ಹೆಸರು?

    ಬಿಬಿಎಂಪಿ ಕಮಿಷನರ್ ಇದು ಪಾಲಿಕೆಯ ಸ್ವತ್ತಲ್ಲ ಎಂದಿದ್ರು. ವಕ್ಫ್ ಬೋರ್ಡ್, ಇದು ನಮ್ಮ ಜಾಗ ಎಂದು ವಾದ ಮಾಡಿತ್ತು. ಹೀಗೆ ಗೊಂದಲಗಳಲ್ಲಿದ್ದ, ಕ್ಷೇತ್ರದ ಜನ, ನಿನ್ನೆ ಈದ್ಗಾ ಮೈದಾನ ಸಮೀಪದ ಜಂಗಮ ಮಂಟಪದಲ್ಲಿ ಸಭೆ ನಡೆಸಿ, ಬಂದ್‍ಗೆ ತೀರ್ಮಾನಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಲಭೆಕೋರರ ಕುಟುಂಬಕ್ಕೆ ಜಮೀರ್ ಫುಡ್‌ಕಿಟ್ ಹಂಚಿಕೆಗೆ ಬ್ರೇಕ್

    ಗಲಭೆಕೋರರ ಕುಟುಂಬಕ್ಕೆ ಜಮೀರ್ ಫುಡ್‌ಕಿಟ್ ಹಂಚಿಕೆಗೆ ಬ್ರೇಕ್

    ಬೆಂಗಳೂರು: ಹುಬ್ಬಳ್ಳಿಯಲ್ಲಿ ಗಲಭೆಕೋರರ ಕುಟುಂಬಕ್ಕೆ ರೇಷನ್ ಕಿಟ್ ಹಂಚಿಕೆ ಬ್ರೇಕ್ ಬಿದ್ದಿದ್ದು, ಶಾಸಕ ಜಮೀರ್ ಅಹ್ಮದ್‌ ಖಾನ್ ಬೆಂಬಲಿಗರಿಗೆ ಸೂಚನೆ ನೀಡಿದ್ದಾರೆ,

    ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಜಮೀರ್ ವಿರುದ್ಧವಾಗಿ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ರೇಷನ್ ಕಿಟ್ ಹಂಚದಂತೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್‌ ಖಾನ್ ರೇಷನ್ ಕಿಟ್ ವಿತರಣೆ ಮಾಡದಂತೆ ಬೆಂಬಲಿಗರಿಗೆ ಸೂಚನೆ ನಿಡಿದ್ದಾರೆ. ಇದರಿಂದಾಗಿ ಬೆಂಬಲಿಗರು ರೇಷನ್ ಕಿಟ್ ಹಂಚಿಕೆ ಕಾರ್ಯಕ್ರಮ ರದ್ದು ಪಡಿಸಿದ್ದಾರೆ.

    Hubballi Riot

    ಘಟನೆಯೇನು?:
    ಹುಬ್ಬಳ್ಳಿ ಗಲಭೆಯಲ್ಲಿ ಕಲ್ಲು ಹೊಡೆದು ಅರೆಸ್ಟ್ ಆದವರ ಪರ ಜಮೀರ್ ನಿಂತಿದ್ದು, ಗಲಭೆಕೋರರಿಗೆ ಜಮೀರ್ 5 ಸಾವಿರ ನಗದು ಹಾಗೂ ರಂಜಾನ್ ಫುಡ್‍ಕಿಟ್ ನೀಡಿ ಸಹಾಯ ಮಾಡಿದ್ದಾರೆ. ಇದನ್ನೂ ಓದಿ: ಮತ್ತೆ ಗಲಭೆಕೋರರ ಪರ ನಿಂತ ಜಮೀರ್- ಕಲ್ಲು ಹೊಡೆದವರ ಕುಟುಂಬಕ್ಕೆ 5 ಸಾವಿರ, ಫುಡ್‍ಕಿಟ್

    ಇಂದು ಮಧ್ಯಾಹ್ನ 3.30ಕ್ಕೆ ಹುಬ್ಬಳ್ಳಿಯಲ್ಲಿ ಹಣ ಹಾಗೂ ಫುಡ್‍ಕಿಟ್ ಹಂಚಿಕೆ ಮಾಡಲಾಗುತ್ತಿದ್ದು, ಕಸಬಾ ಪೇಟೆ ಪೊಲೀಸ್ ಠಾಣೆ ಬಳಿಯ ಮಸ್ತಾನ್ ಷಾ ಶಾದಿ ಮಹಲ್‍ನಲ್ಲಿ ಬೆಂಬಲಿಗರ ಮೂಲಕ ಜಮೀರ್ ಅಹ್ಮದ್ ಸಹಾಯ ಮಾಡಲಿದ್ದರು. ರಂಜನ್ ಹಿನ್ನೆಲೆ ಮೆಕ್ಕಾದಲ್ಲಿರುವ ಜಮೀರ್ ಅಹ್ಮದ್, ಅಲ್ಲಿಂದಲೇ ಗಲಭೆಕೋರರಿಗೆ ಸಹಾಯಹಸ್ತ ಚಾಚಿದ್ದರು. ಹುಬ್ಬಳ್ಳಿಯ ತಮ್ಮ ಬೆಂಬಲಿಗರ ಮೂಲಕ ರೇಶನ್ ಕಿಟ್ ಹಂಚಿಕೆ ಮಾಡಲಿದ್ದರು. ಈ ಹಿನ್ನೆಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದನ್ನೂ ಓದಿ: ಜಮೀರ್ ನಡೆಯಿಂದ ಕಾಂಗ್ರೆಸ್ ತಲೆತಗ್ಗಿಸುವ ಕೆಲಸ: ಆರಗ ಜ್ಞಾನೇಂದ್ರ

  • ಜೆಡಿಎಸ್, ಬಿಜೆಪಿ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದೆ: ಜಮೀರ್

    ಜೆಡಿಎಸ್, ಬಿಜೆಪಿ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದೆ: ಜಮೀರ್

    ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಏಳು ಸ್ಥಾನದಲ್ಲಿ ಸ್ಪರ್ಧಿಸಿರುವುದು ಅನುಮಾನ ಮೂಡಿಸಿದೆ. ಎಲ್ಲಾ 25 ಸ್ಥಾನಕ್ಕು ಅಭ್ಯರ್ಥಿ ಹಾಕಬೇಕಿತ್ತು. ಕೇವಲ 7 ಸ್ಥಾನಕ್ಕೆ ಹಾಕಿರುವುದು ಅನುಮಾನಸ್ಪದವಾಗಿ ಕಾಣುತ್ತಿದೆ. ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಆರೋಪಿಸಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್‍ನವರಿಗೆ ಅಭ್ಯರ್ಥಿಗಳು ಇಲ್ಲವಾ? ಅಭ್ಯರ್ಥಿ ಇಲ್ಲದಿದ್ದರೆ ಇಲ್ಲ ಅಂತ ಸ್ಪಷ್ಟಪಡಿಸಲಿ. ನನಗೆ ಅನಿಸುತ್ತಿರುವುದು ಬಿಜೆಪಿಗೆ ಲಾಭ ಮಾಡಿಕೊಡಲು ಜೆಡಿಎಸ್ ಮಾಡಿರುವ ತಂತ್ರ ಅಂತ ಅನಿಸುತ್ತಿದೆ. ಮುಂದಿನ ವಿಧಾನಸಭ ಚುನಾವಣೆಯಲ್ಲಿ ಜೆಡಿಎಸ್ ಸಿಂಗಲ್ ಡಿಜಿಟ್ ಅಷ್ಟೆ ಗೆಲ್ಲುವುದು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಮೌನ ಡೇಂಜರ್, ಎಚ್ಚರಿಕೆ ಇರಲಿ – ಡಿಕೆಶಿಗೆ ಕಾಲೆಳೆದ ಬಿಜೆಪಿ

    ಸಿದ್ದರಾಮಯ್ಯ ಅವರ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಮೀರ್, ನನ್ನ ಸಿದ್ದರಾಮಯ್ಯ ಸಂಬಂಧ ಸಾಯುವವರೆಗು ಕೆಡುವುದಿಲ್ಲ. ಕೆಡಲು ಸಾಧ್ಯವು ಇಲ್ಲ. ಅಂದು ಸಿದ್ದರಾಮಯ್ಯ ಭಾಷಣಕ್ಕೆ ನಮ್ಮ ಬೆಂಬಲಿಗರು ಅಡ್ಡಿ ಮಾಡಿಲ್ಲ. ಸಿದ್ದರಾಮಯ್ಯ ಭಾಷಣ ಮೊಟಕುಗೊಳಿಸಿಲ್ಲ. ಪುನೀತ್ ರಾಜ್‍ಕುಮಾರ್ ಕಾರ್ಯಕ್ರಮಕ್ಕೆ ಹೋಗಬೇಕಿದ್ದ ಕಾರಣ 5 ನಿಮಿಷ ಮಾತನಾಡಿ ಹೋಗಿದ್ದಾರೆ. ನನ್ನ ಅನುಪಸ್ಥಿತಿಯಲ್ಲಿ ನನ್ನ ಅಭಿಮಾನಿಗಳು ಜೈಕಾರ ಕೂಗಿದ್ದು ಕಂಡು ಸಿದ್ದರಾಮಯ್ಯ ಖುಷಿಯಾಗಿದ್ದಾರೆ. ಈ ಬಗ್ಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಸಿದ್ದರಾಮಯ್ಯ ಈ ರೀತಿ ಹೊಟ್ಟೆಕಿಚ್ವು ಪಟ್ಟುಕೊಳ್ಳುವ ಮನುಷ್ಯ ಅಲ್ಲ. ಅವರಿಗೆ ಜೊತೆಗಾರರು ಬೆಳೆದರೆ ಸಂತೋಷವಾಗುತ್ತದೆ ಎಂದರು.

    ಬೆಂಗಳೂರಿನಲ್ಲಿ ಮಳೆ ಅವಾಂತರ ವಿಚಾರವಾಗಿ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ ನೆಪಮಾತ್ರಕ್ಕೆ ನಗರ ಪ್ರದಕ್ಷಿಣೆ ಮಾಡಿದ್ದಾರೆ. ಜನರ ಸಂಕಷ್ಟವನ್ನು ಕೇಳಿಲ್ಲ. ನೆರೆಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ಘೋಷಣೆ ಮಾಡಿಲ್ಲ. ನಿನ್ನೆ ಸಿಎಂ ನೆಪಮಾತ್ರಕ್ಕೆ ಕೆಲವು ರಸ್ತೆಗಳಿಗೆ ಹೋಗಿ ಬಂದಿದ್ದಾರೆ. ಇದರಿಂದ ಯಾವ ಪ್ರಯೋಜನ ಇಲ್ಲ ಎಂದು ಸಿಎಂ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಥೂ ಥೂ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಸಮಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

  • ನೇತ್ರದಾನಕ್ಕೆ ಜಮೀರ್ ಅಹಮ್ಮದ್ ಖಾನ್ ಸಹಿ

    ನೇತ್ರದಾನಕ್ಕೆ ಜಮೀರ್ ಅಹಮ್ಮದ್ ಖಾನ್ ಸಹಿ

    ಬೆಂಗಳೂರು: ರಾಜ್ಯದಲ್ಲಿ ಕೆಲದಿನಗಳಿಂದ ನೇತ್ರದಾನ, ರಕ್ತದಾನ, ಹೆಚ್ಚಾಗುತ್ತಿದ್ದಂತೆ ಇಂದು ಶಾಸಕ ಜಮೀರ್ ಅಹಮ್ಮದ್ ಖಾನ್ ನೇತ್ರದಾನಕ್ಕೆ ಮುಂದಾಗಿದ್ದಾರೆ.

    ಮಿಂಟೋ ಆಸ್ಪತ್ರೆಗೆ ತೆರಳಿ ಜಮೀರ್ ಅಹಮ್ಮದ್ ಖಾನ್ ನೇತ್ರದಾನಕ್ಕೆ ಸಹಿ ಹಾಕಿದ್ದಾರೆ. ಸ್ಯಾಂಡಲ್‍ವುಡ್ ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನರಾದ ಬಳಿಕ ನೇತ್ರದಾನ ಮಾಡಿದರು. ಬಳಿಕ ಅವರ ಅಭಿಮಾನಿಗಳು ಸಹಿತ ಸಾವಿರಾರು ಮಂದಿ ನೇತ್ರದಾನ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಇತಿಹಾಸ ಬರೆದ ಪವರ್ ಸ್ಟಾರ್ ಪುಣ್ಯಸ್ಮರಣೆ- ದಾಖಲೆ ಪ್ರಮಾಣದಲ್ಲಿ ನೇತ್ರದಾನಕ್ಕೆ ಅರ್ಜಿ

    ನಿನ್ನೆ ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ ಅಭಿಮಾನಿಗಳಿಗಾಗಿ ಅರಮನೆ ಮೈದಾನದಲ್ಲಿ ಅನ್ನಸಂತರ್ಪಣೆ ಜೊತೆಗೆ ನೇತ್ರದಾನ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಈ ವೇಳೆ ಬರೋಬ್ಬರಿ 3,100ಕ್ಕೂ ಹೆಚ್ಚು ಅಭಿಮಾನಿಗಳು ನೇತ್ರದಾನಕ್ಕೆ ಅರ್ಜಿ ಹಾಕುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಈ ಬಗ್ಗೆ ಲಯನ್ ಸಂಸ್ಥೆ ಎನ್ವಿರ್ನಾಮೆಂಟ್ ಅಧ್ಯಕ್ಷರಾದ ಪ್ರಕೃತಿ ಪ್ರಸನ್ನ ಮಾತನಾಡಿ, ಒಂದೇ ದಿನದಲ್ಲಿ 3,100ಕ್ಕೂ ಹೆಚ್ಚು ನೇತ್ರದಾನ ಅರ್ಜಿ ಸ್ವೀಕಾರ ಮಾಡಿದ್ದೇವೆ. ಈ ದಿನ ನಿಜಕ್ಕೂ ಐತಿಹಾಸಿಕ ದಿನ. ಜೊತೆಗೆ 355 ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟು ಜನ ರಕ್ತದಾನ ಮಾಡಿರುವುದಲ್ಲದೇ, ನೇತ್ರದಾನಕ್ಕೆ ಅರ್ಜಿ ಸಲ್ಲಿಸಿರುವುದನ್ನು ನೋಡುತ್ತಿದ್ದೇವೆ. ನಿನ್ನೆ ಕೂಡ ವಿಐಪಿಗಳು 350 ಮಂದಿ ನೇತ್ರದಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಾವು ಇಲ್ಲಿವರೆಗೆ ಎಷ್ಟೋ ಶಿಬಿರಗಳನ್ನು ಮಾಡಿದ್ದೇವೆ. ಇಷ್ಟು ಪ್ರಮಾಣದಲ್ಲಿ ನೋಂದಣಿ ಆಗಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಬ್ರದರ್, ಬ್ರದರ್‌ ಅಂತ ಕತ್ತು ಕೊಯ್ಯೋದು: ಜಮೀರ್ ಅಹ್ಮದ್

     

  • ನಾನು ಓಪನ್ ಹಾರ್ಟೆಡ್, ಸಿದ್ದರಾಮಯ್ಯ ಮಾತನಾಡಬೇಡ ಎಂದಿದ್ದಾರೆ: ಜಮೀರ್

    ನಾನು ಓಪನ್ ಹಾರ್ಟೆಡ್, ಸಿದ್ದರಾಮಯ್ಯ ಮಾತನಾಡಬೇಡ ಎಂದಿದ್ದಾರೆ: ಜಮೀರ್

    ಬೆಂಗಳೂರು: ಮುಖ್ಯಮಂತ್ರಿ ಚರ್ಚೆ ಬಗ್ಗೆ ಮಾಡಬೇಡ ಅಂತ ಸಿದ್ದರಾಮಯ್ಯ ಹೇಳಿದ್ದಾರೆ ಹಾಗಾಗಿ ಮುಂದಿನ ಸಿಎಂ ಹೇಳಿಕೆ ಬಗ್ಗೆ ನಾನು ಈಗ ಏನು ಹೇಳಲ್ಲ ಎಂದು ಶಾಸಕ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ಇದನ್ನೂ ಓದಿ: ಮಂಗಳ ಮುಖಿಯರಿಂದ ಗ್ರಾ.ಪಂ ಸದಸ್ಯನ ಮೇಲೆ ಹಲ್ಲೆ

    ಸಿದ್ದರಾಮಯ್ಯ ನಿವಾಸದ ಬಳಿ ಮಾತನಾಡಿದ ಅವರು, ನಾನು ಓಪನ್ ಹಾರ್ಟೆಡ್ ಏನೇ ಹೇಳಿದರು ಓಪನ್ ಆಗಿ ಹೇಳುತ್ತೇನೆ. ಆದರೆ ನಮ್ಮ ನಾಯಕ ಸಿದ್ದರಾಮಯ್ಯ ಫುಲ್ ಸ್ಟಾಪ್ ಹಾಕಿ ಎಂದಿದ್ದಾರೆ ಹಾಗಾಗಿ ಹೇಳಿಕೆಗೆ ಫುಲ್ ಸ್ಟಾಪ್ ಹಾಕಿದ್ದೀನಿ.ನನ್ನ ಹೇಳಿಕೆ ಟೋಟಲಿ ಸ್ಟಾಪ್ ಎಂದಿದ್ದಾರೆ.

    ನಮ್ಮದು ಹೈ ಕಮಾಂಡ್ ಪಕ್ಷ ನಮ್ಮ ಅಭಿಪ್ರಾಯ ಹಿಂದೆ ಹೇಳಿದ್ದೀನಿ. ಸಿದ್ದರಾಮಯ್ಯ ಹೇಳಿಕೆ ಬೇಡ ಆಂದಿದಾರೆ ಹಾಗಾಗಿ ಟೋಟಲ್ ಕಂಟ್ರೋಲ್ ಸಿದ್ದರಾಮಯ್ಯ ಸರ್ಕಾರದ ಕೆಲಸವನ್ನ ಜನ ನೆನೆಸಿಕೊಳ್ತಾರೆ. ಕಾಂಗ್ರೆಸ್ ಸರ್ಕಾರ ಬೇಕು ಎಂದು ಜನ ಹೇಳುತ್ತಿದ್ದಾರೆ. ನಾನಲ್ಲ, ನಮ್ಮಲ್ಲಿ ಸಾಕಷ್ಟು ಜನ ಅರ್ಹರಿದ್ದಾರೆ ಯಾರು ಸಿಎಂ ಆಗಬೇಕು ಅನ್ನೋದನ್ನ ಹೈ ಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದು ನುಡಿದಿದ್ದಾರೆ.

    ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಜನರ ಅಭಿಪ್ರಾಯ ಯಾರ ಪರವಾಗಿ ಇದೆ ಅವರು ಆಗುತ್ತಾರೆ. ನಮಗೆ ಮಾತನಾಡಬೇಡಿ ಎಂದು ನಮ್ಮ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.  ನಾನು ಆ ವಿಚಾರದ ಬಗ್ಗೆ ಮಾತನಾಡಲ್ಲ. ನಮ್ಮ ನಾಯಕರು ನನಗೆ ಹೇಳಿದ್ದಾರೆ ಎಂದಿದ್ದಾರೆ.

    ಸಿಎಂ ಸ್ಥಾನದ ಬಗ್ಗೆ ಹಲವರು ಹೇಳುತ್ತಿದ್ದಾರೆ. ಲಿಂಗಾಯತರಲ್ಲಿ ನಮಗೆ ಕೊಡಿ ಅಂತ ಎಂ.ಬಿ.ಪಾಟೀಲ್ ಹೇಳ್ತಾರೆ. ಅಲ್ಪಸಂಖ್ಯಾತರಲ್ಲಿ ಸಿ.ಎಂ.ಇಬ್ರಾಹಿಂ ಅಂತಾರೆ. ತನ್ವೀರ್ ಸೇಟ್ ನಾನು ಮುಖ್ಯಮಂತ್ರಿ ಆಕಾಂಕ್ಷಿ ಅಂದಿದ್ದಾರೆ. ಮುಂದಿನ ಸಿಎಂ ಹೇಳಿಕೆ ಬಗ್ಗೆ ಟೋಟಲ್ ಕಂಟ್ರೊಲ್ ಅಂತ ಸಿದ್ದರಾಮಯ್ಯ ಹೇಳಿದ್ದಾರೆ ಹಾಗಾಗಿ ಮಾತನಾಡಲ್ಲ ಕಾಂಗ್ರೆಸ್‍ನ ಮುಂದಿನ ಮುಖ್ಯಮಂತ್ರಿಯನ್ನ ನಮ್ಮ ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿಸಿದ್ದಾರೆ.

  • ನಾನು ಓಪನ್ ಹಾರ್ಟೆಡ್ ಏನೇ ಹೇಳಿದ್ರೂ ಓಪನ್ ಆಗಿ ಹೇಳ್ತೀನಿ: ಜಮೀರ್

    ನಾನು ಓಪನ್ ಹಾರ್ಟೆಡ್ ಏನೇ ಹೇಳಿದ್ರೂ ಓಪನ್ ಆಗಿ ಹೇಳ್ತೀನಿ: ಜಮೀರ್

    ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ಮಾಡಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾಗಿ ನಾನು ಈಗ ಏನು ಹೇಳಲ್ಲ. ನಾನು ಓಪನ್ ಹಾರ್ಟೆಡ್ ಏನೇ ಹೇಳಿದರೂ ಓಪನ್ ಆಗಿ ಹೇಳುತ್ತೇನೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಹೇಳಿಕೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್, ನಮ್ಮ ನಾಯಕರಾದ ಸಿದ್ದರಾಮಯ್ಯ ಮುಖ್ಯಮಂತ್ರಿ ಚರ್ಚೆಗೆ ಫುಲ್ ಸ್ಟಾಪ್ ಹಾಕಿ ಎಂದಿದ್ದಾರೆ. ಹಾಗಾಗಿ ಹೇಳಿಕೆಗೆ ಟೋಟಲಿ ಫುಲ್ ಸ್ಟಾಪ್ ಹಾಕಿದ್ದೀನಿ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ. ನಾನು ನನ್ನ ಅಭಿಪ್ರಾಯ ಹೇಳಿದ್ದೀನಿ. ಸಿದ್ದರಾಮಯ್ಯ ಅವರ ಸರ್ಕಾರದ ಕೆಲಸವನ್ನು ಜನ ನೆನಪಿಸಿಕೊಳ್ತಾರೆ. ಕಾಂಗ್ರೆಸ್ ಸರ್ಕಾರ ಬೇಕು ಅಂತಾರೆ ಎಂದರು. ಇದನ್ನೂ ಓದಿ: ಶಾಸಕ ಜಮೀರ್​ಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

    ನಮ್ಮಲ್ಲಿ ಸಾಕಷ್ಟು ಜನ ಮುಖ್ಯಮಂತ್ರಿ ಪಟ್ಟಕ್ಕೆ ಅರ್ಹರಿದ್ದಾರೆ. ಯಾರು ಸಿಎಂ ಆಗಬೇಕು ಅನ್ನೋದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ. ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಜನರ ಅಭಿಪ್ರಾಯ ಯಾರ ಪರವಾಗಿ ಇದೆ ಅವರು ಆಗುತ್ತಾರೆ. ನಮಗೆ ನಮ್ಮ ನಾಯಕ ಸಿದ್ದರಾಮಯ್ಯ ಮಾತನಾಡಬೇಡಿ ಎಂದಿದ್ದಾರೆ. ಹಾಗಾಗಿ ನಾನು ಆ ವಿಚಾರದ ಬಗ್ಗೆ ಮಾತನಾಡಲ್ಲ. ಸಿಎಂ ಸ್ಥಾನದ ಬಗ್ಗೆ ಹಲವರು ಹೇಳ್ತಿದ್ದಾರೆ. ಲಿಂಗಾಯತರಲ್ಲಿ ನಮಗೆ ಕೊಡಿ ಎಂದು ಎಂ.ಬಿ ಪಾಟೀಲ್ ಹೇಳ್ತಾರೆ. ಅಲ್ಪಸಂಖ್ಯಾತರಲ್ಲಿ ಸಿ.ಎಂ ಇಬ್ರಾಹಿಂ ಕೊಡಿ ಅಂತಾರೆ. ತನ್ವೀರ್ ಸೇಠ್ ನಾನು ಮುಖ್ಯಮಂತ್ರಿ ಆಕಾಂಕ್ಷಿ ಎಂದಿದ್ದಾರೆ. ಯಾರು ಸಿಎಂ ಆಗಬೇಕು ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸಲಿದೆ ಎಂದು ಅಭಿಪ್ರಾಯಪಟ್ಟರು.

  • ಅರೆ ದಡ್ಡ ಜಮೀರ್‌ಗೆ ನಟನೆಯ ಚಾಕಚಕ್ಯತೆ ಇದೆ: ರೇಣುಕಾಚಾರ್ಯ

    ಅರೆ ದಡ್ಡ ಜಮೀರ್‌ಗೆ ನಟನೆಯ ಚಾಕಚಕ್ಯತೆ ಇದೆ: ರೇಣುಕಾಚಾರ್ಯ

    – ಜಮೀರ್ ಶಾಸಕರಾಗಲು ನಾಲಾಯಕ್
    – ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ

    ಬೆಂಗಳೂರು: ಶಾಸಕ ಜಮೀರ್ ಅಹಮ್ಮದ್ ಬುದ್ಧಿವಂತನಲ್ಲ, ಅರೆ ದಡ್ಡ. ಆತನಿಗೆ ನಟನೆಯ ಚಾಕಚಕ್ಯತೆ ಇದ್ದು, ಆತ ನಂಬರ್ ಒನ್ ದೇಶದ್ರೋಹಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಮೀರ್‍ಗೆ ಭಾರತೀಯ ಸಂಸ್ಕೃತಿ ಇಲ್ಲ. ಪಾದರಾಯನಪುರ ಪುಂಡರ ರಕ್ಷಣೆಗೆ ಜಮೀರ್ ನಿಂತಿದ್ದಾರೆ. ಪಾದರಾಯನಪುರ ಪುಂಡರ ರಕ್ಷಣೆ ದೇಶದ್ರೋಹದ ಕೆಲಸ. ರಾಜಕೀಯ ನೆಲೆ ಭದ್ರ ಮಾಡಿಕೊಳ್ಳಲು ಅಂಥವರಿಗೆ ಬೆಂಬಲಿಸುವುದು ಸರಿಯಲ್ಲ. ಜಮೀರ್ ಶಾಸಕರಾಗಲು ನಾಲಾಯಕ್. ಹೀಗಾಗಿ ಶಾಸಕ ಸ್ಥಾನವನ್ನು ವಜಾ ಮಾಡಬೇಕಾಗಿದೆ ಎಂದು ಕಿಡಿಕಾರಿದ್ದಾರೆ.

    ಜಮೀರ್ ಬುದ್ಧಿವಂತನಲ್ಲ, ಅರೆ ದಡ್ಡ. ಜಮೀರ್‍ಗೆ ನಟನೆಯ ಚಾಕಚಕ್ಯತೆ ಇದೆ. ಜಮೀರ್ ನಂಬರ್ ಒನ್ ದೇಶದ್ರೋಹಿ. ಮನಿ, ಮ್ಯಾನ್ ಪವರ್ ಇದೆ ಅಂತ ಜಮೀರ್ ಅನ್ಕೊಂಡಿರಬಹುದು. ಮುಂದಿನ ಚುನಾವಣೆಯಲ್ಲಿ ಜನ ಜಮೀರ್‍ಗೆ ತಕ್ಕ ಪಾಠ ಕಲಿಸ್ತಾರೆ. ಜಮೀರ್ ಅಹಮದ್ 420. ಗುಜರಿ ವ್ಯಾಪಾರ ಮಾಡಿ ರಾಜಕೀಯಕ್ಕೆ ಬಂದು ಜಮೀರ್ ನಟನೆ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಕೊರೊನಾ ಸಂದರ್ಭದಲ್ಲಿ ಜನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಅದು ಬಿಟ್ಟು ಪುಂಡರಿಗೆ ರಕ್ಷಣೆಯಾಗಿ ನಿಲ್ಲೋದು ಸರಿಯಲ್ಲ ಎಂದು ಗರಂ ಆದರು.

    ಇದೇ ವೇಳೆ ಬಿಜೆಪಿಯಲ್ಲಿ ಬಂಡಾಯ ಸಭೆ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಆನೆಗೆ ಇರೋ ತೂಕ ಆನೆಗೆ ಇದ್ದೇ ಇರುತ್ತೆ. ಯಡಿಯೂರಪ್ಪ ಸಹ ಆನೆಯಂತೆ, ಅವರಿಗೆ ಇರೋ ಮೌಲ್ಯ ಇದ್ದೇ ಇರುತ್ತೆ. ಯಾರೋ ಕೆಲವರು ಯಡಿಯೂರಪ್ಪ ವಿರುದ್ಧ ಪ್ಲಾನ್ ಮಾಡಿ ಸಭೆ ಮಾಡಿದ್ರು. ನಿರಾಣಿ ಆ ಸಭೆಗೆ ಹೋಗಲೇ ಇಲ್ಲ. ನಿರಾಣಿ ವಿರುದ್ಧವೂ ಷಡ್ಯಂತ್ರ ನಡೀತು. ಯಾರೋ ಒಬ್ಬಿಬ್ರು ಈ ರೀತಿ ಮಾಡಿದ್ರೆ ಅವರೇ ವಿಲನ್ ಆಗ್ತಾರೆ. ರಾಜ್ಯದಲ್ಲಿ ಯಡಿಯೂರಪ್ಪ ಪ್ರಶ್ನಾತೀತ ನಾಯಕರಾಗಿದ್ದು, ಅವರು ಸಿಎಂ ಆಗಿ ಪೂರ್ಣಾವಧಿ ಮುಗಿಸ್ತಾರೆ ಎಂದರು.

    ಬಂಡಾಯ ಸಭೆಯ ಹಿಂದೆ ಇರೋರ ವಿರುದ್ಧ ಪಕ್ಷ ಕ್ರಮ ತಗೊಳ್ಳುತ್ತೆ. ಈಗಾಗಲೇ ಪಕ್ಷದ ಅಧ್ಯಕ್ಷರು ಎಚ್ಚರಿಕೆ ಕೊಟ್ಟಿದ್ದಾರೆ. ಯಡಿಯೂರಪ್ಪ ವಿರುದ್ಧ ಅವರು ದೆಹಲಿಗೆ ಹೋದ್ರೆ, ನಾವೂ ಅವರ ಪರವಾಗಿ ದೆಹಲಿಗೆ ಹೋಗ್ತೇವೆ. ವಿಜಯೇಂದ್ರರ ವಿರುದ್ಧ ಆರೋಪ ನಿರಾಧಾರ. ವಿನಾಕಾರಣ ವಿಜಯೇಂದ್ರರ ವಿರುದ್ಧ ಆರೋಪ ಮಾಡಲಾಗುತ್ತಿದೆ. ವಿಜಯೇಂದ್ರರ ಹಸ್ತಕ್ಷೇಪವನ್ನು ಸಾಬೀತು ಪಡಿಸಲಿ ಎಂದು ಸವಾಲೆಸೆದರು.

    ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ, ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುವ ಹಗಲು ಕನಸು ಕಾಣೋದು ಬೇಡ. ಬಿಜೆಪಿಯ ಸಣ್ಣಪುಟ್ಟ ಸಮಸ್ಯೆಗಳನ್ನು ನಾವೇ ಬಗೆಹರಿಸಿಕೊಳ್ತೇವೆ. ನಮ್ಮ ಪಕ್ಷ ಸಶಕ್ತವಾಗಿದೆ, ಪಕ್ಷದಲ್ಲಿ ಒಗ್ಗಟ್ಟಿದೆ. ಭಿನ್ನಮತ, ಬಂಡಾಯ ನಮ್ಮಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.