Tag: ಜಮ್ಮು ಮತ್ತು ಕಾಶ್ಮೀರ

  • ಕಾಶ್ಮೀರದ ಕುರಿತು ಕೇಂದ್ರ ನಿರ್ಧಾರ, ಬಹಳ ಹಿಂದಿನ ಕನಸು ನನಸಾಗಿದೆ- ಶೋಭಾ ಕರಂದ್ಲಾಜೆ

    ಕಾಶ್ಮೀರದ ಕುರಿತು ಕೇಂದ್ರ ನಿರ್ಧಾರ, ಬಹಳ ಹಿಂದಿನ ಕನಸು ನನಸಾಗಿದೆ- ಶೋಭಾ ಕರಂದ್ಲಾಜೆ

    – ಕಾಲಿಗೆ ಹೊಕ್ಕಿದ್ದ ಮುಳ್ಳನ್ನು ತೆಗೆದಂತಾಗಿದೆ

    ನವದೆಹಲಿ: ಕಾಶ್ಮೀರದ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರದಿಂದ ತುಂಬಾ ಸಂತಸವಾಗಿದ್ದು, ಬಹಳ ಹಿಂದಿನ ಕನಸು ಈಗ ನನಸಾಗಿದೆ. ಒಂದು ರೀತಿ ಕಾಲಿಗೆ ಹೊಕ್ಕಿದ್ದ ಮುಳ್ಳನ್ನು ಹೊರ ತೆಗೆದಂತಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.

    ದೆಹಲಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕಾಶ್ಮೀರದ ವಿಚಾರದಲ್ಲಿ ಬಹಳ ಹಿಂದಿನ ಕನಸು ಈಗ ನನಸಾಗಿದ್ದು, ಜನಸಂಘದ ಸ್ಥಾಪಕರಾದ ಶಾಮ್ ಪ್ರಸಾದ್ ಮುಖರ್ಜಿ ಅವರು ಇದೇ ವಿಷಯವಾಗಿ ಹೋರಾಟ ನಡೆಸಿದ್ದರು. ಅದಕ್ಕಾಗಿಯೇ ಪ್ರಾಣ ತ್ಯಾಗ ಮಾಡಿದ್ದರು. ಅವರ ಕನಸು ಸಹ ಇದೇ ಆಗಿತ್ತು ಎಂದು ತಿಳಿಸಿದರು.

    ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಒಂದು ದೇಶದಲ್ಲಿ ಎರಡು ಧ್ವಜ, ಪ್ರಧಾನಿ ಇರಬಾರದು ಎಂದುಕೊಂಡಿದ್ದರು ಹಾಗೇಯೇ ಆಗಿದೆ. ಇದೀಗ ಅಖಂಡ ಭಾರತ ಒಂದಾಗಿದೆ. ಬೇರೆ ರಾಜ್ಯಗಳಂತೆ ಕಾಶ್ಮೀರ ಕೂಡ ನಮ್ಮದಾಗಬೇಕೆಂಬ ಕನಸು ಆಗಿನಿಂದಲೂ ಇತ್ತು. ಈಗ ನನಸಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ಕಾಶ್ಮೀರದಲ್ಲಿನ ವಿಪಕ್ಷಗಳಿಗೆ ತಿಳಿಯದಂತೆ ಅಲ್ಲಿನ ನಾಯಕರರಿಂದ ಈ ವಿಷಯವನ್ನು ದೂರ ಇಡಲಾಗಿತ್ತು. ಹೀಗಾಗಿ ವಿರೋಧ ಪಕ್ಷದವರನ್ನು ಗೃಹ ಬಂಧನದಲ್ಲಿಡಲಾಗಿದೆ. ದೇಶದ ಹಿತದೃಷ್ಟಿಯಿಂದ ಈ ವಿಚಾರವನ್ನು ಗುಟ್ಟಾಗಿ ಇಡಲಾಗಿತ್ತು. ಕಾಲಿಗೆ ಹೊಕ್ಕಿದ್ದ ಮುಳ್ಳನ್ನು ಹೊರ ತೆಗೆದಂತಾಗಿದೆ. ಇದರಿಂದ ದೇಶಕ್ಕೆ ಅಷ್ಟು ನಿರಾಳತೆ ಒದಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ದೇಶದ ಒಳಿತಿನ ದೃಷ್ಟಿಯಿಂದ ಕೆಲವು ನಿರ್ಧಾರಗಳನ್ನು ದಿಢೀರ್ ತೆಗೆದುಕೊಳ್ಳಬೇಕಿತ್ತು. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ನಿರ್ಧಾರವನ್ನು ಗುಪ್ತವಾಗಿಟ್ಟಿದ್ದರು. ಇಲ್ಲವಾದಲ್ಲಿ, ದೊಂಬೆ, ಗಲಾಟೆ, ಭಯೋತ್ಪಾದನೆಯಂತಹ ಕೃತ್ಯಗಳು ನಡೆಯುತ್ತಿದ್ದವು. ಇಷ್ಟು ವರ್ಷಗಳಲ್ಲಿ ಕಾಶ್ಮೀರಕ್ಕಾಗಿ ಬಲಿಯಾಗಿರುವ ಸೈನಿಕರು, ಸಾರ್ವಜನಿಕರ ಆತ್ಮಕ್ಕೆ ಇಂದು ತೃಪ್ತಿಯಾಗಿರುತ್ತದೆ. ಇದಕ್ಕೆ ನಮ್ಮೆಲ್ಲ ಸಂಸದರ ಬೆಂಬಲವಿತ್ತು. ಅಲ್ಲದೆ, ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿಯೂ ಸಹ ಈ ಅಂಶ ಉಲ್ಲೇಖವಾಗಿತ್ತು. ಹೀಗಾಗಿ ನಿರ್ಧಾರದ ಕುರಿತು ಆಶ್ಚರ್ಯವೇನು ಇಲ್ಲ. ನಮಗೆ ಇದು ಹೊಸ ವಿಚಾರವಲ್ಲ. ಇಂತಹ ದಿಟ್ಟ ನಿರ್ಧಾರ ಕೈಗೊಂಡಿದ್ದು, ಶ್ಲಾಘನಾರ್ಹ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾಶ್ಮಿರ ಕೇಂದ್ರಾಡಳಿತ ಪ್ರದೇಶವಾಗಿ ರೂಪುಗೊಂಡಿದೆ, ರಾಷ್ಟ್ರಪತಿಗಳ ಹಾಗೂ ಕೇಂದ್ರ ನಾಯಕರ ಆಡಳಿತಕ್ಕೊಳಪಡಲಿದೆ. ಕಾಶ್ಮೀರದ ಕೆಲ ನಾಯಕರನ್ನು ಗೃಹಬಂಧನದಲ್ಲಿರಿಸಿರುವುದು ಗದ್ದಲ ಗಲಾಟೆಗಳಾಗಬಾರದು ಎಂಬ ಉದ್ದೇಶದಿಂದ. ಎಲ್ಲ ನಾಯಕರ ಭದ್ರತೆಯನ್ನು ಕೇಂದ್ರ ಸರ್ಕಾರ ವಹಸಿಕೊಳ್ಳಲಿದೆ. ಕಾಶ್ಮೀರದ ಜನಕ್ಕೆ, ದೇಶದ ಜನಕ್ಕೆ ಕಾಶ್ಮೀರ ನಮ್ಮದು ಎಂಬ ಭಾವನೆಯನ್ನು ಕೇಂದ್ರ ಸರ್ಕಾರ ಮೂಡಿಸುತ್ತಿದೆ ಎಂದರು.

  • ಆರ್ಟಿಕಲ್ 370, 35ಎ ರದ್ದು- ಮತ್ತೆ 8 ಸಾವಿರ ಸೈನಿಕರು ಕಾಶ್ಮೀರಕ್ಕೆ ಸ್ಥಳಾಂತರ

    ಆರ್ಟಿಕಲ್ 370, 35ಎ ರದ್ದು- ಮತ್ತೆ 8 ಸಾವಿರ ಸೈನಿಕರು ಕಾಶ್ಮೀರಕ್ಕೆ ಸ್ಥಳಾಂತರ

    ನವದೆಹಲಿ: ಕೇಂದ್ರ ಸರ್ಕಾರ ಆರ್ಟಿಕಲ್ 370 ಹಾಗೂ 35ಎ ರದ್ದುಪಡಿಸಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚುವರಿಯಾಗಿ 8 ಸಾವಿರ ಸೈನಿಕರನ್ನು ಸ್ಥಳಾಂತರಿಸಲಾಗಿದೆ.

    ದೇಶದ ವಿವಿಧ ಭಾಗಗಳಲ್ಲಿನ ಸುಮಾರು 8 ಸಾವಿರ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಸ್ಥಳಾಂತರಿಸಲಾಗಿದೆ. ಭಾರತೀಯ ವಾಯುಪಡೆಯ ಸಿ-17 ಸಾರಿಗೆ ವಿಮಾನಗಳ ಮೂಲಕ ಸೈನಿಕರನ್ನು ಶ್ರೀನಗರಕ್ಕೆ ಕರೆತರಲಾಗುತ್ತಿದೆ. ಕಳೆದ ವಾರದಲ್ಲಿ ಸುಮಾರು 35 ಸಾವಿರ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಸ್ಥಳಾಂತರಿಸಲಾಗಿತ್ತು. ಇದೀಗ ಹೆಚ್ಚುವರಿಯಾಗಿ 8 ಸಾವಿರ ಸೈನಿಕರನ್ನು ಸ್ಥಳಾಂತರಿಸಲಾಗಿದೆ.

    ಅಲ್ಲದೆ, ಸೈನಿಕರನ್ನು ಹಾಗೂ ವಾಯು ಪಡೆಯನ್ನು ಹೈ ಅಲರ್ಟ್ ನಲ್ಲಿ ಇಡಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿನ ವಿಶೇಷ ಸ್ಥಾನಮಾನ ತೆರವುಗೊಳಿಸಿರುವುದು ಭಾವನಾತ್ಮಕ ವಿಚಾರವಾಗಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹೆಚ್ಚು ಸೈನಿಕರನ್ನು ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವಾರ ಸರ್ಕಾರ ಅಮರನಾಥ ಯಾತ್ರೆಯನ್ನು ಹಠಾತ್ ರದ್ದುಗೊಳಿಸಿದ ನಂತರ ಸಾವಿರಾರು ಅಮರನಾಥ ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರನ್ನು ರಾಜ್ಯದಿಂದ ಹೊರ ಕಳುಹಿಸಿತ್ತು.

    ಆರ್ಟಿಕಲ್ 370 ಜಮ್ಮು ಮತ್ತು ಕಾಶ್ಮೀರಕ್ಕೆ ತನ್ನದೇ ಆದ ಸಂವಿಧಾನವಿತ್ತು. ಅಂದರೆ ರಕ್ಷಣೆ, ಸಂವಹನ ಮತ್ತು ವಿದೇಶಾಂಗ ವ್ಯವಹಾರಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕು ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಇತ್ತು. ಇದೀಗ ಸಂವಿಧಾನದ ಈ ಭಾಗವನ್ನು ತೆಗೆದು ಹಾಕಲಾಗಿದ್ದು, ಈ ಮೂಲಕ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಅಂತ್ಯವಾಗಿದೆ. 1947ರಲ್ಲಿ ನೆಹರು ಸರ್ಕಾರ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿತ್ತು.

    ಅಲ್ಲದೆ, ಸರ್ಕಾರ ಈ ಕುರಿತು ಸ್ಪಷ್ಟಪಡಿಸಿದ್ದು, ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದ್ದು, ಈ ಮೂಲಕ ಜಮ್ಮು ಮತ್ತು ಕಾಶ್ಮೀರ ರಾಜ್ಯವು ಪರಿಣಾಮಕಾರಿಯಾಗಿ ಅರೆ-ರಾಜ್ಯಗಳಾಗಿವೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರವು ತನ್ನದೇ ಆದ ಶಾಸಕಾಂಗವನ್ನು ಹೊಂದಿದ ಕೇಂದ್ರಾಡಳಿತ ಪ್ರದೇಶವಾಗಿದ್ದು, ದಹಲಿ ಮತ್ತು ಲಡಾಕ್ ನಂತೆ ಕಾರ್ಯನಿರ್ವಹಿಸಲಿದೆ. ರಾಜ್ಯದಲ್ಲಿ ಭಯೋತ್ಪಾದಕ ದಾಳಿಯ ಬೆದರಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಸೈನಿಕರನ್ನು ಸ್ಥಳಾಂತರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

    ಕಳೆದ ಮೂರು ದಿನಗಳಿಂದ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ನಡೆಸಲು ಅನೇಕ ಬಾರಿ ಪ್ರಯತ್ನ ಮಾಡಿದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಜು.29 ರಿಂದ ಜು.31ರ ವೆರೆಗೆ ಗಡಿ ನಿಯಂತ್ರಣ ರೇಖೆಯನ್ನು ದಾಟಲು ಉಗ್ರರು ನಾಲ್ಕರಿಂದ ಐದು ಬಾರಿ ಯಶಸ್ವಿಯಾಗಿದ್ದಾರೆ. ಫೆಬ್ರವರಿಯಲ್ಲಿ ಪುಲ್ವಾಮಾದಲ್ಲಿ ನಡೆದ ದಾಳಿ ರೀತಿಯಲ್ಲೇ ಅಮರನಾಥ ಯಾತ್ರಾರ್ಥಿಗಳ ಮೇಲೆ ದಾಳಿ ನಡೆಸಲು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಇದರಲ್ಲಿ ನಾಲ್ಕರಿಂದ ಐದು ಜನ ಭಾರತದೊಳಗೆ ನುಸುಳುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಅಮರನಾಥ ಯಾತ್ರಾರ್ಥಿಗಳಿಗೆ ಅವಕಾಶ ನೀಡಲಿಲ್ಲ ಎಂದು ಮೂಲಗಳು ತಿಳಿಸಿವೆ.

  • ಕೇಂದ್ರದ ಅಧೀನದಲ್ಲಿ ಜಮ್ಮು-ಕಾಶ್ಮೀರ

    ಕೇಂದ್ರದ ಅಧೀನದಲ್ಲಿ ಜಮ್ಮು-ಕಾಶ್ಮೀರ

    -ವಿಶೇಷ ಅಧಿಕಾರ, ಸ್ಥಾನಮಾನ ರದ್ದು
    -ಲಡಾಕ್ ಕೇಂದ್ರಾಡಳಿತ ಪ್ರದೇಶ

    ನವದೆಹಲಿ: ಕೇಂದ್ರ ಸರ್ಕಾರ ಇಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಜಮ್ಮು ಕಾಶ್ಮೀರ ಕೇಂದ್ರದ ಅಧೀನಕ್ಕೆ ಒಳಪಡಲಿದೆ. ಜಮ್ಮು-ಕಾಶ್ಮೀರ ವಿಧಾನಸಭೆಯನ್ನು ಒಳಗೊಂಡಿದ್ದರೂ ಕೇಂದ್ರದ ಅಧೀನದಲ್ಲಿ ಬರಲಿದೆ. ಲಡಾಕ್ ಕೇಂದ್ರಾಡಳಿತ ಪ್ರದೇಶವಾಗಲಿದೆ. ಜಮ್ಮು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ಮತ್ತು ಅಧಿಕಾರವನ್ನು ರದ್ದುಗೊಳಿಸಲಾಗಿದೆ.

    ರಾಜ್ಯಸಭೆಯಲ್ಲಿ ಕೇಂದ್ರಗೃಹ ಸಚಿವ ಅಮಿತ್ ಶಾ ಪರಿಚ್ಛೇಧ 370 ಮತ್ತು 35(ಎ) ರದ್ದುಗೊಳಿಸಲಾಗುವುದು ಎಂದು ಹೇಳುತ್ತಿದ್ದಂತೆ ವಿಪಕ್ಷ ನಾಯಕರು ವಿರೋಧ ವ್ಯಕ್ತಪಡಿಸಿ ಗಲಾಟೆ ಆರಂಭಿಸಿದರು. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ, ಅಧಿಕಾರ ರದ್ದುಗೊಳಿಸಿದ ಆದೇಶಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.

    ಒಂದು ವೇಳೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರವಾಗದಿದ್ದರೂ, ಸುಗ್ರೀವಾಜ್ಞೆ ಇರೋದ್ರಿಂದ ಜಮ್ಮು-ಕಾಶ್ಮೀರ ರಾಜ್ಯವಾಗಿರಲ್ಲ. ಮಸೂದೆಗೆ ರಾಷ್ಟ್ರಪತಿಗಳ ಅಂಕಿತವಾದ ಕ್ಷಣದಿಂದ ಪರಿಚ್ಛೇಧ 370(1) ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನಗಳು ಕೊನೆಗೊಳ್ಳಲಿವೆ. ಇಂದು ನಾನು ತೆಗೆದುಕೊಂಡು ಬಂದಿರುವ ನಾಲ್ಕು ಬಿಲ್ ಕಾಶ್ಮೀರಕ್ಕೆ ಸಂಬಂಧಿಸಿದೆ. ಪರಿಚ್ಛೇಧ 370 ಒಂದಲ್ಲ ಒಂದು ದಿನ ರದ್ದುಗೊಳಿಸಬೇಕಿತ್ತು. ಆದರೆ ಕೆಲವರ ರಾಜಕೀಯ ಹಿತಾಸಕ್ತಿಗಳಿಂದ ಸಾಧ್ಯವಾಗಿರಲಿಲ್ಲ. ಕೆಲವರು ವೋಟ್ ಬ್ಯಾಂಕ್ ಗಾಗಿ ರಾಜಕಾರಣ ಮಾಡುತ್ತಾರೆ. ನಮಗೆ ವೋಟ್ ಬ್ಯಾಂಕ್ ಬಗ್ಗೆ ಚಿಂತೆ ಇಲ್ಲ ಎಂದು ವಿಪಕ್ಷ ನಾಯಕರನ್ನು ಕುಟುಕಿದರು.

    ಪರಿಚ್ಛೇಧ 370 ರದ್ದಾದ ಬಳಿಕ ಜಮ್ಮು-ಕಾಶ್ಮೀರ ವಿಧಾನ ಮಂಡಲವನ್ನು ಒಳಗೊಂಡಿದ್ದರೂ, ಕೇಂದ್ರದ ಅಧೀನದಲ್ಲಿಯೇ ಇರಲಿದೆ. ಲಡಾಕ್ ಮಂತ್ರಿ ಮಂಡಲ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಲಿದೆ ಎಂದು ಅಮಿತ್ ಶಾ ವಿವರಿಸಿದರು.

    ಅಮಿತ್ ಶಾ ಮಾತು ಆರಂಭಿಸುತ್ತಿದ್ದಂತೆಯೇ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್ ವಿರೋಧ ವ್ಯಕ್ತಪಡಿಸಿದರು. ಮಸೂದೆಗೂ ಮಂಡನೆಗೂ ಮುನ್ನ ಚರ್ಚೆ ನಡೆಯಬೇಕು. ಕಾಶ್ಮೀರದಲ್ಲಿ ಯುದ್ಧದ ಸನ್ನಿವೇಶ ನಿರ್ಮಾಣವಾಗಿದ್ದು, ಜನತೆ ಭಯಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳನ್ನು ಸೇರಿದಂತೆ ಸ್ಥಳೀಯ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಮುಂಜಾಗ್ರತಾ ಕ್ರಮವಾಗಿ ಜಮ್ಮು-ಕಾಶ್ಮೀರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು. ಸಾಮಾನ್ಯ ದಿನಕ್ಕಿಂತ ಕಾಶ್ಮೀರದಲ್ಲಿ ಹೆಚ್ಚಿನ ಸೈನಿಕರನ್ನು ನಿಯೋಜನೆ ಮಾಡಲಾಗಿತ್ತು. ಇಂದಿನ ಕಲಾಪಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಸುಮಾರು 40 ನಿಮಿಷಗಳ ಸಂಪುಟ ಸಭೆ ನಡೆಸಲಾಯ್ತು. ಜಮ್ಮು ಮತ್ತು ಕಾಶ್ಮೀರದ ಕುರಿತು ತೆಗೆದುಕೊಳ್ಳುತ್ತಿರುವ ನಿರ್ಣಯದ ಬಗ್ಗೆ ಮೋದಿಯವರು ತಮ್ಮ ಮಿತ್ರಪಕ್ಷಗಳ ನಾಯಕರೊಂದಿಗೆ ಚರ್ಚೆ ನಡೆಸಿದ್ದರು.

  • ಪರಿಚ್ಛೇಧ 370, 35ಎ ರದ್ದು ಕಾನೂನುಬಾಹಿರ, ಅಸಂವಿಧಾನಿಕ ನಡೆ: ಮೆಹಬೂಬಾ ಮುಫ್ತಿ

    ಪರಿಚ್ಛೇಧ 370, 35ಎ ರದ್ದು ಕಾನೂನುಬಾಹಿರ, ಅಸಂವಿಧಾನಿಕ ನಡೆ: ಮೆಹಬೂಬಾ ಮುಫ್ತಿ

    ಶ್ರೀನಗರ: ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಿಸಿದ್ದು, ಪರಿಚ್ಛೇಧ 370 ಮತ್ತು 35(ಎ) ಕೂಡ ರದ್ದು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರು ಟ್ವೀಟ್ ಮಾಡಿ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

    ರಾಜ್ಯಸಭೆಯಲ್ಲಿ ಪರಿಚ್ಛೇಧ 370 ಮತ್ತು 35(ಎ) ರದ್ದುಗೊಳಿಸಿ, ಇನ್ನು ಮುಂದೆ ಜಮ್ಮು-ಕಾಶ್ಮೀರ ಕೇಂದ್ರದ ಅಧೀನಕ್ಕೆ ಒಳಪಡಲಿದ್ದು, ಲಡಾಕ್ ಕೇಂದ್ರಾಡಳಿಯ ಪ್ರದೇಶವಾಗಲಿದೆ. ಈ ಬಗ್ಗೆ ಮೆಹಬೂಬಾ ಮುಫ್ತಿ ಅವರು ಟ್ವೀಟ್ ಮಾಡಿ, ಕೇಂದ್ರದ ಈ ನಿರ್ಧಾರ ಸರಿಯಲ್ಲ. ಇಂದು ಭಾರತೀಯ ಪ್ರಜಾಪ್ರಭುತ್ವಕ್ಕೆ ಕರಾಳ ದಿನವಾಗಿದೆ. ಈ ನಿರ್ಧಾರ ಕಾನೂನುಬಾಹಿರ ಮತ್ತು ಅಸಂವಿಧಾನಿಕ ಎಂದು ಹರಿಹಾಯ್ದಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಇಂದು ಭಾರತ ಪ್ರಜಾಪ್ರಭುತ್ವದ ಕರಾಳ ದಿನವಾಗಿದೆ. 1947ರಲ್ಲಿ 2 ರಾಷ್ಟ್ರಗಳ ಸಿದ್ಧಾಂತವನ್ನು ತಿರಸ್ಕರಿಸಿ, ಜಮ್ಮು-ಕಾಶ್ಮೀರ ನಾಯಕತ್ವ ಭಾರತದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ನಿರ್ಧಾರವನ್ನು ಹಿಮ್ಮೆಟ್ಟಿತ್ತು. ಆರ್ಟಿಕಲ್ 370 ಅನ್ನು ಸ್ಕ್ರ್ಯಾಪ್ ಮಾಡಿರುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರ ಕಾನೂನುಬಾಹಿರ ಮತ್ತು ಅಸಂವಿಧಾನಿಕವಾಗಿದೆ. ಇದು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತವನ್ನು ಆಕ್ಯೂಪೇಷನಲ್ ಫೋರ್ಸ್ ಆಗಿ ಮಾಡುತ್ತದೆ.

    ಈ ನಿರ್ಣಯ ದುರಂತ ಪರಿಣಾಮಗಳನ್ನು ಉಂಟುಮಾಡುತ್ತದೆ. ಕೇಂದ್ರ ಸರ್ಕಾರದ ಉದ್ದೇಶಗಳು ಸ್ಪಷ್ಟವಾಗಿದ್ದು, ಜನರನ್ನು ಭಯಭೀತಿಗೊಳಿಸುವ ಮೂಲಕ ಜಮ್ಮು- ಕಾಶ್ಮೀರ ಪ್ರದೇಶವನ್ನು ಪಡೆಯಲು ಬಯಸಿದ್ದಾರೆ. ಭಾರತ ಕಾಶ್ಮೀರಕ್ಕೆ ಕೊಟ್ಟ ತನ್ನ ಭರವಸೆಗಳನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    ಅಮಿತ್ ಶಾ ಮಾತು ಆರಂಭಿಸುತ್ತಿದ್ದಂತೆ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್ ವಿರೋಧ ವ್ಯಕ್ತಪಡಿಸಿದರು. ಮಸೂದೆಗೂ ಮಂಡನೆಗೂ ಮುನ್ನ ಚರ್ಚೆ ನಡೆಯಬೇಕು. ಕಾಶ್ಮೀರದಲ್ಲಿ ಯುದ್ಧದ ಸನ್ನಿವೇಶ ನಿರ್ಮಾಣವಾಗಿದ್ದು, ಜನತೆ ಭಯಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಸ್ಥಳೀಯ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ತಡರಾತ್ರಿ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ, ಸಜ್ಜದ್ ಲೋನ್ ಅವರನ್ನು ವಶಕ್ಕೆ ಪಡೆದು ಗೃಹಬಂಧನದಲ್ಲಿ ಇರಿಸಲಾಗಿದೆ. ರಾಜ್ಯದಲ್ಲಿ ಬೃಹತ್ ಭದ್ರತೆಯನ್ನು ನಿರ್ಮಿಸುವ ನಿಟ್ಟಿನಲ್ಲಿ ಈ ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇಡಲಾಗಿದೆ.

    ತಡರಾತ್ರಿಯಿಂದ ಶ್ರೀನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ಗುಂಪು ಗುಂಪಾಗಿ ರಸ್ತೆಗಳಲ್ಲಿ ನಿಲ್ಲುವುದನ್ನು ನಿಷೇಧಿಸಲಾಗಿದೆ. ಅಲ್ಲದೆ ಕೆಲವು ಪ್ರದೇಶಗಳಲ್ಲಿ ಇಂಟರ್‍ನೆಟ್ ಸೇವೆ, ಮೊಬೈಲ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಈಗಾಗಲೇ ಜಮ್ಮು-ಕಾಶ್ಮೀರಕ್ಕೆ ತೆರಳಿದ್ದ ಪ್ರವಾಸಿಗರಿಗೆ ಹಿಂದಿರುಗುವಂತೆ ಸೂಚಿಸಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    ಮೆಹಬೂಬಾ ಮುಫ್ತಿಯವರು ಭಾನುವಾರದಂದು ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಲು ಖಾಸಗಿ ಹೋಟೆಲಿನಲ್ಲಿ ಸರ್ವಪಕ್ಷ ಸಭೆಯನ್ನು ಕರೆದಿದ್ದರು. ಆದರೆ ಯಾವುದೇ ಸಭೆ ನಡೆಸುವಂತಿಲ್ಲ ಎಂದು ಪೊಲೀಸರು ಹೋಟೆಲ್ ಬುಕ್ಕಿಂಗ್ ರದ್ದುಗೊಳಿಸಿದ್ದರು. ಹೀಗಾಗಿ ಮುಫ್ತಿ ಅವರು ತಮ್ಮ ಮನೆಯಲ್ಲಿ ಸಭೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ಮುಜಾಗ್ರತಾ ಕ್ರಮವಾಗಿ ಪೊಲೀಸರು ಅವರನ್ನು ಗೃಹಬಂಧನದಲ್ಲಿ ಇರಿಸಿದ್ದಾರೆ.

  • ಕಾಶ್ಮೀರದ ವಿಶೇಷ ಸ್ಥಾನಮಾನ, ಅಧಿಕಾರ ರದ್ದು-ರಾಜ್ಯಸಭೆಯಲ್ಲಿ ಅಮಿತ್ ಶಾ ಘೋಷಣೆ

    ಕಾಶ್ಮೀರದ ವಿಶೇಷ ಸ್ಥಾನಮಾನ, ಅಧಿಕಾರ ರದ್ದು-ರಾಜ್ಯಸಭೆಯಲ್ಲಿ ಅಮಿತ್ ಶಾ ಘೋಷಣೆ

    ನವದೆಹಲಿ: ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ ಮಾಡಿದರು. ಪರಿಚ್ಛೇಧ 370 ಮತ್ತು 35(ಎ) ಕೂಡ ಸಹ ರದ್ದು ಮಾಡಲಾಯ್ತು. ಆಡಳಿತಾತ್ಮಕ ದೃಷ್ಟಿಯಿಂದ ಜಮ್ಮು, ಕಾಶ್ಮೀರ ಮತ್ತು ಲಡಾಕ್ ಎಂದು ಮೂರು ವಿಭಾಗಗಳಾಗಿ ವಿಂಗಡನೆ ಮಾಡುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲಾಯ್ತು.

    ಅಮಿತ್ ಶಾ ಮಾತು ಆರಂಭಿಸುತ್ತಿದ್ದಂತೆ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್ ವಿರೋಧ ವ್ಯಕ್ತಪಡಿಸಿದರು. ಮಸೂದೆಗೂ ಮಂಡನೆಗೂ ಮುನ್ನ ಚರ್ಚೆ ನಡೆಯಬೇಕು. ಕಾಶ್ಮೀರದಲ್ಲಿ ಯುದ್ಧದ ಸನ್ನಿವೇಶ ನಿರ್ಮಾಣವಾಗಿದ್ದು, ಜನತೆ ಭಯಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳನ್ನು ಸೇರಿದಂತೆ ಸ್ಥಳೀಯ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಮುಂಜಾಗ್ರತಾ ಕ್ರಮವಾಗಿ ಜಮ್ಮು-ಕಾಶ್ಮೀರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು. ಸಾಮಾನ್ಯ ದಿನಕ್ಕಿಂತ ಕಾಶ್ಮೀರದಲ್ಲಿ ಹೆಚ್ಚಿನ ಸೈನಿಕರನ್ನು ನಿಯೋಜನೆ ಮಾಡಲಾಗಿತ್ತು. ಇಂದಿನ ಕಲಾಪಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಸುಮಾರು 40 ನಿಮಿಷಗಳ ಸಂಪುಟ ಸಭೆ ನಡೆಸಲಾಯ್ತು. ಜಮ್ಮು ಮತ್ತು ಕಾಶ್ಮೀರದ ಕುರಿತು ತೆಗೆದುಕೊಳ್ಳುತ್ತಿರುವ ನಿರ್ಣಯದ ಬಗ್ಗೆ ಮೋದಿಯವರು ತಮ್ಮ ಮಿತ್ರಪಕ್ಷಗಳ ನಾಯಕರೊಂದಿಗೆ ಚರ್ಚೆ ನಡೆಸಿದರು.

  • ಎಲ್‍ಓಸಿ ಬಳಿ ಬಿದ್ದ ಹೆಣ ನಮ್ಮ ಸೇನೆಯದ್ದಲ್ಲ – ಪಾಕಿಸ್ತಾನ

    ಎಲ್‍ಓಸಿ ಬಳಿ ಬಿದ್ದ ಹೆಣ ನಮ್ಮ ಸೇನೆಯದ್ದಲ್ಲ – ಪಾಕಿಸ್ತಾನ

    ಶ್ರೀನಗರ: ಗಡಿ ನಿಯಂತ್ರಣ ರೇಖೆಯ ಬಳಿ ಮೃತಪಟ್ಟವರು ನಮ್ಮ ಸೈನಿಕರಲ್ಲ ಎಂದು ಪಾಕಿಸ್ತಾನ ತಿಳಿಸಿದೆ.

    ಭಾರತೀಯ ಸೇನೆಯಿಂದ ಹತ್ಯೆಗೀಡಾದವರು ಬಾರ್ಡರ್ ಆಕ್ಷನ್ ಟೀಮ್ (ಬಿಎಟಿ) ಯೋಧರಲ್ಲ. ಪಾಕ್ ಸೇನೆಯ ಯಾವೊಬ್ಬ ಸೈನಿಕ ಗಡಿಯನ್ನು ದಾಟಿ ಹೋಗಿಲ್ಲ. ಕಾಶ್ಮೀರ ವಿಚಾರವನ್ನು ಪ್ರಪಂಚದ ಮುಂದೆ ಬದಲಾಯಿಸಲು ಭಾರತ ಹೂಡಿರುವ ಷಡ್ಯಂತ್ರ ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದೆ.

    ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾರತದ ದಾಳಿಯನ್ನು ಖಂಡಿಸಿ, ಗಡಿನಿಯಂತ್ರಣ ರೇಖೆ ಬಳಿ ಕ್ಲಸ್ಟರ್ ಬಾಂಬ್ ಎಸೆದು ಭಾರತ ಮುಗ್ಧ ನಾಗರಿಕರ ಮೇಲೆ ದಾಳಿ ನಡೆಸುತ್ತಿದೆ. ಶಾಂತಿ ಮತ್ತು ಭದ್ರತೆಗೆ ಭಾರತದಿಂದ ತೊಂದರೆ ಆಗುತ್ತಿದ್ದು ಕೂಡಲೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಈ ಬಗ್ಗೆ ಗಮನ ನೀಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದ ಕೇರನ್ ಸೆಕ್ಟರ್ ನಲ್ಲಿ ಭಾರತದ ಪಾಕಿಸ್ತಾನದ ಸೇನೆಯ ಸಹಾಯದಿಂದ ಉಗ್ರರು ಭಾರತದ ಗಡಿ ನುಸುಳಲು ಪ್ರಯತ್ನ ನಡೆಸುತ್ತಿದ್ದರು. ಪಾಕಿಸ್ತಾನದ ದಾಳಿಯನ್ನು ವಿಫಲಗೊಳಿಸಿದ ಭಾರತೀಯ ಸೇನೆ ಪ್ರತಿದಾಳಿ ನಡೆಸಿತ್ತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ 5 ರಿಂದ7 ಸೈನಿಕರು ಮತ್ತು ಕೆಲ ಉಗ್ರರು ಸಾವನ್ನಪ್ಪಿದ್ದರು. ದಾಳಿಯಲ್ಲಿ ಬಲಿಯಾದ ಸೈನಿಕರ ಶವ ಭಾರತ ಗಡಿ ಒಳಗಡೆ ಬಿದ್ದಿತ್ತು.

    ಉಪಗ್ರಹದ ಮೂಲಕ ಗಡಿ ಪ್ರದೇಶದ ಚಿತ್ರವನ್ನು ಬಿಡುಗಡೆಗೊಳಿಸಿದ ಸೇನೆ, ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವ ಸೈನಿಕರು ಮತ್ತು ಉಗ್ರರ ಮೃತದೇಹಗಳು ಎಲ್‍ಓಸಿಯಲ್ಲಿವೆ. ಶ್ವೇತ ಬಾವುಟ ತೋರಿಸಿ ನಿಮ್ಮ ಶವಗಳನ್ನು ತೆಗೆದುಕೊಂಡು ಹೋಗಿ ಅಂತಿಮ ಕ್ರಿಯೆಗಳನ್ನು ನಡೆಸಬಹುದು ಎಂದು ತಿಳಿಸಿತ್ತು.

    ಈ ಕುರಿತು ಪ್ರತಿಕ್ರಿಯಿಸಿರುವ ರಕ್ಷಣಾ ವಕ್ತಾರ ರಾಜೇಶ್ ಕಾಲಿಯಾ, ಕುಪ್ವಾರಾ ಜಿಲ್ಲೆಯ ಕೇರನ್ ಸೆಕ್ಟರ್ ಬಳಿಯ ಫಾರ್ವರ್ಡ್ ಪೋಸ್ಟ್ ಮೇಲೆ ಬ್ಯಾಟ್ ತಂಡ ನಡೆಸಿದ ದಾಳಿಯನ್ನು ಭಾರತೀಯ ಸೈನಿಕರು ವಿಫಲಗೊಳಿಸಿದ್ದಾರೆ. ಸಾವನ್ನಪ್ಪಿರುವವರ ಪೈಕಿ ನಾಲ್ವರು ಪಾಕಿಸ್ತಾನ ಸೇನೆಯ ಸ್ಪೆಷಲ್ ಸರ್ವಿಸ್ ಗ್ರೂಪ್ ಕಮಾಂಡೋಗಳಿರುವ ಶಂಕೆಗಳು ವ್ಯಕ್ತವಾಗಿವೆ. ಭಾರತದ ಶಿಬಿರಗಳತ್ತ ಸಮೀಪಿಸುತ್ತಿದ್ದಂತೆ ಪಾಕಿಸ್ತಾನ ಗುಂಡಿನ ದಾಳಿಯನ್ನು ತೀವ್ರಗೊಳಿಸಿತ್ತು. ದಾಳಿಯ ಪ್ರತಿಯಾಗಿ ಭಾರತ ಸಹ ಪ್ರತಿದಾಳಿ ನಡೆಸಿತ್ತು. ಆದ್ರೆ ದಾಳಿಯಲ್ಲಿ ಬಲಿಯಾಗಿರುವ ಉಗ್ರರ ಶವಗಳನ್ನು ವಶಕ್ಕೆ ಪಡೆದುಕೊಂಡಿಲ್ಲ. ಗಡಿ ಭಾಗದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಪಾಕಿಸ್ತಾನ ಎಲ್‍ಓಸಿಯಲ್ಲಿ ಸಾಮಾನ್ಯ ದಿನಕ್ಕಿಂತ ಹೆಚ್ಚಿನ ಸೈನಿಕರನ್ನು ನೇಮಕಗೊಳಿಸಿದೆ ಎಂದು ತಿಳಿಸಿದ್ದರು.

  • ಕಾಶ್ಮೀರ ಕಣಿವೆ ತೊರೆಯುವಂತೆ ಇರ್ಫಾನ್ ಪಠಾಣ್ ಸೇರಿ 100 ಮಂದಿ ಕ್ರಿಕೆಟಿಗರಿಗೆ ಸೂಚನೆ

    ಕಾಶ್ಮೀರ ಕಣಿವೆ ತೊರೆಯುವಂತೆ ಇರ್ಫಾನ್ ಪಠಾಣ್ ಸೇರಿ 100 ಮಂದಿ ಕ್ರಿಕೆಟಿಗರಿಗೆ ಸೂಚನೆ

    ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ತಕ್ಷಣವೇ ಕಾಶ್ಮೀರವನ್ನು ಬಿಟ್ಟು ತೆರಳುವಂತೆ ಟೀಂ ಇಂಡಿಯಾ ಕ್ರಿಕೆಟರ್ ಇರ್ಫಾನ್ ಪಠಾಣ್ ಸೇರಿದಂತೆ 100 ಮಂದಿ ಕ್ರಿಕೆಟಿಗರಿಗೆ ಭಾರತೀಯ ಸೇನೆಯು ಸೂಚನೆ ನೀಡಿದೆ.

    ಜಮ್ಮು ಮತ್ತು ಕಾಶ್ಮೀರ ರಣಜಿ ತಂಡದ ಆಟಗಾರ ಹಾಗೂ ಮೆಂಟರ್ ಆಗಿ ಇರ್ಫಾನ್ ಪಠಾಣ್ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಕಾಶ್ಮೀರದಲ್ಲಿ ಉಳಿದುಕೊಂಡಿರುವ ಅವರಿಗೆ ಹಾಗೂ ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಯ (ಜೆಕೆಸಿಎ) ಕೋಚ್, ಸಹಾಯಕ ಸಿಬ್ಬಂದಿ, ಆಟಗಾರರಿಗೂ ಕಾಶ್ಮೀರ ತೊರೆದು ತಕ್ಷಣವೇ ತಮ್ಮ ತಮ್ಮ ಮನೆಗಳಿಗೆ ತೆರಳುವಂತೆ ಸೇನೆಯು ಸೂಚಿಸಿದೆ. ಇದನ್ನೂ ಓದಿ: ಶ್ವೇತ ಬಾವುಟ ತೋರಿಸಿ, ನಿಮ್ಮ ಶವಗಳನ್ನು ತೆಗೆದುಕೊಂಡು ಹೋಗಿ-ಪಾಕಿಸ್ತಾನಕ್ಕೆ ಭಾರತದ ಸಂದೇಶ

    ಜೆಕೆಸಿಎ ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯ, ಅಭ್ಯಾಸ ಕೈಗೊಳ್ಳದಂತೆ ಸೂಚಿಸಲಾಗಿದೆ. ಇಷ್ಟೇ ಅಲ್ಲದೆ ಕ್ರೀಡಾಂಗಣದಲ್ಲೂ ಯಾರೂ ಉಳಿದುಕೊಳ್ಳಬಾರದು ಎಂದು ಖಡಕ್ ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಈಗಾಗಲೇ ಇರ್ಫಾನ್ ಪಠಾಣ್ ಹಾಗೂ ಜೆಕೆಸಿಎಗೆ ಸೇನೆಯು ಸಂದೇಶ ರವಾನಿಸಿದೆ ಎಂದು ವರದಿಯಾಗಿದೆ.

    ಜಮ್ಮು ಮತ್ತು ಕಾಶ್ಮೀರ ಕಣಿವೆ ಭಾಗದಲ್ಲಿ ಉಗ್ರರು ತಮ್ಮ ಉಪಟಳ ಮುಂದುವರಿಸಿದ್ದು, ಅವರನ್ನು ಮಟ್ಟಹಾಕಲು ಭಾರತೀಯ ಸೇನೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಮರನಾಥ ಯಾತ್ರಿಗಳನ್ನು ಹಾಗೂ ಕಣಿವೆ ರಾಜ್ಯದ ಪ್ರವಾಸಿಗರನ್ನು ವಾಪಸ್ ತೆರಳುವಂತೆ ಶುಕ್ರವಾರವೇ ಸೂಚನೆ ನೀಡಲಾಗಿತ್ತು. ಹೀಗಾಗಿ ಈಗಾಗಲೇ 6,200 ಕ್ಕೂ ಅಧಿಕ ಪ್ರವಾಸಿಗರು ಕಾಶ್ಮೀರವನ್ನು ತೊರೆದು ತಮ್ಮ, ತಮ್ಮ ಮನೆಗಳಿಗೆ ತೆರಳಿದ್ದಾರೆ.

  • ಕಾಶ್ಮೀರದಲ್ಲಿ ಏನಾಗ್ತಿದೆ, ಯಾರು ಏನು ಹೇಳ್ತಿಲ್ಲ: ಮೆಹಬೂಬಾ ಮುಫ್ತಿ

    ಕಾಶ್ಮೀರದಲ್ಲಿ ಏನಾಗ್ತಿದೆ, ಯಾರು ಏನು ಹೇಳ್ತಿಲ್ಲ: ಮೆಹಬೂಬಾ ಮುಫ್ತಿ

    ಶ್ರೀನಗರ: ಕಳೆದ ಕೆಲವು ದಿನಗಳಿಂದ ಕಾಶ್ಮೀರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಾಶ್ಮೀರದಲ್ಲಿ ಏನಾಗ್ತಿದೆ ಎಂಬುದರ ಬಗ್ಗೆ ಯಾರು ಸಹ ಮಾಹಿತಿ ನೀಡುತ್ತಿಲ್ಲ ಎಂದು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಆತಂಕ ವ್ಯಕ್ತಪಡಿಸಿದ್ದಾರೆ.

    ಇಂದು ಖಾಸಗಿ ಹೋಟೆಲ್ ನಲ್ಲಿ ರಾಜಕೀಯ ನಾಯಕರ ಸಭೆಯನ್ನು ಕರೆಯಲಾಗಿತ್ತು. ಆದ್ರೆ ಪೊಲೀಸರು ನಮ್ಮ ಹೋಟೆಲ್ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಸಿದ್ದಾರೆ. ಇತ್ತ ಪ್ರಧಾನಿ ನರೇಂದ್ರ ಮೋದಿ ಸಹ ಸೋಮವಾರ ದಿಢೀರ್ ಎಂದು ಸಂಪುಟ ಸಭೆಯನ್ನು ಕರೆದಿದ್ದಾರೆ. ಸಾಮಾನ್ಯವಾಗಿ ಮೋದಿ ಅವರ ಮಂತ್ರಿಮಂಡಲದ ಸಭೆ ಬುಧವಾರ ನಡೆಯುತ್ತದೆ ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ.

    ಜಮ್ಮು-ಕಾಶ್ಮೀರದ ಕೆಲ ಭಾಗಗಳಿಗೆ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಿಯೋಜನೆ ಮಾಡಲಾಗಿದೆ. ಇತ್ತ ಕಳೆದ ಕೆಲ ದಿನಗಳಿಂದ ಗಡಿ ಪ್ರದೇಶದಲ್ಲಿ ನಿರಂತರವಾಗಿ ಗುಂಡಿನ ಚಕಮಕಿ ನಡೆಯುತ್ತಿದೆ. ಇತ್ತ ಪರಿಚ್ಛೇಧ 370ರ ಬಗ್ಗೆ ಕೆಲ ಸುದ್ದಿಗಳು ಹರಿದಾಡುತ್ತಿವೆ. ಜಮ್ಮು, ಕಾಶ್ಮೀರ ಮತ್ತು ಲಡಾಕ್ ಎಂದು ರಾಜ್ಯವನ್ನು ಮೂರು ಭಾಗಗಳಾಗಿ ವಿಂಗಡನೆ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಜನತೆ ಭಯಭೀತರಾಗಿದ್ದಾರೆ ಎಂದು ಮಾಜಿ ಸಿಎಂ ತಿಳಿಸಿದರು.

    ಪರಿಚ್ಛೇಧ 370 ಅಥವಾ 35ಎ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾದ್ರೆ ಪರಿಣಾಮ ವ್ಯತಿರಿಕ್ತವಾಗಲಿದೆ ಎಂಬುದನ್ನು ದೇಶದ ಜನತೆಗೆ ತಿಳಿಸಲು ಇಚ್ಛಿಸುತ್ತೇನೆ. ಈ ಸಂಬಂಧ ಯಾವುದೇ ಮಸೂದೆಯನ್ನು ಅಂಗೀಕರಿಸಕೂಡದು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಇಂದು ಹೋಟೆಲ್ ನಲ್ಲಿ ಕರೆಯಲಾಗಿದ್ದ ಸಭೆ ಸಂಜೆ 6 ಗಂಟೆಗೆ ನನ್ನ ನಿವಾಸದಲ್ಲಿ ನಡೆಯಲಿದೆ ಎಂದರು.

    ಕಾಶ್ಮೀರದಲ್ಲಿ ದಿಢೀರ್ ಬೆಳವಣಿಗೆ ಹಿನ್ನೆಲೆಯಲ್ಲಿ ಜನರು ಪೆಟ್ರೋಲ್ ಬಂಕ್, ಎಟಿಎಂ ಮುಂದೆ ಸಾಲಿನಲ್ಲಿ ನಿಂತಿದ್ದಾರೆ. ಇತ್ತ ಜನರು ದಿನನಿತ್ಯದ ಅವಶ್ಯಕ ಸಾಮಾಗ್ರಿಗಳನ್ನು ಹೆಚ್ಚು ಹೆಚ್ಚು ಖರೀದಿಸುತ್ತಿದ್ದಾರೆ. ಉತ್ತರ ಕಾಶ್ಮೀರದ ಹಲವು ಭಾಗಗಳಲ್ಲಿ ಈ ಪರಿಸ್ಥಿತಿಯ ನಿರ್ಮಾಣವಾಗಿದೆ.

    https://twitter.com/sageelani/status/1157651337498320896

  • ಶ್ವೇತ ಬಾವುಟ ತೋರಿಸಿ, ನಿಮ್ಮ ಶವಗಳನ್ನು ತೆಗೆದುಕೊಂಡು ಹೋಗಿ-ಪಾಕಿಸ್ತಾನಕ್ಕೆ ಭಾರತದ ಸಂದೇಶ

    ಶ್ವೇತ ಬಾವುಟ ತೋರಿಸಿ, ನಿಮ್ಮ ಶವಗಳನ್ನು ತೆಗೆದುಕೊಂಡು ಹೋಗಿ-ಪಾಕಿಸ್ತಾನಕ್ಕೆ ಭಾರತದ ಸಂದೇಶ

    ಶ್ರೀನಗರ: ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವ ಉಗ್ರರ ಶವಗಳು ಎಲ್‍ಓಸಿಯಲ್ಲಿ ಬಿದ್ದಿವೆ. ಎಲ್‍ಓಸಿಯಲ್ಲಿ ಶ್ವೇತ ಬಾವುಟ ತೋರಿಸಿ ನಿಮ್ಮ ಶವಗಳನ್ನು ತೆಗೆದುಕೊಂಡು ಹೋಗುವಂತೆ ಪಾಕಿಸ್ತಾನಕ್ಕೆ ಭಾರತ ಸಂದೇಶವೊಂದನ್ನು ರವಾನಿಸಿದೆ. ಭಾರತದ ಸಂದೇಶಕ್ಕೆ ಪಾಕಿಸ್ತಾನ ಪ್ರತಿಕ್ರಿಯೆಯನ್ನು ನೀಡಿಲ್ಲ.

    ಜಮ್ಮು ಮತ್ತು ಕಾಶ್ಮೀರದ ಕೇರನ್ ಸೆಕ್ಟರ್ ನಲ್ಲಿಯ ಫಾರ್ವರ್ಡ್ ಪೋಸ್ಟ್ ಬಳಿ ಪಾಕಿಸ್ತಾನದ ಸೇನೆಯ ಬ್ಯಾಟ್ BAT (Border Action Team) ತಂಡ ವಿಫಲ ದಾಳಿಯನ್ನು ನಡೆಸಿತ್ತು. ಪಾಕಿಸ್ತಾನದ ದಾಳಿಯನ್ನು ವಿಫಲಗೊಳಿಸಿದ ಭಾರತೀಯ ಸೇನೆ ಪ್ರತಿದಾಳಿ ನಡೆಸಿತ್ತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ 5ರಿಂದ7 ಸೈನಿಕರು ಮತ್ತು ಕೆಲ ಉಗ್ರರು ಸಾವನ್ನಪ್ಪಿದ್ದರು.

    ದಾಳಿಯಲ್ಲಿ ಸಾವನ್ನಪ್ಪಿರುವ ಸೈನಿಕರು ಮತ್ತು ಉಗ್ರರ ಮೃತದೇಹಗಳು ಎಲ್‍ಓಸಿಯಲ್ಲಿವೆ. ಶ್ವೇತ ಬಾವುಟ ತೋರಿಸಿ ನಿಮ್ಮ ಶವಗಳನ್ನು ತೆಗೆದುಕೊಂಡು ಹೋಗಿ ಅಂತಿಮ ಕ್ರಿಯೆಗಳನ್ನು ನಡೆಸಬಹುದು ಎಂದು ಭಾರತೀಯ ಸೇನೆ ಹೇಳಿದೆ. ಗಡಿ ಪ್ರದೇಶದಲ್ಲಿ ಶವಗಳಿರುವ ಸ್ಯಾಟ್‍ಲೈಟ್ ಫೋಟೋಗಳು ಬಿಡುಗಡೆಯಾಗಿವೆ. ಕಾಶ್ಮೀರದಲ್ಲಿ ಶಾಂತಿ ಕದಡಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ. ಜೈಶ್ ಸಂಘಟನೆಯ ಉಗ್ರರನ್ನು ಭಾರತದೊಳಗೆ ನುಸುಳಿಸುವ ಮೂಲಕ ಭಯೋತ್ಪಾದಕ ಚಟುವಟಿಕೆಗೆ ಪ್ರೋತ್ಸಾಹಿಸುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪಾಕ್ ವಿರುದ್ಧ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ – ಉಗ್ರರ ನೆಲೆ ಮೇಲೆ ಬಾಂಬ್ ದಾಳಿ

    ಈ ಕುರಿತು ಪ್ರತಿಕ್ರಿಯಿಸಿರುವವ ರಕ್ಷಣಾ ವಕ್ತಾರ ರಾಜೇಶ್ ಕಾಲಿಯಾ, ಕುಪ್ವಾರ  ಜಿಲ್ಲೆಯ ಕೇರನ್ ಸೆಕ್ಟರ್ ಬಳಿಯ ಫಾರ್ವರ್ಡ್ ಪೋಸ್ಟ್ ಮೇಲೆ ಬ್ಯಾಟ್ ತಂಡ ನಡೆಸಿದ ದಾಳಿಯನ್ನು ಭಾರತೀಯ ಸೈನಿಕರು ವಿಫಲಗೊಳಿಸಿದ್ದಾರೆ. ಸಾವನ್ನಪ್ಪಿರುವವರ ಪೈಕಿ ನಾಲ್ವರು ಪಾಕಿಸ್ತಾನ ಸೇನೆಯ ಸ್ಪೆಷಲ್ ಸರ್ವಿಸ್ ಗ್ರೂಪ್ ಕಮಾಂಡೋಗಳಿರುವ ಶಂಕೆಗಳು ವ್ಯಕ್ತವಾಗಿವೆ. ಭಾರತದ ಶಿಬಿರಗಳತ್ತ ಸಮೀಪಿಸುತ್ತಿದ್ದಂತೆ ಪಾಕಿಸ್ತಾನ ಗುಂಡಿನ ದಾಳಿಯನ್ನು ತೀವ್ರಗೊಳಿಸಿತ್ತು. ದಾಳಿಯ ಪ್ರತಿಯಾಗಿ ಭಾರತ ಸಹ ಪ್ರತಿದಾಳಿ ನಡೆಸಿತ್ತು. ಆದ್ರೆ ದಾಳಿಯಲ್ಲಿ ಬಲಿಯಾಗಿರುವ ಉಗ್ರರ ಶವಗಳನ್ನು ವಶಕ್ಕೆ ಪಡೆದುಕೊಂಡಿಲ್ಲ. ಗಡಿ ಭಾಗದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಪಾಕಿಸ್ತಾನ ಎಲ್‍ಓಸಿಯಲ್ಲಿ ಸಾಮಾನ್ಯ ದಿನಕ್ಕಿಂತ ಹೆಚ್ಚಿನ ಸೈನಿಕರನ್ನು ನೇಮಕಗೊಳಿಸಿದೆ ಎಂದು ತಿಳಿಸಿದ್ದಾರೆ.

  • ಕಾಶ್ಮೀರದ ಕಣಿವೆಯಲ್ಲಿ ಭಾರತೀಯ ಸೇನೆಯಿಂದ ಉಗ್ರನ ಹತ್ಯೆ

    ಕಾಶ್ಮೀರದ ಕಣಿವೆಯಲ್ಲಿ ಭಾರತೀಯ ಸೇನೆಯಿಂದ ಉಗ್ರನ ಹತ್ಯೆ

    – ಉಗ್ರರನ್ನು ಸುತ್ತುವರಿದ ಯೋಧರು

    ಶ್ರೀನಗರ: ಕಾಶ್ಮೀರದ ಕಣಿವೆಯಲ್ಲಿ ಉಗ್ರರು ತಮ್ಮ ಉಪಟಳ ಮುಂದುವರಿಸಿದ್ದು, ಬೆಳ್ಳಂಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ. ಸದ್ಯ ಯೋಧರು ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ.

    ಬಾರಾಮುಲ್ಲಾ ಜಿಲ್ಲೆಯ ಸೊಫೋರ್ ಪ್ರದೇಶದಲ್ಲಿ ಭಾರತೀಯ ಯೋಧರು ಹಾಗೂ ಉಗ್ರರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಉಗ್ರರನ್ನು ಯೋಧರು ಸುತ್ತುವರಿದಿದ್ದು, ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈ ದಾಳಿಯಲ್ಲಿ ಯೋಧರೊಬ್ಬರಿಗೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಯೋಧರು ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ವರದಿಯಾಗಿದೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರೆಯಲ್ಲಿ ತೊಡಗಿರುವ ಯಾತ್ರಿಗಳನ್ನೇ ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಲು ಹೊಂಚು ಹಾಕಿರುವ ಸ್ಫೋಟಕ ವಿಚಾರ ಶುಕ್ರವಾರ ಬೆಳಕಿಗೆ ಬಂದಿತ್ತು. ಗುಪ್ತಚರ ಇಲಾಖೆಯಿಂದ ಖಚಿತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಪವಿತ್ರ ಅಮರನಾಥ ಯಾತ್ರೆಯನ್ನು ನಿಲ್ಲಿಸಿ ಕಾಶ್ಮೀರ ತೊರೆದು ತಮ್ಮ ಊರುಗಳಿಗೆ ಮರಳಿ ಹೋಗಿ ಎಂದು ಜಮ್ಮು-ಕಾಶ್ಮೀರದ ಗೃಹ ಸಚಿವಾಲಯ ಯಾತ್ರಿಗಳಿಗೆ ಸೂಚಿಸಿದ್ದರು.

    ಯಾಕೆ ಈ ಸೂಚನೆ?
    ಅಮರನಾಥ ಯಾತ್ರೆಗೆ ಸಾಗುವ ಮಾರ್ಗಗಳಲ್ಲಿ ವಿದೇಶಿ ಶಸ್ತ್ರಾಸ್ತ್ರಗಳು ಪತ್ತೆಯಾಗಿತ್ತು. ಅಮೆರಿಕದ ಎಂ-24 ಸ್ನೈಪರ್ ರೈಫಲ್ ಅನ್ನು ಸೇನೆ ವಶಪಡಿಸಿಕೊಂಡಿದ್ದು, ಪತ್ತೆಯಾಗಿರುವ ಶಸ್ತ್ರಾಸ್ತ್ರಗಳ ಮೇಲೆ ಪಾಕಿಸ್ತಾನದ ಶಸ್ತ್ರಾಸ್ತ್ರ ಘಟಕದ ಚಿಹ್ನೆಗಳಿದ್ದವು. ಹೀಗಾಗಿ ಅಮರನಾಥ ಯಾತ್ರಿಕರು ಕೂಡಲೇ ಜಮ್ಮು ಕಾಶ್ಮೀರ ಬಿಟ್ಟು ತೆರಳುವಂತೆ ಸೂಚನೆ ರವಾನಿಸಲಾಗಿತ್ತು. ಈ ಮೂಲಕ ಪಾಕಿಸ್ತಾನ ಉಗ್ರರಿಗೆ ಸಹಾಯ ಮಾಡುತ್ತಿದೆ ಎನ್ನುವ ಭಾರತದ ವಾದಕ್ಕೆ ಪುಷ್ಠಿ ಸಿಕ್ಕಿತ್ತು.

    ಈ ವಿಚಾರ ಬಗ್ಗೆ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ್ದ ಲೆಫ್ಟಿನೆಂಟ್ ಜನರಲ್ ಸರಬ್‍ಜೀತ್ ಸಿಂಗ್ ಧಿಲ್ಲಾನ್ ಅವರು, ಕಾಶ್ಮೀರದ ಶಾಂತಿಯನ್ನು ಕದಡಲು ನಾವು ಅವಕಾಶ ನೀಡುವುದಿಲ್ಲ. ಯಾವುದೇ ಕಾರಣಕ್ಕೂ ಉಗ್ರರು ಹಾಗೂ ಪಾಕಿಸ್ತಾನದ ಹೊಂಚು ಯಶಸ್ವಿಯಾಗಲು ಬಿಡುವುದಿಲ್ಲ. ಇದು ಕಾಶ್ಮೀರ ಜನತೆಗೆ ಹಾಗೂ ದೇಶಕ್ಕೆ ನಾವು ನೀಡುವ ವಾದ ಎಂದು ಭರವಸೆ ನೀಡಿದ್ದರು.

    ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‍ಗೆ ಸೇರಿದ ಐದು ಉಗ್ರರು ಕಾಶ್ಮೀರಕ್ಕೆ ನುಸುಳಿದ್ದಾರೆ ಎಂಬ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಕಾಶ್ಮೀರದ ಕಣಿವೆ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.