Tag: ಜಮೀರ್ ಅಹ್ಮದ್ ಖಾನ್

  • ʻನನ್ನ ಸಾವಿಗೆ ಸಚಿವ ಜಮೀರ್ ಕಾರಣʼ – ರಕ್ತದಲ್ಲಿ ಡೆತ್‌ನೋಟ್‌ ಬರೆದು ಹೈಡ್ರಾಮಾ!

    ʻನನ್ನ ಸಾವಿಗೆ ಸಚಿವ ಜಮೀರ್ ಕಾರಣʼ – ರಕ್ತದಲ್ಲಿ ಡೆತ್‌ನೋಟ್‌ ಬರೆದು ಹೈಡ್ರಾಮಾ!

    – ತೆಲಂಗಾಣದ ಮೆಕ್ಕೆಜೋಳ ಉದ್ಯಮಿಗಳ ಪರ ನಿಂತ್ರಾ ಜಮೀರ್‌?

    ಚಿಕ್ಕಬಳ್ಳಾಪುರ: ರಾಜ್ಯದ ಮೆಕ್ಕೆಜೋಳದ (Corn) ವ್ಯಾಪಾರಿ ಹಾಗೂ ರೈತರಿಗೆ ಸಹಕಾರ ನೀಡುವ ಬದಲು ತೆಲಂಗಾಣದ ಮೆಕ್ಕೆಜೋಳದ ಉದ್ಯಮಿಗಳಿಗೆ ಸಪೋರ್ಟ್ ಮಾಡಿದ್ದಾರೆ ಅಂತ ಸಚಿವ ಜಮೀರ್ ಅಹಮದ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಚಿವರ ನಡೆ ಖಂಡಿಸಿ, ವ್ಯಾಪಾರಿ ರಾಮಕೃಷ್ಣ ಆಲಿಯಾಸ್ ಜೊನ್ನಲ ಕಿಟ್ಟಿ ಸಚಿವ ಜಮೀರ್ ವಿರುದ್ಧ ಭಾರೀ ಆಕ್ರೋಶ ಹೊರಹಾಕಿದರು. ನನ್ನ ಸಾವಿಗೆ ಸಚಿವ ಜಮೀರ್ ಅಹಮದ್ (Zameer Ahmed Khan) ಕಾರಣ ಅಂತ ರಕ್ತದಲ್ಲಿ ಡೆತ್‍ನೋಟ್ ಬರೆದು ತಂದು ಹೈಡ್ರಾಮಾ ನಡೆಸಿದರು.

    ಏನಿದು ವಿವಾದ?
    ರೈತ (Farmer) ರಾಮಕೃಷ್ಣ ಅಲಿಯಾಸ್ ಜೊನ್ನಲಕಿಟ್ಟಿ, ರಕ್ತದಲ್ಲಿ ಬರೆದ ಡೆತ್ ನೋಟ್ (Deathnote) ತಂದು ಸಚಿವ ಜಮೀರ್ ಸಮ್ಮುಖದಲ್ಲೇ ನನಗೆ ಹಣ ಕೊಡಿಸಿ, ಇಲ್ಲದಿದ್ರೆ ನಾನು ವಿಷ ಕುಡಿದು ಸಾಯ್ತೀನಿ, ನೇಣು ಹಾಕೋತಿನಿ ಅಂತ ಕಣ್ಣೀರು ಹಾಕಿದ್ದಾರೆ. ರಾಮಕೃಷ್ಣ ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಬಳಿಯ ದಿಗೂರು ನಿವಾಸಿ. ದಕ್ಷಿಣ ಭಾರತದಲ್ಲೇ (South India) ಅತಿ ಹೆಚ್ಚು ಮೆಕ್ಕೆಜೋಳದ ಬ್ಯುಸಿನೆಸ್ ಮಾಡುವ ಈ ರಾಮಕೃಷ್ಣ ಕಳೆದ 4-5 ತಿಂಗಳ ಹಿಂದೆ ಹೈದರಾಬಾದ್ ನ ಅಕ್ಬರ್, ಸದ್ದಾಂ, ನಾಸೀರ್ ಅನ್ನೋ ಮೂವರು ಅಣ್ಣ ತಮ್ಮಂದಿರಿಗೆ 1 ಕೋಟಿ 89 ಲಕ್ಷ ರೂಪಾಯಿ ಮೆಕ್ಕೆಜೋಳ ಸೇಲ್ ಮಾಡಿದ್ರು. ಆದ್ರೆ ಮೂವರು ಅಣ್ಣ ತಮ್ಮಂದಿರು ರಾಮಕೃಷ್ಣಗೆ ಹಣ ನೀಡದೇ ಸತಾಯಿಸುತ್ತಿದ್ದರು. ಇದ್ರಿಂದ ನೊಂದ ರಾಮಕೃಷ್ಣ ಪೇರೇಸಂದ್ರ ಪೊಲೀಸ್ ಠಾಣೆಯಲ್ಲಿ ಅಕ್ಬರ್, ಸದ್ದಾಂ, ನಾಸೀರ್ ವಿರುದ್ಧ ದೂರು ದಾಖಲಿಸಿದ್ರು. ಹೀಗಾಗಿ ಪೇರೇಸಂದ್ರ ಪಿಎಸ್‍ಐ (PSI) ಜಗದೀಶ್ ರೆಡ್ಡಿ ಅಕ್ಬರ್ ಪಾಷಾ ನನ್ನ ಬಂಧಿಸಿ ಕರೆತಂದಿದ್ರು. ಈ ವೇಳೆ ಪಿಎಸ್‌ಐಗೆ ಕರೆ ಮಾಡಿ ಮಾತನಾಡಿದ್ದ ಸಚಿವ ಜಮೀರ್ ಅಹಮದ್, ಅವರು ನಮ್ಮ ರಿಲೇಶನ್ ಇದ್ದಾರೆ ಸ್ವಲ್ಪ ಟೈಂ ಕೊಡಿ ಸೆಟಲ್ ಮಾಡಿಕೊಡ್ತಾರೆ ಅಂತ ಮಾತನಾಡಿದ್ರು. ಈಗ ಇದೇ ಮಾತು ಸಚಿವ ಜಮೀರ್ ಅಹಮದ್ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ

    ಸಚಿವ ಜಮೀರ್ ಅಹಮದ್ ಹೇಳಿದ್ದೇನು..?
    ಅಂದಹಾಗೆ ಕಳೆದ 1 ವಾರದ ಹಿಂದೆ ಈ ಆಡಿಯೋ ವೈರಲ್ ಆಗಿ ಸಚಿವ ಜಮೀರ್ ಮಾತುಗಳು ಪಿಎಸ್‍ಐ ಮೇಲೆ ಪ್ರಭಾವ ಬೀರಿರೋದು ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ಇಂದು ಚಿಕ್ಕಬಳ್ಳಾಪುರ ನಗರದ ಷಾದಿ ಮಹಲ್‌ಗೆ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಸಚಿವ ಜಮೀರ್ ಅಹಮದ್ ಎದುರೇ ಆಗಮಿಸಿದ ದೂರುದಾರ ರೈತ ಹಾಗೂ ವ್ಯಾಪಾರಿ ರಾಮಕೃಷ್ಣ ರಕ್ತದಲ್ಲಿ ಬರೆದ ಡೆತ್ ನೋಟ್ ಹಿಡಿದು ಬಂದು, ಸರ್ ನನಗೆ ಹಣ ಕೊಡಿಸಿ ಇಲ್ಲ ಅಂದ್ರೆ ಡೆತ್ ನೋಟ್ ತಂದಿದ್ದೀನಿ, ನಾನು ವಿಷ ಕುಡಿದು ನೇಣು ಹಾಕ್ಕೊಂಡು ಸಾಯ್ತೀನಿ ಅಂತ ಸಚಿವ ಜಮೀರ್ ಅಹಮದ್ ಎದುರೇ ಕಣ್ಣೀರು ಹಾಕಿದರು. ಈ ವೇಳೆ ರಾಮಕೃಷ್ಣ ವಿರುದ್ದವೇ ಸಚಿವ ಜಮೀರ್ ಸಿಡಿಮಿಡಿಗೊಂಡರು. ನಂತರ ರೈತ-ವ್ಯಾಪಾರಿ ರಾಮಕೃಷ್ಣನನ್ನ ಸಮಾಧಾನ ಮಾಡಿ ಪೊಲೀಸರು ಕಾರ್ಯಕ್ರಮದಿಂದ ಹೊರೆಗೆ ಕರೆತಂದರು. ಕಾರ್ಯಕ್ರಮ ಮುಗಿದ ನಂತರ ಈ ಬಗ್ಗೆ ಮಾತನಾಡಿದ ಜಮೀರ್ ಅಹಮದ್ ಘಟನೆಯ ಬಗ್ಗೆ ಸ್ಪಷ್ಟನೆ ನೀಡಿ ನಾನು ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ, ನಾಳೆಯೇ ತೆಲಂಗಾಣದ ಉದ್ಯಮಿ ಅಕ್ಬರ್ ನನ್ನ ಕರೆಸಿ ಅವರಿಗೆ ಹಣ ಸೆಟ್ಲ್‍ಮೆಂಟ್ ಮಾಡಿಕೊಳ್ಳುವಂತೆ ಹೇಳುತ್ತೇನೆ ಅಂತ ಹೇಳಿ ಚಿಕ್ಕಬಳ್ಳಾಪುರದಿಂದ ಹೊರಟರು.

    ಸಚಿವ ಜಮೀರ್ ಅಹಮದ್ ವಿರುದ್ಧ ರೈತರ ಆಕ್ರೋಶ!
    ಇನ್ನೂ ರೈತ ರಾಮಕೃಷ್ಣಗೆ ಮೆಕ್ಕೆಜೋಳ ಮಾರಾಟ ಮಾಡಿರೋ ರೈತರು ಸಹ ಕಾರ್ಯಕ್ರಮಕ್ಕೆ ಆಗಮಿಸಿ ಸಚಿವ ಜಮೀರ್ ಅಹಮದ್ ವಿರುದ್ಧ ಆಕ್ರೋಶ ಹೊರಹಾಕಿದರು. ಸಚಿವರ ಮಧ್ಯ ಪ್ರವೇಶ ಮಾಡಿ ಪಿಎಸ್‍ಐಗೆ ಪೋನ್ ಮಾಡಿದ್ರಿಂದಲೇ ದುಡ್ಡು ಕೊಡ್ತೀವಿ ಅಂತ ಬಂದ ಆರೋಪಿಗಳು ದುಡ್ಡು ಕೊಡದೆ ವಾಪಸ್ ಹೋಗಿದ್ದಾರೆ. ನಮಗೆ ಈಗ ದುಡ್ಡು ಕೋಡೋವರು ಯಾರು? ಜಮೀರ್ ಅಹಮದ್ ಅವರು ಕೊಡ್ತಾರಾ ಅಂತ ಅವರ ವಿರುದ್ದವೇ ಆಕ್ರೋಶ ಹೊರಹಾಕಿದರು. ರಾಜ್ಯದ ಮೆಕ್ಕೆಜೋಳದ ವ್ಯಾಪಾರಿ-ರೈತರ ಪರ ನಿಲ್ಲುವ ಬದಲು ಸಚಿವ ಜಮೀರ್ ಅಹಮದ್ ತೆಲಂಗಾಣ ಮೂಲದ ಮೆಕ್ಕೆಜೋಳದ ಉದ್ಯಮಿಗಳು ವಂಚಕರ ಪರ ನಿಂತು ಈಗ ಇರಲಾರದೆ ಇರುವೆ ಬಿಟ್ಟುಕೊಂಡೇ ಎಂಬಂತಾಗಿದ್ದಾರೆ.

  • 2026ರ ಡಿಸೆಂಬರ್ ಒಳಗೆ 1,80,253 ಮನೆ ಪೂರ್ಣ – ಜಮೀರ್ ಗ್ಯಾರಂಟಿ

    2026ರ ಡಿಸೆಂಬರ್ ಒಳಗೆ 1,80,253 ಮನೆ ಪೂರ್ಣ – ಜಮೀರ್ ಗ್ಯಾರಂಟಿ

    ಬೆಂಗಳೂರು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ (Slum Development Board) ವತಿಯಿಂದ ಪಿಎಂಎವೈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಪ್ರಗತಿಯಲ್ಲಿರುವ 1,80,253 ಮನೆಗಳ ಕಾಮಗಾರಿಯನ್ನು 2026ರ ಡಿಸೆoಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ತಿಳಿಸಿದರು.

    ಶಾಸಕ ಸಿದ್ದು ಪಾಟೀಲ್ ಅವರ ಪ್ರಶ್ನೆಗೆ ವಿಧಾನಸಭೆಯಲ್ಲಿ ಉತ್ತರಿಸಿದ ಸಚಿವರು, ಫಲಾನುಭವಿಗಳ ವಂತಿಗೆ ಪಾವತಿ ಆಗದ ಕಾರಣ ಯೋಜನೆಗೆ ಸಮಸ್ಯೆ ಉಂಟಾಗಿತ್ತು. ಮುಖ್ಯಮಂತ್ರಿಗಳಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಬಡವರ ಮನೆಗೆ ಸರ್ಕಾರವೇ ಫಲಾನುಭವಿಗಳ ವಂತಿಗೆ ಪಾವತಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. 500 ಕೋಟಿ ರೂ. ಬಿಡುಗಡೆ ನಂತರ ಮೊದಲ ಹಂತದಲ್ಲಿ 36,789 ಮನೆ ಹಂಚಿಕೆ ಮಾಡಿ 2ನೇ ಹಂತದಲ್ಲಿ 40,345 ಮನೆ ಹಂಚಿಕೆಗೆ ಸಿದ್ಧತೆ ನಡೆದಿದೆ. ಸಿಎಂ 2026ರ ಒಳಗೆ ಪೂರ್ಣ ಗೊಳಿಸಲು ಸೂಚಿಸಿದ್ದು ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಮೀರ್ ಮಾಹಿತಿ ನೀಡಿದರು.

    ಅರವಿಂದ್ ಬೆಲ್ಲದ್ ಅವರ ಉಪ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬಡ ಕುಟುಂಬಗಳಿಗೆ 47,870 ಮನೆ ನಿರ್ಮಾಣ ಯೋಜನೆ ಸಹ ಫಲಾನುಭವಿಗಳ ವಂತಿಗೆ ಪಾವತಿ ಆಗದ ಕಾರಣ, ಆ ವಿಚಾರ ಸಹ ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದು, ಸರ್ಕಾರವೇ ವಂತಿಗೆ ಭರಿಸಲು ತಾತ್ವಿಕ ಒಪ್ಪಿಗೆ ದೊರೆತಿದ್ದು, ಸಂಪುಟಕ್ಕೆ ತಂದು ಒಪ್ಪಿಗೆ ಪಡೆಯಲಾಗುವುದು. ಆ ಮನೆಗಳನ್ನ ಆದಷ್ಟು ಬೇಗ ಪೂರ್ಣಗೊಳಿಸಿ ಹಂಚಿಕೆ ಮಾಡಲಾಗುವುದು ಎಂದು ಸಚಿವ ಜಮೀರ್ ವಿವರಿಸಿದರು.

  • ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ರೂ. ಗಿಫ್ಟ್‌ – ಜಮೀರ್ ಅಹ್ಮದ್

    ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ರೂ. ಗಿಫ್ಟ್‌ – ಜಮೀರ್ ಅಹ್ಮದ್

    – ರಾಜ್ಯದ 2 ಸಾವಿರ ಮದರಸಾಗಳಲ್ಲಿ ಕನ್ನಡ ಕಲಿಕೆ

    ಬೆಂಗಳೂರು: ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50,000 ರೂಪಾಯಿ ಸಹಾಯಧನ ಕೊಡ್ತೇವೆ ಅಂತ ಸಚಿವ ಜಮೀರ್‌ ಅಹ್ಮದ್‌ (Zameer Ahmed Khan) ತಿಳಿಸಿದರು.

    ಬೆಂಗಳೂರಿನಲ್ಲಿಂದು (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ಕೊಡುತ್ತೇವೆ. ಸಿಎಂ ಸಿದ್ದರಾಮಯ್ಯ (Siddaramaiah) ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು, ಅದು ಆದೇಶ ಆಗಿದೆ ಎಂದು ಹೇಳಿದರು. ಇದನ್ನೂ ಓದಿ: ಭಾರತ ಕೊಟ್ಟ ತಿರುಗೇಟಿಗೆ ಸರಿಯಾಗಿ ಉತ್ತರ ನೀಡದೇ ನುಣುಚಿದ ಟ್ರಂಪ್‌

    ಮುಂದುವರಿದು.. ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾನ್ವಿತರಿಗೆ ಸಹಾಯ ಮಾಡುತ್ತೇವೆ. ಇಲಾಖೆ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡುತ್ತಿದ್ದೇವೆ. 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್ ಟಾಪ್ ಕೊಡುತ್ತಿದ್ದೇನೆ. ಸಾಮೂಹಿಕ ವಿವಾಹ ಮಾಡವುದು ಬಡವರು, ಹೀಗಾಗಿ ಅಲ್ಪಸಂಖ್ಯಾತರಲ್ಲಿ ಸಾಮೂಹಿಕ ವಿವಾಹ ಮಾಡುವವರಿಗೂ ಸಹಾಯ ಮಾಡುತ್ತೇವೆ ಎಂದು ತಿಳಿಸಿ ಸಹಾಯ ಮಾಡುತ್ತೇವೆಂದು ಮಾಹಿತಿ ನೀಡಿದರು. ಇದನ್ನೂ ಓದಿ: ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗೆ ಸಂಬಂಧವನ್ನ ಹದಗೆಡಿಸಬೇಡಿ – ಟ್ರಂಪ್‌ಗೆ ತಿವಿದ ನಿಕ್ಕಿ ಹ್ಯಾಲಿ

    ಮದರಸಾದಿಂದ 200 ಜನರ ಆಯ್ಕೆ
    ಇನ್ನೂ ಮದರಸಾಗಳಲ್ಲಿ ಕನ್ನಡ ಕಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಸೀದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲ್ವಿಗಳಿಗೂ ಕನ್ನಡ ಬೋಧನೆಯನ್ನ ಮಾಡಲಾಗುವುದು. ಮದರಸಾಗಳಿಂದ 200 ಜನರನ್ನ ಆಯ್ಕೆ ಮಾಡಿದ್ದೇವೆ. 3 ತಿಂಗಳ ಒಳಗೆ ಅವರಿಗೆ ಕನ್ನಡ ಕಲಿಸುತ್ತೇವೆ. ಕನ್ನಡ ರಾಜ್ಯ ನಮ್ಮದು ಕನ್ನಡ ಬರಬೇಕು, ಎಲ್ಲ ಮಸೀದಿ ಗುರುಗಳಿಗೂ ಕನ್ನಡ ಕಲಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮನಗರ | ಇನ್‌ಸ್ಟಾದಲ್ಲಿ ಪರಿಚಯವಾದ ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿದ್ದ ಕಾಮುಕ ಅರೆಸ್ಟ್‌

    2 ಸಾವಿರ ಮದರಸಾಗಳಲ್ಲಿ ಕನ್ನಡ ಕಲಿಕೆ
    ಮುಂದಿನ ದಿನಗಳಲ್ಲಿ ರಾಜ್ಯದಲ್ಲಿರುವ 2 ಸಾವಿರ ಮದರಸಾಗಳಲ್ಲಿ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಇದಕ್ಕೆ ಅಲ್ಪಸಂಖ್ಯಾತರ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸೋಮವಾರ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು. ನಿಸಾರ್‌ ಅಹಮದ್‌ ಹೇಳಿದರು. ಅಲ್ಲದೇ, ಈ ಕುರಿತಾದ ಪಠ್ಯಕ್ರಮವನ್ನ ಅಲ್ಪಸಂಖ್ಯಾತರ ಆಯೋಗವು ಪ್ರಾಧಿಕಾರದ ಸಲಹೆಯಂತೆ ಮುದ್ರಿಸಲು ಕ್ರಮವಹಿಸಲಿದೆ ಎಂದರು.

  • ಸರ್ಕಾರದ ಬುಡಕ್ಕೆ ಮತ್ತೊಂದು ಭ್ರಷ್ಟಾಚಾರ ಬಾಂಬ್‌; ಜಮೀರ್ ಪಿಎ – ಬಿ.ಆರ್ ಪಾಟೀಲ್‌ರದ್ದು ಎನ್ನಲಾದ ಆಡಿಯೋ ವೈರಲ್‌

    ಸರ್ಕಾರದ ಬುಡಕ್ಕೆ ಮತ್ತೊಂದು ಭ್ರಷ್ಟಾಚಾರ ಬಾಂಬ್‌; ಜಮೀರ್ ಪಿಎ – ಬಿ.ಆರ್ ಪಾಟೀಲ್‌ರದ್ದು ಎನ್ನಲಾದ ಆಡಿಯೋ ವೈರಲ್‌

    – ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ರಾ ಶಾಸಕರು?
    – ವಸತಿ ನಿಗಮದಲ್ಲಿ ಭಾರೀ ಅಕ್ರಮ ಆರೋಪ

    ಕಲಬುರಗಿ: ರಾಜ್ಯ ಸರ್ಕಾರದ ಬುಡಕ್ಕೆ ಈಗ ಮತ್ತೊಂದು ಭ್ರಷ್ಟಾಚಾರ ಬಾಂಬ್‌ ಬಿದ್ದಿದೆ. ರಾಜೀವ್ ಗಾಂಧಿ ವಸತಿ ನಿಗಮದಲ್ಲಿ (Rajeev Gandhi Housing Corporation) ಹಣ ನೀಡಿದವರಿಗಷ್ಟೇ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೂ ಆಗಿರುವ ಆಳಂದ ಶಾಸಕ ಬಿ.ಆರ್ ಪಾಟೀಲ್‌ (BR Patil) ತಮ್ಮದೇ ಸರ್ಕಾರದ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾದ ಆಡಿಯೊವೊಂದು ವೈರಲ್‌ ಆಗಿದೆ.

    ಏನಿದು ವೈರಲ್‌ ಆಡಿಯೋ ಬಾಂಬ್‌?
    ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed Khan) ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್ ಅವರ ಮೊಬೈಲ್‌ಗೆ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿರುವ ಪಾಟೀಲ್‌ ಅವರು, ಹಣ ಪಡೆದು ಯಾವ ಗ್ರಾಮಕ್ಕೆ ಎಷ್ಟು ಮನೆಗಳನ್ನು ಮಂಜೂರು ಮಾಡಲಾಗಿದೆ? ಎಂಬ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಈ ಮಾಹಿತಿಯನ್ನ ನಾನು ಬಹಿರಂಗಪಡಿಸಿದ್ರೆ ಸರ್ಕಾರವೇ ಅಲುಗಾಡುತ್ತೆ ಎಂದೂ ಶಾಸಕರು ಎಚ್ಚರಿಕೆ ನೀಡಿದ್ದಾರೆ.

    ಬಿ.ಆರ್ ಪಾಟೀಲ್‌ ಅವರು ಸರ್ಫರಾಜ್ ಖಾನ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಮೊಬೈಲ್ ಕರೆಯ ಆಡಿಯೋ ʻಪಬ್ಲಿಕ್ ಟಿವಿʼಗೆ ಲಭ್ಯವಾಗಿದೆ. ಇದನ್ನೂ ಓದಿ: ಮಂಗಳೂರು | ಕಾರು ಅಪಘಾತದಲ್ಲಿ `ಕೈ’ ಮುಖಂಡ ಸೇರಿ ಇಬ್ಬರು ದುರ್ಮರಣ

    ಆಡಿಯೋ ಸಂಭಾಷಣೆಯಲ್ಲೇನಿದೆ?
    ಸಚಿವ ಜಮೀರ್‌ ಅವರ ಆಪ್ತ ಕಾರ್ಯದರ್ಶಿಗೆ ಕರೆ ಮಾಡುವ ಬಿ.ಆರ್ ಪಾಟೀಲ್,‌ ‘ಹಣ ನೀಡಿದವರಿಗಷ್ಟೇ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ನಮ್ಮ ಸರ್ಕಾರವನ್ನೇ ದೂರಲು ಬೇಸರವಾಗುತ್ತಿದೆ’ ಎಂದು ಆರಂಭದಲ್ಲೇ ಅಸಮಾಧಾನ ವ್ಯಕ್ತಪಡಿಸುತ್ತಾರೆ.

    ಅದಕ್ಕೆ ಸರ್ಫರಾಜ್ ಖಾನ್ ಅವರು, ‘ಯಾವ ಕ್ಷೇತ್ರದಲ್ಲಿ ಹೀಗೆ ಆಗಿದೆ ಮಾಹಿತಿ ಕೊಡಿ. ಕೂಡಲೇ ಅವರನ್ನು ಜೈಲಿಗೆ ಕಳುಹಿಸುತ್ತೇವೆ’ ಎನ್ನುತ್ತಾರೆ. ಇದನ್ನೂ ಓದಿ: ಟ್ರ್ಯಾಕ್ಟರ್ ಕದ್ದು ಜೈಲು ಸೇರಿದ್ರು, ರಿಲೀಸ್ ಆಗಿ ಕಾರು ಕಳ್ಳತನಕ್ಕಿಳಿದ್ರು – ಮತ್ತೆ ಪೊಲೀಸರ ಅತಿಥಿಗಳಾದ ಕಳ್ರು!

    ಇದಕ್ಕೆ ವ್ಯಂಗ್ಯವಾಗಿ ನಗುವ ಬಿ.ಆರ್ ಪಾಟೀಲ್‌, ‘ಆಳಂದ ಮತಕ್ಷೇತ್ರದ ಮುನ್ನಳ್ಳಿಯಲ್ಲಿ 200 ಮನೆ, ದರ್ಗಾ ಶಿರೂರದಲ್ಲಿ 100, ಧಂಗಾಪುರದಲ್ಲಿ 200, ಕವಲಗಾದಲ್ಲಿ 200, ಮಾಡಿಯಾಳದಲ್ಲಿ 200 ಮನೆಗಳು ಸೇರಿದಂತೆ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ. ಪಕ್ಕದ ಅಫಜಲಪುರ ಕ್ಷೇತ್ರದಲ್ಲಿಯೂ ಹಣ ಪಡೆದೇ ಮನೆಗಳನ್ನು ಹಂಚಿಕೆ ಮಾಡಲಾಗಿದೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ‘ನಾನು ಕೊಟ್ಟ ಶಿಫಾರಸು ಪತ್ರಗಳನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಬದಲಾಗಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು ನೀಡಿದ ಪಟ್ಟಿಗೆ ಅನುಮೋದನೆ ನೀಡಿದ್ದೀರಿ. ಶಾಸಕ ನೀಡಿದ ಪತ್ರಕ್ಕೆ ಬೆಲೆಯೇ ಇಲ್ಲವೇ?’ ಎಂದೂ ಖಾರವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಗುಂಡಿನ ಚಕಮಕಿಯಲ್ಲಿ ಕುಕಿ ಸಮುದಾಯದ ಮಹಿಳೆ ಸಾವು – ಮಣಿಪುರ ಮತ್ತೆ ಉದ್ವಿಗ್ನ

    ಶಾಸಕರನ್ನು ಸಮಾಧಾನ ಮಾಡಲು ಯತ್ನಿಸಿದ ಸರ್ಫರಾಜ್ ಅವರು, ‘ನೀವು ಯಾರ ಹೆಸರುಗಳನ್ನು ಶಿಫಾರಸು ಮಾಡಿದ್ದೀರೋ ಅವರ ಪಟ್ಟಿ ಕೊಡಿ ಸರ್. ಅವರಿಗೆ ಮಂಜೂರು ಮಾಡುತ್ತೇವೆ. ಹಣ ಪಡೆದು ಹಂಚಿಕೆ ಮಾಡಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಭರವಸೆ ನೀಡುತ್ತಾರೆ.

    ಸದ್ಯ ಈ ಆಡಿಯೋ ಈಗ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದು, ವಿಪಕ್ಷಗಳ ಹೋರಾಟಕ್ಕೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ. ಇದನ್ನೂ ಓದಿ: ರಾಜಕೀಯ ಮಾತಾಡ್ಬಾರದು ಅಂತ ಯಾವಾಗಿನಿಂದ ಜಾರಿಯಾಗಿದೆ? – ನೋಟಿಸ್‌ಗೆ ಚಕ್ರವರ್ತಿ ಸೂಲಿಬೆಲೆ ಕಿಡಿ

  • ನನಗೆ ನಮ್ಮ ದೇಶ ಮುಖ್ಯ, ಅದಕ್ಕೆ ಯುದ್ಧಕ್ಕೆ ಹೋಗ್ತೀನಿ ಎಂದಿದ್ದೆ: ಸಚಿವ ಜಮೀರ್

    ನನಗೆ ನಮ್ಮ ದೇಶ ಮುಖ್ಯ, ಅದಕ್ಕೆ ಯುದ್ಧಕ್ಕೆ ಹೋಗ್ತೀನಿ ಎಂದಿದ್ದೆ: ಸಚಿವ ಜಮೀರ್

    ಕಲಬುರಗಿ: ನಾನು ಸೂಸೈಡ್ ಬಾಂಬ್ ಕಟ್ಟಿಕೊಂಡು ಯುದ್ಧಕ್ಕೆ ಹೋಗುತ್ತೇನೆ. ದೇಶಕ್ಕಾಗಿ ಬಲಿಯಾಗಲು ನಾನು ಸಿದ್ಧ ಎಂದು ಸಚಿವ ಜಮೀರ್ ಅಹ್ಮದ್ ಖಾನ್(Zameer Ahmed Khan) ಪುನರುಚ್ಚರಿಸಿದರು.

    ಕಲಬುರಗಿಯಲ್ಲಿ(Kalaburagi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ(Pakistan) ವಿರುದ್ಧ ಕೇಂದ್ರ ಸರ್ಕಾರ ಏನೇ ನಿರ್ಧಾರ ತೆಗೆದುಕೊಂಡ್ರು ನಮ್ಮ ಬೆಂಬಲ ಇದೆ. ನಮ್ಮ ಪಕ್ಷದಿಂದ ಬೆಂಬಲವಿದೆ ಎಂದು ಈಗಾಗಲೇ ನಮ್ಮ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರು ಸ್ಪಷ್ಟವಾಗಿ ಹೇಳಿದ್ದಾರೆ ಎಂದರು. ಇದನ್ನೂ ಓದಿ: ನಾಳೆ ರಾಜ್ಯದ 2 ಕಡೆ ನಡೆಯಲಿದೆ ಯುದ್ಧದ ಡ್ರಿಲ್‌!

    ಜಮೀರ್ ಯುದ್ದಕ್ಕೆ ಹೋಗೋದು ಬೇಡ, ಇಲ್ಲಿರೋ ಕುನ್ನಿಗಳನ್ನ ಕೊಲ್ಲಲಿ ಎಂದ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನು ಈಗಲೂ ನನ್ನ ಹೇಳಿಕೆಗೆ ಬದ್ಧನಿದ್ದೇನೆ. ನಾನು ಸೂಸೈಡ್ ಬಾಂಬ್ ಕಟ್ಟಿಕೊಂಡು ಹೋಗ್ತೇನೆ. ಸಿ.ಟಿ.ರವಿಗೆ(C T Ravi) ಏನು ಕೆಲಸ ಇಲ್ಲ. ಅದಕ್ಕಾಗಿ ಮಾತನಾಡ್ತಾರೆ. ನಮಗೆ ನಮ್ಮ ದೇಶ ಮುಖ್ಯ. ಅದಕ್ಕಾಗಿ ನಾನು ಯುದ್ಧಕ್ಕೆ ಹೋಗ್ತೇನೆ ಅಂದಿದ್ದೆ ಎಂದು ಹೇಳಿದರು.

  • ಬಳ್ಳಾರಿ | ಪಿಯುಸಿ ಟಾಪರ್‌ಗಳಿಗೆ ಸ್ಕೂಟಿ ಜೊತೆ 5 ಲಕ್ಷ ಸಹಾಯ ಮಾಡಿದ ಜಮೀರ್

    ಬಳ್ಳಾರಿ | ಪಿಯುಸಿ ಟಾಪರ್‌ಗಳಿಗೆ ಸ್ಕೂಟಿ ಜೊತೆ 5 ಲಕ್ಷ ಸಹಾಯ ಮಾಡಿದ ಜಮೀರ್

    ಬಳ್ಳಾರಿ: ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಟಾಪರ್ ಆದ ವಿಜಯನಗರ (Vijayanagara) ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ವಿಜಯನಗರ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ವೈಯಕ್ತಿಕವಾಗಿ ತಲಾ ಐದು ಲಕ್ಷ ರೂ. ಹಾಗೂ ದ್ವಿಚಕ್ರ ವಾಹನ ಬಹುಮಾನ ನೀಡಿ ಸನ್ಮಾನಿಸಿದ್ದಾರೆ.

    ಅಲ್ಲದೇ ಜಿಲ್ಲೆಯಲ್ಲಿ ಉತ್ತಮ ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂ. ನಗದು ನೀಡಿದ್ದಾರೆ. ಪಿಯುಸಿ ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದ ಸಂಜನಾಬಾಯಿ ಹಾಗೂ 600ಕ್ಕೆ 596 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದ ನಿರ್ಮಲಾ ಇಬ್ಬರೂ ಬಡತನದಲ್ಲೇ ಹುಟ್ಟಿ, ಬೆಳೆದಿದ್ದ ವಿದ್ಯಾರ್ಥಿನಿಯರು. ಹೀಗಾಗಿ ವಿದ್ಯಾರ್ಥಿನಿಯರ ಮುಂದಿನ ಶೈಕ್ಷಣಿಕ ಜೀವನಕ್ಕೆ ಅನುಕೂಲ ಆಗಲಿ ಎಂಬ ಸದುದ್ದೇಶದಿಂದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸನ್ಮಾನಿಸಿ, ಸಹಾಯ ಮಾಡಿದ್ದಾರೆ. ಇದನ್ನೂ ಓದಿ: ತುಮಕೂರಲ್ಲಿ ಎರಡು ದಿನಗಳ ಕಾಲ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್ ಘೋಷಣೆ

    ಈ ವೇಳೆ ಶಾಸಕರಾದ ಗವಿಯಪ್ಪ, ಲತಾ ಮಲ್ಲಿಕಾರ್ಜುನ, ಶ್ರೀನಿವಾಸ್, ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ದಿವಾಕರ್, ಎಸ್ ಪಿ ಹರಿಬಾಬು ಉಪಸ್ಥಿತರಿದ್ದರು. ಇದನ್ನೂ ಓದಿ: ದಾವಣಗೆರೆ | ಬ್ಲಡ್‌ ಕ್ಯಾನ್ಸರ್‌ನೊಂದಿಗೆ ಹೋರಾಡಿ ಎಸ್ಎಸ್ಎಲ್‌ಸಿಯಲ್ಲಿ ಶಾಲೆಗೆ ಫಸ್ಟ್ ಬಂದ ವಿದ್ಯಾರ್ಥಿನಿ

  • ಇಸ್ಲಾಂ ನಲ್ಲಿ ಜಾತಿ, ಧರ್ಮ, ಭೇದ-ಭಾವ ಮಾಡಿ ಅಂತ ಹೇಳಿಲ್ಲ – ಜಮೀರ್‌

    ಇಸ್ಲಾಂ ನಲ್ಲಿ ಜಾತಿ, ಧರ್ಮ, ಭೇದ-ಭಾವ ಮಾಡಿ ಅಂತ ಹೇಳಿಲ್ಲ – ಜಮೀರ್‌

    – ಬಿಜೆಪಿಯವರಿಗೆ ಹಿಂದೂ-ಮುಸ್ಲಿಂ ಬೇಕಿಲ್ಲ, ಬೇಕಿರೋದು ಅಧಿಕಾರ ಎಂದು ಕಿಡಿ

    ಚಿಕ್ಕಬಳ್ಳಾಪುರ: ಬಿಜೆಪಿಯವರಿಗೆ ಹಿಂದೂಗಳು ಬೇಕಿಲ್ಲ ಮುಸ್ಲಿಮರೂ (Muslims) ಬೇಕಿಲ್ಲ ಬೇಕಿರೋದು ಅಧಿಕಾರ ಅಂತ ವಸತಿ ಸಚಿವ ಜಮೀರ್ ಅಹಮದ್ (Zameer Ahmed Khan) ಹೇಳಿದರು.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಸರ್ಕಾರದ 2 ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ವಸತಿ ಇಲಾಖೆ ಸಚಿವರು, ನಾವು ಕಾಂಗ್ರೆಸ್‌ನವರು (Congress) ಸಾಧನೆಗಳ ಮೂಲಕ ಮತಯಾಚನೆ ಮಾಡ್ತೀವಿ. ಬಿಜೆಪಿಯವರು (BJP) ಎಂದಾದರೂ ಸಾಧನೆಗಳ ಮೂಲಕ ಮತ ಕೇಳಿದ್ದಾರಾ? ಆದ್ರೆ ಬಿಜೆಪಿಯವರು ಹಿಂದೂ ಮುಸ್ಲಿಂ ಅಂತ ಬೇಧಭಾವ ಮಾಡಿ ಮತ ಕೇಳ್ತಾರೆ. ಅವರಿಗೆ ಹಿಂದೂಗಳು ಬೇಕಿಲ್ಲ ಮುಸ್ಲಿಮರೂ ಬೇಕಿಲ್ಲ ಬೇಕಿರೋದು ಅಧಿಕಾರ ಮಾತ್ರ ಅಂತ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಶಾಂತಿ ದೃಷ್ಟಿಯಿಂದ ಯುದ್ಧ ಬೇಡ ಎಂದು ಸಿಎಂ ಹೇಳಿದ್ದಾರೆ: ಪರಮೇಶ್ವರ್ ಸಮರ್ಥನೆ

    ಹಿಂದೂ, ಮುಸ್ಲಿಂ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಇಸ್ಲಾಂ ನಲ್ಲಿ ಜಾತಿ ಧರ್ಮ ಭೇದ ಭಾವ ಮಾಡಿ ಅಂತ ಹೇಳಿಲ್ಲ. ʻಸಾರೇ ಜಹಾನ್ಸೇ ಅಚ್ಚಾ ಹಿಂದೂಸ್ತಾನ್ ಹಮಾರಾʼ ಅಂತ ಇಸ್ಲಾಂ ಧರ್ಮ ಹೇಳಿಕೊಟ್ಟಿರೋದು ಅಂತ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ದಳಪತಿ ವಿಜಯ್‌ ನೋಡಲು ಮರದಿಂದ ಜಿಗಿದು ಅಭಿಮಾನಿಯ ಹುಚ್ಚಾಟ- ವಿಡಿಯೋ ವೈರಲ್

  • ಹಿಂದೂ-ಮುಸ್ಲಿಮರು ಅನ್ಯೋನ್ಯತೆಯಿಂದ ಬಾಳಲಿ, ಸಿಎಂ ಆರೋಗ್ಯ ಸುಧಾರಿಸಲೆಂದು ವಿಶೇಷ ಪ್ರಾರ್ಥನೆ: ಜಮೀರ್

    ಹಿಂದೂ-ಮುಸ್ಲಿಮರು ಅನ್ಯೋನ್ಯತೆಯಿಂದ ಬಾಳಲಿ, ಸಿಎಂ ಆರೋಗ್ಯ ಸುಧಾರಿಸಲೆಂದು ವಿಶೇಷ ಪ್ರಾರ್ಥನೆ: ಜಮೀರ್

    -ಭೂಕಂಪದಿಂದ ಸಮಸ್ಯೆಯಾದವರಿಗೆ ಸಹಾಯ ಮಾಡಲು ಹೇಳಿದ್ದೇನೆ; ಮಖ್ಸುದ್

    ಬೆಂಗಳೂರು: ಭಾರತದಲ್ಲಿ ಹಿಂದೂ, ಮುಸ್ಲಿಂ, ಸಿಖ್ ಎಲ್ಲರೂ ಅನ್ಯೋನ್ಯತೆಯಿಂದ ಬಾಳಲಿ ಎಂದು ಕೇಳಿಕೊಂಡೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್‌ (Zameer Ahmed Khan) ಹೇಳಿದರು.

    ರಂಜಾನ್ (Ramjaan) ಹಬ್ಬದ ಸಲುವಾಗಿ ಚಾಮರಾಜಪೇಟೆಯ (Chamarajapete) ಈದ್ಗಾ ಮೈದಾನದಲ್ಲಿ (Eidga Ground) ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ಅವರು, ಜನರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. 30 ದಿವಸ ನಾವು ಉಪವಾಸದಿಂದ ಇದ್ದೇವೆ. ರಂಜಾನ್, ಬಕ್ರೀದ್ ನಮಗೆ ದೊಡ್ಡ ಹಬ್ಬ. ನಿನ್ನೆ ಹಿಂದೂಗಳಿಗೆ ದೊಡ್ಡ ಹಬ್ಬ. ಇಂದು ನಮಗೆ ದೊಡ್ಡ ಹಬ್ಬವಾಗಿದೆ. ಹಿಂದೂ, ಮುಸ್ಲಿಂ, ಸಿಖ್ ಎಲ್ಲರೂ ಭಾರತದಲ್ಲಿ ಅನ್ಯೋನ್ಯತೆಯಿಂದ ಬಾಳಲಿ ಅಂತ ಕೇಳಿಕೊಂಡೆ. 9.35 ಸಿಎಂ ಫೋನ್ ಮಾಡಿದ್ದರು. ಆರೋಗ್ಯ ಸಮಸ್ಯೆ ಹಿನ್ನಲೆ ಅವರು ಬಂದಿಲ್ಲ. ರಾಜ್ಯದ ಮುಖ್ಯಮಂತ್ರಿಗಳಿಗೆ ಆರೋಗ್ಯ ಕೊಡಲಿ ಎಂದು ಬೇಡಿದ್ದೇವೆ ಎಂದರು. ಇದನ್ನೂ ಓದಿ: ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಲಂಚ್ ಡೇಟ್- ಮತ್ತೆ ಡೇಟಿಂಗ್‌ ಬಗ್ಗೆ ಶುರುವಾಯ್ತು ಚರ್ಚೆ

    ಕಪ್ಪು ಪಟ್ಟಿ ಧರಿಸಿದ ವಿಚಾರವಾಗಿ ಪ್ರತಿಕ್ರಿಯಿಸಿ, ಇಡೀ ದೇಶದಲ್ಲಿ ಇವತ್ತು ಕಪ್ಪು ಪಟ್ಟಿ ಧರಿಸಿದ್ದೇವೆ. ವಕ್ಫ್ ಬಿಲ್ (Waqf Bill) ತರಬಾರದು ಎಂಬುದು ನಮ್ಮ ಬೇಡಿಕೆಯಾಗಿದೆ. ನಮ್ಮ ರಾಜ್ಯ ಸರ್ಕಾರದಿಂದ ಬೆಂಬಲ ಇಲ್ಲ ಎಂದು ಹೇಳಿದರು.

    ಜಾಮಿಯಾ ಮಸೀದಿ ಮುಖ್ಯಸ್ಥ ಮೌಲಾನ ಮಖ್ಸುದ್ ಇಮ್ರಾನ್ ಅವರು ಮಾತನಾಡಿ, ನಮ್ಮ ರಂಜಾನ್ ಹಬ್ಬದಲ್ಲಿ ಎಲ್ಲರೂ ಉಪವಾಸ ಮಾಡಿ ಮೈದಾನದಲ್ಲಿ ಹಬ್ಬ ಆಚರಣೆ ಮಾಡುತ್ತಿದ್ದಾರೆ. ದುಡ್ಡಿಲ್ಲದೇ ಇರೋರಿಗೆ ದಾನ ಮಾಡಬೇಕು. ಬಡವರಿಗೆ ದಾನ ಮಾಡಬೇಕು ಎಂದು ಸಂದೇಶ ನೀಡಿದರು. ಇದನ್ನೂ ಓದಿ: ರಾಜ್ಯದ ಜನರಿಗೆ ಮತ್ತೆ ಶಾಕ್‌ – ಟ್ರಾನ್ಸ್‌ಫಾರ್ಮರ್‌, ಜನರೇಟರ್ ಪರಿಶೀಲನೆ & ರಿನೀವಲ್ ಶುಲ್ಕ 3 ಪಟ್ಟು ಏರಿಕೆ!

    ನಿನ್ನೆ ಯುಗಾದಿ ಆಯ್ತು, ನಾವು ಹಿಂದೂಗಳಿಗೆ ಶುಭ ಹಾರೈಸಿದ್ದೇವೆ. ಇವತ್ತು ರಂಜಾನ್ ನಡೆಯುತ್ತಿದೆ. ಈದ್ ಹಬ್ಬದಲ್ಲಿ ಹಿಂದೂಗಳು ಮುಸ್ಲಿಂರನ್ನು ವೆಲ್‌ಕಂ ಮಾಡುತ್ತಾರೆ. ಪೊಲೀಸ್ ಅವರು ಡ್ಯೂಟಿ ಮಾಡುತ್ತಾರೆ. ಮಾಧ್ಯಮದವರೂ ಹಿಂದೂಗಳಿರುತ್ತಾರೆ. ಎಲ್ಲಾ ಹಿಂದೂಗಳಿಗೆ ಗಿಫ್ಟ್ ಕೊಡಿ. ಆಗ ಜನರಿಗೆ ಸಂತೋಷ ಆಗುತ್ತದೆ. ನಮ್ಮ ರಂಜಾನ್‌ನಲ್ಲಿ ನಾವು ಜನರಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡಿದ್ದೇವೆ. ಭೂಕಂಪನದಿಂದ ಸಮಸ್ಯೆಯಾದವರಿಗೆ ಸಹಾಯ ಹಸ್ತ ನೀಡಲು ಹೇಳಿದ್ದೇನೆ. ಪ್ರಪಂಚದಾದ್ಯಂತ ಅವರಿಗೆ ಸಹಾಯ ಸಿಗಲಿ, ಭೂ ಕಂಪನದಲ್ಲಿ ಸಮಸ್ಯೆ ಆದವರಿಗೆ ಗಿಫ್ಟ್ ಕಳುಹಿಸಬೇಕು ಎಂದು ಮನವಿ ಮಾಡಿದ್ದೇನೆ ಎಂದರು. ಇದನ್ನೂ ಓದಿ: ನಾಳೆಯಿಂದ ದುನಿಯಾ ದುಬಾರಿ – ಹಾಲು, ಮೊಸರು ದುಬಾರಿ.. ಕಸಕ್ಕೂ ಕಾಸು, ಯಾವುದಕ್ಕೆ ಎಷ್ಟು ದರ ಹೆಚ್ಚಳ?

    ಕಪ್ಪು ಪಟ್ಟಿ ಧರಿಸಿದ ವಿಚಾರವಾಗಿ ಪ್ರತಿಕ್ರಿಸಿದ ಅವರು ವಕ್ಫ್ ಬಿಲ್ ವಿಚಾರ ಸಂಸತ್ತಿನಲ್ಲಿ ಬರುತ್ತಿದೆ. ಈ ಬಗ್ಗೆ ಕೈಯಲ್ಲಿ ಕಪ್ಪು ಪಟ್ಟಿ ಧರಿಸಿ ಇದು ಸರಿ ಇಲ್ಲ ಅಂತ ಸಂದೇಶ ಕೊಟ್ಟಿದ್ದೇವೆ. ಬಾಯಿಂದ ನಾವು ಏನು ಹೇಳಿಲ್ಲ. ಆದರೆ ಈ ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರಕ್ಕೆ ಸಂದೇಶ ಕೊಡುತ್ತಾ ಇದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಯುಗಾದಿ ಹಬ್ಬದ ಹಿನ್ನೆಲೆ ಪತ್ನಿ ಜೊತೆ ಡಾಲಿ ಟೆಂಪಲ್ ರನ್

    ರಿಲೀಫ್ ಫಂಡ್ ವಿಚಾರವಾಗಿ ಮಾತನಾಡಿ, ನಮ್ಮ ಸೆಂಟ್ರಲ್ ಬೋರ್ಡ್ ಅಥವಾ ಕಮಿಟಿ ಮುಖ್ಯಸ್ಥರು ಅನುಮತಿ ಕೊಟ್ಟರೆ ನಾವು ಯೋಚನೆ ಮಾಡುತ್ತೇವೆ ಎಂದರು.

  • ಜಮೀರ್ ಕಣ್ಣೀರು ಮತ್ತು 100 ಬಿರಿಯಾನಿ..!

    ಜಮೀರ್ ಕಣ್ಣೀರು ಮತ್ತು 100 ಬಿರಿಯಾನಿ..!

    ಅವರೆಲ್ಲ ಬೆಳ್ಳಂಬೆಳಗ್ಗೆ ಮೂರು ಗಂಟೆಗೆ ಎದ್ದು ಮೈಸೂರಿನಿಂದ (Mysuru) ನೇರವಾಗಿ ಬಸ್ ಹತ್ತಿ ಬೆಂಗಳೂರಿಗೆ ಬಂದಿದ್ರು. ವಸತಿ ಸೌಲಭ್ಯ, ಪಿಂಚಣಿ ಹೆಚ್ಚಳಕ್ಕಾಗಿ ಎಷ್ಟು ಅಂತಾ ಜಿಲ್ಲಾಧಿಕಾರಿ ಕಚೇರಿಗೆ ಅಲೆಯೋದು ಸಿಎಂ ಮನೆಗೆ ಹೋಗಿ ನ್ಯಾಯ ಕೇಳುವ ಅನ್ನುವ ಸೋತ ನೋವಿನಿಂದ ಬಂದಿದ್ರು.

    ಬಹುತೇಕರಿಗೆ ಕಾಲಿನ ಸ್ವಾಧೀನವಿಲ್ಲ, ನಡೆಯೋಕೆ ಆಗಲ್ಲ ವೀಲ್ ಚೇರ್ ಆಧಾರ. ಇನ್ನು ಕೆಲವರಿಗೆ ಕೈ ಇಲ್ಲ, ಊರುಗೋಲಿನ ಅಧಾರದಲ್ಲಿರೋರು. ಇವರೆಲ್ಲ ಬಸ್ ಮಾಡಿಕೊಂಡು ಸುಮಾರು ನೂರಕ್ಕೂ ಹೆಚ್ಚು ಜನ ಸಿಎಂ ಗೃಹಕಚೇರಿ ಕೃಷ್ಣಾಗೆ ಬಂದಿದ್ದಾರೆ. ಆದ್ರೇ ಸಿಎಂ ಕಚೇರಿಯಲ್ಲಿ ಇರದ ಕಾರಣ ಇವ್ರ ಭೇಟಿಗೆ ಅವಕಾಶ ಸಿಗಲಿಲ್ಲ. ಅಲ್ಲಿಂದ ವಸತಿ ವಿಚಾರಕ್ಕೆ ಸಿಎಂ ಆಪ್ತ ಕಾರ್ಯದರ್ಶಿ ಜಮೀರ್ (Zameer Ahmed Khan) ಮನೆಗೆ ಹೋಗಿ ಅಂತಾ ಸಾಗಾ ಹಾಕಿದ್ದಾರೆ.

    ಪಾಪ ವ್ಹೀಲ್‌ ಚೇರ್‌ನಲ್ಲಿಯೇ ಬೆಂಗಳೂರು ಟ್ರಾಫಿಕ್ ನಲ್ಲಿ ಅವರೆಲ್ಲ ಸಿಎಂ ಗೃಹಕಚೇರಿಯಿಂದ ಐನೂರು ಮೀಟರ್ ದೂರದ ಜಮೀರ್ ಸರ್ಕಾರಿ ನಿವಾಸಕ್ಕೆ ಹೋಗಿದ್ದಾರೆ. ಅರಂಭದಲ್ಲಿ ಅಪಾಯಿಂಟ್‌ಮೆಂಟ್‌ ತಗೊಂಡಿಲ್ಲ ಸಾಹೇಬ್ರು ಇಲ್ಲ ಅಂತಾ ಪೊಲೀಸರು ರಸ್ತೆಯಲ್ಲಿಯೇ ಇವರನ್ನು ನಿಲ್ಲಿಸಿದ್ದಾರೆ. ಫುಟ್‌ ಪಾತ್ ರಸ್ತೆಯಲ್ಲಿಯೇ ಬಿರುಬಿಸಿಲಿನಲ್ಲಿ ಸುಮಾರು ಮೂರು ನಾಲ್ಕು ಗಂಟೆ ನೀರು ತಿಂಡಿ ಇಲ್ಲದೇ ನಿಂತಿದ್ದಾರೆ. ಏನು ದಾರಿ ಕಾಣದೇ ʻಪಬ್ಲಿಕ್ ಟಿವಿʼಗೆ ಕರೆ ಮಾಡಿದ್ದಾರೆ. ಪಬ್ಲಿಕ್ ಟಿವಿ ಸ್ಥಳಕ್ಕೆ ಹೋಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿ ಜಮೀರ್ ಮನೆಯೊಳಗೆ ಬಿಟ್ಟಿದ್ದಾರೆ.

    ತಕ್ಷಣ ಜಮೀರ್ ಆಪ್ತಕಾರ್ಯದರ್ಶಿ ಬಂದು ಮನವಿ ಸ್ವೀಕರಿಸಿದ್ದಾರೆ. ಕೊನೆಗೆ ಚಾಮರಾಜಪೇಟೆಯಲ್ಲಿ ಸಭೆ ಮುಗಿಸಿ ಬಂದ ಜಮೀರ್ ತಕ್ಷಣ ಮನೆಬಾಗಿಲಲ್ಲಿ ನಿಂತ ವಿಶೇಷ ಚೇತನರ ಸಮಸ್ಯೆ ಆಲಿಸಿದ್ರು. ಯಾಕ್ ಬರೋಕೆ ಹೋದ್ರಿ ಮೈಸೂರಿಂದ ಸಿಎಂ ಬಂದಾಗ ಅವರಿಗೆ ಮನವಿ ನೀಡಬೇಕಾಗಿತ್ತು ಅಂತಾ ಹೇಳುತ್ತಲೇ ಮನವಿ ಸ್ವೀಕರಿಸಿದ್ರು. ಕೊನೆಗೆ ನಾನೇ ಜಿಲ್ಲಾಧಿಕಾರಿಗೆ ಪತ್ರ ಬರೆಯುತ್ತೇನೆ ರಾಜೀವ್ ಗಾಂಧಿ ವಸತಿ ಯೋಜನೆ ಮೂಲಕ ಮನೆ ಕೊಡಿಸುವ ಕೆಲ್ಸ ಮಾಡ್ತೀನಿ ಅಂತಾ ಭರವಸೆ ಕೊಟ್ರು.

    ಜೊತೆಗೆ ಬಿರಿಯಾನಿ ತರಿಸ್ತೀನಿ ಇರಪ್ಪ ಅಂತಾ 100 ಮಟನ್ ಬಿರಿಯಾನಿ, 20-30 ಪ್ಲೇಟ್ ಕಬಾಬ್‌ಗೆ ಆರ್ಡರ್ ಮಾಡಿದ್ರು. ವಿಶೇಷ ಚೇತನರು ಫುಲ್ ಖುಷ್. ಧನ್ಯವಾದ ಹೇಳೋಕೆ ಕಾಲು ಹಿಡಿಯೋಕೆ ಮುಂದಾದಾಗ ಜಮೀರ್‌ಗೆ ಕಣ್ಣೀರು.. ʻಪಬ್ಲಿಕ್ ಟಿವಿʼ ಜೊತೆಗೆ ಮಾತಾನಾಡ್ತಾ ಸಚಿವ ಜಮೀರ್ ಕಣ್ಣಿಂದ ನೀರು ಜಿನುಗುತ್ತಿತ್ತು. ಪಾಪ ಬಡವರು ಕಾಲಿಲ್ಲ.. ಕೈಯಿಲ್ಲ.. ನೋಡೋಕೆ ಬೇಜಾರಾಯ್ತು. ಇಷ್ಟು ದೂರ ಬಂದ್ರಲ್ಲ ಅಂತಾ ನೋವಿನಿಂದಲೇ ನುಡಿದ್ರು. ಕ್ಯಾಮೆರಾ ಆಫ್ ಮಾಡ್ರಪ್ಪ ಅಂತಾ ಮನವಿ ಮಾಡುತ್ತಲೇ ಎರಡು ಲಕ್ಷ ರೂಪಾಯಿ ದುಡ್ಡು ತಗೊಂಡು ವಿಶೇಷಚೇತನರ ಕೈಗೆ ತುರುಕಿದ್ರು.

  • ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ – ಸಚಿವ ಜಮೀರ್ ಬ್ಯಾಟಿಂಗ್‌

    ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ – ಸಚಿವ ಜಮೀರ್ ಬ್ಯಾಟಿಂಗ್‌

    ಬಳ್ಳಾರಿ: ಸಿದ್ದರಾಮಯ್ಯ (Siddaramaiah) ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಅಂತ ಸಚಿವ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan) ಮುಖ್ಯಮಂತ್ರಿಗಳ ಪರ ಬ್ಯಾಟಿಂಗ್‌ ಮಾಡಿದ್ದಾರೆ.

    ಪವರ್‌ ಫೈಟ್‌ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ. ಸಿಎಂ, ಕೆಪಿಸಿಸಿ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ (DK Shivakumar) ಇದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಖಾಲಿ ಇದ್ರೆ ತಾನೇ ಚರ್ಚೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶ್ರೀ ಸಾಯಿ ಮಿನರಲ್ಸ್ ಗಣಿಗಾರಿಕೆ ಅಕ್ರಮ ಕೇಸ್‌ – ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ SIT

    ಸಿಎಂ ಸಿದ್ದರಾಮಯ್ಯ ಖುರ್ಚಿ ಮುಟ್ಟೋಕೆ ಸಾಧ್ಯ ಏನ್ರಿ? ಅದೊಂಥರ ಬೆಂಕಿ ಅದು, ಬೆಂಕಿ ಮುಟ್ಟಿದ್ರೆ ಸುಟ್ಟೋಗ್ತಾರೆ. ಸಿದ್ದರಾಮಯ್ಯ ಬೆಂಕಿ ಇದ್ದಂತೆ, ನಾವು ಟಗರು ಅಂತೀವಿ. ಆ ಬೆಂಕಿ ಮುಟ್ಟೋಕೆ ಸಾಧ್ಯವಿಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಎದುರಾಳಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹೇಮಾವತಿ ಎಡದಂಡೆ ನಾಲೆಗಳಿಗಿಲ್ಲ ನೀರು – ಕೆ.ಆರ್ ಪೇಟೆ, ನಾಗಮಂಗಲ ರೈತರು ಕಂಗಾಲು

    ನಮ್ಮ ಪಕ್ಷ ಹೈಕಮಾಂಡ್ ಪಕ್ಷ, ಹೈ ಕಮಾಂಡ್ ನಿರ್ಧಾರಕ್ಕೆ ಬದ್ಧ. ಹೈಕಮಾಂಡ್ ಬದಲಾವಣೆ ಮಾಡಬೇಕು ಅಂತ ನಿರ್ಧಾರ ಮಾಡಿದ್ರೆ ನಾವು ಅಭಿಪ್ರಾಯ ತಿಳಿಸಬಹುದು. ಆದ್ರೆ ಹೈಕಮಾಂಡ್‌ ಯಾವುದೇ ನಿರ್ಧಾರಕ್ಕೆ ಇನ್ನೂ ಬಂದಿಲ್ಲ. ನಮ್ಮ ಪಕ್ಷದವರು ಯಾರೂ ಕೂಡ ಸಿದ್ದರಾಮಯ್ಯ ಬದಲಾವಣೆ ಮಾಡಲಿ ಅಂತಲೂ ಹೇಳಿಲ್ಲಾ. ಎಲ್ಲಾ ಸಮಾಜಕ್ಕೂ ಸಿಎಂ ಆಗಬೇಕು ಅಂತ ಆಸೆ ಇರುತ್ತೆ. ದಲಿತ, ಅಲ್ಪಸಂಖ್ಯಾತ, ಎಸ್ಸಿ, ಎಸ್ಟಿ, ಲಿಂಗಾಯತ ಸಮುದಾಯ ಎಲ್ಲರೂ ಸಿಎಂ ಆಗಬೇಕು ಅಂತಾರೆ. ತೀರ್ಮಾನ ಹೈ ಕಮಾಂಡ್ ಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 43 ಕೋಟಿ ಕೊಟ್ರೆ ಅಮೆರಿಕದ ʻಗೋಲ್ಡ್‌ ಕಾರ್ಡ್‌ʼ – ಪೌರತ್ವ ಪಡೆಯಲು ಶ್ರೀಮಂತ ವಲಸಿಗರಿಗೆ ಟ್ರಂಪ್‌ ಆಫರ್‌