Tag: ಜಾತಿ ಪ್ರಮಾಣಪತ್ರ

  • ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರ ಗೊಂದಲ ನಿವಾರಣೆಗೆ ಕ್ರಮ: ಸಿದ್ದರಾಮಯ್ಯ

    ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರ ಗೊಂದಲ ನಿವಾರಣೆಗೆ ಕ್ರಮ: ಸಿದ್ದರಾಮಯ್ಯ

    ಬೆಂಗಳೂರು: ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರದಲ್ಲಿರುವ ಗೊಂದಲ ನಿವಾರಣೆಗೆ ಆದೇಶ ಹೊರಡಿಸುವಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಸಮಸ್ಯೆ ಕುರಿತು ಸಿಎಂ ಸಭೆ ನಡೆಸಿದರು. ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಸಿಎಂ, ಎಸ್‌ಟಿ ಸಮುದಾಯದ ಎಮ್‌ಎಲ್‌ಎಗಳು, ಸ್ವಾಮೀಜಿಗಳು ಸಮಸ್ಯೆ ಬಗ್ಗೆ ಮನವಿ ಮಾಡಿದ್ದರು. ವಾಲ್ಮೀಕಿ ನಿಗಮದ ಅನುದಾನವನ್ನು ಕಡಿತ ಮಾಡಬಾರದು ಎಂದು ಮನವಿ ಮಾಡಿದ್ದರು. ಎಸ್‌ಟಿ ಸಮುದಾಯದಲ್ಲಿ ಜಾತಿ ಪ್ರಮಾಣಪತ್ರವನ್ನು (Caste Certificate) ಕೆಲವರು ಸುಳ್ಳು ಹೇಳಿ ಪಡೆಯುತ್ತಿದ್ದಾರೆ. ಈ ಬಗ್ಗೆ ಕ್ರಮಕ್ಕೆ ಮನವಿ ಮಾಡಿದ್ದರು. ಹಾಗಾಗಿ, ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದರು. ಇದನ್ನೂ ಓದಿ: ಕಾಡುಗೊಲ್ಲ ಸಮುದಾಯ ಎಸ್ಟಿಗೆ ಸೇರ್ಪಡೆ ವಿಚಾರ – ವಿ.ಸೋಮಣ್ಣ ಭೇಟಿಯಾದ ಟಿಬಿ ಜಯಚಂದ್ರ

    ವಾಲ್ಮೀಕಿ ನಿಗಮಕ್ಕೆ ಎಷ್ಟು ಅನುದಾನ ನಿಗದಿಯಾಗಿತ್ತೋ ಅಷ್ಟು ಕೊಡುತ್ತೇವೆ. ವಾಲ್ಮೀಕಿ ನಿಗಮದಲ್ಲಿ 89.63 ಕೋಟಿ ರೂ. ಅಕ್ರಮ ಆಗಿತ್ತು. ಈಗ 5 ಕೋಟಿ ರೂ. ವಾಪಸ್ ಬಂದಿದೆ. 71.54 ಕೋಟಿ ರೂ. ಎಸ್‌ಐಟಿ ಅವರು ರಿಕವರಿ ಮಾಡಿದ್ದಾರೆ. ಉಳಿದ 13 ಕೋಟಿ ರೂ. ರಿಕವರಿ ಆಗಬೇಕು. ಅದನ್ನು ಮಾಡೋದಾಗಿ ಎಸ್‌ಐಟಿ ಅವರು ಹೇಳಿದ್ದಾರೆ. 13 ಕೋಟಿ ರೂ. ರಿಕವರಿ ಆದ್ರೆ ಎಷ್ಟು ಅಕ್ರಮ ಅಗಿದೆ ಅಂತ ನಮಗೆ ಮಾಹಿತಿ ಸ್ಪಷ್ಟವಾಗಿ ತಿಳಿಯಲಿದೆ. ಸದ್ಯ ಕೋರ್ಟ್ ಮುಂದೆ ಕೇಸ್ ನಡೆಯುತ್ತಿದೆ. ಕೋರ್ಟ್ನಲ್ಲಿ ಏನು ತೀರ್ಮಾನ ಆಗುತ್ತೆ ಅದರಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: 3 ಕ್ಷೇತ್ರಗಳ ಉಪಚುನಾವಣೆಯನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ: ಸಿಎಂ

    ಜಾತಿ ಪ್ರಮಾಣಪತ್ರ ಗೊಂದಲ ನಿವಾರಣೆ ಮಾಡಿ ಇಲಾಖೆ ಕಾರ್ಯದರ್ಶಿ ಮತ್ತು ಕಾನೂನು ಇಲಾಖೆ ಅವರಿಗೆ ಸೂಚನೆ ನೀಡಿದ್ದೇನೆ ಪ್ರಮಾಣಪತ್ರ ಗೊಂದಲ ನಿವಾರಣೆ ಮಾಡಿ ಆದೇಶ ಮಾಡಲು ಸೂಚನೆ ನೀಡಿದ್ದೇನೆ. ಆ ಸಮಸ್ಯೆಯೂ ಪರಿಹಾರ ಆಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿದ್ದು ಸರಿಯಾಗಿದೆ: ಮಧು ಬಂಗಾರಪ್ಪ

  • 2018ರ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ಒಡ್ಡಿದ್ದ ಅಭ್ಯರ್ಥಿಯ ಜಾತಿ ಪ್ರಮಾಣಪತ್ರ ರದ್ದು

    2018ರ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ಒಡ್ಡಿದ್ದ ಅಭ್ಯರ್ಥಿಯ ಜಾತಿ ಪ್ರಮಾಣಪತ್ರ ರದ್ದು

    ರಾಯಚೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರ ಮಾನ್ವಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಪೈಪೋಟಿ ನೀಡಿ ಎರಡನೇ ಸ್ಥಾನ ಪಡೆದಿದ್ದ ಡಾ.ತನುಶ್ರಿ ಜಾತಿ ಪ್ರಮಾಣಪತ್ರ ರದ್ದಾಗಿದೆ.

    ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಚುನಾವಣೆ ಎದುರಿಸಿದ್ದಾರೆ ಎಂದು ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್.ರಘುವೀರ ನಾಯಕ ಹಾಗೂ ರಂಗಾರೆಡ್ಡಿ ಎಂಬುವವರು ದೂರು ದಾಖಲಿಸಿದ್ದರು‌. ಇದನ್ನೂ ಓದಿ: ಚುನಾವಣಾ ರಾಜಕಾರಣಕ್ಕೆ ಈಶ್ವರಪ್ಪ ಗುಡ್‍ಬೈ

    ಬೀದರ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಜಾತಿ ಪ್ರಮಾಣಪತ್ರ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ನಮ್ಮ ಹೋರಾಟಕ್ಕೆ ಐದು ವರ್ಷದ‌ ಬಳಿಕ ಜಯ ಸಿಕ್ಕಿದೆ ಎಂದು ರಘುವೀರ್ ನಾಯಕ್ ಹೇಳಿದ್ದಾರೆ.

    ಹಿಂದುಳಿದ ವರ್ಗದ ಧನಗಾರ ಜಾತಿಯಲ್ಲಿದ್ದರೂ ಗೊಂಡ ಎಂದು ನಮೂದಿಸಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಪಡೆದಿದ್ದರು ಎಂದು ಆರೋಪಿಸಿ ರಾಯಚೂರು ಹಾಗೂ ಬೀದರ್ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ತನುಶ್ರೀ ಕಳೆದ ಚುನಾವಣೆಯಲ್ಲಿ 37,733 ಮತಗಳನ್ನು ಪಡೆದು ರಾಜಾ ವೆಂಕಟಪ್ಪ ನಾಯಕ್ ವಿರುದ್ಧ ಪರಾಭವಗೊಂಡಿದ್ದರು. ಇದನ್ನೂ ಓದಿ: ಪಕ್ಷೇತರನಿಗೆ ಬಿದ್ದ ಅನಿರೀಕ್ಷಿತ ಮತ ಸಿದ್ದು ಪಾಲಿಗೆ ವರವಾಯ್ತು!