Tag: ಜಮ್ಮು ಮತ್ತು ಕಾಶ್ಮೀರ

  • ಟರ್ಕಿ, ಸಿರಿಯಾ ಬೆನ್ನಲ್ಲೇ ಭಾರತದಲ್ಲೂ ಹೆಚ್ಚುತ್ತಿದೆ ಭೂಕಂಪನ

    ಶ್ರೀನಗರ: ಟರ್ಕಿ ಮತ್ತು ಸಿರಿಯಾದಲ್ಲಿ (Turkey, Syria) ಭಾರೀ ಭೂಕಂಪ ಸಂಭವಿಸಿದ ಬೆನ್ನಲ್ಲೇ ಇದೀಗ ಭಾರತದಲ್ಲೂ ಅಲ್ಲಲ್ಲಿ ಭೂಕಂಪನ (Earthquake) ವರದಿಯಾಗುತ್ತಿದೆ. ಶುಕ್ರವಾರ (ಫೆ.17) ಬೆಳ್ಳಂಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಕತ್ರಾದಲ್ಲಿ 3.6 ತೀವ್ರತೆಯ ಭೂಕಂಪನ ಸಂಭವಿಸಿದೆ.

    ಮುಂಜಾನೆ 5:10ರ ವೇಳೆಗೆ 10 ಕಿಮೀ ಆಳದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಇದನ್ನೂ ಓದಿ: ಟರ್ಕಿ, ಸಿರಿಯಾ ಬೆನ್ನಲ್ಲೇ ಭಾರತದಲ್ಲೂ ಭೂಕಂಪನ

    ಸಾಮಾನ್ಯ ಭೂಕಂಪನ ಉಂಟಾಗಿರುವುದರಿಂದ ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ಸಂಭವಿಸಿಲ್ಲ. ಭೂಕಂಪನದ ಕೇಂದ್ರ ಬಿಂದು ಕತ್ರಾದಿಂದ ಪೂರ್ವಕ್ಕೆ 97 ಕಿಮೀ ದೂರದಲ್ಲಿ ಕಂಡುಬಂದಿದೆ. ಭೂಕಂಪದ ಅಕ್ಷಾಂಶ ಮತ್ತು ರೇಖಾಂಶಗಳು ಕ್ರಮವಾಗಿ 33.10 ಡಿಗ್ರಿ ಮತ್ತು 75.97 ಡಿಗ್ರಿಯಲ್ಲಿ ಕಂಡುಬಂದಿದೆ ಎಂದು ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

    ಫೆಬ್ರವರಿ 13 ರಂದು ಸಿಕ್ಕಿಂ ರಾಜ್ಯದಲ್ಲಿ 4.3 ತೀವ್ರತೆಯ ಭೂಕಂಪನ ಉಂಟಾಗಿತ್ತು. ಇದಕ್ಕೂ ಮುನ್ನಾದಿನ 4.0 ತೀವ್ರತೆಯಲ್ಲಿ ಅಸ್ಸಾಂನಲ್ಲಿ ಹಾಗೂ 3.8 ತೀವ್ರತೆಯಲ್ಲಿ ಗುಜರಾತ್‌ನ ಸೂರತ್‌ನಲ್ಲಿ ಭೂಕಂಪನ ಸಂಭವಿಸಿತ್ತು. ಇದನ್ನೂ ಓದಿ: 

    ಇತ್ತೀಚೆಗೆ ಟರ್ಕಿ, ಸಿರಿಯಾದಲ್ಲಿ ಭಾರೀ ಭೂಕಂಪ ಸಂಭವಿಸಿ ಈಗಾಗಲೇ 40 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಟರ್ಕಿಯಲ್ಲಿ 1939ರಲ್ಲಿ ಸಂಭವಿಸಿದ ಭೂಕಂಪದಲ್ಲಿ 33 ಸಾವಿರ ಮಂದಿ ಮೃತಪಟ್ಟಿದ್ದರು. ಇದು ಈವರೆಗಿನ ದೊಡ್ಡ ಪ್ರಮಾಣದ ಭೂಕಂಪ ಎಂದು ಹೇಳಲಾಗಿತ್ತು. ಆದರೆ 2023ರಲ್ಲಿ ಸಂಭವಿಸಿದ ಭೂಕಂಪ 40 ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದ್ದು, ಕರಾಳ ವರ್ಷವನ್ನಾಗಿ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪುಲ್ವಾಮಾ ದಾಳಿಗೆ 4 ವರ್ಷ: ಆ ಒಂದು ಕರಾಳ ದಿನದಲ್ಲಿ ನಡೆದಿದ್ದೇನು?

    ಪುಲ್ವಾಮಾ ದಾಳಿಗೆ 4 ವರ್ಷ: ಆ ಒಂದು ಕರಾಳ ದಿನದಲ್ಲಿ ನಡೆದಿದ್ದೇನು?

    ನವದೆಹಲಿ: ಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದರೆ ಇದೇ ದಿನ 4 ವರ್ಷಗಳ ಹಿಂದೆ ಭಾರತೀಯ ಸೇನೆ (Indian Army) ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್ (CRPF) ಯೋಧರು ಹುತಾತ್ಮರಾಗಿದ್ದರು. ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಿತ್ತು.

    ಈಗಲೂ ಪ್ರತಿ ವರ್ಷ ಫೆಬ್ರವರಿ 14, ಭಾರತೀಯರ ಪಾಲಿಗೆ ಮರೆಯಲಾಗದ ದಿನ, ಕರಾಳ ದಿನ ಎಂದೇ ಹೇಳಬಹುದು. ಹೌದು.. 4 ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್‌ಪಿಎಫ್ ಅಧಿಕಾರಿಗಳು ಹುತಾತ್ಮರಾಗಿದ್ದರು. ಈ ಸುದ್ದಿ ಕೇಳಿ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು. ಇದನ್ನೂ ಓದಿ: ಅಭಿನಂದನ್‍ರನ್ನು ಬಿಡುಗಡೆ ಮಾಡದಿದ್ರೆ ಪಾಕ್ ಬ್ರಿಗೇಡ್‍ಗಳು ಧ್ವಂಸ ಆಗ್ತಿತ್ತು – ಧನೋವಾ

    ಜೈಶ್-ಎ-ಮೊಹಮ್ಮದ್ (JEM) ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಣಾರ್ಧದಲ್ಲಿ ಜೀವ ಕಳೆದುಕೊಂಡರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬೆಂಗಾವಲು ಪಡೆಯ ಮೇಲೆ ಭೀಕರವಾಗಿ ದಾಳಿ ನಡೆಸಲಾಗಿತ್ತು. ಈ ಕರಾಳ ಘಟನೆ ಇಂದು ನೆನಪಿಸಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಅನೇಕ ಗಣ್ಯರು ಸ್ಮರಿಸಿದ್ದಾರೆ.

    ಈ ದಿನ ನಾವು ಪುಲ್ವಾಮಾದ್ಲಿ ನಮ್ಮ ಪರಾಕ್ರಮಿಗಳನ್ನು ಕಳೆದುಕೊಂಡಿದ್ದನ್ನು ನೆನಪಿಸಿಕೊಳ್ಳುತ್ತೇವೆ. ಅವರ ಅತ್ಯುನ್ನತ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯವು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ ಎಂದು ಮೋದಿ ಭಾವುಕ ಟ್ವೀಟ್‌ ಸಂದೇಶ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಭಿನಂದನ್‍ಗೆ ಹೊಡೆದು, ಗಾಯಗೊಳಿಸಿದ್ದ ಪಾಕ್ ಯೋಧನನ್ನು ಹತ್ಯೆಗೈದ ಭಾರತೀಯ ಸೇನೆ

    ದಾಳಿಯ ಪ್ರಮುಖ ಅಂಶಗಳು – 14 ಫೆಬ್ರವರಿ 2019:
    ಜಮ್ಮು ಮತ್ತು ಕಾಶ್ಮೀರದಲ್ಲಿ 40 ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ 2 ಬಸ್‌ಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬಸ್‌ಗಳು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಅರೆಸೇನಾಪಡೆಯ ವಾಹನಗಳ ದೊಡ್ಡ ಗುಂಪಿನ ಭಾಗವಾಗಿತ್ತು. ದಾಳಿಯ ಸ್ವಲ್ಪ ಸಮಯದ ನಂತರ ಜೈಶ್-ಇ-ಮೊಹಮ್ಮದ್ ಸಂಘಟನೆ ವೀಡಿಯೋ ಬಿಡುಗಡೆ ಮಾಡಿತು. ದಾಳಿಯ ಹೊಣೆ ಹೊತ್ತುಕೊಂಡಿತ್ತು. ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿಬಾಗ್, ಕಾಕಪೋರಾದಲ್ಲಿ ವಾಸಿಸುತ್ತಿದ್ದ ಸ್ಥಳೀಯ ಕಾಶ್ಮೀರಿ ಜಿಹಾದಿ ಎಂದು ಹೇಳಿಕೊಂಡಿದ್ದನು.

    15 ಫೆಬ್ರವರಿ 2019: 
    ಫೆಬ್ರವರಿ 15, 2019 ರಂದು ಪತ್ರಿಕಾ ಪ್ರಕಟಣೆಯಲ್ಲಿ ವಿದೇಶಾಂಗ ಸಚಿವಾಲಯವು, ಪಾಕಿಸ್ತಾನವು ಭಯೋತ್ಪಾದನೆ ಬೆಂಬಲಿಸುತ್ತಿದೆ ಎಂದು ಆರೋಪಿಸಿತು. ಪಾಕಿಸ್ತಾನಿ ನಿಯಂತ್ರಿತ ಪ್ರದೇಶಗಳಲ್ಲಿ ತನ್ನ ಭಯೋತ್ಪಾದಕ ಮೂಲಸೌಕರ್ಯವನ್ನು ನಿರ್ವಹಿಸಲು ಮತ್ತು ವಿಸ್ತರಿಸಲು, ಭಾರತ ಇತರೆಡೆ ದಾಳಿಗಳನ್ನು ನಡೆಸಲು ಜೆಎಂನ ನಾಯಕ ಮಸೂದ್ ಅಜರ್‌ಗೆ ಸಂಪೂರ್ಣ ಸ್ವಾತಂತ್ರ‍್ಯವನ್ನು ನೀಡಲಾಗಿದೆ ಎಂದು ವಿದೇಶಾಂಗ ಇಲಾಖೆ ಆರೋಪಿಸಿತು. ಇದನ್ನೂ ಓದಿ: ಅಭಿನಂದನ್‍ಗೆ ಮಾರ್ಗದರ್ಶನ ನೀಡಿದ್ದ ಐಎಎಫ್ ಮಹಿಳಾ ನಿಯಂತ್ರಕಿಗೆ ಯುಧ್ ಸೇವಾ ಪದಕ

    ಪುಲ್ವಾಮಾ ದಾಳಿಯಲ್ಲಿ ಪಾಕ್ ಭಾಗವಹಿಸಿದೆ ಎಂಬ ಆರೋಪವನ್ನು ಪಾಕಿಸ್ತಾನ ನಿರಾಕರಿಸಿತು. ಮಸೂದ್ ಅಜರ್ ಭಯೋತ್ಪಾದಕ ಸಂಘಟನೆಗೆ ಸೇರಿದವನಲ್ಲ ಎಂದು ಚೀನಾ ಸಮರ್ಥಿಸಿಕೊಂಡಿತು. ಇದಕ್ಕೆ ಕಾರಣರಾದವರು ಭಾರೀ ಬೆಲೆ ತೆರಬೇಕಾಗುತ್ತದೆ ಮತ್ತು ಭಯೋತ್ಪಾದಕರನ್ನು ಎದುರಿಸಲು ಭದ್ರತಾ ಪಡೆಗಳಿಗೆ ಮುಕ್ತ ನಿಯಂತ್ರಣ ನೀಡಲಾಗುವುದು ಎಂದು ಅಂದು ಭಾರತದ ಪ್ರಧಾನಿ ಗುಡುಗಿದ್ದರು. ಇಂತಹ ದಾಳಿಗಳನ್ನು ಸಂಘಟಿಸಿ ಭಾರತವನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದರು. ಪುಲ್ವಾಮಾ ಭಯೋತ್ಪಾದಕ ದಾಳಿಯ ವಿರುದ್ಧ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಜಮ್ಮುವಿನಲ್ಲಿ ಕರ್ಫ್ಯೂ ಜಾರಿಗೊಳಿಸಲಾಯಿತು. ಮಿಲಿಟರಿ ಪಡೆಗಳ ನಿಯೋಜನೆಯಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿಹಿಡಿಯಲಾಯಿತು.

    16 ಫೆಬ್ರವರಿ 2019: 
    ರಾಜಕೀಯ ಪಕ್ಷಗಳು ಭದ್ರತಾ ಪಡೆಗಳನ್ನು ಬೆಂಬಲಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದವು, ಸ್ವಲ್ಪ ಸಮಯದ ನಂತರ ಎಲ್ಲಾ ಪಾಕಿಸ್ತಾನಿ ಸರಕುಗಳ ಮೇಲಿನ ಕಸ್ಟಮ್ಸ್ ಸುಂಕವನ್ನು 200 ಪ್ರತಿಶತಕ್ಕೆ ಹೆಚ್ಚಿಸಲಾಯಿತು. – ಜೆಎಂ ಜೊತೆ ಆಪಾದಿತ ಸಂಪರ್ಕ ಹೊಂದಿರುವ ಕನಿಷ್ಠ 7 ಜನರನ್ನು ಪುಲ್ವಾಮದಲ್ಲಿ ಬಂಧಿಸಲಾಯಿತು.

    ಈ ದಾಳಿ ಪರಿಣಾಮದಿಂದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟೂ ಹದಗೆಟ್ಟಿತ್ತು. ಭಾರತವು ತನ್ನ ಅತ್ಯಂತ ಆದ್ಯತೆಯ ರಾಷ್ಟ್ರವಾಗಿ ಪಾಕಿಸ್ತಾನದ ಸ್ಥಾನಮಾನವನ್ನು ತೆಗೆದುಹಾಕಿತು. ಭಾರತಕ್ಕೆ ಆಮದು ಮಾಡಿಕೊಳ್ಳುವ ಎಲ್ಲಾ ಪಾಕಿಸ್ತಾನಿ ಸರಕುಗಳ ಮೇಲಿನ ಕಸ್ಟಮ್ಸ್ ಹೆಚ್ಚಿಸಲಾಯಿತು. ಭಾರತದ ಸರ್ಕಾರದ ಪ್ರಕಾರ, ಪಾಕಿಸ್ತಾನವನ್ನು ಮನಿ ಲಾಂಡರಿಂಗ್ (ಎಫ್‌ಎಟಿಎಫ್) ಕಪ್ಪುಪಟ್ಟಿಗೆ ಹಣಕಾಸು ಆಕ್ಷನ್ ಟಾಸ್ಕ್ ಫೋರ್ಸ್ ಸೇರಿಸಬೇಕು. ಜಮ್ಮು ಮತ್ತು ಕಾಶ್ಮೀರ ಆಡಳಿತವು ಫೆಬ್ರವರಿ 17 ರಂದು ಪ್ರತ್ಯೇಕತಾವಾದಿ ನಾಯಕರ ಭದ್ರತಾ ಕ್ರಮಗಳನ್ನು ಕೊನೆಗೊಳಿಸಿತು.

    IMRANKHAN

    26 ಫೆಬ್ರವರಿ 2019: 
    ಭಾರತೀಯ ವಾಯುಪಡೆಯ ಜೆಟ್‌ಗಳು 12 ದಿನಗಳ ನಂತರ ಪಾಕಿಸ್ತಾನದ ಖೈಬರ್ ಪಖ್ತುನ್‌ಖ್ವಾದಲ್ಲಿರುವ ಬಾಲಾಕೋಟ್‌ನಲ್ಲಿರುವ ಜೆಇಎಂ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿತು. 1971ರ ಭಾರತ-ಪಾಕಿಸ್ತಾನ ಯುದ್ಧದ ನಂತರ, ದಾಳಿಯ ವಿಮಾನವು ನಿಯಂತ್ರಣ ರೇಖೆಯನ್ನು ದಾಟಿದ್ದು ಇದೇ ಮೊದಲಾಗಿತ್ತು. ಫೆಬ್ರವರಿ 26 ರಂದು, ಭಾರತೀಯ ವಾಯುಪಡೆಯ 12 ಮಿರಾಜ್-2000 ಜೆಟ್‌ಗಳು, ಗಡಿ ನಿಯಂತ್ರಣ ರೇಖೆಯನ್ನು ದಾಟಿ ಬಾಲಕೋಟ್‌ನಲ್ಲಿದ್ದ ಉಗ್ರಗಾಮಿ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡಿತು. ಇದು ಜೈಶ್-ಇ-ಮೊಹಮ್ಮದ್ ತರಬೇತಿ ಶಿಬಿರದ ಮೇಲೆ ನಡೆಸಿದ ದಾಳಿ ಮತ್ತು ಈ ದಾಳಿಯಲ್ಲಿ ಸುಮಾರು 250 ಉಗ್ರಗಾಮಿಗಳು ಬಲಿಯಾದರು ಎಂದು ವರದಿ ಹೇಳಿದೆ.

    27 ಫೆಬ್ರವರಿ 2019: 
    ಪಾಕಿಸ್ತಾನದ ಎಫ್-16 ಯುದ್ಧ ವಿಮಾನಗಳು ಭಾರತದ ವಾಯುನೆಲೆಯನ್ನು ಪ್ರವೇಶಿಸಿದವು. ಈ ಯುದ್ಧವಿಮಾನಗಳು ಭಾರತೀಯ ಮಿಗ್-21 ಬೈಸನ್ ಎರಡು ಯುದ್ಧವಿಮಾನಗಳನ್ನು ನಾಶಪಡಿಸಿದವು. ಇದೇ ವೇಳೆ ಪಾಕಿಸ್ತಾನದ ಎಫ್-16 ವಿಮಾನವನ್ನು ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಲ್ಟಿಹೊಡೆಯುವಂತೆ ಮಾಡಿದ್ದರು. ಈ ವೇಳೆ ಅಭಿನಂದನ್ ಅವರನ್ನ ಪಾಕಿಸ್ತಾನ ಸೆರೆಹಿಡಿಯಿತು.

    28 ಫೆಬ್ರವರಿ 2019: 
    ಬಂಧಿತ ಐಎಎಫ್ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಶುಕ್ರವಾರ ಬಿಡುಗಡೆ ಮಾಡುವುದಾಗಿ ಇಮ್ರಾನ್ ಖಾನ್ ಫೆಬ್ರವರಿ 28 ರಂದು ಘೋಷಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೇಶದಲ್ಲೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆ

    ದೇಶದಲ್ಲೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆ

    ಶ್ರೀನಗರ: ದೇಶದಲ್ಲಿ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) 59 ದಶಲಕ್ಷ ಟನ್ ಲಿಥಿಯಮ್ (Lithium) ನಿಕ್ಷೇಪ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

    ಲಿಥಿಯಮ್ ಹಗುರವಾದ ಲೋಹವಾಗಿದ್ದು, ಇದನ್ನು ಇ.ವಿ (ವಿದ್ಯುತ್ ಚಾಲಿತ ವಾಹನ) ಬ್ಯಾಟರಿಗಳ (EV batteries) ತಯಾರಿಕೆಗೆ ಬಳಸಲಾಗುತ್ತದೆ. ಇದನ್ನೂ ಓದಿ: Turkey, Syria Earthquakeː ವರ್ಲ್ಡ್ ಬ್ಯಾಂಕ್‌ನಿಂದ 1.78 ಬಿಲಿಯನ್ ಡಾಲರ್ ನೆರವು ಘೋಷಣೆ

    ಭಾರತೀಯ ಭೂಗರ್ಭಶಾಸ್ತ್ರ ಸರ್ವೇಕ್ಷಣಾ ಸಂಸ್ಥೆ (GSI) ನಡೆಸಿದ ಸಂಶೋಧನೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಸಲಾಲ್-ಹೈಮಾನ ಪ್ರದೇಶದಲ್ಲಿ 59 ಲಕ್ಷ ಟನ್‌ಗಳಷ್ಟು ಲಿಥಿಯಮ್ ನಿಕ್ಷೇಪವಿರುವುದು ಕಂಡುಬಂದಿದೆ. ಲಿಥಿಯಮ್ ಹಾಗೂ ಚಿನ್ನ ಸೇರಿದಂತೆ 51 ಖನಿಜ ಬ್ಲಾಕ್‌ಗಳನ್ನ ಆಯಾ ರಾಜ್ಯ ಸರ್ಕಾರಗಳಿಗೆ ಹಸ್ತಾಂತರಿಸಲಾಗಿದೆ ಎಂದು ಗಣಿ ಸಚಿವಾಲಯ (Ministry Of Mines) ಗುರುವಾರ ತಿಳಿಸಿದೆ.

    ಪತ್ತೆಹಚ್ಚಲಾದ 51 ಖನಿಜ ಬ್ಲಾಕ್‌ಗಳಲ್ಲಿ 5 ಬ್ಲಾಕ್‌ಗಳು ಚಿನ್ನ (Gold), ಇತರ ಬ್ಲಾಕ್‌ಗಳು ಪೊಟ್ಯಾಶ್, ಮಾಲಿಬ್ಡಿನಮ್, ಮೂಲ ಲೋಹ ಸರಕುಗಳಿಗೆ ಸಂಬಂಧಿಸಿವೆ. ಇವು ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಆಂಧ್ರಪ್ರದೇಶ, ಛತ್ತೀಸ್‌ಗಢ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ತಮಿಳುನಾಡು ಮತ್ತು ತೆಲಂಗಾಣ ಸೇರಿ 11 ರಾಜ್ಯಗಳಲ್ಲಿ ಹರಡಿಕೊಂಡಿವೆ ಎಂದು ಸಚಿವಾಲಯ ಹೇಳಿದೆ.

    ತಾಂತ್ರಿಕ ಕ್ಷೇತ್ರಕ್ಕೆ ನಿರ್ಣಾಯಕ ಖನಿಜ ಪೂರೈಕೆಯನ್ನು ಬಲಪಡಿಸಲು, ಆಸ್ಟ್ರೇಲಿಯಾ ಮತ್ತು ಅರ್ಜೆಂಟೀನಾದಿಂದ ಲಿಥಿಯಮ್ ಸೇರಿದಂತೆ ಖನಿಜಗಳನ್ನು ಪಡೆಯಲು ಸರ್ಕಾರವು ಹಲವಾರು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಗಣಿ ಸಚಿವಾಲಯ ಹೇಳಿತ್ತು. ಈ ಮಧ್ಯೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆಯಾಗಿರುವುದು ಆಶಾದಾಯಕ ಬೆಳವಣಿಗೆ ಎನಿಸಿದೆ.

    ಪ್ರಸ್ತುತ ಭಾರತವು ಲಿಥಿಯಮ್, ನಿಕ್ಕಲ್ ಮತ್ತು ಕೋಬಾಲ್ಟ್‌ನಂತಹ ಅನೇಕ ಖನಿಜಗಳನ್ನು ಆಮದು ಮಾಡಿಕೊಳ್ಳುತ್ತಿದೆ. 7,897 ದಶಲಕ್ಷ ಟನ್‌ನಷ್ಟಿರುವ ಕಲ್ಲಿದ್ದಲು ಮತ್ತು ಲಿಗ್ನೈಟ್‌ ಸಂಪನ್ಮೂಲಕ್ಕೆ ಸಂಬಂಧಿಸಿದಂತೆ ವರದಿಗಳನ್ನ ಕಲ್ಲಿದ್ದಲು ಸಚಿವಾಲಯಕ್ಕೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಫೆ. 21ರಿಂದ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ಯಾತ್ರೆಯ ಮೂರನೇ ಟ್ರಿಪ್‌

    ನವದೆಹಲಿಯಲ್ಲಿ ನಡೆದ 62ನೇ ಕೇಂದ್ರ ಭೂಗರ್ಭಶಾಸ್ತ್ರ ಪ್ರೋಗ್ರಾಮಿಂಗ್ ಬೋರ್ಡ್‌ನ ಸಭೆಯಲ್ಲಿ ಮಾತನಾಡಿದ ಗಣಿ ಸಚಿವಾಲಯದ ಕಾರ್ಯದರ್ಶಿ ವಿವೇಕ್ ಭಾರದ್ವಾಜ್, ಮೊಬೈಲ್ ಫೋನ್ ಆಗಿರಲಿ ಅಥವಾ ಸೋಲಾರ್ ಪ್ಯಾನಲ್ ಆಗಿರಲಿ ಎಲ್ಲದಕ್ಕೂ ಖನಿಜ ಬೇಕಾಗುತ್ತವೆ. ಸ್ವಾವಲಂಬಿಯಾಗಲು ದೇಶವು ನಿರ್ಣಾಯಕ ಖನಿಜಗಳನ್ನ ಕಂಡುಹಿಡಿಯುವುದು ಮತ್ತು ಅದನ್ನು ಸಂಸ್ಕರಿಸುವುದು ಬಹಳ ಮುಖ್ಯ. ಚಿನ್ನದ ಆಮದು ಕಡಿಮೆಯಾದರೆ ನಾವು ಸ್ವಾವಲಂಬಿ ಆಗುತ್ತೇವೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭಾರತದ ಪ್ರತಿಷ್ಠೆ ಹಾಳುಮಾಡಲು ದಿವಾಳಿ ಪಾಕಿಸ್ತಾನ ಸಂಚು- ಇಂಟಲಿಜೆನ್ಸ್ ರಿಪೋರ್ಟ್

    ಭಾರತದ ಪ್ರತಿಷ್ಠೆ ಹಾಳುಮಾಡಲು ದಿವಾಳಿ ಪಾಕಿಸ್ತಾನ ಸಂಚು- ಇಂಟಲಿಜೆನ್ಸ್ ರಿಪೋರ್ಟ್

    ಶ್ರೀನಗರ: ಈಗಾಗಲೇ ಆರ್ಥಿಕ ಬಿಕ್ಕಟ್ಟಿನಿಂದ (Economic Crisis) ದಿವಾಳಿಯಾಗಿರುವ ಪಾಕಿಸ್ತಾನ (Pakistan) ಇದೀಗ ಭಾರತದ (India) ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭಟನೆ ನಡೆಸಲು ಹಾಗೂ ಭಾರತೀಯ ಸಶಸ್ತ್ರ ಪಡೆಗಳನ್ನು ನಾಶ ಮಾಡಲು ಸಂಚು ರೂಪಿಸಿದೆ ಎಂದು ಭಾರತೀಯ ಗುಪ್ತಚರ ಏಜೆನ್ಸಿಗಳು (Intelligence Agencies) ವರದಿ ನೀಡಿವೆ.

    ಕಾಶ್ಮೀರದ (Jammu and Kashmir) ಕಣಿವೆಯಲ್ಲಿ ಭಾರತ ಸರ್ಕಾರದ ಪ್ರತಿಷ್ಠೆಯನ್ನು ಹಾಳುಮಾಡುವ ರೀತಿಯಲ್ಲಿ ಸಂಚು ರೂಪಿಸಲು ಪಾಕಿಸ್ತಾನವು ಪ್ರಪಂಚದಾದ್ಯಂತದ ತನ್ನ ರಾಯಭಾರ ಕಚೇರಿಗಳನ್ನು ಕೇಳಿದ್ದು, ಸಂಚು ರೂಪಿಸುವ ರಹಸ್ಯ ಟಿಪ್ಪಣಿಯನ್ನು ರಾಯಭಾರ ಕಚೇರಿಗಳಿಗೆ ಕಳುಹಿಸಿದೆ ಎನ್ನಲಾಗಿದೆ. ಇದನ್ನೂ ಓದಿ: US Fighter Jet Attack: ಚೀನಾ ಬೇಹುಗಾರಿಕಾ ಬಲೂನ್ ಹೊಡೆದುರುಳಿಸಿದ ಅಮೆರಿಕ

    `ಕಾಶ್ಮೀರ ಒಗ್ಗಟ್ಟಿನ ದಿನ’ದಂದು (ಫೆಬ್ರವರಿ 5 ರಂದು ಪಾಕಿಸ್ತಾನವು ಆಚರಿಸುವ ದಿನ), ಇಸ್ಲಾಮಾಬಾದ್‌ನಲ್ಲಿರುವ ಪಾಕಿಸ್ತಾನ ಹೈ ಕಮಿಷನ್ ತನ್ನ ಎಲ್ಲಾ ರಾಯಭಾರ ಕಚೇರಿಗಳಿಗೆ ಫ್ಯಾಕ್ಸ್ ಮತ್ತು ಇಮೇಲ್‌ಗಳನ್ನು ಕಳುಹಿಸಿದೆ. ಅದರಲ್ಲಿ ಭಾರತೀಯ ಸಶಸ್ತ್ರ ಪಡೆಗಳನ್ನು ನಾಶ ಮಾಡುವ ಯೋಜನೆಗಳ ಬಗ್ಗೆ ವಿವರಿಸಿದೆ ಎಂದು ಗುಪ್ತಚರ ಏಜೆನ್ಸಿ ವಿವರಿಸಿದೆ. ಇದನ್ನೂ ಓದಿ: Shark Attackː ಸ್ವಿಮ್ಮಿಂಗ್‌ಗೆ ತೆರಳಿದ್ದ 16ರ ಬಾಲಕಿ ಶಾರ್ಕ್ ದಾಳಿಗೆ ಬಲಿ

    ಈ ಕುರಿತು ಪ್ರಾಥಮಿಕ ತನಿಖೆ ನಡೆಸಿದಾಗ ಜಮ್ಮು ಮತ್ತು ಕಾಶ್ಮೀರದ ಕೆಲವು ಪೊಲೀಸರು ಭಯೋತ್ಪಾದಕರು ಹಾಗೂ ಜೈಶ್ ಎ ಮೊಹಮ್ಮದ್ (JEM) ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ಭಯೋತ್ಪಾದಕ ನಿರ್ವಾಹಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬುದು ತಿಳಿದುಬಂದಿದೆ.

    ಈ ನಡುವೆ ಶುಕ್ರವಾರ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಿಷೇಧಿತ ಜೈಶ್ ಎ ಮೊಹಮ್ಮದ್ (ಜೆಇಎಂ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ 6 ಭಯೋತ್ಪಾದಕರನ್ನ ಬಂಧಿಸಿದೆ. ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ. ಇದನ್ನೂ ಓದಿ: ದಿವಾಳಿ ಪಾಕಿಸ್ತಾನ ರೂಪಾಯಿ ಮೌಲ್ಯ ಪಾತಾಳಕ್ಕೆ- ಆಹಾರ ಪದಾರ್ಥಗಳ ಬೆಲೆ ಮತ್ತಷ್ಟೂ ದುಬಾರಿ.!

    ಬಂಧಿತ ಆರೋಪಿಗಳು ಗ್ರೆನೇಡ್ ದಾಳಿ, ಅಮಾಯಕ ನಾಗರಿಕರನ್ನು ಬೆದರಿಸುವುದು, ಪಿಆರ್‌ಐ ಸದಸ್ಯರು, ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ಕುಲ್ಗಾಮ್ ಜಿಲ್ಲೆಯಲ್ಲಿ ಶಾಂತಿಯುತ ವಾತಾವರಣವನ್ನು ಹಾಳುಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೋಶಿಮಠದ ಬಳಿಕ ಜಮ್ಮು-ಕಾಶ್ಮೀರದಲ್ಲೂ ಮನೆ, ರಸ್ತೆಗಳು ಬಿರುಕು

    ಜೋಶಿಮಠದ ಬಳಿಕ ಜಮ್ಮು-ಕಾಶ್ಮೀರದಲ್ಲೂ ಮನೆ, ರಸ್ತೆಗಳು ಬಿರುಕು

    ಶ್ರೀನಗರ: ಉತ್ತರಾಖಂಡದ (Uttarakhand) ಜೋಶಿಮಠದಲ್ಲಿ ಮನೆಗಳು, ರಸ್ತೆಗಳಲ್ಲಿ ಬಿರುಕು ಕಾಣಿಸಿಕೊಂಡು ಅನಾಹುತ ಸೃಷ್ಟಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲೂ (Jammu and Kashmir) ದೊಡ್ಡ ಮಟ್ಟದಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿದೆ.

    ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಮನೆ, ರಸ್ತೆಗಳಲ್ಲಿ ಬಿರುಕು ಕಾಣಿಸಿಕೊಳ್ಳಲು ಪ್ರಾರಂಭಿಸಿದೆ. ಇದರೊಂದಿಗೆ ಭೂಮಿ ಕುಸಿತವಾಗಿರುವುದೂ ಕಂಡುಬಂದಿದೆ. ಇದನ್ನೂ ಓದಿ: ಇಡೀ ಜೋಶಿಮಠ ಮುಳುಗುವ ಎಚ್ಚರಿಕೆ ನೀಡಿದ ಇಸ್ರೋ – ಆತಂಕ ಮೂಡಿಸುತ್ತಿದೆ ಉಪಗ್ರಹ ಚಿತ್ರ

    ಕಳೆದ ವರ್ಷ ಡಿಸೆಂಬರ್ ವೇಳೆ ಮನೆಯೊಂದರಲ್ಲಿ ಕಾಣಿಸಿಕೊಂಡ ಬಿರುಕುಗಳು ಈಗ ವ್ಯಾಪಿಸಲು ಪ್ರಾರಂಭಿಸಿದೆ ಎಂದು ದೋಡಾದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅಥರ್ ಅಮೀನ್ ಜರ್ಗರ್ ಹೇಳಿದ್ದಾರೆ.

    ದೋಡಾ ಜಿಲ್ಲೆಯ (Doda District) ಮನೆಯೊಂದರಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಇದು ವ್ಯಾಪಿಸುತ್ತಿದ್ದು, ಎರಡು ದಿನಗಳಲ್ಲಿ 6 ಕಟ್ಟಡಗಳು ಬಿರುಕು ಬಿಟ್ಟಿವೆ. ಈ ಬಿರುಕುಗಳನ್ನು ಸರಿಪಡಿಸಿದ ಪ್ರದೇಶಗಳಲ್ಲಿ ಕೆಲ ಭಾಗಗಳು ಮುಳುಗಡೆಯಾಗುವ ಆತಂಕ ಶುರುವಾಗಿದೆ ಎಂದು ಜರ್ಗರ್ ಹೇಳಿದರು.

    ಫೆ.3ರಂದು ಪ್ರಾಥಮಿಕ ಮೌಲ್ಯಮಾಪನ ಮಾಡಲಾಗಿದ್ದು, ಭೂವಿಜ್ಞಾನಿಗಳು ಪ್ರದೇಶಕ್ಕೆ ಭೇಟಿ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಜೋಶಿಮಠದ ಅಪಾಯಕಾರಿ ಕಟ್ಟಡ ನೆಲಸಮ ಕಾರ್ಯಾಚರಣೆ ಪ್ರಾರಂಭ – 600ಕ್ಕೂ ಹೆಚ್ಚು ಕಡೆ ಗುರುತು

    ಕಳೆದ ತಿಂಗಳು ಉತ್ತರಾಖಂಡದ ಜೋಶಿಮಠದಲ್ಲಿ (Joshimath) ಮನೆ ಹಾಗೂ ರಸ್ತೆಗಳು ಬಿರುಕು ಕಾಣಿಸಿಕೊಂಡಿತ್ತು. ಬಳಿಕ ಸರ್ಕಾರ ಪ್ರತಿ ಸಂತ್ರಸ್ತ ಕುಟುಂಬಳಿಗೆ 1.5 ಲಕ್ಷ ಪರಿಹಾರ ಘೋಷಣೆ ಮಾಡಿತು. ಈ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಜೋಶಿಮಠದಲ್ಲಿ ಆಗುತ್ತಿರುವ ಭೂ ಕುಸಿತದ ಪ್ರಾಥಮಿಕ ವರದಿಯೊಂದನ್ನು ಬಿಡುಗಡೆ ಮಾಡಿ ಮುಂದೆ ಭೂಕುಸಿತ ಮತ್ತಷ್ಟು ಹೆಚ್ಚಾಗಬಹುದು ಎಂದು ಎಚ್ಚರಿಕೆ ನೀಡಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸರ್ಕಾರ ಸುಳ್ಳು ಹರಡುತ್ತಿದೆ, ಸರ್ಜಿಕಲ್ ಸ್ಟ್ರೈಕ್‌ ವರದಿ ಎಲ್ಲಿದೆ – ದಿಗ್ವಿಜಯ್ ಸಿಂಗ್ ಪ್ರಶ್ನೆ

    ಸರ್ಕಾರ ಸುಳ್ಳು ಹರಡುತ್ತಿದೆ, ಸರ್ಜಿಕಲ್ ಸ್ಟ್ರೈಕ್‌ ವರದಿ ಎಲ್ಲಿದೆ – ದಿಗ್ವಿಜಯ್ ಸಿಂಗ್ ಪ್ರಶ್ನೆ

    ಶ್ರೀನಗರ: ಬಿಜೆಪಿ (BJP) ನೇತೃತ್ವದ ಕೇಂದ್ರ ಸರ್ಕಾರ ಕೇವಲ ಸುಳ್ಳನ್ನೇ ಬಿತ್ತರಿಸುತ್ತಿದೆ. 2016ರ ಸರ್ಜಿಕಲ್ ಸ್ಟ್ರೈಕ್‌ (Surgical Strike 2016) ಹಾಗೂ 2019ರಲ್ಲಿ ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಗಳ (Pulwama Terror Attack) ಬಗ್ಗೆ ಕೇಂದ್ರ ಸರ್ಕಾರ ಈವರೆಗೆ ಸಂಸತ್ತಿನಲ್ಲಿ ವರದಿ ಮಂಡಿಸಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ (Digvijaya Singh) ವಾಗ್ದಾಳಿ ನಡೆಸಿದ್ದಾರೆ.

    ರಾಹುಲ್‌ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ (BJP Government) ಸುಳ್ಳನ್ನೇ ಹರಡುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಶೀಘ್ರದಲ್ಲಿ ತ್ರಿ ಸದಸ್ಯ ಪೀಠದಲ್ಲಿ ಹಿಜಬ್ ಪ್ರಕರಣದ ವಿಚಾರಣೆ ನಡೆಸಲಾಗುವುದು: ಸಿಜೆಐ

    2019ರಲ್ಲಿ ಪಾಕಿಸ್ತಾನ (Pakistan) ಮೂಲದ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆ ನಡೆಸಿದ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಪುಲ್ವಾಮಾದಲ್ಲಿ ಹುತಾತ್ಮರಾದರು. ಆಗ ಸಿಆರ್‌ಪಿಎಫ್ ಅಧಿಕಾರಿಗಳು ಸಿಬ್ಬಂದಿಯನ್ನ ಏರ್‌ಲಿಫ್ಟ್ ಮಾಡಬೇಕೆಂದು ಪ್ರಧಾನಿ ಮೋದಿಗೆ (Narendra Modi) ಮನವಿ ಮಾಡಿದ್ದರು. ಆದ್ರೆ ಮೋದಿ ಅದಕ್ಕೆ ಒಪ್ಪಲಿಲ್ಲ. ಇಂತಹ ಲೋಪ ಹೇಗೆ ಸಂಭವಿಸಿತು? ಈವರೆಗೆ ಪುಲ್ವಾಮಾ ದಾಳಿಯ ಕುರಿತು ಒಂದೇ ಒಂದು ವರದಿಯನ್ನೂ ಸಂಸತ್ತಿನ ಮುಂದೆ ಇಟ್ಟಿಲ್ಲ ಎಂದು ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದರು.

    ಪುಲ್ವಾಮಾ ದಾಳಿ ಬಳಿಕ ಸರ್ಜಿಕಲ್ ಸ್ಟ್ರೈಕ್‌ ನಡೆಸಲಾಗಿದೆ ಎಂದು ಹೇಳಿಕೊಂಡರು. ಆದ್ರೆ ಪುರಾವೆಗಳನ್ನ ತೋರಿಸಲಿಲ್ಲ. ಕೇವಲ ಸುಳ್ಳುಗಳನ್ನೇ ಹರಡಿದರು ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: 21 ದ್ವೀಪಗಳಿಗೆ ಪರಮವೀರ ಚಕ್ರ ಪಡೆದ ಸೈನಿಕರ ಹೆಸರು – ಬೋಸ್ ರಾಷ್ಟ್ರೀಯ ಸ್ಮಾರಕದ ಮಾದರಿ ಅನಾವರಣಗೊಳಿಸಿದ ಮೋದಿ

    ಅಷ್ಟೇ ಅಲ್ಲದೇ 2016ರಲ್ಲಿ ಜಮ್ಮು ಮತ್ತು ಕಾಶ್ಮೀರದ ಉರಿ ಪಟ್ಟಣದಲ್ಲಿರುವ ಸೇನೆಯ 12 ಬ್ರಿಗೇಡ್ ಪ್ರಧಾನ ಕಚೇರಿಗಳ ಮೇಲೆ ನಾಲ್ವರು ಭಯೋತ್ಪಾದಕರು ಗ್ರೇನೆಡ್ ದಾಳಿ ನಡೆಸಿದರು. ಈ ದಾಳಿಯಲ್ಲಿ 18 ಯೋಧರು ಹುತಾತ್ಮರಾದರು. ಉರಿ ಭಯೋತ್ಪಾದಕ ದಾಳಿಯ 10 ದಿನಗಳ ಬಳಿಕ ಸರ್ಜಿಕಲ್ ಸ್ಟ್ರೈಕ್‌ ನಡೆಸಲಾಯಿತು. ಅದರ ವರದಿಯನ್ನೂ ಸಂಸತ್ತಿನಲ್ಲಿ ಮಂಡಿಸಿಲ್ಲ ಎಂದು ಹೇಳಿದ್ದಾರೆ.

    ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದ ರಜೌರಿಯ ಧಂಗ್ರಿ ಮತ್ತು ಜಮ್ಮುವಿನ ನರ್ವಾಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದರು. ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ನಂತರವೂ ಕಾಶ್ಮೀರದ ಕಣಿವೆಯಲ್ಲಿ ಭಯೋತ್ಪಾದನೆ ಇನ್ನೂ ಜೀವಂತವಾಗಿದೆ. 370ನೇ ವಿಧಿ ರದ್ದಾದ ನಂತರ ಇಲ್ಲಿನ ಪರಿಸ್ಥಿತಿ ಬೆಳಕಿಗೆ ಬರುತ್ತಿಲ್ಲ. ಉದ್ದೇಶಿತ ಹತ್ಯೆ ಹಾಗೂ ಬಾಂಬ್ ಸ್ಫೋಟಗಳು ಮತ್ತೆ ಶುರುವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    2022ರ ಸೆಪ್ಟೆಂಬರ್ 27ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭಗೊಂಡ ಭಾರತ್ ಜೋಡೋ ಯಾತ್ರೆಯು ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಚರಿಸುತ್ತಿದೆ. ಇದೇ ತಿಂಗಳ ಜನವರಿ 30ರಂದು ಶ್ರೀನಗರದಲ್ಲಿ ಮುಕ್ತಾಯವಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜ್ಯಪಾಲರನ್ನ ಗುಂಡಿಕ್ಕಿ ಕೊಲ್ಲಲು ಉಗ್ರನನ್ನು ಕಳಿಸ್ತೀವಿ – ಹೇಳಿಕೆ ನೀಡಿದ DMK ನಾಯಕ ಸಸ್ಪೆಂಡ್

    ರಾಜ್ಯಪಾಲರನ್ನ ಗುಂಡಿಕ್ಕಿ ಕೊಲ್ಲಲು ಉಗ್ರನನ್ನು ಕಳಿಸ್ತೀವಿ – ಹೇಳಿಕೆ ನೀಡಿದ DMK ನಾಯಕ ಸಸ್ಪೆಂಡ್

    ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್.ಎನ್.ರವಿ (RN Ravi) ನಡುವಣ ತಿಕ್ಕಾಟ ತೀವ್ರಗೊಂಡಿದೆ. ಈ ನಡುವೆ ಡಿಎಂಕೆ ವಕ್ತಾರ ಶಿವಾಜಿ ಕೃಷ್ಣಮೂರ್ತಿ (Shivaji Krishnamurthy) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಅಂಬೇಡ್ಕರ್ ಹೆಸರನ್ನು ಹೇಳಲು ಆಗಲ್ಲ ಅಂದ್ಮೇಲೆ ನಾವು ಸುಮ್ಮನೆ ಇರಲ್ಲ. ಅವರು ಕಾಶ್ಮೀರಕ್ಕೆ ಹೋಗಿರಲಿ.. ರಾಜ್ಯಪಾಲರನ್ನು ಗುಂಡಿಕ್ಕಿ ಕೊಲ್ಲಲು ಅಲ್ಲಿಗೆ ನಾವು ಒಬ್ಬ ಉಗ್ರನನ್ನು ಕಳಿಸ್ತೇವೆ ಎಂದಿದ್ದಾರೆ. ಇದನ್ನೂ ಓದಿ: T20 ವಿಶ್ವಕಪ್‌ನಲ್ಲಿ ಭಾರತದ ವನಿತೆಯರಿಗೆ ಶುಭಾರಂಭ – SA ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ

    ಇದಕ್ಕೆ ಬಿಜೆಪಿ (BJP) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಡಿಎಂಕೆಗೆ ಉಗ್ರರ ಸಂಪರ್ಕ ಇರೋ ಶಂಕೆಯಿದ್ದು, ಈ ಬಗ್ಗೆ ಪೊಲೀಸ್ ತನಿಖೆ ನಡೆಯಬೇಕು ಎಂದು ಆಗ್ರಹಿಸಿದೆ. ಇನ್ನೂ ವಿವಾದಿತ ಹೇಳಿಕೆ ಸಂಬಂಧ ರಾಜ್ಯಪಾಲರ (Tamilnadu Governor) ಉಪ ಕಾರ್ಯದರ್ಶಿ ಪ್ರಸನ್ನ ರಾಮಸಾಮಿ ಅವರು ಚೆನ್ನೈನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಮಾಜಿ ಶಾಸಕ ವೈಎಸ್‌ವಿ ದತ್ತಾ, ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ

    ಈ ಬೆನ್ನಲ್ಲೇ ರಾಜ್ಯಪಾಲ ಆರ್.ಎನ್.ರವಿ ಕುರಿತು ಡಿಎಂಕೆ (DMK) ನಾಯಕ ಶಿವಾಜಿ ಕೃಷ್ಣಮೂರ್ತಿ ಅವರನ್ನ ಪಕ್ಷದಿಂದ ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ. ಪಕ್ಷದ ನಿಯಮ ಗಾಳಿಗೆ ತೂರಿ ವಿವಾದಿತ ಹೇಳಿಕೆ ನೀಡಿದ್ದರಿಂದ ಪಕ್ಷ ತಕ್ಷಣವೇ ಈ ಕ್ರಮ ಕೈಗೊಂಡಿದ್ದು, ಅವರನ್ನು ಪಕ್ಷದ ಎಲ್ಲ ಜವಾಬ್ದಾರಿಗಳಿಂದ ಅಮಾನತುಗೊಳಿಸಿದೆ.

    ಈ ಮಧ್ಯೆ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈಗೆ ಕೇಂದ್ರ ಸರ್ಕಾರ ಝೆಡ್ ಶ್ರೇಣಿಯ ಭದ್ರತೆ ಒದಗಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜೌರಿ ಉಗ್ರರ ದಾಳಿ ಪ್ರಕರಣ – 50 ಜನರನ್ನು ವಶಕ್ಕೆ ಪಡೆದು ವಿಚಾರಣೆ

    ರಾಜೌರಿ ಉಗ್ರರ ದಾಳಿ ಪ್ರಕರಣ – 50 ಜನರನ್ನು ವಶಕ್ಕೆ ಪಡೆದು ವಿಚಾರಣೆ

    ಶ್ರೀನಗರ: ಹೊಸ ವರ್ಷದಂದೇ ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಾಜೌರಿಯಲ್ಲಿ (Rajouri) ಉಗ್ರರ ದಾಳಿಗೆ (Terrorists Attack) 7 ಜನರು ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಬೃಹತ್ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. 50ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

    ಜನವರಿ 1 ರಂದು ಜಮ್ಮು ಮತ್ತು ಕಾಶ್ಮೀರದ ಧಂಗ್ರಿ ಗ್ರಾಮದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ 7 ಜನರು ಸಾವನ್ನಪ್ಪಿದ್ದರು. 14 ಜನರು ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಭಯೋತ್ಪಾದಕರ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡುವವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿರುವುದಾಗಿ ನಗರದಲ್ಲಿ ಪೊಲೀಸರು ಪೋಸ್ಟರ್‌ಗಳನ್ನು ಅಳವಡಿಸಿದ್ದಾರೆ.

    ದಾಳಿಗೂ ಮೊದಲು ಭಯೋತ್ಪಾದಕರ ಉಪಸ್ಥಿತಿಯ ವರದಿಗಳಿದ್ದ 10ಕ್ಕೂ ಹೆಚ್ಚು ಗ್ರಾಮಗಳಲ್ಲಿ ಸೇನೆ, ಪೊಲೀಸರು ಹಾಗೂ ಸಿಆರ್‌ಪಿಎಫ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ರಾಜೌರಿಯ ಹೊರಗಿನಿಂದ ಜಮ್ಮು ಮತ್ತು ಕಾಶ್ಮೀರದ ಪೊಲೀಸರ ವಿಶೇಷ ತಂಡವನ್ನೂ ಕಾರ್ಯಾಚರಣೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮ್ಯೂಸಿಕ್‌ ಸೌಂಡ್‌ ಕಡಿಮೆ ಮಾಡಿ ಎಂದಿದ್ದಕ್ಕೆ ಸೇನಾಧಿಕಾರಿ ಕಾರಿಗೆ ಬೆಂಕಿ ಇಟ್ಟವರ ಹೋಟೆಲ್‌ಗೆ ಬಿತ್ತು ಬೀಗ

    ಧಂಗ್ರಿ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಸೆರೆಹಿಡಿಯಲು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಬೃಹತ್ ಪ್ರಮಾಣದಲ್ಲಿ ನಡೆಯುತ್ತಿದೆ. ವಿಚಾರಣೆ ವೇಳೆ ಕೆಲವು ಪ್ರಮುಖ ಸುಳಿವುಗಳು ದೊರಕಿವೆ. ಉಗ್ರರನ್ನು ಸೆರೆಹಿಡಿಯಲು ಎಲ್ಲಾ ರೀತಿಯ ಕೆಲಸಗಳು ನಡೆಯುತ್ತಿವೆ ಎಂದು ರಾಜೌರಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಅಸ್ಲಾಮ್ ಹೇಳಿದ್ದಾರೆ.

    ಶಂಕಿತ ವ್ಯಕ್ತಿಗಳ ವಿಚಾರಣೆ ವೇಳೆ ಹಲವು ಪ್ರಮುಖ ಸುಳಿವುಗಳು ಪತ್ತೆಯಾಗಿವೆ. ದಾಳಿ ನಡೆಸುವ ಮುನ್ನ ಭಯೋತ್ಪಾದಕರು ಇದೇ ಊರಿನಲ್ಲಿದ್ದರು ಎಂಬುದು ಬಹುತೇಕ ಸ್ಪಷ್ಟವಾಗಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಜೋಶಿಮಠದ ಅಪಾಯಕಾರಿ ಕಟ್ಟಡ ನೆಲಸಮ ಕಾರ್ಯಾಚರಣೆ ಪ್ರಾರಂಭ – 600ಕ್ಕೂ ಹೆಚ್ಚು ಕಡೆ ಗುರುತು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಕ್ಷ ತೊರೆದಿದ್ದ ಘಟಾನುಘಟಿ ಕಾಶ್ಮೀರ ನಾಯಕರು ಮತ್ತೆ ಕಾಂಗ್ರೆಸ್ ಸೇರ್ಪಡೆ

    ಪಕ್ಷ ತೊರೆದಿದ್ದ ಘಟಾನುಘಟಿ ಕಾಶ್ಮೀರ ನಾಯಕರು ಮತ್ತೆ ಕಾಂಗ್ರೆಸ್ ಸೇರ್ಪಡೆ

    ಶ್ರೀನಗರ: ಮಾಜಿ ಸಿಎಂ ಗುಲಾಂ ನಬಿ ಆಜಾದ್ (Ghulam Nabi Azad) ಅವರ ರಾಜೀನಾಮೆಯ ಬೆನ್ನಲ್ಲೇ ಪಕ್ಷಬಿಟ್ಟು ಹೋಗಿದ್ದ ಹಲವು ನಾಯಕರು ಭಾರತ್ ಜೋಡೋ ಯಾತ್ರೆ (Bharat Jodo Yatra) ಜಮ್ಮು ಮತ್ತು ಕಾಶ್ಮೀರ (Jammu And Kashmir) ಪ್ರವೇಶಿಸುವ ಮುನ್ನವೇ ಮತ್ತೆ ಪಕ್ಷ ಸೇರ್ಪಡೆಯಾಗಿದ್ದಾರೆ

    ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವರಾದ ಪೀರ್ಜಾದಾ ಮೊಹಮ್ಮದ್ ಸಯೀದ್, ಮುಜಾಫರ್ ರ‍್ರೆ, ಬಲ್ವಾನ್ ಸಿಂಗ್, ಮೊಹಿಂದರ್ ಭಾರದ್ವಾಜ್, ಭೂಷಣ್ ಡೋಗ್ರಾ, ವಿನೋದ್ ಶರ್ಮಾ, ನರಿಂದರ್ ಶರ್ಮಾ, ನರೇಶ್ ಶರ್ಮಾ, ಅಂಬ್ರಿಶ್ ಮಗೋತ್ರಾ, ಸುಭಾಷ್ ಭಗತ್, ಬದ್ರಿ ನಾಥ್ ಶರ್ಮಾ, ವರುಣ್ ಮಗೋತ್ರ, ಅನುರಾಧ ಶರ್ಮಾ, ವಿಜಯ್ ತಾರ್ಗೋತ್ರ ಮತ್ತು ಚಂದರ್ ಪ್ರಭಾ ಶರ್ಮಾ ಸೇರಿದಂತೆ ಹಲವು ಹಿರಿಯ ನಾಯಕರು ಶುಕ್ರವಾರ ಪಕ್ಷಕ್ಕೆ ಮರಳಿದ್ದಾರೆ.

    ಬಲ್ವಾನ್ ಸಿಂಗ್ ಮತ್ತು ತಾರಾ ಚಂದ್, ಗುಲಾಮ್ ನಬಿ ಆಜಾದ್ ಅವರ ನಿಷ್ಠಾವಂತರು. ಈ ಹಿಂದೆ ಕಾಂಗ್ರೆಸ್ ತೊರೆದು ಡೆಮಾಕ್ರಟಿಕ್ ಆಜಾದ್ ಪಾರ್ಟಿ (DAP) ಸೇರಿದ್ದರು. ಆದ್ರೆ ಪಕ್ಷವಿರೋಧಿ ಚಟುವಟಿಕೆಗಳಿಂದಾಗಿ ಆಜಾದ್ ಕೆಲವರನ್ನ ಡಿಎಪಿ ಯಿಂದ ಹೊರಹಾಕಿದ್ದರು. ಇದನ್ನೂ ಓದಿ: ಕರ್ನಾಟಕ-ಕೇರಳ ಗಡಿಯಲ್ಲಿ ರಿಂಗಣಿಸಿ ಆತಂಕ ಸೃಷ್ಟಿಸಿದ ಸ್ಯಾಟಲೈಟ್ ಫೋನ್

    ಇಂದು ಹಲವಾರು ನಾಯಕರು ಮತ್ತೆ ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (KC Venugopal) ಸುದ್ದಿಗೋಷ್ಠಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಇದು ಕಾಂಗ್ರೆಸ್ (Congress) ಪಾಲಿಗೆ ಬಹುದೊಡ್ಡ ದಿನ ಎಂದು ಹರ್ಷಗೊಂಡಿದ್ದಾರೆ. ಇದನ್ನೂ ಓದಿ: ದೇಶ ಕಾಯುವಾಗ ನಾವು ನಿಯತ್ತಿನ ನಾಯಿಗಳೇ – ಸಿದ್ದುಗೆ ಸಿ.ಟಿ ರವಿ ಗುದ್ದು

    ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಎಐಸಿಸಿ ರಾಜ್ಯ ಉಸ್ತುವಾರಿ ರಜನಿ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜಮ್ಮು-ಕಾಶ್ಮೀರ, ದೆಹಲಿಯಲ್ಲಿ ಭೂಕಂಪನ – ಮನೆಯಿಂದ ಹೊರಗಡೆ ಬಂದ ಜನ

    ಜಮ್ಮು-ಕಾಶ್ಮೀರ, ದೆಹಲಿಯಲ್ಲಿ ಭೂಕಂಪನ – ಮನೆಯಿಂದ ಹೊರಗಡೆ ಬಂದ ಜನ

    ನವದೆಹಲಿ: ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ (Earthquake) ಸಂಭವಿಸಿದ್ದು ದೆಹಲಿ (NewDelhi) ಮತ್ತು ನೆರೆಯ ಎನ್‌ಸಿಆರ್ (NCR) ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ.

    ಭಾರತೀಯ ಕಾಲಮಾನ ರಾತ್ರಿ 7:55ಕ್ಕೆ ಅಫ್ಘಾನಿಸ್ತಾನದ (Afghanistan) ಫೈಜಾಬಾದ್‌ನಿಂದ ದಕ್ಷಿಣಕ್ಕೆ 79 ಕಿಮೀ ದೂರದಲ್ಲಿ 200 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ. ಇದನ್ನೂ ಓದಿ: ಏಕದಿನ ಮಾದರಿಯಲ್ಲಿ ಏಷ್ಯಾಕಪ್ 2023 – ಒಂದೇ ಗುಂಪಿನಲ್ಲಿ ಸ್ಥಾನ ಪಡೆದ ಭಾರತ-ಪಾಕ್

    ಈ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರ (Jammu And Kashmir), ದೆಹಲಿ ಹಾಗೂ ನೆರೆಯ ಎನ್‌ಸಿಆರ್ ಪ್ರದೇಶಗಳಲ್ಲಿ ಕಂಪನ ಉಂಟಾಗಿದೆ. ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ. ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ ಜನರು ಆತಂಕಗೊಂಡು ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್‌ನಲ್ಲೇ ಹುಡುಗಿ ಮುಂದೆ ಹಸ್ತಮೈಥುನ – ದೂರು ನೀಡಲು ಸಂತ್ರಸ್ತೆ ಹಿಂದೇಟು

    ಕಳೆದ ಭಾನುವಾರ (ಜನವರಿ 1) ಮುಂಜಾನೆ ದೆಹಲಿ ಹಾಗೂ ನೆರೆಯ ಪ್ರದೇಶಗಳಲ್ಲಿ 3.8 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಯಾವುದೇ ಹಾನಿಯ ಬಗ್ಗೆ ವರದಿಯಾಗಿರಲಿಲ್ಲ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು (NCS) ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k