Tag: ಜಲಾಶಯ

  • ಭಾರತ ಕೊಟ್ಟ ಶಾಕ್‌ಗೆ ತತ್ತರ – ನೆರೆ ತುರ್ತು ಪರಿಸ್ಥಿತಿ ಘೋಷಿಸಿದ ಪಾಕ್‌

    ಭಾರತ ಕೊಟ್ಟ ಶಾಕ್‌ಗೆ ತತ್ತರ – ನೆರೆ ತುರ್ತು ಪರಿಸ್ಥಿತಿ ಘೋಷಿಸಿದ ಪಾಕ್‌

    – ಝಿಲಂ ನದಿಯಲ್ಲಿ ಭಾರೀ ಪ್ರವಾಹ
    – ಸಿಂಧೂ ನದಿಯ ಒಪ್ಪಂದವನ್ನು ಅಮಾನತಿನಲ್ಲಿಟ್ಟ ಭಾರತ

    ಇಸ್ಲಾಮಾಬಾದ್‌: ನೀರು (Water) ಹರಿಯುವುದನ್ನು ನಿಲ್ಲಿಸಿದರೆ ನಾವು ಭಾರತದಲ್ಲಿ (India) ರಕ್ತದ ನದಿಯನ್ನು ಹರಿಸುತ್ತೇವೆ ಎಂದಿದ್ದ ಪಾಕಿಸ್ತಾನದಲ್ಲಿ (Pakistan) ಈಗ ದಿಢೀರ್‌ ಪ್ರವಾಹ ಉಂಟಾಗಿದೆ.

    ಭಾರತ ಉರಿ ಜಲಾಶಯದಿಂದ (Uri Dam) ಝಿಲಂ ನದಿಗೆ (Jhelum River) ಭಾರೀ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡಿದ್ದರಿಂದ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ (PoK) ಮುಜಾಫರಾಬಾದ್‌ನಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹದ ಬೆನ್ನಲ್ಲೇ ನದಿ ದಂಡೆಯಲ್ಲಿ ವಾಸಿಸುವ ನಿವಾಸಿಗಳು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳಿಸಲಾಗಿದೆ.

    ಯಾವುದೇ ಪೂರ್ವಸೂಚನೆ ನೀಡದೇ ಭಾರತ ಏಕಾಏಕಿ ನದಿಗೆ ನೀರನ್ನು ಹರಿಸಿದೆ ಎಂದು ಪಾಕ್‌ ಮಾಧ್ಯಮಗಳು ಭಾರತದ ವಿರುದ್ಧ ಆರೋಪ ಮಾಡಿದೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿ ಬೆಂಬಲಿಸಿ ಪೋಸ್ಟ್‌ – ಶಾಸಕ, ಶಿಕ್ಷಕ, ವಕೀಲ ಸೇರಿ 19 ಮಂದಿ ಅರೆಸ್ಟ್‌

    ಝೀಲಂ ನದಿಯ ದಡದಲ್ಲಿರುವ ಮುಜಫರಾಬಾದ್‌ನಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಹಟ್ಟಿಯನ್ ಬಾಲಾದಲ್ಲಿ ಸ್ಥಳೀಯ ಆಡಳಿತವು ನೆರೆಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಮಸೀದಿಗಳಲ್ಲಿ ಧ್ವನಿವರ್ಧಕದ ಮೂಲಕ ಪ್ರಕಟಣೆ ಹೊರಡಿಸಲಾಗಿದ್ದು ನದಿಗೆ ಇಳಿಯದಂತೆ ಸ್ಥಳೀಯರಿಗೆ ಎಚ್ಚರಿಕೆ ನೀಡಿದೆ. ಈ ಪ್ರಕಟಣೆಯಿಂದ ನದಿ ದಂಡೆಗಳ ಬಳಿ ವಾಸಿಸುವ ನಿವಾಸಿಗಳಲ್ಲಿ ಭೀತಿಯನ್ನು ಸೃಷ್ಟಿಸಿದೆ ಎಂದು ವರದಿ ಮಾಡಿವೆ.  ಇದನ್ನೂ ಓದಿ: ಜಮ್ಮು ಕಾಶ್ಮೀರ | ಉಗ್ರರ ಗುಂಡೇಟಿಗೆ ಸಾಮಾಜಿಕ ಕಾರ್ಯಕರ್ತ ಬಲಿ

    ಕಾಶ್ಮೀರದ ಅನಂತನಾಗ್‌ನಿಂದ ನೀರು ಪ್ರವೇಶಿಸಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಚಕೋತಿ ಪ್ರದೇಶದ ನೀರಿನ ಮಟ್ಟ ದಿಢೀರ್‌ ಏರಿಕೆಯಾಗಿದೆ. ಪಾಕಿಸ್ತಾನದ ಅಧಿಕಾರಿಗಳು ಈ ನಿರ್ಧಾರವನ್ನು ಖಂಡಿಸಿದ್ದು ಇದು ಅಂತರರಾಷ್ಟ್ರೀಯ ನಿಯಮಗಳು ಮತ್ತು ನೀರಿನ ಒಪ್ಪಂದಗಳ ಸಂಪೂರ್ಣ ಉಲ್ಲಂಘನೆ ಎಂದು ಹೇಳಿದ್ದಾರೆ.

    ನೀರು ರಭಸವಾಗಿ ಹರಿಯಲು ಆರಂಭಿಸಿತ್ತು. ನಾವು ಜೀವ ಮತ್ತು ಆಸ್ತಿಯನ್ನು ರಕ್ಷಿಸಲು ಈಗ ಹೆಣಗಾಡುತ್ತಿದ್ದೇವೆ ಎಂದು ಪಾಕ್‌ ಆಕ್ರಮಿತ ಕಾಶ್ಮೀರದ ನದಿ ದಂಡೆಯಲ್ಲಿರುವ ಡುಮೆಲ್ ಎಂಬ ಹಳ್ಳಿಯ ನಿವಾಸಿ ಹೇಳಿದ್ದಾರೆ

    ಭಾರತವು ಉದ್ದೇಶಪೂರ್ವಕ ‘ಜಲ ಭಯೋತ್ಪಾದನೆಯಲ್ಲಿ’ ತೊಡಗಿದೆ ಎಂದು ಪಿಒಕೆ ಸರ್ಕಾರ ಆರೋಪಿಸಿದೆ. ಹಟ್ಟಿಯನ್ ಬಾಲಾದಲ್ಲಿ ಆಡಳಿತವು ತಾತ್ಕಾಲಿಕ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನಾವು ನಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದೇವೆ. ಆದರೆ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

    ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಡೆಸಿದ ಬಳಿಕ ಭಾರತ ಸಿಂಧೂ ನದಿ ಒಪ್ಪಂದವನ್ನು ಅಮಾನತಿನಲ್ಲಿಟ್ಟಿದೆ. ಒಪ್ಪಂದವನ್ನು ಅಮಾನತಿನಲ್ಲಿಟ್ಟ ಕಾರಣ ಭಾರತ ಯಾವಾಗ ಬೇಕಾದರೂ ಪಾಕಿಸ್ತಾನಕ್ಕೆ ಮಾಹಿತಿ ನೀಡದೇ ನೀರನ್ನು ಹರಿಸಬಹುದಾಗಿದೆ. ಉರಿ ಜಲಾಶಯದಿಂದ ನೀರನ್ನು ಹರಿಸಿದ ಬಗ್ಗೆ ಭಾರತ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಕೋಲಾರದಲ್ಲಿ 16 ವರ್ಷಗಳ ಬಳಿಕ ಪೂರ್ಣಗೊಂಡ ಹೊಸ ಜಲಾಶಯ

    ಕೋಲಾರದಲ್ಲಿ 16 ವರ್ಷಗಳ ಬಳಿಕ ಪೂರ್ಣಗೊಂಡ ಹೊಸ ಜಲಾಶಯ

    ಕೋಲಾರ: 16 ವರ್ಷಗಳ ಬಳಿಕ ಯರಗೋಳ್ (Yuragol) ಬಳಿ ಜಲಾಶಯವೊಂದರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಸುಂದರವಾದ ಬೆಟ್ಟಗುಡ್ಡಗಳ ನಡುವೆ ಹರಿದು ತಮಿಳುನಾಡು (Tamil Nadu) ಸೇರುತ್ತಿದ್ದ ನೀರಿಗೆ ಅಡ್ಡಲಾಗಿ ಡ್ಯಾಂ (Dam) ನಿರ್ಮಾಣ ಮಾಡಿ ಕೋಲಾರ, ಮಾಲೂರು ಸೇರಿದಂತೆ 42 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಯನ್ನು 2006ರಲ್ಲಿ ರೂಪಿಸಲಾಗಿತ್ತು. ಆದರೆ ಕಾಮಗಾರಿ ವಿಳಂಬವಾಗಿದ್ದು, 16 ವರ್ಷಗಳ ಬಳಿಕ ಯೋಜನೆ ಪೂರ್ಣಗೊಂಡಿದೆ.

    ಈ ಬೆನ್ನಲ್ಲೇ ಯರಗೋಳ್ ಜಲಾಶಯದ ಸುತ್ತಲೂ ಹಸಿರ ಸುಂದರ ವಾತಾವರಣ, ಜಲಾಶಯ ಹಾಗೂ ನೀರು ಬಯಲು ಸೀಮೆ ಜನರನ್ನು ಕೈಬೀಸಿ ಕರೆಯುತ್ತಿದೆ. ಯರಗೋಳ್ ಡ್ಯಾಂ ಕೋಲಾರ ಜಿಲ್ಲಾ ಕೇಂದ್ರದಿಂದ ಸುಮಾರು 45 ಕಿ.ಮೀ ದೂರವಿದ್ದು ತಮಿಳುನಾಡು ಹಾಗೂ ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಂತಿದೆ. ಹಾಗಾಗಿ ಕೇವಲ ಕೋಲಾರ ಜಿಲ್ಲೆಯ ಜನರಷ್ಟೇ ಅಲ್ಲಾ ಗಡಿ ಭಾಗದಿಂದ ಹೊರ ರಾಜ್ಯದ ಜನರು ಕೂಡಾ ಬಂದು ಡ್ಯಾಂ ನೋಡಿ ಖುಷಿ ಪಡುವಂತಹ ಸ್ಥಳವಾಗಿದೆ. ಇದನ್ನೂ ಓದಿ: Kanpur| ಖಾಸಗಿ ಆಸ್ಪತ್ರೆ ನಿರ್ದೇಶಕನಿಂದ 22 ವರ್ಷದ ನರ್ಸ್ ಮೇಲೆ ಅತ್ಯಾಚಾರ

    ಸುಂದರ ವಾತಾವರಣದಲ್ಲಿ ಕುಟುಂಬ ಸಮೇತರಾಗಿ ಬಂದು ಕೆಲ ಸಮಯ ಇಲ್ಲಿ ಕಳೆದು ಖುಷಿಪಟ್ಟು ಹೋಗುವಂತಿದೆ. ಹಾಗಾಗಿ ಇಲ್ಲಿ ಅರಣ್ಯ ಇಲಾಖೆ ಪ್ರವಾಸಿಗರನ್ನು ಆಕರ್ಷಿಸಲು ಹಲವು ಯೋಜನೆಗಳನ್ನು ಸಿದ್ಧ ಮಾಡಿದೆ. ಸರ್ಕಾರದಿಂದ ಅನುಮತಿ ಸಿಕ್ಕ ಕೂಡಲೇ ಸುಂದರ ತಾಣವಾಗಿಸಲು ಮುಂದಾಗಿದೆ. ಇದನ್ನೂ ಓದಿ: ಚಾಮರಾಜನಗರ| ‘ಮಿಸ್ಟರ್‌ ಬಿಆರ್‌ಟಿ’ ಎಂದೇ ಹೆಸರಾಗಿದ್ದ ವಕ್ರದಂತ ಹೊಂದಿದ್ದ ಕಾಡಾನೆ ಸಾವು

  • ಸುಡಾನ್‌ನಲ್ಲಿ ಭಾರೀ ಮಳೆಗೆ ಕೊಚ್ಚಿ ಹೋಯ್ತು ಅಣೆಕಟ್ಟು – 60 ಸಾವು, ಹಲವು ಮಂದಿ ನಾಪತ್ತೆ

    ಸುಡಾನ್‌ನಲ್ಲಿ ಭಾರೀ ಮಳೆಗೆ ಕೊಚ್ಚಿ ಹೋಯ್ತು ಅಣೆಕಟ್ಟು – 60 ಸಾವು, ಹಲವು ಮಂದಿ ನಾಪತ್ತೆ

    ಅರ್ಬತ್ (ಸುಡಾನ್): ಯುದ್ಧ ಪೀಡಿತ ಸುಡಾನ್‌ನಲ್ಲಿ (Sudan) ಭಾರೀ ಮಳೆಯಿಂದಾಗಿ ಅಣೆಕಟ್ಟು (Dam Burst) ಒಡೆದು ಕನಿಷ್ಠ 60 ಜನರು ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾಗಿದ್ದಾರೆ.

    ಧಾರಾಕಾರ ಮಳೆಯಿಂದಾಗಿ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು (Arbaat Dam) ಕೊಚ್ಚಿಹೋಗಿದೆ. ನೀರು ಸುಮಾರು 20 ಹಳ್ಳಿಗಳಿಗೆ ನುಗ್ಗಿದ್ದು 50 ಸಾವಿರ ಮನೆಗಳು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ.

    ಅರ್ಬತ್ ಅಣೆಕಟ್ಟು 25 ಮಿಲಿಯನ್ ಕ್ಯೂಬಿಕ್ ಮೀಟರ್ ಸಾಮರ್ಥ್ಯವನ್ನು ಹೊಂದಿತ್ತು. ಕರಾವಳಿ ನಗರವಾದ ಪೋರ್ಟ್ ಸುಡಾನ್‌ನ ಕುಡಿಯುವ ನೀರಿನ ಮುಖ್ಯ ಮೂಲವಾಗಿತ್ತು. ಕೊಚ್ಚಿಕೊಂಡು ಹೋದ ಪ್ರದೇಶವನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ. ನೆರೆಗೆ ವಿದ್ಯುತ್ ಕಂಬ ಮತ್ತು ನೀರಿನ ಪೈಪ್‌ಗಳು ನಾಶವಾಗಿವೆ. ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ 150 ರಿಂದ 200 ಮಂದಿ ಕಾಣೆಯಾಗಿದ್ದಾರೆ.  ಇದನ್ನೂ ಓದಿ: ಪರಪ್ಪನ ಜೈಲಿಂದ ಹಿಂಡಲಗಾ ಜೈಲಿಗೆ ‘ಜಗ್ಗುದಾದ’ ಶಿಫ್ಟ್ ಸಾಧ್ಯತೆ – ಬೆಳಗಾವಿ ಜೈಲಿನ ವಿಶೇಷತೆ ಏನು?

    ದುರಂತ ಸಂಭವಿಸುವ ಮೊದಲೇ ಅಣೆಕಟ್ಟು ಕಳಪೆ ಸ್ಥಿತಿಯಲ್ಲಿತ್ತು. ಅಣೆಕಟ್ಟುಗಳು, ರಸ್ತೆಗಳು ಮತ್ತು ಸೇತುವೆಗಳು ಸೇರಿದಂತೆ ಸುಡಾನ್‌ನಲ್ಲಿ ಮೂಲಸೌಕರ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.


    ಏಪ್ರಿಲ್ 2023 ರಿಂದ ಸೇನೆ ಮತ್ತು ಅರೆಸೇನಾ ಪಡೆಗಳ ನಡುವಣ ಸಂಘರ್ಷದಿಂದ ಸುಡಾನ್ ಈಗಾಗಲೇ ತತ್ತರಿಸಿ ಹೋಗಿದೆ. ಈಗ ಭಾರೀ ಮಳೆಯಿಂದಾಗಿ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ. ಈ ವರ್ಷ ದೇಶಾದ್ಯಂತ  ಪ್ರವಾಹದಲ್ಲಿ 132 ಜನರು ಸಾವನ್ನಪ್ಪಿದ್ದಾರೆ, 118,000 ಜನರು ಸ್ಥಳಾಂತರಗೊಂಡಿದ್ದಾರೆ ಎಂದು ಸರ್ಕಾರ ಈ ಮೊದಲು ತಿಳಿಸಿತ್ತು.

  • ತುಂಗಭದ್ರಾ ಜಲಾಶಯದಿಂದ 1.58 ಲಕ್ಷ ಕ್ಯುಸೆಕ್‌ ನೀರು ನದಿಗೆ

    ತುಂಗಭದ್ರಾ ಜಲಾಶಯದಿಂದ 1.58 ಲಕ್ಷ ಕ್ಯುಸೆಕ್‌ ನೀರು ನದಿಗೆ

    – ಕೆಆರ್‌ಎಸ್‌ ಹೊರಹರಿವಿನ ಪ್ರಮಾಣ 1 ಲಕ್ಷ ಕ್ಯುಸೆಕ್‌ಗೆ ಇಳಿಕೆ – ನಿಮಿಷಾಂಭ ದೇವಸ್ಥಾನ ಸಹಜ ಸ್ಥಿತಿಗೆ

    ಕೊಪ್ಪಳ/ಮಂಡ್ಯ: ನಿರಂತರ ಮಳೆಯಾಗುತ್ತಿರುವ‌ ಹಿನ್ನೆಲೆಯಲ್ಲಿ ತುಂಗಭದ್ರಾ ಡ್ಯಾಂನಿಂದ (Tungabhadra Dam) 1.58 ಲಕ್ಷ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದು ತುಂಗಭದ್ರಾ ಜಲಾಶಯ ಮಂಡಳಿ ತಿಳಿಸಿದೆ.

    ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದಿಂದ 1.58 ಲಕ್ಷ ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ಜಲಾಶಯದಿಂದ ಭಾರೀ ಪ್ರಮಾಣದ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ, ವರದಾ ನದಿಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಇದನ್ನೂ ಓದಿ: Wayanad Landslide | ಒಂದೇ ಕುಟುಂಬದ 9 ಜನ ಕನ್ನಡಿಗರು ನಾಪತ್ತೆ – ಕಣ್ಣೀರಿಟ್ಟ ಸಂಬಂಧಿಕ

    ಸದ್ಯ 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿ 97.945 ಟಿಎಂಸಿ ನೀರು ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Wayanad Landslides: ನಾಲ್ವರು ಕನ್ನಡಿಗರು ದುರ್ಮರಣ – ಬೆಂಗಳೂರಿನ ಇಬ್ಬರು ಪ್ರವಾಸಿಗರು ಕಣ್ಮರೆ!

    ನಿಮಿಷಾಂಭ ದೇವಸ್ಥಾನ ಸಹಜ ಸ್ಥಿತಿಗೆ:
    ಕಳೆದ ರಾತ್ರಿ ಕೆಆರ್‌ಎಸ್ ಅಣೆಕಟ್ಟೆಯಿಂದ 1.72 ಲಕ್ಷ ಕ್ಯುಸೆಕ್‌ ನೀರು ಬಿಟ್ಟಿದ್ದ ಪರಿಣಾಮ ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನಕ್ಕೆ ಜಲದಿಗ್ಭಂಧನವಾಗಿತ್ತು. ಸದ್ಯ ಕೆಆರ್‌ಎಸ್ ಜಲಾಶಯದಿಂದ ಹೊರಹರಿವಿನ ಪ್ರಮಾಣ 1 ಲಕ್ಷ ಕ್ಯುಸೆಕ್‌ಗೆ ಇಳಿಕೆ ಮಾಡಿರುವುದರಿಂದ ನಿಮಿಷಾಂಭ ದೇವಸ್ಥಾನ ಸಹಜ ಸ್ಥಿತಿಗೆ ಬಂದಿದೆ. ಭಕ್ತರಿಗೆ ಎಂದಿನಂತೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಭೇಟಿಯಾದ ಡಿಕೆಶಿ – ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಮನವಿ

  • Rain Alert: ಉಡುಪಿಯ ಬ್ರಹ್ಮಾವರದಲ್ಲಿ ಕೃಷಿ ಭೂಮಿ ಜಲಾವೃತ – ಚಿಕ್ಕಮಗಳೂರು, ದಾವಣಗೆರೆ, ಕೊಪ್ಪಳದಲ್ಲೂ ಹೆಚ್ಚಿದ ಭೀತಿ

    Rain Alert: ಉಡುಪಿಯ ಬ್ರಹ್ಮಾವರದಲ್ಲಿ ಕೃಷಿ ಭೂಮಿ ಜಲಾವೃತ – ಚಿಕ್ಕಮಗಳೂರು, ದಾವಣಗೆರೆ, ಕೊಪ್ಪಳದಲ್ಲೂ ಹೆಚ್ಚಿದ ಭೀತಿ

    ಬೆಂಗಳೂರು: ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ (Heavy Rain) ಮುಂದುವರಿದಿದೆ. ಉಡುಪಿಯ ಬ್ರಹ್ಮಾವರ ತಾಲೂಕಿನ ಬೇಸಾಯ ಭೂಮಿಗಳು ಜಲಾವೃತವಾಗಿದೆ. ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನೀರಿನಲ್ಲಿ ಭತ್ತದ ಗದ್ದೆಗಳು ಕೊಳೆಯುತ್ತಿವೆ. ಬೈಂದೂರು ಸೋಮೇಶ್ವರ ದೇವಳದ ಮೇಲ್ಭಾಗದಲ್ಲಿ ರಸ್ತೆಗೆ ಗುಡ್ಡಕುದಿದೆ. ಖಾಸಗಿ ರೆಸಾರ್ಟ್ ಕಾಮಗಾರಿ- ರಸ್ತೆ ನಿರ್ಮಾಣ ಹಿನ್ನೆಲೆಯಲ್ಲಿ ಸಮಸ್ಯೆ ಸಂಭವಿಸಿದೆ.

    ಹೆಬ್ಬಾಳೆ-ಹೊರನಾಡು ಸಂಪರ್ಕ ಸೇತುವೆ ಮುಳುಗಡೆ:
    ಇನ್ನೂ ಚಿಕ್ಕಮಗಳೂರಿನ (Chikkamagaluru) ಕಳಸ ಬಳಿ ಭದ್ರೆಯ ಅಬ್ಬರದಿಂದಾಗಿ ಹೆಬ್ಬಾಳೆ-ಹೊರನಾಡು ಸಂಪರ್ಕ ಸೇತುವೆ ಮುಳುಗಿದೆ. ಕೊಪ್ಪ ತಾಲೂಕಿನ ಬಸರೀಕಟ್ಟೆ ಸಮೀಪ ಅಬ್ಬಿಕಲ್ಲು ಜಲಪಾತ ಭೋರ್ಗರೆಯುತ್ತಿದೆ. ಮುಳ್ಳಯ್ಯನಗಿರಿಯಲ್ಲಿ ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು ನಗರಕ್ಕೆ ನೀರುಣಿಸುವ ಹಿರೇಕೊಳಲೇ ಕೆರೆ ಕೋಡಿ ಬಿದ್ದಿದೆ. ಹೀಗಾಗಿ, ಕೆರೆಗೆ ಶಾಸಕ ಎಚ್‌.ಡಿ ತಮ್ಮಯ್ಯ, ಎಂಎಲ್‌ಸಿ ಸಿಟಿ ರವಿ, ಭೋಜೇಗೌಡ ಭಾಗಿನ ಅರ್ಪಿಸಿದ್ದಾರೆ.

    ಮೈದುಂಬಿ ಹರಿಯುತ್ತಿದೆ ತುಂಗಾಭದ್ರಾ ನದಿ:
    ಶಿವಮೊಗ್ಗದ ಸಾಗರದ ಶುಂಠಿಕೊಪ್ಪದ ಬಳಿ ವರದಾನದಿಯಿಂದಾಗಿ ಕೃಷಿ ಭೂಮಿ ಜಲಾವೃತಗೊಂಡಿದೆ. ಸೊರಬದ ಲಕ್ಕವಳ್ಳಿಯಲ್ಲಿ ವರದಾ-ದಂಡಾವತಿ ಸಂಗಮಕ್ಷೇತ್ರ ಜೈನಮಠ ಹೊಳೆಲಿಂಗೇಶ್ವರ ದೇವಾಲಯ ಸೇರಿದಂತೆ ಗದ್ದೆ, ತೋಟಗಳ ಮುಳುಗಿವೆ. ಶಿಕಾರಿಪುರದ ಧನರಾಜ್ ಹೇಮರಾಮ್ ಸರ್ಕಾರಿ ಶಾಲೆಯಲ್ಲಿ ನೀರು ತುಂಬಿಕೊಂಡಿದೆ. ದಾವಣಗೆರೆಯ ಹರಿಹರ ಪಕ್ಕದಲ್ಲಿ ತುಂಗಾಭದ್ರಾ ನದಿ ಮೈದುಂಬಿ ಹರೀತಿದೆ. ಕೊಪ್ಪಳದ ತುಂಗಭದ್ರಾ ಡ್ಯಾಮ್‌ಗೆ 1.27 ಲಕ್ಷ ಕ್ಯುಸೆಕ್‌ ಒಳಹರಿವಿದ್ದು, 105 ಟಿಎಂಸಿ ಪೈಕಿ 80 ಟಿಎಂಸಿಗೂ ಹೆಚ್ಚು ನೀರಿನ ಸಂಗ್ರವಾಗಿದೆ. 2 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ವಿಜಯನಗರ ಹಗರಿಬೊಮ್ಮನಹಳ್ಳಿಯ ಮಾಲವಿ ಜಲಾಶಯಕ್ಕೆ ಶಾಸಕ ನೇಮಿರಾಜ್ ನಾಯ್ಕ್ ಮುಂದಾಳತ್ವದಲ್ಲಿ ರಾಜವಾಳ್ ಜಾಕ್ ವೆಲ್ ಮೂಲಕ ನೀರು ಬಿಡುಗಡೆ ಮಾಡಲಾಯಿತು.

    ಬೆಳಗಾವಿಯಲ್ಲೂ ಪ್ರವಾಹ ಭೀತಿ:
    ಮಹಾರಾಷ್ಟ್ರದಲ್ಲಿ ಭಾರೀ ಮಳೆಗೆ ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಭೀತಿ, ಅವಾಂತರಗಳು ಸಂಭವಿಸಿವೆ. ಕೃಷ್ಣೆಯ ಒಳ ಹರಿವು 1.50 ಲಕ್ಷ ಕ್ಯೂಸೆಕ್ ದಾಟಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ದೂದ್‌ಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ರೈತರ ಜಮೀನುಗಳಿಗೆ ನದಿ ನೀರು ನುಗ್ಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ 4 ಸೇತುವೆಗಳು ಮುಳುಗಡೆಯಾಗಿವೆ. 4 ಸೇತುವೆಗಳ 2 ಬದಿಯಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸರನ್ನು ನಿಯೋಜಿಸಲಾಗಿದೆ.

    ಕೃಷ್ಣಾ ನದಿಗೆ 1.60 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ:
    ಪ್ರವಾಹ ಎದುರಾಗುವ ಭೀತಿಗೆ ನದಿ ದಡದಲ್ಲಿರುವ ಪಂಪ್‌ಸೆಟ್‌ಗಳನ್ನು ರೈತರು ತೆಗೆದಿಟ್ಟಿದ್ದಾರೆ. ಖಾನಾಪೂರ ತಾಲೂಕಿನ ಜಾಂಬೋಟಿ ಬಳಿ ಕಸಮಳಿ ಬ್ರಿಡ್ಜ್ ಮೇಲೆ ಭಾರೀ ವಾಹನ ಸಂಚಾರ ನಿಷೇಧಿಸಲಾಗಿದೆ. ಪರಿಣಾಮ ಬೆಳಗಾವಿ – ಗೋವಾ ಸರಕು ಸಾಗಣೆಯ ಮೇಲೆ ಭಾರೀ ಪರಿಣಾಮ ಬೀರಿದೆ. ಗೋವಾದಿಂದ ಬರುವ ಎಲ್ಲಾ ವಾಹನಗಳನ್ನು ತಡೆ ಹಿಡಿಯಲಾಗಿದೆ. ಕಿತ್ತೂರಿನ ಹುಣಶೀಕಟ್ಟಿಯ ಮಲಪ್ರಭಾ ನದಿಯಲ್ಲಿ ರೈತರ ಸಮಸ್ಯೆ ಹಿನ್ನೆಲೆಯಲ್ಲಿ ಡಿ.ಸಿ ಮೊಹಮ್ಮದ್ ರೋಷನ್ ಭೇಟಿ ನೀಡಿದರು. ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲು ಸರ್ಕಾರಕ್ಕೆ ಮನವಿ ಕಳುಹಿಸುವ ಭರವಸೆ ನೀಡಿದರು. ನಿಪ್ಪಾಣಿ ನಗರದ ಜತ್ರಾಟ್‌ವೇಸ್‌ನಲ್ಲಿ ಗೋಡೆ ಕುಸಿದು 45 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಯಾದಗಿರಿಯ ನಾರಾಯಣಪುರ ಜಲಾಶಯ 33 ಟಿಎಂಸಿ ಸಾಮರ್ಥ್ಯದ ಪೈಕಿ 28 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಮ್‌ನಿಂದ ಕೃಷ್ಣಾ ನದಿಗೆ 1.60 ಲಕ್ಷ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಸುರಪುರದ ನೀಲಕಂಠರಾಯನ ಗಡ್ಡಿ, ಮೇಲಿನ ಗಡ್ಡಿ, ಜಂಗಣ್ಣದೊಡ್ಡಿ ಮುಳುಗಡೆಯಾಗುವ ಸಾಧ್ಯತೆ ಇದ್ದು, ಹೈಅಲರ್ಟ್ ಘೋಷಿಸಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಶೀಲಹಳ್ಳಿ ಸೇತುವೆ, ಹೂವಿನಹೆಡಗಿ ಸೇತುವೆಗಳಿಗೆ ಮುಳುಗಡೆ ಭೀತಿ ಎದುರಾಗಿದೆ.

    ನಂದಿಬೆಟ್ಟಕ್ಕೆ ಪ್ರವಾಸಿಗರ ದಂಡು:
    ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಪ್ರವಾಸಿಗರ ದಂಡು ಹೆಚ್ಚಾಗಿದೆ. ಬೆಳಗ್ಗೆ 5 ಗಂಟೆಯಿಂದಲೇ ಕಾರು, ಬೈಕ್‌ಗಳ ಮೂಲಕ ಸಾವಿರಾರು ಮಂದಿ ಪ್ರವಾಸಿಗರು ನಂದಿಬೆಟ್ಟಕ್ಕೆ ಲಗ್ಗೆಯಿಡುತ್ತಿದ್ದಾರೆ. ನಂದಿಬೆಟ್ಟದ ಪಾರ್ಕಿಂಗ್ ಫ್ಲಾಟ್ ವಾಹನಗಳಿಂದ ಹೌಸ್‌ಫುಲ್ ಆಗುತ್ತಿದೆ. ಭಾನುವಾರ ಸಹ ಇಡೀ ನಂದಿಬೆಟ್ಟವನ್ನು ದಟ್ಟಮಂಜು-ಚುಮುಚುಮು ಚಳಿ ಆವರಿಸಿತ್ತು.

  • ರಾಜ್ಯದ ಜಲಾಶಯಗಳಲ್ಲಿ 536 ಟಿಎಂಸಿ ನೀರು ಸಂಗ್ರಹ – ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

    ರಾಜ್ಯದ ಜಲಾಶಯಗಳಲ್ಲಿ 536 ಟಿಎಂಸಿ ನೀರು ಸಂಗ್ರಹ – ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

    ಬೆಂಗಳೂರು: ರಾಜ್ಯದ ಎಲ್ಲ ಜಲಾಶಯಗಳಿಂದ (Reservoir) ಒಟ್ಟು 536 ಟಿಎಂಸಿ ನೀರು ಸಂಗ್ರಹವಾಗಿದೆ. ಯಾವ ನದಿ ಅಪಾಯಕಾರಿಯಾಗಿದೆ? ಎಲ್ಲೆಲ್ಲಿ ಅನಾಹುತಗಳು ಆಗಬಹುದು ಎಂಬುದರ ಬಗ್ಗೆ ಗಮನ ಇಟ್ಟಿದ್ದೇವೆ ಅಂತ ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ (Krishna Byregowda) ಹೇಳಿದ್ದಾರೆ.

    ವಿಧಾನಸಭೆಯಲ್ಲಿ ನಡೆದ ಅತಿವೃಷ್ಟಿ ಹಾನಿ ಚರ್ಚೆಗೆ ಸಂಬಂಧಪಟ್ಟಂತೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ, ಕೆಆರ್‌ಎಸ್‌ಗೆ (KRS) 44.617 ಕ್ಯುಸೆಕ್‌ ನೀರು ಹರಿದು ಬರುತ್ತಿದೆ, ಆಲಮಟ್ಟಿ ಜಲಾಶಯಕ್ಕೆ 40.478 ಕ್ಯುಸೆಕ್‌ ನೀರಿನ ಒಳಹರಿಯುವು ಇದೆ. ಹಾಗಾಗಿ ಎಲ್ಲ ಕಡೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗ್ತಿದೆ ಅಂತ ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ರೈಲು ಆರಂಭ – ಸಂಸದ ಬ್ರಿಜೇಶ್‌ ಚೌಟ ಮನವಿಗೆ ತಕ್ಷಣವೇ ಸ್ಪಂದಿಸಿದ ರೈಲ್ವೆ ಇಲಾಖೆ

    2,225 ಗ್ರಾಮಗಳನ್ನ ಮಳೆಹಾನಿ ಪ್ರದೇಶಗಳೆಂದು ಗುರುತಿಸಿದ್ದೇವೆ. 2.38 ಲಕ್ಷ ಜನ ತೊಂದರೆಗೆ ಸಿಕ್ಕಿಕೊಳ್ಳಬಹುದೆಂದು ಗುರುತಿಸಿದ್ದೇವೆ. ಮಳೆಹಾನಿ ಪೀಡಿತ ಆಗುವ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಟಾಸ್ಕ್‌ಫೋರ್ಸ್‌ ರಚನೆ ಮಾಡಿದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ ಅಂತ ಸ್ಪಷ್ಟಪಡಿಸಿದರು. ಇದನ್ನೂ ಓದಿ: PublicTV Explainer: ಬಜೆಟ್‌ ಎಂದರೇನು? ಆಯವ್ಯಯದ ಬಗ್ಗೆ ನಿಮಗೆಷ್ಟು ಗೊತ್ತು?

    ಸರ್ಕಾರ ಜನರ ಜೊತೆ ಇದೆ, ಎಲ್ಲ ಸಮಸ್ಯೆಗಳನ್ನೂ ಪರಿಹಾರ ಮಾಡುತ್ತೇವೆ. ಸೋಮವಾರ ಸಂಪುಟ ಸಭೆ ಇದೆ, ಸಭೆಯಲ್ಲೂ ಮಳೆಹಾನಿ ಚರ್ಚೆ ಮಾಡಿ ಪರಿಹಾರ ಕೊಡುತ್ತೇವೆ. ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ ಆಗುತ್ತೆ ಎಂಬ ಮುನ್ಸೂಚನೆ ಜನವರಿಯಲ್ಲೇ ಇತ್ತು. ಜೂನ್ 1 ರಿಂದ ಇಲ್ಲಿ ತನಕ ವಾಡಿಕೆ ಮಳೆ 365 ಮಿಲಿಮೀಟರ್ ಇರಬೇಕಿತ್ತು, ಆದ್ರೆ 447 ಮಿಲಿ ಮೀಟರ್ ಮಳೆ ಆಗಿದೆ. ಕರಾವಳಿ, ಮಲೆನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ ಅಂತ ಮಾಹಿತಿ ನೀಡಿದರು. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ 21 ಹಗರಣ ನಡೆದಿದೆ – ಹಗರಣಗಳ ಪಟ್ಟಿ ಬಿಡುಗಡೆ ಮಾಡಿದ ಸಿಎಂ

    29 ಆರೈಕೆ ಕೇಂದ್ರಗಳನ್ನ ಸ್ಥಾಪಿಸಲಾಗಿದೆ, 2,331 ಸಂತ್ರಸ್ಥರಿಗೆ ಊಟ, ವಸತಿ, ಉಪಹಾರ ಕೊಡುತ್ತಿದ್ದೇವೆ. ಎಲ್ಲ ಜಿಲ್ಲಾಧಿಕಾರಿಗಳ ಖಾತೆಗೆ 777 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇವೆ. ಹಣ ಖರ್ಚಾದ ಕೂಡಲೇ ಮತ್ತೆ ಹಣ ಬಿಡುಗಡೆ ಮಾಡುತ್ತೇವೆ, ಹಣದ ಕೊರತೆ ಇಲ್ಲ. ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ಪರಿಹಾರ ಕೊಡಲು ಸೂಚಿಸಿದ್ದೇವೆ. 5 ಎನ್‌ಡಿಆರ್‌ಎಫ್ ತುಕಡಿಗಳನ್ನ ಮಳೆಹಾನಿ ಜಿಲ್ಲೆಗಳಿಗೆ ನಿಯೋಜಿಸಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಗುಡ್‌ನ್ಯೂಸ್‌ ಕೊಟ್ಟ ʻಕಾಟೇರʼ ನಿದೇರ್ಶಕ; ತರುಣ್‌ ಸುಧೀರ್‌ – ಸೋನಲ್‌ ಮದುವೆ ಡೇಟ್‌ ಫಿಕ್ಸ್‌

  • 110 ಅಡಿ ದಾಟಿದ KRS ಡ್ಯಾಂ ನೀರಿನ ಮಟ್ಟ

    110 ಅಡಿ ದಾಟಿದ KRS ಡ್ಯಾಂ ನೀರಿನ ಮಟ್ಟ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕೆ (KRS Dam) 36,674 ಕ್ಯುಸೆ‌ಕ್‌ ಒಳಹರಿವು ಇದ್ದು ನೀರಿನ ಮಟ್ಟ 110.60 ಅಡಿಗೆ ಏರಿಕೆಯಾಗಿದೆ.

    ಕಳೆದ ನಾಲ್ಕು‌ ದಿನಗಳಿಂದ ಕಾವೇರಿ ಜಲಾನಯನ (Cauvery Basin) ಪ್ರದೇಶದಲ್ಲಿ ಮಳೆಯ (Rain) ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಕೆಆರ್‌ಎಸ್‌ನಲ್ಲಿ 3 ಅಡಿ ನೀರು ಹೆಚ್ಚಳವಾಗಿದೆ. ಮಂಗಳವಾರ 107.60 ಅಡಿ ಇದ್ದ ಕೆಆರ್‌ಎಸ್ ನೀರಿನ ಮಟ್ಟ ಇಂದು 110.60 ಅಡಿಗೆ ಏರಿಕೆಯಾಗಿದೆ.  ಇದನ್ನೂ ಓದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ: ಮಸೂದೆಯಲ್ಲಿ ಏನಿದೆ? ಕನ್ನಡಿಗರಿಗೆ ಅರ್ಹತೆ ಹೇಗೆ? ಯಾವ ಹುದ್ದೆಯಲ್ಲಿ ಎಷ್ಟು?

     

    ಕಳೆದ 24 ಗಂಟೆಯಲ್ಲಿ ಕೆಆರ್‌ಎಸ್‌ಗೆ 3 ಟಿಎಂಸಿ ನೀರು ಹರಿದು ಬಂದಿದೆ. ನಿನ್ನೆ ಕೆಆರ್‌ಎಸ್‌ನಲ್ಲಿ 29.378 ಟಿಎಂಸಿ ನೀರು ಸಂಗ್ರವಾಗಿತ್ತು. ಇಂದು 32.330 ಟಿಎಂಸಿ ನೀರು ಸಂಗ್ರಹವಾಗಿದೆ.

    ಹಾರಂಗಿ ಮತ್ತು ಕಬಿನಿಯಿಂದ ಭಾರೀ ಪ್ರಮಾಣದಲ್ಲಿ ನೀರನ್ನು ಹೊರ ಬಿಡುತ್ತಿರುವ ಕಾರಣ ಕೆಆರ್‌ಎಸ್‌ ಜಲಾಶಯದ ಒಳ ಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ

    ಜಲಾಶಯ ನೀರಿನ ಮಟ್ಟ
    ಗರಿಷ್ಠ ಮಟ್ಟ – 124.80 ಅಡಿ
    ಇಂದಿನ ಮಟ್ಟ – 110.60 ಅಡಿ
    ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ
    ಇಂದಿನ ಸಾಮರ್ಥ್ಯ – 32.330 ಟಿಎಂಸಿ
    ಒಳ ಹರಿವು – 36,674 ಕ್ಯೂಸೆಕ್
    ಹೊರ ಹರಿವು – 2,361 ಕ್ಯೂಸೆಕ್

  • ಕರುನಾಡಿಗೆ ಬಿಗ್ ಶಾಕ್, ಡ್ಯಾಂ ನೀರಿನ ಮಟ್ಟ ಭಾರೀ ಕುಸಿತ – ಕಳೆದ ವರ್ಷ ಎಷ್ಟಿತ್ತು? ಈ ಬಾರಿ ಎಷ್ಟಿದೆ?

    ಕರುನಾಡಿಗೆ ಬಿಗ್ ಶಾಕ್, ಡ್ಯಾಂ ನೀರಿನ ಮಟ್ಟ ಭಾರೀ ಕುಸಿತ – ಕಳೆದ ವರ್ಷ ಎಷ್ಟಿತ್ತು? ಈ ಬಾರಿ ಎಷ್ಟಿದೆ?

    ಬೆಂಗಳೂರು: ರಾಜ್ಯದ ಜಲಾಶಯಗಳ (Karnataka Dam) ನೀರಿನ ಮಟ್ಟ ಭಾರೀ ಕುಸಿತಗೊಂಡಿದ್ದು, ಮಳೆ (Rain) ಬಾರದೇ ಇದ್ದರೆ ಈ ಬಾರಿ ಬೇಸಿಗೆಯಲ್ಲಿ ನೀರಿಗೆ ಸಮಸ್ಯೆಯಾಗುವುದು (Water Scarcity) ಖಚಿತ.

    ಹೌದು ಕಳೆದ ಬಾರಿ ಹೋಲಿಕೆ ಮಾಡಿದರೆ ಜಲಾಶಯಗಳ ನೀರಿನ ಮಟ್ಟ 42% ಕುಸಿತಗೊಂಡಿದೆ. ಕಳೆದ ವರ್ಷದ ಜ.11 ರಂದು ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹಾಗೂ ಈ ವರ್ಷದ ನೀರಿನ ಮಟ್ಟದ ಹೋಲಿಕೆ ಮಾಡಿ ಕರ್ನಾಟಕ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರದಿಂದ (KSNDMC) ದಾಖಲೆ ಬಿಡುಗಡೆ ಮಾಡಿದೆ.  ಇದನ್ನೂ ಓದಿ: ರಾಮಮಂದಿರ ಪ್ರಾಣಪ್ರತಿಷ್ಠೆಗೆ 55 ರಾಷ್ಟ್ರಗಳ 100ಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ – ಯಾವ್ಯಾವ ದೇಶಕ್ಕೆ ಆಮಂತ್ರಣ?

    ಒಟ್ಟು 895 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ರಾಜ್ಯದ ಜಲಾಶಯಗಳಿಗಿದೆ. ಸದ್ಯ ಈಗ 378 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ ಬರೋಬ್ಬರಿ 619 ಟಿಎಂಸಿ ನೀರಿನ ಸಂಗ್ರಹವಿತ್ತು. ಕೆಲವೊಂದು ಜಲಾಶಯಗಳು 69% ರಷ್ಟು ನೀರಿನ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಿದೆ. ಇದನ್ನೂ ಓದಿ:ಮೇಯರ್‌ ಚುನಾವಣೆ : ಮಾಲ್ಡೀವ್ಸ್‌ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ಪಕ್ಷಕ್ಕೆ ಭರ್ಜರಿ ಜಯ

    ಕಳೆದ ವರ್ಷ ಲಿಂಗನಮಕ್ಕಿ ಜಲಾಶಯದಲ್ಲಿ 95.19 ಟಿಎಂಸಿ ನೀರಿದ್ದರೆ ಈ ಬಾರಿ 52.98 ಟಿಎಂಸಿ ನೀರು ಸಂಗ್ರಹವಾಗಿದೆ. ಕೆಎಆರ್‌ಎಸ್‌ನಲ್ಲಿ ಕಳೆದ ವರ್ಷ 41.13 ಟಿಎಂಸಿ ನೀರಿದ್ದರೆ ಈ ಬಾರಿ 19.81 ಟಿಂಎಂಸಿ ನೀರು ಸಂಗ್ರಹವಾಗಿದೆ.

    ಆಲಮಟ್ಟಿಯಲ್ಲಿ 2023ರಲ್ಲಿ87.23 ಟಿಎಂಸಿ ಇದ್ದರೆ ಈ ಬಾರಿ 54.76 ಟಿಎಂಸಿ ನೀರು ಸಂಗ್ರಹವಾಗಿದೆ. ತುಂಗಾಭದ್ರ ಜಲಾಶಯದಲ್ಲಿ ಕಳೆದ ವರ್ಷ 67.75 ಟಿಎಂಸಿ ನೀರಿದ್ದರೆ ಈ ಬಾರಿ 10.20 ಟಿಎಂಸಿ ನೀರು ಸಂಗ್ರಹವಾಗಿದೆ.

     

  • ತಮಿಳುನಾಡಿಗೆ ಕಾವೇರಿ ನೀರು – ಸರ್ಕಾರದ ಮುಂದಿನ ನಡೆ ಏನು?

    ತಮಿಳುನಾಡಿಗೆ ಕಾವೇರಿ ನೀರು – ಸರ್ಕಾರದ ಮುಂದಿನ ನಡೆ ಏನು?

    ಬೆಂಗಳೂರು: ಒಂದು ಕಡೆ ಮಳೆಯ ಸುಳಿವಿಲ್ಲ, ಕ್ಷಾಮ ಆವರಿಸುತ್ತಿದೆ, ಜಲಾಶಯಗಳಲ್ಲೂ ನೀರಿನ ಸಂಗ್ರಹ ಮಟ್ಟ ಗಣನೀಯವಾಗಿ ಕುಸಿದಿದೆ. ಈ ಹೊತ್ತಲ್ಲೇ ಗಾಯದ ಮೇಲೆ ಬರೆ ಎಳೆಯುವ ರೀತಿ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ಕರುನಾಡಿಗೆ ಬಿಗ್ ಶಾಕ್ ನೀಡಿದೆ. ಕರ್ನಾಟಕ (Karnataka) ವಾಸ್ತವ ವರದಿಯನ್ನು ಮನವರಿಕೆ ಮಾಡಿಕೊಟ್ಟಿದ್ದರೂ ತಮಿಳುನಾಡು (Tamil Nadu) ವಾದಕ್ಕೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಮಣೆ ಹಾಕಿದೆ. ಮುಂದಿನ 15 ದಿನಗಳ ಕಾಲ ನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

    ನಮ್ಮ ಬೆಳೆಗಳು ಒಣಗುತ್ತಿವೆ. ಕಳೆದ ಬಾರಿ ಆದೇಶದಂತೆ ನಿತ್ಯ 5000 ಕ್ಯೂಸೆಕ್ ನೀರು ಬಿಡಬೇಕಿತ್ತು. ಆದರೆ ಕರ್ನಾಟಕ ನಿತ್ಯ 3000-3400 ಕ್ಯೂಸೆಕ್ ಬಿಡುಗಡೆ ಮಾಡಿದೆ. 36.76 ಟಿಎಂಸಿ ಬಿಡುಗಡೆ ಬಾಕಿ ಉಳಿಸಿಕೊಂಡಿದೆ ಎಂದು ತಮಿಳುನಾಡು ವಾದ ಮಂಡಿಸಿತ್ತು. ಕರ್ನಾಟಕ ವಾಸ್ತವ ಪರಿಸ್ಥಿತಿ ವಿವರಿಸಿದರೂ ಕೂಡ ತಮಿಳುನಾಡು ವಾದಕ್ಕೆ ಸಮಿತಿ ಮಣೆ ಹಾಕಿದೆ. ನಿತ್ಯ 5000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರದ ಮುಂದಿನ ನಡೆ ಏನು ಎಂಬುದು ಸದ್ಯದ ಕುತೂಹಲ. ಇದನ್ನೂ ಓದಿ: ಉಡುಪಿಯಲ್ಲಿ ಚೈತ್ರಾ ಕುಂದಾಪುರ ಅರೆಸ್ಟ್

     

    ಸರ್ಕಾರದ ಮುಂದಿನ ನಡೆ ಏನು?
    ಈಗಿನ ಪರಿಸ್ಥಿತಿಯಲ್ಲಿ ಸಿಡಬ್ಲ್ಯೂಆರ್‌ಸಿ ಶಿಫಾರಸು ಪಾಲನೆ ಕಷ್ಟ. ಇಂದು ಸಿಡಬ್ಲ್ಯೂಎಂಎ ಸಭೆಯಲ್ಲಿ ರಾಜ್ಯದ ಕಷ್ಟದ ಪರಿಸ್ಥಿತಿಯನ್ನು ವಿವರಿಸಿ ಸಿಡಬ್ಲ್ಯೂಆರ್‌ಸಿ ಶಿಫಾರಸು ಪಾಲನೆ ಸಾಧ್ಯವಿಲ್ಲ ಎಂದು ಮನವರಿಕೆ ಮಾಡಲಿದೆ.

    ಸಿಡಬ್ಲ್ಯೂಎಂಎ ನಿಯೋಗವನ್ನು ರಾಜ್ಯಕ್ಕೆ ಕಳಿಸಿ ಪರಿಸ್ಥಿತಿ ತಿಳಿದುಕೊಳ್ಳಬೇಕು ಜೊತೆಗೆ ಎರಡೂ ರಾಜ್ಯಗಳಿಗೂ ಸಂಕಷ್ಟ ಸೂತ್ರ ಸಿದ್ಧಪಡಿಸುವಂತೆ ಮನವಿ ಮಾಡುವ ಸಾಧ್ಯತೆಯಿದೆ. ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ನಿರ್ಧಾರ ಮಾಡಿದ್ದಾರೆ.

    ಇದೇ 21 ರಂದು ಸುಪ್ರೀಂಕೋರ್ಟ್‌ನಲ್ಲಿ ಕಾವೇರಿ ನದಿ ವಿವಾದದ ವಿಚಾರಣೆ ನಡೆಯಲಿದ್ದು ಈ ವೇಳೆ ರಾಜ್ಯದ ಸಂಕಷ್ಟದ ಸ್ಥಿತಿ ಬಗ್ಗೆ ಮನವರಿಕೆ ಮಾಡಿ 2 ರಾಜ್ಯಗಳಿಗೂ ಸಂಕಷ್ಟ ಸೂತ್ರ ಸಿದ್ಧಪಡಿಸುವಂತೆ ಕೋರ್ಟ್‌ ಬಳಿ ಮನವಿ ಮಾಡಲು ಮುಂದಾಗಿದೆ ಎನ್ನಲಾಗುತ್ತಿದೆ. ಇದರೊಂದಿಗೆ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ದ ಮಧ್ಯಪ್ರವೇಶಕ್ಕೆ ಆಗ್ರಹಿಸುವ ಸಾಧ್ಯತೆಯಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಕ್ರೇನ್‌ನಲ್ಲಿ ಜಲಾಶಯ ಸ್ಫೋಟ – ಸಾವಿರಾರು ಮಂದಿ ಸ್ಥಳಾಂತರ

    ಉಕ್ರೇನ್‌ನಲ್ಲಿ ಜಲಾಶಯ ಸ್ಫೋಟ – ಸಾವಿರಾರು ಮಂದಿ ಸ್ಥಳಾಂತರ

    ಕೀವ್‌: ಉಕ್ರೇನ್ (Ukraine) ಹೃದಯ ಚೂರುಚೂರಾಗಿದ್ದು ನೀಪರ್ ನದಿಗೆ ಅಡ್ಡಲಾಗಿ ನಿರ್ಮಿಸಿದ ನೋವಾ ಕಖೋವ್ಕಾ (Nova Kakhovka Dam) ಜಲಾಶಯವನ್ನು ಸ್ಫೋಟಿಸಲಾಗಿದೆ.

    ಸ್ಫೋಟದಿಂದ ದೊಡ್ಡ ಮಟ್ಟದಲ್ಲಿ ನೀರಿನ ಪ್ರವಾಹ ಉಂಟಾಗಿದ್ದು, ತಗ್ಗುಪ್ರದೇಶದ ಜನ ಎದ್ನೋ ಬಿದ್ನೋ ಎಂದು ಓಡಿ ಪ್ರಾಣ ಉಳಿಸಿಕೊಂಡಿದ್ದು ಸಾವಿರಾರು ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಖೇರ್ಸಾನ್‍ಗೆ 30 ಕಿಲೋಮೀಟರ್ ದೂರದಲ್ಲಿರುವ ಈ ಡ್ಯಾಂ ಉಕ್ರೇನ್ ಪಾಲಿಗೆ ಜೀವನಾಡಿಯಾಗಿತ್ತು.  ಇದನ್ನೂ ಓದಿ: ಕಚ್ಚಾ ತೈಲ ಉತ್ಪಾದನೆ ಕಡಿತಗೊಳಿಸಲು ಮುಂದಾದ ಸೌದಿ – ತೈಲ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ

    ಈ ಡ್ಯಾಂ ಸಮೀಪ ಕಳೆದ ಕೆಲ ದಿನಗಳಿಂದ ಭಾರೀ ದಾಳಿಗಳು ನಡೆಯುತ್ತಿದ್ದವು. ಇದು ರಷ್ಯಾ (Russia) ಕೆಲಸ ಎಂದು ಉಕ್ರೇನ್ ಆರೋಪಿಸುತ್ತಿದೆ. ಆದರೆ ರಷ್ಯಾ ಇದು ನಮ್ಮ ಕೆಲಸವಲ್ಲ. ಇದು ಭಯೋತ್ಪಾದಕ ದಾಳಿ ಎಂದು ತಿರುಗೇಟು ನೀಡಿದೆ.

    ಈ ಡ್ಯಾಂ ಎತ್ತರ 30 ಮೀಟರ್ ಇದ್ದು, ನೂರಾರು ಮೀಟರ್ ಉದ್ದ ಇತ್ತು. 1956ರಲ್ಲಿ ಜಲ ವಿದ್ಯುತ್‌ಗಾಗಿ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿತ್ತು.