Tag: ಜಯ

  • ರಾಖಿ ಸಾವಂತ್ ತಾಯಿಗೆ ಕ್ಯಾನ್ಸರ್: ಅಮ್ಮನಿಗಾಗಿ ಪಾರ್ಥಿಸಿ ಎಂದ ನಟಿ

    ರಾಖಿ ಸಾವಂತ್ ತಾಯಿಗೆ ಕ್ಯಾನ್ಸರ್: ಅಮ್ಮನಿಗಾಗಿ ಪಾರ್ಥಿಸಿ ಎಂದ ನಟಿ

    ವಿವಾದಿತ ಮಾತುಗಳು, ಹಾಟ್ ಹಾಟ್ ಫೋಟೋ, ಬಾಯ್ ಫ್ರೆಂಡ್ ಜೊತೆಗಿನ ತಮಾಷೆ ಮಾಡುವಂತಹ ವಿಡಿಯೋಗಳನ್ನು ಪೋಸ್ಟ್ ಮಾಡಿ ಅಭಿಮಾನಿಗಳನ್ನು ಸದಾ ರಂಜಿಸುತ್ತಿದ್ದ ಬಾಲಿವುಡ್ ವಿವಾದಿತ ತಾರೆ ರಾಖಿ ಸಾವಂತ್ (Rakhi Sawant), ಇದೇ ಮೊದಲ ಬಾರಿಗೆ ಭಾವುಕ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದಾರೆ. ತಮ್ಮ ತಾಯಿಯು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಅಮ್ಮನಿಗಾಗಿ ನೀವೆಲ್ಲರೂ ಪಾರ್ಥಿಸಿರಿ ಎಂದು ಅಭಿಮಾನಿಗಳನ್ನು ಕೇಳಿಕೊಂಡಿದ್ದಾರೆ.

    ರಾಖಿ ಸಾವಂತ್ ತಾಯಿ ಜಯಾ ಸಾವಂತ್ (Jaya) ಬ್ರೈನ್ ಟ್ಯೂಮರ್ ಮತ್ತು ಕ್ಯಾನ್ಸರ್ (Cancer) ಕಾರಣದಿಂದಾಗಿ ಆಸ್ಪತ್ರೆ ಸೇರಿಕೊಂಡಿದ್ದಾರೆ. ಹಾಗಾಗಿಯೇ ಮರಾಠಿ ಬಿಗ್ ಬಾಸ್ ಸೀಸನ್ 4ರಲ್ಲಿ ಸ್ಪರ್ಧಿಯಾಗಿದ್ದ ರಾಖಿ, ದೊಡ್ಮನೆಯಿಂದ ಹೊರಗೆ ಬಂದಿದ್ದಾರೆ. ಅಮ್ಮನ ಆರೋಗ್ಯದಲ್ಲಿ ತೀವ್ರ ವ್ಯತ್ಯಾಸ ಕಂಡ ಹಿನ್ನೆಲೆಯಲ್ಲಿ ಬಿಗ್ ಬಾಸ್ ಮನೆಯಿಂದ ಹೊರ ಬಂದಿರುವುದಾಗಿ ಅವರು ವಿಡಿಯೋ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ವಜ್ರಕಾಯ’ ನಟಿ ಶುಭ್ರಾ ಅಯ್ಯಪ್ಪ

    ತಾಯಿಯು ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ಫೋಟೋವೊಂದನ್ನು ಹಾಕಿರುವ ಅವರು, ಆನಂತರ ವಿಡಿಯೋವೊಂದನ್ನು ಮಾಡಿ, ನಾನು ನನ್ನ ಬಾಯ್ ಫ್ರೆಂಡ್ ಆದಿಲ್ ಹಾಗೂ ಸಹೋದರ ರಾಕೇಶ್ ಮೂವರು ಅಮ್ಮನನ್ನು ಉಳಿಸಿಕೊಳ್ಳುವುದಕ್ಕಾಗಿ ಹರಸಾಹಸ ಪಡುತ್ತಿದ್ದೇವೆ. ನೀವು ಕೂಡ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ರಾಖಿನೇ ಹೇಳಿಕೊಂಡಂತೆ ಅವರ ತಾಯಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರಂತೆ. ಕ್ಯಾನ್ಸರ್ ಜೊತೆಗೆ ಬ್ರೇನ್ ಟ್ಯೂಮರ್ ಕೂಡ ಇರುವುದರಿಂದ ಅವರ ಎಡಭಾಗವು ಪಾರ್ಶ್ವವಾಯುವಿಗೆ ತುತ್ತಾಗಿದೆ. ಕ್ಯಾನ್ಸರ್ ಶ್ವಾಸಕೋಶಕ್ಕೆ ಹರಡಿದೆ. ಈ ಹಂತದಲ್ಲಿ ಆಪರೇಷನ್ ಮಾಡುವುದು ಕಷ್ಟ ಎಂದು ವೈದ್ಯರು ತಿಳಿಸಿದ್ದಾರಂತೆ. ಸದ್ಯ ರಾಖಿ ತಾಯಿ ಮುಂಬೈನ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 238 ರನ್‍ಗಳ ಜಯದೊಂದಿಗೆ ದಾಖಲೆ ನಿರ್ಮಿಸಿದ ಭಾರತ

    238 ರನ್‍ಗಳ ಜಯದೊಂದಿಗೆ ದಾಖಲೆ ನಿರ್ಮಿಸಿದ ಭಾರತ

    ಬೆಂಗಳೂರು: ಶ್ರೀಲಂಕಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 238 ರನ್‍ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಸ್ವದೇಶದಲ್ಲಿ ಸತತ 15 ಟೆಸ್ಟ್ ಸರಣಿಯನ್ನು ಗೆದ್ದ ಸಾಧನೆ ಮಾಡಿತು.

    ಗೆಲ್ಲಲು 447 ರನ್ ಗಳ ಕಠಿಣ ಗುರಿಯನ್ನು ಪಡೆದ ಶ್ರೀಲಂಕಾ ಎರಡನೇ ಇನ್ನಿಂಗ್ಸ್‍ನಲ್ಲಿ 208 ರನ್‍ಗಳಿಗೆ ಆಲೌಟ್ ಆಯ್ತು. ಈ ಮೂಲಕ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.

    2012ರಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋತಿತ್ತು. ಈ ಸರಣಿಯ ಬಳಿಕ ನಡೆದ ಭಾರತದಲ್ಲಿ ನಡೆದ ಎಲ್ಲ ಟೆಸ್ಟ್ ಸರಣಿಯನ್ನು ಭಾರತ ಜಯಿಸಿದೆ. ಇಲ್ಲಿಯವರೆಗೆ ಯಾವುದೇ ತಂಡ ಈ ಸಾಧನೆ ಮಾಡಿಲ್ಲ.

    ಒಂದು ವಿಕೆಟ್ ನಷ್ಟಕ್ಕೆ 28 ರನ್‍ಗಳಿಂದ ಮೂರನೇ ದಿನವನ್ನು ಪುನರಾರಂಭಿಸಿದ ಶ್ರೀಲಂಕಾ ಪರ ನಾಯಕ ದಿಮುತ್ ಕರುಣಾರತ್ನೆ 107 ರನ್ ಗಳಿಸಿ ಸ್ವಲ್ಪ ಪ್ರತಿರೋಧ ತೋರಿದರು.

    ಭಾರತದ ಪರ ಸ್ಪಿನ್ನರ್ ಅಶ್ವಿನ್ 4 ವಿಕೆಟ್ ಕಿತ್ತರೆ ಬುಮ್ರಾ 3 ವಿಕೆಟ್ ಕಿತ್ತರು. ಅಕ್ಷರ್ ಪಟೇಲ್ 2, ರವೀಂದ್ರ ಜಡೇಜಾ 1 ವಿಕೆಟ್ ಪಡೆದರು.

    ಸಂಕ್ಷೀಪ್ತ ಸ್ಕೋರ್
    ಭಾರತ ಮೊದಲ ಇನ್ನಿಂಗ್ಸ್ 252/10
    ಶ್ರೀಲಂಕಾ ಮೊದಲ ಇನ್ನಿಂಗ್ಸ್ 109/10
    ಭಾರತ ಎರಡನೇ ಇನ್ನಿಂಗ್ಸ್ 303/9
    ಶ್ರೀಲಂಕಾ ಎರಡನೇ ಇನ್ನಿಂಗ್ಸ್ 208/ 10

  • ಅಮಿತಾಬ್ ಬಚ್ಚನ್, ಜಯಗೆ 48ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ

    ಅಮಿತಾಬ್ ಬಚ್ಚನ್, ಜಯಗೆ 48ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ

    ಮುಂಬೈ: ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಜಯ ಬಚ್ಚನ್‍ಗೆ 48ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ವಿಶೇಷ ದಿನದಂದು ವಿವಾಹ ವಾರ್ಷಿಕೋತ್ಸವದ ಶುಭಾಶಯ ಕೋರಿದ ಎಲ್ಲರಿಗೂ ಅಮಿತಾಬ್ ಬಚ್ಚಬ್ ಸೋಶಿಯಲ್ ಮೀಡಿಯಾ ಮೂಲಕ ಧನ್ಯವಾದ ತಿಳಿಸಿದ್ದಾರೆ.

    ಅಮಿತಾಬ್ ಬಚ್ಚನ್‍ರವರು ತಮ್ಮ ವಿವಾಹದ ವೇಳೆ ಕ್ಲಿಕ್ಕಿಸಿದ ಫೋಟೋವೊಂದನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಫೋಟೋದಲ್ಲಿ ಅಮಿತಾಬ್ ಬಚ್ಚನ್ ಶೇರ್ವಾನಿ ಧರಿಸಿದ್ದು, ಜಯ ಮಾಧುರಿ ಕೆಂಪು ಬಣ್ಣದ ಲೆಹೆಂಗ ತೊಟ್ಟು, ಆಭರಣಗಳನ್ನು ಧರಿಸಿ ವಿವಾಹದ ವಿಧಿಗಳನ್ನು ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಮತ್ತೊಂದರಲ್ಲಿ ಅಮಿತಾಬ್ ಬಚ್ಚನ್ ಜಯರವರ ಹಣೆಯ ಮೇಲೆ ಸಿಂಧೂರ ಇಡುತ್ತಿರುವುದನ್ನು ಕಾಣಬಹುದಾಗಿದೆ. ಇದನ್ನು ಓದಿ:ಬಾಲಿವುಡ್‍ನಲ್ಲಿ 52 ವರ್ಷ ಪೂರೈಸಿದ ಬಿಗ್ ಬಿ

    ಅಮಿತಾಬ್ ಬಚ್ಚನ್ ಹಾಗೂ ಜಯ ನಡುವೆ ಜಂಜೀರ್ ಸಿನಿಮಾದ ಚಿತ್ರೀಕರಣ ವೇಳೆ ಪ್ರೀತಿ ಹುಟ್ಟಿತ್ತು. ಈ ಸಿನಿಮಾ ಬಾಲಿವುಡ್‍ನಲ್ಲಿ ಹಿಟ್ ಕೂಡ ಆಗಿತ್ತು. ಬಳಿಕ ಈ ಸಿನಿಮಾದ ಸಕ್ಸಸ್ ನಂತರ 1973 ಜೂನ್ 3ರಂದು ಈ ಜೋಡಿ ಸಪ್ತಪದಿ ತುಳಿದಿದ್ದರು.

     

    View this post on Instagram

     

    A post shared by Amitabh Bachchan (@amitabhbachchan)

    ರೀಲ್‍ನಲ್ಲಿ ಮಾತ್ರವಲ್ಲದೇ ರಿಯಲ್ ಲೈಫ್‍ನಲ್ಲಿಯೂ ಎಲ್ಲರಿಗೂ ಮಾದರಿಯಂತೆ ಇರುವ ಈ ಜೋಡಿ ಅಭಿಮಾನ್, ಚುಪ್ ಚುಪ್ ಕೆ, ಶೋಲೆ, ಕಭಿ ಖುಷಿ ಕಭಿ ಗಂ ಸಿನಿಮಾದಲ್ಲಿ ಒಟ್ಟಾಗಿ ಅಭಿನಯಿಸಿದ್ದಾರೆ. ಅಮಿತಾಬ್ ಬಚ್ಚನ್ ದಂಪತಿಗೆ ಅಭಿಷೇಕ್ ಬಚ್ಚನ್ ಹಾಗೂ ಶ್ವೇತಾ ಬಚ್ಚನ್ ಎಂಬ ಇಬ್ಬರು ಮಕ್ಕಳಿದ್ದಾರೆ. ಇದನ್ನು ಓದಿ:ಹೆಸರಿಟ್ಟು ಮುದ್ದು ಮಗನನ್ನು ಪರಿಚಯಿಸಿದ ಗಾಯಕಿ ಶ್ರೇಯಾ ಘೋಷಾಲ್

  • ಅಂಬಿ ಪುಣ್ಯತಿಥಿಗೆ ಸುಮಲತಾರಿಂದ ಜಯದ ಉಡುಗೊರೆ

    ಅಂಬಿ ಪುಣ್ಯತಿಥಿಗೆ ಸುಮಲತಾರಿಂದ ಜಯದ ಉಡುಗೊರೆ

    ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಮಂಡ್ಯದಲ್ಲಿ ಜಯಭೇರಿ ಹಿನ್ನೆಲೆ ಅಂಬರೀಶ್ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ.

    ಅಂಬರೀಶ್ ಅವರು ನಮ್ಮನ್ನ ಅಗಲಿ ಇಂದಿಗೆ 6 ತಿಂಗಳುಗಳೇ ಕಳೆದಿದೆ. ಈ ಹಿನ್ನೆಲೆಯಲ್ಲಿ 6 ನೇ ತಿಂಗಳ ಪುಣ್ಯ ತಿಥಿ ಕೂಡ ಆಚರಣೆ ಮಾಡಲಿದ್ದಾರೆ. ಇಂದು ಬೆಳ್ಳಗ್ಗೆ 10 ಗಂಟೆ ಸುಮಾರಿಗೆ ಕಂಠೀರವ ಸ್ಟುಡಿಯೋದಲ್ಲಿ ಇರುವ ಅಂಬರೀಶ್ ಸಮಾಧಿಗೆ ಸುಮಲತಾ ಮತ್ತು ಅಭಿಷೇಕ್ ಭೇಟಿ ನೀಡಲಿದ್ದಾರೆ.

    ಇಂದು ನಡೆಯುವ ಪೂಜೆಗೆ ಮಧ್ಯರಾತ್ರಿಯಿಂದಲೇ ಪೂರ್ವ ಸಿದ್ಧತೆ ನಡೆಯುತ್ತಿದ್ದು, ಅಂಬರೀಶ್ ಸಮಾಧಿಗೆ ಪುಪ್ಪಲಂಕಾರವನ್ನು ಮಾಡುತ್ತಿದ್ದರು. ಮಂಡ್ಯದ ಗೆಲುವಿನ ಸಂಭ್ರಮ ಮತ್ತು ಅಂಬಿಯ 6ನೇ ತಿಂಗಳಿನ ಪುಣ್ಯ ತಿಥಿ ಒಟ್ಟೊಟ್ಟಾಗಿ ಬಂದಿದ್ದು ಸಮಾಧಿಗೆ ಭೇಟಿ ನೀಡಿ ಪೂಜೆಯನ್ನು ನೇರವೆರಿಸಲಿದ್ದಾರೆ. ಪೂಜೆ ಕಾರ್ಯಕ್ರಮದಲ್ಲಿ ದರ್ಶನ್ ಮತ್ತು ಯಶ್ ಭಾಗಿಯಾಗುವ ಸಾಧ್ಯತೆಗಳಿವೆ.

    ಕಿಡ್ನಿ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅಂಬರೀಶ್ ಅವರು 2018ರ ನವೆಂಬರ್ 24ರಂದು ರಾತ್ರಿ ನಿಧನರಾಗಿದ್ದರು. ಅಂದೇ ಮಂಡ್ಯದ ಕನಗನಮರಡಿಯಲ್ಲಿ ಬಸ್ ದುರಂತ ನಡೆದಿದ್ದು, ಘಟನೆ ನೋಡಿ ಬೇಸರಗೊಂಡಿದ್ದ ಅಂಬರೀಶ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆಂದು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

    ಚುನಾವಣೆಯಲ್ಲಿ ಜಯ:
    ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದಲ್ಲಿ ನಡೆದ ಸ್ವಾಭಿಮಾನಿ ವರ್ಸಸ್ ಸರ್ಕಾರದ ನಡುವಿನ ಸಮರದಲ್ಲಿ ಸುಮಲತಾ ಅವರು ಭರ್ಜರಿ ಗೆಲುವು ಪಡೆದಿದ್ದಾರೆ. ಚುನಾವಣೆಯಲ್ಲಿ ನಿಖಿಲ್ ಅವರಿಗೆ 5,71,777 ಮತ ಲಭಿಸಿದ್ದರೆ, ಸುಮಲತಾ ಅವರಿಗೆ 6,98,213 ಮತ ಲಭಿಸಿದೆ. ಆ ಮೂಲಕ ಸುಮಲತಾ ಅವರು ಬರೋಬ್ಬರಿ 1,26,436 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ.

  • ಬಿಸಿಸಿಐ ವಿರುದ್ಧದ ಕಾನೂನು ಸಮರದಲ್ಲಿ ಪಾಕ್‍ಗೆ ಭಾರೀ ಮುಖಭಂಗ

    ಬಿಸಿಸಿಐ ವಿರುದ್ಧದ ಕಾನೂನು ಸಮರದಲ್ಲಿ ಪಾಕ್‍ಗೆ ಭಾರೀ ಮುಖಭಂಗ

    ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿರುದ್ಧ ಐಸಿಸಿಯಲ್ಲಿ ದಾಖಲಿಸಿದ್ದ ದೂರಿನಲ್ಲಿ ಪಿಸಿಬಿಗೆ ಸೋಲುಂಟಾಗಿದ್ದು, ಭಾರೀ ಮುಖಭಂಗ ಅನುಭವಿಸಿದೆ.

    ಬಿಸಿಸಿಐ ತಮ್ಮೊಂದಿಗೆ ದ್ವಿಪಕ್ಷೀಯ ಸರಣಿ ಆಡದ ಕಾರಣ ತಮಗೆ ಭಾರೀ ನಷ್ಟ ಉಂಟಾಗಿದ್ದು, ಪರಿಣಾಮವಾಗಿ 70 ದಶಲಕ್ಷ ಡಾಲರ್ (ಅಂದಾಜು 471 ಕೋಟಿ ರೂ.) ಪರಿಹಾರ ನೀಡುವಂತೆ ನೋಟಿಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಪಿಸಿಬಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

    ಒಪ್ಪಂದದಂತೆ ಭಾರತ 2014 ಹಾಗೂ 2015 ಅವಧಿಯಲ್ಲಿ ಪಾಕ್ ವಿರುದ್ಧದ ದ್ವಿಪಕ್ಷೀಯ ಸರಣಿಯಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ಬಿಸಿಸಿಐಗೆ ಭಾರತ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಪಾಕ್ ಪ್ರವಾಸವನ್ನು ಕೈಗೊಂಡಿರಲಿಲ್ಲ. ಈ ಕುರಿತು ಪಾಕ್ ಕ್ರಿಕೆಟ್ ಮಂಡಳಿ ತನ್ನ ವಕೀಲರ ಮೂಲಕ ಐಸಿಸಿ ಮಧ್ಯ ಪ್ರವೇಶ ಮಾಡುವಂತೆ ಮನವಿ ಮಾಡಿ ಅರ್ಜಿ ಸಲ್ಲಿಸಿತ್ತು.

    2014ರ ಫ್ಯೂಚರ್ ಟೂರ್ಸ್ ಆಂಡ್ ಪ್ರೋಗ್ರಾಂ (ಎಫ್‍ಟಿಪಿ) ಪ್ರಕಾರ ಭಾರತ ಮತ್ತು ಪಾಕಿಸ್ತಾನ ನಡುವೆ 6 ಕ್ರಿಕೆಟ್ ಸರಣಿ ನಡೆಯಬೇಕಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ಸರಣಿ ನಡೆಯದ ಕಾರಣ ನಮಗೆ 70 ದಶಲಕ್ಷ ಡಾಲರ್ ನಷ್ಟವಾಗಿದೆ. ಒಪ್ಪಂದ ಉಲ್ಲಂಘನೆಯಾಗಿರುವ ಕುರಿತು ನಾವು ಐಸಿಸಿಗೆ ಅರ್ಜಿ ಸಲ್ಲಿಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ. ಪಾಕಿಸ್ತಾನದಲ್ಲಿ ನಡೆಯುವ ಸರಣಿಯಲ್ಲೂ ಭಾರತ ಭಾಗವಹಿಸಬೇಕಾಗಿತ್ತು. 2008 ನಂತರ ಬಿಸಿಸಿಐ ಯಾವುದೇ ಕಾರಣ ನೀಡದೆ ನಮ್ಮೊಂದಿಗೆ ಕ್ರಿಕೆಟ್ ಸರಣಿಯಲ್ಲಿ ಭಾಗವಹಿಸಿಲ್ಲ. ಆದರೆ ಐಸಿಸಿ ನಡೆಸುವ ಎಲ್ಲಾ ಸರಣಿಯಲ್ಲೂ ನಮ್ಮ ವಿರುದ್ಧ ಆಡಿದೆ ಎಂದು ಪಾಕ್ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷರು ಈ ಹಿಂದೆ ಹೇಳಿದ್ದರು.

    ಪಾಕಿಸ್ತಾನದ ಉಗ್ರಗಾಮಿಗಳು 2008 ನವೆಂಬರ್ 26ರಂದು ಮುಂಬೈ ಮೇಲೆ ದಾಳಿ ನಡೆಸಿದ ಬಳಿಕ ಉಭಯ ದೇಶಗಳ ನಡುವಿನ ಕ್ರಿಕೆಟ್ ಸರಣಿಗೆ ಬ್ರೇಕ್ ಬಿದ್ದಿತ್ತು. ಇದಾದ ಬಳಿಕ 2012 ರಲ್ಲಿ ಎರಡು ಟಿ20 ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಗೆ ಪಾಕ್ ಭಾರತಕ್ಕೆ ಆಗಮಿಸಿತ್ತು. ಈ ಸರಣಿಯ ಬಳಿಕ ಇಲ್ಲಿಯವರೆಗೆ ಭಾರತ-ಪಾಕ್ ಮಧ್ಯೆ ಯಾವುದೇ ಸರಣಿ ನಡೆದಿಲ್ಲ.

    2016ರಲ್ಲಿ ಯುಎಇಯಲ್ಲಿ ಸರಣಿ ನಡೆಸಲು ಬಂದಿದ್ದ ಪ್ರಸ್ತಾಪವನ್ನು ಬಿಸಿಸಿಐ ತಿರಸ್ಕರಿಸಿತ್ತು. ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನ ಮಧ್ಯೆ ಕ್ರಿಕೆಟ್ ಸರಣಿ ನಡೆಸುವಂತೆ ಬಹಳಷ್ಟು ಮಾತುಕತೆ ನಡೆದಿದ್ದರೂ ಯಾವುದೇ ಫಲಪ್ರದವಾಗಿರಲಿಲ್ಲ.

    ಐಸಿಸಿ ತಿಳಿಸಿರುವ ಪ್ರಕಾರ ಈ ಪ್ರಕರಣವನ್ನ ಇಲ್ಲಿಯೇ ಕೈಬಿಡುವಂತೆ ಪಾಕಿಸ್ತಾನಕ್ಕೆ ತಿಳಿಸಿದ್ದು, ಹೀಗಾಗಿ ಉಭಯ ದೇಶಗಳ ನಡುವೆ ನಡೆಯುತ್ತಿದ್ದ ಕಾನೂನು ಸಮರದಲ್ಲಿ ಬ್ರೇಕ್ ಬಿದ್ದಂತಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಖಜಾಂಚಿ ಅನಿರುಧ್ ಚೌಧರಿ ಅವರು, ಐಸಿಸಿ ನೀಡಿರುವ ತೀರ್ಮಾನದ ಸಂಪೂರ್ಣ ಮಾಹಿತಿ ಇನ್ನು ಲಭ್ಯವಾಗಿಲ್ಲ. ಆದರೆ ಪ್ರಕರಣದಲ್ಲಿ ಬಿಸಿಸಿಐ ಪರ ನಿಂತ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಜಮಖಂಡಿಯಲ್ಲಿ ಮತ್ತೊಮ್ಮೆ `ಕೈ’ ಹಿಡಿದ ಮತದಾರ- ಯಾರಿಗೆ ಎಷ್ಟು ಮತ?

    ಜಮಖಂಡಿಯಲ್ಲಿ ಮತ್ತೊಮ್ಮೆ `ಕೈ’ ಹಿಡಿದ ಮತದಾರ- ಯಾರಿಗೆ ಎಷ್ಟು ಮತ?

    ಬಾಗಲಕೋಟೆ: ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಸಿದ್ದು ನ್ಯಾಮಗೌಡ ಜಯಗಳಿಸಿದ್ದಾರೆ.

    ಆನಂದ್ ನ್ಯಾಮಗೌಡ 97,017 ಮತಗಳನ್ನು ಪಡೆದುಕೊಂಡು 39,480 ಮತಗಳ ಅಂತರದಿಂದ ಜಯಶೀಲರಾಗಿದ್ದಾರೆ. ಇವರ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಕುಲಕರ್ಣಿ ಶ್ರೀಕಂಠ ಸುಬ್ಬರಾವ್ ಒಟ್ಟು 57,537 ಮತಗಳನ್ನು ಪಡೆದುಕೊಂಡಿದ್ದಾರೆ.

     

    ಶಾಸಕ ಸಿದ್ದು ನ್ಯಾಮಗೌಡರ ಅಕಾಲಿಕ ಮರಣದಿಂದಾಗಿ ಜಮಖಂಡಿ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆದಿತ್ತು. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿದ್ದು ನ್ಯಾಮಗೌಡರ ಪುತ್ರ ಆನಂದ ಸಿದ್ದು ನ್ಯಾಮಗೌಡ ಸ್ಪರ್ಧಿಸಿದ್ದರೆ, ಕಳೆದ ಬಾರಿ ಕಡಿಮೆ ಅಂತರದಿಂದ ಪರಾಜಯಗೊಂಡಿದ್ದ ಬಿಜೆಪಿ ಅಭ್ಯರ್ಥಿ ಕುಲಕರ್ಣಿ ಶ್ರೀಕಂಠ ಸುಬ್ಬರಾವ್ ಮತ್ತೊಮ್ಮೆ ಅಖಾಡಕ್ಕೆ ಧುಮುಕಿದ್ದರು.

    ಈ ಬಾರಿಯ ಜಮಖಂಡಿ ಉಪ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಅನುಕಂಪದ ಆಧಾರದ ಮೇಲೆ ಜಯಗಳಿಸುತ್ತಾರೆ ಎನ್ನುತ್ತಿದ್ದರೆ, ಬಿಜೆಪಿ ಅಭ್ಯರ್ಥಿ ಕಳೆದ ಬಾರಿ ಕಡಿಮೆ ಅಂತರದಿಂದ ಸೋಲನ್ನು ಕಂಡಿದ್ದರು. ಅವರಿಗೆ ಮತದಾರ ಒಲವು ತೋರುತ್ತಾರೆ ಎನ್ನುವ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬಂದಿದ್ದವು. ಆದರೆ ಇಂದಿನ ಉಪಚುನಾವಣೆಯ ಫಲಿತಾಂಶ ಕಾಂಗ್ರೆಸ್ಸಿಗೆ ಗೆಲುವನ್ನು ತಂದುಕೊಟ್ಟಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ವ ಕ್ಷೇತ್ರದಲ್ಲೇ ಸಿಎಂಗೆ ಮುಖಭಂಗ: ಕೈ ಬೆಂಬಲಿತ ಬಿಜೆಪಿ ಅಭ್ಯರ್ಥಿಗೆ ಜಯ

    ಸ್ವ ಕ್ಷೇತ್ರದಲ್ಲೇ ಸಿಎಂಗೆ ಮುಖಭಂಗ: ಕೈ ಬೆಂಬಲಿತ ಬಿಜೆಪಿ ಅಭ್ಯರ್ಥಿಗೆ ಜಯ

    ರಾಮನಗರ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸ್ವಕ್ಷೇತ್ರದಲ್ಲಿ ಹಿನ್ನಡೆಯಾಗಿದೆ. ನಗರದ ನಗರಸಭೆಯ ಅಧ್ಯಕ್ಷರಾಗಿದ್ದ ಟಿ.ರವಿಕುಮಾರ್ ಸ್ವಪಕ್ಷೀಯರಿಂದಲೇ ಅವಿಶ್ವಾಸಕ್ಕೆ ತುತ್ತಾಗಿ ಪದಚ್ಯುತಗೊಂಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ರತ್ನಮ್ಮ ಪಾಪಣ್ಣ ಜಯಭೇರಿ ಬಾರಿಸಿದ್ದಾರೆ.

    ರಾಜ್ಯದಲ್ಲಿ ದೋಸ್ತಿಗಳಾಗಿರುವ ಕಾಂಗ್ರೆಸ್ ಜೆಡಿಎಸ್ ನಡುವೆ ಚುನಾವಣಾ ಸಮರ ಏರ್ಪಟ್ಟಿತು. ಆಂತರಿಕ ಒಪ್ಪಂದದಂತೆ ಬಿಜೆಪಿಯಿಂದ ಚುನಾಯಿತರಾಗಿದ್ದರೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ರತ್ನಮ್ಮ ಕಣಕ್ಕಿಳಿದಿದ್ದರು. ಜೆಡಿಎಸ್ ಅಭ್ಯರ್ಥಿ ಸುಜಾತ ಕೂಡ ನಾಮಪತ್ರ ಸಲ್ಲಿಸಿದ್ದರು. ಇದರಿಂದ ಅನಿವಾರ್ಯವಾಗಿ ನಡೆದ ಚುನಾವಣೆಯಲ್ಲಿ 31 ಸದಸ್ಯ ಬಲದ ನಗರಸಭೆಯಲ್ಲಿ ಕಾಂಗ್ರೆಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ 19, ಜೆಡಿಎಸ್ ಅಭ್ಯರ್ಥಿ 11 ಮತಗಳಿಸಿ ಬಿಜೆಪಿಯ ಅಭ್ಯರ್ಥಿ ರತ್ನಮ್ಮ ಪಾಪಣ್ಣ ನೂತನ ನಗರಸಭೆ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

    ಪದಚ್ಯುತ ಅಧ್ಯಕ್ಷ ಪಿ ರವಿಕುಮಾರ್ ಗೈರುಹಾಜರಾಗಿದ್ದರು. ಕೊನೆಗೆ ಕಾಂಗ್ರೆಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ರತ್ನಮ್ಮ ಪಾಪಣ್ಣ ಅಧ್ಯಕ್ಷರಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಮಾರುತಿ ಪ್ರಸನ್ನ ಘೋಷಿಸಿದರು.

    ರಾಮನಗರ ನಗರಸಭೆಯಲ್ಲಿ 31 ಸದಸ್ಯ ಬಲವಿದೆ. ಕಾಂಗ್ರೆಸ್‍ನ 15, ಜೆಡಿಎಸ್‍ನ 12, ಬಿಜೆಪಿ 2, 2 ಪಕ್ಷೇತರ ಸದಸ್ಯರಿದ್ದಾರೆ. ಈ ನಡುವೆ ಕಾಂಗ್ರೆಸ್‍ನ 15 ಸದಸ್ಯರ ಪೈಕಿ ವಾರ್ಡ್ ನಂ 2ರ ಸದಸ್ಯ ಡಿ.ಕೆ.ಶಿವಕುಮಾರ್ ಹಾಗೂ ಪಕ್ಷೇತರ ಸದಸ್ಯ ಎಂ.ಜಿ. ಫೈರೋಜ್ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿಯ 5ನೇ ವಾರ್ಡ್ ಸದಸ್ಯೆ ರತ್ನಮ್ಮ ಒಳ ಒಪ್ಪಂದದಂತೆ ಕಾಂಗ್ರೆಸ್ ಸೇರಿದ್ದು ಈಗ ಅಧ್ಯಕ್ಷೆಯಾಗಿದ್ದಾರೆ.

    ಜೆಡಿಎಸ್ ಪಕ್ಷಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ವಕ್ಷೇತ್ರ ರಾಮನಗರದಲ್ಲೇ ಮುಖಭಂಗವಾದಂತಾಯಿತು. ರತ್ನಮ್ಮ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಭಾರತಕ್ಕೆ 168 ರನ್‍ಗಳ ಭರ್ಜರಿ ಜಯ

    ಭಾರತಕ್ಕೆ 168 ರನ್‍ಗಳ ಭರ್ಜರಿ ಜಯ

    ಕೊಲಂಬೋ: ಶ್ರೀಲಂಕಾ ನಾಲ್ಕನೇ ಏಕದಿನ ಪಂದ್ಯವನ್ನು 168 ರನ್ ಗಳಿಂದ ಜಯಗಳಿಸುವ ಮೂಲಕ 5 ಪಂದ್ಯಗಳ ಸರಣಿಯಲ್ಲಿ 4-0 ಮುನ್ನಡೆ ಸಾಧಿಸಿದೆ.

    ಗೆಲ್ಲಲು 376 ರನ್ ಗಳ ಕಠಿಣ ಸವಾಲನ್ನು ಪಡೆದ ಶ್ರೀಲಂಕಾ 42.4 ಓವರ್ ಗಳಲ್ಲಿ 207 ರನ್‍ಗಳಿಸಿ ಆಲೌಟ್ ಆಯಿತು.

    ಲಂಕಾ ಪರ ಏಂಜಲೋ ಮಾಥ್ಯೂಸ್ 70 ರನ್(80 ಎಸೆತ, 10 ಬೌಂಡರಿ) ಮತ್ತು ಸಿರಿವರ್ಧನ 39 ರನ್(43 ಎಸೆತ, 3 ಬೌಂಡರಿ) ಹೊಡೆಯುವ ಮೂಲಕ ಸ್ವಲ್ಪ ಪ್ರತಿರೋಧ ತೋರಿದರು.

    ಭಾರತದ ಪರ ಬುಮ್ರಾ, ಪಾಡ್ಯಾ, ಕುಲದೀಪ್ ಯಾದವ್ ತಲಾ ಎರಡು ವಿಕೆಟ್ ಕಿತ್ತರು. ಶಾರ್ದೂಲ್ ಠಾಕೂರ್ ಮತ್ತು ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

    ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಟಗಾರ ರೋಹಿತ್ ಶರ್ಮಾ 104 ರನ್(88 ಎಸೆತ, 11 ಬೌಂಡರಿ, 3 ಸಿಕ್ಸರ್) ವಿರಾಟ್ ಕೊಹ್ಲಿ 131 ರನ್ (96 ಎಸೆತ, 17 ಬೌಂಡರಿ, 2 ಸಿಕ್ಸರ್) ಮನೀಷ್ ಪಾಂಡೆ ಔಟಾಗದೇ 50 ರನ್(42 ಎಸೆತ, 4 ಬೌಂಡರಿ), ಧೋನಿ ಔಟಾಗದೇ 49 ರನ್(42 ಎಸೆತ, 5 ಬೌಂಡರಿ, 1ಸಿಕ್ಸರ್) ಹೊಡೆಯುವ ಮೂಲಕ 5ವಿಕೆಟ್ ನಷ್ಟಕ್ಕೆ 375ರನ್ ಗಳಿಸಿತ್ತು.

    ಇದನ್ನೂ ಓದಿ: ದ್ವಿಶತಕದ ಜೊತೆಯಾಟದ ದಶ ದಾಖಲೆ ಬರೆದ ವಿರಾಟ್ ಕೊಹ್ಲಿ!

     

    embed]https://twitter.com/SirJadeja/status/903230189647400963[/embed]