Tag: ಜಮ್ಮು ಮತ್ತು ಕಾಶ್ಮೀರ

  • Breakingː ಜಮ್ಮು-ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ

    Breakingː ಜಮ್ಮು-ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ (NewDelhi) ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಕಂಪನದ (Earthquake) ಅನುಭವವಾಗಿದೆ.

    ಮಂಗಳವಾರ ಮಧ್ಯಾಹ್ನ 1.30ರ ನಂತರ ಕೆಲ ಸೆಕೆಂಡುಗಳ ಭೂಮಿ ಕಂಪಿಸಿದೆ. ಆದ್ರೆ ಯಾವುದೇ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಭೂಕಂಪನದ ತೀವ್ರತೆ 5.4 ರಷ್ಟಿದ್ದು, ಜಮ್ಮು ಮತ್ತು ಕಾಶ್ಮೀರದ (Jammu And Kashmir) ದೋಡಾ ಜಿಲ್ಲೆಯಲ್ಲಿ ಭೂಮಿಯ 6 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ ಟ್ವೀಟ್‌ ಮೂಲಕ ತಿಳಿಸಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರ, ದೆಹಲಿಯಲ್ಲಿ ಭೂಕಂಪನ – ಮನೆಯಿಂದ ಹೊರಗಡೆ ಬಂದ ಜನ

    ಪ್ರಾಥಮಿಕ ವರದಿಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಗಂಡೋ ಭಾಲೆಸ್ಸಾ ಗ್ರಾಮದ ಬಳಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ. ಇದನ್ನೂ ಓದಿ: ದೆಹಲಿ ಬೆನ್ನಲ್ಲೇ ಪಾಕಿಸ್ತಾನದಲ್ಲೂ ಪ್ರಬಲ ಭೂಕಂಪ – 9 ಮಂದಿ ಸಾವು

  • ಗಡಿಯಲ್ಲಿ ಪಾಕಿಸ್ತಾನದ ನಿಗೂಢ ಬಲೂನ್ ಪತ್ತೆ – ಸೇನೆಯಿಂದ ಶೋಧ ಕಾರ್ಯ

    ಗಡಿಯಲ್ಲಿ ಪಾಕಿಸ್ತಾನದ ನಿಗೂಢ ಬಲೂನ್ ಪತ್ತೆ – ಸೇನೆಯಿಂದ ಶೋಧ ಕಾರ್ಯ

    ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ (Pakistan International Airlines) ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.

    ಕಪ್ಪು ಬಿಳುಪು ಬಣ್ಣದ ನಿಗೂಢ ಬಲೂನ್ ನೆಲದ ಮೇಲೆ ಬಿದ್ದಿರುವುದು ಕಂಡು ಬಂದಿದೆ. ಭದ್ರತಾ ಪಡೆಗಳು (Border Security Forces) ಅದನ್ನು ವಶಪಡಿಸಿಕೊಂಡಿವೆ. ಬಲೂನ್ ಎಲ್ಲಿಂದ ಬಂದಿದೆ ಎಂದು ತನಿಖೆ ಮಾಡಲು ಪ್ರದೇಶದಲ್ಲಿ ಸೇನೆಯಿಂದ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಇದನ್ನೂ ಓದಿ: ಗಡಿದಾಟಿ ಬಂದ ಬಾಂಗ್ಲಾ ಯೋಧರನ್ನು ಓಡಿಸಿದ ಮೇಘಾಲಯ ಗ್ರಾಮಸ್ಥರು

    ಕಳೆದ ಫೆಬ್ರವರಿಯಲ್ಲಿ ಇದೇ ರೀತಿಯ ವಿಮಾನದ ಆಕಾರದ ಹಸಿರು ಮತ್ತು ಬಿಳಿ ಬಲೂನ್ ಶಿಮ್ಲಾದಲ್ಲಿ ಪತ್ತೆಯಾಗಿತ್ತು. ಅದರ ಮೇಲೆ ಸಹ ಪಿಐಎ (PIA) ಲೋಗೋವನ್ನು ಮುದ್ರಿಸಲಾಗಿತ್ತು. ಮೇ 20 ರಂದು ಅಮೃತಸರದಲ್ಲಿ ಮಾದಕ ವಸ್ತುಗಳನ್ನು ಹೊಂದಿದ್ದ ಪಾಕಿಸ್ತಾನದ (Pakistan) ಡ್ರೋನ್‍ನ್ನು ಸೇನೆ ಹೊಡೆದುರುಳಿಸಿತ್ತು.

    ಅಲ್ಲದೇ ಇತ್ತೀಚೆಗೆ ಸೇನೆ ನಾಲ್ಕು ಪಾಕಿಸ್ತಾನಿ ಡ್ರೋನ್‍ಗಳನ್ನು ಗಡಯಲ್ಲಿ ತಡೆದಿತ್ತು. ಅವುಗಳಲ್ಲಿ ಮೂರನ್ನು ಪಂಜಾಬ್‍ನ (Punjab) ಅಂತರರಾಷ್ಟ್ರೀಯ ಗಡಿಯಲ್ಲಿ ಹೊಡೆದುರುಳಿಸಿತ್ತು.‌ ಇದನ್ನೂ ಓದಿ: ಪ್ರೇಯಸಿಯನ್ನು ಕೊಂದು ಟ್ಯಾಂಕ್‌ನಲ್ಲಿ ಬಚ್ಚಿಟ್ಟ ಭೂಪ ಅಂಧರ್

  • ಶಾಲೆಯಲ್ಲಿ ಅಬಯಾ ಧರಿಸಬಾರದು ಎಂದಿದ್ದಕ್ಕೆ ಪ್ರಿನ್ಸಿಪಾಲ್‌ಗೆ ಭಯೋತ್ಪಾದಕರಿಂದ ಬೆದರಿಕೆ

    ಶಾಲೆಯಲ್ಲಿ ಅಬಯಾ ಧರಿಸಬಾರದು ಎಂದಿದ್ದಕ್ಕೆ ಪ್ರಿನ್ಸಿಪಾಲ್‌ಗೆ ಭಯೋತ್ಪಾದಕರಿಂದ ಬೆದರಿಕೆ

    ಶ್ರೀನಗರ: ಶಾಲೆಯಲ್ಲಿ ವಸ್ತ್ರಸಂಹಿತೆ (Dress Code) ಅನ್ನು ಅನುಸರಿಸಬೇಕಾಗಿ ಆದೇಶಿಸಿದ ಪ್ರಾಂಶುಪಾಲೆಗೆ (Principal) ಭಯೋತ್ಪಾದಕರ (Terrorists) ಗುಂಪೊಂದು ಬೆದರಿಕೆ ಹಾಕಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ (Srinagar) ನಡೆದಿದೆ. ಇದಾದ ಬಳಿಕ ತಕ್ಷಣವೇ ಪ್ರಾಂಶುಪಾಲರು ಕ್ಷಮೆಯಾಚಿಸಿ ವಿದ್ಯಾರ್ಥಿನಿಯರಿಗೆ ಅಬಯಾ (Abaya) ಧರಿಸಲು ಅನುಮತಿ ನೀಡಿದ್ದಾರೆ.

    ಶ್ರೀನಗರದ ವಿಶ್ವ ಭಾರತಿ ಎಂಬವರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರಾಗಿದ್ದಾರೆ. ಕೆಲ ವಿದ್ಯಾರ್ಥಿನಿಯರಿಗೆ ಶಾಲೆಯೊಳಗೆ ಅಬಯಾ (ಉದ್ದನೆಯ ನಿಲುವಂಗಿ) ಧರಿಸದಂತೆ ಹೇಳಿದ್ದರು. ಆದರೂ ಸಮವಸ್ತçದೊಂದಿಗೆ ಹಿಜಬ್ (ತಲೆಯ ಸ್ಕಾರ್ಫ್) ಧರಿಸಲು ಅನುಮತಿ ನೀಡಿದ್ದರು. ಆದರೆ ಕೆಲವು ವಿದ್ಯಾರ್ಥಿನಿಯರು ಡ್ರೆಸ್ ಕೋಡ್ ಅನ್ನು ಒಪ್ಪಿಕೊಳ್ಳಲು ನಿರಾಕರಿಸಿ ಪ್ರತಿಭಟನೆ ನಡೆಸಿದ್ದಾರೆ.

    ಪ್ರಾಂಶುಪಾಲರು ಡ್ರೆಸ್ ಕೋಡ್ ಅನ್ನು ಜಾರಿಗೊಳಿಸಿದ್ದಾರೆ. ಇದು ತಮ್ಮ ಧಾರ್ಮಿಕ ಆಚರಣೆಗಳ ಪ್ರಕಾರ ಧರಿಸಲು ಬಯಸುವ ತಮ್ಮ ಆಯ್ಕೆಯ ವಿರುದ್ಧವಾಗಿದೆ ಎಂದು ವಿದ್ಯಾರ್ಥಿನಿಯರು ಪ್ರತಿಭಟಿಸಿದ್ದಾರೆ. ಅಬಯಾ ಧರಿಸಲೇಬೇಕಾದರೆ ನೀವು ಶಾಲೆಗೆ ಬರುವುದು ಬೇಡ. ಮದರಸಾಗೆ ಸೇರಿಕೊಳ್ಳಿ ಎಂದು ಪ್ರಿನ್ಸಿಪಾಲ್ ಹೇಳಿರುವುದಾಗಿ ಕೆಲವರು ಆರೋಪಿಸಿದ್ದಾರೆ. ಆದರೆ ಈ ಆರೋಪಗಳನ್ನು ಪ್ರಾಂಶುಪಾಲರು ನಿರಾಕರಿಸಿದ್ದಾರೆ.

    ಈ ವಿಷಯ ದೊಡ್ಡ ವಿವಾದಕ್ಕೆ ಕಾರಣವಾಗಿ ಬಳಿಕ ಪ್ರತಿಭಟನೆಯ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿತು. ಸುದ್ದಿ ವಾಹಿನಿಗಳಲ್ಲೂ ಪ್ರಸಾರ ಮಾಡಲಾಯಿತು. ರಾಜಕೀಯ ಮುಖಂಡರು ಶಾಲೆಯ ಅಧಿಕಾರಿಗಳನ್ನು ಟೀಕಿಸಿದರು ಮಾತ್ರವಲ್ಲದೇ ಕರ್ನಾಟಕದಲ್ಲಿ ಹಿಜಬ್ ನಿಷೇಧವಾದ ಘಟನೆಗೆ ಹೋಲಿಸಿದರು. ಇದನ್ನೂ ಓದಿ: ರೈಲು ದುರಂತದ ಬಳಿಕ ಒಡಿಶಾದಲ್ಲಿ ಒಂದಿಲ್ಲೊಂದು ಅವಘಡ – ರೈಲು ಬೋಗಿಯಲ್ಲಿ ಆಕಸ್ಮಿಕ ಬೆಂಕಿ

    ಬಳಿಕ ಪ್ರಾಂಶುಪಾಲರು ಶಾಲೆಯಲ್ಲಿ ಹೆಚ್ಚಿನ ವಿದ್ಯಾರ್ಥಿನಿಯರು ಹಿಜಬ್ ಧರಿಸುತ್ತಾರೆ. ಆದರೆ ಅಬಯಾ ಧರಿಸುವವರು ಕೆಲವೇ ಹುಡುಗಿಯರು ಇದ್ದಾರೆ. ಹೀಗಾಗಿ ಶಾಲೆಯೊಳಗೆ ಅಬಯಾ ಧರಿಸದಂತೆ ಹೇಳಿರುವುದಾಗಿ ಅವರು ಸ್ಪಷ್ಟಪಡಿಸಲು ಯತ್ನಿಸಿದರು. ಆದರೆ ಈ ವಿಚಾರ ಅಲ್ಲಿಗೇ ತಣ್ಣಗಾಗದೇ ಭಯೋತ್ಪಾದಕರು ಕೂಡಾ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿದರು.

    ಘಟನೆ ದೊಡ್ಡ ವಿವಾದವಾಗುತ್ತಿದ್ದಂತೆ ಭಯೋತ್ಪಾದಕರ ಗುಂಪೊಂದು ಶಾಲೆಯ ಪ್ರಾಂಶುಪಾಲರನ್ನು ಗುರಿಯಾಗಿಸಿಕೊಂಡು ಬೆದರಿಕೆ ಹಾಕಿದೆ. ಆಕೆ ಬಲಪಂಥೀಯಳೆಂದು ಆರೋಪಿಸಿದೆ. ಯಾವಾಗ ವಿಚಾರ ಭಯೋತ್ಪಾದಕರ ವರೆಗೆ ಹೋಯಿತೋ ಅಂದೇ ಸಂಜೆ ವೇಳೆಗೆ ಪ್ರಾಂಶುಪಾಲರು ಕ್ಷಮೆಯಾಚಿಸಿದ್ದಾರೆ.

    ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗಿನ ನನ್ನ ಸಂಭಾಷಣೆಯನ್ನು ತಪ್ಪಾಗಿ ನಿರೂಪಿಸಲಾಗಿದೆ. ಯಾವುದೇ ಸಂದರ್ಭದಲ್ಲಿ, ವಿದ್ಯಾರ್ಥಿಗಳು ಅಥವಾ ಪೋಷಕರ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ನಾನು ಅದಕ್ಕೆ ಬೇಷರತ್ ಕ್ಷಮೆಯಾಚಿಸುತ್ತೇನೆ. ಇಂದಿನಿಂದ ವಿದ್ಯಾರ್ಥಿನಿಯರು ಅಬಯಾ ಧರಿಸಬಹುದು ಮತ್ತು ತರಗತಿಗಳಲ್ಲಿ ಯಾವುದೇ ನಿರ್ಬಂಧಗಳನ್ನು ವಿಧಿಸಲಾಗುವುದಿಲ್ಲ ಎಂದು ಪ್ರಾಂಶುಪಾಲರು ಹೇಳಿದ್ದಾರೆ. ಇದನ್ನೂ ಓದಿ: ಟಿಕೆಟ್.. ಟಿಕೆಟ್.. ಟಿಕೆಟ್.. – ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದು!

  • ಉಗ್ರರ ಸುರಂಗವನ್ನು ಭೇದಿಸಿದ ಭದ್ರತಾ ಪಡೆ – ಅನಂತ್‌ನಾಗ್‌ನಲ್ಲಿ ಗುಂಡಿನ ಚಕಮಕಿ

    ಉಗ್ರರ ಸುರಂಗವನ್ನು ಭೇದಿಸಿದ ಭದ್ರತಾ ಪಡೆ – ಅನಂತ್‌ನಾಗ್‌ನಲ್ಲಿ ಗುಂಡಿನ ಚಕಮಕಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಅನಂತ್‌ನಾಗ್‌ನಲ್ಲಿ (Anantnag) ಭಾನುವಾರ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಉಗ್ರರು (Terrorists) ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆಗಳ ಶೋಧ ಕಾರ್ಯದ ವೇಳೆ ಉಗ್ರರು ಅಡಗಲು ಬಳಸುತ್ತಿದ್ದ ಸುರಂಗ ಮಾರ್ಗ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಭಾನುವಾರ ಬೆಳಗ್ಗೆ ಉಗ್ರರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಜಮ್ಮು ಮತ್ತು ಕಾಶ್ಮೀರದ ಪೊಲೀಸರ ಹಾಗೂ ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಯ ಜಂಟಿ ತಂಡ ಅನಂತ್‌ನಾಗ್‌ನ ಸಾಗಮ್‌ಗೆ ತೆರಳಿ ಶೋಧ ಕಾರ್ಯ ನಡೆಸಿದೆ.

     

    ಈ ವೇಳೆ ಭದ್ರತಾ ಪಡೆಗಳು ಉಗ್ರರು ಒಳನುಸುಳಲು ಹಾಗೂ ಅಡಗಲು ಬಳಸುತ್ತಿದ್ದ ಸುರಂಗ ಮಾರ್ಗವನ್ನು ಭೇದಿಸಿದ್ದಾರೆ. ಈ ಸಂದರ್ಭ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಗುರುವನ್ನು ಸೋಲಿಸಿದ ಶಿಷ್ಯ: ಸಿಟಿ ರವಿ ಸೋತಿದ್ದು ಎಲ್ಲಿ?

    ಈ ಬಗ್ಗೆ ಟ್ವೀಟ್ ಮಾಡಿರುವ ಜಮ್ಮು ಮತ್ತು ಕಾಶ್ಮೀರದ ಪೊಲೀಸರು, ಅನಂತ್‌ನಾಗ್ ಅಂಧ್ವಾನ್ ಸಾಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ. ಪೊಲೀಸ್ ಹಾಗೂ ಭದ್ರತಾ ಪಡೆಗಳು ಕಾರ್ಯಪ್ರವೃತ್ತವಾಗಿವೆ. ಹೆಚ್ಚಿನ ವಿವರಗಳನ್ನು ತಿಳಿಸಲಾಗುವುದು ಎಂದು ಬರೆದಿದ್ದಾರೆ. ದಟ್ಟ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸಮಯ ಹಿಡಿಯಬಹುದೆಂದು ಪೊಲೀಸರು ತಿಳಿಸಿದ್ದಾರೆ.

    ಹಿಂದೆ ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ಮನೆಗಳಲ್ಲಿ ಅಡಗಿಕೊಂಡಿರುತ್ತಿದ್ದರು. ಬಳಿಕ ಭದ್ರತಾ ಪಡೆಗಳು ಉಗ್ರರು ನೆಲೆಸುತ್ತಿದ್ದಂತಹ ಮನೆಗಳನ್ನು ಭೇದಿಸಿ ಅವುಗಳನ್ನು ಧ್ವಂಸಗೊಳಿಸಿದ್ದಾರೆ. ಇದೀಗ ಉಗ್ರರು ಸುರಂಗ ಮಾರ್ಗಗಳನ್ನು ಕೊರೆದು ಅವುಗಳಲ್ಲಿ ಒಳನುಸುಳುವುಕೆ ಹಾಗೂ ಅಡಗುತಾಣವನ್ನಾಗಿ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪತಿಯನ್ನು ಕೊಂದು ಸ್ನೇಹಿತರಿಗೆ ಪಾರ್ಟಿ ಕೊಟ್ಟಿದ್ದ ಕಿಲ್ಲರ್ ಲೇಡಿ

  • ಕಣಿವೆಯಲ್ಲಿ ಹೆಚ್ಚುತ್ತಿರುವ ಉಗ್ರರ ಹಾವಳಿ – ಕೇಂದ್ರದ ದಿಟ್ಟ ನಿರ್ಧಾರ

    ಕಣಿವೆಯಲ್ಲಿ ಹೆಚ್ಚುತ್ತಿರುವ ಉಗ್ರರ ಹಾವಳಿ – ಕೇಂದ್ರದ ದಿಟ್ಟ ನಿರ್ಧಾರ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಹೆಚ್ಚುತ್ತಿರುವ ಭಯೋತ್ಪಾದಕ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ (Central Government) ಮುಂದಾಗಿದೆ.

    ಭಯೋತ್ಪಾದಕ ನಿಗ್ರಹದಳವನ್ನು ಬಲಪಡಿಸಲು ಅಲ್ಲಿನ ಪೊಲೀಸ್ ಪಡೆಗೆ (ಜೆಕೆಪಿ) 600 ಕ್ಕೂ ಹೆಚ್ಚು ಪೊಲೀಸರನ್ನು ನೇಮಕ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಅಲ್ಲದೆ 42 ಹೊಸ ಗಡಿ ಭದ್ರತಾ ಪೊಲೀಸರನ್ನು ನಿಯೋಜನೆಗೆ ಮುಂದಾಗಿದೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

    ಇತ್ತೀಚೆಗೆ ಪೂಂಚ್ (Poonch) ಹಾಗೂ ರಜೌರಿಯಲ್ಲಿ (Rajouri) ಸೇನಾ ವಾಹನದ ಮೇಲೆ ಉಗ್ರರು ದಾಳಿನಡೆಸಿ ಐವರು ಯೋಧರನ್ನು ಕೊಂದಿದ್ದರು. ಈ ಪ್ರಕರಣದ ಬೆನ್ನು ಹತ್ತಿರುವ ಸೇನೆ (Indian Army) ಸ್ಥಳೀಯರು ಉಗ್ರರಿಗೆ ಸಹಕರಿಸಿರುವ ಆರೋಪ ಮಾಡಿದೆ. ಅಲ್ಲದೆ ದಾಳಿ ನಡೆಸಿರುವ ಭಯೋತ್ಪಾದಕರು ಅಡಗಿದ್ದ ಸ್ಥಳದಲ್ಲಿ ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ಸ್ಫೋಟಕ್ಕೆ ಐವರು ಯೋಧರು ಬಲಿಯಾಗಿದ್ದರು. ಈ ವೇಳೆ ಸೇನೆ ಓರ್ವ ಉಗ್ರನನ್ನು ಹತ್ಯೆ ಮಾಡಿತ್ತು. ಇದನ್ನೂ ಓದಿ: ಸೇನೆಯಿಂದ ಇಬ್ಬರು ಉಗ್ರರ ಅರೆಸ್ಟ್ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಜಪ್ತಿ

  • ಸೇನೆಯಿಂದ ಇಬ್ಬರು ಉಗ್ರರ ಅರೆಸ್ಟ್ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಜಪ್ತಿ

    ಸೇನೆಯಿಂದ ಇಬ್ಬರು ಉಗ್ರರ ಅರೆಸ್ಟ್ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಜಪ್ತಿ

    ಶ್ರೀನಗರ: ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ (Lashkar-e-Taiba) ಇಬ್ಬರು ಸಹಚರರನ್ನು ಭದ್ರತಾ ಪಡೆಗಳು (Indian Army) ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಬಂಧಿಸಿದೆ.

    ಬಂಧಿತರನ್ನು ಶಾಹಿದ್ ಅಹ್ಮದ್ ಲೋನ್ ಹಾಗೂ ವಸೀಮ್ ಅಹ್ಮದ್ ಗನಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರೂ ಸ್ಥಳಿಯ ನಿವಾಸಿಗಳಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

    ಓರ್ವ ಉಗ್ರನಿಂದ 1 ಪಿಸ್ತೂಲ್, 1 ಪಿಸ್ತೂಲ್ ಮ್ಯಾಗಜೀನ್, 4 ಪಿಸ್ತೂಲ್ ರೌಂಡ್ಸ್, 1 ರಿವಾಲ್ವಾರ್ ಸೈಲೆನ್ಸರ್, 1 ಐಇಡಿ (IED), 1 ರಿಮೋಟ್ ಕಂಟ್ರೋಲ್, 2 ಬ್ಯಾಟರಿಗಳು, ಎಕೆ 47 ರೈಫಲ್‍ನ 1 ಖಾಲಿ ಮ್ಯಾಗಜೀನ್ ಹಾಗೂ ಇನ್ನಿತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೋರ್ವನಿಂದ 1 ಎಕೆ ಸಿರೀಸ್ ರೈಫಲ್, 1 ಮ್ಯಾಗಜೀನ್ ಮತ್ತು 10 ಸುತ್ತಿನ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಏ. 20ರಂದು ಕಾಶ್ಮೀರದ ಪೂಂಚ್ ಸೆಕ್ಟರ್‍ನಲ್ಲಿ ಸೇನಾ ವಾಹಾನದ ಮೇಲೆ ಉಗ್ರರು ದಾಳಿ ನಡೆಸಿ ಐವರು ಯೋಧರನ್ನು ಹತ್ಯೆಗೈದಿದ್ದರು. ಈ ವೇಳೆ ಭದ್ರತಾ ಪಡೆ, ಉಗ್ರರಿಗೆ ಸ್ಥಳೀಯರು ಸಹಕಾರ ನೀಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಸೇನೆ ಕಾರ್ಯಚರಣೆ ಆರಂಭಿಸಿತ್ತು. ಇದನ್ನೂ ಓದಿ: ಉಗ್ರರ ಜೊತೆ ಸ್ಥಳೀಯರ ಶಾಮೀಲು – ಜಮ್ಮು ಕಾಶ್ಮೀರದಲ್ಲಿ 15 ಕಡೆ ಎನ್‍ಐಎ ಶೋಧ

  • ಉಗ್ರರ ಜೊತೆ ಸ್ಥಳೀಯರ ಶಾಮೀಲು – ಜಮ್ಮು ಕಾಶ್ಮೀರದಲ್ಲಿ 15 ಕಡೆ ಎನ್‍ಐಎ ಶೋಧ

    ಉಗ್ರರ ಜೊತೆ ಸ್ಥಳೀಯರ ಶಾಮೀಲು – ಜಮ್ಮು ಕಾಶ್ಮೀರದಲ್ಲಿ 15 ಕಡೆ ಎನ್‍ಐಎ ಶೋಧ

    ಶ್ರೀನಗರ: ಪಾಕಿಸ್ತಾನ (Pakistan) ಬೆಂಬಲಿತ ಭಯೋತ್ಪಾದಕ ಕೃತ್ಯಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಜಮ್ಮು ಮತ್ತು ಕಾಶ್ಮೀರದ (Jammu and Kashmir) ಏಳು ಜಿಲ್ಲೆಗಳ 15 ಸ್ಥಳಗಳಲ್ಲಿ ಮಂಗಳವಾರ ದಾಳಿ ನಡೆಸಿದೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ವಿವಿಧ ಭಯೋತ್ಪಾದಕ ಸಂಘಟನೆಗಳು ಭೂಗತವಾಗಿ ಕಾರ್ಯನಿರ್ವಹಿಸುತ್ತಿವೆ. ಸ್ಥಳೀಯ ಯುವಕರು ಅವುಗಳೊಂದಿಗೆ ಸಕ್ರಿಯವಾಗಿದ್ದಾರೆ. ದೇಶದ ವಿರುದ್ಧ ಸಂಚು ರೂಪಿಸುವ ಕಾರ್ಯದಲ್ಲಿ ಭಯೋತ್ಪಾದಕ ಸಂಘಟನೆಗಳು ತೊಡಗಿಕೊಂಡಿವೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಎನ್‍ಐಎ ದಾಳಿ ಮಾಡಿದೆ. ಇದನ್ನೂ ಓದಿ: ಪಿಎಫ್‍ಐ ವಿರುದ್ಧದ ಪ್ರಕರಣ – ತಮಿಳುನಾಡಿನ ಹಲವೆಡೆ ಎನ್‍ಐಎ ದಾಳಿ

    ಅಲ್ಲದೆ ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳು ಹಾಗೂ ಮಾದಕ ವಸ್ತುಗಳು ಡ್ರೋಣ್ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ತಲುಪುತ್ತಿವೆ. ಭಯೋತ್ಪಾದಕ ಕೃತ್ಯಗಳಿಗೆ ಬೆಂಬಲ ನೀಡುತ್ತಿರುವ ಕೆಲವರು ಅವುಗಳನ್ನು ಸಂಗ್ರಹಿಸಿಡುತ್ತಿದ್ದಾರೆ ಎಂದು ಎನ್‍ಐಎ ಹೇಳಿಕೊಂಡಿದೆ.

    ಭಯೋತ್ಪಾದಕರ ಸಂಚಿನ ಕುರಿತು ಎನ್‍ಐಎ ಕಳೆದ ವರ್ಷ ಜೂನ್ 21 ರಂದು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮೀಸಲು ಪಡೆ (Central Reserve Police Force) ಹಾಗೂ ಪೊಲೀಸ್ ಸಿಬ್ಬಂದಿಯೊಂದಿಗೆ ಎನ್‍ಐಎ ಶೋಧಕಾರ್ಯ ನಡೆಸುತ್ತಿದೆ. ಕಳೆದ ವರ್ಷ ಜೂನ್ 24 ರಂದು ಜಮ್ಮು ಮತ್ತು ಕಾಶ್ಮೀರದ 14 ಸ್ಥಳಗಳಲ್ಲಿ ಎನ್‍ಐಎ ದಾಳಿ ನಡೆಸಿತ್ತು. ಈ ವೇಳೆ ಸ್ಪೋಟಕಗಳು ಹಾಗೂ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಿತ್ತು. ಇದನ್ನೂ ಓದಿ: ಸೇತುವೆಯಿಂದ ಬಸ್ ಬಿದ್ದು 22 ಮಂದಿ ಸಾವು

  • ಭಾರತ – ಪಾಕಿಸ್ತಾನ ಕಾಶ್ಮೀರದ ವಿವಾದವನ್ನು ವಿಶ್ವಸಂಸ್ಥೆ ನಿರ್ಣಯದಂತೆ ಬಗೆಹರಿಸಬೇಕು: ಚೀನಾ

    ಇಸ್ಲಾಮಾಬಾದ್: ಭಾರತ (India) ಹಾಗೂ ಪಾಕಿಸ್ತಾನದ (Pakistan) ನಡುವೆ ಇರುವ ಕಾಶ್ಮೀರದ (Kashmir) ವಿವಾದವನ್ನು ವಿಶ್ವಸಂಸ್ಥೆಯ (UN) ನಿರ್ಣಯಗಳ ಪ್ರಕಾರ ಪರಿಹರಿಸಬೇಕೆಂದು ಚೀನಾ (China) ಶನಿವಾರ ಹೇಳಿದೆ.

    ಚೀನಾದ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ 2 ದಿನಗಳ ಭೇಟಿಗೆ ಪಾಕಿಸ್ತಾನಕ್ಕೆ ತೆರಳಿದ್ದಾರೆ. ಇದು ಪಾಕಿಸ್ತಾನಕ್ಕೆ ಅವರ ಮೊದಲ ಪ್ರವಾಸವಾಗಿದೆ. ಅವರು ಶನಿವಾರ ತಮ್ಮ ಪಾಕಿಸ್ತಾನದ ಸಹವರ್ತಿ ಬಿಲಾವಲ್ ಭುಟ್ಟೋ ಜರ್ದಾರಿ ಅವರೊಂದಿ ಸಭೆ ನಡೆಸಿದ್ದಾರೆ.

    ವರದಿಗಳ ಪ್ರಕಾರ ಸಭೆಯಲ್ಲಿ ರಾಜಕೀಯ, ಕಾರ್ಯತಂತ್ರ, ಆರ್ಥಿಕ, ರಕ್ಷಣಾ ಭದ್ರತೆ, ಶಿಕ್ಷಣ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳು ಹಾಗೂ ಸಹಕಾರಗಳ ಬಗ್ಗೆ ಚರ್ಚಿಸಲಾಗಿದೆ. ಉಭಯ ದೇಶಗಳ ಪರಸ್ಪರ ಹಿತಾಸಕ್ತಿ, ಪ್ರದೇಶಿಕ ಹಾಗೂ ಜಾಗತಿಕ ವಿಷಗಳ ಬಗೆಯೂ ಮಾತುಕತೆ ನಡೆದಿದೆ. ದಕ್ಷಿಣ ಏಷ್ಯಾ ಭಾಗದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಕಾಪಾಡಿಕೊಳ್ಳುವ ಪ್ರಾಮುಖ್ಯತೆಯನ್ನು ಎರಡೂ ಕಡೆಯವರು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಅಜ್ಜಿ ಗೆದ್ದಿದ್ದ ತೆಲಂಗಾಣದ ಮೇದಕ್ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಲೋಕಸಭೆಗೆ ಸ್ಪರ್ಧೆ?

    ಕಾಶ್ಮೀರದ ವಿವಾದ ಭಾರತ ಮತ್ತು ಪಾಕಿಸ್ತಾನದ ನಡುವೆ ಅನೇಕ ವರ್ಷಗಳಿಂದಲೇ ಉಳಿದುಕೊಂಡಿದೆ. ಇದನ್ನು ವಿಶ್ವಸಂಸ್ಥೆಯ ಚಾರ್ಟರ್, ಸಂಬಂಧಿತ ಭದ್ರತಾ ಮಂಡಳಿಯ ನಿರ್ಣಯಗಳು ಹಾಗೂ ದ್ವಿಪಕ್ಷೀಯ ಒಪ್ಪಂದಗಳಿಗೆ ಅನುಗುಣವಾಗಿ ಸರಿಯಾಗಿ ಹಾಗೂ ಶಾಂತಿಯುತವಾಗಿ ಪರಿಹರಿಸಬೇಕು ಎಂದು ಚೀನಾದ ವಿದೇಶಾಂಗ ಸಚಿವರು ಹೇಳಿದ್ದಾರೆ. ಆದರೆ ಅಸ್ಥಿರ ಪರಿಸ್ಥಿತಿಯನ್ನು ಇನ್ನಷ್ಟು ಬಿಗಡಾಯಿಸುವ ಏಕಪಕ್ಷೀಯ ಕ್ರಮಗಳನ್ನು ಎರಡೂ ಕಡೆಯವರು ವಿರೋಧಿಸಿದ್ದಾರೆ.

    ಭಾರತದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಅನಗತ್ಯ ಉಲ್ಲೇಖಗಳಿಗೆ ಭಾರತ ಈ ಹಿಂದೆಯೂ ಚೀನಾ ಹಾಗೂ ಪಾಕಿಸ್ತಾನವನ್ನು ಟೀಕಿಸಿದೆ. ನಾವು ಅಂತಹ ನಿರ್ಣಯಗಳನ್ನು ಯಾವಾಗಲೂ ತಿರಸ್ಕರಿಸುತ್ತೇವೆ. ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳು ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿದ್ದು, ಬೇರ್ಪಡಿಸಲಾಗದ ಭಾಗಗಳಾಗಿವೆ ಎಂದು ಭಾರತ ಹೇಳಿಕೊಂಡೇ ಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೋದಿ ಮೆಗಾ ರೋಡ್‌ ಶೋ – ಬಿಜೆಪಿ ಲೆಕ್ಕಾಚಾರ ಏನು?

  • ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

    ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

    ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ (Baramulla) ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಭಯೋತ್ಪಾದಕರು (Terrorist) ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಆರಂಭವಾಗಿದ್ದು, ಭದ್ರತಾ ಪಡೆ ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದೆ ಎಂದು ವರದಿಗಳು ತಿಳಿಸಿವೆ.

    ಬಾರಾಮುಲ್ಲಾದ ಕರ್ಹಾಮಾ ಕುಂಜರ್ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದ್ದು, ಭದ್ರತಾ ಪಡೆಗಳು (Security Force) ಭಯೋತ್ಪಾದಕರಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶವನ್ನು ಸುತ್ತುವರೆದಿವೆ. ಭಯೋತ್ಪಾದಕರನ್ನು ಶರಣಾಗುವಂತೆ ಭದ್ರತಾ ಪಡೆಗಳು ಕೇಳಿದಾಗ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ ಪ್ರಕರಣ – ಉಗ್ರರನ್ನು ಸುತ್ತುವರಿದ ಸೇನೆ, ಐವರು ಯೋಧರು ಸಾವು

    ಬಾರಾಮುಲ್ಲಾ ಎನ್‌ಕೌಂಟರ್‌ನ ಬಗ್ಗೆ ಮಾಹಿತಿ ನೀಡಿದ ಎಸ್‌ಎಸ್‌ಪಿ ಅಮೋದ್ ಅಶೋಕ್ ನಾಗ್‌ಪುರೆ, ಹತ್ಯೆಯಾದ ಭಯೋತ್ಪಾದಕ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯವನಾಗಿದ್ದು, ಲಷ್ಕರ್-ಎ-ತೈಬಾದೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಹೇಳಿದ್ದಾರೆ. ಅಲ್ಲದೇ ಮುಂಬರುವ ಜಿ 20 ಸಭೆಯ ದೃಷ್ಟಿಯಿಂದ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಹತ್ಯೆಗೀಡಾದ ಭಯೋತ್ಪಾದಕನಿಗೆ ಜಿ 20 ಸಭೆಯ ಮೊದಲು ದೊಡ್ಡ ಭಯೋತ್ಪಾದಕ ದಾಳಿಯನ್ನು ನಡೆಸುವಂತೆ ಹೇಳಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಭಯೋತ್ಪಾದನೆಗೆ ಹಣಕಾಸು ನೆರವು ನಿಲ್ಲಿಸಬೇಕು – ಬಹಿರಂಗ ಸಭೆಯಲ್ಲೇ ಪಾಕ್‌ ಸಚಿವನಿಗೆ ಪಂಚ್‌ಕೊಟ್ಟ ಜೈಶಂಕರ್‌

    ಮೇ 5 ರಂದು ಜಮ್ಮು ಮತ್ತು ಕಾಶ್ಮೀರದ (Jammu And Kashmir) ರಜೌರಿ (Rajouri) ಜಿಲ್ಲೆಯ ಅರಣ್ಯದ ಕಂಡಿ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ಸ್ಫೋಟದಲ್ಲಿ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದರು ಮತ್ತು ಮೇಜರ್ ಗಾಯಗೊಂಡಿದ್ದರು. ಪೀಪಲ್ಸ್ ಆ್ಯಂಟಿ ಫ್ಯಾಸಿಸ್ಟ್ ಫ್ರಂಟ್ (PAFF) ದಾಳಿಯ ಹೊಣೆ ಹೊತ್ತುಕೊಂಡಿದೆ. ಪಿಎಎಫ್‌ಎಫ್ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಗೆ ಸಂಯೋಜಿತವಾಗಿದೆ. ಇತ್ತೀಚಿಗಷ್ಟೆ ಸೇನೆಯ ವಾಹನದ ಮೇಲೆ ದಾಳಿ ನಡೆಸಿ ಐವರು ಯೋಧರ ಸಾವಿಗೆ ಕಾರಣರಾಗಿದ್ದ ಭಯೋತ್ಪಾದಕರನ್ನು ಹೊಡೆದುರುಳಿಸಲು ಸೇನೆ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಉಗ್ರರು ಸ್ಫೋಟಕಗಳನ್ನು ಸಿಡಿಸಿದ್ದಾರೆ. ಪರಿಣಾಮ ಐವರು ಯೋಧರು ಮೃತಪಟ್ಟಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ – ರಕ್ಷಣಾ ಸಂಸ್ಥೆಯ ವಿಜ್ಞಾನಿ ಅರೆಸ್ಟ್

  • ಸೇನಾ ವಾಹನದ ಮೇಲೆ ದಾಳಿ ಪ್ರಕರಣ – ಉಗ್ರರನ್ನು ಸುತ್ತುವರಿದ ಸೇನೆ, ಐವರು ಯೋಧರು ಸಾವು

    ಸೇನಾ ವಾಹನದ ಮೇಲೆ ದಾಳಿ ಪ್ರಕರಣ – ಉಗ್ರರನ್ನು ಸುತ್ತುವರಿದ ಸೇನೆ, ಐವರು ಯೋಧರು ಸಾವು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಾಜೌರಿ (Rajouri) ಜಿಲ್ಲೆಯಲ್ಲಿ ಶುಕ್ರವಾರ ನಡೆದ ಭಯೋತ್ಪಾದಕರೊಂದಿಗಿನ ಹೋರಾಟದಲ್ಲಿ ಐವರು ಯೋಧರು (Soldiers) ಸಾವನ್ನಪ್ಪಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಇತ್ತೀಚೆಗಷ್ಟೇ ಸೇನೆಯ (Indian Army) ವಾಹನದ ಮೇಲೆ ದಾಳಿ ನಡೆಸಿ ಐವರು ಯೋಧರ ಸಾವಿಗೆ ಕಾರಣರಾಗಿದ್ದ ಉಗ್ರರನ್ನು ಹೊಡೆದುರುಳಿಸಲು ಸೇನೆ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಉಗ್ರರು ಸ್ಫೋಟಕಗಳನ್ನು ಸಿಡಿಸಿದ್ದಾರೆ. ಪರಿಣಾಮ ಐವರು ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಯೋಧ ಗಾಯಗೊಂಡಿದ್ದು, ಅವರನ್ನು ಉಧಂಪುರದ (Udhampur) ಕಮಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಯೋಧರ ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ – ಗ್ರೆನೇಡ್ ಬಳಕೆ ಸಾಧ್ಯತೆ

    ರಾಜೌರಿ ಜಿಲ್ಲೆಯ ಕಂಡಿ ಪ್ರದೇಶದ ಕೇಸ್ರಿ ಹಿಲ್‍ನ ಗುಹೆಯೊಂದರಲ್ಲಿ ಭಯೋತ್ಪಾದಕರ ತಂಡ ಅಡಗಿರುವ ಖಚಿತ ಮಾಹಿತಿ ಮೇರೆಗೆ ಸೇನೆ ದಾಳಿ ಆರಂಭಿಸಿದೆ. ಮುನ್ನೆಚ್ಚರಿಕೆಯಾಗಿ ಸ್ಥಳಕ್ಕೆ ಹೆಚ್ಚುವರಿ ಸೇನಾ ಪಡೆಗಳನ್ನು ರವಾನಿಸಲಾಗಿದೆ. ಉಗ್ರರ ಪಡೆಯಲ್ಲಿ ಸಾವು ನೋವಿನ ವರದಿಯಾಗಿಲ್ಲ. ಸೇನೆ ಉಗ್ರರ ನೆಲೆಯನ್ನು ಸುತ್ತುವರಿದಿದ್ದು, ಕಾರ್ಯಾಚರಣೆಯನ್ನು ಮುಂದುವರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಏ.20 ರಂದು ಪೂಂಚ್ ಜಿಲ್ಲೆಯ ಭಾಟಾ ಧುರಿಯನ್‍ನಲ್ಲಿ ಸೇನಾ ಟ್ರಕ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು. ಅಲ್ಲದೆ ಉಗ್ರರು ಸೈನಿಕರ ಶಸ್ತ್ರಾಸ್ತ್ರಗಳೊಂದಿಗೆ ಪರಾರಿಯಾಗಿದ್ದರು. ಇದನ್ನೂ ಓದಿ: ಇವಿಎಂ ಖರೀದಿಯಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧದ ಪಿಐಎಲ್ ವಜಾಗೊಳಿಸಿದ ಸುಪ್ರೀಂ