Tag: ಜಲೀಲ್

  • ಹಂತಕರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ

    ಹಂತಕರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ

    ಮಂಗಳೂರು: ಇತ್ತೀಚೆಗೆ ಸುರತ್ಕಲ್‍ನ ಕಾಟಿಪಳ್ಳದಲ್ಲಿ ಹತ್ಯೆಗೀಡಾದ ಜಲೀಲ್ (Jaleel) ಮನೆಗೆ ಭೇಟಿ ನೀಡಿದ ಕಾಂಗ್ರೆಸ್ (Congress) ಮುಖಂಡ ಪ್ರಿಯಾಂಕ್ ಖರ್ಗೆ (Priyank Kharge) ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ (Mohiuddin Bava) ಅವರು ವೈಯಕ್ತಿಕ ನೆಲೆಯಲ್ಲಿ ನೀಡಿದ 1 ಲಕ್ಷ ರೂ. ಮೊತ್ತದ ಚೆಕ್ ಹಸ್ತಾಂತರಿಸಿ ಸಾಂತ್ವನ ಹೇಳಿದರು.

    ಜಲೀಲ್ ಹತ್ಯೆಯ ಬಗ್ಗೆ ಪ್ರಿಯಾಂಕ್‍ಗೆ ಕೂಲಂಕಷ ವಿವರಣೆ ನೀಡಿದ ಮೊಯ್ದೀನ್ ಬಾವಾ ಹತ್ಯೆ ಆರೋಪಿಗಳು ಮೂರೇ ತಿಂಗಳಲ್ಲಿ ಜಾಮೀನು ಪಡೆದು ಹೊರಬಂದಿದ್ದಾರೆ. ಇದಕ್ಕೆ ಬಿಜೆಪಿ ಸರ್ಕಾರವೇ ಕಾರಣ ಎಂದು ಆರೋಪಿಸಿದರು. ಮುಂದೆ ನಮ್ಮ ಸರ್ಕಾರ ಬರಲಿದೆ ಇಂತಹ ಅಮಾನುಷ ಹತ್ಯೆಗಳಿಗೆ ನಮ್ಮ ಸರ್ಕಾರ ಇತಿಶ್ರೀ ಹಾಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರ ಪತ್ತೆಗೆ 10 ಲಕ್ಷ ಬಹುಮಾನ ಘೋಷಣೆ

    ಈ ಸಂದರ್ಭದಲ್ಲಿ ಮಾತನಾಡಿದ ಮೃತ ಜಲೀಲ್ ತಂದೆ ಇಂತಹಾ ಘಟನೆಗಳು ಮತ್ತೆ ಮರುಕಳಿಸಬಾರದು. ಹಂತಕರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.

    ಪೊಲೀಸ್ ಸಿಬ್ಬಂದಿ ಕುಟುಂಬಕ್ಕೂ ಚೆಕ್ ವಿತರಣೆ:
    ಕಾವೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತ ಪೊಲೀಸ್ ಸಿಬ್ಬಂದಿ ಕುಟುಂಬಕ್ಕೂ ಪ್ರಿಯಾಂಕ್ ಖರ್ಗೆ 1 ಲಕ್ಷ ರೂ. ಚೆಕ್ ವಿತರಿಸಿದರು. ಇದನ್ನೂ ಓದಿ: ಡ್ರಗ್ಸ್ ದಂಧೆ – ಕೆಎಂಸಿ ಆಸ್ಪತ್ರೆಯ ವೈದ್ಯರು ವಜಾ, ವಿದ್ಯಾರ್ಥಿಗಳು ಅಮಾನತು

    ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪೊಲೀಸ್ ಕಾನ್‍ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ನೀಡಿದ 1 ಲಕ್ಷ ರೂ. ಮೊತ್ತದ ಚೆಕ್ ಹಸ್ತಾಂತರಿಸಿದರು. ಪಣಂಬೂರು ಪೊಲೀಸ್ ಕ್ವಾಟ್ರಸ್‍ನಲ್ಲಿ ವಾಸವಿದ್ದ ಬಾಗಲಕೋಟೆ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಮೃತರಾಗಿದ್ದರು.

    ಚೆಕ್ ವಿತರಣೆ ಸಂದರ್ಭ ಖರ್ಗೆ ಜೊತೆ ಮಾಜಿ ಶಾಸಕ ಮೊಯಿದೀನ್ ಬಾವಾ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡೆಕೇರಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬಳಿ, ಮಾಜಿ ಉಪಮೇಯರ್ ಬಶೀರ್ ಬೈಕಂಪಾಡಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ, ಷರೀಫ್ ಚೊಕ್ಕಬೆಟ್ಟು, ಜಲೀಲ್ ಬದ್ರಿಯ, ಎಸ್‌ಸಿಎಸ್‌ಟಿ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ಕೋಡಿಕಲ್, ಅಬೂಬಕರ್ ಪ್ಯಾರಡೈಸ್, ಪ್ರಹ್ಲಾದ್ ಮತ್ತಿತರರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜಲೀಲ್ ಯಾವುದೇ ಗಲಾಟೆಗೆ ಹೋಗದ ಬಡಪಾಯಿ : ಸಹೋದರ ಮಹಮ್ಮದ್

    ಜಲೀಲ್ ಯಾವುದೇ ಗಲಾಟೆಗೆ ಹೋಗದ ಬಡಪಾಯಿ : ಸಹೋದರ ಮಹಮ್ಮದ್

    ಮಂಗಳೂರು: ಜಲೀಲ್ ಯಾವುದೇ ಗಲಾಟೆಗೆ ಹೋಗದ ಬಡಪಾಯಿಯಾಗಿದ್ದು, ರಾಜಕಾರಣಕ್ಕಾಗಿ ಆತನನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಜಲೀಲ್ ಸಹೋದರ ಮಹಮ್ಮದ್ ಆರೋಪಿಸಿದರು.

    ಆಸ್ಪತ್ರೆ ಬಳಿ ಮಾತನಾಡಿದ ಅವರು, ನಾವು ಮನೆಯಲ್ಲಿ ಇದ್ದ ವೇಳೆ ಜಲೀಲ್ ಕೊಲೆಯಾಗಿದೆ. ಆದರೆ ಅವನು ಯಾವುದೇ ಗಲಾಟೆಗೆ ಹೋಗದ ಬಡಪಾಯಿಯಾಗಿದ್ದು, ಬೆಳಿಗ್ಗೆ ಅಂಗಡಿಗೆ ಬಂದು ವ್ಯವಹಾರ ಮಾಡಿ ರಾತ್ರಿ ಮನೆಗೆ ಹೋಗುತ್ತಿದ್ದ. ಆತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರಿಗೂ ಬೇಕಾದವನಾಗಿದ್ದ. ಯಾವುದೇ ಚಟುವಟಿಕೆಗೆ ಹೋಗದ ಆತ ಶಾಂತಿಪ್ರಿಯನಾಗಿದ್ದ. ಯಾರ ಜೊತೆಗೂ ಜೋರಾಗಿಯೂ ಮಾತನಾಡದಂತ ಅವನನ್ನೇ ಬಿಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಇಬ್ಬರು ಬೈಕ್‍ನಲ್ಲಿ ಬಂದು ಜಲೀಲ್‌ನನ್ನು ಕೊಲೆ ಮಾಡಿ ಹೋಗಿದ್ದಾರೆ. ಅವನು ಪತ್ನಿ ಮತ್ತು ಮಗನ ಜೊತೆ ಮನೆಯಲ್ಲಿ ವಾಸವಾಗಿದ್ದ. ಕಾಟಿಪಳ್ಳ ನಾಲ್ಕನೇ ಬ್ಲಾಕ್‍ನಲ್ಲಿ ಅವನ ಮನೆ ಇತ್ತು. ಆದರೆ ಅವನು ಯಾವುದೇ ಸಂಘಟನೆ, ರಾಜಕೀಯದಲ್ಲಿ ಇರಲಿಲ್ಲ. ಸುಮಾರು 10-15 ವರ್ಷದಿಂದ ಅವನು ಅಲ್ಲಿ ಅಂಗಡಿ ನಡೆಸ್ತಾ ಇದ್ದ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸುರತ್ಕಲ್ ಬಳಿ ಚಾಕು ಇರಿದು ವ್ಯಕ್ತಿ ಕೊಲೆ – 4 ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

    ಅವನಿಗೆ ಶತ್ರುಗಳು ಅಂತ ಯಾರೂ ಇರಲೇ ಇಲ್ಲ. ಇದು ರಾಜಕಾರಣಕ್ಕಾಗಿ ಅಮಾಯಕನ ಕೊಲೆಯಾಗಿದೆ. ನಮಗೆ ಸರ್ಕಾರ ನ್ಯಾಯ ಕೊಡಬೇಕು, ನೈಜ ಆರೋಪಿ ಬಂಧಿಸಬೇಕು. ಯಾರ‍್ಯಾರನ್ನೋ ಹಿಡಿಯೋ ಅಗತ್ಯವಿಲ್ಲ, ನೈಜ ಆರೋಪಿಗಳನ್ನು ಹಿಡಿಯಿರಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕೈ ನಾಯಕ ಅಲ್ತಾಫ್‌ ಖಾನ್ ಮನೆ ಬಳಿ ಹೊಂಚು ಹಾಕಿದ್ದ ಮೂವರು ವಶಕ್ಕೆ

    ಘಟನೆಯೇನು?: ಇಬ್ಬರು ದುಷ್ಕರ್ಮಿಗಳು ಜಲೀಲ್‌(40) ಅವರ ಎದೆಯ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಶನಿವಾರ ಸಂಜೆ ಜಲೀಲ್‌(Jaleel) ಅಂಗಡಿಯಲ್ಲಿ ಕುಳಿತಿದ್ದಾಗ ಅಂಗಡಿಯ ಪಕ್ಕದ ರಸ್ತೆಯಲ್ಲಿ ದ್ವಿಚಕ್ರವಾಹನವನ್ನು ಇಟ್ಟು ಏಕಾಏಕಿ ಚೂರಿ ಇರಿದು ಪರಾರಿಯಾಗಿದ್ದರು.

    ರಕ್ತದ ಮಡುವಿನಲ್ಲಿ ಬಿದ್ದಿದ್ದ ಜಲೀಲ್‌ ಅವರ ಎದೆಯ ಭಾಗ ಮತ್ತು ಬೆನ್ನಿಗೆ ಹರಿತವಾದ ಚೂರಿಯಿಂದ ಇರಿದಿದ್ದು, ಅವರ ಬೆನ್ನಿನಲ್ಲಿದ್ದ ಚೂರಿಯನ್ನು ತೆಗೆದ ಫಾರೂಕ್ ಅವರು ತಕ್ಷಣ ಕಾರಿನಲ್ಲಿ ಮುಕ್ಕದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಜಲೀಲ್ ಮೃತಪಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]