Tag: ಜಮ್ಮು ಮತ್ತು ಕಾಶ್ಮೀರ

  • ಹಿಜಬ್‌ ನಿಷೇಧದ ಹೈಕೋರ್ಟ್‌ ತೀರ್ಪು ತೀವ್ರ ನಿರಾಶಾದಾಯಕ: ಕಾಶ್ಮೀರ ಮಾಜಿ ಸಿಎಂ

    ಹಿಜಬ್‌ ನಿಷೇಧದ ಹೈಕೋರ್ಟ್‌ ತೀರ್ಪು ತೀವ್ರ ನಿರಾಶಾದಾಯಕ: ಕಾಶ್ಮೀರ ಮಾಜಿ ಸಿಎಂ

    ಶ್ರೀನಗರ: ಹಿಜಬ್ ನಿಷೇಧವನ್ನು ಎತ್ತಿಹಿಡಿಯುವ ಕರ್ನಾಟಕ ಹೈಕೋರ್ಟ್‌ನ ನಿರ್ಧಾರವು ತೀವ್ರ ನಿರಾಶಾದಾಯಕವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ್‌ ಮುಫ್ತಿ ಅಭಿಪ್ರಾಯಪಟ್ಟಿದ್ದಾರೆ.

    ಈ ಕುರಿತು ಟ್ವೀಟ್‌ ಮಾಡಿರುವ ಅವರು, ಒಂದು ಕಡೆ ನಾವು ಮಹಿಳೆಯರ ಸಬಲೀಕರಣದ ಬಗ್ಗೆ ಮಾತನಾಡುತ್ತೇವೆ. ಆದರೆ ನಾವು ಅವರಿಗೆ ಸರಳ ಆಯ್ಕೆಯ ಹಕ್ಕನ್ನು ನಿರಾಕರಿಸುತ್ತಿದ್ದೇವೆ. ಇದು ಕೇವಲ ಧರ್ಮದ ಬಗ್ಗೆ ಅಷ್ಟೇ ಅಲ್ಲ, ಆಯ್ಕೆ ಮಾಡುವ ಸ್ವಾತಂತ್ರ್ಯದ ವಿಚಾರದಲ್ಲೂ ಕೂಡ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್‌ ಕುರಿತ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ: ವಕ್ಫ್‌ ಬೋರ್ಡ್‌ ಅಧ್ಯಕ್ಷ

    ಬೇಟಿ ಬಚಾವೋ, ಬೇಟಿ ಪಡಾವೋ ಎನ್ನುವುದು ಭ್ರಮಾತ್ಮಕ ಘೋಷಣೆಯಾಗಿ ಉಳಿದಿದೆ. ಹಿಜಬ್ ನೆಪವೊಡ್ಡಿ ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ತಡೆ ಒಡ್ಡಲಾಗುತ್ತಿದೆ ಎಂದು ಮುಫ್ತಿ ಅವರು ಈ ಹಿಂದೆಯೂ ಟ್ವೀಟ್‌ ಮಾಡಿ ಕರಾವಳಿಯಲ್ಲಿ ಎದ್ದಿದ್ದ ಹಿಜಬ್‌ ವಿವಾದ ಕುರಿತು ಕಿಡಿಕಾರಿದ್ದರು.

    ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ. ಕೃಷ್ಣ ಎಸ್‌ ದೀಕ್ಷಿತ್‌ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದಲ್ಲಿ ಹಿಜಬ್‌ ವಿವಾದ ಕುರಿತು ಇಂದು ತೀರ್ಪು ಪ್ರಕಟಿಸಲಾಯಿತು. ಇದನ್ನೂ ಓದಿ: ಹಿಜಬ್‌ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್‌ ಐತಿಹಾಸಿಕ ತೀರ್ಪು

    ಹಿಜಬ್‌ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ. ಎಲ್ಲರೂ ಕೋರ್ಟ್‌ ಆದೇಶವನ್ನು ಪಾಲಿಸಬೇಕು ಎಂದು ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್‌ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.

  • ಮೂರು ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ನಾಲ್ವರು ಉಗ್ರರ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ 3 ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

    ಕಳೆದ 12 ಗಂಟೆಗಳಲ್ಲಿ ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಭಾರೀ ಕಾರ್ಯಾಚರಣೆಯನ್ನು ಆರಂಭಿಸಿವೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಶನಿವಾರ ಬೆಳಗ್ಗೆ ಕಾಶ್ಮೀರದ ಪುಲ್ವಾಮಾ, ಗಂದರ್‌ಬಾಲ್ ಮತ್ತು ಹಂದ್ವಾರ ಪ್ರದೇಶದಲ್ಲಿ ಮೂರು ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಹೇಳಿದ್ದಾರೆ.

    ಕಾಶ್ಮೀರದಲ್ಲಿ ನಡೆದ ಎನ್‍ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, ಇನ್ನೂ ಕಾರ್ಯಾಚರಣೆ ಮುಂದುವರಿದಿದೆ. ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಹಲವು ಕಾರ್ಯಾಚರಣೆಗಳನ್ನು ಆರಂಭಿಸಿವೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದರು. ಇದನ್ನೂ ಓದಿ:  ಭೂದಾಖಲೆಗಳನ್ನು ‘ರೈತನ ಮನೆ ಬಾಗಿಲಿಗೆ’ ತಲುಪಿಸುವುದು ಒಂದು ಅತ್ಯುತ್ತಮ ಸೇವೆ: ಆರ್.ಅಶೋಕ್

    ನಾವು ಕಳೆದ ರಾತ್ರಿ 4-5 ಸ್ಥಳಗಳಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ. ಇದುವರೆಗೆ ಪುಲ್ವಾಮಾದಲ್ಲಿ ಜೆಇಎಂನ ಇಬ್ಬರು ಭಯೋತ್ಪಾದಕರು, ಗಂದರ್‌ಬಾಲ್ ಎಲ್‍ಇಟಿಯ ಒಬ್ಬ ಭಯೋತ್ಪಾದಕ, ಹಂದ್ವಾರದಲ್ಲಿ ಎಲ್‍ಇಟಿಯ ಮತ್ತೊಬ್ಬ ಭಯೋತ್ಪಾದಕ ಹತನಾಗಿದ್ದಾನೆ ಎಂದು ತಿಳಿಸಿದರು. ಎಲ್ಲಾ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ. ಇತರ ಸ್ಥಳಗಳಲ್ಲಿಯೂ ಸಂಪರ್ಕವನ್ನು ಸ್ಥಾಪಿಸಲಾಗುವುದು ಅಂತ ನಾವು ನಿರೀಕ್ಷಿಸುತ್ತಿದ್ದೇವೆ ಎಂದರು.

    ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚೆವಾಕಲನ್ ಗ್ರಾಮದಲ್ಲಿ ನಿನ್ನೆ ಸಂಜೆ ಮೊದಲ ಎನ್‍ಕೌಂಟರ್ ಪ್ರಾರಂಭವಾಯಿತು. ಅಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ಇನ್ನೂ ಇಬ್ಬರು ಉಗ್ರರು ಅಲ್ಲಿಯೇ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

    ಎರಡನೇ ಎನ್‍ಕೌಂಟರ್ ಮಧ್ಯ ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಕೌಬಾಗ್ ನುನಾರ್ ಪ್ರದೇಶದಲ್ಲಿ ನಡೆದಿದ್ದು, ಅಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಎಲ್‍ಇಟಿ ಭಯೋತ್ಪಾದಕನನ್ನು ಕೊಲ್ಲಲಾಯಿತು. ಸದ್ಯ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶನಿವಾರ ಬೆಳಗ್ಗೆ ಹಂದ್ವಾರದ ರಾಜ್ವಾರ್ ಪ್ರದೇಶದ ನೆಚಮಾದಲ್ಲಿ ನಡೆದ ಎನ್‍ಕೌಂಟರ್‌ನಲ್ಲಿ ಇನ್ನೊಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

    ಈ ಕುರಿತು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ, ಹಂದ್ವಾರದ ರಾಜ್ವಾರ್ ಪ್ರದೇಶದ ನೆಚಮಾದಲ್ಲಿ ಎನ್‍ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯದಲ್ಲಿವೆ. ಹೆಚ್ಚಿನ ವಿವರಗಳನ್ನು ಅನುಸರಿಸಲಾಗುವುದು. ಎನ್‍ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ತಾವು ಆಯ್ಕೆಯಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿ, ರಾಜಧಾನಿಯಲ್ಲಿ ಅಲ್ಲ: ಭಗವಂತ್ ಮಾನ್

    ಇದಕ್ಕೂ ಮೊದಲು, ಫೆಬ್ರವರಿ 10 ರಂದು ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಕೊಲ್ಲಲಾಯಿತು. ಅದರಲ್ಲಿ ಇಬ್ಬರು ಎಲ್‍ಇಟಿ ಭಯೋತ್ಪಾದಕರು ಪುಲ್ವಾಮಾದ ಬಟ್ಪೋರಾ ಪ್ರದೇಶದಲ್ಲಿ ಮತ್ತು ಶ್ರೀನಗರದ ಹಜರತ್ಬಾಲ್ ಪ್ರದೇಶದಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ತಿಳಿದು ಬಂದಿದೆ.

    ಈ ವರ್ಷ ಕಾಶ್ಮೀರದಲ್ಲಿ 20 ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳನ್ನು ಕಾರ್ಯಗತಗೊಳಿಸಲಾಗಿದೆ. ಭದ್ರತಾ ಪಡೆಗಳು ಮೂವರು ಉನ್ನತ ಕಮಾಂಡರ್‍ಗಳು ಮತ್ತು 9 ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ 35 ಭಯೋತ್ಪಾದಕರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

    ಅದಲ್ಲದೆ ಭದ್ರತಾ ಪಡೆಗಳು ಈ ವರ್ಷ 16 ಸಕ್ರಿಯ ಭಯೋತ್ಪಾದಕರು ಮತ್ತು ಮೂರು ಡಜನ್‍ಗಿಂತಲೂ ಹೆಚ್ಚು ಭಯೋತ್ಪಾದಕರ ಸಹಚರರನ್ನು ಜೀವಂತವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

     

  • ಮುಸ್ಲಿಮರ ಎಲ್ಲಾ ಚಿಹ್ನೆಗಳನ್ನು ನಾಶ ಮಾಡ್ತಿದೆ ಬಿಜೆಪಿ: ಹಿಜಬ್‌ ಕುರಿತು ಮುಫ್ತಿ ಪ್ರತಿಕ್ರಿಯೆ

    ಮುಸ್ಲಿಮರ ಎಲ್ಲಾ ಚಿಹ್ನೆಗಳನ್ನು ನಾಶ ಮಾಡ್ತಿದೆ ಬಿಜೆಪಿ: ಹಿಜಬ್‌ ಕುರಿತು ಮುಫ್ತಿ ಪ್ರತಿಕ್ರಿಯೆ

    ಶ್ರೀನಗರ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಬ್‌ ವಿವಾದ ಕುರಿತು ಕಳೆದ ವಾರವಷ್ಟೇ ಟ್ವೀಟ್‌ ಮೂಲಕ ಬೇಸರ ವ್ಯಕ್ತಪಡಿಸಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮತ್ತೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

    ಹಿಜಬ್‌ ವಿವಾದ ಕುರಿತು ಭಾನುವಾರ ಮಾತನಾಡಿದ ಅವರು, ಹಿಜಬ್‌ ಸೇರಿದಂತೆ ಮುಸಲ್ಮಾನರ ಎಲ್ಲಾ ಚಿಹ್ನೆಗಳನ್ನು ನಾಶ ಮಾಡಲು ಬಿಜೆಪಿ ಹೊರಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹೆಲ್ಮೆಟ್ ಹಾಕಿದ್ರೆ ಸೇಫ್ಟಿ ಅಲ್ವಾ ಅದ್ಕೆ ಹಿಜಬ್ ಹಾಕಿದ್ರೆ ಸೇಫ್ಟಿ ಅಂದಿದ್ದು: ಜಮೀರ್ ಸಮರ್ಥನೆ

    ಹಿಜಬ್‌ ವಿವಾದವನ್ನು ಬಿಜೆಪಿ ಕೊನೆಗಾಣಿಸದಿರುವುದು ಆತಂಕ ಮೂಡಿಸಿದೆ. ಮುಸ್ಲಿಮರ ಇತರ ಚಿಹ್ನೆಗಳನ್ನು ಅಳಿಸಿ ಹಾಕುವುದಕ್ಕಾಗಿಯೇ ಬಿಜೆಪಿಯವರು ಬಂದಿದ್ದಾರೆ. ಭಾರತದ ಮುಸಲ್ಮಾನರು, ಭಾರತೀಯರಾದರೆ ಸಾಕಾಗುವುದಿಲ್ಲ. ಅವರು ಬಿಜೆಪಿಯಾಗಿರಬೇಕು ಎಂದು ಬಿಜೆಪಿ ವಿರುದ್ಧ ಮುಫ್ತಿ ವಾಗ್ದಾಳಿ ನಡೆಸಿದ್ದಾರೆ.

    ಭಾರತೀಯ ಸಂವಿಧಾನವು ನೀಡಿರುವ ಹಕ್ಕುಗಳನ್ನು ವಿರೂಪಗೊಳಿಸಲಾಗುತ್ತಿದೆ. ಬಿಜೆಪಿಯವರು ಜಮ್ಮು ಮತ್ತು ಕಾಶ್ಮೀರದ ಜನರನ್ನು ಪಂಥೀಯ ಮಟ್ಟದಲ್ಲಿ, ಸಾಮಾಜಿಕ ಮಟ್ಟದಲ್ಲಿ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ. ಪರಿಣಾಮವಾಗಿ ಇಲ್ಲಿನ ಜನರು ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ. ಆದರೆ ನಮ್ಮ ಪಕ್ಷವು, ಪಂಥೀಯ ಮತ್ತು ಸಾಮಾಜಿಕ ವಿಭಜನೆ ವಿರುದ್ಧ ಹೋರಾಡುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಹೃದಯದಿಂದ ಮುಸ್ಲಿಂ ಮಗಳು, ಹಿಜಬ್‍ನಿಂದಲ್ಲ: ಕಾಶ್ಮೀರ ಟಾಪರ್

  • ಅವಳಿ ಎನ್‌ಕೌಂಟರ್‌ನಲ್ಲಿ ಜೆಇಎಂ ಕಮಾಂಡರ್ ಸೇರಿ ಐವರು ಉಗ್ರರ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅವಳಿ ಎನ್‍ಕೌಂಟರ್ ನಡೆದಿದ್ದು, ಪರಿಣಾಮ ಜೆಇಎಂ ಕಮಾಂಡರ್ ಜಾಹಿದ್ ವಾನಿ ಸೇರಿದಂತೆ 5 ಭಯೋತ್ಪಾದಕರು ಹತರಾಗಿದ್ದಾರೆ.

    ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಇಂದು ಟ್ವಿಟ್ಟರ್ ನಲ್ಲಿ, ಕಳೆದ 12 ಗಂಟೆಗಳಲ್ಲಿ ನಡೆದ ಅವಳಿ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೊಯ್ಬಾ(ಎಲ್‍ಇಟಿ) ಮತ್ತು ಜೈಶ್-ಎ-ಮೊಹಮ್ಮದ್(ಜೆಇಎಂ) ಜೊತೆ ಸಂಬಂಧ ಹೊಂದಿದ ಐವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಂಗಗಳ ಕಾಟ – ಪಂಚಾಯ್ತಿ ಎಲೆಕ್ಷನ್ ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧಾರ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳೊಂದಿಗೆ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳು ನಡೆದಿದ್ದು, ಹತ್ಯೆಗೀಡಾದ ಐವರು ಭಯೋತ್ಪಾದಕರ ಪೈಕಿ ಜೆಇಎಂ ಕಮಾಂಡರ್ ಭಯೋತ್ಪಾದಕ ಜಾಹಿದ್ ವಾನಿ ಕೂಡ ಇದ್ದಾನೆ. ಪಾಕಿಸ್ತಾನದ 5 ಮಂದಿ ಭಯೋತ್ಪಾದಕರು ಕಳೆದ 12 ಗಂಟೆಗಳಲ್ಲಿ ನಡೆದ ಎರಡು ಎನ್‌ಕೌಂಟರ್‌ಗಳಲ್ಲಿ ಹತರಾಗಿದ್ದಾರೆ. ನಮಗೆ ಇದು ದೊಡ್ಡ ಯಶಸ್ಸು ಎಂದು ಅವರು ಬರೆದುಕೊಂಡಿದ್ದಾರೆ.

    ಪೊಲೀಸರ ಪ್ರಕಾರ, ಪುಲ್ವಾಮಾ ಜಿಲ್ಲೆಯ ನೈರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ. ಈ ವೇಳೆ ಭಯೋತ್ಪಾದಕರ ಬಳಿ ಇದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ಅಪಾಯಕಾರಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಇರಾಕ್ ಏರ್‌ಸ್ಟ್ರೈಕ್ ದಾಳಿ- 6 ಇಸ್ಲಾಮಿಕ್ ಸ್ಟೇಟ್ ಉಗ್ರರ ಹತ್ಯೆ

    ಬುದ್ಗಾಮ್‍ನ ಚ್ರಾರ್-ಇ-ಶರೀಫ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ಮೃತನಾಗಿದ್ದಾನೆ. ಎಕೆ 56 ರೈಫಲ್ ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

  • ಜಮ್ಮು-ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಗೃಹ ಬಂಧನ

    ಜಮ್ಮು-ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಗೃಹ ಬಂಧನ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕ್ಷೇತ್ರ ಪುನರ್‌ ವಿಂಗಡಣಾ ಆಯೋಗದ ಕರಡು ಪ್ರಸ್ತಾವವನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ತಡೆಯುವುದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.

    ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್‌ ಅಬ್ದುಲ್ಲಾ, ಮೆಹಬೂಬ ಮುಫ್ತಿ, ಓಮರ್‌ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಅವರು ವಾಸವಾಗಿರುವ ಶ್ರೀನಗರದ ಗುಪ್ಕರ್‌ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಎಲ್‌ಪಿಜಿ ಬಳಕೆದಾರರಿಗೆ ಶುಭಸುದ್ದಿ – ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 102.5 ರೂ. ಕಡಿತ

    ರಾಜಕೀಯ ಮುಖಂಡರ ಮನೆಗಳ ಹೊರಗೆ ಪೊಲೀಸರು ಭದ್ರತಾ ಟ್ರಕ್‌ಗಳನ್ನು ನಿಯೋಜಿಸಿದ್ದು, ಅಲ್ಲಿಂದ ಯಾರಿಗೂ ಒಳ ಹೋಗಲು ಅಥವಾ ಹೊರ ಬರಲು ಅವಕಾಶ ನೀಡುತ್ತಿಲ್ಲ.

    ಜಮ್ಮು ಪ್ರಾಂತ್ಯದಲ್ಲಿ ಆರು, ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಒಂದು ವಿಧಾನಸಭಾ ಕ್ಷೇತ್ರಗಳನ್ನು ಹೆಚ್ಚುವರಿಯಾಗಿ ಸೇರ್ಪಡೆ ಮಾಡುವ ಕರಡು ಪ್ರಸ್ತಾವವನ್ನು ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಗುಪ್ಕಾರ್‌ ಅಲಯನ್ಸ್‌ನ ನೇತೃತ್ವ ವಹಿಸಿರುವ ಫಾರೂಕ್‌ ಅಬ್ದುಲ್ಲಾ ಅವರು ಘೋಷಿಸಿದ್ದರು.

    ಮಾಜಿ ಸಿಎಂ ಓಮರ್‌ ಅಬ್ದುಲ್ಲಾ ಅವರು ಫೋಟೀ ಸಹಿತ ಟ್ವೀಟ್‌ ಮಾಡಿದ್ದು, ತಮ್ಮ ಹಾಗೂ ತಂದೆ, ಸಹೋದರಿಯರ ಮನೆಗೆ ಬೀಗ ಹಾಕಲಾಗಿದೆ. ಗೇಟ್‌ಗಳ ಹೊರಗೆ ಭದ್ರತಾ ಟ್ರಕ್‌ಗಳನ್ನು ನಿಯೋಜಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಜನರನ್ನು ಸಜ್ಜುಗೊಳಿಸಬೇಕಾದ ಸಚಿವರು, ಶಾಸಕರಿಗೆ ಸೋಂಕು ತಗುಲಿರುವುದು ಆತಂಕಕಾರಿ: ಅಜಿತ್‌ ಪವಾರ್‌

    ಕ್ಷೇತ್ರ ಪುನರ್‌ ವಿಂಗಡಣಾ ಆಯೋಗದ ಕರಡು ಪ್ರಸ್ತಾವವನ್ನು ರಾಜಕೀಯ ನಾಯಕರಷ್ಟೇ ಅಲ್ಲ, ಇಲ್ಲಿನ ಎಲ್ಲ ವರ್ಗದ ಜನರು ಒಪ್ಪಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷಗಳ ನಿಲುವಾಗಿದೆ.

  • ನಾನು ’24 ಕ್ಯಾರೆಟ್ ಕಾಂಗ್ರೆಸ್ಸಿಗ’, ಪಕ್ಷದೊಂದಿಗೆ ಯಾವುದೇ ಅಸಮಾಧಾನವಿಲ್ಲ: ಗುಲಾಂ ನಬಿ ಆಜಾದ್

    ನಾನು ’24 ಕ್ಯಾರೆಟ್ ಕಾಂಗ್ರೆಸ್ಸಿಗ’, ಪಕ್ಷದೊಂದಿಗೆ ಯಾವುದೇ ಅಸಮಾಧಾನವಿಲ್ಲ: ಗುಲಾಂ ನಬಿ ಆಜಾದ್

    ಶ್ರೀನಗರ: ನಾನು ’24 ಕ್ಯಾರೆಟ್ ಕಾಂಗ್ರೆಸ್ಸಿಗ’, ನಮ್ಮ ಪಕ್ಷದೊಂದಿಗೆ ನನಗೆ ಯಾವುದೇ ಅಸಮಾಧಾನವಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಹೇಳುವ ಮೂಲಕ ಎಲ್ಲ ಊಹಾಪೋಹಗಳಿಗೆ ಇಂದು ತೆರೆ ಎಳೆದಿದ್ದಾರೆ.

    ಪಂಜಾಬ್‍ನ ಮಾಜಿ ಸಿಎಂ ಅಮರಿಂದರ್ ಸಿಂಗ್ ಅವರಂತೆ ನೀವು ಸಹ ಪಕ್ಷದಿಂದ ಹೊರಬರುವ ಸಾಧ್ಯತೆ ಇದೆ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ’24 ಕ್ಯಾರೆಟ್ ಕಾಂಗ್ರೆಸ್ಸಿಗರು’ ಪಕ್ಷ ಮತ್ತು ನಮ್ಮ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ, ಅಸಮಾಧಾನವಿಲ್ಲ. ಬದಲಿಗೆ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ:  ಪ್ರಧಾನಿ ಮೋದಿ ನಮ್ಮ ದೇಶದ ಹೆಮ್ಮೆ: ಗುಲಾಂ ನಬಿ ಆಜಾದ್

    ಹೌದು, ನಾನು ಕಾಂಗ್ರೆಸ್ಸಿಗ. ನಾನು ಕಾಂಗ್ರೆಸ್ಸಿಗ ಅಲ್ಲ ಎಂದು ನಿಮಗೆ ಯಾರು ಹೇಳಿದರು? 24 ‘ಕ್ಯಾರೆಟ್’ ಕಾಂಗ್ರೆಸ್ಸಿಗ. 18 ಕ್ಯಾರೆಟ್ 24 ಕ್ಯಾರೆಟ್‍ಗೆ ಸವಾಲು ಹಾಕಿದರೆ ಹೇಗೆ ಎಂದು ಪ್ರಶ್ನಿಸಿದರು. ವಿಭಜಿಸುವ ಪಕ್ಷಗಳು ವಿಭಜನೆಯನ್ನು ಮಾತ್ರ ನೋಡುತ್ತವೆ. ನಾವು ಜನರನ್ನು ಜೋಡಿಸುವವರು. ನಾವು ಏಕೀಕರಣಕ್ಕಾಗಿ ಏಕತೆಯನ್ನು ಬೆಸೆಯುತ್ತೇವೆ ಎಂದರು.

    ಸುಧಾರಣೆಗಳ ಕರೆ ಕುರಿತು ಮಾತನಾಡಿದ ಅವರು, ಪ್ರತಿ ಪಕ್ಷ, ಪ್ರತಿ ಸಮಾಜ ಮತ್ತು ದೇಶದಲ್ಲಿ ಸುಧಾರಣೆಗಳ ಅಗತ್ಯವಿದೆ. ಸುಧಾರಣೆಗಳು ಪ್ರತಿ ಪಕ್ಷದಲ್ಲಿ ನಿರಂತರ ಪ್ರಕ್ರಿಯೆ ಮತ್ತು ಅವಶ್ಯಕವಾಗಿದೆ. ಸುಧಾರಣೆಗಳಿಂದಾಗಿ ಹಿಂದಿನ ಅನೇಕ ದುಷ್ಪರಿಣಾಮಗಳು ಇಂದು ಸಮಾಜದಲ್ಲಿ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: 40 ವರ್ಷ ಮೇಲ್ಪಟ್ಟ ಮಹಿಳೆಯರು ಮೋದಿಯಿಂದ ಪ್ರಭಾವಿತರಾಗಿದ್ದಾರೆಯೇ ಹೊರತು ಜೀನ್ಸ್ ತೊಟ್ಟ ಹುಡುಗಿಯರಲ್ಲ: ದಿಗ್ವಿಜಯ್ ಸಿಂಗ್

    ರಾಜಕಾರಣಿಗಳು ಜನರ ಕಲ್ಯಾಣಕ್ಕಾಗಿ ಸರಿಯಾದ ಕೆಲಸಗಳನ್ನು ಮಾಡಬೇಕಾಗಿತ್ತು. ಆದರೆ ಕೆಲವೊಮ್ಮೆ ಅವರು ಜನರನ್ನು ವಿಭಜಿಸುವ ಮೂಲಕ ಸೈತಾನನ ಕೆಲಸವನ್ನು ಮಾಡುತ್ತಾರೆ ಎಂದು ನಾನು ಈಗಾಗಲೇ ಹೇಳಿದ್ದೇನೆ ಎಂದು ಕಿಡಿಕಾರಿದರು.

    ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ಭವಿಷ್ಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಯಜಮಾನರು. ಯಾವುದೇ ಪಕ್ಷದ ಸೋಲು ಮತ್ತು ಗೆಲುವು ಅವರ ಕೈಯಲ್ಲಿದೆ. ಈ ಹಿನ್ನೆಲೆ ಪ್ರಸ್ತುತ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಹೆಚ್ಚುತ್ತಿರುವ ನಿರುದ್ಯೋಗದಿಂದಾಗಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಜನರು ಬಿಜೆಪಿಯಿಂದ ಬೇಸತ್ತಿದ್ದಾರೆ ಎಂದು ಹೇಳಿದರು.

  • ಪೊಲೀಸ್ ಅಧಿಕಾರಿ, ನಾಗರಿಕ ಹತ್ಯೆ – ಭದ್ರತಾ ಪಡೆ ಕಾರ್ಯಾಚರಣೆಯಲ್ಲಿ 2 ಉಗ್ರರ ಹತ್ಯೆ, ಇನ್ನಿಬ್ಬರ ಬಂಧನ

    ಪೊಲೀಸ್ ಅಧಿಕಾರಿ, ನಾಗರಿಕ ಹತ್ಯೆ – ಭದ್ರತಾ ಪಡೆ ಕಾರ್ಯಾಚರಣೆಯಲ್ಲಿ 2 ಉಗ್ರರ ಹತ್ಯೆ, ಇನ್ನಿಬ್ಬರ ಬಂಧನ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸ್ ಅಧಿಕಾರಿ ಮತ್ತು ನಾಗರಿಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರ ವಿರುದ್ಧ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಅಪರಿಚಿತ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಎಲ್‌ಇಟಿ ಸಂಘಟನೆಯೊಂದಿಗೆ ನಂಟು ಹೊಂದಿರುವ ಇಬ್ಬರು ಉಗ್ರರನ್ನು ವಶಕ್ಕೆ ಪಡೆಯಲಾಗಿದೆ.

    ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಅಪರಿಚಿತ ಉಗ್ರರ ಹತ್ಯೆಯಾಗಿದ್ದಾರೆ. ಕೆಲ ದಿನಗಳ ಹಿಂದೆ ನಾಗರಿಕ ಮತ್ತು ಪೊಲೀಸ್ ಅಧಿಕಾರಿ ಹತ್ಯೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಗರದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯ ಬೆಂಬಲಿತ ದಿ ರೆಸಿಸ್ಟೆನ್ಸ್ ಫ್ರಂಟ್‌ನ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಮಕ್ಕಳನ್ನು ಹೊಂದುವ ದಂಪತಿಗೆ 23.5 ಲಕ್ಷ ಸಾಲ ಸೌಲಭ್ಯ – ಚೀನಾ ಆಫರ್

    ದಕ್ಷಿಣ ಭಾರತದ ಶೋಪಿಯಾನ್ ಚೌಗಾಮ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ತಿಳಿದು ಭದ್ರತಾ ಪಡೆ ಕಾರ್ಯಾಚರಣೆ ನಡೆಸಿತ್ತು. ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಉಗ್ರರನ್ನು ವಶಕ್ಕೆ ಪಡೆಯಲು ಭದ್ರತಾ ಪಡೆ ಮುಂದಾಗಿತ್ತು. ಆದರೆ ಭದ್ರತಾ ಪಡೆಯ ವಿರುದ್ಧ ಉಗ್ರರು ಗುಂಡಿನ ದಾಳಿ ನಡೆಸಿದರು. ಪ್ರತಿಯಾಗಿ ಸಿಬ್ಬಂದಿ ಎನ್‌ಕೌಂಟರ್ ನಡೆಸಿದರು. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಅವರು ಯಾರು, ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಹಿಳೆಯರು ಚಳಿಗಾಲದಲ್ಲಿ ಧರಿಸಬಹುದಾದ 5 ಸ್ಟೈಲಿಶ್ ಕ್ಯಾಪ್‍ಗಳು

  • ಕಾಶ್ಮೀರದಲ್ಲಿ ಉಗ್ರರ ದಾಳಿ – ಪೊಲೀಸ್‌ ಅಧಿಕಾರಿ, ನಾಗರಿಕ ಹತ್ಯೆ

    ಕಾಶ್ಮೀರದಲ್ಲಿ ಉಗ್ರರ ದಾಳಿ – ಪೊಲೀಸ್‌ ಅಧಿಕಾರಿ, ನಾಗರಿಕ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌, ಶ್ರೀನಗರದಲ್ಲಿ ಉಗ್ರರು ಪ್ರತ್ಯೇಕ ಎರಡು ಕಡೆ ಇಂದು ಸಂಜೆ ನಡೆಸಿದ ದಾಳಿಯಲ್ಲಿ ಪೊಲೀಸ್‌ ಅಧಿಕಾರಿ ಹಾಗೂ ಒಬ್ಬ ನಾಗರಿಕ ಹತ್ಯೆಯಾಗಿದ್ದಾರೆ.

    ಅನಂತನಾಗ್‌ ಪಟ್ಟಣದ ಬಿಜ್ಬೆಹಾರ್‌ನಲ್ಲಿ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಅಧಿಕಾರಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ ಪೊಲೀಸ್‌ ಅಧಿಕಾರಿ ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ರಿಲಯನ್ಸ್‌, ಪತಂಜಲಿ, ಟಾಟಾ, ಇನ್ಫೋಸಿಸ್‌ ಸೇರಿ 11 ಖಾಸಗಿ ಸಂಸ್ಥೆಗಳಿಗೆ ಸಿಐಎಸ್‌ಎಫ್‌ ಭದ್ರತೆ

    ಮೃತ ಅಧಿಕಾರಿ ಮೊಹಮ್ಮದ್‌ ಅಶ್ರಫ್‌ ಎಂದು ಗುರುತಿಸಲಾಗಿದೆ. ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    ಮತ್ತೊಂದೆಡೆ ಶ್ರೀನಗರದಲ್ಲಿ ನಡೆದ ದಾಳಿಯಲ್ಲಿ ನಾಗರಿಕನೊಬ್ಬ ಮೃತಪಟ್ಟಿದ್ದಾನೆ. ರೌಫ್‌ ಅಹಮದ್‌ ಎಂಬ ನಾಗರಿಕನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರ ಗಾಯಗೊಂಡಿದ್ದ ನಾಗರಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಮೃತಪಟ್ಟಿದ್ದಾನೆಂದು ವೈದ್ಯರು ತಿಳಿಸಿದರು. ಇದನ್ನೂ ಓದಿ: ಪ್ರಳಯ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ – ದೇಶದ ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

  • ಕಾಶ್ಮೀರದಲ್ಲಿ ಮತ್ತೆ ಭಯ ಮರಳಿದೆ: ಒಮರ್ ಅಬ್ದುಲ್ಲಾ

    ಕಾಶ್ಮೀರದಲ್ಲಿ ಮತ್ತೆ ಭಯ ಮರಳಿದೆ: ಒಮರ್ ಅಬ್ದುಲ್ಲಾ

    ಶ್ರೀನಗರ: ಕಾಶ್ಮೀರದಲ್ಲಿ ಮತ್ತೆ ಭಯ ಮರಳಿದೆ ಎಂದು ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

    ಮಧ್ಯ ಕಾಶ್ಮೀರದ ಗಂದರ್‍ಬಾಲ್ ಜಿಲ್ಲೆಯ ಪಕ್ಷದ ಜಿಲ್ಲಾ ಕೇಂದ್ರದಲ್ಲಿ ನಡೆದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, 370ನೇ ವಿಧಿಯನ್ನು ರದ್ದುಪಡಿಸಿದ ನಂತರ, ಜಮ್ಮು ಮತ್ತು ಕಾಶ್ಮೀರ ಶಾಂತಿ ಮರಳುತ್ತದೆ ಎಂದು ನಾವು ತಿಳಿದುಕೊಂಡಿದ್ದೆವು. ಆದರೆ ಅದು ಸುಳ್ಳು ಆಗಿದೆ. ಕಳೆದ 24 ಗಂಟೆಗಳಲ್ಲಿ, ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಸಿಬ್ಬಂದಿಯ ಮೇಲೆ ಭಯೋತ್ಪದಕರು ದಾಳಿ ಮಾಡಿದ್ದಾರೆ. ಈ ಪರಿಣಾಮ ನಾವು ಮೂವರು ಪೊಲೀಸರನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಶ್ರೀಗಂಧ ಕಳ್ಳನ ಬಂಧನ – 910 ಕೆಜಿ ಶ್ರೀಗಂಧ ವಶ

    ಜನತೆಗೆ ಭದ್ರತೆಯ ಭಾವನೆ ಮೂಡಿಸುವಲ್ಲಿ ಆಡಳಿತ ವಿಫಲವಾಗಿದೆ. ಸರ್ಕಾರ ಸುಮ್ಮನೆ ಬೇರೆ ರೀತಿಯ ಕೆಲಸಕ್ಕೆ ಕೈ ಹಾಕುವುದರ ಬದಲು ನಮ್ಮ ಜನರಿಗೆ ಭದ್ರತೆಯ ಭಾವನೆಯನ್ನು ನೀಡಲು ಮುಂದಾಗಬೇಕು. ಆದರೆ ಇದರಲ್ಲಿ ಭಾರತ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದರು.

    ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಪಕ್ಷಗಳನ್ನು ಒಗ್ಗೂಡಿಸಿದ್ದಕ್ಕಾಗಿ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಶ್ಲಾಘಿಸಿದ ಒಮರ್, ಎಲ್ಲ ಪಕ್ಷಗಳ ಬಗ್ಗೆ ವಿವರಿಸಿದರು. ಈ ವೇಳೆ ಅಧಿಕಾರದ ಹಿಂದೆ ಎನ್‍ಸಿ ಓಡುತ್ತಿಲ್ಲ. ಬಿಜೆಪಿಯು ಆರ್‍ಎಸ್‍ಎಸ್ ಕೈಯಲ್ಲಿ ಆಡುತ್ತಿರುವ ಪಕ್ಷವಾಗಿದ್ದು, ಪಿಎಜಿಡಿ ಮೈತ್ರಿಯನ್ನು ರಚಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಯೋಗ’ಯೋಗಾ’ – ವಿಯೆಟ್ನಾಂ ಯುವತಿಯ ಕೈಹಿಡಿದ ಹಾವೇರಿಯ ಯುವಕ

    ಕೇಂದ್ರವು ಯಾವಾಗಲೂ ಜಮ್ಮು ಮತ್ತು ಕಾಶ್ಮೀರದ ಧ್ವನಿಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ. ನಾವು ವಿಭಜನೆಗೊಂಡರೆ ಕೇಂದ್ರದ ಸಂಚು ಯಶಸ್ವಿಯಾಗುತ್ತದೆ ಎಂದು ತಿಳಿಸಿದರು.

  • ಕಾಶ್ಮೀರದಲ್ಲಿ ಉಗ್ರರಿಂದ ದಾಳಿ- ಇಬ್ಬರು ಪೊಲೀಸರು ಹುತಾತ್ಮ

    ಕಾಶ್ಮೀರದಲ್ಲಿ ಉಗ್ರರಿಂದ ದಾಳಿ- ಇಬ್ಬರು ಪೊಲೀಸರು ಹುತಾತ್ಮ

    ಶ್ರೀನಗರ: ಅಪರಿಚಿತ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.

    ಮೊಹಮ್ಮದ್ ಸುಲ್ತಾನ್ ಹಾಗೂ ಫಯಾಜ್ ಅಹ್ಮದ್ ಗಾಯಗೊಂಡ ಪೊಲೀಸರು. ಜಮ್ಮು ಮತ್ತು ಕಾಶ್ಮೀರದ ಉತ್ತರ ಬಂಡಿಪೋರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡವರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ನಿರತರಾಗಿದ್ದರು ಎಂದು ಮೂಲಗಳು ತಿಳಿಸಿವೆ.

    ಬಂಡಿಪೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಯೋತ್ಪಾದಕರು, ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ದಾಳಿಯಲ್ಲಿ ಮೊಹಮ್ಮದ್ ಸುಲ್ತಾನ್ ಹಾಗೂ ಫಯಾಜ್ ಅಹ್ಮದ್ ಅವರಿಗೆ ಗುಂಡೇಟಿನಿಂದ ತೀವ್ರ ಗಾಯಗಳಾಗಿದ್ದವು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಮಾರ್ಗ ಮಧ್ಯದಲ್ಲೆ ಇಬ್ಬರು ಹುತಾತ್ಮರಾದರು. ಇದನ್ನೂ ಓದಿ: ಮಕ್ಕಳಿಗೂ ವಕ್ಕರಿಸಿತು ಹೊಸ ತಳಿ- ಮಹಾರಾಷ್ಟ್ರದಲ್ಲಿ 3 ವರ್ಷದ ಮಗುವಿನಲ್ಲಿ ಓಮಿಕ್ರಾನ್‌ ಪತ್ತೆ

    ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ ಸಿಆರ್‌ಪಿಎಫ್ ಯೋಧರು ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 2 ಡೋಸ್ ಲಸಿಕೆ ಪಡೆದ 9 ತಿಂಗಳ ಬಳಿಕ ಬೂಸ್ಟರ್ ಡೋಸ್ ಪಡೆಯಲು ICMR ಅನುಮತಿ?