ನವವೆಹಲಿ: ಏಪ್ರಿಲ್ ತಿಂಗಳ ರಾಮನವಮಿ ಸಂದರ್ಭ ಎರಡು ಸಮುದಾಯಗಳ ನಡುವೆ ಭುಗಿಲೆದ್ದಿದ್ದ ಸಂಘರ್ಷ ಮತ್ತೆ ಪ್ರಾರಂಭವಾಗಿದೆ. ದೆಹಲಿಯ ಜಹಾಂಗೀರ್‌ಪುರಿಯ ಜೆ ಬ್ಲಾಕ್‌ನಲ್ಲಿ ಮಂಗಳವಾರ ರಾತ್ರಿ ಮತ್ತೆ ಕಲ್ಲು ತೂರಾಟ ನಡೆದಿದ್ದು, ಜನರಲ್ಲಿ ಭೀತಿ ಹೆಚ್ಚಿಸಿದೆ.
ವರದಿಗಳ ಪ್ರಕಾರ ಮಂಗಳವಾರ ರಾತ್ರಿ 2 ಗೂಂಪುಗಳ ನಡುವೆ ವಾಗ್ವಾದ ನಡೆದು, ದೊಡ್ಡ ಜಗಳವೇ ಏರ್ಪಟ್ಟಿತು. ಬಳಿಕ ಎರಡೂ ಕಡೆಯವರು ಪರಸ್ಪರ ಕಲ್ಲು ತೂರಾಟ ಪ್ರಾರಂಭಿಸಿದರು. ಘಟನೆ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜನರು ಕಲ್ಲು ತೂರಾಟ ನಡೆಸುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಮೆಕ್ಸಿಕೋ ರಸ್ತೆಯಲ್ಲಿ ಗುಂಡಿನ ದಾಳಿ- 5 ವಿದ್ಯಾರ್ಥಿಗಳು ಸೇರಿ 6 ಜನರ ಹತ್ಯೆ
ಘಟನೆಯಲ್ಲಿ ಹಲವು ವಾಹನಗಳು ಧ್ವಂಸಗೊಂಡಿದ್ದು, ಸಂಘರ್ಷವನ್ನು ಹತೋಟಿಗೆ ತರಲು ತಕ್ಷಣವೇ ಪೊಲೀಸರನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಕಲ್ಲುತೂರಾಟಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ವಿಶಾಲ್ ಹಾಗೂ ವೀರುನನ್ನು ಪೊಲೀಸರು ಬಂಧಿಸಿದ್ದು, ಶೀಘ್ರದಲ್ಲೇ ಇತರರನ್ನೂ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಡಿಸಿಪಿ ಉಷಾ ರಂಗಣ್ಣಿ ತಿಳಿಸಿದ್ದಾರೆ. ಇದನ್ನೂ ಓದಿ: ಮೈಕ್ ದಂಗಲ್ – ಇಂದು ಬಿಜೆಪಿ ಮುಖಂಡರ ಮನೆ ಮುಂದೆ ಶ್ರೀರಾಮ ಸೇನೆಯಿಂದ ಪ್ರತಿಭಟನೆ
ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿ ಕಾಪಾಡಲು ಹೆಚ್ಚುವರಿ ಪೊಲೀಸರ ತಂಡವನ್ನು ಕಳುಹಿಸಲಾಗಿದೆ.
ನವದೆಹಲಿ: ಜಹಾಂಗೀರ್‌ಪುರಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಬಂಧನದ ಹಿನ್ನೆಲೆ ಕಳವಳ ವ್ಯಕ್ತಪಡಿಸಿರುವ ಜಮಿಯತ್ ಉಲೇಮಾ-ಎ-ಹಿಂದ್ ನಿಯೋಗ ಭಾನುವಾರ ಪ್ರಮುಖ ಆರೋಪಿಗಳನ್ನು ಮುಗ್ದರೆಂದು ಕರೆದಿದೆ.
ಭಾನುವಾರ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ನಿಯೋಗ, ಕಲ್ಲು ತೂರಾಟಗಾರರು ಎಂಬ ಪದವನ್ನು ಬಳಸಿಕೊಂಡು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಜವಾಬ್ದಾರಿಯುತ ಪಾತ್ರ ವಹಿಸಬೇಕು. ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ತಿಳಿಸಿದೆ. ಇದನ್ನೂ ಓದಿ: ನಾನು ಬಾಬರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದೆ, ಶಿವಸೇನೆ ನಾಯಕರು ಯಾರೂ ಇರಲಿಲ್ಲ : ಫಡ್ನವೀಸ್
ಜಮಿಯತ್ ನಿಯೋಗ ಜಹಾಂಗೀರ್‌ಪುರಿಯಲ್ಲಿ ನಿರ್ಗತಿಕರಿಗೆ 500 ಈದ್ ಕಿಟ್‌ಗಳನ್ನು ವಿತರಿಸಿದ್ದು, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿ ಕೊಡುವುದಾಗಿ ಪ್ರತಿಜ್ಞೆ ಮಾಡಿದೆ. ಕಳೆದ ತಿಂಗಳು ಜಹಾಂಗೀರ್‌ಪುರಿಯಲ್ಲಿ ನಡೆದ ಹನುಮಾನ್ ಜಯಂತಿ ಶೋಭಾಯಾತ್ರೆ ಸಂದರ್ಭ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದ್ದು, 8 ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರಿಗೆ ಗಾಯಗಳಾಗಿದ್ದವು. ಇದನ್ನೂ ಓದಿ: ಖಲೀಸ್ತಾನ ಬೇಡಿಕೆ ಸಾಂವಿಧಾನಿಕ ಹಕ್ಕು ಎಂದ ಆಪ್ ನಾಯಕ ಹರ್‌ಪ್ರೀತ್‌ಸಿಂಗ್
ನವದೆಹಲಿ: ಕಳೆದ ವಾರ ನಡೆದ ಜಹಾಂಗೀರ್‌ಪುರಿ ಕೋಮು ಘರ್ಷಣೆಯ ಪ್ರಮುಖ ಆರೋಪಿ ಅನ್ಸಾರ್ ಶೇಖ್ ಮತ್ತು ಇತರ ಶಂಕಿತರ ಆಸ್ತಿಗಳ ಮೂಲಗಳ ತನಿಖೆಗಾಗಿ ಜಾರಿ ನಿರ್ದೇಶನಾಲಯ (ಇಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ.
ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ಥಾನಾ ಕೇಂದ್ರ ಏಜೆನ್ಸಿಗೆ ಪತ್ರ ಬರೆದ ಒಂದು ದಿನದ ನಂತರ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶೇಖ್ ಮತ್ತು ಇತರ ಶಂಕಿತರ ಎಲ್ಲಾ ಹಣಕಾಸು ವ್ಯವಹಾರಗಳನ್ನು ಇಡಿ ಪರಿಶೀಲಿಸುತ್ತಿದೆ. ಕೋಮು ಉದ್ವಿಗ್ನತೆಯನ್ನು ಉತ್ತೇಜಿಸಲು ವಿದೇಶಿ ನೆರವಿನ ಹಣವನ್ನು ಬಳಸಲಾಗಿದೆಯೇ ಎಂದು ತನಿಖೆ ಮಾಡುತ್ತದೆ.
ಶೇಖ್ ವಿದೇಶದಿಂದ ಹಣ ರವಾನೆ ಮಾಡಿರಬಹುದು ಎಂದು ಶಂಕಿಸಲಾಗಿದೆ ಮತ್ತು ದೆಹಲಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ಅವರು ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ದೊಡ್ಡ ಭವನವನ್ನು ಹೊಂದಿದ್ದಾರೆ ಎಂದು ಪ್ರಕರಣದ ಪರಿಚಿತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ:ಸಿಐಡಿ ತನಿಖೆ ಪೂರ್ಣವಾದ್ಮೇಲೆ 402 ಪಿಎಸ್‍ಐ ಹುದ್ದೆಗಳ ಪರೀಕ್ಷೆ
ಘರ್ಷಣೆಯ ತನಿಖೆಯ ಭಾಗವಾಗಿ, ದೆಹಲಿ ಪೊಲೀಸರು ಈಗಾಗಲೇ ಕಳೆದ ವಾರ ಘರ್ಷಣೆಗೆ ಕಾರಣವಾದ ದಿನಗಳಲ್ಲಿ ಅವರ ಚಲನವಲನಗಳನ್ನು ಪತ್ತೆಹಚ್ಚುತ್ತಿದ್ದಾರೆ ಮತ್ತು ಅವರ ಫೋನ್ ಕರೆಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಶೇಖ್, ಸ್ಕ್ರ್ಯಾಪ್ ವ್ಯಾಪಾರಿಯಾಗಿದ್ದು, ಜಹಾಂಗೀರ್‌ಪುರಿಯಲ್ಲಿ ತನ್ನ ಕುಟುಂಬದೊಂದಿಗೆ ವಾಸವಾಗಿದ್ದಾನೆ. ಏಪ್ರಿಲ್ 16 ರಂದು ನಡೆದ ಹಿಂಸಾತ್ಮಕ ಘರ್ಷಣೆಯ ನಂತರ ಪೊಲೀಸರು ಅನ್ಸಾರ್ ಶೇಖ್ ಮತ್ತು ಇತರ ನಾಲ್ವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್‍ಎಸ್‍ಎ) ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಲಾದ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‍ಐಆರ್) ಪೊಲೀಸರು ಶೇಖ್ ಮತ್ತು ಇತರ ನಾಲ್ವರು ಪ್ರಮುಖ ಆರೋಪಿಗಳು ಎಂದು ಹೇಳಲಾಗಿದೆ. ಇದನ್ನೂ ಓದಿ:ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್
ನವದೆಹಲಿ: ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ ಕೈಗೊಂಡಿದ್ದ ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ. ಅಲ್ಲದೇ ಎಲ್ಲ ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿ ಎರಡು ವಾರಗಳಲ್ಲಿ ಉತ್ತರಿಸುವಂತೆ ಅದು ಹೇಳಿದೆ.
ದೆಹಲಿಯ ಜಹಾಂಗೀರ್‌ಪುರಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಬುಲ್ಡೋಜರ್ ಕಾರ್ಯಾಚರಣೆ ವಿರುದ್ಧ ಇಂದು ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಜಮೀಯತ್ ಉಲೇಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಲ್.ನಾಗೇಶರಾವ್ ನೇತೃತ್ವದ ದ್ವಿ ಸದಸ್ಯ ಪೀಠ NDMC ಮೇಯರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು. ಇದನ್ನೂ ಓದಿ: ದೆಹಲಿ ಕಾರ್ಯಾಚರಣೆ ಅಪರಾಧ ಕೃತ್ಯ: ಶಶಿ ತರೂರ್
ಆರಂಭದಲ್ಲಿ ಜಹಾಂಗೀರ್ ಪುರಿ ಪ್ರಕರಣ ಸಂತ್ರಸ್ತರ ಪರ ವಾದ ಮಂಡಿಸಿದ ಹಿರಿಯ ವಕೀಲ ದುಶ್ಯಂತ್ ದವೆ, ಪ್ರಕರಣ ಸಾಂವಿಧಾನಿಕ ಮತ್ತು ರಾಷ್ಟ್ರೀಯ ದೂರಗಾಮಿ ಪ್ರಶ್ನೆಗಳನ್ನು ಎತ್ತಿದೆ, ರಾಜ್ಯ ನೀತಿಯ ಸಾಧನವಾಗಿ ಬುಲ್ಡೊಜರ್ಸ್ ಬಳಕೆ ಮಾಡಲಾಗುತ್ತಿದೆ, ನಿರ್ದಿಷ್ಟ ವರ್ಗವನ್ನು ಗುರಿಯಾಗಿಸಿಕೊಂಡು ಕಾರ್ಯಚರಣೆ ನಡೆಸಲಾಗುತ್ತಿದೆ ಎಂದರು.
ನಿನ್ನೆ ನಾವು 10:30ಕ್ಕೆ ಕೋರ್ಟ್‌ನಲ್ಲಿ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಲಿದ್ದೇವೆ ಎನ್ನುವ ಮಾಹಿತಿ ತಿಳಿದ NDMC, 9 ಗಂಟೆಯಿಂದ ಕಾರ್ಯಾಚರಣೆ ಆರಂಭಿಸಿತು. ಸುಪ್ರೀಂ ಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದ ಬಳಿಕವೂ ಕಾರ್ಯಾಚರಣೆ ನಡೆಸಲಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಧೋರಣೆಯಾಗಿದೆ ಎಂದು ಕೋರ್ಟ್‌ಗೆ ತಿಳಿಸಿದರು.
ಪೊಲೀಸರು ಮತ್ತು ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಕೆಲಸ ಮಾಡಬೇಕು. ಆದರೆ ಬಿಜೆಪಿ ನಾಯಕರ ಪತ್ರ ಆಧರಿಸಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಕಟ್ಟಡಗಳನ್ನು ಧ್ವಂಸ ಮಾಡುವಂತೆ ಹೇಗೆ ಪತ್ರ ಬರೆಯುತ್ತಾರೆ. ಪತ್ರದ ಬೆನ್ನಲ್ಲೇ ಕಾರ್ಯಾಚರಣೆ ಆರಂಭಗೊಂಡಿದೆ. ತೆರವು ಕಾರ್ಯಚರಣೆಗೂ ಮುನ್ನ ನೋಟಿಸ್ ನೀಡಬೇಕು. ಅದರ ಮೇಲೆ ಮೇಲ್ಮನವಿಗಳನ್ನು ಸ್ವೀಕರಿಸಬೇಕು. ಆದರೆ ಇಲ್ಲಿ ಯಾವುದೇ ನಿಯಮಗಳ ಪಾಲನೆಯಾಗಿಲ್ಲ ಎಂದರು. ಇದನ್ನೂ ಓದಿ: ದೆಹಲಿಯಲ್ಲಿ ಹೈಡ್ರಾಮಾ – ಸುಪ್ರೀಂನಿಂದ ತಡೆ ಆದೇಶ ಬಂದ ಬಳಿಕವೂ 2 ಗಂಟೆ ಘರ್ಜಿಸಿದ ಜೆಸಿಬಿ
50 ಲಕ್ಷ ಜನರನ್ನು ಹೊಂದಿರುವ 731 ಅನಧಿಕೃತ ಕಾಲೋನಿಗಳು ದೆಹಲಿಯಲ್ಲಿವೆ. ಎಲ್ಲವನ್ನು ಬಿಟ್ಟು ಒಂದು ಪ್ರದೇಶದಲ್ಲಿ ಒಂದು ಸಮುದಾಯವನ್ನು ಟಾರ್ಗೆಟ್ ಮಾಡಿದ್ದು ಎಷ್ಟು ಸರಿ? ಅಲ್ಲಿರುವ ಜನರು ಕಳೆದ 50 ವರ್ಷಗಳಿಂದ ಜೀವನ ನಡೆಸುತ್ತಿದ್ದಾರೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದನ್ನೆಲ್ಲ ನಡೆಯಲು ಬಿಡುವುದು ಹೇಗೆ? ಮೊದಲು ದಾಖಲೆಗಳನ್ನು ತಿದ್ದುಪಡಿ ಮಾಡಲು ಅವಕಾಶ ನೀಡಬೇಕು. ನಂತರ ಸಂಬಂಧಿಸಿದ ವ್ಯಕ್ತಿಗೆ ಅವಕಾಶ ನೀಡಬೇಕು. ಬಳಿಕ ತೆರವು ಕಾರ್ಯಾಚರಣೆ ನಡೆಯಬೇಕು. ಆದರೆ ಜಹಾಂಗೀರ್‌ಪುರಿಯಲ್ಲಿ ಬಡವರ ಮೇಲೆ ಯಾಕೆ ಪ್ರಹಾರ ನಡೆಯುತ್ತಿದೆ ಎಂದು ಆರೋಪಿಸಿದರು.
NDMC ಅತಿಕ್ರಮಣ ತೆರವು ಮಾಡುವುದಾದರೆ ಸೈನಿಕ ಫಾರ್ಮ್, ಗಾಲ್ಪ್ ಲಿಂಕ್‌ಗಳು ಒಂದಲ್ಲ ಒಂದು ಪ್ರದೇಶದಲ್ಲಿ ಅತಿಕ್ರಮಣ ಮಾಡಿಕೊಂಡಿವೆ. ಆದರೆ ಅದನ್ನು ಅಧಿಕಾರಿಗಳು ಮುಟ್ಟುವುದಿಲ್ಲ, ಬಿಜೆಪಿ ನಾಯಕರ ಪತ್ರಕ್ಕೆ ಬದ್ಧವಾಗಿ ಅಧಿಕಾರಿಗಳು ಕೆಲಸ ಮಾಡುವುದು ಖೇದಕರ ಸಂಗತಿ ಎಂದು ವಾದಿಸಿದರು.
ಬಳಿಕ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ನಡೆಯುತ್ತಿರುವ ಬುಲ್ಡೋಜರ್ ಕಾರ್ಯಾಚರಣೆ ಬಗ್ಗೆ ಪ್ರಸ್ತಾಪಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಅತಿಕ್ರಮಣ ಎನ್ನುವುದು ಇಡೀ ದೇಶದಲ್ಲಿರುವ ಸಮಸ್ಯೆ. ಆದರೆ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಒಂದೇ ಸಮುದಾಯವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕೋಮು ಘರ್ಷಣೆಗಳು ನಡೆದಾಗ ಒಂದೇ ಸಮುದಾಯದ ಆಸ್ತಿ ಮೇಲೆ ಬುಲ್ಡೋಜರ್‌ಗಳ ದಾಳಿ ನಡೆಯುತ್ತಿದೆ. ಮಧ್ಯಪ್ರದೇಶದಲ್ಲಿ ಮುಸ್ಲಿಮರು ನ್ಯಾಯ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಸಚಿವರೊಬ್ಬರು ಹೇಳುತ್ತಾರೆ. ಅವರಿಗೆ ಆ ಶಕ್ತಿಯನ್ನು ಕೊಟ್ಟವರು ಯಾರು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಅಮಿತ್ ಶಾ ಮನೆ ಕೆಡವಲು ಬುಲ್ಡೋಜರ್ ಬಳಸಿ: ರಾಘವ್ ಛಡ್ಡಾ
ಇದೇ ವೇಳೆ ದೇಶಾದ್ಯಾಂತ ನಡೆಯುತ್ತಿರುವ ತೆರವು ಕಾರ್ಯಾಚರಣೆಗೆ ತಡೆ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಇಡೀ ದೇಶದಲ್ಲಿ ತೆರವು ಕಾರ್ಯಾಚರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದಿತು. ಬಳಿಕ ಸ್ಪಷ್ಟನೆ ನೀಡಿದ ಸಿಬಲ್, ಸಮುದಾಯವನ್ನು ಟಾರ್ಗೆಟ್ ಮಾಡುವ ಸೀಮಿತ ಕಾರ್ಯಾಚರಣೆಗಳು ನಿಲ್ಲಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸುಪ್ರೀಂ ಕೋರ್ಟ್ ಪರಿಶೀಲಿಸುವುದಾಗಿ ಹೇಳಿತು.
ಈ ನಡುವೆ ಜ್ಯೂಸ್ ಅಂಗಡಿ ಮಾಲೀಕರೊಬ್ಬರನ್ನು ಪ್ರತಿನಿಧಿಸಿದ ವಕೀಲ ಸಂಜಯ್ ಹೆಗಡೆ, ನನ್ನ ಜ್ಯೂಸ್ ಅಂಗಡಿಯನ್ನು ತೆರವು ಮಾಡಲಾಗಿದೆ. ಅಂಗಡಿಗೆ ಸಂಬಂಧಿಸಿದ ಎಲ್ಲ ದಾಖಲೆಗಳು ನನ್ನ ಬಳಿ ಇದೆ. ಆಸ್ತಿ ನಷ್ಟಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಿದರು.
ಬಳಿಕ NDMC ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಒತ್ತುವರಿ ಕಾರ್ಯಾಚರಣೆ ನಿನ್ನೆಯಿಂದ ಆರಂಭವಾಗಿಲ್ಲ. ಜನವರಿ 19 ರಿಂದ ಆರಂಭವಾಗಿ ಫೆಬ್ರವರಿ, ಮಾರ್ಚ್‌ನಲ್ಲೂ ನಡೆದಿದೆ. ಅಕ್ರಮ ಕಟ್ಟಡಗಳಿಗೆ ಹಿಂದೆಯೇ ನೋಟಿಸ್ ನೀಡಿದೆ. ನೋಟಿಸ್ ಪ್ರಶ್ನೆ ಮಾಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಂದು ಹೈಕೋರ್ಟ್ ಅಕ್ರಮ ಕಟ್ಟಡಗಳ ತೆರವಿಗೆ ಸೂಚನೆ ನೀಡಿತ್ತು. ಇದನ್ನೂ ಓದಿ: ದ್ವೇಷದ ಬುಲ್ಡೋಜರ್‌ಗಳನ್ನು ಆಫ್ ಮಾಡಿ: ರಾಹುಲ್ ಗಾಂಧಿ
ದಾಖಲೆಗಳು ಇರುವುದಾದರೆ ನಾವು ನೋಟಿಸ್ ನೀಡಿದಾಗ ಯಾಕೆ ತೋರಿಸಲಿಲ್ಲ? ಖಾರ್ಗೋನ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ 88 ಹಿಂದೂಗಳು ಮತ್ತು 26 ಮುಸ್ಲಿಮರ ಕಟ್ಟಡಗಳಿದ್ದವು. ಕೋರ್ಟ್ ಇದನ್ನು ಪರಿಗಣಿಸಬೇಕು. ಅಲ್ಲದೇ ಟೇಬಲ್ ಕುರ್ಚಿ ತೆರವು ಮಾಡಲು ನೋಟಿಸ್ ಅಗತ್ಯ ಇಲ್ಲ ಎಂದು ವಾದಿಸಿದರು.
ಇದಕ್ಕೆ ಮರು ಪ್ರಶ್ನೆ ಹಾಕಿದ ಪೀಠ, ನೀವು ಟೇಬಲ್ ಕುರ್ಚಿಯನ್ನು ಮಾತ್ರ ತೆರವು ಮಾಡಿದ್ದೀರಾ? ಅದಕ್ಕೆ ಜೆಸಿಬಿ ಬಳಕೆ ಮಾಡಿದ್ದೀರಾ? ನಮ್ಮ ಬಳಿ ವಿಡಿಯೋಗಳಿವೆ. ನಾವು ಆದೇಶ ನೀಡಿದ ಬಳಿಕವೂ ಮೇಯರ್ ಕಾರ್ಯಾಚರಣೆ ಮುಂದುವರಿಸಿದ್ದಾರೆ. ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅರ್ಜಿದಾರರಿಗೂ ನೋಟಿಸ್ ಜಾರಿ ಮಾಡುತ್ತಿದ್ದು ದಾಖಲೆಗಳನ್ನು ಒದಗಿಸಲು ಎರಡು ವಾರ ಸಮಯ ನೀಡಲಾಗುತ್ತಿದೆ ಎಂದು ಪೀಠ ಹೇಳಿತು. ಮುಂದಿನ ಆದೇಶವರೆಗೂ ಬುಲ್ಡೋಜರ್ ಕಾರ್ಯಾಚರಣೆ ಮಾಡದೇ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಕೋರ್ಟ್ ಆದೇಶಸಿತು.
ನವದೆಹಲಿ: ಇಲ್ಲಿನ ಜಹಾಂಗೀರ್‌ಪುರಿಯಲ್ಲಿ ಉತ್ತರ ದೆಹಲಿ ಪಾಲಿಕೆ ನಡೆಸಿದ ಕಾರ್ಯಾಚರಣೆಯು ಅಪರಾಧ ಕೃತ್ಯವಾಗಿದೆ. ಸಂಬಂಧಪಟ್ಟವರಿಗೆ ಶಿಕ್ಷೆ ಆಗಬೇಕು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಒತ್ತಾಯಿಸಿದ್ದಾರೆ.
ಕಾರ್ಯಾಚರಣೆ ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ನಂತರವೂ ಸುಮಾರು 4 ಗಂಟೆಗಳ ಕಾಲ ಬುಲ್ಡೋಜರ್ ಕಾರ್ಯನಿರ್ವಹಿಸಿವೆ. ಇದು ಕಾನೂನುಬಾಹಿರ. ವಿಶ್ವದಲ್ಲಿ ಭಾರತದ ಘನತೆ ಕುಸಿಯುತ್ತಿದೆ. ವಿದೇಶದಲ್ಲಿರುವ ನನ್ನ ಸ್ನೇಹಿತರು ನಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ದೇಶದಲ್ಲಿ ಅಲ್ಪಸಂಖ್ಯಾತರ ಶೋಷಣೆ ಮತ್ತು ಇಸ್ಲಾಮೋಫೋಬಿಯಾ (ಇಸ್ಲಾಂ ಬಗ್ಗೆ ಭಯ ಹುಟ್ಟಿಸುವುದು) ನಡೆಯುತ್ತಿದೆ. ಈ ಎಲ್ಲಾ ದುರವಸ್ಥೆಗೆ ಬಿಜೆಪಿ ನೇರ ಹೊಣೆ ಎಂದು ತಿಳಿಸಿದ್ದಾರೆ.
ಮನೆಗಳು, ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ. ನಿಜಕ್ಕೂ ಇದೊಂದು ಅಪರಾಧ ಕೃತ್ಯ. ಭಾರತ ಸಂವಿಧಾನದ ಮೌಲ್ಯಗಳಿಗೆ ನೀಡಿದ ಪೆಟ್ಟು ಇದು. ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಮಾಸ್ಕ್ ಕಡ್ಡಾಯ – ಹಾಕದಿದ್ದರೆ 500 ರೂ. ದಂಡ
ಕಾರ್ಯಾಚರಣೆ ಬಗ್ಗೆ ಸೂಕ್ತ ತನಿಖೆ ಮಾಡಿ, ಯಾರು ಹೊಣೆಗಾರರೆಂದು ಪತ್ತೆ ಮಾಡಿ. ನ್ಯಾಯಾಲಯಕ್ಕೆ ಹಾಜರುಪಡಿಸಿ, ಅವರಿಗೆ ನೋಟಿಸ್ ನೀಡಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಇದು ಅತ್ಯಂತ ಅಮಾನವೀಯ ಸಾರ್ವಜನಿಕ ಶಿಕ್ಷೆಯಾಗಿದೆ ಎಂದು ಕಿಡಿಕಾರಿದ್ದಾರೆ.
ಉತ್ತರ ದೆಹಲಿ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಕಟ್ಟಲು ಆಯ್ಕೆಯಾಗಿ ಬಂದಿರುವ ಸರ್ಕಾರ ತಾನೇ ನಾಶ ಮಾಡುತ್ತಿದೆ. ಸರ್ಕಾರದ ಕೆಲಸವು ರಾಷ್ಟ್ರವನ್ನು ಕಟ್ಟುವುದು, ಅದನ್ನು ಕೆಡವುದಲ್ಲ. ಈ ನಾಚಿಕೆಗೇಡಿನ ನಡವಳಿಕೆಯಿಂದ ಈ ಸರ್ಕಾರವು ನಾಗರಿಕರ ನಂಬಿಕೆಯನ್ನೇ ಕಳೆದುಕೊಂಡಿದೆ ಎಂದು ಟೀಕಿಸಿದ್ದಾರೆ.
ನವದೆಹಲಿ: ಕೇಂದ್ರ ಗೃಹ ಸಚಿವರೇ (ಅಮಿತ್ ಶಾ) ಈ ಗಲಭೆಗಳನ್ನು ರೂಪಿಸುತ್ತಿದ್ದಾರೆ. ಬುಲ್ಡೋಜರ್ ಬಳಸುವುದಾದರೆ ಗೃಹ ಸಚಿವರ ಮನೆ ನೆಲಸಮ ಮಾಡಲು ಬಳಸಿ ಎಂದು ಎಎಪಿ ಸಂಸದ ರಾಘವ್ ಛಡ್ಡಾ ಕಿಡಿಕಾರಿದ್ದಾರೆ.
ಜಹಾಂಗೀರ್‌ಪುರಿಯಲ್ಲಿ ದೆಹಲಿ ಉತ್ತರ ಪಾಲಿಕೆ ನಡೆಸಿದ ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದ ಛಡ್ಡಾ ಅವರು, ಕೇಂದ್ರ ಗೃಹ ಸಚಿವರೇ ಗಲಭೆಗಳನ್ನು ರೂಪಿಸುತ್ತಿದ್ದಾರೆ. ಅವರ ಮನೆ ಧ್ವಂಸ ಮಾಡಲು ಬುಲ್ಡೋಜರ್ ಬಳಸಿ. ಆಗ ಗಲಭೆಗಳು ನಿಲ್ಲುತ್ತವೆ ಎಂದು ಬಿಜೆಪಿ ನೇತೃತ್ವದ ಪಾಲಿಕೆಗೆ ಕುಟುಕಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಹೈಡ್ರಾಮಾ – ಸುಪ್ರೀಂನಿಂದ ತಡೆ ಆದೇಶ ಬಂದ ಬಳಿಕವೂ 2 ಗಂಟೆ ಘರ್ಜಿಸಿದ ಜೆಸಿಬಿ
ಬಿಜೆಪಿಯು ಕಳೆದ ಎಂಟು ವರ್ಷಗಳಲ್ಲಿ ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳಿಗೆ ಭಾರತದಾದ್ಯಂತ ವಿವಿಧ ಸ್ಥಳಗಳಲ್ಲಿ ಪುನರ್ವಸತಿ ಕಲ್ಪಿಸಿದೆ. ಅವರನ್ನು ಕೇವಲ ಕೋಮುಗಲಭೆ ಸೃಷ್ಟಿಸಲು ಬಳಸಲಾಗುತ್ತಿದೆ. ಮುಂದಿನ ಗಲಭೆಗಳ ಸ್ಥಳದ ಬಗ್ಗೆ ನಿಮಗೆ ತಿಳಿಯಬೇಕಾದರೆ, ಬಾಂಗ್ಲಾದೇಶಿಗಳು ಮತ್ತು ರೊಹಿಂಗ್ಯಾಗಳನ್ನು ಎಲ್ಲಿ ಸ್ಥಳಾಂತರಿಸಿದ್ದಾರೆ ಎಂಬ ಪಟ್ಟಿಯನ್ನು ಬಿಜೆಪಿಯಿಂದ ಕೇಳಿ ಎಂದು ತಿಳಿಸಿದ್ದಾರೆ.
ಬಿಜೆಪಿಯವರು 15 ವರ್ಷಗಳ ಕಾಲ ನಗರಸಭೆಯಲ್ಲಿ ಆಡಳಿತ ನಡೆಸಿದ್ದು, ಬಿಜೆಪಿ ನಾಯಕರು ಲಂಚ ಪಡೆದು ಅಕ್ರಮ ಕಟ್ಟಡಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಇಂದು ಈ ಅಕ್ರಮ ಕಟ್ಟಡಗಳನ್ನು ಕೆಡವಲು ಹೊರಟಿದ್ದಾರೆ. ಅದಕ್ಕೆ ಅವಕಾಶ ಮಾಡಿಕೊಡಲು ಲಂಚ ಪಡೆದ ಬಿಜೆಪಿ ನಾಯಕರ ಮನೆಗಳನ್ನೂ ಕೆಡವಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದ್ವೇಷದ ಬುಲ್ಡೋಜರ್‌ಗಳನ್ನು ಆಫ್ ಮಾಡಿ: ರಾಹುಲ್ ಗಾಂಧಿ
ಹನುಮ ಜಯಂತಿ ವೇಳೆ ಗಲಭೆಗೆ ಕಾರಣವಾದ ಜಹಾಂಗೀರ್‌ಪುರಿಯಲ್ಲಿ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಬಿಜೆಪಿ ನೇತೃತ್ವದ ಉತ್ತರ ದೆಹಲಿ ಪಾಲಿಕೆ ಕ್ರಮಕೈಗೊಂಡಿತ್ತು. ಬುಲ್ಡೋಜರ್ ಮೂಲಕ ಬುಧವಾರ ಬೆಳಗ್ಗೆ ಕಾರ್ಯಾಚರಣೆ ಆರಂಭಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಕಾರ್ಯಾಚರಣೆಗೆ ತಡೆ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ವಿಚಾರಣೆ ನಡೆಸಲಿದೆ.
ನವದೆಹಲಿ: ಜಹಾಂಗೀರ್‌ಪುರಿಯಲ್ಲಿ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್(ಎನ್‌ಡಿಎಂಸಿ) ನಡೆಸುತ್ತಿದ್ದ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಬೆಳಗ್ಗೆ 10:45ಕ್ಕೆ. ಆದರೆ ತೆರವು ಕಾರ್ಯಾಚರಣೆ ನಿಂತಿದ್ದು ಮಧ್ಯಾಹ್ನ12:45ಕ್ಕೆ. ಎರಡು ಗಂಟೆ ಭಾರೀ ಹೈಡ್ರಾಮಾ ನಡೆದಿದ್ದು ಈಗ ಪಾಲಿಕೆಯ ನಿರ್ಧಾರದ ಬಗ್ಗೆ ಪರ/ವಿರೋಧ ಚರ್ಚೆ ಆರಂಭವಾಗಿದೆ.
ಬೆಳ್ಳಂಬೆಳಗ್ಗೆ ಘರ್ಜನೆ:
ಕಳೆದ ಶನಿವಾರ ಹನುಮ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಉಂಟಾದ ರಾಜಧಾನಿ ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಗಲಭೆಕೋರರಿಗೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಮಾದರಿಯಲ್ಲಿ ಬಿಸಿ ಮುಟ್ಟಿಸಲು ಬಿಜೆಪಿ ನೇತೃತ್ವದ ಪಾಲಿಕೆ ಮುಂದಾಗಿತ್ತು. ಕೇಂದ್ರ ಗೃಹ ಇಲಾಖೆಯ ಸೂಚನೆಯ ಮೇರೆಗೆ ಪೊಲೀಸ್ ಬಿಗಿ ಬಂದೋಬಸ್ತ್‌ನೊಂದಿಗೆ ಪಾಲಿಕೆ ನೆಲಸಮ ಕಾರ್ಯಾಚರಣೆಯನ್ನು ಚುರುಕುಗೊಳಿಸಿತ್ತು. ಇಂದು ಬೆಳಗ್ಗಿನಿಂದ 9 ಬುಲ್ಡೋಜರ್‌ಗಳು ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುತ್ತಿದ್ದವು.
ಸುಪ್ರೀಂ ಆದೇಶ:
ಯಾವುದೇ ನೋಟಿಸ್ ನೀಡದೇ ನೆಲಸಮ ಮಾಡುತ್ತಿರುವುದನ್ನು ಪ್ರಶ್ನಿಸಿ ಜಮಾತೆ ಉಲೆಮಾ ಹಿಂದ್ ಸಂಘಟನೆ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಹಿರಿಯ ವಕೀಲರಾದ ದುಷ್ಯಂತ್ ದಾವೆ, ಕಪಿಲ್ ಸಿಬಲ್, ಪಿ.ವಿ.ಸುರೇಂದ್ರನಾಥ್ ಹಾಗೂ ಪ್ರಶಾಂತ್ ಭೂಷಣ್ ಅವರು ತೆರವು ಪ್ರಶ್ನಿಸಿ ಸಿಜೆಐ ಎನ್.ವಿ.ರಮಣ ಅವರ ಮುಂದೆ ವಿಷಯ ಪ್ರಸ್ತಾಪಿಸಿದರು. ಗಲಭೆ ಪೀಡಿತ ಜಹಾಂಗೀರ್‌ಪುರಿಯಲ್ಲಿ ಪಾಲಿಕೆ ನಡೆಸುತ್ತಿರುವ ಕಾರ್ಯಾಚರಣೆ ಕಾನೂನುಬಾಹಿರವಾಗಿದೆ. ಈ ಸಂಬಂಧ ಯಾರಿಗೂ ಯಾವುದೇ ನೋಟಿಸ್ ನೀಡಿಲ್ಲ. ಹೀಗಾಗಿ ತಡೆ ನೀಡಬೇಕು ಎಂದು ಮನವಿ ಮಾಡಿದರು. ಅರ್ಜಿಯನ್ನು ಮಾನ್ಯ ಮಾಡಿದ ಸಿಜಿಐ ತೆರವು ಕಾರ್ಯಾಚರಣೆಗೆ ತಡೆ ನೀಡಿ ಯಥಾಸ್ಥಿತಿಯಲ್ಲಿರುವಂತೆ ಆದೇಶಿಸಿದರು. ಅಷ್ಟೇ ಅಲ್ಲದೇ ಗುರುವಾರ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಇದನ್ನೂ ಓದಿ: ದೆಹಲಿಯಲ್ಲಿ ಮಾಸ್ಕ್ ಕಡ್ಡಾಯ – ಹಾಕದಿದ್ದರೆ 500 ರೂ. ದಂಡ
ತಡೆಯ ಬಳಿಕವೂ ಕಾರ್ಯಾಚರಣೆ:
ಕೋರ್ಟ್ ಬೆಳಗ್ಗೆ 10:45ಕ್ಕೆ ತಡೆ ನೀಡಿದರೂ ತೆರವು ಕಾರ್ಯಾಚರಣೆ ಮತ್ತೆ ಮುಂದುವರಿದಿತ್ತು. ಯಾಕೆ ಕಾರ್ಯಾಚರಣೆ ನಿಲ್ಲಸಲ್ಲ ಎಂಬ ಪ್ರಶ್ನೆಗೆ ಮೇಯರ್ ರಾಜಾ ಇಕ್ಬಾಲ್ ಸಿಂಗ್, ನಮಗೆ ಇನ್ನೂ ಕೋರ್ಟ್ ಆದೇಶ ತಲುಪಿಲ್ಲ. ಕೋರ್ಟ್ ಆದೇಶ ಬರುವವರೆಗೂ ತೆರವು ಕಾರ್ಯಾಚರಣೆ ಮುಂದುವರಿಸುತ್ತೇವೆ ಎಂದು ಹೇಳಿದರು.
ಮತ್ತೆ ಮನವಿ:
ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕವೂ ತೆರವು ಕಾರ್ಯಾಚರಣೆ ಮುಂದುವರಿಯುತ್ತಿರುವುದನ್ನು ಆಕ್ಷೇಪಿಸಿ ಹಿರಿಯ ವಕೀಲ ದುಷ್ಯಂತ್ ದಾವೆ ಮತ್ತೆ ಸಿಜೆಐ ರಮಣ ಗಮನಕ್ಕೆ ತಂದರು. ಸಿಜೆಐ ಕೂಡಲೇ ಕೋರ್ಟ್ ಆದೇಶವನ್ನು ಉತ್ತರ ದೆಹಲಿಯ ಮೇಯರ್, ಎನ್‌ಡಿಎಂಸಿ ಆಯುಕ್ತ ಮತ್ತು ದೆಹಲಿ ಪೊಲೀಸ್ ಆಯುಕ್ತರಿಗೆ ನೀಡುವಂತೆ ಕೋರ್ಟ್ ರಿಜಿಸ್ಟ್ರಿಗೆ ಸೂಚಿಸಿದರು.
"Anti-encroachment drive has been stopped in Jahangirpuri area," says Special Commissioner of Police, Law & Order, Delhi Police pic.twitter.com/1yOj3cqWkG
ಕಾರ್ಯಾಚರಣೆ ಸ್ಥಗಿತ:
ಕೋರ್ಟ್ ಆದೇಶದ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದರೂ ತೆರವು ಕಾರ್ಯಾಚರಣೆ 2 ಗಂಟೆ ಮುಂದುವರಿದಿತ್ತು. ಆದೇಶದ ಪ್ರತಿ ತಲುಪಿದ ಬಳಿಕ ಮಧ್ಯಾಹ್ನ 12:45ರ ವೇಳೆಗೆ ತೆರವು ಕಾರ್ಯಾಚರಣೆಯನ್ನು ನಿಲ್ಲಿಸಲಾಯಿತು. ಇದನ್ನೂ ಓದಿ: ದ್ವೇಷದ ಬುಲ್ಡೋಜರ್‌ಗಳನ್ನು ಆಫ್ ಮಾಡಿ: ರಾಹುಲ್ ಗಾಂಧಿ
The law and the constitution have been bulldozed by illegal demolitions. At least the Supreme Court & its order should not be bulldozed: CPIM leader Brinda Karat in Jahangirpur pic.twitter.com/ivnal2rkba
ಭಾರೀ ಹೈಡ್ರಾಮಾ:
ಕೋರ್ಟ್ ಆದೇಶವಿದ್ದರೂ ತೆರವು ಕಾರ್ಯಾಚರಣೆ ಮುಂದುವರಿಸಿದ ಹಿನ್ನೆಲೆಯಲ್ಲಿ ಜಹಾಂಗೀರ್‌ಪುರಿ ಭಾರೀ ಹೈಡ್ರಾಮಾವೇ ನಡೆದಿತ್ತು. ಸಿಪಿಎಂ ನಾಯಕಿ ಬೃಂದಾ ಕಾರಟ್ ಸ್ಥಳಕ್ಕೆ ಭೇಟಿ ನೀಡಿ, ಕೋರ್ಟ್ ಬೆಳಗ್ಗೆ 10:45ಕ್ಕೆ ತಡೆ ನೀಡಿದೆ. ಆದರೂ ಕಾರ್ಯಾಚರಣೆ ಮುಂದುವರಿಸುತ್ತಿರುವುದು ಎಷ್ಟು ಸರಿ? ನಾನು ಆದೇಶವನ್ನು ಜಾರಿ ಮಾಡಲು ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದರು. ಕೇವಲ ಮುಸ್ಲಿಂ ಸಮುದಾಯದ ಅಕ್ರಮ ಕಟ್ಟಡಗಳನ್ನು ಮಾತ್ರ ತೆರವುಗೊಳಿಸಲಾಗಿದೆ. ಬೇರೆ ಧರ್ಮದವರ ಪ್ರಾರ್ಥನ ಮಂದಿರವನ್ನು ಕೆಡವಿಲ್ಲ ಯಾಕೆ ಎಂದು ಅಲ್ಲಿನ ಜನ ಪ್ರಶ್ನಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಭಾರೀ ಚರ್ಚೆ:
ಸಾಮಾಜಿಕ ಜಾಲತಾಣದಲ್ಲಿ ದೆಹಲಿಯ ನೆಲಸಮ ವಿಚಾರ ಈಗ ಭಾರೀ ಚರ್ಚೆ ನಡೆಯುತ್ತಿದೆ. ಕೋರ್ಟ್ ಆದೇಶವಿದ್ದರೂ ಕಾರ್ಯಾಚರಣೆ ಮುಂದುವರಿಸಿದ್ದು ತಪ್ಪು ಎಂದು ಹೇಳಿದರೆ ಕೆಲವರು ಅಂದು ಕಂಗನಾ ಮನೆಯನ್ನು ಕೆಡವುವ ವೇಳೆ ಕೋರ್ಟ್ ಆದೇಶ ಇನ್ನೂ ತಲುಪಿಲ್ಲ ಎಂದು ಬಿಎಂಸಿ ಹೇಳಿತ್ತು. ಹೀಗಾಗಿ ಇಲ್ಲೂ ಯಾವುದೇ ತಪ್ಪಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ನವದೆಹಲಿ: ದೆಹಲಿಯಲ್ಲಿ ಮನೆಗಳನ್ನು ಧ್ವಂಸಗೊಳಿಸುವ ಮೂಲಕ ಬಿಜೆಪಿ ಬಡವರ ವಿರುದ್ಧ ಸಮರ ಸಾರಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿ ಬಡವರ ವಿರುದ್ಧ ಸಮರ ಸಾರಿದೆ. ಅತಿಕ್ರಮಣದ ಹೆಸರಿನಲ್ಲಿ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಂತೆಯೇ ದೆಹಲಿಯಲ್ಲಿ ಮನೆಗಳನ್ನು ನಾಶಪಡಿಸಲು ಹೊರಟಿದೆ. ಯಾವುದೇ ನೋಟಿಸ್ ಇಲ್ಲ, ನ್ಯಾಯಾಲಯಕ್ಕೆ ಹೋಗಲು ಅವಕಾಶವಿಲ್ಲ. ಬದುಕಲು ಧೈರ್ಯಮಾಡಿದ ಬಡ ಮುಸ್ಲಿಮರನ್ನು ಶಿಕ್ಷಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಬ್ರೇಕ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸಂಶಯಾಸ್ಪದ ಪಾತ್ರವನ್ನು ಸ್ಪಷ್ಟಪಡಿಸಬೇಕು. ಇದರಲ್ಲಿ ದೆಹಲಿಯ ಲೋಕೋಪಯೋಗಿ ಪಾತ್ರದ ಬಗ್ಗೆಯೂ ತಿಳಿಸಬೇಕು. ಇಂತಹ ದ್ರೋಹ ಮತ್ತು ಹೇಡಿತನಕ್ಕಾಗಿ ಜಹಿಂಗೀರ್‌ಪುರಿಯ ಜನರು ಎಎಪಿಗೆ ಮತ ಹಾಕಿದ್ದಾರೆಯೇ? ಪೊಲೀಸರು ನಮ್ಮ ನಿಯಂತ್ರಣದಲ್ಲಿಲ್ಲ ಎಂದು ಅವರು ಆಗಾಗ್ಗೆ ಹೇಳುವುದು ಇಲ್ಲಿ ಕೆಲಸಕ್ಕೆ ಬರುವುದಿಲ್ಲ ಎಂದು ಕೇಜ್ರಿವಾಲ್ ವಿರುದ್ಧವೂ ಗುಡುಗಿದ್ದಾರೆ.
BJP has declared war against the poorest. In the name of encroachment it’s going to destroy homes in Delhi like UP & MP. No notice, no opportunity to go to court, simply punishing poor Muslims for daring to stay alive. @ArvindKejriwal must clarify his dubious role 1/2 pic.twitter.com/Psw4Ol6IJb
ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಬಿಜೆಪಿ ನೇತೃತ್ವದ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ನಡೆಸಿದ ಕಾರ್ಯಾಚರಣೆಗೆ ಓವೈಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದರೂ ಕ್ಯಾರೆ ಎನ್ನದೇ ಬುಲ್ಡೋಜರ್‌ಗಳು ಕಾರ್ಯಾಚರಣೆ ನಡೆಸಿವೆ.
ನವದೆಹಲಿ: ಜಹಾಂಗೀರ್‌ಪುರಿಯಲ್ಲಿ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿದ್ದ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಯಥಾಸ್ಥಿತಿ ಕಾಪಾಡುವಂತೆ ಆದೇಶಿಸಿದೆ.
ಕಳೆದ ಶನಿವಾರ ಹನುಮ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಉಂಟಾದ ರಾಜಧಾನಿ ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಗಲಭೆಕೋರರಿಗೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಮಾದರಿಯಲ್ಲಿ ಬಿಸಿ ಮುಟ್ಟಿಸಲು ಬಿಜೆಪಿ ನೇತೃತ್ವದ ಪಾಲಿಕೆ ಮುಂದಾಗಿತ್ತು. ಪೊಲೀಸ್ ಬಿಗಿ ಬಂದೋಬಸ್ತ್‌ನೊಂದಿಗೆ ಕಾರ್ಪೊರೇಷನ್ ನೆಲಸಮ ಕಾರ್ಯಾಚರಣೆಯನ್ನು ಚುರುಕುಗೊಳಿಸಿತ್ತು. ಆದರೆ ಅದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇದನ್ನೂ ಓದಿ: ದೆಹಲಿಯಲ್ಲಿ ಜೆಸಿಬಿ ಘರ್ಜನೆ- ಜಹಾಂಗೀರ್‌ಪುರಿಯಲ್ಲಿ ಅಕ್ರಮ ಆಸ್ತಿಗಳ ಧ್ವಂಸ
ಹಿರಿಯ ವಕೀಲರಾದ ದುಷ್ಯಂತ್ ದಾವೆ, ಕಪಿಲ್ ಸಿಬಲ್, ಪಿ.ವಿ.ಸುರೇಂದ್ರನಾಥ್ ಹಾಗೂ ಪ್ರಶಾಂತ್ ಭೂಷಣ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಜೆಐ ಎನ್.ವಿ.ರಮಣ ಅವರ ಮುಂದೆ ವಿಷಯ ಪ್ರಸ್ತಾಪಿಸಿದರು. ಗಲಭೆಪೀಡತ ಜಹಾಂಗೀರ್‌ಪುರಿಯಲ್ಲಿ ಪಾಲಿಕೆ ನಡೆಸುತ್ತಿರುವ ಕಾರ್ಯಾಚರಣೆ ಕಾನೂನುಬಾಹಿರವಾಗಿದೆ. ಈ ಸಂಬಂಧ ಯಾರಿಗೂ ಯಾವುದೇ ನೋಟಿಸ್ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ನಂತರ ಸಿಜೆಐ ರಮಣ ಅವರು, ಕಾರ್ಯಾಚರಣೆ ನಿಲ್ಲಿಸಿ ಯಥಾಸ್ಥಿತಿ ಕಾಪಾಡಬೇಕು ಎಂದು ಆದೇಶ ಹೊರಡಿಸಿದರು. ಪ್ರಕರಣದ ವಿಚಾರಣೆಯನ್ನು ನಾಳೆಗೆ ಮುಂದೂಡಿದರು. ಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಪಾಲಿಕೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಇದನ್ನೂ ಓದಿ: ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು
ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ಆರೋಪಿಗಳ ಆಸ್ತಿಗಳನ್ನು ಧ್ವಂಸಗೊಳಿಸಲು ಬುಲ್ಡೋಜರ್‌ಗಳನ್ನು ಬಳಸುವುದರ ವಿರುದ್ಧ ಜಮೀಯತ್ ಉಲಾಮಾ-ಇ-ಹಿಂದ್ ಸಲ್ಲಿಸಿದ ಮನವಿಯಲ್ಲಿ ಜಹಾಂಗೀರ್‌ಪುರಿ ಧ್ವಂಸ ಅಭಿಯಾನದ ವಿಷಯವನ್ನು ಉಲ್ಲೇಖಿಸಲಾಗಿತ್ತು.
ಇತ್ತೀಚೆಗೆ ಹನುಮ ಜಯಂತಿ ವೇಳೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ಬುಧವಾರ ಬೆಳಗ್ಗೆ ಪೊಲೀಸ್ ಹಾಗೂ ಅರೆಸೇನಾ ಪಡೆಗಳ ನಿಯೋಜನೆಯಲ್ಲಿ ಪ್ರಾರಂಭವಾಗಿತ್ತು. ಬುಲ್ಡೋಜರ್ ಬಳಸಿ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆ ನಡೆದಿತ್ತು. ರಸ್ತೆ ಬದಿಯ ಆಹಾರ ಮಳಿಗೆಗಳು ಮತ್ತು ಅಂಗಡಿಗಳನ್ನು ಬುಲ್ಡೋಜರ್ ಮೂಲಕವಾಗಿ ಕೆಡವಲಾಗುತ್ತಿತ್ತು. ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸುಮಾರು 400 ಪೊಲೀಸರನ್ನು ಸ್ಥಳದಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿತ್ತು.
ನವದೆಹಲಿ: ಇತ್ತೀಚೆಗೆ ಹನುಮ ಜಯಂತಿ ವೇಳೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ಬುಧವಾರ ಬೆಳಗ್ಗೆ ಪೊಲೀಸ್ ಹಾಗೂ ಅರೆಸೇನಾ ಪಡೆಗಳ ನಿಯೋಜನೆಯಲ್ಲಿ ಪ್ರಾರಂಭವಾಗಿದ್ದು, ಬುಲ್ಡೋಜರ್ ಬಳಸಿ ಅಕ್ರಮ ಕಟ್ಟಡಗಳನ್ನು ಒಡೆದು ಹಾಕಿದ್ದಾರೆ.
ರಸ್ತೆ ಬದಿಯ ಆಹಾರ ಮಳಿಗೆಗಳು ಮತ್ತು ಅಂಗಡಿಗಳನ್ನು ಬುಲ್ಡೋಜರ್ ಮೂಲಕವಾಗಿ ಕೆಡವಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಸಾರ್ವಜನಿಕರು ಭಾರೀ ಪ್ರಮಾಣದಲ್ಲಿ ನೆರೆದಿದ್ದು, ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ:ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು
#WATCH North Delhi Municipal Corporation conducts anti-encroachment drive in Jahangirpuri in Delhi
The civic body has asked for 400 personnel from Delhi Police to maintain the law & order situation during the drive in the area pic.twitter.com/KViPfwPEqr
ಈ ಬಗ್ಗೆ ಜಹಾಂಗೀರ್‌ಪುರಿಯ ಸ್ಥಳೀಯರೊಬ್ಬರು ಮಾತನಾಡಿ, ಕಳೆದ 15 ವರ್ಷಗಳಿಂದ ನನ್ನ ಅಂಗಡಿ ಇಲ್ಲೇ ಇತ್ತು. ಅಕ್ರಮದ ಬಗ್ಗೆ ಮೊದಲು ಯಾರೂ ಚಕಾರ ಎತ್ತಲಿಲ್ಲ, ಈಗ ಎರಡು ಕೋಮುಗಳ ನಡುವೆ ಹಿಂಸಾಚಾರದ ಘಟನೆಯ ನಂತರ ಇದು ನಡೆಯುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ:ಕೆಂಪಣ್ಣ ಕನಕಪುರದ ಕಾಂಗ್ರೆಸ್ ಏಜೆಂಟ್, ಕಾಂಗ್ರೆಸ್ ದಾಸ: ಈಶ್ವರಪ್ಪ
#WATCH | Anti-encroachment drive underway at the Jahangirpuri area of Delhi which witnessed violence on April 16 during a religious procession pic.twitter.com/zIxMVccwSM
ಈ ಹಿಂದೆ ದೆಹಲಿ ಉತ್ತರ ಮಹಾನಗರ ಪಾಲಿಕೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿತ್ತು. ಈ ಮನವಿಯಲ್ಲಿ ಏ.20 ಮತ್ತು 21ರಂದು ಅಕ್ರಮ ಕಟ್ಟಗಳನ್ನು ತೆರವುಗೊಳಿಸಲಾಗುತ್ತದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 400 ಪೊಲೀಸರ ಭದ್ರತೆ ಒದಗಿಸಬೇಕು ಎಂದು ಕೇಳಿಕೊಂಡಿತ್ತು. ಇದರ ಪ್ರಕಾರ ಅಧಿಕ ಪೊಲೀಸ್ ಭದ್ರೆತೆ ನೀಡಲಾಗಿತ್ತು.