Tag: ಜಯಂತ್ ಯಾದವ್

  • ವಾಷಿಂಗ್ಟನ್ ಸುಂದರ್‌ಗೆ ಕೊರೊನಾ – ಜಯಂತ್ ಯಾದವ್‌ಗೆ  ಒಲಿದ ಅದೃಷ್ಟ

    ವಾಷಿಂಗ್ಟನ್ ಸುಂದರ್‌ಗೆ ಕೊರೊನಾ – ಜಯಂತ್ ಯಾದವ್‌ಗೆ ಒಲಿದ ಅದೃಷ್ಟ

    ನವದೆಹಲಿ: ವಾಷಿಂಗ್ಟನ್ ಸುಂದರ್ ಅವರಿಗೆ ಕೊರೊನಾ ಬಂದ ಹಿನ್ನೆಲೆಯಲ್ಲಿ ಜಯಂತ್ ಯಾದವ್ ಅವರಿಗೆ ದಕ್ಷಿಣ ಆಫ್ರಿಕಾದಲ್ಲೇ ಇರುವಂತೆ ಬಿಸಿಸಿಐ ಸೂಚಿಸಿದೆ.

    ಭಾರತದ ಏಕದಿನ ತಂಡದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಮುಂಬರುವ ಏಕದಿನ ಸರಣಿಯಲ್ಲಿ ಸುಂದರ್ ಪಾಲ್ಗೊಳ್ಳುವುದು ಅನುಮಾನವಾಗಿದೆ. ಇದರಿಂದಾಗಿ ಸದ್ಯ ಟೆಸ್ಟ್ ಪಂದ್ಯದಲ್ಲಿ ಆಡುತ್ತಿರುವ ಆಫ್ ಸ್ಪಿನ್ನರ್ ಜಯಂತ್ ಯಾದವ್ ಏಕದಿನ ಸರಣಿ ಮುಗಿಯುವರೆಗೂ ದಕ್ಷಿಣ ಆಫ್ರಿಕಾದಲ್ಲೇ ಇರುವಂತೆ ಸೂಚಿಸಿದೆ.

    ಏಕದಿನ ಪಂದ್ಯವನ್ನು ಆಡಲು ಇಂದು ಮುಂಬೈನಿಂದ ಶಿಖರ್ ಧವನ್, ಸೂರ್ಯಕುಮಾರ್ ಯಾದವ್, ಭುವನೇಶ್ವರ್ ಕುಮಾರ್, ರುತುರಾಜ್ ಗಾಯಕ್ವಾಡ್, ದೀಪಕ್ ಚಾಹರ್, ಪ್ರಸಿದ್ಧ್ ಕೃಷ್ಣ, ವೆಂಕಟೇಶ್ ಅಯ್ಯರ್, ಇಶಾನ್ ಕಿಶನ್ ಮತ್ತು ಯುಜುವೇಂದ್ರ ಚಾಹಲ್ ಸೇರಿದಂತೆ ಇತರ ಆಟಗಾರರರೊಂದಿಗೆ ವಾಷಿಂಗ್ಟನ್ ಸುಂದರ್ ಅವರು ದಕ್ಷಿಣ ಆಫ್ರಿಕಾಕ್ಕೆ ಹೋಗಬೇಕಿತ್ತು.

    ದಕ್ಷಿಣ ಆಫ್ರಿಕಾಕ್ಕೆ ತೆರಳುವವರನ್ನು ಮೂರು ದಿನ ಕ್ವಾರಂಟೈನ್ ಮಾಡಿ ಕೊರೊನಾ ಟೆಸ್ಟ್ ಮಾಡಲಾಗಿದೆ. ಆಗ 22 ವರ್ಷದ ಸುಂದರ್ ಅವರಿಗೆ ಕೊರೊನಾ ದೃಢಪಟ್ಟಿದ್ದು, ಸದ್ಯ ಕ್ವಾರಂಟೈನ್ ಆಗಿದ್ದಾರೆ. ಕ್ವಾರಂಟೈನ್‍ಲ್ಲಿದ್ದ ಉಳಿದ ಎಲ್ಲಾ ಇತರ ಆಟಗಾರರ ವರದಿಗಳು ನೆಗೆಟಿವ್ ಬಂದಿವೆ. ಇದನ್ನೂ ಓದಿ: ಪುಷ್ಪ ಸಿನಿಮಾ ಮಾದರಿಯಲ್ಲಿ ದರೋಡೆ – ಇಬ್ಬರು ಹೆಡ್ ಕಾನ್‍ಸ್ಟೇಬಲ್ ಸಸ್ಪೆಂಡ್

    ಈಗಾಗಲೇ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಇಬ್ಬರೂ ಗಾಯಗೊಂಡು ತಂಡದಿಂದ ಹೊರ ಉಳಿದಿದ್ದಾರೆ. ಜಯಂತ್ ಯಾದವ್ ಅಲ್ಲದೇ ಅಶ್ವಿನ್ ಸಹ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದಾರೆ. ಇಬ್ಬರ ಪೈಕಿ ಒಬ್ಬರಿಗೆ ಅವಕಾಶ ಸಿಗಲಿದೆ. ಯಾದವ್ ಅವರು 2016ರಲ್ಲಿ ನ್ಯೂಜಿಲೆಂಡ್ ವಿರುದ್ಧ ಕೊನೆಯ ಬಾರಿಗೆ ಏಕದಿನ ಪಂದ್ಯವನ್ನು ಆಡಿದ್ದರು. ಇದನ್ನೂ ಓದಿ: ವೊಡಾಫೋನ್‌ ಐಡಿಯಾದಲ್ಲಿ ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ