Tag: ಜರ್ಮನಿ

  • ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ, ನನ್ನ ತಾಳ್ಮೆ ಪರೀಕ್ಷಿಸಬೇಡ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

    ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ, ನನ್ನ ತಾಳ್ಮೆ ಪರೀಕ್ಷಿಸಬೇಡ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

    – ಕೂಡಲೇ ಪೊಲೀಸರ ಮುಂದೆ ಶರಣಾಗಿ ವಿಚಾರಣೆ ಎದುರಿಸು
    – ಇದು ನಾನು ಆತನಿಗೆ ಕೊಡುತ್ತಿರುವ ಎಚ್ಚರಿಕೆ

    ಬೆಂಗಳೂರು: ಪ್ರಜ್ವಲ್‌ ನೀನು ಎಲ್ಲಿಯೇ ಇದ್ದರೂ ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಸೂಚನೆ ನೀಡಿದ್ದಾರೆ.

    ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ ಪತ್ರವನ್ನು ಹಂಚಿಕೊಂಡಿರುವ ಅವರು, ಈ ಎಚ್ಚರಿಕೆಗೆ ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಕೂಡಲೇ ಹಿಂದಿರುಗಿ ಬರಬೇಕು ಎಂದು ಹೇಳಿದ್ದಾರೆ.

    ಪತ್ರದಲ್ಲಿ ಏನಿದೆ?
    ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು.

     

    ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನಾದರೆ ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ.  ಇದನ್ನೂ ಓದಿ: ಆರೋಪಿ ಬಂಧನಕ್ಕೆ ಏಮ್ಸ್‌ ಒಳಗಡೆ ವಾಹನ ನುಗ್ಗಿಸಿದ ಪೊಲೀಸರು! 

    ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ.

    ಪ್ರಜ್ವಲ್‌ನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ.

    ನಾನು ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ತೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಳದಲ್ಲಿ ಇರಿಸಿದ್ದೇನೆ.

    ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೇ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲ್‌ ಎಲ್ಲಿದ್ದರೂ ಬಂದು ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು. ಇದನ್ನು ನಾನು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೇ ಹಿಂದಿರುಗಿ ಬರಬೇಕು.

    ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೇ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೇ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ.

  • ಪ್ರಜ್ವಲ್‌ ರೇವಣ್ಣ ಕಣ್ಣಾಮುಚ್ಚಾಲೆ ಆಟ – ವಿಮಾನ ನಿಲ್ದಾಣದಿಂದ ಬರಿಗೈಯಲ್ಲಿ ಪೊಲೀಸರು ವಾಪಸ್‌

    ಪ್ರಜ್ವಲ್‌ ರೇವಣ್ಣ ಕಣ್ಣಾಮುಚ್ಚಾಲೆ ಆಟ – ವಿಮಾನ ನಿಲ್ದಾಣದಿಂದ ಬರಿಗೈಯಲ್ಲಿ ಪೊಲೀಸರು ವಾಪಸ್‌

    ಬೆಂಗಳೂರು: ಕಳೆದ 20 ದಿನದಿಂದ ಕಣ್ಣಾಮುಚ್ಚಾಲೆ ಆಟ ಆಡುತ್ತಿರುವ ಪ್ರಜ್ವಲ್ ರೇವಣ್ಣ (Prajwal Revanna) ತಮ್ಮ ಆಟವನ್ನು ಮುಂದುವರಿಸಿದ್ದು, ಬೆಂಗಳೂರು ವಿಮಾನ ನಿಲ್ದಾಣದಿಂದ (Bengaluru Airport) ವಿಶೇಷ ತನಿಖಾ ತಂಡದ ಪೊಲೀಸರು (SIT Police) ಬರಿಗೈಯಲ್ಲಿ ವಾಪಸ್‌ ಆಗಿದ್ದಾರೆ.

    ಜರ್ಮನಿಯ ಮ್ಯೂನಿಕ್‌ನಿಂದ ರಿಟರ್ನ್ ಟಿಕೆಟ್ ಬುಕ್ಕಿಂಗ್ ಮಾಡಿದ್ದ ಪ್ರಜ್ವಲ್ ಮಧ್ಯರಾತ್ರಿ ಬರುವ ನಿರೀಕ್ಷೆಗಳು ಇತ್ತು. ಎಸ್‌ಐಟಿ ಪೊಲೀಸರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಡುಬಿಟ್ಟಿದ್ದರು. ಆದರೆ ಆ ಎಲ್ಲಾ ನಿರೀಕ್ಷೆಗಳು ಹುಸಿಯಾಗಿದೆ.  ಇದನ್ನೂ ಓದಿ: ಟಿ20 ವಿಶ್ವಕಪ್‌: ಸ್ಕಾಟ್ಲೆಂಟ್‌ ತಂಡದ ಜೆರ್ಸಿಯಲ್ಲಿ ಕರ್ನಾಟಕದ ‘ನಂದಿನಿ’ ಬ್ರ್ಯಾಂಡ್‌ ಲೋಗೋ

     

    ಮಧ್ಯರಾತ್ರಿ 12:30ಕ್ಕೆ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಬರುವ ಸಾಧ್ಯತೆ ಇದ್ದ ಕಾರಣ ಪೊಲೀಸರು ಕಾದಿದ್ದರು. ನಂತರ ಬ್ರಿಟೀಷ್ ಏರ್‌ಲೈನ್ಸ್‌ನಲ್ಲಿ ಬರುವ ಮಾಹಿತಿ ತಿಳಿದು ಮಂಜಾನೆ 5 ಗಂಟೆಯ ವರೆಗೆ ಕಾದಿದ್ದರು. ಆದರೆ ಪ್ರಜ್ವಲ್‌ ರೇವಣ್ಣ ಈ ಎರಡೂ ವಿಮಾನದಲ್ಲಿ ಬಾರದ ಕಾರಣ ಪೊಲೀಸರು ಬರಿಗೈಯಲ್ಲಿ ವಾಪಸ್‌ ಆಗಿದ್ದಾರೆ. ಇದನ್ನೂ ಓದಿ: ಯುವತಿಯ ಶೋಕಿ ಜೀವನ: ಚಿನ್ನದ ಸರಕ್ಕಾಗಿ ಮನೆ ಮಾಲೀಕರನ್ನೇ ಹತ್ಯೆಗೈದ ರೀಲ್ಸ್ ರಾಣಿ!

    ಪ್ರಜ್ವಲ್‌ ರೇವಣ್ಣ ಜರ್ಮನಿಯಿಂದ ಬೆಂಗಳೂರಿಗೆ ಆಗಮಿಸಲು ಟಿಕೆಟ್‌ ಬುಕ್‌ ಮಾಡಿದ್ದ ಖಚಿತ ಮಾಹಿತಿ ಸಿಕ್ಕಿದ ಕಾರಣ ಬುಧವಾರ ಬೆಳಗ್ಗೆಯಿಂದಲೇ ಪೊಲೀಸರು ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದ್ದರು. ವಿಮಾನದಿಂದ ಇಳಿದು ಹೊರಗೆ ಬರುತ್ತಿದ್ದಂತೆ ಎಕ್ಸಿಟ್‌ ಗೇಟ್‌ನಲ್ಲಿ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ಧತೆ ನಡೆಸಿತ್ತು.

     

  • ಇವತ್ತೂ ಭಾರತಕ್ಕೆ ಬರಲ್ಲ ಪ್ರಜ್ವಲ್ ರೇವಣ್ಣ

    ಇವತ್ತೂ ಭಾರತಕ್ಕೆ ಬರಲ್ಲ ಪ್ರಜ್ವಲ್ ರೇವಣ್ಣ

    ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಇಂದು ಭಾರತಕ್ಕೆ ಮರಳುವ ನಿರೀಕ್ಷೆ ಹುಸಿಯಾಗಿದೆ. ಜರ್ಮನಿಯ (Germany) ಮ್ಯೂನಿಕ್‌ನಿಂದ ಭಾರತಕ್ಕೆ ಮರಳುವ ವಿಮಾನ ಟೇಕಾಫ್ ಆಗಿದ್ದು, ಪ್ರಜ್ವಲ್ ಬೋರ್ಡಿಂಗ್ ಆಗಿಲ್ಲ ಎಂಬ ಮಾಹಿತಿ ಲಭಿಸಿದೆ.

    ವಿಚಾರಣೆಗೆ ಹಾಜರಾಗುವ ಸಲುವಾಗಿ ಪ್ರಜ್ವಲ್ ರೇವಣ್ಣ ಕಾಲಾವಕಾಶ ಕೇಳಿದ್ದರು. ಅಲ್ಲದೇ ಲುಫ್ತಾನ್ಸಾ ವಿಮಾನದಲ್ಲಿ ಇಂದಿಗೆ ಬಿಸಿನೆಸ್ ಕ್ಲಾಸ್ ರಿಟರ್ನ್ ಟಿಕೆಟ್ ಕೂಡಾ ಬುಕ್ ಮಾಡಿದ್ದರು. ಆದರೆ ಇದೀಗ ವಿಮಾನ ಮ್ಯೂನಿಕ್ ನಗರದಿಂದ ಟೇಕಾಫ್ ಆಗಿದ್ದು, ಪ್ರಜ್ವಲ್ ಇಂದು ಬೆಂಗಳೂರಿಗೆ ಮರಳುವುದಿಲ್ಲ ಎಂಬ ಮಾಹಿತಿಯನ್ನು ಎಸ್‌ಐಟಿ ಅಧಿಕಾರಿಗಳು ಖಚಿತಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ತಿಮಿಂಗಿಲದ ಬಗ್ಗೆ ಹೆಚ್‌ಡಿಕೆ ಮಾಹಿತಿ ಕೊಡಲಿ: ಪರಮೇಶ್ವರ್‌

    ಪ್ರಜ್ವಲ್ ಬರಲ್ಲ ಎಂಬ ವಿಚಾರವನ್ನು ವಿಮಾನ ನಿಲ್ದಾಣ ಅಧಿಕಾರಿಗಳ ಮೂಲಗಳಿಂದ ಎಸ್‌ಐಟಿ ಅಧಿಕಾರಿಗಳು ಕನ್ಫರ್ಮ್ ಮಾಡಿಕೊಂಡಿದ್ದಾರೆ. ಅಲ್ಲದೇ ವಿಮಾನ ಟೇಕಾಫ್ ಆಗುತ್ತಿದ್ದಂತೆ ಪ್ರಯಾಣಿಕರ ಲಿಸ್ಟ್ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳ ಕೈ ಸೇರಿದೆ. ಈ ಲಿಸ್ಟ್‌ನಲ್ಲಿ ಪ್ರಜ್ವಲ್ ಹೆಸರಿಲ್ಲದ್ದರಿಂದ ಪ್ರಜ್ವಲ್ ಇಂದು ಭಾರತಕ್ಕೆ ಆಗಮಿಸುವುದಿಲ್ಲ ಎಂಬುದನ್ನು ವಿಮಾನ ನಿಲ್ದಾಣ ಅಧಿಕಾರಿಗಳು ಖಚಿತಪಡಿಸಿಕೊಂಡು ಎಸ್‌ಐಟಿ ಅಧಿಕಾರಿಗಳಿಗೂ ಮಾಹಿತಿ ರವಾನಿಸಿದ್ದಾರೆ. ಬೆಳಗ್ಗೆಯಿಂದಲೂ ವಿಮಾನ ನಿಲ್ದಾಣ ಅಧಿಕಾರಿಗಳ ಜೊತೆ ಎಸ್‌ಐಟಿ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದರು. ಇದನ್ನೂ ಓದಿ: ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ, ಬಿಜೆಪಿ ಮೇಲೆ ಆರೋಪ ಹೊರಿಸುವ ಪ್ರಯತ್ನ: ಅಶೋಕ್

  • ಇಂದು ಜರ್ಮನಿಯಿಂದ ಹೊರಟು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್‌ ರೇವಣ್ಣ?

    ಇಂದು ಜರ್ಮನಿಯಿಂದ ಹೊರಟು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್‌ ರೇವಣ್ಣ?

    ಬೆಂಗಳೂರು: ಅಶ್ಲೀಲ ಪೆನ್‌ ಡ್ರೈವ್‌ ಸುಳಿಯಲ್ಲಿ ಸಿಲುಕಿರುವ ಪ್ರಜ್ವಲ್‌ ರೇವಣ್ಣ (Prajwal Revanna) ಇಂದು ಜರ್ಮನಿಯ (Germany) ಮ್ಯೂನಿಕ್‌ನಿಂದ ಹೊರಟು ಬೆಂಗಳೂರಿಗೆ (Bengaluru) ಬರುವ ಸಾಧ್ಯತೆಯಿದೆ.

    ಲುಫ್ತಾನ್ಸಾ ಏರ್‌ಲೈನ್ಸ್ ಇಂದು ಮಧ್ಯಾಹ್ನ 12:30ಕ್ಕೆ ಮ್ಯೂನಿಕ್‌ನಿಂದ ಹೊರಟು ರಾತ್ರಿ 12:30ಕ್ಕೆ ಬೆಂಗಳೂರಿಗೆ ಆಗಮಿಸಲಿದೆ. ಈ ವಿಮಾನದಲ್ಲಿ ಪ್ರಜ್ವಲ್‌ ರೇವಣ್ಣ ಆಗಮಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: 40 ವರ್ಷದ ರಾಜಕೀಯದಲ್ಲಿ ನನ್ನ ಮೇಲೆ ಇದೇ ಫಸ್ಟ್ ಕೇಸ್: ಜೈಲಿಂದ ಹೊರಬಂದ ರೇವಣ್ಣ ಮೊದಲ ಪ್ರತಿಕ್ರಿಯೆ

     

    ಪ್ರಜ್ವಲ್‌ ರೇವಣ್ಣ ಬುಸಿನೆಸ್‌ ಕ್ಲಾಸ್‌ ಟಿಕೆಟ್‌ ಬುಕ್‌ ಮಾಡಿದ್ದಾರೆ. ಇಲ್ಲಿಯವರೆಗೆ ಟಿಕೆಟ್‌ ಕ್ಯಾನ್ಸಲ್‌ ಮಾಡಿಲ್ಲ. ಕೊನೆ ಕ್ಷಣದಲ್ಲಿ ಟಿಕೆಟ್‌ ರದ್ದು ಮಾಡದೇ ಇದ್ದರೆ ಪ್ರಜ್ವಲ್‌ ರೇವಣ್ಣ ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

    ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (SIT) ಪೊಲೀಸರು ಹೆಚ್‌ಡಿ ರೇವಣ್ಣ (HD Revanna) ಅವರನ್ನು ಬಂಧಿಸಿತ್ತು. ಜನ ಪ್ರತಿನಿಧಿಗಳ ವಿಶೇಷ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ರೇವಣ್ಣ ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.

     

  • ಪ್ರಜ್ವಲ್‌ ರೇವಣ್ಣ ಯಾವುದೇ ದೇಶಕ್ಕೆ ಹೋಗಿರಲಿ, ಹಿಡಿದು ತರ್ತೀವಿ: ಗುಡುಗಿದ ಸಿಎಂ

    ಪ್ರಜ್ವಲ್‌ ರೇವಣ್ಣ ಯಾವುದೇ ದೇಶಕ್ಕೆ ಹೋಗಿರಲಿ, ಹಿಡಿದು ತರ್ತೀವಿ: ಗುಡುಗಿದ ಸಿಎಂ

    ಬಾಗಲಕೋಟೆ: ಪ್ರಜ್ವಲ್ ರೇವಣ್ಣ (Prajwal Revanna) ಎಲ್ಲಿಗಾದರೂ ಎಸ್ಕೇಪ್ ಆಗಲು, ಯಾವುದೇ ದೇಶಕ್ಕೆ ಹೋಗಿರಲಿ, ಅಲ್ಲಿಂದ ಹಿಡಿದು ತರ್ತೀವಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಗುಡುಗಿದ್ದಾರೆ.

    ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ದುಬೈಗೆ (Dubai) ಪ್ರಯಾಣ ಬೆಳೆಸಿದ್ದಾರೆಯೇ ಎಂಬುದರ ಕುರಿತು ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಅವರು ಎಲ್ಲಿಗಾದರೂ ಎಸ್ಕೇಪ್ ಆಗಿರಲಿ, ಯಾವುದೇ ದೇಶಕ್ಕೆ ಹೋಗಿರಲಿ, ಅಲ್ಲಿಂದ ಹಿಡಿದು ತರ್ತೀವಿ ಎಂದು ಸಿಎಂ ಗುಡುಗಿದ್ದಾರೆ. ಇದನ್ನೂ ಓದಿ: ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್‌ ಮಾಡ್ತಿದ್ರು: ಪ್ರಜ್ವಲ್‌ ವಿರುದ್ಧ ಮತ್ತೊಬ್ಬ ಸಂತ್ರಸ್ತೆ ದೂರು

    ಪಾಸ್‌ಪೋರ್ಟ್ ರದ್ದು ಮಾಡುವ ಅಧಿಕಾರ ಇರೋದು ಕೇಂದ್ರ ಸರ್ಕಾರಕ್ಕೆ, ನಾನು ಪ್ರಧಾನಿಗೆ ರದ್ದು ಮಾಡಿ ಅಂದು ಪತ್ರ ಕೂಡ ಬರೆದಿದ್ದೇನೆ. ಆದ್ರೆ ಕೇಂದ್ರ ಸರ್ಕಾರವೇ ಪ್ರಜ್ವಲ್‌ರನ್ನ ರಕ್ಷಣೆ ಮಾಡುತ್ತಿದೆ. ಕುಮಾರಸ್ವಾಮಿ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ನನ್ನ ಮಗ ಇದ್ದ ಹಾಗೆ. ನನ್ನ ಮಗ ಬೇರೆ ಅಲ್ಲ, ಪ್ರಜ್ವಲ್ ಬೇರೆ ಅಲ್ಲ ಅಂದಿದ್ದರು. ಈಗ ಅವರ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂತಿದ್ದಾರೆ. ಅವರು ಎಲ್ಲಾ ಕುಕೃತ್ಯವನ್ನು ಒಟ್ಟಿಗೆ ಮಾಡ್ತಾರೆ, ಆಮೇಲೆ ನಾವಲ್ಲ ಅಂತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಅಲ್ಲದೇ ಪ್ರಜ್ವಲ್ ರೇವಣ್ಣ ಮೇಲೆ ರೇಪ್ ಕೇಸ್ ನೀಡಿದ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯನ್ನ ರೇವಣ್ಣ ಎಸ್ಕೇಪ್ ಮಾಡಿಸಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಆ ಹೆಣ್ಣುಮಗಳು ಎಲ್ಲಿ ಹೋಗಿದ್ದಾರೆ? ಎಂದು ಪತ್ತೆ ಹಚ್ಚಲು ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಮೇಥಿಯಲ್ಲಿ ಗಾಂಧಿ ಕುಟುಂಬಯೇತರ ಅಭ್ಯರ್ಥಿ – ಯಾರಿದು ಕಿಶೋರಿ ಲಾಲ್ ಶರ್ಮಾ?

    ಪ್ರಜ್ವಲ್ ವಿಡಿಯೊ ಬಗ್ಗೆ ಗೊತ್ತಿದ್ದರೂ ಯಾಕೆ ಅಲಯನ್ಸ್ ಮಾಡಿಕೊಂಡರು? ಮೋದಿ ನಾ ಖಾವುಂಗಾ ನಾ ಖಾನೆ ದೂಂಗಾ ಅಂತಾರೆ. ಅದೇ ಜನ ಇನ್ಕಮ್ ಟ್ಯಾಕ್ಸ್, ಇಡಿ ರೇಡ್ ಆದವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಅಪರಾಧಿಗಳನ್ನೆಲ್ಲ ಸೇರಿಸಿಕೊಂಡಿದ್ದಾರೆ, ಅವರೂ ಮಾಡಬಾರದ ಕೆಲಸ ಮಾಡ್ತಾರೆ. ಅಧಿಕಾರ ಮಾಡುವುದಕ್ಕೋಸ್ಕರ ಮಾಡಬಾರದ ಕೆಲಸಗಳನ್ನೇ ಮಾಡ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

    ಹುಬ್ಬಳ್ಳಿ ನೇಹಾ ಕೊಲೆ ಲವ್ ಜಿಹಾದ್ ಎಂಬ ಅಮಿತ್ ಶಾ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ, ಅಮಿತ್ ಶಾ ರಾಜಕೀಯಕ್ಕೋಸ್ಕರ ಹೇಳ್ತಾರೆ. ನೇಹಾ ಪ್ರಕರಣದಲ್ಲಿ ಕೂಡಲೇ ಆರೋಪಿಯನ್ನ ಬಂಧಿಸಿದ್ದೇವೆ. ತನಿಖೆಯನ್ನ ಸಿಐಡಿಗೆ ಕೊಟ್ಟಿದ್ದೆವೆ. ಆರೋಪಿಗೆ ಕಠಿಣ ಶಿಕ್ಷೆ ಕೊಡಬೇಕು ಅಂತ, ಪಬ್ಲಿಕ್ ಪ್ರಾಸಿಕ್ಯೂಟರ್ ಜೊತೆಗೆ ಮಾತನಾಡಿ ಸ್ಪೇಷಲ್ ಕೋರ್ಟ್ ಮಾಡಿದ್ದೇವೆ. ಸರ್ಕಾರ ಕಾನೂನು ಪ್ರಕಾರ ಏನೆಲ್ಲಾ ಮಾಡಲು ಸಾಧ್ಯವೋ ಅದೆಲ್ಲವನ್ನೂ ಮಾಡಿದ್ದೇವೆ ಎಂದು ಹೇಳಿದ್ದಾರೆ.

    ರಾಜಕೀಯಕ್ಕೋಸ್ಕರ ನೇಹಾ ಪ್ರಕರಣದ ಬಗ್ಗೆ ಮಾತನಾಡುವ ಅಮಿತ್ ಶಾ, ಮಣಿಪುರ ಘಟನೆ ಬಗ್ಗೆ ಯಾಕೆ ಮಾತಾಡಲಿಲ್ಲ? ದೇಶದ ಗೃಹಸಚಿವರಾಗಿ ಏನು ಮಾಡಿದರು? ಅಲ್ಲಿ ಬಿಜೆಪಿ ಸಿಎಂ ಇದ್ದಾರೆ, ಅವರನ್ನ ಬದಲಾಯಿಸಿದ್ರಾ? ಸರ್ಕಾರವನ್ನ ವಜಾಗೊಳಿಸಿದ್ರಾ ಎಂದು ಪ್ರಶ್ನೆಗಳ ಮಳೆಗರೆದಿದ್ದಾರೆ. ಇದನ್ನೂ ಓದಿ: ಬಿರುಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ಫುಲ್‌ ಟ್ಯಾಂಕ್‌ ಮಾಡಿಸಿದ್ರೆ ಸಮಸ್ಯೆ ಆಗಲ್ಲ: ಇಂಡಿಯನ್‌ ಆಯಿಲ್‌ ಸ್ಪಷ್ಟನೆ

  • ಜರ್ಮನಿಯಲ್ಲಿ ಹಮಾಸ್‌ ಚಟುವಟಿಕೆಗೆ ಸಂಪೂರ್ಣ ನಿಷೇಧ

    ಜರ್ಮನಿಯಲ್ಲಿ ಹಮಾಸ್‌ ಚಟುವಟಿಕೆಗೆ ಸಂಪೂರ್ಣ ನಿಷೇಧ

    ಬರ್ಲಿನ್: ಜರ್ಮನಿಯು (Germany) ಹಮಾಸ್‌ನ ಚಟುವಟಿಕೆಗಳ ಮೇಲೆ ಸಂಪೂರ್ಣ ನಿಷೇಧ ಘೋಷಿಸಿದೆ. ಇಸ್ರೇಲ್ (Israel) ವಿರೋಧಿ ಮತ್ತು ಯಹೂದ್ಯ ವಿರೋಧಿ ವಿಚಾರಗಳನ್ನು ಹರಡುತ್ತಿರುವ ಈ ಗುಂಪನ್ನು ವಿಸರ್ಜಿಸಲು ಆದೇಶಿಸಲಾಗಿದೆ.

    ಜರ್ಮನಿಯ ಆಂತರಿಕ ಸಚಿವ ನ್ಯಾನ್ಸಿ ಫೈಸರ್, ಹಮಾಸ್‌ (Hamas) ಅಥವಾ ಅದನ್ನು ಬೆಂಬಲಿಸುವ ಚಟುವಟಿಕೆಯ ಮೇಲೆ ನಿಷೇಧ ಹೇರಲಾಗಿದೆ. ಇದನ್ನು ದೇಶದಲ್ಲಿ “ಭಯೋತ್ಪಾದಕ” ಸಂಘಟನೆ ಎಂದು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ – 195 ಮಂದಿ ಸಾವು

    ಹಮಾಸ್‌ ಅಷ್ಟೇ ಅಲ್ಲ, ಇಸ್ರೇಲ್ ರಾಷ್ಟ್ರವನ್ನು ನಾಶಮಾಡುವ ಗುರಿ ಹೊಂದಿರುವ ಭಯೋತ್ಪಾದಕ ಸಂಘಟನೆಯ ಚಟುವಟಿಕೆಗಳನ್ನು ನಾವು ಸಂಪೂರ್ಣವಾಗಿ ನಿಷೇಧಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಹಮಾಸ್‌ ಅಧಿಕಾರಿಯೊಬ್ಬರು, ಪ್ಯಾಲೆಸ್ತೀನಿಯನ್‌ ಜನರ ವಿರುದ್ಧದ ಅಪರಾಧಗಳಲ್ಲಿ ಇಸ್ರೇಲ್‌ನೊಂದಿಗೆ ಜರ್ಮನಿ ಕೂಡ ಪಾಲುದಾರಿಕೆ ಹೊಂದಿದೆ ಎಂಬುದನ್ನು ಈ ನಿರ್ಧಾರ ತೋರಿಸುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಅ.7 ರಿಂದ ನಡೆಯುತ್ತಿರುವ ಸಂಘರ್ಷದಲ್ಲಿ ಕನಿಷ್ಠ 1,400 ಮಂದಿ ಹತ್ಯೆಯಾಗಿದ್ದಾರೆ. ಅದರಲ್ಲಿ ಹೆಚ್ಚಿನವರು ನಾಗರಿಕರೇ ಸೇರಿದ್ದಾರೆ. ಹಮಾಸ್‌ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳಲು ಇಸ್ರೇಲ್ ಗಾಜಾದ ಮೇಲೆ ಬಾಂಬ್ ದಾಳಿ ಮಾಡಿದೆ. ಪ್ರದೇಶದ ಮೇಲೆ ತನ್ನ ದಿಗ್ಬಂಧನವನ್ನು ಬಿಗಿಗೊಳಿಸಿದೆ. ಇಂಧನ, ಆಹಾರ, ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಿದೆ. ಇದನ್ನೂ ಓದಿ: ಇಸ್ರೇಲ್‌ಗೆ ಪಾಠ ಕಲಿಸದೇ ಬಿಡಲ್ಲ: ಗುಡುಗಿದ ಹಮಾಸ್‌

    ಗಾಜಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 3,760 ಮಕ್ಕಳು ಸೇರಿದಂತೆ 9,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾ ಅಧಿಕಾರಿಗಳು ತಿಳಿಸಿದ್ದಾರೆ. ಗಾಜಾದಲ್ಲಿ (Gaza) ಜನರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಹೀಗಾಗಿ ಇಸ್ರೇಲ್‌ ನಿಯಂತ್ರಣದಲ್ಲಿ ಇಲ್ಲದ ರಫಾ ಕ್ರಾಸಿಂಗ್‌ ಗಡಿ ದಾಟಿ ಈಜಿಪ್ಟ್‌ಗೆ ಜನರು ವಲಸೆ ಹೋಗುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಡ್ಡಿಗೆ ಸಾಲ ಪಡೆದು ಜರ್ಮನಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬೆಳಗಾವಿ ಯುವತಿಗೆ ಚಿನ್ನ, ಬೆಳ್ಳಿ, ಕಂಚಿನ ಪದಕ

    ಬಡ್ಡಿಗೆ ಸಾಲ ಪಡೆದು ಜರ್ಮನಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬೆಳಗಾವಿ ಯುವತಿಗೆ ಚಿನ್ನ, ಬೆಳ್ಳಿ, ಕಂಚಿನ ಪದಕ

    ಬೆಳಗಾವಿ: ಬಡ್ಡಿಗೆ ಸಾಲ ಪಡೆದು ಜರ್ಮನಿಯಲ್ಲಿ (Germany) ನಡೆದ 8ನೇ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ (World Dwarf Games) ಭಾಗವಹಿಸಿದ್ದ ಬೆಳಗಾವಿಯ (Belagavi) ಯುವತಿ ಮೂರು ಪದಕ ಗೆದ್ದು ವಿಶೇಷ ಸಾಧನೆ ಮಾಡಿದ್ದಾರೆ.

    ಹೌದು. ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಯುವತಿ ಮಂಜುಳಾ ಶಿವಾನಂದ ಗೊರಗುದ್ದಿ, ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಸಾಧನೆ ಮಾಡಿ ತೋರಿಸಿದ್ದಾರೆ. ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ, ಚಕ್ರ ಎಸೆತದಲ್ಲಿ 2ನೇ ಸ್ಥಾನ ಪಡೆದು ಬೆಳ್ಳಿ ಪದಕ ಹಾಗೂ ಜಾವೆಲಿನ್ ಥ್ರೋದಲ್ಲಿ (Javelin Throw) 3ನೇ ಸ್ಥಾನ ಪಡೆದು ಕಂಚಿನ ಪದಕ ಬಾಚಿಕೊಂಡಿದ್ದಾರೆ. ಇದನ್ನೂ ಓದಿ: ಹೊಸ ಕೋಚ್ ನೇಮಿಸಿದ RCB – ಮುಂದಿನ ಸಲ ಕಪ್ ನಮ್ದೆ ಅಂತಿದ್ದಾರೆ ಫ್ಯಾನ್ಸ್

    ಜುಲೈ 28ರಿಂದ ಆಗಸ್ಟ್ 4ರ ವರೆಗೆ ಆಯೋಜನೆಗೊಂಡಿದ್ದ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ತನ್ನ ಸಾಮರ್ಥ್ಯ ಸಾಬೀತು ಮಾಡಿರುವ ಮಂಜುಳಾ ಅವರು ಮೂರು ದಿನಗಳಲ್ಲಿ ಪದಕಗಳೊಂದಿಗೆ ತವರಿಗೆ ಮರಳಲಿದ್ದಾರೆ. ಸುಮಾರು 2.5 ಲಕ್ಷ ರೂ. ಹಣ ಹೊಂದಿಸಿ ದೂರದ ಜರ್ಮನಿಗೆ ಹೋಗಿದ್ದ ಮಂಜುಳಾ ಪದಕ ಗೆಲ್ಲುವ ತನ್ನ ಕನಸು-ನನಸು ಮಾಡಿಕೊಳ್ಳುವ ಮೂಲಕ ವಿದೇಶದಲ್ಲೂ ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚುವಂತೆ ಮಾಡಿದ್ದಾರೆ. ಇದನ್ನೂ ಓದಿ: T20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ಸೋಲಿಗೆ ಕಾರಣವಾಗಿದ್ದ ಇಂಗ್ಲೆಂಡ್‌ ಬ್ಯಾಟರ್‌ ನಿವೃತ್ತಿ ಘೋಷಣೆ

    ಈ ಬಗ್ಗೆ ವೀಡಿಯೋದಲ್ಲಿ ಹೇಳಿಕೆ ನೀಡಿರುವ ಮಂಜುಳಾ,‌ ವಿದೇಶಿ ನೆಲದಲ್ಲಿ ಮೂರು ಪದಕ ಗೆದ್ದಿರುವುದು ತುಂಬಾ ಖುಷಿ ಕೊಟ್ಟಿದೆ. ಈ ಪದಕಗಳನ್ನ ಭಾರತ ದೇಶಕ್ಕೆ ಮತ್ತು ನನ್ನ ತಾಯಿಗೆ ಅರ್ಪಿಸುತ್ತೇನೆ. ಮುಂದೆ ಇನ್ನೂ ಹೆಚ್ಚಿನ ಸಾಧನೆ ಮಾಡುವ ಹುಮ್ಮಸ್ಸು ನನಗೆ ಬಂದಿದೆ ಎಂದಿದ್ದಾರೆ.

    ಒಟ್ಟಿನಲ್ಲಿ ಸಾಧಿಸುವ ಛಲವೊಂದಿದ್ದರೆ ಏನೂ ಬೇಕಾದ್ರೂ ಮಾಡಬಹುದು ಅನ್ನೋದಕ್ಕೆ ಮಂಜುಳಾ ಉದಾಹರಣೆಯಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜರ್ಮನಿಯಲ್ಲಿ ಆರ್ಥಿಕ ಹಿಂಜರಿತ

    ಜರ್ಮನಿಯಲ್ಲಿ ಆರ್ಥಿಕ ಹಿಂಜರಿತ

    ಬರ್ಲಿನ್: ಜರ್ಮನಿಯಲ್ಲಿ (Germany) ಕುಟುಂಬಗಳು ಖರ್ಚು ವಚ್ಚಗಳನ್ನು ಬಿಗಿಗೊಳಿಸಿರುವ ಹಿನ್ನೆಲೆ ಈ ವರ್ಷದ ತ್ರೈಮಾಸಿಕದಲ್ಲಿ ಆರ್ಥಿಕತೆಯಲ್ಲಿ ಹಿಂಜರಿತ (Recession) ಕಂಡಿದೆ.

    ಗುರುವಾರ ಜರ್ಮನಿಯ ಅಂಕಿಅಂಶಗಳ ಕಚೇರಿ ವರ್ಷದ ಮೊದಲ ತ್ರೈಮಾಸಿಕ ಜಿಡಿಪಿ (ಒಟ್ಟು ದೇಶೀಯ ಉತ್ಪನ್ನ) ವರದಿಯನ್ನು ಬಿಡುಗಡೆಗೊಳಿಸಿದೆ. ಜಿಡಿಪಿ (GDP) ಬೆಳವಣಿಗೆ ದರ 0.3%ಕ್ಕೆ ಇಳಿದಿದ್ದು, ಇದೀಗ ಜರ್ಮನಿ ಆರ್ಥಿಕ ಹಿಂಜರಿತದ ಹಾದಿಯಲ್ಲಿದೆ.

     

    2022ರ ಕೊನೆಯ ತ್ರೈಮಾಸಿಕ ವರದಿಯಲ್ಲಿ ಜರ್ಮನಿಯ ಜಿಡಿಪಿ 0.5% ರಷ್ಟು ಇಳಿಕೆಯಾಗಿತ್ತು. ಇದಾದ ಬಳಿಕ ಗುರುವಾರ ಬಿಡುಗಡೆಯಾಗಿರುವ ಜಿಡಿಪಿಯಲ್ಲಿಯೂ ಕುಸಿತ ಕಂಡಿದೆ. ಸತತ ಎರಡು ತ್ರೈಮಾಸಿಕಗಳ ಜಿಡಿಪಿ ಕುಸಿತವಾದರೆ ಅದನ್ನು ತಾಂತ್ರಿಕ ಹಿಂಜರಿತ ಎಂದು ಕರೆಯಲಾಗುತ್ತದೆ.

    ಉಕ್ರೇನ್‌ನ ಮೇಲೆ ರಷ್ಯಾ ಆಕ್ರಮಣ ಮಾಡಿದ ಬಳಿಕ ಮಾಸ್ಕೋದೊಂದಿಗೆ ಸಂಬಂಧಗಳನ್ನು ಕಡಿತಗಿಳಿಸುವ ನಾಯಕರ ನಿರ್ಧಾರದಿಂದ ಯುರೋಪ್‌ನ ಅತಿ ದೊಡ್ಡ ಆರ್ಥಿಕತೆ ಇದೀಗ ಒತ್ತಡದಲ್ಲಿದೆ. ಕೆಲ ಅಂಕಿ ಅಂಶಗಳ ಪ್ರಕಾರ ಮೊದಲ ತ್ರೈಮಾಸಿಕದಲ್ಲಿ ಜರ್ಮನ್‌ನಲ್ಲಿ ನಾಗರಿಕರು ತಮ್ಮ ಗೃಹಬಳಕೆಯ ಖರ್ಚನ್ನು ತೀವ್ರವಾಗಿ ಕಡಿಮೆ ಮಾಡಿದ್ದಾರೆ. ಗ್ರಾಹಕರು ತಮ್ಮ ಹಣವನ್ನು ಬಟ್ಟೆ, ಪೀಠೋಪಕರಣ, ವಾಹನ ಸೇರಿದಂತೆ ದುಬಾರಿ ವಸ್ತುಗಳಿಗಾಗಿ ವ್ಯಯಿಸಲು ಇಷ್ಟಪಡುತ್ತಿಲ್ಲ. ಈ ಹಿನ್ನೆಲೆ ಅಂತಿಮ ಬಳಕೆಯ ವೆಚ್ಚ 1.2% ರಷ್ಟು ಕುಸಿದಿದೆ. ಇದನ್ನೂ ಓದಿ: ಸಂಸತ್‌ ಕಟ್ಟಡವನ್ನು ರಾಷ್ಟ್ರಪತಿ ಉದ್ಘಾಟಿಸಲಿ: ಸುಪ್ರೀಂನಲ್ಲಿ ಪಿಐಎಲ್‌ ಸಲ್ಲಿಕೆ

    ಕಳೆದ ವರ್ಷದ ಕೊನೆಯಲ್ಲಿ ಜರ್ಮನಿ ಆರ್ಥಿಕ ಹಿಂಜರಿತಕ್ಕೆ ಸಿಲುಕಿಕೊಂಡಿತು. ಇದಕ್ಕೆ ಮುಖ್ಯ ಕಾರಣ ಇಂಧನ ಬೆಲೆಯಲ್ಲಿನ ಏರಿಕೆ. ಈ ಹಿನ್ನೆಲೆ ಗ್ರಾಹಕರು ತಮ್ಮ ಖರ್ಚು ವೆಚ್ಚಗಳನ್ನು ಮಿತವಾಗಿ ಬಳಸುತ್ತಿದ್ದಾರೆ ಎಂದು ಪ್ಯಾಂಥಿಯಾನ್ ಮ್ಯಾಕ್ರೋ ಎಕನಾಮಿಕ್ಸ್‌ನ ಮುಖ್ಯ ಯೂರೋ ವಲಯದ ಅರ್ಥಶಾಸ್ತ್ರಜ್ಞ ಕ್ಲಾಸ್ ವಿಸ್ಟೆಸೆನ್ ತಿಳಿಸಿದ್ದಾರೆ. ಇದನ್ನೂ ಓದಿ: IPL 2023: ಧೋನಿಯಿಂದ ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ- ಲಾಸ್ಟ್ 5 ಓವರ್‌ಗೂ ಮುನ್ನ ನಡೆದಿದ್ದೇನು?

  • ಚರ್ಚ್ ಮೇಲೆ ಗುಂಡಿನ ದಾಳಿ 7 ಮಂದಿ ಸಾವು- ಹಲವರಿಗೆ ಗಾಯ

    ಚರ್ಚ್ ಮೇಲೆ ಗುಂಡಿನ ದಾಳಿ 7 ಮಂದಿ ಸಾವು- ಹಲವರಿಗೆ ಗಾಯ

    ಬರ್ಲಿನ್: ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಜರ್ಮನಿಯ (Germany) ಹ್ಯಾಮ್‍ಬರ್ಗ್‍ನ (Hamburg) ಯೆಹೋವ್‌ನ (Jehovah) ವಿಟ್‍ನೆಸ್ ಚರ್ಚ್‍ನಲ್ಲಿ (witness church) ನಡೆದಿದೆ.

    ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿ ನಡೆಸಿದವರು ಪರಾರಿಯಾಗಿರುವ ಅಥವಾ ಸಾವಿಗೀಡಾದ ಬಗ್ಗೆ ಮಾಹಿತಿ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ- CBIವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ

    ರಾತ್ರಿ 9:15ರ ಸಮಯದಲ್ಲಿ ಪೊಲೀಸರಿಗೆ ತುರ್ತು ಕರೆಯೊಂದು ಬಂದಿದೆ. ಕರೆಯ ಆಧಾರದ ಮೇಲೆ ಚರ್ಚ್ ಬಳಿಗೆ ತೆರಳಿದ ಪೊಲೀಸರು ಗಾಯಗೊಂಡವರ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

    ಗುಂಡಿನ ದಾಳಿ ನಡೆಸಿದ ಆರೋಪಿಗಳಿಗಾಗಿ ಪೊಲೀಸರು ಹೆಲಿಕಾಪ್ಟರ್ (Helicopter) ಮೂಲಕ ಥರ್ಮಲ್ ಇಮ್ಯಾಜಿಂಗ್ ಕ್ಯಾಮೆರಾ (Thermal imaging camera) ಬಳಸಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಾರ್ಯಾಚರಣೆಗೆ ಅನುಕೂಲವಾಗುವಂತೆ ಸ್ಥಳೀಯ ನಿವಾಸಿಗಳಿಗೆ ಬೇರೆ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

    ಗುಂಡಿನ ದಾಳಿಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಜನರು ವದಂತಿಗಳಿಗೆ ಕಿವಿಗೊಡದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಇದನ್ನೂ ಓದಿ: ನಿಂತಿದ್ದ BMTC ಬಸ್ಸಿನಲ್ಲಿ ಬೆಂಕಿ- ಮಲಗಿದ್ದಲ್ಲೇ ಕಂಡಕ್ಟರ್ ಸಜೀವ ದಹನ

  • ವಿದೇಶದಲ್ಲಿ ಕ್ರೇಜ್ ಕ್ರಿಯೇಟ್ ಮಾಡಿದ ಶಾರುಖ್ ಖಾನ್ ‘ಪಠಾಣ್’ ಸಿನಿಮಾ

    ವಿದೇಶದಲ್ಲಿ ಕ್ರೇಜ್ ಕ್ರಿಯೇಟ್ ಮಾಡಿದ ಶಾರುಖ್ ಖಾನ್ ‘ಪಠಾಣ್’ ಸಿನಿಮಾ

    ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಕಾಂಬಿನೇಷನ್ ನ ಪಠಾಣ್ ಸಿನಿಮಾ ಭಾರತದಲ್ಲಿ ವಿವಾದಕ್ಕೆ ತುತ್ತಾದರೆ ವಿದೇಶದಲ್ಲಿ ಭರ್ಜರಿ ಓಪನಿಂಗ್ ಪಡೆದುಕೊಳ್ಳುವ ಭರವಸೆ ಸಿಕ್ಕಿದೆ. ಜರ್ಮನ್ ಸೇರಿದಂತೆ ಹಲವು ದೇಶಗಳಲ್ಲಿ ಈಗಾಗಲೇ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ಕಲ್ಪಿಸಲಾಗಿದ್ದು, ಜರ್ಮನ್ ನಲ್ಲಿ ವಾರಂತ್ಯದ ಬಹುತೇಕ ಟಿಕೆಟ್ ಖರೀದಿಯಾಗಿವೆ. ಸಿನಿಮಾ ಬಿಡುಗಡೆಗೆ ಇನ್ನೂ 27 ದಿನಗಳು ಬಾಕಿ ಇದ್ದರೂ ಕ್ರೇಜ್ ಮಾತ್ರ ಬಿಡುಗಡೆಯ ದಿನದಂತೆ ಇದೆ.

    ‘ಪಠಾಣ್’ ಸಿನಿಮಾದ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದರೂ ಮತ್ತು ಕೇಸರಿ ಬಣ್ಣಕ್ಕೆ ಅವಮಾನಿಸಲಾಗಿದೆ ಎನ್ನುವ ಕಾರಣಕ್ಕಾಗಿ ಚಿತ್ರವನ್ನು ಬಾಯ್ಕಾಟ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಹೋರಾಟ ಮಾಡಲಾಯಿತು. ಅಲ್ಲದೇ ಕೆಲವರು ಬೀದಿಗೆ ಇಳಿದು ಕೂಡ ಪ್ರತಿಭಟನೆ ಮಾಡಿದರು. ಕೆಲ ರಾಜ್ಯಗಳಲ್ಲಿ ಹೋರಾಟ ಇನ್ನೂ ತೀವ್ರವಾಗಿತ್ತು. ಆದರೆ, ವಿದೇಶದಲ್ಲಿ ಇದ್ಯಾವುದೂ ಟೆನ್ಷನ್ ಇಲ್ಲದೇ ಚಿತ್ರ ರಿಲೀಸ್ ಗೆ ರೆಡಿಯಾಗುತ್ತಿದೆ. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ ಮಾಡಲು ಲಂಡನ್‌ಗೆ ಹಾರಿದ ರಮ್ಯಾ- ಅಮೃತಾ

    ಈಗಷ್ಟೇ ಪಠಾಣ್ ಸಿನಿಮಾ ಸೆನ್ಸಾರ್ ಅಂಗಳದಲ್ಲಿ ಇತ್ತು. ಕೆಲ ಬದಲಾವಣೆಗಳನ್ನು ಸೂಚಿಸಿರುವ ಕಾರಣದಿಂದಾಗಿ ಇನ್ನೂ ಅದಕ್ಕೆ ಸೆನ್ಸಾರ್ ಪ್ರಮಾಣ ಪತ್ರ ಸಿಕ್ಕಿಲ್ಲ. ಸೆನ್ಸಾರ್ ಮಂಡಳಿಯವರು ಹೇಳಿದ ಬದಲಾವಣೆಗಳನ್ನು ಮಾಡಿ, ಮತ್ತೆ ಸಿನಿಮಾ ತೋರಿಸಬೇಕಿದೆ. ಹೀಗಾಗಿ ಅನೌನ್ಸ್ ಮಾಡಿರುವ ದಿನಾಂಕದಂದು ಸಿನಿಮಾ ರಿಲೀಸ್ ಆಗುತ್ತದಾ ಎನ್ನುವ ಪ್ರಶ್ನೆ ಕೂಡ ಉದ್ಭವಿಸಿದೆ. ಆದರೂ, ವಿದೇಶಗಳಲ್ಲಿ ಚಿತ್ರದ ಟಿಕೆಟ್ ಅನ್ನು ನಿನ್ನೆಯಿಂದಲೇ ಮಾರಾಟ ಮಾಡಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]