Tag: ಜಮ್ಮು ಮತ್ತು ಕಾಶ್ಮೀರ

  • ಪಿಒಕೆ ಮರಳಿ ಪಡೆದಾಗಲೇ ನಮ್ಮ ಸಂಕಲ್ಪ ಪೂರ್ಣಗೊಳ್ಳುತ್ತದೆ: ರಾಜನಾಥ್ ಸಿಂಗ್

    ಪಿಒಕೆ ಮರಳಿ ಪಡೆದಾಗಲೇ ನಮ್ಮ ಸಂಕಲ್ಪ ಪೂರ್ಣಗೊಳ್ಳುತ್ತದೆ: ರಾಜನಾಥ್ ಸಿಂಗ್

    ಶ್ರೀನಗರ: ಭಾರತ ಗಿಲ್ಗಿಟ್, ಬಾಲ್ಟಿಸ್ತಾನ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಸಂಪೂರ್ಣ ಭಾಗವನ್ನು ಮರಳಿ ಪಡೆದಾಗಲೇ ನಮ್ಮ ಸಂಕಲ್ಪ ಪೂರ್ಣಗೊಳ್ಳುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿಕೆ ನೀಡಿದ್ದಾರೆ. ಈ ಮೂಲಕ ಪಾಕ್ ಆಕ್ರಮಿತ ಕಾಶ್ಮೀರವನ್ನು (POK) ವಶಪಡಿಸಿಕೊಳ್ಳುವ ಸುಳಿವು ನೀಡಿದ್ದಾರೆ.

    ಇಂದು ಬುದ್ಗಾಮ್‌ನಲ್ಲಿ ಭಾರತೀಯ ಸೇನೆ ಆಯೋಜಿಸಿದ್ದ 76ನೇ ಪದಾತಿ ದಳದ ದಿನದ ಅಂಗವಾಗಿ ಶೌರ್ಯ ದಿವಸ್ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಸಂಪೂರ್ಣ ಜಮ್ಮು ಮತ್ತು ಕಾಶ್ಮೀರವನ್ನು ಮರಳಿ ಪಡೆದಾಗಲೇ ನಮ್ಮ ಸಂಕಲ್ಪ ಪೂರ್ಣಗೊಳ್ಳುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಶೀಘ್ರವೇ ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾಶ್ಮೀರದಲ್ಲಿ ಹಿಂದೂಗಳೇ ಇರುವುದಿಲ್ಲ: ಫಾರೂಕ್ ಅಬ್ದುಲ್ಲಾ

    ದಾಳಿಕೋರರ ಕ್ರೂರ ದಾಳಿಯಿಂದ ಈ ಭೂಮಿಯನ್ನು ಮುಕ್ತಗೊಳಿಸಲು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಎಲ್ಲಾ ಹುತಾತ್ಮರ ಮುಂದೆ ನಾನು ತಲೆಬಾಗುತ್ತೇನೆ. ಭಾರತ ವಿಭಜನೆಯಾದ ನಂತರ ಪಾಕಿಸ್ತಾನ ತನ್ನ ನಿಜವಾದ ಬಣ್ಣವನ್ನು ತೋರಿಸಿದೆ. ಪಾಕಿಸ್ತಾನ ಇಷ್ಟೊಂದು ಕೆಳಮಟ್ಟಕ್ಕೆ ಇಳಿದು ಜಮ್ಮು ಮತ್ತು ಕಾಶ್ಮೀರದ ಮೇಲೆ ದಾಳಿ ಮಾಡುತ್ತದೆ ಎಂದು ನಾವು ಊಹಿಸಿರಲಿಲ್ಲ ಎಂದರು. ಇದನ್ನೂ ಓದಿ: ಈ ಹಿಂದೆ ಪಠ್ಯಪುಸ್ತಕಗಳಲ್ಲಿ ಟಿಪ್ಪು ವೈಭವೀಕರಣ ಇತ್ತು ಈಗ ಇಲ್ಲ: ಬಿ.ಸಿ ನಾಗೇಶ್

    ಪಾಕಿಸ್ತಾನ ತನ್ನ ಆಕ್ರಮಿತ ಕಾಶ್ಮೀರದಲ್ಲಿ ಜನರ ಮೇಲೆ ದೌರ್ಜನ್ಯ ಎಸಗುತ್ತಿರುವುದರ ವಿರುದ್ಧ ವಾಗ್ದಾಳಿ ನಡೆಸಿದ ರಾಜನಾಥ್ ಸಿಂಗ್, ಇದರ ಪರಿಣಾಮವನ್ನು ಪಾಕಿಸ್ತಾನ ಎದುರಿಸಬೇಕಾಗುತ್ತದೆ. ನಾವು ಈಗಾಗಲೇ ಜಮ್ಮು ಮತ್ತು ಕಾಶ್ಮೀರ, ಹಾಗೂ ಲಡಾಕ್‌ನಲ್ಲಿ ನಮ್ಮ ಅಭಿವೃದ್ಧಿಯ ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಇನ್ನು ಗಿಲ್ಗಿಟ್ ಹಾಗೂ ಬಾಲ್ಟಿಸ್ತಾನ್ ತಲುಪಿ, ಅಲ್ಲಿ ನಮ್ಮ ಗುರಿಯನ್ನು ಸಾಧಿಸಿ ತೋರಿಸುತ್ತೇವೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಈ ಬಾರಿ ದೀಪಾವಳಿ ಹಬ್ಬಕ್ಕೆ ಸೂರ್ಯಗ್ರಹಣ ಕಾರ್ಮೋಡ

    ಈ ಬಾರಿ ದೀಪಾವಳಿ ಹಬ್ಬಕ್ಕೆ ಸೂರ್ಯಗ್ರಹಣ ಕಾರ್ಮೋಡ

    ಬೆಂಗಳೂರು: ಈ ಬಾರಿಯ ದೀಪಾವಳಿ ಹಬ್ಬಕ್ಕೆ (Deepavali Festival) ಗ್ರಹಣದ ಕಾರ್ಮೋಡ ಕವಿದಿದೆ.

    3 ವರ್ಷಗಳ ಬಳಿಕ ದೇಶದಲ್ಲಿ ಪಾರ್ಶ್ವ ಸೂರ್ಯಗ್ರಹಣ (Solar eclipse) ಗೋಚರವಾಗುತ್ತಿದೆ. ನಾಡಿದ್ದು ಅಂದ್ರೆ, ಅಕ್ಟೋಬರ್ 25ರ ಸಂಜೆ 5 ಗಂಟೆ 12 ನಿಮಿಷಕ್ಕೆ ಆರಂಭವಾಗಿ, 6 ಗಂಟೆ 27 ನಿಮಿಷಕ್ಕೆ ಕೇತುಗ್ರಸ್ಥ ಸೂರ್ಯಗ್ರಹಣ ಅಂತ್ಯ ಕಾಣುತ್ತದೆ. ರಾಜ್ಯದ ಎಲ್ಲಾ ಭಾಗಗಳಲ್ಲಿ ಸೂರ್ಯಾಸ್ತದ ಹೊತ್ತಿನಲ್ಲಿ ಗ್ರಹಣ ಗೋಚರಿಸಲಿದೆ. ಇದನ್ನೂ ಓದಿ: ಪಾಕಿಸ್ತಾನದ ವಿರುದ್ಧ ಭಾರತ ಗೆದ್ದಿರೋದು ಕೆಲವರಿಗೆ ಬೇಸರ ತರಿಸಿದೆ – ಕಲ್ಲಡ್ಕ ಪ್ರಭಾಕರ್ ಭಟ್

    ಬೆಂಗಳೂರಿನಲ್ಲಿ (Bengaluru) ಶೇ.10ರಷ್ಟು ಮಾತ್ರ ಗ್ರಹಣ ಗೋಚರಿಸಲಿದೆ. ಗ್ರಹಣ ವೀಕ್ಷಣೆಗೆ ಉಡುಪಿ ಉತ್ತಮ ಪ್ರದೇಶವಾಗಿದೆ. ದೇಶದ ಪೂರ್ವ ಭಾಗಗಳಲ್ಲಿ ಸೂರ್ಯಾಸ್ತದ ವೇಳೆ ಗ್ರಹಣ ಸಂಭವಿಸಿದರೇ, ಈಶಾನ್ಯ ಭಾಗಗಳಲ್ಲಿ ಸೂರ್ಯಾಸ್ತದ ಬಳಿಕ ಗ್ರಹಣ ಕಾಣಿಸಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಶೇ.55ರಷ್ಟು, ಲೇಹ್ ಲಡಾಖ್‌ನಲ್ಲಿ ಶೇ.54ರಷ್ಟು ಗ್ರಹಣ ಗೋಚರವಾಗಲಿದೆ. ಇದನ್ನೂ ಓದಿ: ನಂಗೆ ಎರಡು ಮುಖವಿಲ್ಲ, ಇರೋದು ಒಂದೇ ಮುಖ: ಹೆಚ್‍ಡಿಕೆಗೆ ಸೋಮಣ್ಣ ಟಾಂಗ್

    ಭಾರತ ಮಾತ್ರವಲ್ಲದೇ ಯುರೋಪ್ (Europe), ಉತ್ತರ ಆಫ್ರಿಕಾ, ಮಧ್ಯ ಪ್ರಾಚ್ಯ ಮತ್ತು ಏಷ್ಯಾದ ಇತರ ಭಾಗಗಳಲ್ಲೂ ಸೂರ್ಯಗ್ರಹಣ ಗೋಚರಿಸಲಿದೆ. ರಷ್ಯಾದ ಉಗಾರದಲ್ಲಿ ಶೇ.85ರಷ್ಟು ಅಂದ್ರೆ ಅತಿ ಹೆಚ್ಚು ಭಾಗ ಗ್ರಹಣ ಕಾಣಿಸಲಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಶ್ಮೀರಿ ಪಂಡಿತರಿಗೆ ಭದ್ರತೆ ಕಲ್ಪಿಸುವಲ್ಲಿ ಮೋದಿ ಸರ್ಕಾರ ವಿಫಲ – ಕಾಂಗ್ರೆಸ್ ಟೀಕೆ

    ಕಾಶ್ಮೀರಿ ಪಂಡಿತರಿಗೆ ಭದ್ರತೆ ಕಲ್ಪಿಸುವಲ್ಲಿ ಮೋದಿ ಸರ್ಕಾರ ವಿಫಲ – ಕಾಂಗ್ರೆಸ್ ಟೀಕೆ

    ಶ್ರೀನಗರ: ಶೋಪಿಯಾನ್ (Shopian) ಜಿಲ್ಲೆಯಲ್ಲಿ ಉಗ್ರರ ಗುಂಡಿಗೆ ಮತ್ತೊಬ್ಬ ಕಾಶ್ಮೀರಿ ಪಂಡಿತ (KashmiriPandits) ಬಲಿಯಾದ ಬಳಿಕ, ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಪಂಡಿತರಿಗೆ ಭದ್ರತೆ ಕಲ್ಪಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ (BJP) ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

    ಕಾಶ್ಮೀರದಲ್ಲಿ ಪಂಡಿತರ ಹತ್ಯೆ ನಿಲ್ಲುತ್ತಿಲ್ಲ. ಅವರಿಗೆ ಭದ್ರತೆ ನೀಡುವಲ್ಲಿ ಮೋದಿ (Naredra Modi) ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದು ನಾಚಿಗೇಡಿನ ಸಂಗತಿ ಎಂದು ಕಿಡಿಕಾರಿದೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರ ಮೇಲೆ ಮುಂದುವರಿದ ದಾಳಿ- ಉಗ್ರರ ಗುಂಡಿಗೆ ಓರ್ವ ಬಲಿ

    ನಿನ್ನೆಯಷ್ಟೇ ದಕ್ಷಿಣ ಕಾಶ್ಮೀರ ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದ ನಿವಾಸಿಯಾಗಿದ್ದ ಪುರನ್ ಕ್ರಿಶನ್ ಭಟ್ ಮೇಲೆ ಉಗ್ರರಿಂದ (Terrorists) ಗುಂಡಿನ ದಾಳಿ ನಡೆದಿತ್ತು. ಕ್ರಿಶನ್ ನಿವಾಸದ ಬಳಿಯೇ ಈ ದಾಳಿ ನಡೆದಿದ್ದು, ಅವರನ್ನು ಶೋಪಿಯಾನ್ ಆಸ್ಪತ್ರೆಗೆ (Hospital) ಸ್ಥಳಾಂತರಿಸಲಾಯಿತು. ಆದರೆ ಕ್ರಿಶನ್ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಎರಡು ತಿಂಗಳ ಹಿಂದೆ, ಶೋಪಿಯಾನ್‌ನ ಸೇಬಿನ ತೋಟದಲ್ಲಿ ಸುನೀಲ್ ಕುಮಾರ್ ಭಟ್ ಹೆಸರಿನ ಕಾಶ್ಮೀರಿ ಪಂಡಿತನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಇದೀಗ ಮತ್ತೆ ಗುಂಡಿನ ದಾಳಿ ನಡೆದಿದೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್‍ನಿಂದ ರಸ್ತೆ ಮೇಲೆ ಬಿದ್ದ ತಾಯಿ, ಮಗು – ಭಯಾನಕ ವೀಡಿಯೋ ವೈರಲ್

    ಕಾಶ್ಮೀರ ಫ್ರೀಡಂ ಫೈಟರ್ (KFF) ಗುಂಪು ಹತ್ಯೆಯ ಹೊಣೆ ಹೊತ್ತುಕೊಂಡಿರುವುದಾಗಿ ಉಪ ಪೊಲೀಸ್ ಮಹಾನಿರೀಕ್ಷಕ ಸುಜಿತ್ ಕುಮಾರ್ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಮ್ಮು ಕಾಶ್ಮೀರದಿಂದ ಭಯೋತ್ಪಾದನೆಯನ್ನು ನಿರ್ನಾಮ ಮಾಡುತ್ತೇವೆ: ಅಮಿತ್ ಶಾ

    ಜಮ್ಮು ಕಾಶ್ಮೀರದಿಂದ ಭಯೋತ್ಪಾದನೆಯನ್ನು ನಿರ್ನಾಮ ಮಾಡುತ್ತೇವೆ: ಅಮಿತ್ ಶಾ

    ನವದೆಹಲಿ: 1990ರ ದಶಕದಿಂದೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಭಯೋತ್ಪಾದನೆಗೆ (Terrorism) 42,000 ಜನರು ಬಲಿಯಾಗಿದ್ದಾರೆ. ನಾವೇಕೆ ಪಾಕಿಸ್ತಾನದೊಂದಿಗೆ (Pakistan) ಮಾತುಕತೆ ನಡೆಸಬೇಕು? ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದನೆಯನ್ನು ನಿರ್ನಾಮ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು ಪ್ರತಿಜ್ಞೆ ಮಾಡಿದರು.

    ಬುಧವಾರ ಬಾರಾಮುಲ್ಲಾದಲ್ಲಿ (Baramullah) ನಡೆದ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ, 70 ವರ್ಷಗಳ ಕಾಲ ಆಡಳಿತ ನಡೆಸಿದವರು ಇಂದು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲು ಒತ್ತಾಯಿಸುತ್ತಿದ್ದಾರೆ. ನಾವೇಕೆ ಪಾಕಿಸ್ತಾನದೊಂದಿಗೆ ಮಾತನಾಡಬೇಕು? ನಾವು ಮಾತನಾಡುವುದಿಲ್ಲ. ಬದಲಿಗೆ ಬಾರಾಮುಲ್ಲಾದ ಜನರೊಂದಿಗೆ, ಕಾಶ್ಮೀರದ ಜನರೊಂದಿಗೆ ಮಾತನಾಡುತ್ತೇವೆ. ಆ ಪ್ರದೇಶವನ್ನು ದೇಶದ ಅತ್ಯಂತ ಶಾಂತಿಯುತ ಪ್ರದೇಶವನ್ನಾಗಿ ಮಾಡಲು ನಾವು ಬಯಸುತ್ತೇವೆ ಎಂದು ನುಡಿದರು. ಇದನ್ನೂ ಓದಿ: ದಸರಾ ಜಂಬೂಸವಾರಿಗೆ ಚಾಲನೆ – ರಾಜಗಾಂಭಿರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ ಅಭಿಮನ್ಯು

    ನಾವು ಜಮ್ಮು ಮತ್ತು ಕಾಶ್ಮೀರದಲ್ಲಿ 2014ರಿಂದ ಇಲ್ಲಿಯವರೆಗೆ 9 ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಿದ್ದೇವೆ. 1 ಲಕ್ಷ ಮನೆಗಳನ್ನು ಕಟ್ಟಿಸಿದ್ದೇವೆ. ಪಾಕ್ ಆಕ್ರಮಿತ ಕಾಶ್ಮಿರ ಸೇರಿದಂತೆ ಕಾಶ್ಮೀರದ ಎಲ್ಲಾ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕವನ್ನೂ ಕಲ್ಪಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಡಚಾದ್ರಿ ಸೇರಿದಂತೆ ದೇಶದ 18 ಕಡೆ ರೋಪ್‌ವೇ ನಿರ್ಮಿಸಲು ಕೇಂದ್ರ ಯೋಜನೆ

    Live Tv
    [brid partner=56869869 player=32851 video=960834 autoplay=true]

  • ಮನೆಯಲ್ಲಿ ಕತ್ತು ಸೀಳಿ ಐಪಿಎಸ್‌ ಅಧಿಕಾರಿ ಹತ್ಯೆ

    ಮನೆಯಲ್ಲಿ ಕತ್ತು ಸೀಳಿ ಐಪಿಎಸ್‌ ಅಧಿಕಾರಿ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕಾರಾಗೃಹದ ಹಿರಿಯ ಅಧಿಕಾರಿ ಹೇಮಂತ್ ಲೋಹಿಯಾ ಅವರನ್ನು ನಿವಾಸದಲ್ಲಿ ಕತ್ತು ಸೀಳಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    1992ರ ಬ್ಯಾಚ್‌ನ ಐಪಿಎಸ್ (IPS officer) ಅಧಿಕಾರಿಯಾಗಿದ್ದ 57 ವರ್ಷದ ಲೋಹಿಯಾ ಅವರು ಜಮ್ಮುವಿನ ಹೊರವಲಯದಲ್ಲಿರುವ ಉದಯವಾಲಾ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕತ್ತು ಸೀಳಿ ಅವರನ್ನು ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ – ಚುನಾವಣಾ ಆಯೋಗ ಸ್ಪಷ್ಟನೆ

    ಅವರನ್ನು ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಜೈಲುಗಳ ಮಹಾನಿರ್ದೇಶಕರಾಗಿ ನೇಮಿಸಲಾಗಿತ್ತು. ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಮಾತನಾಡಿ, ಮನೆಯ ಸಹಾಯಕ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿಸಿದ್ದಾರೆ.

    ತನಿಖಾ ಪ್ರಕ್ರಿಯೆ ನಡೆಯುತ್ತಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಕುಟುಂಬವು ತಮ್ಮ ಹಿರಿಯ ಅಧಿಕಾರಿಯ ಸಾವಿನ ಬಗ್ಗೆ ದುಃಖಿತರಾಗಿದ್ದೇವೆ ಎಂದು ಸಿಂಗ್‌ ವಿಷಾದಿಸಿದ್ದಾರೆ. ಇದನ್ನೂ ಓದಿ: JEE Mains ಪರೀಕ್ಷೆಯಲ್ಲಿ ಅಕ್ರಮ – ಲ್ಯಾಂಡ್ ಆದ ಕೂಡಲೇ ರಷ್ಯಾ ಪ್ರಜೆ ಅರೆಸ್ಟ್

    ಗೃಹ ಸಚಿವ ಅಮಿತ್ ಶಾ ಕಾಶ್ಮೀರದಲ್ಲಿದ್ದ ದಿನದಲ್ಲಿ ಈ ಘಟನೆ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಶ್ಮೀರದಲ್ಲಿ ಸೇನೆಯ ಮೇಲೆ ಗುಂಡಿನ ದಾಳಿ – ಓರ್ವ ಹುತಾತ್ಮ

    ಕಾಶ್ಮೀರದಲ್ಲಿ ಸೇನೆಯ ಮೇಲೆ ಗುಂಡಿನ ದಾಳಿ – ಓರ್ವ ಹುತಾತ್ಮ

    ಶ್ರೀನಗರ: ಕಾಶ್ಮೀರದಲ್ಲಿ (Kashmir) ಮತ್ತೆ ಉಗ್ರರು (Terrorist) ಭದ್ರತಾ ಪಡೆಯನ್ನು ಗರಿಯಾಗಿಸಿ ದಾಳಿ ನಡೆಸಿದ್ದಾರೆ. ದಕ್ಷಿಣ ಕಾಶ್ಮೀರದ ಚೆಕ್‌ಪೋಸ್ಟ್ ಬಳಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ತಂಡವನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಸೈನಿಕರೊಬ್ಬರು ಹುತಾತ್ಮರಾಗಿದ್ದಾರೆ. ಓರ್ವ ಸಿಆರ್‌ಪಿಎಫ್ ಯೋಧ ಗಾಯಗೊಂಡಿದ್ದಾರೆ.

    ಶೋಪಿಯಾನ್‌ದಲ್ಲಿ (Shopian) ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್ (LET) ಭಯೋತ್ಪಾದಕನನ್ನು ಹತ್ಯೆ ಮಾಡಿದ ಕೆಲವೇ ಗಂಟೆಗಳ ಬಳಿಕ ಉಗ್ರರಿಂದ ಪ್ರತಿದಾಳಿ ನಡೆದಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮಾದ ಪಿಂಗ್ಲಾನಾ ಗ್ರಾಮದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿ, ತಪ್ಪಿಸಿಕೊಂಡಿದ್ದಾರೆ. ಸದ್ಯ ಉಗ್ರರನ್ನು ಪತ್ತೆಹಚ್ಚಲು ಗ್ರಾಮಕ್ಕೆ ಪೊಲೀಸ್ (Police), ಸೇನೆ ಹಾಗೂ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಬಿಡುಗಡೆ: ಪ್ರಭು ಚವ್ಹಾಣ್

    ಕಾರ್ಯಾಚರಣೆಯ ಸಮಯದಲ್ಲಿ ಎಕೆ ರೈಫಲ್ ಸೇರಿದಂತೆ ಮದ್ದು ಗುಂಡುಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಖಾದಿ ಎಂಪೋರಿಯಂನಲ್ಲಿ ಲೇಡಿಸ್ ಟಾಪ್ ಡ್ರೆಸ್ ಖರೀದಿಸಿದ ಸಿಎಂ

    ದಕ್ಷಿಣ ಕಾಶ್ಮೀರದ ಶೋಪಿಯಾನ್ ಬಾಸ್ಕುಚಾನ್ ಇಮಾಮಸಾಹಿಬ್ ಪ್ರದೇಶದಲ್ಲಿ ಭದ್ರತಾಪಡೆಗಳು ಶನಿವಾರ ನಡೆಸಿದ ಎನ್‌ಕೌಂಟರ್ ದಾಳಿಯಲ್ಲಿ ಲಷ್ಕರ್ ಎ ತೋಯ್ಬಾ (LET) ದೊಂದಿಗೆ ಸಂಪರ್ಕ ಹೊಂದಿದ್ದ ಭಯೋತ್ಪಾದಕನನ್ನು ಹತ್ಯೆಗೈದು ಇಬ್ಬರನ್ನು ಬಂಧಿಸಿತ್ತು. ಮೃತ ಭಯೋತ್ಪಾದಕನನ್ನು ನಸೀರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಈತ ಇತ್ತೀಚೆಗೆ ಎನ್‌ಕೌಂಟರ್‌ನಿಂದ ತಪ್ಪಿಸಿಕೊಂಡಿದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಜಮ್ಮು-ಕಾಶ್ಮೀರ: 8 ಗಂಟೆ ಅಂತರದಲ್ಲಿ 2 ಬಸ್‌ಗಳಲ್ಲಿ ಸ್ಫೋಟ

    ಜಮ್ಮು-ಕಾಶ್ಮೀರ: 8 ಗಂಟೆ ಅಂತರದಲ್ಲಿ 2 ಬಸ್‌ಗಳಲ್ಲಿ ಸ್ಫೋಟ

    ಶ್ರೀನಗರ: ಕೇವಲ 8 ಗಂಟೆ ಅಂತರದಲ್ಲಿ ನಿಂತಿದ್ದ ಬಸ್‌ಗಳಲ್ಲಿ ಸ್ಫೋಟ (Bus Blast) ಸಂಭವಿಸಿದ ಆಘಾತಕಾರಿ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ನಡೆದಿದೆ.

    ಮೊದಲ ಘಟನೆ ಬುಧವಾರ ರಾತ್ರಿ 10:45 ರ ಸುಮಾರಿಗೆ ಡೊಮೈಲ್ ಚೌಕ್‌ನಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ 2 ದಿನ ಉತ್ತರ ಒಳನಾಡಿಗೆ ಮಳೆ ಅಲರ್ಟ್

    ಇದೇ ರೀತಿ ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಹಳೆಯ ಬಸ್ ನಿಲ್ದಾಣದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಇದು ಕೇವಲ 8 ಗಂಟೆಗಳ ಅಂತರದಲ್ಲಿ ಜಮ್ಮು ಹಾಗೂ ಕಾಶ್ಮೀರದಲ್ಲಿ ಸಂಭವಿಸಿದ 2ನೇ ಸ್ಫೋಟವಾಗಿದ್ದು, ಎರಡೂ ಘಟನೆಗಳು ಕೇವಲ 4 ಕಿ.ಮೀ ಅಂತರದಲ್ಲಿ ಸಂಭವಿಸಿದೆ. ಇದನ್ನೂ ಓದಿ: PFI ಬ್ಯಾನ್: ಹಳೇ ಕೇಸ್, ಹೊಸ ಆಟ – ಇದು ಬಿಜೆಪಿ ಗೇಮ್!

    ಉಧಂಪುರ ಜಿಲ್ಲೆಯಲ್ಲಿ ನಡೆದ ಘಟನೆಯಲ್ಲಿ ಸದ್ಯ ಯಾರಿಗೂ ಗಾಯಗಳು ಅಥವಾ ಸಾವು-ನೋವುಗಳು ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿ ಭದ್ರತಾ ಪಡೆಗಳು ಪರಿಶೀಲನೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೊಸ ರಾಜಕೀಯ ಪಕ್ಷದ ಹೆಸರು ಘೋಷಿಸಿದ ಗುಲಾಂ ನಬಿ ಅಜಾದ್

    ಹೊಸ ರಾಜಕೀಯ ಪಕ್ಷದ ಹೆಸರು ಘೋಷಿಸಿದ ಗುಲಾಂ ನಬಿ ಅಜಾದ್

    ಶ್ರೀನಗರ: ಹಿರಿಯ ರಾಜಕೀಯ ಮುಖಂಡ, ಜಮ್ಮು ಮತ್ತು ಕಾಶ್ಮೀರದ (Jammu And Kashmir) ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ (Ghulam Nabi Azad) ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ (Democratic Azad Party) ಹೆಸರಿನ ಪಕ್ಷವನ್ನು ಘೋಷಣೆ ಮಾಡಿ ಅದರ ಧ್ವಜವನ್ನು ಇಂದು ಬಿಡುಗಡೆ ಮಾಡಿದ್ದಾರೆ.

    ಜಮ್ಮುವಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷದ ಸಿದ್ಧಾಂತವು ಅವರ ಹೆಸರಿನಂತೆ ಇರುತ್ತದೆ. ಇಲ್ಲಿ ಎಲ್ಲಾ ಜಾತ್ಯತೀತ ಜನರು ಸೇರಬಹುದು ಎಂದು ಪಕ್ಷದ ಕಾರ್ಯಸೂಚಿಯನ್ನು ಸ್ಪಷ್ಟಪಡಿಸಿದ್ದರು. ಹೊಸ ಪಕ್ಷ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯತ್ವವನ್ನು ಮರುಸ್ಥಾಪಿಸುವುದು, ಸ್ಥಳೀಯ ಜನರಿಗೆ ಭೂಮಿ ಮತ್ತು ಉದ್ಯೋಗದ ಹಕ್ಕುಗಳನ್ನು ಪಡೆಯಲು ಹೋರಾಟವನ್ನು ಮುಂದುವರಿಸುವುದನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಮ್ಮನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ: ಅಮೆರಿಕಗೆ ನೇರವಾಗಿ ಜೈಶಂಕರ್ ತಿರುಗೇಟು

    ತಮ್ಮ ಧ್ವಜದಲ್ಲಿರುವ ಹಳದಿ ಬಣ್ಣವು ಸೃಜನಶೀಲತೆ ಮತ್ತು ವೈವಿಧ್ಯತೆಯಲ್ಲಿ ಏಕತೆಯನ್ನು ಸೂಚಿಸುತ್ತದೆ. ಬಿಳಿ ಶಾಂತಿಯನ್ನು ಸೂಚಿಸುತ್ತದೆ ಮತ್ತು ನೀಲಿ ಸ್ವಾತಂತ್ರ್ಯ, ಮುಕ್ತ ಸ್ಥಳ, ಕಲ್ಪನೆ ಮತ್ತು ಸಮುದ್ರದ ಆಳದಿಂದ ಆಕಾಶದ ಎತ್ತರದವರೆಗಿನ ಮಿತಿಗಳನ್ನು ಸೂಚಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇಶದ ಬಹುದೊಡ್ಡ ಭಯೋತ್ಪಾದಕ ಸಂಘಟನೆ RSS : ಭಾಸ್ಕರ್ ಪ್ರಸಾದ್

    Congress

    ಕಳೆದ ಅಗಸ್ಟ್ 26 ರಂದು ಕಾಂಗ್ರೆಸ್ (Congress) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಗುಲಾಂ ನಬಿ ಆಜಾದ್ ಐದು ದಶಕಕ್ಕೂ ಹೆಚ್ಚಿನ ಹಳೆಯ ಸಂಬಂಧವನ್ನು ಕಡಿದುಕೊಂಡಿದ್ದರು. ರಾಜೀನಾಮೆ ಬಳಿಕ ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷವನ್ನು ಸ್ಥಾಪಿಸುವುದಾಗಿ ಹೇಳಿದ್ದರು. ಅಂತೆಯೇ ಇಂದು ಹೊಸ ಪಕ್ಷದ ಹೆಸರನ್ನು ಘೋಷಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆಮ್ಲಜನಕ ಕೊರತೆಯಿಂದ ಜಮ್ಮು-ಕಾಶ್ಮೀರದಲ್ಲಿ ಬೀದರ್ ಮೂಲದ ಯೋಧ ಹುತಾತ್ಮ

    ಆಮ್ಲಜನಕ ಕೊರತೆಯಿಂದ ಜಮ್ಮು-ಕಾಶ್ಮೀರದಲ್ಲಿ ಬೀದರ್ ಮೂಲದ ಯೋಧ ಹುತಾತ್ಮ

    ಬೀದರ್: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಆಮ್ಲಜನಕದ (Oxygen) ಕೊರತೆಯಿಂದ ಬೀದರ್ (Bidar) ಮೂಲದ ಯೋಧರೊಬ್ಬರು (Soldier) ಹುತಾತ್ಮರಾಗಿರುವ ಘಟನೆ ನಡೆದಿದೆ. ರಾಮದಾಸ್ ಚಂದಾಪೂರೆ(35) ಹುತಾತ್ಮರಾದ ಯೋಧ.

    ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನ ಬೇಡಕುಂದಾ ಗ್ರಾಮದ ಯೋಧ ಕಳೆದ ಹಲವು ತಿಂಗಳುಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. 15 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಆಮ್ಲಜನಕದ ಕೊರತೆಯಿಂದ ಹುತಾತ್ಮರಾಗಿದ್ದಾರೆ. ಇದನ್ನೂ ಓದಿ: ಮಹಾಲಯ ಆಚರಣೆ – ಬಾಂಗ್ಲಾದೇಶದಲ್ಲಿ ದೋಣಿ ಮುಳುಗಿ 24 ಮಂದಿ ಸಾವು

     

    ಯೋಧನ ಪಾರ್ಥೀವ ಶರೀರ ಸೋಮವಾರ ಜಮ್ಮು ಮತ್ತು ಕಾಶ್ಮೀರದಿಂದ ಸ್ವಗ್ರಾಮಕ್ಕೆ ಬರಲಿದೆ. ನಾಳೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಹೈದರಾಬಾದ್ ಮೂಲಕ ಸ್ವಗ್ರಾಮಕ್ಕೆ ಪಾರ್ಥೀವ ಶರೀರ ಆಗಮಿಸಲಿದೆ. ಇದನ್ನೂ ಓದಿ: ಹೊಸ ತಲೆಮಾರಿಗೆ ಅವಕಾಶ ಸಿಗಬೇಕು: ಸಿಎಂ ಸ್ಥಾನಕ್ಕೆ ರಾಜೀನಾಮೆ ಸುಳಿವು ನೀಡಿದ ಗೆಹ್ಲೋಟ್‌?

    Live Tv
    [brid partner=56869869 player=32851 video=960834 autoplay=true]

  • 32 ವರ್ಷಗಳ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮಲ್ಟಿಪ್ಲೆಕ್ಸ್ ಥಿಯೇಟರ್ ಓಪನ್

    32 ವರ್ಷಗಳ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮಲ್ಟಿಪ್ಲೆಕ್ಸ್ ಥಿಯೇಟರ್ ಓಪನ್

    ಶ್ರೀನಗರ: 32 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಮಲ್ಟಿಪ್ಲೆಕ್ಸ್ (Multiplex) ಚಿತ್ರಮಂದಿರಗಳು (Cinema Halls) ಉದ್ಘಾಟನೆಗೊಂಡಿದ್ದು, ಇದೇ ಸೆಪ್ಟೆಂಬರ್ 20 ರಿಂದ ಆಮೀರ್ ಖಾನ್ ನಟನೆಯ ಲಾಲ್‌ಸಿಂಗ್ ಚಡ್ಡಾ (Laal Singh Chaddha) ಸಿನಿಮಾದೊಂದಿಗೆ ಪ್ರದರ್ಶನ ಆರಂಭವಾಗಲಿದೆ.

    ಜಮ್ಮು ಮತ್ತು ಕಾಶ್ಮೀರದ ಸರ್ಕಾರದ ಯುವ ಸಬಲೀಕರಣ (Youth Empowerment Department) ಇಲಾಖೆ ಹಾಗೂ ಜಿಲ್ಲಾಡಳಿದ ಸಹಯೋಗದೊಂದಿಗೆ ಚಿತ್ರಮಂದಿರಗಳನ್ನು ಸ್ಥಾಪನೆ ಮಾಡುವ ವಿವಿಧೊದ್ದೇಶ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಅದರ ಭಾಗವಾಗಿ ಇದೇ ಸೆಪ್ಟೆಂಬರ್ 20ರಿಂದಲೇ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಸಿನಿ ಪ್ರದರ್ಶನ ಆರಂಭಿಸಲಾಗುತ್ತಿದೆ. ಇದನ್ನೂ ಓದಿ: ಬೇಬಿ ಬಂಪ್‌ ಲುಕ್‌ನಲ್ಲಿ ಮುದ್ದಾಗಿ ಕ್ಯಾಮೆರಾ ಕಣ್ಣಿಗೆ ಪೋಸ್‌ ಕೊಟ್ಟ ಬಿಪಾಶಾ ಬಸು

    ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ (Manoj Sinha) ಅವರಿಂದು ದಕ್ಷಿಣ ಕಾಶ್ಮೀರದ ಅವಳಿ ಜಿಲ್ಲೆಗಳಾದ ಪುಲ್ವಾಮಾ (Pulwama) ಮತ್ತು ಶೋಪಿಯಾನ್‌ನಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳನ್ನು ಉದ್ಘಾಟಿಸಿದರು. ಅಲ್ಲದೇ ಇಲ್ಲಿನ ಅನಂತನಾಗ್, ಶ್ರೀನಗರ, ಬಂಡಿಪೋರಾ, ಗಂದರ್‌ಬಾಲ್, ದೋಡಾ, ರಾಜೌರಿ, ಪೂಂಚ್, ಕಿಶ್ತ್ವಾರ್ ಮತ್ತು ರಿಯಾಸಿ ಜಿಲ್ಲೆಗಳಲ್ಲೂ ಚಿತ್ರಮಂದಿರಗಳು ಉದ್ಘಾಟನೆಗೊಳ್ಳಲಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೋನು ಶ್ರೀನಿವಾಸ್ ಗೌಡ ಸಂಬಳ ಕೇಳಿದ್ರೆ, ನೀವೂ ಅದೇ ಕೆಲಸ ಮಾಡ್ತೀರಿ

    ಬಳಿಕ ಮಾತನಾಡಿದ ಮನೋಜ್ ಸಿನ್ಹಾ (Manoj Sinha), ಜಮ್ಮು ಮತ್ತು ಕಾಶ್ಮೀರಕ್ಕೆ ಇಂದು ಐತಿಹಾಸಿಕ ದಿನವಾಗಿದೆ. ಹೊಸ ಚಿತ್ರಮಂದಿರಗಳು ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ. ಜೊತೆಗೆ ಯುವಕರಿಗೆ ಸಿನಿಮಾ ತರಬೇತಿ ಹಾಗೂ ವಿಚಾರ ಸಂಕಿರಣಗಳಿಗೆ ಸ್ಥಳಾವಕಾಶ ಒದಗಿಸಿದಂತೆಯೂ ಆಗುತ್ತದೆ. ಅದಕ್ಕೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

    1980ರ ದಶಕದಲ್ಲಿ ಸುಮಾರು 12 ಚಿತ್ರಮಂದಿರಗಳು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಭಯೋತ್ಪಾದಕರ ಬೆದರಿಕೆಗಳಿಂದ ಅವುಗಳ ಕಾರ್ಯ ಸ್ಥಗಿತಗೊಂಡಿತು. 1990ರ ದಶಕದ ಉತ್ತರಾರ್ಧದಲ್ಲಿ ಅಧಿಕಾರಿಗಳು ಕೆಲವು ಚಿತ್ರಮಂದಿರಗಳನ್ನು ಪುನರಾರಂಭಿಸಲು ಪ್ರಯತ್ನಿಸಿದರು. ಆದರೆ 1999ರಲ್ಲಿ ಉಗ್ರಗಾಮಿಗಳು ನಡೆಸಿದ ಗ್ರೆನೇಡ್ ದಾಳಿ ಆ ಪ್ರಯತ್ನಕ್ಕೂ ಕಲ್ಲು ಹಾಕಿತು. ಇದೀಗ ಮತ್ತೆ ಚಿತ್ರಮಂದಿರಗಳು ತಲೆ ಎತ್ತುತ್ತಿವೆ.

    Live Tv
    [brid partner=56869869 player=32851 video=960834 autoplay=true]