Tag: ಜಮ್ಮು ಮತ್ತು ಕಾಶ್ಮೀರ

  • ಪಾಕಿಸ್ತಾನಿ ಎಲ್‍ಇಟಿ ಉಗ್ರ ಎನ್‍ಕೌಂಟರ್ – ಮೂವರು ಅರೆಸ್ಟ್

    ಪಾಕಿಸ್ತಾನಿ ಎಲ್‍ಇಟಿ ಉಗ್ರ ಎನ್‍ಕೌಂಟರ್ – ಮೂವರು ಅರೆಸ್ಟ್

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ನಡೆದ ಎನ್‍ಕೌಂಟರ್‌ನಲ್ಲಿ ಭದ್ರತಾ ಪಡೆ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾ(ಎಲ್‍ಇಟಿ)ನ ಪಾಕಿಸ್ತಾನಿ ಭಯೋತ್ಪಾದಕನನ್ನು ಹತ್ಯೆ ಮಾಡಿದ್ದು, ಮೂವರನ್ನು ಬಂಧಿಸಿದೆ.

    ಕಾಶ್ಮೀರ ವಲಯದ ಪೊಲೀಸರು ಟ್ವಿಟ್ಟರ್‌ನಲ್ಲಿ, ಎನ್‍ಕೌಂಟರ್‌ನಲ್ಲಿ ಹಂತನಾದ ಭಯೋತ್ಪಾದಕನನ್ನು ಪಾಕಿಸ್ತಾನಿಯವನು ಗುರುತಿಸಲಾಗಿದೆ. ಈತ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‍ಇಟಿಯೊಂದಿಗೆ ಸಂಪರ್ಕ ಹೊಂದಿದ್ದ. ಬಂಧಿತ ಭಯೋತ್ಪಾದಕರ ಜೊತೆಗೆ ಇನ್ನೂ 2 ರಿಂದ 3 ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

    ಕುಪ್ವಾರದ ಲೋಲಾಬ್ ಪ್ರದೇಶದಲ್ಲಿ ಅಡಗಿರುವ ಬಂಧಿತ ಉಗ್ರಗಾಮಿ ಶೋಕೆಟ್ ಅಹ್ಮದ್ ಶೇಖ್ ಬಗ್ಗೆ ಕುಪ್ವಾರ ಪೊಲೀಸರ ಸೇನೆಗೆ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆ ಇವರು 28ಆರ್‌ಆರ್‌ನೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

    ಭದ್ರತಾ ಪಡೆ, ಉಗ್ರಗಾಮಿಗಳು ಅಡಗಿಕೊಂಡಿದ್ದ ಜಾಗವನ್ನು ಶೋಧಿಸಿದ್ದಾರೆ. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಪ್ರಾರಂಭ ಮಾಡಿದ್ದು, ನಮ್ಮ ತಂಡವು ಪ್ರತಿದಾಳಿ ನಡೆಸಿದೆ. ಇದರಲ್ಲಿ ಒಬ್ಬ ಉಗ್ರನನ್ನು ಎನ್‍ಕೌಂಟರ್ ಮಾಡಲಾಗಿದೆ ಎಂದು ಕಾಶ್ಮೀರ ಐಜಿಪಿ ಹೇಳಿದರು.

    Live Tv

  • ಉಗ್ರರಿಂದ ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿ ಹತ್ಯೆ

    ಉಗ್ರರಿಂದ ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿ ಹತ್ಯೆ

    ಶ್ರೀನಗರ: ಪೊಲೀಸ್ ಅಧಿಕಾರಿಯೊಬ್ಬರ ಮನೆಗೆ ಉಗ್ರರು ನುಗ್ಗಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ.

    ಫಾರೂಕ್ ಅಹ್ಮದ್ ಮಿರ್ ಮೃತ ಪೊಲೀಸ್ ಅಧಿಕಾರಿ. ಶನಿವಾರ ಬೆಳಗಿನ ಜಾವ ಪಂಪೋರ್ ಪ್ರದೇಶದ ಸಂಬೂರಾದಲ್ಲಿ ಸಬ್ ಇನ್ಸ್‌ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಮನೆ ಮೇಲೆ ದಾಳಿ ನಡೆದಿದೆ. ಈ ವೇಳೆ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಸಿಟಿಸಿ ಲೆತ್‍ಪೋರಾದ ಐಆರ್‌ಪಿ 23ನೇ ಬೆಟಾಲಿಯನ್‍ನಲ್ಲಿ ಫರೂಕ್ ಅಹ್ಮದ್‍ರನ್ನು ನಿಯೋಜಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮದುವೆಯಾದ ಏಳೇ ದಿನಕ್ಕೆ ಮದುಮಗ ನೇಣಿಗೆ ಶರಣು!

    ಶುಕ್ರವಾರ ಕುಲ್ಗಾಮ್‍ನಲ್ಲಿ ಶಾಲಾ ಶಿಕ್ಷಕಿ ರಜನಿ ಬಾಲಾ ಅವರ ಹತ್ಯೆಗೆ ಕಾರಣವಾದ ಒಬ್ಬರು ಸೇರಿದಂತೆ 3 ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಮೇ 31 ರಂದು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹೈಸ್ಕೂಲ್ ಗೋಪಾಲ್ಪೋರಾ ಪ್ರದೇಶದಲ್ಲಿ ರಜನಿ ಅವರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದರು. ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ – ಬೆಂಗ್ಳೂರಿಗೊಂದು ಮೈಸೂರಿಗೊಂದು ರೂಲ್ಸ್

    Live Tv

  • ನಾಗರಿಕರನ್ನು ಕೊಂದಿದ್ದ ಇಬ್ಬರು ಉಗ್ರರ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ರಾಜ್‍ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‍ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಟ್ರಾಲ್‍ನ ಶಾಹಿದ್ ರಾಥರ್ ಮತ್ತು ಶೋಪಿಯಾನ್‍ನ ಉಮರ್ ಯೂಸುಫ್ ಹತ್ಯೆಯಾದ ಉಗ್ರರು. ಹತನಾದ ಉಗ್ರರು ಇತರ ಭಯೋತ್ಪಾದಕ ಅಪರಾಧದ ಜೊತೆಗೆ, ಇಬ್ಬರು ನಾಗರಿಕರನ್ನು ಹತ್ಯೆಗೈದಿದ್ದಾರೆ.

    ಎನ್‍ಕೌಂಟರ್‌ನಲ್ಲಿ ಇಬ್ಬರು ಸ್ಥಳೀಯ ಉಗ್ರರು ಹತರಾಗಿದ್ದಾರೆ. ಎನ್‍ಕೌಂಟರ್ ನಡೆದ ಸ್ಥಳದಿಂದ ಎರಡು ಎಕೆ-47 ರೈಫಲ್‍ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇತ್ತೀಚಿನ ಎನ್‍ಕೌಂಟರ್‌ಗಳಲ್ಲಿ, ಭದ್ರತಾ ಪಡೆಗಳು ಕಳೆದ ಐದು ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಗುಂಪುಗಳಾದ ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಮತ್ತು ಜೈಶ್-ಎ-ಮೊಹಮ್ಮದ್‍ಗೆ ಸೇರಿದ 26 ಉಗ್ರರನ್ನು ಹತ್ಯೆ ಮಾಡಿದೆ. ಇದನ್ನೂ ಓದಿ: ಸೆ.15ವರೆಗೆ ಪದ್ಮ ಪ್ರಶಸ್ತಿ ನಾಮನಿರ್ದೇಶನ ಮಾಡಿ

    14 ಉಗ್ರರು ಮಸೂದ್ ಅಜರ್ ಸ್ಥಾಪಿಸಿದ ಭಯೋತ್ಪಾದಕ ಗುಂಪು ಜೈಶ್‍ಗೆ ಸೇರಿದವರಾಗಿದ್ದರೆ, 12 ಮಂದಿ ಹಫೀಜ್ ಸಯೀದ್ ಸ್ಥಾಪಿಸಿದ ಲಷ್ಕರ್-ಎ-ತೊಯ್ಬಾದಿಂದ ಬಂದವರಾಗಿದ್ದಾರೆ. ಇದನ್ನೂ ಓದಿ: ಶೀಘ್ರವೇ ಕೇಂದ್ರ ಸಚಿವ ಸಂಪುಟ ಪುನಾರಚನೆ?

  • ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಶ್ರೀನಗರ: ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್ ದಾಳಿಯಲ್ಲಿ ಉಗ್ರನನ್ನು ಹತ್ಯೆ ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ.

    ಪುಲ್ವಾಮಾದ ಗುಂಡಿಪೋರಾದಲ್ಲಿ ಭದ್ರತಾ ಪಡೆಗಳು ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಗುಂಡಿನ ದಾಳಿಯಲ್ಲಿ ಒಬ್ಬ ಉಗ್ರ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಹಣಕ್ಕಾಗಿ ಬೇಡಿಕೆ – ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

    ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಈ ಬಗ್ಗೆ ಮಾತನಾಡಿ, ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಒಬ್ಬನನ್ನು ಹತ್ಯೆ ಮಾಡಲಾಗಿದ್ದು, ಕಾನ್ಸ್‌ಟೇಬಲ್ ರಿಯಾಜ್ ಅಹ್ಮದ್‍ನನ್ನು ಹತ್ಯೆಗೈದಿದ್ದ ಹಂತಕ ಸೇರಿದಂತೆ ಇಬ್ಬರು ಜೈಶ್-ಎ-ಮೊಹಮ್ಮದ್ ಉಗ್ರರು ಸಿಕ್ಕಿಬಿದ್ದಿದ್ದಾರೆ ಎಂದು ತಿಳಿಸಿದ್ದಾರೆ. ಮೇ 13ರಂದು ಪುಲ್ವಾಮಾದಲ್ಲಿ ಕಾನ್ಸ್‌ಟೇಬಲ್ ಹುತಾತ್ಮರಾಗಿದ್ದರು. ಇದನ್ನೂ ಓದಿ: ಅಮೆರಿಕಾದಲ್ಲಿ ಮತ್ತೆ ಗುಂಡಿನ ಸದ್ದು- ಓರ್ವ ಮಹಿಳೆ ಬಲಿ, 7 ಜನರಿಗೆ ಗಾಯ

  • ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಮಗು ಸ್ಮಶಾನದಲ್ಲಿ ಜೀವಂತ

    ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಮಗು ಸ್ಮಶಾನದಲ್ಲಿ ಜೀವಂತ

    ಶ್ರೀನಗರ: ನವಜಾತ ಶಿಶು ಸಾವನ್ನಪ್ಪಿದೆ ಎಂದು ವೈದ್ಯರು ಅವರು ಘೋಷಿಸಿದ್ದರಿಂದ ಆ ಮಗುವನ್ನು ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡಲು ಸ್ಮಶಾನಕ್ಕೆ ಕರೆದೊಯ್ಯುತ್ತಿರುವಾಗ ಮಗು ಜೀವಂತವಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

    ಬಂಕೂಟ್ ನಿವಾಸಿ ಬಶರತ್ ಅಹ್ಮದ್ ಅವರ ಪತ್ನಿಯ ಹೆರಿಗೆ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿತ್ತು. ಇದಾದ ನಂತರ ಅಲ್ಲಿದ್ದ ಆಸ್ಪತ್ರೆಯ ಸಿಬ್ಬಂದಿ ಮಗು ಸತ್ತಿದೆ ಎಂದು ಕುಟುಂಬಕ್ಕೆ ತಿಳಿಸಿದ್ದರು. ಇದಾದ ಬಳಿಕ ಕುಟುಂಬಸ್ಥರು ಮಗುವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ದಿದ್ದಾರೆ.

    ಆದರೆ ಕುಟುಂಬದ ಸದಸ್ಯರು ಮಗು ಚಲಿಸುತ್ತಿರುವುದನ್ನು ಗಮನಿಸಿ ಇತರರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಗುವನ್ನು ಮತ್ತೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿಂದ ವಿಶೇಷ ಚಿಕಿತ್ಸೆಗಾಗಿ ಶ್ರೀನಗರದ ಆಸ್ಪತ್ರೆಗೆ ರವಾನಿಸಲಾಯಿತು. ಇದನ್ನೂ ಓದಿ: ಹುಬ್ಬಳ್ಳಿ ಅಪಘಾತ ಪ್ರಕರಣ- ಇನ್ನೂ ಐದಾರು ಜನರ ಸ್ಥಿತಿ ಚಿಂತಾಜನಕವಾಗಿದೆ: ಕಿಮ್ಸ್ ನಿರ್ದೇಶಕ

    POLICE JEEP

    ವೈದ್ಯರ ನಿರ್ಲಕ್ಷ್ಯದ ವಿರುದ್ಧ ಕೊಪಗೊಂಡ ಮಗುವಿನ ಕುಟುಂಬ ಸದಸ್ಯರು ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಇಬ್ಬರು ಆಸ್ಪತ್ರೆಯ ನೌಕರರನ್ನು ಅಮಾನತುಗೊಳಿಸಿದ್ದಾರೆ. ಎಸ್‍ಎಚ್‍ಒ ಬನಿಹಾಲ್ ಮುನೀರ್ ಖಾನ್ ನೇತೃತ್ವದ ಪೊಲೀಸ್ ತಂಡವು ಆಸ್ಪತ್ರೆಗೆ ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. ಈ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸ್ಕೂಲ್ ಮೆಟ್ಟಿಲು, ಕಾಂಪೌಂಡ್, ರಸ್ತೆಯಲ್ಲೆಲ್ಲಾ Sorry- ವ್ಯಕ್ತಿಗಾಗಿ ಪೊಲೀಸರು ಹುಡುಕಾಟ

  • ಇಬ್ಬರು ‘ಹೈಬ್ರೀಡ್’ ಉಗ್ರರ ಬಂಧನ- ಶಸ್ತ್ರಾಸ್ತ್ರಗಳು ವಶ

    ಇಬ್ಬರು ‘ಹೈಬ್ರೀಡ್’ ಉಗ್ರರ ಬಂಧನ- ಶಸ್ತ್ರಾಸ್ತ್ರಗಳು ವಶ

    ಶ್ರೀನಗರ: ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತೊಯ್ಬಾ(ಎಲ್‍ಇಟಿ)ದ ಇಬ್ಬರು ಸ್ಥಳೀಯ ‘ಹೈಬ್ರೀಡ್’ ಉಗ್ರರನ್ನು ಸೋಮವಾರ ಶ್ರೀನಗರದಲ್ಲಿ ಬಂಧಿಸಲಾಗಿದ್ದು, ಶಸ್ತ್ರಾಸ್ತ್ರ ಹಾಗೂ ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‍ಇಟಿ, ಟಿಆರ್‌ಎಫ್‍ನ ಇಬ್ಬರು ಸ್ಥಳೀಯ ಉಗ್ರರನ್ನು ಶ್ರೀನಗರ ಪೊಲೀಸರು ಬಂಧಿಸಿದ್ದಾರೆ. 15 ಪಿಸ್ತೂಲ್‍ಗಳು, 300ಕ್ಕೂ ದೋಷಾರೋಪಣೆಯ ಸಾಮಗ್ರಿಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ತಿಳಿಸಿದ್ದಾರೆ.

    ಉಗ್ರರ ಚಲನವಲನದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಚೆಕ್‌ಪೋಸ್ಟ್ ನಿರ್ಮಿಸಲಾಗಿತ್ತು. ಚೆಕ್‌ಪೋಸ್ಟ್ ಬಳಿಗೆ ಬಂದ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದ ರೀತಿಯಲ್ಲಿ ವರ್ತಿಸಿದ್ದರು. ಅಧಿಕಾರಿಗಳ ಕಣ್ತಪ್ಪಿಸಿ ಪರಾರಿಯಾಗಲು ಯತ್ನಿಸಿದಾಗ ಅವರನ್ನು ಬೆನ್ನತ್ತಿದ್ದ ಜಂಟಿ ಕಾರ್ಯಾಚರಣೆ ಪಡೆ ಬಂಧಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಗೋಮಾಂಸ ತಿನ್ನೋದಾದ್ರೆ ತಿನ್ನಲಿ, ವಕೀಲಿಕೆ ಮಾಡೋದು ಬೇಡ: ಛಲವಾದಿ ನಾರಾಯಣಸ್ವಾಮಿ  

    ಈ ಬಗ್ಗೆ ಐಜಿಪಿ ಮಾತನಾಡಿ, ಟಿಆರ್‌ಎಫ್ ಅಥವಾ ದಿ ರೆಸಿಸ್ಟೆನ್ಸ್ ಫ್ರಂಟ್ ಎಇಟಿಯ ಒಂದು ಶಾಖೆಯಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಇದು ಪೊಲೀಸರಿಗೆ ದೊಡ್ಡ ಯಶಸ್ಸು ಎಂದು ಹೇಳಿದರು. ಇದನ್ನೂ ಓದಿ: ಎಷ್ಟು ಹೇಳಿದ್ರೂ ಓದ್ಲಿಲ್ಲ, ಸತ್ತವರ ಮನೆ ಮುಂದೆ ತಮಟೆ ಬಡಿಯಲು ಹೋಗ್ತಿದ್ರಿ – ಶಿಕ್ಷಕರ ಕ್ಲಾಸ್

  • ದ್ವೇಷದ ವಾತಾವರಣ ಸೃಷ್ಟಿಸಿರುವ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ಬ್ಯಾನ್‌ ಮಾಡಿ: ಫಾರೂಕ್‌ ಅಬ್ದುಲ್ಲಾ ಒತ್ತಾಯ

    ದ್ವೇಷದ ವಾತಾವರಣ ಸೃಷ್ಟಿಸಿರುವ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ಬ್ಯಾನ್‌ ಮಾಡಿ: ಫಾರೂಕ್‌ ಅಬ್ದುಲ್ಲಾ ಒತ್ತಾಯ

    ಶ್ರೀನಗರ: ದೇಶದಲ್ಲಿ ದ್ವೇಷದ ವಾತಾವರಣ ಸೃಷ್ಟಿಸಿರುವ ವಿವೇಕ್‌ ಅಗ್ನಿಹೋತ್ರಿ ನಿರ್ದೇಶನದ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾವನ್ನು ನಿಷೇಧಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಒತ್ತಾಯಿಸಿದ್ದಾರೆ.

    ಆಧಾರರಹಿತ ಸನ್ನಿವೇಶಗಳನ್ನು ಸಿನಿಮಾ ಒಳಗೊಂಡಿದೆ. ನಾವು ಎಲ್‌ಜಿ ಮನೋಜ್ ಸಿನ್ಹಾ ಅವರನ್ನು ಭೇಟಿ ಮಾಡಿದ್ದೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವುದೇ ಈ ಸಿನಿಮಾದ ಉದ್ದೇಶ. ಪ್ರವಾಸಿಗರು ಕಣಿವೆಗೆ ಭೇಟಿ ನೀಡುತ್ತಿದ್ದರೆ, ನಿತ್ಯ ಅವರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬುಲ್ಡೋಜರ್ ಕಾರ್ಯಾಚರಣೆ- ಸ್ವಾತಂತ್ರ್ಯ ಭಾರತದ ಅತಿದೊಡ್ಡ ವಿನಾಶ: ಕೇಜ್ರಿವಾಲ್

    ನಾವು ಒಬ್ಬರಿಗೊಬ್ಬರು ಹತ್ತಿರವಾಗಬೇಕಾದರೆ, ಈ ದ್ವೇಷ ಕೊನೆಗೊಳ್ಳಬೇಕು. ಮುಸಲ್ಮಾನನೊಬ್ಬ ಹಿಂದೂ ವ್ಯಕ್ತಿಯನ್ನು ಕೊಂದು ಅವನ ರಕ್ತ ಮೆತ್ತಿಕೊಂಡಿದ್ದ ಅಕ್ಕಿಯನ್ನು ಅವನ ಹೆಂಡತಿಗೆ ತಿನ್ನಲು ಹೇಳುವ ದೃಶ್ಯ ಸಿನಿಮಾದಲ್ಲಿದೆ. ಇದು ಆಧಾರರಹಿತ ಚಲನಚಿತ್ರವಾಗಿದೆ. ಈ ಸಿನಿಮಾ ದೇಶದಲ್ಲಿ ದ್ವೇಷವನ್ನು ಬಿತ್ತುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಹಕಾರಿಯಾಗುವ ಎಲ್ಲದರೊಂದಿಗೂ ನಿಲ್ಲಿರಿ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ನಾವು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಮೇಲೆ ಮಸಿ ಎರಚಿದ ಕೈ ಕಾರ್ಯಕರ್ತರು

    ಕಾಶ್ಮೀರಿ ಪಂಡಿತ್ ಮತ್ತು ಸರ್ಕಾರಿ ನೌಕರ ರಾಹುಲ್ ಭಟ್ ಅವರು ಈಚೆಗೆ ಉಗ್ರರ ಗುಂಡಿಗೆ ಹತ್ಯೆಯಾದರು. ಹತ್ಯೆಗೆ ಸ್ಥಳೀಯರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

  • ರಕ್ಷಾಕವಚ ಭೇದಿಸುತ್ತಿವೆ ಭಯೋತ್ಪಾದಕರ ಬುಲೆಟ್‌ – ಹೊಸ ಬುಲೆಟ್‌ಪ್ರೂಫ್‌ ಜಾಕೆಟ್‌ ಬೇಕೆಂದ ಭಾರತೀಯ ಸೇನೆ

    ರಕ್ಷಾಕವಚ ಭೇದಿಸುತ್ತಿವೆ ಭಯೋತ್ಪಾದಕರ ಬುಲೆಟ್‌ – ಹೊಸ ಬುಲೆಟ್‌ಪ್ರೂಫ್‌ ಜಾಕೆಟ್‌ ಬೇಕೆಂದ ಭಾರತೀಯ ಸೇನೆ

    ನವದೆಹಲಿ: ಕೆಲ ಭಯೋತ್ಪಾದಕರು ಭಾರತೀಯ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ಗಳಲ್ಲಿ ರಕ್ಷಾಕವಚ ಭೇದಿಸುವ ಅಮೆರಿಕದ ಬುಲೆಟ್‌ಗಳನ್ನು ಬಳಸುತ್ತಿದ್ದಾರೆ. ಇದರಿಂದ ರಕ್ಷಣೆಗೆ ಹೊಸ ಬುಲೆಟ್‌ಪ್ರೂಪ್‌ ಜಾಕೆಟ್‌ ಬೇಕೆಂದು ಭಾರತೀಯ ಸೇನೆ ಹೇಳಿದೆ.

    ಕಾಶ್ಮೀರ ಕಣಿವೆಯಲ್ಲಿನ ಕೆಲವು ಭಯೋತ್ಪಾದಕರು ಬಳಸುವ ಸುಧಾರಿತ ರೈಫಲ್‌ಗಳ ಬುಲೆಟ್‌ಗಳು ಸೈನಿಕರ ಬುಲೆಟ್ ಪ್ರೂಫ್ ಜಾಕೆಟ್‌ಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿವೆ. ಅಮೆರಿಕ ಸೇನೆ ಅಫ್ಘಾನಿಸ್ತಾನದಿಂದ ವಾಪಸ್‌ ತೆರಳುವ ಸಂದರ್ಭದಲ್ಲಿ ಅಮೆರಿಕನ್‌ ಶಸ್ತ್ರಾಸ್ತ್ರಗಳು ಈ ತಾಲಿಬಾನ್‌ ವಶದಲ್ಲಿವೆ. ಇದನ್ನೂ ಓದಿ: ಹನುಮಾನ್ ಚಾಲೀಸಾ ಪಠಿಸಿದ್ದಕ್ಕೆ ಬಂಧಿಸುವುದು ಸರ್ಕಾರದ ಮುರ್ಖತನ: ಫಡ್ನವೀಸ್

    ಏಪ್ರಿಲ್‌ನಲ್ಲಿ ನಡೆದ ಸೇನಾ ಕಮಾಂಡರ್‌ಗಳ ಸಮ್ಮೇಳನದಲ್ಲಿ ಈ ವಿಷಯವನ್ನು ಉನ್ನತ ಸೇನಾ ಅಧಿಕಾರಿಗಳು ಚರ್ಚಿಸಿದ್ದಾರೆ. ಈ ಬುಲೆಟ್‌ಗಳಿಗೆ ಪ್ರತಿರೋಧ ಒಡ್ಡಲು ಅಗತ್ಯ ಕ್ರಮಕ್ಕೆ ಭಾರತೀಯ ಸೇನೆ ಚಿಂತಿಸಿದೆ. ಈ ಭಯೋತ್ಪಾದಕ ಗುಂಪುಗಳು ಭಾರತದಲ್ಲಿ ಹಿಂಸಾಚಾರ ನಡೆಸಲು ಅಮೆರಿಕದ ಉಳಿದ ಶಸ್ತ್ರಾಸ್ತ್ರಗಳನ್ನು ಬಳಸಬಹುದೆಂದು ಅಂದಾಜಿಸಲಾಗಿದೆ.

    ಭಯೋತ್ಪಾದಕರು ಎನ್‌ಕೌಂಟರ್‌ಗಳ ಸಮಯದಲ್ಲಿ ಈ ಬುಲೆಟ್‌ಗಳನ್ನು ಬಳಸಿದ್ದಾರೆ. ನಾವು ಇಲ್ಲಿಯವರೆಗೆ 3 ನೇ ಹಂತದ ಜಾಕೆಟ್‌ಗಳನ್ನು ಬಳಸುತ್ತಿದ್ದೆವು. ಇನ್ಮುಂದೆ ಹೊಸ ಮಾದರಿಯ ಬುಲೆಟ್‌ಗಳ ವಿರುದ್ಧ ರಕ್ಷಣೆ ನೀಡುವ 4 ನೇ ಹಂತದ ಜಾಕೆಟ್‌ಗಳನ್ನು ನಾವು ಶೀಘ್ರದಲ್ಲೇ ಪಡೆಯುತ್ತೇವೆ ಎಂದು ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್‌ನ ಉನ್ನತ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ರೆಪೊ ದರ ಶೇ.4.40ಕ್ಕೆ ಹೆಚ್ಚಳ: ಆರ್‌ಬಿಐ ಗವರ್ನರ್‌ ಘೋಷಣೆ

    ವರದಿಗಳ ಪ್ರಕಾರ, ಅಮೆರಿಕದ ಪಡೆ ಹೆಲಿಕಾಪ್ಟರ್‌ಗಳು, ಪದಾತಿ ದಳದ ಯುದ್ಧ ವಾಹನಗಳು, ಸಂವಹನ ಉಪಕರಣಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಒಳಗೊಂಡಂತೆ ಸುಮಾರು 7-8 ಶತಕೋಟಿ ಡಾಲರ್‌ ಮೌಲ್ಯದ ಶಸ್ತ್ರಾಸ್ತ್ರಗಳು ಮತ್ತು ಉಪಕರಣಗಳನ್ನು ಅಫ್ಘಾನ್‌ನಲ್ಲಿ ಬಿಟ್ಟು ಹೋಗಿದೆ. ಅದರ ಬಹುಪಾಲು ಭಾಗವನ್ನು ತಾಲಿಬಾನ್ ವಶಪಡಿಸಿಕೊಂಡಿದೆ. ಇಸ್ಲಾಮಿ ಭಯೋತ್ಪಾದಕ ಸಂಘಟನೆಗಳು ಸಹ ಈ ಶಸ್ತ್ರಾಸ್ತ್ರಗಳನ್ನು ಬಳಸುತ್ತಿವೆ.

    ಈ ಹಿಂದೆಯೂ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಬಳಿ ಅಮೆರಿಕ ಮೂಲದ ಎಂ-16 ಅಸಾಲ್ಟ್ ರೈಫಲ್‌ಗಳು ಹಾಗೂ ಎಂ-4ಎ ಕಾರ್ಬೈನ್‌ಗಳು ಪತ್ತೆಯಾಗಿದ್ದವು. ಅಮೆರಿಕದ ಪಡೆಗಳು ತಮ್ಮ ಅವಸರದ ನಿರ್ಗಮನದ ಸಮಯದಲ್ಲಿ ಅಫ್ಘಾನಿಸ್ತಾನದಲ್ಲಿ ಈ ರೀತಿಯ ರೈಫಲ್‌ಗಳನ್ನು ಬಿಟ್ಟು ಹೋಗಿವೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಸೆಲ್ಫಿ ವೀಡಿಯೋ ಮಾಡುತ್ತಿದ್ದ ಯುವಕ- ರೈಲಿಗೆ ಸಿಲುಕಿ ಸಾವು

  • ಜಮ್ಮು-ಕಾಶ್ಮೀರಕ್ಕೆ ಮೋದಿ ಭೇಟಿ ಬಗ್ಗೆ ಮಾತನಾಡುವ ಹಕ್ಕು ಪಾಕಿಸ್ತಾನಕ್ಕಿಲ್ಲ: ಭಾರತ ತಿರುಗೇಟು

    ಜಮ್ಮು-ಕಾಶ್ಮೀರಕ್ಕೆ ಮೋದಿ ಭೇಟಿ ಬಗ್ಗೆ ಮಾತನಾಡುವ ಹಕ್ಕು ಪಾಕಿಸ್ತಾನಕ್ಕಿಲ್ಲ: ಭಾರತ ತಿರುಗೇಟು

    ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿ ಕುರಿತು ಮಾತನಾಡುವ ಯಾವುದೇ ಹಕ್ಕು ಪಾಕಿಸ್ತಾನಕ್ಕೆ ಇಲ್ಲ ಎಂದು ಭಾರತ ತಿರುಗೇಟು ನೀಡಿದೆ.

    ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಕುರಿತು ಪಾಕಿಸ್ತಾನದ ಟೀಕೆ ವ್ಯಕ್ತಪಡಿಸಿತ್ತು. ಟೀಕೆಗೆ ಪ್ರತಿಕ್ರಿಯಿಸಿರುವ ಭಾರತ, ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ ಎಂದು ಕುಟುಕಿದೆ. ಇದನ್ನೂ ಓದಿ: ಹಿಂಸಾಚಾರದಿಂದ ಯಾರಿಗೂ ಪ್ರಯೋಜನವಾಗಲ್ಲ: ಮೋಹನ್ ಭಾಗವತ್

    ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಮಾತನಾಡಿ, ಪ್ರಧಾನಿಗೆ ದೊರೆತ ಸ್ವಾಗತ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಆಗಿರುವ ಬದಲಾವಣೆಗಳು, ಭೇಟಿ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರವಾಗಿದೆ ಎಂದು ಪಾಕಿಸ್ತಾನಕ್ಕೆ ಟಾಂಗ್‌ ಕೊಟ್ಟಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ ಭೇಟಿ ವೇಳೆ ಪ್ರಧಾನಿ ಮೋದಿ ಅವರಿಗೆ ಸಿಕ್ಕ ಸ್ವಾಗತ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ವಿಷಯಗಳು ನಿಮ್ಮ ಯಾವುದೇ ಪ್ರಶ್ನೆಗಳಿಗೆ ಬಹಳ ಸ್ಪಷ್ಟ ಉತ್ತರವಾಗಿದೆ ಎಂದು ನಾನು ಭಾವಿಸುತ್ತೇನೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಮಾತನಾಡಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: PSI ನೇಮಕಾತಿ ಅಕ್ರಮ ಪ್ರಕರಣದ ಕ್ವೀನ್‍ಪಿನ್ ದಿವ್ಯಾ ಹಾಗರಗಿ ಅರೆಸ್ಟ್

    PAK

    ಕಳೆದ ಭಾನುವಾರ ಪ್ರಧಾನಿ ಮೋದಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಇದೇ ವೇಳೆ ಕೇಂದ್ರಾಡಳಿತ ಪ್ರದೇಶದಲ್ಲಿ ಸುಮಾರು 20,000 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದರು.

  • ವಿಶೇಷ ಸ್ಥಾನಮಾನ ರದ್ದತಿ ನಂತರ ಜಮ್ಮು-ಕಾಶ್ಮೀರಕ್ಕೆ ಮೋದಿ ಮೊದಲ ಭೇಟಿ

    ವಿಶೇಷ ಸ್ಥಾನಮಾನ ರದ್ದತಿ ನಂತರ ಜಮ್ಮು-ಕಾಶ್ಮೀರಕ್ಕೆ ಮೋದಿ ಮೊದಲ ಭೇಟಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮುವಿಗೆ ಭೇಟಿ ನೀಡಿದರು. ಇದೇ ವೇಳೆ 20,000 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.

    ನಾನು ಜಮ್ಮು ಮತ್ತು ಕಾಶ್ಮೀರದ ಯುವಕರಿಗೆ ಹೇಳಲು ಬಯಸುತ್ತೇನೆ. ನಿಮ್ಮ ಪೋಷಕರು ಮತ್ತು ಅಜ್ಜ-ಅಜ್ಜಿಯಂದಿರು ಅನುಭವಿಸಿದ ಕಷ್ಟಗಳನ್ನು ನೀವು ಎಂದಿಗೂ ಅನುಭವಿಸುವುದಿಲ್ಲ. ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉದ್ಧವ್ ಠಾಕ್ರೆ ಎಂಟ್ರಿ – 14 ದಿನಗಳ ಕಸ್ಟಡಿಗೆ ಒಳಗಾದ ಸಂಸದೆ, ಶಾಸಕ ದಂಪತಿ

    MODI 2

    ಈ ಬಾರಿಯ ಪಂಚಾಯತ್ ರಾಜ್ ದಿನವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಚರಿಸಲಾಗುತ್ತಿದೆ. ಇದು ದೊಡ್ಡ ಬದಲಾವಣೆಯನ್ನು ಸೂಚಿಸುತ್ತದೆ. ಜಮ್ಮು ಕಾಶ್ಮೀರದಲ್ಲಿ ಈಗ ಪ್ರಜಾಪ್ರಭುತ್ವ ತಳಮಟ್ಟದಿಂದಲೇ ಕಾರ್ಯನಿರ್ವಹಿಸುತ್ತಿದೆ ಎಂಬುದು ಹೆಮ್ಮೆಯ ವಿಷಯ. ಅದಕ್ಕಾಗಿಯೇ ನಾನು ಇಲ್ಲಿ ದೇಶದಾದ್ಯಂತ ಇರುವ ಪಂಚಾಯತ್‌ಗಳೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.

    ಕೇಂದ್ರಾಡಳಿತ ಪ್ರದೇಶವು ಅಭಿವೃದ್ಧಿಯ ಹೊಸ ಚರಿತ್ರೆ ಬರೆಯಲು ಸಜ್ಜಾಗಿದೆ. ಸ್ವಾತಂತ್ರ್ಯದ ಏಳು ದಶಕಗಳ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಕೇವಲ 17,000 ಕೋಟಿ ರೂ. ಖಾಸಗಿ ಹೂಡಿಕೆ ಬಂದಿದೆ. ಆದರೆ ಈಗ 38,000 ಕೋಟಿ ರೂ.ಗೆ ತಲುಪಿದೆ ಎಂದು ಒತ್ತು ಹೇಳಿದ್ದಾರೆ. ಇದನ್ನೂ ಓದಿ: ಮೋದಿಯನ್ನು ಭೇಟಿಯಾಗಿ ರುದ್ರಾಕ್ಷಿ ಮಾಲೆ ನೀಡಿದ ಅನುಪಮ್ ಖೇರ್

    NARENDRA MODI

    48 ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಎರಡು ಭಯೋತ್ಪಾದಕ ದಾಳಿಗಳನ್ನು ಕಂಡ ನಂತರ ಪ್ರಧಾನಿ ಮೋದಿ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಿದ್ದರು. ಶುಕ್ರವಾರ ಇಲ್ಲಿನ ಸುಂಜ್ವಾನ್‌ನಲ್ಲಿ ಭಯೋತ್ಪಾದಕರು ಬಸ್ ಮೇಲೆ ದಾಳಿ ನಡೆಸಿದಾಗ ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದರು.