Tag: ಜಲೀಲ್‌ ಹತ್ಯೆ

  • ಕಾಟಿಪಳ್ಳದಲ್ಲಿ ಜಲೀಲ್ ಕೊಲೆ ಪ್ರಕರಣ- ಓರ್ವ ಪರಾರಿ, ಮೂವರು ಆರೋಪಿಗಳ ಬಂಧನ

    ಕಾಟಿಪಳ್ಳದಲ್ಲಿ ಜಲೀಲ್ ಕೊಲೆ ಪ್ರಕರಣ- ಓರ್ವ ಪರಾರಿ, ಮೂವರು ಆರೋಪಿಗಳ ಬಂಧನ

    ಮಂಗಳೂರು: ಇಲ್ಲಿನ ಸುರತ್ಕಲ್‍ (Surathkal) ನ ಕಾಟಿಪಳ್ಳದಲ್ಲಿ ನಡೆದ ಜಲೀಲ್ ಕೊಲೆ ಪ್ರಕರಣದ ಆರೋಪಿಗಳು ಅಂದರ್ ಆಗಿದ್ದಾರೆ. ಕೊಲೆ ಮಾಡಿದ ಇಬ್ಬರು ಸಹಕರಿಸಿದ ಓರ್ವ ಬಂಧನವಾದರೆ, ಮತ್ತೋರ್ವ ಪರಾರಿಯಾಗಿದ್ದಾನೆ.

    ಮಂಗಳೂರು (Mangaluru) ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳ ಎಂಬಲ್ಲಿ ಮೊನ್ನೆ ರಾತ್ರಿ ಭೀಕರ ಹತ್ಯೆ ನಡೆದಿತ್ತು. ಕೃಷ್ಣಾಪುರ ನಿವಾಸಿ ಕಾಟಿಪಳ್ಳ ಬಳಿ ಅಂಗಡಿ ಇಟ್ಟುಕೊಂಡಿದ್ದ ಅಬ್ದುಲ್ ಜಲೀಲ್ ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಹತ್ಯೆ ಪ್ರಕಣ ಸಂಬಂಧ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

    ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ, ಉಡುಪಿ (Udupi) ಜಿಲ್ಲೆ, ಹೆಜಮಾಡಿ ನಿವಾಸಿ ಸವಿನ್ ಕಾಂಚನ್, ಕಾಟಿಪಳ್ಳ ನಿವಾಸಿ ಪವನ್ ಅಲಿಯಾಸ್ ಪಚ್ಚು ಬಂಧಿತರು. ಶೈಲೇಶ್ ಮತ್ತು ಸವಿನ್ ಕೊಲೆ ಮಾಡಿದರೆ ಪವನ್ ಕೊಲೆ ಮಾಡಿದವರಿಗೆ ಬೈಕ್ನಲ್ಲಿ ಡ್ರಾಪ್ ಕೊಟ್ಟಿದ್ದಾನೆ. ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಜಲೀಲ್‌ ಹತ್ಯೆ ಕೇಸ್‌ – ಇಬ್ಬರು ಮಹಿಳೆಯರ ವಿಚಾರಣೆ, ಗಾಂಜಾ ಮಾಫಿಯಾದ ವಾಸನೆ

    ಶೈಲೇಶ್ ಮತ್ತು ಸವಿನ್ ಇಬ್ಬರೂ ಕೂಡ ರೌಡಿಶೀಟರ್‍ಗಳಾಗಿದ್ದು 2021ರಲ್ಲಿ ನಟೋರಿಯಸ್ ರೌಡಿಶೀಟರ್ ಪಿಂಕಿ ನವಾಜ್ ಕೊಲೆ ಯತ್ನದ ಆರೋಪಿಗಳಾಗಿದ್ದರು. ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಕೊಲೆಗೆ ಕಾರಣ ಏನು ಅಂತ ತನಿಖೆ ನಡೆಸುತ್ತಿದ್ದಾರೆ.

    ಬಂಧಿತ ಮೂವರು ಆರೋಪಿಗಳನ್ನು ಮಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಮುಂದಿನ ಹತ್ತು ದಿನಗಳ ಕಾಲ ಪೊಲೀಸರ ಕಷ್ಟಡಿಗೆ ಆರೋಪಿಗಳನ್ನು ನೀಡಲಾಗಿದೆ. ಇನ್ನು ಸುರತ್ಕಲ್ ಭಾಗದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಡಿಸೆಂಬರ್ 29 ಬೆಳಗ್ಗೆ 6 ಗಂಟೆವರೆಗೂ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಮತ್ತು ಮದ್ಯ ಮಾರಾಟವನ್ನೂ ಬಂದ್ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಜಲೀಲ್‌ ಹತ್ಯೆ ಕೇಸ್‌ – ಇಬ್ಬರು ಮಹಿಳೆಯರ ವಿಚಾರಣೆ, ಗಾಂಜಾ ಮಾಫಿಯಾದ ವಾಸನೆ

    ಜಲೀಲ್‌ ಹತ್ಯೆ ಕೇಸ್‌ – ಇಬ್ಬರು ಮಹಿಳೆಯರ ವಿಚಾರಣೆ, ಗಾಂಜಾ ಮಾಫಿಯಾದ ವಾಸನೆ

    ಮಂಗಳೂರು: ಸುರತ್ಕಲ್‌ ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ(Surathkal Jaleel Murder Case) ಸಂಬಂಧಿಸಿದಂತೆ ಪೊಲೀಸರು ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಿದ್ದು ಗಾಂಜಾ ಮಾಫಿಯಾದ ವಾಸನೆ ಬಂದಿದೆ.

    ವ್ಯಾಪಾರಿ ಜಲೀಲ್ ಹತ್ಯೆಯ ನಡೆಸಿ ಪರಾರಿಯಾದ ಇಬ್ಬರು ದುಷ್ಕರ್ಮಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಹಲವರನ್ನು ವಿಚಾರಣೆ ನಡೆಸಿದ್ದಾರೆ. ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಿದ್ದಾರೆ.

    ಶನಿವಾರ ಸಂಜೆ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಜಲೀಲ್ ಜೊತೆ ಕೆಲ ಕಾಲ ಮಾತಿನ ಚಕಮಕಿ ನಡೆಸಿದ ಬಳಿಕ ಏಕಾಏಕಿ ಚೂರಿಯಿಂದ ಇರಿದು ಪರಾರಿಯಾಗಿದ್ದರು. ಈ ಬಗ್ಗೆ ಅಲ್ಲೇ ಇದ್ದ ಪ್ರತ್ಯಕ್ಷದರ್ಶಿಗಳು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಆದರೆ ಆರೋಪಿಗಳು ಯಾರು ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟ ಸುಳಿವು ಪೊಲೀಸರಿಗೆ ಸಿಕ್ಕಿಲ್ಲ.

    ಅನುಮಾನ ಇದ್ದ ಹಲವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ನಡುವೆ ಸುರತ್ಕಲ್ ಠಾಣೆಗೆ ಇಬ್ಬರು ಮಹಿಳೆಯರನ್ನು ಕರೆಸಿಕೊಂಡ ಪೊಲೀಸರು ಸಾಕಷ್ಟು ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭ ಕೊಲೆಯ ಕಾರಣಗಳ ಬಗ್ಗೆ ಪೊಲೀಸರಿಗೆ ಮಹತ್ವದ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಇದನ್ನೂ ಓದಿ: ಜಲೀಲ್ ಯಾವುದೇ ಗಲಾಟೆಗೆ ಹೋಗದ ಬಡಪಾಯಿ : ಸಹೋದರ ಮಹಮ್ಮದ್

    ಈ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್(Mangaluru Police Commissioner Shashi Kumar) ತನಿಖೆ ಪೂರ್ಣಗೊಳ್ಳುವುವರೆಗೂ ಯಾವುದನ್ನೂ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಶೀಘ್ರದಲ್ಲೇ ಆರೋಪಿಗಳ ಬಂಧನ ಆಗಲಿದೆ ಎಂದು ತಿಳಿಸಿದ್ದಾರೆ.

    ಜಲೀಲ್ ಸುಮಾರು 15 ವರ್ಷಗಳಿಂದ ಕಾಟಿಪಳ್ಳದ ನಾಲ್ಕನೇ ಬ್ಲಾಕ್‌ನಲ್ಲಿ ಫ್ಯಾನ್ಸಿ ಅಂಗಡಿ ತೆರೆದಿದ್ದರು. ಎಲ್ಲಾ ಜಾತಿ, ಧರ್ಮದವರ ಚೆನ್ನಾಗಿದ್ದರು. 42 ವರ್ಷದ ಜಲೀಲ್ ಅವರಿಗೆ ಮದುವೆಯಾಗಿದ್ದರೂ ಮಕ್ಕಳಿರಲಿಲ್ಲ. ಈ ಕಾರಣಕ್ಕೆ ಕಳೆದ ಆರು ತಿಂಗಳ ಹಿಂದೆ ಮಗುವನ್ನು ದತ್ತು ಪಡೆದು ಸಾಕುತ್ತಿದ್ದರು.

    ಈ ನಡುವೆ ಕಳೆದ ಕೆಲ ತಿಂಗಳ ಹಿಂದೆ ಯಾವುದೋ ಕಾರಣಕ್ಕೆ ಕೆಲ ಯುವಕರು ಹಾಗೂ ಮಹಿಳೆಯರು ಇವರೊಂದಿಗೆ ಮಾತಿನ ಚಕಮಕಿ ನಡೆಸಿ ಧಮ್ಕಿ ಹಾಕಿದ್ದ ವಿಚಾರ ಪೊಲೀಸ್‌ ತನಿಖೆಯಿಂದ ಬೆಳಕಿಗೆ ಬಂದಿದೆ. ಈಗ ಅದೇ ಯುವಕರು ಹಾಗೂ ಮಹಿಳೆಯರ ತಂಡ ಈ ಕೃತ್ಯ ಎಸಗಿರಬಹುದು ಎಂಬ ಅನುಮಾನ ಇದ್ದು ಪೊಲೀಸರು ಈ ಕೋನದಲ್ಲಿ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸುರತ್ಕಲ್ ಬಳಿ ಚಾಕು ಇರಿದು ವ್ಯಕ್ತಿ ಕೊಲೆ – 4 ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

    ಹಲ್ಲೆ ನಡೆಸಿದ ಇಬ್ಬರು ದುಷ್ಕರ್ಮಿಗಳು ಗಾಂಜಾ ವ್ಯಸನಿಗಳಾಗಿರಬಹುದು ಎಂಬ ಶಂಕೆ ಇದ್ದು ಗಾಂಜಾ ನಶೆಯಲ್ಲೂ ಈ ಹತ್ಯೆ ನಡೆಸಿರುವ ಸಾಧ್ಯತೆ ಇದೆ.

    ಹತ್ಯೆಯ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿ, ಈ ಹತ್ಯೆ ಆಗಬಾರದಿತ್ತು. ಇದು ಬಹಳ ದುರದೃಷ್ಟಕರ. ತನಿಖೆ ಪ್ರಗತಿಯಲ್ಲಿದೆ. ಜನರು ಊಹಾಪೋಹಗಳಿಗೆ ಕಿವಿಕೊಡಬಾರದು. ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]