Tag: ಜಮ್ಮು ಮತ್ತು ಕಾಶ್ಮೀರ

  • ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಬ್ರೇಕ್- 14 ಉಗ್ರರ ಆಸ್ತಿ ಮುಟ್ಟುಗೋಲಿಗೆ ಪೊಲೀಸರ ಕ್ರಮ

    ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಬ್ರೇಕ್- 14 ಉಗ್ರರ ಆಸ್ತಿ ಮುಟ್ಟುಗೋಲಿಗೆ ಪೊಲೀಸರ ಕ್ರಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ವಿಧ್ವಂಸಕ ಕೃತ್ಯಕ್ಕೆ ಸಜ್ಜಾಗಿದ್ದ ಪಾಕ್ (Pakistan) ಮೂಲದ ಭಯೋತ್ಪಾದಕರ ಆಸ್ತಿಯನ್ನು ಪೊಲೀಸರು (Police) ಮುಟ್ಟುಗೋಲು ಹಾಕಿಕೊಂಡಿದ್ದಾರೆ.

    ಈಗಾಗಲೇ ಇಬ್ಬರು ಭಯೋತ್ಪಾದಕರ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ. ಅಲ್ಲದೇ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಿಂದ (POK) ಕಾರ್ಯನಿರ್ವಹಿಸುತ್ತಿರುವ ಇತರ 14 ಭಯೋತ್ಪಾದಕರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಶೀಘ್ರದಲ್ಲೇ ಎಲ್ಲಾ ಭಯೋತ್ಪಾದಕರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬಾಲಕಿಯನ್ನು ಅಪಹರಿಸಿ, ಒಂದೂವರೆ ತಿಂಗಳು ನಿರಂತರವಾಗಿ ರೇಪ್-‌ ವ್ಯಕ್ತಿ ಅರೆಸ್ಟ್

    ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುತ್ತಿರುವ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಘೋಷಿತ ಅಪರಾಧಿಗಳಾದ ಲಾಲ್ ದಿನ್‍ಗೆ ಸೇರಿದ ಕಿಶ್ತ್‍ವಾರ್‍ನ ಮುಗಲ್ ಮೈದಾನದಲ್ಲಿರುವ ಹಾಗೂ ಅಬ್ದುಲ್ ರಶೀದ್‍ಗೆ ಸೇರಿದ ಫಾಗ್ಸೂ ಥಾತ್ರಿ ಗ್ರಾಮದಲ್ಲಿರುವ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು 16 ಘೋರ ಭಯೋತ್ಪಾದಕ ಕೃತ್ಯಗಳಲ್ಲಿ ಈ ಇಬ್ಬರೂ ಭಾಗಿಯಾಗಿದ್ದಾರೆ. ಈ ಇಬ್ಬರೂ ತಲೆ ಮರೆಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಬಗ್ಗೆ ಮಾತನಾಡಿದ ದೋಡಾ ಎಸ್‍ಎಸ್‍ಪಿ ಅಬ್ದುಲ್ ಖಯ್ಯೂಮ್ ನ್ಯಾಯಾಲಯದ (Court) ಆದೇಶದಂತೆ ನಾವು 14 ಪ್ರಕರಣಗಳಲ್ಲಿ ಆಸ್ತಿ ವಿವರಗಳನ್ನು ಕಂದಾಯ ಇಲಾಖೆಯಿಂದ ಕೇಳುತ್ತಿದ್ದೇವೆ. ವಿವರ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚಾಲಕನಿಗೆ ತಲೆ ಸುತ್ತು ಬಂದು ಡಿವೈಡರ್‌ಗೆ ಡಿಕ್ಕಿಯಾಗಿ BMTC ವೋಲ್ವೋ ಬಸ್ ಪಲ್ಟಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಮ್ಮು ಕಾಶ್ಮೀರದ ಅಂಗಡಿಗಳ ಮೇಲೆ ಸೇನೆ ದಾಳಿ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಪತ್ತೆ

    ಜಮ್ಮು ಕಾಶ್ಮೀರದ ಅಂಗಡಿಗಳ ಮೇಲೆ ಸೇನೆ ದಾಳಿ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಪತ್ತೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರ ಜಿಲ್ಲೆಯ ಕೆಲವು ಅಂಗಡಿಗಳ ಮೇಲೆ ಭದ್ರತಾ ಪಡೆಗಳು (Indian Army) ದಾಳಿ ನಡೆಸಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.

    ಐದು ಎಕೆ 47 ರೈಫಲ್‍ಗಳು, ಏಳು ಪಿಸ್ತೂಲ್‍ಗಳು, ನಾಲ್ಕು ಹ್ಯಾಂಡ್ ಗ್ರೆನೇಡ್‍ಗಳು ಮತ್ತು ಸ್ಫೋಟಕ್ಕೆ ಬಳಸುವ ಅಪಾರ ಪ್ರಮಾಣದ ಮದ್ದುಗುಂಡುಗಳು ಪತ್ತೆಯಾಗಿದೆ. ಸ್ಫೋಟಕಗಳು ಹಾಗೂ ಅಧುನಿಕ ಶಸ್ತ್ರಾಸ್ತ್ರಗಳು ಹೇಗೆ ಇಲ್ಲಿಗೆ ತಲುಪಿವೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದರ ಹಿಂದಿರುವ ಸಂಘಟನೆಗಳು ಹಾಗೂ ವ್ಯಕ್ತಿಗಳ ಬಗ್ಗೆ ಸೇನೆ ಮಾಹಿತಿ ಕಲೆಹಾಕುತ್ತಿದೆ. ಇದನ್ನೂ ಓದಿ: ದೆಹಲಿಯಿಂದ ಪುಣೆಗೆ ಹೊರಡಬೇಕಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

    ಗುಪ್ತಚರ ಮಾಹಿತಿ ಮೇರೆಗೆ ಸೇನೆ ಕೆಲವು ಅಂಗಡಿಗಳ ಮೇಲೆ ದಾಳಿ ನಡೆಸಿದೆ. ಈ ವೇಳೆ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕಗಳು ಪತ್ತೆಯಾಗಿವೆ. ಸ್ಫೋಟಕಗಳ ಸಂಗ್ರಹದ ಹಿಂದೆ ವಿಧ್ವಂಸಕ ಕೃತ್ಯ ನಡೆಸುವ ಹುನ್ನಾರದ ಬಗ್ಗೆ ಸೇನೆಯ ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ.

    ಈ ಪ್ರದೇಶದ ಸುತ್ತಮುತ್ತಲಿನ ಇನ್ನೂ ಅನೇಕ ಸಣ್ಣ ಅಂಗಡಿಗಳು ಹಾಗೂ ಮನೆಗಳಲ್ಲಿ ಶಸ್ತ್ರಾಸ್ತ್ರಗಳು ಇರುವ ಶಂಕೆ ಇದೆ. ಈ ಬಗ್ಗೆ ಶೋಧ ಕಾರ್ಯ ನಡೆಸಲಾಗುತ್ತಿದೆ. ಸ್ವಾತಂತ್ರ್ಯ ದಿನದಂದು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಲಾಗಿತ್ತೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಕಳೆದ ಮೂರು ದಿನಗಳಿಂದ ಈ ಬಗ್ಗೆ ಗಮನ ಇಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶ್ವಾನಗಳಿಂದಾಗಿ ಜಗಳ- ನೆರೆಮನೆಯ ಇಬ್ಬರನ್ನು ಗುಂಡಿಕ್ಕಿ ಕೊಂದ ವ್ಯಕ್ತಿ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡ ಹಿಜ್ಬುಲ್ ಭಯೋತ್ಪಾದಕನ ಸಹೋದರ

    ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡ ಹಿಜ್ಬುಲ್ ಭಯೋತ್ಪಾದಕನ ಸಹೋದರ

    ಶ್ರೀನಗರ: ಸ್ವಾತಂತ್ರ್ಯ ದಿನಾಚರಣೆಗೂ (Independence Day) ಮುನ್ನ ಹಿಜ್ಬುಲ್ ಭಯೋತ್ಪಾದಕನ (Hizbul Terrorist) ಸಹೋದರ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಸೋಪೋರ್‌ನಲ್ಲಿರುವ ತನ್ನ ನಿವಾಸದಲ್ಲಿ ರಾಷ್ಟ್ರಧ್ವಜ ಹಾರಿಸಿ ಹರ್ ಘರ್ ತಿರಂಗಾ (Har Ghar Tiranga) ಅಭಿಯಾನದಲ್ಲಿ ಪಾಲ್ಗೊಂಡಿದ್ದಾನೆ.

    ಹಿಜ್ಬುಲ್ ಭಯೋತ್ಪಾದಕ ಜಾವಿದ್ ಮಟ್ಟೂ (Javid Mattoo) ಸಹೋದರ ರಯೀಸ್ ಮಟ್ಟೂ ತನ್ನ ಮನೆಯ ಹೊರಗಡೆ ತ್ರಿವರ್ಣ ಧ್ವಜವನ್ನು ಹಾರಿಸಿರುವುದು ವೀಡಿಯೋವೊಂದರಲ್ಲಿ ಕಂಡುಬಂದಿದೆ. ಜಾವಿದ್ ಮಟ್ಟೂ ಹಿಜ್ಬುಲ್ ಮುಜೈದೀನ್ ಭಯೋತ್ಪಾದಕ ಮುಜೈದೀನ್ ಸಂಘಟನೆಗೆ ಸಂಬಂಧಿಸಿದ ಸಕ್ರಿಯ ಭಯೋತ್ಪಾದಕ. ಭದ್ರತಾ ಏಜೆನ್ಸಿಗಳು ಗುರಿಯಾಗಿಸಿಕೊಂಡಿರುವ ಟಾಪ್ 10 ಭಯೋತ್ಪಾದಕರ ಪಟ್ಟಿಯಲ್ಲಿ ಈತನೂ ಸೇರಿದ್ದಾನೆ.

    ಪ್ರಧಾನಿ ನರೇಂದ್ರ ಮೋದಿ ಸ್ವತಂತ್ರ್ಯ ದಿನಾಚರಣೆಗೂ ಮುನ್ನ ಆಗಸ್ಟ್ 13ರಿಂದ 15ರ ವರೆಗೆ ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗವಹಿಸುವಂತೆ ಜನರಿಗೆ ಕರೆ ನೀಡಿದ್ದಾರೆ. ಭಾನುವಾರ ಶ್ರೀನಗರದಲ್ಲಿ ಬೃಹತ್ ‘ತಿರಂಗ’ ರ‍್ಯಾಲಿಯನ್ನು ಕೈಗೊಳ್ಳಲಾಯಿತು. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: 7 ವರ್ಷಗಳ ಬಳಿಕ ಭಾರತದ ವಿರುದ್ಧ T20 ಸರಣಿ ಜಯ – ಹೊಸ ದಾಖಲೆ ಬರೆದ ವಿಂಡೀಸ್‌

    ಜಮ್ಮು ಮತ್ತು ಕಾಶ್ಮೀರದಲ್ಲಿ ತಿರಂಗಾ ಎತ್ತಲು ಯಾರೂ ಉಳಿಯುವುದಿಲ್ಲ ಎಂದು ಹೇಳುತ್ತಿದ್ದ ಅವರು, ಜಮ್ಮು ಮತ್ತು ಕಾಶ್ಮೀರದ ಪ್ರತಿಯೊಬ್ಬ ಯುವಕರು ದೇಶದ ಇತರ ಭಾಗದ ಜನರಂತೆ ರಾಷ್ಟ್ರಧ್ವಜವನ್ನು ಪ್ರೀತಿಸುತ್ತಾರೆ ಎಂದು ಅರ್ಥಮಾಡಿಕೊಂಡಿದ್ದಾರೆ ಎಂದು ಮನೋಜ್ ಸಿನ್ಹಾ ಯಾವುದೇ ಹೆಸರನ್ನು ಎತ್ತದೇ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಭಾನುವಾರ ರಾತ್ರಿ ಗೆಹ್ಲೋಟ್ ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆ ಸಕ್ರಿಯ – ಈವರೆಗೂ ಹತರಾದ ಉಗ್ರರ ಸಂಖ್ಯೆ ಎಷ್ಟು?

    ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆ ಸಕ್ರಿಯ – ಈವರೆಗೂ ಹತರಾದ ಉಗ್ರರ ಸಂಖ್ಯೆ ಎಷ್ಟು?

    ನವದೆಹಲಿ: ಕಳೆದ ವರ್ಷ ಭದ್ರತಾ ಪಡೆಗಳು (Indian Army) ನಡೆಸಿದ ಎನ್‍ಕೌಂಟರ್‌ನಲ್ಲಿ 187 ಉಗ್ರರು (Terrorist) ಹತರಾಗಿದ್ದರು. ಈ ವರ್ಷ ಜುಲೈ 20ರವರೆಗೆ 35 ಉಗ್ರರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ. ಈ ಪೈಕಿ 27 ವಿದೇಶಿ ಹಾಗೂ 8 ಸ್ಥಳೀಯ ಭಯೋತ್ಪಾದಕರು ಸೇರಿದ್ದಾರೆ ಎಂದು ವರದಿಯಾಗಿದೆ.

    ಸೇನಾ ಮೂಲಗಳು ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಭದ್ರತಾ ಪಡೆಗಳ ಗುಂಡಿಗೆ ಹತರಾದ ಭಯೋತ್ಪಾದಕರ ಮಾಹಿತಿಯನ್ನು ಹಂಚಿಕೊಂಡಿದೆ. ಈ ಮಾಹಿತಿಗಳ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಯಾವುದೇ ದೊಡ್ಡ ಒಳನುಸುಳುವಿಕೆ ನಡೆದಿಲ್ಲ. ಆದರೂ ಕಾಶ್ಮೀರದಲ್ಲಿ 71 ಪಾಕಿಸ್ತಾನಿ ಭಯೋತ್ಪಾದಕರು ಇದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಸಂಸತ್ತಿನಲ್ಲಿ ಅಂಗೀಕಾರವಾಗಿದ್ದ 4 ಮಸೂದೆಗಳಿಗೆ ರಾಷ್ಟ್ರಪತಿ ಸಹಿ

    ಸ್ಥಳೀಯ ಭಯೋತ್ಪಾದಕರ ಶರಣಾಗತಿಗೆ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತದೆ. ಆದರೆ ಹೆಚ್ಚಿನ ಯಶಸ್ಸು ಇಲ್ಲಿ ಸಿಕ್ಕಿಲ್ಲ. 2018 ರಲ್ಲಿ ಒಬ್ಬ, 2020 ರಲ್ಲಿ 8, 2021 ರಲ್ಲಿ 2 ಮತ್ತು 2022 ರಲ್ಲಿ ಕೇವಲ ಇಬ್ಬರು ಭಯೋತ್ಪಾದಕರು ಶರಣಾಗಿದ್ದಾರೆ. ಆಗಾಗ ಸ್ಥಳೀಯ ಯುವಕರು ನಾಪತ್ತೆಯಾಗುತ್ತಾರೆ. ಅವರನ್ನು ಕುಟುಂಬಸ್ಥರು ಮತ್ತು ಜಮ್ಮು ಕಾಶ್ಮೀರ ಪೊಲೀಸರು ಹುಡುಕಾಟ ನಡೆಸುವ ಹೊತ್ತಿಗೆ ಆ ಯುವಕರು ಭಯೋತ್ಪಾದಕ ಸಂಘಟನೆಯ ಸದಸ್ಯನಂತೆ ಶಸ್ತ್ರಾಸ್ತ್ರಗಳನ್ನು ಹಿಡಿದಿರುವ ಚಿತ್ರಗಳು ವೈರಲ್ ಆಗುತ್ತವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ದಾರಿ ತಪ್ಪಿದ ಯುವಕರನ್ನು ಭಯೋತ್ಪಾದಕ ಸಂಘಟನೆಗಳು ಬ್ರೈನ್ ವಾಶ್ ಮಾಡುತ್ತವೆ. ಇದಾದ ಬಳಿಕವೂ ಯುವಕರು ಇನ್ನೂ ಸಂಪೂರ್ಣವಾಗಿ ಭಯೋತ್ಪಾದನೆಯ ಹಾದಿಯನ್ನು ಅನುಸರಿಸಲು ಸಿದ್ಧವಾಗಿಲ್ಲ ಮತ್ತು ಮುಖ್ಯವಾಹಿನಿಗೆ ಮರಳಲು ಬಯಸುತ್ತಾನೆ ಎಂದು ಸಂಘಟನೆಗಳು ಭಾವಿಸಿದಾಗ ಅಂತಹ ಯುವಕನ ಫೋಟೋವನ್ನು ಭಯೋತ್ಪಾದಕ ಸಂಘಟನೆಯೊಂದಿಗೆ ವೈರಲ್ ಮಾಡುತ್ತಾರೆ. ಇದಾದ ನಂತರ ಯುವಕರು ಅತಂತ್ರದಲ್ಲಿ ಸಿಲುಕಿಕೊಂಡು ಮುಖ್ಯವಾಹಿನಿಗೆ ಮರಳಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಸಂಘಟನೆಗಳು 2018 ರಲ್ಲಿ 187, 2019 ರಲ್ಲಿ 121, 2020 ರಲ್ಲಿ 181, 2021 ರಲ್ಲಿ 142, 2022 ರಲ್ಲಿ 91 ಯುವಕರನ್ನು ನೇಮಕ ಮಾಡಿಕೊಂಡಿವೆ. ಸದ್ಯ 109 ಉಗ್ರರು ಸಕ್ರಿಯರಾಗಿದ್ದಾರೆ. ಇವರಲ್ಲಿ 38 ಮಂದಿ ಸ್ಥಳೀಯರು ಹಾಗೂ 71 ಮಂದಿ ವಿದೇಶಿಗರು. ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಐಬಿ, ಸೇನೆ ಮತ್ತು ಇತರ ಏಜೆನ್ಸಿಗಳು ಭಯೋತ್ಪಾದಕರ ಅಡಗುತಾಣವನ್ನು ತಲುಪಲು ಪ್ರಯತ್ನಿಸುತ್ತಿವೆ. ಭೂಗತವಾಗಿರುವ ವಿದೇಶಿ ಭಯೋತ್ಪಾದಕರು ಹೈಬ್ರೀಡ್ ಭಯೋತ್ಪಾದಕರ ಮೂಲಕ ತಮ್ಮ ಟಾರ್ಗೆಟ್‍ನತ್ತ ಕೆಲಸ ಮಾಡುತ್ತಿವೆ ಎಂಬ ಮಾಹಿತಿ ತಿಳಿದು ಬಂದಿದೆ. ಇದನ್ನೂ ಓದಿ: ಯಾರೋ ಹುಡುಗರು ಮಾಡಿದ್ದಾರೆ, ಟ್ವೀಟ್‌ ವಿಥ್‌ ಡ್ರಾ ಮಾಡಿಸಿದ್ದೇನೆ: ಡಿಕೆ ಶಿವಕುಮಾರ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಳನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಒಳನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ (Poonch) ಜಿಲ್ಲೆಯಲ್ಲಿನ ಗಡಿ ನಿಯಂತ್ರಣ ರೇಖೆಯಲ್ಲಿ (LoC) ಸೋಮವಾರ ಭದ್ರತಾ ಪಡೆಗಳು ಗಡಿಯಾಚೆಯಿಂದ ಒಳನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕನನ್ನು (Terrorist) ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದೆಗ್ವಾರ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳು ಕೆಲ ಭಯೋತ್ಪಾದಕರ ಚಲನವಲನಗಳನ್ನು ಗಮನಿಸಿದ್ದು, ಬಳಿಕ ಒಳನುಸುಳಲು ಪ್ರಯತ್ನಿಸುತ್ತಿದ್ದುದನ್ನು ಗಮನಿಸಿ ಅವರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಒಬ್ಬ ಭಯೋತ್ಪಾದಕ ಸಾವನ್ನಪ್ಪಿದ್ದಾನೆ. ಆದರೆ ಆತನ ಮೃತದೇಹವನ್ನು ಇನ್ನೂ ಪಡೆಯಲಾಗಿಲ್ಲ ಎಂದು ಹೇಳಿದ್ದಾರೆ.

    ಸೋಮವಾರ ಮುಂಜಾನೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪೂಂಚ್‌ನಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಇಬ್ಬರು ಭಯೋತ್ಪಾದಕರು ಗಡಿ ಪ್ರವೇಶಿಸಲು ಪ್ರಯತ್ನಿಸಿದ್ದು, ಅದರಲ್ಲಿ ಒಬ್ಬನನ್ನು ಕೊಲ್ಲಲಾಗಿದೆ. ಇನ್ನೊಬ್ಬ ಭಯೋತ್ಪಾದಕ ಹಿಂದಕ್ಕೆ ಓಡಲು ಪ್ರಯತ್ನಿಸಿದ್ದಾನೆ. ಕಾರ್ಯಾಚರಣೆ ಮುಂದುವರಿಯುತ್ತಿದೆ ಎಂದು ಜಮ್ಮುವಿನ ಪಿಆರ್‌ಒ (ರಕ್ಷಣಾ) ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬರ್ತ್ವಾಲ್ ಹೇಳಿದ್ದಾರೆ. ಇದನ್ನೂ ಓದಿ: ಮತ್ತೆ ಸೊಂಟಕ್ಕೆ ಪೆಟ್ಟು- ವೃಕ್ಷ ಮಾತೆ ಆಸ್ಪತ್ರೆಗೆ ದಾಖಲು

    ಪ್ರಸ್ತುತ ಘಟನೆಗೆ ಸಂಬಂಧಿಸಿದಂತೆ ಇಡೀ ಪ್ರದೇಶದಲ್ಲಿ ಭದ್ರತಾ ಪಡೆಗಳು ಸುತ್ತುವರಿದಿದ್ದು, ಭಾರೀ ಶೋಧ ನಡೆಯುತ್ತಿದೆ. ಇದನ್ನೂ ಓದಿ: ಇಂದು ಮಹತ್ವದ ಕಾವೇರಿ ನೀರಾವರಿ ಸಲಹಾ ಸಭೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ರಾಜೌರಿ (Rajouri) ಜಿಲ್ಲೆಯ ಬರಿಯಾಮ ಪ್ರದೇಶದಲ್ಲಿ ಭಯೋತ್ಪಾದಕರು (Terrorists) ಮತ್ತು ಭದ್ರತಾ ಪಡೆಗಳ (Security Force) ನಡುವೆ ಎನ್‌ಕೌಂಟರ್ (Encounter) ನಡೆದಿದ್ದು, ಒಬ್ಬ ಭಯೋತ್ಪಾದಕನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ ಎಂದು ವರದಿಗಳು ತಿಳಿಸಿವೆ.

    ಭಾರತೀಯ ಸೇನೆಯ ಪ್ಯಾರಾ ಕಮಾಂಡೋಗಳು ಕೂಡಾ ಎನ್‌ಕೌಂಟರ್‌ನಲ್ಲಿ ತೊಡಗಿದ್ದು, ಘಟನಾ ಪ್ರದೇಶವನ್ನು ಭಾರತೀಯ ಸೇನೆ ಸುತ್ತುವರೆದಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಆನ್‌ಲೈನ್‌ನಲ್ಲೇ ಪಾಕಿಸ್ತಾನದ ವಧುವನ್ನು ವರಿಸಿದ ರಾಜಸ್ಥಾನದ ವರ

    ಶನಿವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಖಾವಸ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದ್ದು, ಗುಂಡಿನ ದಾಳಿಯಲ್ಲಿ ಒಬ್ಬ ಭಯೋತ್ಪಾದಕ ಹತ್ಯೆಯಾಗಿದ್ದಾನೆ. ಸ್ಥಳದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪನ – ದೆಹಲಿ, ಪಂಜಾಬ್​ನಲ್ಲೂ ನಡುಗಿದ ಭೂಮಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ – ಮೂವರು ಯೋಧರು ಹುತಾತ್ಮ

    ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ – ಮೂವರು ಯೋಧರು ಹುತಾತ್ಮ

    ಶ್ರೀನಗರ: ಸೇನೆ (Indian Army) ಹಾಗೂ ಉಗ್ರರ (Terrorists) ನಡುವೆ ನಡೆದ ಗುಂಡಿನ ಚಕಮುಕಿಯಲ್ಲಿ ಮೂವರು ಯೋಧರು (Soldiers) ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಮ್‍ನಲ್ಲಿ (Kulgam) ನಡೆದಿದೆ.

    ಹಾಲನ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇಲೆ ಸೇನೆ ಹಾಗೂ ಪೊಲೀಸರು ಶುಕ್ರವಾರ ಸಂಜೆಯಿಂದಲೇ ಎನ್‍ಕೌಂಟರ್ ಪ್ರಾರಂಭಿಸಿದ್ದಾರೆ. ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೇ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಯುತ್ತಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಇದನ್ನೂ ಓದಿ: ಮೈಸೂರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

    ಗುಂಡಿನ ದಾಳಿ ನಡೆಸಿ ಬಳಿಕ ಭಯೋತ್ಪಾದಕರಿಂದ ಯಾವುದೇ ಪ್ರತಿಕ್ರಿಯೆ ಇಲ್ಲದಿರುವಾಗ ಉಗ್ರರು ಮೃತಪಟ್ಟಿದ್ದಾರೆ ಎಂದು ಸೇನೆ ಹುಡುಕಾಟ ಆರಂಭಿಸಿದೆ. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ನಿಯೋಜಿಸಲಾಗಿದೆ. ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

    ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ದಾಳಿಯಲ್ಲಿ ಐವರು ಮುಖ್ಯ ಕಮಾಂಡೋಗಳು ಸೇರಿದಂತೆ 10 ಸೈನಿಕರು ಹುತಾತ್ಮರಾಗಿದ್ದರು. ಇದನ್ನೂ ಓದಿ: ಬೇಲ್ ಮೇಲೆ ರಿಲೀಸ್ ಆಗ್ತಿದ್ದಂತೆ ರೌಡಿಶೀಟರ್ ಮರ್ಡರ್ – ಮಗ ಬರ್ತಾನೆ ಅಂತ ಮಟನ್ ಚಾಪ್ಸ್ ಮಾಡ್ತಿದ್ಲು ತಾಯಿ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಗೂಢವಾಗಿ ನಾಪತೆಯಾಗಿದ್ದ ಕಾಶ್ಮೀರದ ಯೋಧ ವಾರದ ಬಳಿಕ ಪತ್ತೆ

    ನಿಗೂಢವಾಗಿ ನಾಪತೆಯಾಗಿದ್ದ ಕಾಶ್ಮೀರದ ಯೋಧ ವಾರದ ಬಳಿಕ ಪತ್ತೆ

    ಶ್ರೀನಗರ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಿಂದ (Jammu and Kashmir) ನಾಪತ್ತೆಯಾಗಿದ್ದ ಭಾರತೀಯ ಸೇನಾ ಯೋಧನನ್ನು (Indian Army) ಪೊಲೀಸರು ಪತ್ತೆಹಚ್ಚಿದ್ದಾರೆ. ನಿಗೂಢವಾಗಿ ನಾಪತ್ತೆಯಾಗಿ ಸುಮಾರು ಒಂದು ವಾರದ ಬಳಿಕ ಪ್ರಕರಣಕ್ಕೆ ಪೊಲೀಸರು (Police) ಅಂತ್ಯ ಹಾಡಿದ್ದಾರೆ.

    ನಾಪತ್ತೆಯಾಗಿದ್ದ ಸೇನಾ ಯೋಧನನ್ನು ಕುಲ್ಗಾಮ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವೈದ್ಯಕೀಯ ತಪಾಸಣೆಯ ನಂತರ ಜಂಟಿ ವಿಚಾರಣೆ ಆರಂಭವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಗೆ ತೆರಳಿದ್ದ ಯೋಧನ ಕಿಡ್ನ್ಯಾಪ್ – ಸೇನೆಯಿಂದ ತೀವ್ರ ಹುಡುಕಾಟ

    ಯೋಧನ ನಾಪತ್ತೆ ಪ್ರಕರಣದ ಬಗ್ಗೆ ಪೊಲೀಸರು ಈ ಹಿಂದೆ ಯಾವುದೇ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ. ಆದರೂ ಅವರನ್ನು ಭಯೋತ್ಪಾದಕರು ಅಪಹರಿಸಿರಬಹುದು ಎಂಬ ಆತಂಕವಿತ್ತು. ಆದರೆ ಯಾವುದೇ ಉಗ್ರಗಾಮಿ ಸಂಘಟನೆಗಳು ಅವರ ಅಪಹರಣದ ಹೊಣೆಯನ್ನು ಹೊತ್ತುಕೊಂಡಿರಲಿಲ್ಲ.

    ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜವಾನರನ್ನು ಅಪಹರಿಸಿದ ಪ್ರಕರಣಗಳು ಹಲವಾರು ಬಾರಿ ಸಂಭವಿಸಿವೆ. ಇದೇ ಕಾರಣಕ್ಕೆ ಅವರನ್ನು ಉಗ್ರರು ಅಪಹರಿಸಿದ್ದ ಶಂಕೆ ವ್ಯಕ್ತವಾಗಿತ್ತು. ಯೋಧನ ಹುಡುಕಾಟ ನಡೆಸುವಂತೆ ಈ ಹಿಂದೆ ಆತನ ಕುಟುಂಬ ಕೇಂದ್ರಕ್ಕೆ ಮನವಿ ಮಾಡಿತ್ತು.

    ಲಡಾಖ್‍ನಲ್ಲಿ ನಿಯೋಜನೆಗೊಂಡಿದ್ದ ಜಾವೆದ್ ಅಹ್ಮದ್ ವಾನಿ (25) ಅವರು ರಜೆ ಮೇಲೆ ಮನೆಗೆ ತೆರಳಿದ್ದರು. ಈ ವೇಳೆ ಅವರು ಕಳೆದ ಜು.29ರ ಸಂಜೆ ಮನೆಯಿಂದ ಅಂಗಡಿಯೊಂದಕ್ಕೆ ತೆರಳಿದ್ದರು. ಬಳಿಕ ನಿಗೂಢವಾಗಿ ಕುಲ್ಗಾಮ್‍ನಿಂದ ಅವರು ನಾಪತ್ತೆಯಾಗಿದ್ದರು. ಅಲ್ಲದೇ ಕಾರಿನಲ್ಲಿ ಅವರ ಚಪ್ಪಲಿ ಹಾಗೂ ರಕ್ತದ ಕಲೆಗಳು ಪತ್ತೆಯಾಗಿತ್ತು ಇದರಿಂದ ಇನ್ನೂ ಆತಂಕ ಹೆಚ್ಚಾಗಿತ್ತು. ಅಲ್ಲದೇ ಅವರನ್ನು ಉಗ್ರಗಾಮಿಗಳು ಅಪಹರಿಸಿರಬಹುದು ಎಂದು ಶಂಕಿಸಲಾಗಿತ್ತು. ಇದನ್ನೂ ಓದಿ: ಸಿರಿಯಾ ಘರ್ಷಣೆಯಲ್ಲಿ ಐಸಿಸ್ ನಾಯಕ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಂದೂಗಳ ಪವಿತ್ರ ‘ಅಮರನಾಥ ಯಾತ್ರೆ’ ಆರಂಭ

    ಹಿಂದೂಗಳ ಪವಿತ್ರ ‘ಅಮರನಾಥ ಯಾತ್ರೆ’ ಆರಂಭ

    ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರೆ ಅಮರನಾಥ ಯಾತ್ರೆಗೆ (Amarnath Yatra 2023) ಚಾಲನೆ ಸಿಕ್ಕಿದೆ. ಯಾತ್ರಾರ್ಥಿಗಳ ಮೊದಲ ಬ್ಯಾಚ್‌ಗೆ ಹಸಿರು ನಿಶಾನೆ ತೋರಿಸಲಾಗಿದೆ.

    ಬಾಲ್ಟಾಲ್ ಬೇಸ್ ಕ್ಯಾಂಪ್‌ನಲ್ಲಿ ಶ್ರೀ ಅಮರನಾಥ ಜಿ ಪುಣ್ಯಕ್ಷೇತ್ರ ಮಂಡಳಿಯ ಹಿರಿಯ ಅಧಿಕಾರಿಗಳು ಮತ್ತು ಪೊಲೀಸರೊಂದಿಗೆ ಗಂದರ್‌ಬಾಲ್ ಉಪ ಆಯುಕ್ತ ಶ್ಯಾಂಬೀರ್ ಯಾತ್ರೆಗೆ ಚಾಲನೆ ನೀಡಿದರು. ಇದನ್ನೂ ಓದಿ: ಒಡಿಶಾ ರೈಲು ದುರಂತ – ಸಿಗ್ನಲಿಂಗ್, ಟ್ರಾಫಿಕ್ ಕಂಟ್ರೋಲ್ ವಿಭಾಗಗಳೇ ಹೊಣೆ

    62 ದಿನಗಳ ಅಮರನಾಥ ಯಾತ್ರೆಯು ಪ್ರಾರಂಭವಾಗಿದ್ದು, ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಬಲ್ಟಾಲ್ ಬೇಸ್ ಕ್ಯಾಂಪ್‌ನಿಂದ ಗುಹೆ ದೇಗುಲಕ್ಕೆ ಯಾತ್ರಿಕರು ಹೊರಟಿದ್ದಾರೆ. ಬಿಗಿ ಭದ್ರತೆಯ ನಡುವೆ ಶನಿವಾರ ಮುಂಜಾನೆ ಯಾತ್ರಾರ್ಥಿಗಳು ಬೇಸ್ ಕ್ಯಾಂಪ್‌ನಿಂದ ನಿರ್ಗಮಿಸಿದರು.

    ಮೊದಲ ಬ್ಯಾಚ್‌ನಲ್ಲಿ 7 ರಿಂದ 8 ಸಾವಿರ ಮಂದಿ ಯಾತ್ರಾರ್ಥಿಗಳಿದ್ದಾರೆ. ಬೇಸ್ ಕ್ಯಾಂಪ್‌ನಿಂದ ಸುಮಾರು 13,000 ಅಡಿ ಎತ್ತರದಲ್ಲಿರುವ ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ ಪವಿತ್ರ ಅಮರನಾಥ ಗುಹೆಯ ದೇಗುಲಕ್ಕೆ 12 ಕಿಮೀ ಪ್ರಯಾಣವನ್ನು ಕೈಗೊಂಡಿದ್ದಾರೆ. 62 ದಿನಗಳ ಯಾತ್ರೆಯು ಆಗಸ್ಟ್ 31 ರಂದು ಮುಕ್ತಾಯಗೊಳ್ಳಲಿದೆ. ಕಳೆದ ಬಾರಿ ಮೇಘಸ್ಪೋಟ ಸಂಭವಿಸಿ ಯಾತ್ರಿಗಳು ನಾನಾ ತೊಂದರೆ ಅನುಭವಿಸಿದ್ದರು. ಹೀಗಾಗಿ ಈ ಬಾರಿ ಹೆಚ್ಚಿನ ನಿಗಾ ವಹಿಸಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭೀಕರ ಬಸ್‌ ದುರಂತ – 25 ಮಂದಿ ಸಜೀವ ದಹನ

    ಇಂದು ನಾವು ಪ್ರಯಾಣಿಕರ ಮೊದಲ ಬ್ಯಾಚ್‌ನ್ನು ಕಳುಹಿಸುತ್ತಿದ್ದೇವೆ. ಎಲ್ಲರಿಗೂ ಪ್ರಯಾಣ ಸುಖಕರವಾಗಿರಲಿ. ನಮ್ಮ ಸ್ವಯಂಸೇವಕರು ಸಹಾಯ ಮಾಡಲು ಎಲ್ಲೆಡೆ ಇದ್ದಾರೆ ಎಂದು ಶ್ಯಾಂಬಿರ್ ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಡಿ ನುಸುಳಲು ಉಗ್ರರ ಸಂಚು – ಸೇನೆಯಿಂದ ಓರ್ವನ ಎನ್‍ಕೌಂಟರ್

    ಗಡಿ ನುಸುಳಲು ಉಗ್ರರ ಸಂಚು – ಸೇನೆಯಿಂದ ಓರ್ವನ ಎನ್‍ಕೌಂಟರ್

    ಶ್ರೀನಗರ: ಉಗ್ರರು ಹಾಗೂ ಸೇನೆಯ (Indian Army) ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕ ಸಾವಿಗೀಡಾಗಿದ್ದಾನೆ. ಘಟನೆಯಲ್ಲಿ ಸೇನೆಯ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

    ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ಮಧ್ಯರಾತ್ರಿ ಉಗ್ರರು ದೇಶದ ಗಡಿ ನುಸುಳಲು ಪ್ರಯತ್ನಿಸಿದ್ದಾರೆ. ಇದು ಸೇನೆಯ ಗಮನಕ್ಕೆ ಬಂದಿದ್ದು ಉಗ್ರರನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸೇನೆಯು ಗುಂಡಿನ ದಾಳಿ ನಡೆಸಿದೆ. ಈ ವೇಳೆ ಓರ್ವ ಮೃತಪಟ್ಟಿದ್ದಾನೆ. ಇದನ್ನೂ ಓದಿ: ನೋವು ಹೇಳಿಕೊಂಡ ಬಡ ಮಹಿಳೆಗೆ ತಾವೇ ಶಸ್ತ್ರಚಿಕಿತ್ಸೆ ಮಾಡಿದ MLA ರಂಗನಾಥ್

    ಭಯೋತ್ಪಾದಕನಿಂದ ಶಸ್ತ್ರಾಸ್ತ್ರಗಳನ್ನು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಡಗಿರುವ ಉಗ್ರರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಅಲ್ಲದೇ ಗುಂಡಿನ ದಾಳಿ ನಡೆಸಲು ಅನುಕೂಲವಾಗುವಂತೆ ಉಗ್ರರು ನಿರ್ಮಿಸಿಕೊಂಡಿದ್ದ ಅಡಗುದಾಣಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ.

    ಕಳೆದ ವಾರ ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಕಾಲಾ ಜಂಗಲ್ ಪ್ರದೇಶದಲ್ಲಿ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸಿ ಭಯೋತ್ಪಾದಕರ ಒಳನುಸುಳುವಿಕೆ ತಡೆದಿತ್ತು. ಈ ವೇಳೆ ಭದ್ರತಾ ಪಡೆಗಳು ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿತ್ತು. ಇದನ್ನೂ ಓದಿ: ಸಲ್ಮಾನ್ ಖಾನ್ ಕೊಲ್ಲುವುದೇ ನನ್ನ ಗುರಿ : ಗ್ಯಾಂಗ್ ಸ್ಟರ್ ಗೋಲ್ಡಿ ಬಹಿರಂಗ ಹೇಳಿಕೆ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]