Tag: ಜಸ್ವಂತ್ ಸೀಮಗ್

  • ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನ

    ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನ

    ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಜಸ್ವಂತ್ ಸಿಂಗ್(82) ಇಂದು ಬೆಳಗ್ಗೆ ನಿಧನರಾಗಿದ್ದಾರೆ.

    ಹಿರಿಯ ನಾಯಕನ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಜನಾಥ್ ಸಿಂಗ್, ಸಿಎಂ ಬಿ.ಎಸ್ ಯಡಿಯೂರಪ್ಪ, ಸಚಿವ ಸಿ.ಟಿ ರವಿ ಸೇರಿದಂತೆ ಹಲವಾರು ಮಂದಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮೋದಿ, ಜಸ್ವಂತ್ ಸಿಂಗ್ ಅವರು ರಾಷ್ಟ್ರಕ್ಕಾಗಿ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದರು. ಮೊದಲು ಸೈನಿಕರಾಗಿದ್ದ ಅವರು ನಂತರ ರಾಜಕೀಯದ ಸುದೀರ್ಘ ಒಡನಾಟದಿಂದಾಗಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ನಿರ್ಣಾಯಕ ಖಾತೆಗಳನ್ನು ನಿರ್ವಹಿಸಿದ್ದರು. ಬಿಜೆಪಿ ಬಲವರ್ಧನೆಗೆ ಸಹಕರಿಸಿದ್ದರು. ಇದೀಗ ಅವರ ನಿಧನ ಬೇಸರ ತಂದದಿದೆ. ಅಲ್ಲದೆ ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಬರೆದುಕೊಂಡಿದ್ದಾರೆ.

    ಈಗಾಗಲೇ ರೈಲ್ವೆ ಸಚಿವ ಸುರೇಶ್ ಅಂಗಡಿ ಹಾಗೂ ರಾಜ್ಯ ಸಭಾ ಸದಸ್ಯ ಅಶೋಕ್ ಗಸ್ತಿ ಅವರನ್ನು ಕಳೆದುಕೊಂಡ ನೋವಿನ ಬೆನ್ನಲ್ಲೇ ಇದೀಗ ಹಿರಿಯ ನಾಯಕನ ಸಾವು ಬಿಜೆಪಿಗೆ ಮತ್ತಷ್ಟು ಆಘಾತ ತಂದಿದೆ.