Tag: ಜವಹರಲಾಲ್ ನೆಹರೂ

  • ಪ್ರಜಾಪ್ರಭುತ್ವ, ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರೂ – ಸಿದ್ದರಾಮಯ್ಯ

    ಪ್ರಜಾಪ್ರಭುತ್ವ, ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರೂ – ಸಿದ್ದರಾಮಯ್ಯ

    – ಮೋದಿ ದೇಶದಲ್ಲಿ ಒಂದೇ ಒಂದು ಸಾರ್ವಜನಿಕ ಉದ್ದಿಮೆ ಸ್ಥಾಪಿಸಲಿಲ್ಲ ಎಂದ ಸಿಎಂ

    ಬೆಂಗಳೂರು: ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ (Jawaharlal Nehru) ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಬಣ್ಣಿಸಿದರು.

    ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ (KPCC Office) ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಇದನ್ನೂ ಓದಿ: ಹಿಂದೂ ರಾಷ್ಟ್ರ ಕನಸು, ಮೋದಿ ಏನು ದೇವರ ಅವತಾರನಾ?: ಸಿದ್ದರಾಮಯ್ಯ ವ್ಯಂಗ್ಯ

    ನೆಹರೂ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶವನ್ನ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು. ಇಡೀ ವಿಶ್ವದಲ್ಲಿ ಶಾಂತಿ ನೆಲೆಸಬೇಕು ಎನ್ನುವ ಬದ್ಧತೆ ಉಳ್ಳವರಾಗಿದ್ದರು. ಆಗ ಮಾತ್ರ ವಿಶ್ವದ ಅಭಿವೃದ್ಧಿ ಸಾಧ್ಯ ಎನ್ನುವ ನಂಬಿಕೆ ಹೊಂದಿದ್ದರು ಎಂದು ವಿವರಿಸಿದರು.

    ನೆಹರೂ ಇತಿಹಾಸಕಾರರೂ ಆಗಿದ್ದರು. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು. ಅಂಬೇಡ್ಕರ್ ಅವರ ಮಾತಿನಂತೆ, ಇತಿಹಾಸ ಗೊತ್ತಿದ್ದವರು ಮಾತ್ರ ದೇಶದ ಭವಿಷ್ಯ ರೂಪಿಸಬಲ್ಲರು. ನೆಹರೂ ಈ ಕೆಲಸ ಮಾಡಿ ದೇಶವನ್ನು ಕಟ್ಟಿ ಬೆಳೆಸಿದರು ಎಂದು ಉದಾಹರಣೆಗಳ ಸಮೇತ ವಿವರಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಅಪಘಾತಕ್ಕೆ ಒಂದೇ ದಿನ 51 ಬಲಿ- ಸಂಚಾರಿ ನಿಯಮ ಪಾಲನೆಗೆ ಅಲೋಕ್ ಕುಮಾರ್ ಮನವಿ

    ಸ್ವಾತಂತ್ರ್ಯ ಬಂದಾಗ ನಿರುದ್ಯೋಗ ವ್ಯಾಪಕವಾಗಿತ್ತು:
    ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಅನಕ್ಷರತೆ, ಬಡತನ, ನಿರುದ್ಯೋಗ ವ್ಯಾಪಕವಾಗಿತ್ತು. ಆರ್ಥಿಕ ಚೈತನ್ಯ ಇರಲಿಲ್ಲ. ಹಳ್ಳಿಗಳು ಸಂಕಷ್ಟದಲ್ಲಿದ್ದವು. ಈ ಎಲ್ಲಕ್ಕೂ ಪರಿಹಾರವಾಗಿ ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಜೀವನದುದ್ದಕ್ಕೂ ಶ್ರಮಿಸಿದರು. ದೇಶವನ್ನು ವೈಜ್ಞಾನಿಕ, ಆಧುನಿಕತೆ ಆಧಾರದಲ್ಲಿ ನಿರ್ಮಿಸುತ್ತಾ ಭಾರತೀಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ನಿರಂತರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದರು ಎಂದು ವಿವರಿಸಿದರು. ಇದನ್ನೂ ಓದಿ: ಬೆಂಗ್ಳೂರಲ್ಲಿ ಡ್ರಗ್ಸ್ ದಂಧೆ ಹೆಚ್ಚಾಗಲು ಹಿಂದಿನ ಬಿಜೆಪಿ ಆಡಳಿತವೆ ಕಾರಣ: ರಾಮಲಿಂಗಾರೆಡ್ಡಿ

    ನೆಹರೂ ಬಗ್ಗೆ ಮಾತನಾಡುವ ಯೋಗ್ಯತೆ ಮೋದಿಗೆಲ್ಲಿದೆ?
    ಭಾರತವನ್ನು ಇಡೀ ವಿಶ್ವದಲ್ಲಿ ಅತಿದೊಡ್ಡ ಮತ್ತು ಸದೃಢ ಪ್ರಜಾಪ್ರಭುತ್ವ ದೇಶವನ್ನಾಗಿ ರೂಪಿಸಿದ್ದು ನೆಹರೂ. ದೇಶದಲ್ಲಿರುವ ಬಹುತೇಕ ಅಣೆಕಟ್ಟುಗಳು ಆಗಿದ್ದು ನೆಹರೂ ಅವರ ಅವಧಿಯಲ್ಲಿ. ಕಾಂಗ್ರೆಸ್ ಏನೂ ಮಾಡಿಲ್ಲ ಎನ್ನುವ ನರೇಂದ್ರ ಮೋದಿ (PM Modi), ಇವತ್ತಿನವರೆಗೆ ಒಂದೇ ಒಂದು ಅಣೆಕಟ್ಟೆಯನ್ನಾಗಲಿ, ಸಾರ್ವಜನಿಕ ಉದ್ದಿಮೆಯನ್ನಾಗಲಿ ಸ್ಥಾಪಿಸಲಿಲ್ಲ. ಇವರಿಗೆ ನೆಹರೂ ಬಗ್ಗೆ ಮಾತನಾಡುವ ಯೋಗ್ಯತೆ ಏನಿದೆ ಎಂದು ಪ್ರಶ್ನಿಸಿದರು.

    ನೆಹರೂ ಮತ್ತು ಇಡೀ ಭಾರತೀಯರು, ಬ್ರಿಟಿಷರ ವಿರುದ್ಧ ಹೋರಾಡುತ್ತಾ ಜೈಲು ವಾಸ ಅನುಭವಿಸುತ್ತಿದ್ದಾಗ ಆರ್‌ಎಸ್‌ಎಸ್‌ ಬ್ರಿಟೀಷರ ವಿರುದ್ಧ ನೆಪಕ್ಕೂ ಸೊಲ್ಲೆತ್ತಲಿಲ್ಲ. ಇವರು ಈಗ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಇರುವ ನಮಗೆ ದೇಶಭಕ್ತಿಯ ಪಾಠ ಮಾಡುತ್ತಾ ನಗೆಪಾಟಲಿಗೀಡಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

    ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್, ಮಂಜುನಾಥ್ ಭಂಡಾರಿ, ಮಾಜಿ ಸಚಿವೆ ರಾಣಿ ಸತೀಶ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಕೆ ಹರಿಪ್ರಸಾದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

  • ಭಾರತ – ಚೀನಾ ಸಂಘರ್ಷಕ್ಕೆ ಮೂಲ ಕಾರಣ ನೆಹರೂ – ಸಿ.ಟಿ ರವಿ

    ಭಾರತ – ಚೀನಾ ಸಂಘರ್ಷಕ್ಕೆ ಮೂಲ ಕಾರಣ ನೆಹರೂ – ಸಿ.ಟಿ ರವಿ

    ಬೆಂಗಳೂರು: ಭಾರತ-ಚೀನಾ(China-India) ಇಂದಿನ ಸಂಘರ್ಷಕ್ಕೆ ನೆಹರೂ (Jawaharlal Nehru) ಅವರೇ ಕಾರಣ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಆರೋಪಿಸಿದ್ದಾರೆ.

    ಚೀನಾದಿಂದ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಭಾರತವನ್ನು ಕಾಂಗ್ರೆಸ್ (Congress) ದುರ್ಬಲ ದೃಷ್ಟಿಯಿಂದ ನೋಡುವುದು ಬೇಡ. ನಮ್ಮ ಭಾರತೀಯ ಸೇನೆ ದುರ್ಬಲ ಅಲ್ಲ. ಪ್ರತಿ ಹಂತದಲ್ಲೂ ಚೀನಾ ಸೇನೆಗೆ (China Army) ಸಮಬಲ ತೋರಿಸಿದೆ. ಇಂತ ಸಂಘರ್ಷದ ಬಗ್ಗೆ ಕಾಂಗ್ರೆಸ್ ಹಗುರವಾಗಿ ಮಾತನಾಡಬಾರದು ಎಂದಿದ್ದಾರೆ. ಇದನ್ನೂ ಓದಿ: ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಚೀನಾ ರಾಯಭಾರ ಕಚೇರಿಯಿಂದ ದೇಣಿಗೆ: ಅಮಿತ್ ಶಾ

    ಸಂಘರ್ಷಕ್ಕೆ ಮೂಲ ಕಾರಣ ನೆಹರೂ. ಹಿಂದಿ ಚೀನಿ ಭಾಯಿ-ಭಾಯಿ ಅಂತಾ ಪ್ರಮಾದ ಮಾಡಿದ್ದು ನೆಹರೂ. ಅವರ ಪ್ರಮಾದದಿಂದ ಪ್ರತಿ ವರ್ಷ ನಮ್ಮ ದೇಶ ಉತ್ತರ ಕೊಡಬೇಕಾಗ್ತಿದೆ. ಆದ್ರೆ ಭಾರತ ಯಾರಿಗೂ ತಲೆ ಬಾಗಲ್ಲ. ಈ ವಿಚಾರ ಕಾಂಗ್ರೆಸ್ ಸಣ್ಣದಾಗಿ ಮಾತನಾಡಬಾರದು ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಭಾರತ-ಚೀನಾ ಗಡಿ ಸಂಘರ್ಷ – ಅರುಣಾಚಲ ಪ್ರದೇಶದಲ್ಲಿ ವಾಯು ಗಸ್ತು ಆರಂಭಿಸಿದ ಭಾರತೀಯ ಸೇನೆ

    ಚೀನಾದವರು ಗಡಿ ವಾಸ್ತವ ರೇಖೆ (LAC) ದಾಟಿ ಬಂದಾಗೆಲ್ಲ ಸಂಘರ್ಷ ಆಗುತ್ತೆ. ಆದ್ರೆ ಕಾಂಗ್ರೆಸ್ ಇದರಲ್ಲಿ ಸಣ್ಣ ರಾಜಕಾರಣ ಮಾಡ್ತಿದೆ. ಕಾಶ್ಮೀರದಲ್ಲೂ ಕಾಂಗ್ರೆಸ್ ಸಣ್ಣತನ ಪ್ರದರ್ಶಿಸಿತು. ಈ ಬೆಳವಣಿಗೆ ಸರಿಯಲ್ಲ. ಚೀನಾವನ್ನು ಟಿಬೆಟ್ ನಲ್ಲೇ ತಡೆದು ನಿಲ್ಲಿಸಿದ್ದರೆ ಅವರು ಇಲ್ಲಿಯವರೆಗೆ ಬರ್ತಿರ್ಲಿಲ್ಲ. ಇದು ಕಾಂಗ್ರೆಸ್ ಕಾಲದಲ್ಲೇ ಮಾಡಬೇಕಾಗಿತ್ತು, ಅವರು ಮಾಡಲಿಲ್ಲ. ಈ ಪ್ರಮಾದದಿಂದ ಸಮಸ್ಯೆ ಈಗ ಆಗ್ತಿದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಾವರ್ಕರ್‌ನಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ ನೆಹರು: ಸಿದ್ದರಾಮಯ್ಯ

    ಸಾವರ್ಕರ್‌ನಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ ನೆಹರು: ಸಿದ್ದರಾಮಯ್ಯ

    ಬೆಂಗಳೂರು: ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ ಎಂದು ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?
    ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ? ಬೊಮ್ಮಾಯಿ ಅವರೇ ಪಂಡಿತ್ ಜವಾಹರಲಾಲ್ ನೆಹರು ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ. ಇದನ್ನೂ ಓದಿ: ಗಾಂಧೀಜಿ ಕಾಂಗ್ರೆಸ್ ಬೇರೆ, ಈಗಿನದು ಡುಪ್ಲಿಕೇಟ್ ಕಾಂಗ್ರೆಸ್: ಪ್ರಹ್ಲಾದ್‌ ಜೋಶಿ

    ಆರ್‌ಎಸ್‌ಎಸ್‌ ಕೋಮುರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರು ಅವರ ಬಗ್ಗೆ ಆರ್‌ಎಸ್‌ಎಸ್‌ ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ನಿಮಗೇನಾಗಿದೆ ಬೊಮ್ಮಾಯಿ ಅವರೇ, ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ.ಡಿ.ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ. ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿ ಎರಡು ಬಾರಿ (1921 ಮತ್ತು 1931) ಜೈಲುಶಿಕ್ಷೆ ಅನುಭವಿಸಿದ್ದ ಆರ್‌ಎಸ್‌ಎಸ್‌ ಸಂಸ್ಥಾಪಕ ಕೆ.ಬಿ.ಹೆಡಗೆವಾರ್ ಅವರ ಚಿತ್ರವನ್ನು ಯಾಕೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ಕೈಬಿಟ್ಟಿದ್ದೀರಿ ಬೊಮ್ಮಾಯಿ ಅವರೇ? ಇದನ್ನೂ ಓದಿ: ಕಾಶ್ಮೀರದಲ್ಲಿ ಇನ್ನು ಭಾರತದ ಧ್ವಜ ಮಾತ್ರ ಹಾರುತ್ತದೆ, ಪಾಕ್ ಧ್ವಜ ಇತಿಹಾಸ ಮಾತ್ರ: ಮನೋಜ್ ಸಿನ್ಹಾ

    ತ್ರಿವರ್ಣ ಧ್ವಜವನ್ನು ತಿರಸ್ಕರಿಸಿದ್ದ ಅವರ ಬಂಡವಾಳ ಬಯಲಾಗಬಹುದೆಂಬ ಭಯವೇ? ಬ್ರಿಟಿಷರ ಕ್ಷಮೆ ಕೇಳಿ ಜೈಲಿನಿಂದ ಬಿಡುಗಡೆಗೊಂಡ ವಿ.ಡಿ.ಸಾವರ್ಕರ್ ಅವರಿಗೆ ಮೊದಲ ಸಾಲಿನ ಗೌರವ, ಸ್ವಾತಂತ್ರ್ಯ ಹೋರಾಟದ ಜೊತೆ ಬಹುಜನ ಸಮಾಜದ ಹಿತಾಸಕ್ತಿಯ ರಕ್ಷಣೆಗಾಗಿಯೂ ಹೋರಾಟ ನಡೆಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ. ‘ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ’. ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ಪಂಡಿತ ಜವಾಹರಲಾಲ್ ನೆಹರು ಅವರಿಗೆ ಮಾಡಿರುವ ಅವಮಾನವನ್ನು ಸಹಿಸಲಾಗದು. ಈ ಅವಮಾನಕ್ಕಾಗಿ ಮೊದಲು ರಾಜ್ಯದ ಜನತೆಯ ಕ್ಷಮೆ ಕೇಳಿ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಚಾಟಿ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]