Tag: ಜಾಕಿ

  • ‘ಜಾಕಿ’ ಚಿತ್ರದ ಹಾಡಿಗೆ ಸ್ಟೈಲೀಶ್ ಆಗಿ ಹೆಜ್ಜೆ ಹಾಕಿದ ಕಾರ್ತಿಕ್ ಮಹೇಶ್‌, ಕಿಶನ್

    ‘ಜಾಕಿ’ ಚಿತ್ರದ ಹಾಡಿಗೆ ಸ್ಟೈಲೀಶ್ ಆಗಿ ಹೆಜ್ಜೆ ಹಾಕಿದ ಕಾರ್ತಿಕ್ ಮಹೇಶ್‌, ಕಿಶನ್

    ರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರ ಹುಟ್ಟುಹಬ್ಬಕ್ಕೆ ಇದೀಗ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ (Karthik Mahesh), ಕಿಶನ್ (Kishen Bilagali) ವಿಶೇಷವಾಗಿ ಶುಭಕೋರಿದ್ದಾರೆ. ‘ಜಾಕಿ’ ಸಿನಿಮಾದ ಹಾಡಿಗೆ ಸ್ಟೈಲೀಶ್ ಆಗಿ ಹೆಜ್ಜೆ ಹಾಕಿ ಪ್ರೀತಿಯ ಅಪ್ಪುಗೆ ಶುಭಹಾರೈಸಿದ್ದಾರೆ.

    ದೊಡ್ಮನೆ ಆಟ ಗೆದ್ದ ಮೇಲೆ ಕಾರ್ತಿಕ್ ಮಹೇಶ್ ಅವರು ಮತ್ತಷ್ಟು ಆ್ಯಕ್ಟೀವ್ ಆಗಿದ್ದಾರೆ. ಬಿಗ್ ಬಾಸ್ ಸೀಸನ್ 7ರ ಸ್ಪರ್ಧಿ ಕಿಶನ್ ಬಿಳಗಲಿ ಜೊತೆ ಸೇರಿ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಮೊದಲೇ ಇಬ್ಬರು ಸೂಪರ್ ಡ್ಯಾನ್ಸರ್ಸ್‌, ಅಪ್ಪು ಸಾಂಗ್ ಹಾಕಿದ ಮೇಲೆ ಕೇಳಬೇಕೆ. ಮಸ್ತ್ ಆಗಿ ಡ್ಯಾನ್ಸ್ ಮಾಡುವ ಅಭಿಮಾನಿಗಳ ಮೆಚ್ಚುಗೆ ಗಳಿಸಿದ್ದಾರೆ.

    View this post on Instagram

    A post shared by Karthik Mahesh (@karthi_mahesh)

    ಕಾರ್ತಿಕ್ ಮಹೇಶ್- ಕಿಶನ್ ಇಬ್ಬರೂ ಸೂಟು ಬೂಟು ಧರಿಸಿ, ಜಾಕಿ ಹಾಡಿಗೆ ಸಖತ್ ಸ್ಟೈಲೀಶ್ ಆಗಿ ಹೆಜ್ಜೆ ಹಾಕುವ ಮೂಲಕ ಅಪ್ಪುಗೆ ಅರ್ಪಣೆ ಮಾಡಿದ್ದಾರೆ. ಇದನ್ನೂ ಓದಿ:ಅಪ್ಪು ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಮನವಿ ಮಾಡಿದ ರಾಘಣ್ಣ

    ಸರಳತೆಯ ಸಾಮ್ರಾಟ, ನಗುವಿನ ಒಡೆಯ, ಪ್ರೀತಿಗೆ ಪರಮಾತ್ಮ, ಬದುಕಿಗೆ ಸ್ಪೂರ್ತಿ ನಮ್ಮ ಪವರ್ ಸ್ಟಾರ್. ಹುಟ್ಟುಹಬ್ಬದ ಶುಭಾಶಯಗಳು ಎಂದು ವಿಡಿಯೋ ಶೇರ್ ಮಾಡುವಾಗ ಕಾರ್ತಿಕ್ ಅಡಿಬರಹ ನೀಡಿದ್ದಾರೆ.

    ಇನ್ನೂ ಬಿಗ್ ಬಾಸ್ (Bigg Boss Kannada 10) ನಮ್ರತಾ ಗೌಡ (Namratha Gowda) ಅವರು ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡುವ ಮೂಲಕ ಇನ್ಮುಂದೆ ಪ್ರತಿ ವರ್ಷ ಈ ಕಾರ್ಯ ಮಾಡುವುದಾಗಿ ನಟಿ ತಿಳಿಸಿದ್ದಾರೆ.

  • ‘ಜಾಕಿ’ ರಿ-ರಿಲೀಸ್: ಮೊದಲ ದಿನ 100 ಶೋ ಹೌಸ್ ಫುಲ್, 1 ಕೋಟಿ ರೂ.ಗಳಿಕೆ

    ‘ಜಾಕಿ’ ರಿ-ರಿಲೀಸ್: ಮೊದಲ ದಿನ 100 ಶೋ ಹೌಸ್ ಫುಲ್, 1 ಕೋಟಿ ರೂ.ಗಳಿಕೆ

    ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದ ನೆಪದಲ್ಲಿ ಜಾಕಿ ಸಿನಿಮಾವನ್ನು ರಿರಿಲೀಸ್ ಮಾಡಲಾಗಿತ್ತು. ಈ ಚಿತ್ರಕ್ಕೆ ದಾಖಲೆ ಎನ್ನುವಂತೆ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾ ರಿರಿಲೀಸ್ ಮಾಡಿದ್ದ ಸಂಸ್ಥೆಯೇ ಹೇಳಿಕೊಂಡಂತೆ ಮೊದಲ ದಿನವೇ 100ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿವೆ. ಮೊದಲ ದಿನದ ಗಳಿಕೆ ಬರೋಬ್ಬರಿ 1 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. 170ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಚಿತ್ರ ಬಿಡುಗಡೆ ಆಗಿತ್ತು.

    ಪ್ಪು ಹುಟ್ಟು ಹಬ್ಬದ ನಿಮಿತ್ತ ಶುಕ್ರವಾರ ಮರುಬಿಡುಗಡೆಯಾದ ಜಾಕಿ ಸಿನಿಮಾವನ್ನು ನೋಡಲು ಥಿಯೇಟರ್ ಗೆ ಆಗಮಿಸಿದ್ದರು ಪುನೀತ್ ಪತ್ನಿ ಅಶ್ವಿನಿ. ಸಿನಿಮಾ ಮುಗಿದ ನಂತರ ಭಾವುಕರಾಗಿ ಚಿತ್ರಮಂದಿರದಿಂದ ಹೊರ ಬಂದರು. ಪುನೀತ್ ನಿಧನದ ನಂತರವೂ ಅವರನ್ನು ಅಭಿಮಾನಿಗಳು ಪ್ರೀತಿಸುತ್ತಿರುವ ರೀತಿಗೆ ಅಕ್ಷರಶಃ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು ಅಶ್ವಿನಿ.

    ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರ ಜಾಕಿ (Jackie) ಸಿನಿಮಾವನ್ನು ಅವರ ಅಭಿಮಾನಿಗಳು ರಾಜ್ಯಾದ್ಯಂತ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಥಿಯೇಟರ್ ಮುಂದೆ ಆಳೆತ್ತರದ ಕಟೌಟ್ ಹಾಕಿ ಸಂಭ್ರಮಿಸಿದ್ದಾರೆ. ಅಪ್ಪು (Puneeth Rajkumar) ಹುಟ್ಟು ಹಬ್ಬಕ್ಕೆ (Birthday) ಈಗಿನಿಂದಲೇ ತಯಾರಿ ಮಾಡಿಕೊಳ್ಳಲಾಗುತ್ತಿದೆ.

    ದುನಿಯಾ ಸೂರಿ (Duniya Vijay)  ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಬಾಕ್ಸ್ ಆಫೀಸಿನಲ್ಲಿ ಸೂಪರ್ ಹಿಟ್ ಚಿತ್ರ ಎಂದು ದಾಖಲಾಗಿದೆ. ಅಲ್ಲದೇ, ಈ ಸಿನಿಮಾದ ಹಾಡುಗಳು ಕೂಡ ಹೊಸ ರೀತಿಯಲ್ಲಿ ಕೇಳಿಸಿದ್ದವು. ಹಾಗಾಗಿ ಅಪ್ಪು ಡಾನ್ಸ್ ಕೂಡ ಅಭಿಮಾನಿಗಳಿಗೆ ಇಷ್ಟವಾಗಿತ್ತು. ಚಿತ್ರದ ಕಥೆ, ಅಪ್ಪು ಡಾನ್ಸ್, ಹಾಡು ಹಾಗೂ ಸಾಹಸ ಸನ್ನಿವೇಶಗಳಿಂದ ಜಾಕಿ ಸಿನಿಮಾ ಗಮನ ಸೆಳೆದಿತ್ತು. ವಿಚಿತ್ರ ವೇಷಗಳನ್ನೂ ಈ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಹಾಕಿದ್ದರು. ಪಾರ್ವತಮ್ಮ ರಾಜ್ ಕುಮಾರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಅಪ್ಪು ಜೊತೆ ಭಾವನಾ ನಾಯಕಿಯಾಗಿ ನಟಿಸಿದ್ದರು.

    ಜಾಕಿ ಚಿತ್ರವನ್ನು ಮತ್ತಷ್ಟು ಅಪ್ ಗ್ರೇಡ್ ಮಾಡಿ ಈ ಬಾರಿ ಥಿಯೇಟರ್ ಗೆ ತರಲಾಗುತ್ತಿದೆ. ಸೌಂಡ್, ರೆಸ್ಯುಲೇಷನ್ ಮತ್ತಷ್ಟು ಹೆಚ್ಚಿಸಲಾಗಿದೆಯಂತೆ. ಇನ್ನಷ್ಟು ಕಲರ್ ಫುಲ್ ನೊಂದಿಗೆ ಜಾಕಿ ಸಿನಿಮಾವನ್ನು ನೋಡಬಹುದಾಗಿದೆಯಂತೆ.

  • ‘ಜಾಕಿ’ ಸಿನಿಮಾ ನೋಡಿ ಭಾವುಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್

    ‘ಜಾಕಿ’ ಸಿನಿಮಾ ನೋಡಿ ಭಾವುಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್

    ಪ್ಪು ಹುಟ್ಟು ಹಬ್ಬದ ನಿಮಿತ್ತ ಇಂದು ಮರುಬಿಡುಗಡೆಯಾದ ಜಾಕಿ ಸಿನಿಮಾವನ್ನು ನೋಡಲು ಥಿಯೇಟರ್ ಗೆ ಆಗಮಿಸಿದ್ದರು ಪುನೀತ್ ಪತ್ನಿ ಅಶ್ವಿನಿ. ಸಿನಿಮಾ ಮುಗಿದ ನಂತರ ಭಾವುಕರಾಗಿ ಚಿತ್ರಮಂದಿರದಿಂದ ಹೊರ ಬಂದರು. ಪುನೀತ್ ನಿಧನದ ನಂತರವೂ ಅವರನ್ನು ಅಭಿಮಾನಿಗಳು ಪ್ರೀತಿಸುತ್ತಿರುವ ರೀತಿಗೆ ಅಕ್ಷರಶಃ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು ಅಶ್ವಿನಿ.

    ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರ ಜಾಕಿ (Jackie) ಸಿನಿಮಾವನ್ನು ಅವರ ಅಭಿಮಾನಿಗಳು ರಾಜ್ಯಾದ್ಯಂತ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಥಿಯೇಟರ್ ಮುಂದೆ ಆಳೆತ್ತರದ ಕಟೌಟ್ ಹಾಕಿ ಸಂಭ್ರಮಿಸಿದ್ದಾರೆ. ಅಪ್ಪು (Puneeth Rajkumar) ಹುಟ್ಟು ಹಬ್ಬಕ್ಕೆ (Birthday) ಈಗಿನಿಂದಲೇ ತಯಾರಿ ಮಾಡಿಕೊಳ್ಳಲಾಗುತ್ತಿದೆ.

    ದುನಿಯಾ ಸೂರಿ (Duniya Vijay)  ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಬಾಕ್ಸ್ ಆಫೀಸಿನಲ್ಲಿ ಸೂಪರ್ ಹಿಟ್ ಚಿತ್ರ ಎಂದು ದಾಖಲಾಗಿದೆ. ಅಲ್ಲದೇ, ಈ ಸಿನಿಮಾದ ಹಾಡುಗಳು ಕೂಡ ಹೊಸ ರೀತಿಯಲ್ಲಿ ಕೇಳಿಸಿದ್ದವು. ಹಾಗಾಗಿ ಅಪ್ಪು ಡಾನ್ಸ್ ಕೂಡ ಅಭಿಮಾನಿಗಳಿಗೆ ಇಷ್ಟವಾಗಿತ್ತು.

    ಚಿತ್ರದ ಕಥೆ, ಅಪ್ಪು ಡಾನ್ಸ್, ಹಾಡು ಹಾಗೂ ಸಾಹಸ ಸನ್ನಿವೇಶಗಳಿಂದ ಜಾಕಿ ಸಿನಿಮಾ ಗಮನ ಸೆಳೆದಿತ್ತು. ವಿಚಿತ್ರ ವೇಷಗಳನ್ನೂ ಈ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಹಾಕಿದ್ದರು. ಪಾರ್ವತಮ್ಮ ರಾಜ್ ಕುಮಾರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಅಪ್ಪು ಜೊತೆ ಭಾವನಾ ನಾಯಕಿಯಾಗಿ ನಟಿಸಿದ್ದರು.

    ಜಾಕಿ ಚಿತ್ರವನ್ನು ಮತ್ತಷ್ಟು ಅಪ್ ಗ್ರೇಡ್ ಮಾಡಿ ಈ ಬಾರಿ ಥಿಯೇಟರ್ ಗೆ ತರಲಾಗುತ್ತಿದೆ. ಸೌಂಡ್, ರೆಸ್ಯುಲೇಷನ್ ಮತ್ತಷ್ಟು ಹೆಚ್ಚಿಸಲಾಗಿದೆಯಂತೆ. ಇನ್ನಷ್ಟು ಕಲರ್ ಫುಲ್ ನೊಂದಿಗೆ ಜಾಕಿ ಸಿನಿಮಾವನ್ನು ನೋಡಬಹುದಾಗಿದೆಯಂತೆ.

    ಬರೀ ಸಿನಿಮಾ ಮಾತ್ರವಲ್ಲ ಎಂದಿನಂತೆ ಅವರ ಅಭಿಮಾನಿಗಳು ಅನ್ನ ಸಂತರ್ಪಣೆ, ಕಣ್ಣುದಾನ, ರಕ್ತದಾನದಂತಹ ಶಿಬಿರಗಳನ್ನು ಅಪ್ಪು ಸಮಾಧಿ ಬಳಿ ಮಾಡಲು ರೆಡಿ ಆಗುತ್ತಿದ್ದಾರೆ. ಅಂದು ಯುವ ಸಿನಿಮಾದ ಇವೆಂಟ್ ಕೂಡ ಇರಲಿದೆ.

  • ‘ಜಾಕಿ’ಯನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಫ್ಯಾನ್ಸ್

    ‘ಜಾಕಿ’ಯನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಫ್ಯಾನ್ಸ್

  • ನಾಳೆ ಅಪ್ಪು ನಟನೆಯ ‘ಜಾಕಿ’ ಸಿನಿಮಾ ರಿಲೀಸ್

    ನಾಳೆ ಅಪ್ಪು ನಟನೆಯ ‘ಜಾಕಿ’ ಸಿನಿಮಾ ರಿಲೀಸ್

    ಪುನೀತ್ ರಾಜ್ ಕುಮಾರ್ (Puneeth Rajkumar) ಹುಟ್ಟು ಹಬ್ಬಕ್ಕೆ (Birthday) ಈಗಿನಿಂದಲೇ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮಾರ್ಚ್ 17ಕ್ಕೆ ಅಪ್ಪು ಹುಟ್ಟು ಹಬ್ಬ. ಹಾಗಾಗಿ ನಾಳೆ ಅಪ್ಪು ನಟನೆಯ ಜಾಕಿ (Jackie) ಸಿನಿಮಾ ರಿರೀಲಿಸ್ ಆಗುತ್ತಿದೆ. ಅದಕ್ಕಾಗಿ ಅನೇಕ ಚಿತ್ರಮಂದಿರಗಳು ಇಂದಿನಿಂದಲೇ ಸಿದ್ಧತೆ ಮಾಡಿಕೊಂಡಿವೆ.

    ದುನಿಯಾ ಸೂರಿ (Duniya Vijay)  ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಬಾಕ್ಸ್ ಆಫೀಸಿನಲ್ಲಿ ಸೂಪರ್ ಹಿಟ್ ಚಿತ್ರ ಎಂದು ದಾಖಲಾಗಿದೆ. ಅಲ್ಲದೇ, ಈ ಸಿನಿಮಾದ ಹಾಡುಗಳು ಕೂಡ ಹೊಸ ರೀತಿಯಲ್ಲಿ ಕೇಳಿಸಿದ್ದವು. ಹಾಗಾಗಿ ಅಪ್ಪು ಡಾನ್ಸ್ ಕೂಡ ಅಭಿಮಾನಿಗಳಿಗೆ ಇಷ್ಟವಾಗಿತ್ತು.

    ಚಿತ್ರದ ಕಥೆ, ಅಪ್ಪು ಡಾನ್ಸ್, ಹಾಡು ಹಾಗೂ ಸಾಹಸ ಸನ್ನಿವೇಶಗಳಿಂದ ಜಾಕಿ ಸಿನಿಮಾ ಗಮನ ಸೆಳೆದಿತ್ತು. ವಿಚಿತ್ರ ವೇಷಗಳನ್ನೂ ಈ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಹಾಕಿದ್ದರು. ಪಾರ್ವತಮ್ಮ ರಾಜ್ ಕುಮಾರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಅಪ್ಪು ಜೊತೆ ಭಾವನಾ ನಾಯಕಿಯಾಗಿ ನಟಿಸಿದ್ದರು.

    ಜಾಕಿ ಚಿತ್ರವನ್ನು ಮತ್ತಷ್ಟು ಅಪ್ ಗ್ರೇಡ್ ಮಾಡಿ ಈ ಬಾರಿ ಥಿಯೇಟರ್ ಗೆ ತರಲಾಗುತ್ತಿದೆ. ಸೌಂಡ್, ರೆಸ್ಯುಲೇಷನ್ ಮತ್ತಷ್ಟು ಹೆಚ್ಚಿಸಲಾಗಿದೆಯಂತೆ. ಇನ್ನಷ್ಟು ಕಲರ್ ಫುಲ್ ನೊಂದಿಗೆ ಜಾಕಿ ಸಿನಿಮಾವನ್ನು ನೋಡಬಹುದಾಗಿದೆಯಂತೆ.

    ಬರೀ ಸಿನಿಮಾ ಮಾತ್ರವಲ್ಲ ಎಂದಿನಂತೆ ಅವರ ಅಭಿಮಾನಿಗಳು ಅನ್ನ ಸಂತರ್ಪಣೆ, ಕಣ್ಣುದಾನ, ರಕ್ತದಾನದಂತಹ ಶಿಬಿರಗಳನ್ನು ಅಪ್ಪು ಸಮಾಧಿ ಬಳಿ ಮಾಡಲು ರೆಡಿ ಆಗುತ್ತಿದ್ದಾರೆ. ಅಂದು ಯುವ ಸಿನಿಮಾದ ಇವೆಂಟ್ ಕೂಡ ಇರಲಿದೆ.

  • ಪುನೀತ್ ಹುಟ್ಟುಹಬ್ಬಕ್ಕೆ ‘ಜಾಕಿ’ ಸಿನಿಮಾ ಮರುಬಿಡುಗಡೆ

    ಪುನೀತ್ ಹುಟ್ಟುಹಬ್ಬಕ್ಕೆ ‘ಜಾಕಿ’ ಸಿನಿಮಾ ಮರುಬಿಡುಗಡೆ

    ಪುನೀತ್ ರಾಜ್ ಕುಮಾರ್ (Puneeth Rajkumar) ಹುಟ್ಟು ಹಬ್ಬಕ್ಕೆ (Birthday) ಈಗಿನಿಂದಲೇ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮಾರ್ಚ್ 17ಕ್ಕೆ ಅಪ್ಪು ಹುಟ್ಟು ಹಬ್ಬ. ಅಂದು ಅವರ ನಟನೆಯ ಜಾಕಿ (Jackie) ಸಿನಿಮಾವನ್ನು ಮರು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದುನಿಯಾ ಸೂರಿ (Duniya Vijay)  ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಬಾಕ್ಸ್ ಆಫೀಸಿನಲ್ಲಿ ಸೂಪರ್ ಹಿಟ್ ಚಿತ್ರ ಎಂದು ದಾಖಲಾಗಿದೆ.

    ಚಿತ್ರದ ಕಥೆ, ಅಪ್ಪು ಡಾನ್ಸ್, ಹಾಡು ಹಾಗೂ ಸಾಹಸ ಸನ್ನಿವೇಶಗಳಿಂದ ಜಾಕಿ ಸಿನಿಮಾ ಗಮನ ಸೆಳೆದಿತ್ತು. ವಿಚಿತ್ರ ವೇಷಗಳನ್ನೂ ಈ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಹಾಕಿದ್ದರು. ಪಾರ್ವತಮ್ಮ ರಾಜ್ ಕುಮಾರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಅಪ್ಪು ಜೊತೆ ಭಾವನಾ ನಾಯಕಿಯಾಗಿ ನಟಿಸಿದ್ದರು.

    ಜಾಕಿ ಚಿತ್ರವನ್ನು ಮತ್ತಷ್ಟು ಅಪ್ ಗ್ರೇಡ್ ಮಾಡಿ ಈ ಬಾರಿ ಥಿಯೇಟರ್ ಗೆ ತರಲಾಗುತ್ತಿದೆ. ಸೌಂಡ್, ರೆಸ್ಯುಲೇಷನ್ ಮತ್ತಷ್ಟು ಹೆಚ್ಚಿಸಲಾಗಿದೆಯಂತೆ. ಇನ್ನಷ್ಟು ಕಲರ್ ಫುಲ್ ನೊಂದಿಗೆ ಜಾಕಿ ಸಿನಿಮಾವನ್ನು ನೋಡಬಹುದಾಗಿದೆಯಂತೆ.

    ಬರೀ ಸಿನಿಮಾ ಮಾತ್ರವಲ್ಲ ಎಂದಿನಂತೆ ಅವರ ಅಭಿಮಾನಿಗಳು ಅನ್ನ ಸಂತರ್ಪಣೆ, ಕಣ್ಣುದಾನ, ರಕ್ತದಾನದಂತಹ ಶಿಬಿರಗಳನ್ನು ಅಪ್ಪು ಸಮಾಧಿ ಬಳಿ ಮಾಡಲು ರೆಡಿ ಆಗುತ್ತಿದ್ದಾರೆ. ಅಂದು ಯುವ ಸಿನಿಮಾದ ಇವೆಂಟ್ ಕೂಡ ಇರಲಿದೆ.

  • ಹುಟ್ಟುಹಬ್ಬದಂದು ನಟಿ ಭಾವನಾ ಮೆನನ್ 86ನೇ ಸಿನಿಮಾ ಅನೌನ್ಸ್

    ಹುಟ್ಟುಹಬ್ಬದಂದು ನಟಿ ಭಾವನಾ ಮೆನನ್ 86ನೇ ಸಿನಿಮಾ ಅನೌನ್ಸ್

    ನ್ನಡದ ‘ಜಾಕಿ’ ಬ್ಯೂಟಿ ಭಾವನಾ ಮೆನನ್ (Bhavana  Menon) ಅವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬರ್ತ್‌ಡೇಯಂದು (Birthday) ಹೊಸ ಸಿನಿಮಾದ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಭಾವನಾ ನಟನೆಯ 86ನೇ ಚಿತ್ರದ ಬಗ್ಗೆ ಇಲ್ಲಿದೆ ಅಪ್‌ಡೇಟ್. ʻಭಜರಂಗಿ 2ʼ (Bhajarangi 2) ಬಳಿಕ ನಟಿ ಸಿಹಿಸುದ್ದಿ ಕೊಟ್ಟಿದ್ದಾರೆ.

    ಭಾವನಾ ಮೆನನ್ ಅವರು ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡ, ಮಲಯಾಳಂ ಸೇರಿದಂತೆ ಹಲವು ಸ್ಟಾರ್ ನಟರ ಜೊತೆ ತೆರೆಹಂಚಿಕೊಂಡಿದ್ದಾರೆ. ಪುನೀತ್ ರಾಜ್‌ಕುಮಾರ್ (Puneeth Rajkumar) ಜೊತೆ ಜಾಕಿ, ಯಾರೇ ಕೂಗಾಡಲಿ, ಮೈತ್ರಿ ಚಿತ್ರಗಳಲ್ಲಿ ಭಾವನಾ ನಾಯಕಿಯಾಗಿ ನಟಿಸಿದ್ದಾರೆ. ಶಿವಣ್ಣ ಜೊತೆ ಭಜರಂಗಿ 2, ಟಗರು ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:ಬೀಚ್‌ನಲ್ಲಿ ಬೇಬಿ ಬಂಪ್ ಪ್ರದರ್ಶಿಸಿದ ನಟಿ ಇಲಿಯಾನಾ

    ಸದ್ಯ ನಟಿ ಭಾವನಾ ಮೆನನ್ ಅವರು ‘ದಿ ಡೋರ್’ (The Door) ಎಂಬ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭಾವನಾ ಬರ್ತ್‌ಡೇ ದಿನ ಚಿತ್ರದ ಪೋಸ್ಟರ್‌ ಲುಕ್‌ ರಿವೀಲ್‌ ಮಾಡಿದೆ ಚಿತ್ರತಂಡ. ಎಂದೂ ಕಾಣಿಸಿಕೊಂಡಿರದ ಭಿನ್ನ ರೋಲ್‌ನಲ್ಲಿ ಜಾಕಿ ಭಾವನಾ ಕಾಣಿಸಿಕೊಂಡಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಈ ಚಿತ್ರ ಮೂಡಿ ಬರಲಿದೆ. ಜೈದೇವ್ ನಿರ್ದೇಶನದ ಈ ಸಿನಿಮಾದಲ್ಲಿ ಭಾವನಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ನವೀನ್ ರಾಜನ್ ಬಂಡವಾಳ ಹೂಡಿದ್ದಾರೆ.

    ಕನ್ನಡದ ‘ರೋಮಿಯೋ’ (Romeo) ಚಿತ್ರದ ನಿರ್ಮಾಪಕ ನವೀನ್ (Naveen) ಜೊತೆ 2018ರಲ್ಲಿ ಭಾವನಾ ಮದುವೆಯಾದರು. ದಾಂಪತ್ಯ ಜೀವನ ಮತ್ತು ಸಿನಿಮಾ ಎರಡನ್ನು ಸಮರ್ಥವಾಗಿ ನಿಭಾಯಿಸುತ್ತಾ ನಟಿ ಬ್ಯುಸಿಯಾಗಿದ್ದಾರೆ. ಸದ್ಯ ಹುಟ್ಟುಹಬ್ಬದ ಅಂಗವಾಗಿ ಭಾವನಾ, ಪತಿ ಜೊತೆ ಚೆನ್ನೈನಲ್ಲಿದ್ದಾರೆ.

  • ಜಾಕಿ ಖ್ಯಾತಿಯ ನಟಿ ಭಾವನಾ ಕಿಡ್ನ್ಯಾಪ್ – ಕಾರಿನಲ್ಲೇ ದುಷ್ಕರ್ಮಿಗಳಿಂದ ಲೈಂಗಿಕ ಕಿರುಕುಳ

    ಜಾಕಿ ಖ್ಯಾತಿಯ ನಟಿ ಭಾವನಾ ಕಿಡ್ನ್ಯಾಪ್ – ಕಾರಿನಲ್ಲೇ ದುಷ್ಕರ್ಮಿಗಳಿಂದ ಲೈಂಗಿಕ ಕಿರುಕುಳ

    ಬೆಂಗಳೂರು: ಖ್ಯಾತ ಬಹುಭಾಷಾ ನಟಿ ಭಾವನಾರನ್ನು ಅಪಹರಿಸಿ ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ

    ಕೇರಳದ ಎರ್ನಾಕುಲಂನಲ್ಲಿ ಶೂಟಿಂಗ್ ಮುಗಿಸಿ ರಾತ್ರಿ 1.30ರ ವೇಳೆ ಮನೆಗೆ ಮರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಅಪರಿಚಿತರು ಭಾವನಾ ಅವರನ್ನ ಅಪಹರಿಸಿದ್ದಾರೆ. ಮಾಜಿ ಕಾರು ಡ್ರೈವರ್‍ನಿಂದಲೇ ಅಪಹರಣ ನಡೆದಿದೆ ಎಂದು ಹೇಳಲಾಗಿದೆ.

    ನಡೆದಿದ್ದೇನು?: ಈ ಹಿಂದೆ ಭಾವನಾ ಕಾರಿನ ಚಾಲಕನಾಗಿದ್ದ ಮಾರ್ಟಿನ್ ಎಂಬಾತ ಐವರು ಸ್ನೇಹಿತರ ಜೊತೆ ಸೇರಿ ತನ್ನನ್ನು ಅಪಹರಿಸಿದ್ದಾಗಿ ಭಾವನಾ ಪೊಲೀಸರಿಗೆ ಕೊಟ್ಟ ದುರಿನಲ್ಲಿ ತಿಳಿಸಿದ್ದಾರೆ. ತ್ರಿಶೂರ್‍ನಿಂದ ಎರ್ನಾಕುಲಂಗೆ ಭಾವನಾ ಬರುತ್ತಿದ್ದ ವೇಳೆ ಅಂಗಮಾಲಿ ಎಂಬಲ್ಲಿ ಟೆಂಪೋ ಟ್ರಾವೆಲರ್‍ನಲ್ಲಿ ಬಂದ ಐವರು, ಭಾವನಾ ಕಾರಿಗೆ ಅಡ್ಡಹಾಕಿ ಕಾರು ನಿಲ್ಲಿಸಿದ್ದಾರೆ. ನಂತರ ಡ್ರೈವರ್‍ನನ್ನು ಹೊರಕ್ಕೆ ಎಳೆದು ಕಾರಿನಲ್ಲಿದ್ದ ಭಾವನಾರನ್ನು ನಗರದಲ್ಲಿ ಸುತ್ತಾಡಿಸಿದ್ದಾರೆ. 1 ಗಂಟೆಗಳ ಕಾಲ ಕಾರಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಭಾವನಾ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಕಾಕ್ಕನಾಡ್‍ನಲ್ಲಿ ಭಾವನಾರನ್ನು ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಿರ್ದೇಶಕ ಲಾಲ್‍ಗೆ ಫೋನ್ ಮಾಡಿ ಅವರ ನೆರವಿನಿಂದ ಈಗ ಭಾವನಾ ದೂರು ದಾಖಲಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಭಾವನಾ ಕನ್ನಡದ ಜಾಕಿ ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್ ಅವರೊಂದಿಗೆ ಅಭಿನಯಿಸಿದ್ದಾರೆ. ಅಲ್ಲದೆ ಯಾರೆ ಕೂಗಾಡಲಿ, ಬಚ್ಚನ್, ಮೈತ್ರಿ ಹೀಗೆ ಹಲವಾರು ಕನ್ನಡ ಸಿನಿಮಾದಲ್ಲಿ ಭಾವನಾ ನಟಿಸಿದ್ದಾರೆ.