Tag: ಜಾರಿ ನಿರ್ದೇಶನಾಲಯ

  • 25 ರಿಂದ 35 ಲಕ್ಷಕ್ಕೆ ಸರ್ಕಾರಿ ಹುದ್ದೆ ಮಾರಾಟ: ತನಿಖೆ ನಡೆಸಲು ತ.ನಾಡು ಪೊಲೀಸರಿಗೆ ಇಡಿ ಪತ್ರ

    25 ರಿಂದ 35 ಲಕ್ಷಕ್ಕೆ ಸರ್ಕಾರಿ ಹುದ್ದೆ ಮಾರಾಟ: ತನಿಖೆ ನಡೆಸಲು ತ.ನಾಡು ಪೊಲೀಸರಿಗೆ ಇಡಿ ಪತ್ರ

    ಚೆನ್ನೈ: ತಮಿಳುನಾಡು ಪುರಸಭೆ ಆಡಳಿತ ಮತ್ತು ನೀರು ಸರಬರಾಜು ಇಲಾಖೆಯಲ್ಲಿ ಸರ್ಕಾರಿ ಹುದ್ದೆಗಳಿಗೆ ಲಂಚ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗಂಭೀರ ಆರೋಪ ಮಾಡಿದೆ.

    ರಿಯಲ್ ಎಸ್ಟೇಟ್ ಸಂಸ್ಥೆ ಟಿವಿಹೆಚ್ ಮತ್ತು ಡಿಎಂಕೆ ಸಚಿವ ಕೆ.ಎನ್.ನೆಹರು ಅವರ ಸಂಬಂಧಿ ಒಳಗೊಂಡ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ದಾಳಿಯ ಸಂದರ್ಭದಲ್ಲಿ ಈ ಹಗರಣ ಬೆಳಕಿಗೆ ಬಂದಿದೆ ಎಂದು ತಮಿಳುನಾಡು ಪೊಲೀಸರಿಗೆ ಇಡಿ ತಿಳಿಸಿದೆ. ಇದನ್ನೂ ಓದಿ: ರಫೇಲ್‌ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

    ಸಹಾಯಕ ಎಂಜಿನಿಯರ್‌ಗಳು, ಜೂನಿಯರ್ ಎಂಜಿನಿಯರ್‌ಗಳು ಮತ್ತು ಪಟ್ಟಣ ಯೋಜನಾ ಅಧಿಕಾರಿಗಳಂತಹ ಹುದ್ದೆಗಳನ್ನು ಪಡೆಯಲು ಅಭ್ಯರ್ಥಿಗಳು 25 ಲಕ್ಷದಿಂದ 35 ಲಕ್ಷ ರೂ.ಗಳವರೆಗೆ ಲಂಚವನ್ನು ನೀಡಿದ್ದಾರೆ ಎಂದು ತಮಿಳುನಾಡು ಪೊಲೀಸ್ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಇಡಿ ಆರೋಪಿಸಿದೆ. ಆ.6 ರಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳನ್ನು ಹಸ್ತಾಂತರಿಸಿದ್ದಾರೆ.

    2024–2025 ಮತ್ತು 2025–2026 ವರ್ಷಗಳ ನೇಮಕಾತಿ ಪ್ರಕ್ರಿಯೆಯನ್ನು ಜಾಣ್ಮೆಯಿಂದ ನಿರ್ವಹಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ಕೆಲವು ವ್ಯಕ್ತಿಗಳಿಗೆ ಪರೀಕ್ಷಾ ಮಾಹಿತಿ ಮೊದಲೇ ಲಭ್ಯವಿತ್ತು. ಲಂಚದ ಹಣವನ್ನು ನಗದು ರೂಪದಲ್ಲಿ ಸಂಗ್ರಹಿಸಿ ಹವಾಲಾ ಮಾರ್ಗಗಳ ಮೂಲಕ ರವಾನಿಸಲಾಗಿದೆ ಎಂದು ಆರೋಪಿಸಿದೆ. ಇದನ್ನೂ ಓದಿ: ಕೆನಡಾದಲ್ಲಿ ಉದ್ಯಮಿ ಹತ್ಯೆ, ಗಾಯಕನ ಮನೆಗೆ ಬೆಂಕಿಯಿಟ್ಟ ಬಿಷ್ಣೋಯ್‌ ಗ್ಯಾಂಗ್‌

    ಲಂಚ ನೀಡಿದ ಸುಮಾರು 150 ಅಭ್ಯರ್ಥಿಗಳನ್ನು ನೇಮಕ ಮಾಡಲಾಗಿದೆ. ಪೊಲೀಸರಿಗೆ ಬರೆದ ಪತ್ರದಲ್ಲಿ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ಹಲವಾರು ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ಇಡಿ ಹೆಸರಿಸಿದೆ.

    ರಾಜ್ಯ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರವೇ ಇಡಿ ತನಿಖೆ ಆರಂಭಿಸಬೇಕಾಗುತ್ತದೆ. ಹೀಗಾಗಿ, ಹಗರಣದ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವಂತೆ ತಮಿಳುನಾಡು ಪೊಲೀಸರಿಗೆ ಇಡಿ ಒತ್ತಾಯಿಸಿದೆ.

  • ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಕೇಸ್ – ಚೆನ್ನೈನ 7 ಸ್ಥಳಗಳ ಮೇಲೆ ಇಡಿ ದಾಳಿ

    ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಕೇಸ್ – ಚೆನ್ನೈನ 7 ಸ್ಥಳಗಳ ಮೇಲೆ ಇಡಿ ದಾಳಿ

    ಚೆನ್ನೈ: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ (Cough Syrup) ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಚೆನ್ನೈನಲ್ಲಿ (Chennai) 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

    ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು ಔಷಧ ನಿಯಂತ್ರಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಬಂಧಿಸಿದ 7 ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳು ಸಾವು ಕೇಸ್‌ – CBI ತನಿಖೆಗೆ ನೀಡಲು ಸುಪ್ರೀಂ ನಕಾರ

    ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ಕಂಪನಿ ಮತ್ತು ತಮಿಳುನಾಡು ಆಹಾರ ಮತ್ತು ಔಷಧ ಆಡಳಿತ ಎರಡರಿಂದಲೂ ಅನೇಕ ನಿಯಮಗಳ ಉಲ್ಲಂಘನೆಯಾಗಿದೆ. ಕಳಪೆ ಮೂಲಸೌಕರ್ಯ ಮತ್ತು ಪುನರಾವರ್ತಿತ ಸುರಕ್ಷತಾ ಉಲ್ಲಂಘನೆಗಳ ಹೊರತಾಗಿಯೂ ಶ್ರೇಸನ್ 2011ರಲ್ಲಿ ಪರವಾನಗಿ ಪಡೆದಾಗಿನಿಂದ ಅನಿಯಂತ್ರಿತವಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿತ್ತು. ಹೀಗಾಗಿ ಇಡಿ ಅಧಿಕಾರಿಗಳು ಚೆನ್ನೈನ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಅಕ್ರಮ ಹಣ ವರ್ಗಾವಣೆ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಸೀಟು ಹಂಚಿಕೆ ಇತ್ಯರ್ಥ – ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ

    ಏನಿದು ಪ್ರಕರಣ?
    ಮಧ್ಯಪ್ರದೇಶ, ರಾಜಸ್ಥಾನದಲ್ಲಿ ವಿಷಕಾರಿ ದ್ರಾವಣವಾದ ಡೈಎಥಿಲಿನ್ ಗ್ಲೈಕಾಲ್ ಮತ್ತು ಎಥಿಲಿನ್ ಗ್ಲೈಕಾಲ್ ಇರುವ ಸಿರಪ್ ಸೇವಿಸಿದ 20 ಮಕ್ಕಳು ಮೂತ್ರಪಿಂಡ ಸೋಂಕಿನಿಂದ ಮೃತಪಟ್ಟಿದ್ದರು. ಕೆಲ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗಿದ್ದರು.

    ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸುವ ಶ್ರೇಸನ್ ಫಾರ್ಮಾ ಮಾಲೀಕ ರಂಗನಾಥನ್‌ನನ್ನು ಮಧ್ಯಪ್ರದೇಶ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದರು. ಅಲ್ಲದೇ ಈ ಪ್ರಕರಣವನ್ನು ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

  • MUDA Scam| ಕೈ ನಾಯಕ ಪಾಪಣ್ಣಗೆ ವಿಜಯನಗರದ 4ನೇ ಹಂತದಲ್ಲಿ ಹಂಚಿಕೆಯಾಗಿತ್ತು 31 ಸೈಟ್‌

    MUDA Scam| ಕೈ ನಾಯಕ ಪಾಪಣ್ಣಗೆ ವಿಜಯನಗರದ 4ನೇ ಹಂತದಲ್ಲಿ ಹಂಚಿಕೆಯಾಗಿತ್ತು 31 ಸೈಟ್‌

    – ಇಡಿಯಿಂದ 59 ಮುಡಾ ಸೈಟ್‌ ಮುಟ್ಟುಗೋಲು

    ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣ(MUDA Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬೇಟೆಯನ್ನು ಮುಂದುವರೆಸಿದೆ. ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ (Dinesh Kumar) ಬಂಧನದ ಬಳಿಕ 59 ಕ್ಕೂ ಹೆಚ್ಚು ಸೈಟ್ ಗಳನ್ನು ಮುಟ್ಟುಗೋಲು ಹಾಕಿಕೊಂಡು ವಶಕ್ಕೆ ಪಡೆದುಕೊಂಡಿದೆ.

    ವಶಪಡಿಸಿಕೊಂಡ 60 ಕೋಟಿ ರೂ. ಮೌಲ್ಯದ ಸೈಟ್‌ಗಳಲ್ಲಿ ಕಾಂಗ್ರೆಸ್ ಮುಖಂಡ ಎ ಪಾಪಣ್ಣ (Papanna) ಅವರದ್ದೇ ಅಗ್ರಪಾಲು. ಈ ಬಗ್ಗೆ ಪಬ್ಲಿಕ್ ಟಿವಿಯ ಬಳಿ ಎಕ್ಸ್ ಕ್ಲೂಸಿವ್ ದಾಖಲೆ ಸಿಕ್ಕಿದ್ದು ಎ ಪಾಪಣ್ಣ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದನ್ನೂ ಓದಿ:  ಇದನ್ನೂಓದಿ: ಗಗನಕ್ಕೇರಿದ ಬಂಗಾರದ ಬೆಲೆ 1.5 ಲಕ್ಷದ ಗಡಿ ದಾಟಿದ ಕೆ.ಜಿ ಬೆಳ್ಳಿ!

    ಪಾಪಣ್ಣ ಬಳಿಯಿದ್ದ 31 ಸೈಟ್‌ಗಳು ವಿಜಯನಗರದ ನಾಲ್ಕನೇ ಹಂತದ್ದೇ ಆಗಿರುವುದು ವಿಶೇಷ. ಮುಡಾ ಮಾಜಿ ಅಧ್ಯಕ್ಷ ಮರೀಗೌಡಗೆ ಕೂಡ ಅಕ್ರಮ ಸೈಟ್ ಮಂಜೂರು ಮಾಡಲಾಗಿದೆ. ಇದನ್ನೂ ಓದಿ:  ವಿಮೆ ಹಣದ ಮೇಲೆ ಕಣ್ಣು – ಅಳಿಯನನ್ನೇ ಕೊಲೆ ಮಾಡಿದ ಮಾವ & ಗ್ಯಾಂಗ್

    ದಿನೇಶ್ ಕುಮಾರ್ ತನ್ನ ಮನೆಯ ಕೆಲಸಕ್ಕಿದ್ದ ರಮೇಶ್‌ ಹೆಸರಲ್ಲೂ ಕೋಟ್ಯಂತರ ರೂ. ಆಸ್ತಿ ಮಾಡಿದ್ದಾರೆ. ಅತ್ತೆ, ಮಾವ, ಬಾಮೈದಾ ಹೆಸರಲ್ಲಿ ಕೋಟಿ ಕೋಟಿ ಆಸ್ತಿ ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.

  • 3,000 ಕೋಟಿ ಸಾಲ ವಂಚನೆ ಕೇಸ್‌ – ಅನಿಲ್‌ ಅಂಬಾನಿಗೆ ಸೇರಿದ 50 ಕಂಪನಿಗಳ ಮೇಲೆ ED ದಾಳಿ

    3,000 ಕೋಟಿ ಸಾಲ ವಂಚನೆ ಕೇಸ್‌ – ಅನಿಲ್‌ ಅಂಬಾನಿಗೆ ಸೇರಿದ 50 ಕಂಪನಿಗಳ ಮೇಲೆ ED ದಾಳಿ

    – 35ಕ್ಕೂ ಹೆಚ್ಚು ಸ್ಥಳಗಳಲ್ಲಿ ತೀವ್ರ ಶೋಧ

    ಮುಂಬೈ: ಯೆಸ್ ಬ್ಯಾಂಕ್‌ಗೆ 3,000 ಕೋಟಿ ಸಾಲ ವಂಚನೆ ಪ್ರಕರಣಕ್ಕೆ (Yes Bank fraud probe) ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಉದ್ಯಮಿ ಅನಿಲ್ ಅಂಬಾನಿ (Anil Ambani) ಮಾಲೀಕತ್ವದ ರಿಲಯನ್ಸ್ ಗ್ರೂಪ್​ಗೆ ಸೇರಿದ ಹಲವು ಕಂಪನಿಗಳ ಮೇಲೆ ದಾಳಿ ಮಾಡಿದೆ.

    ಸುಮಾರು 35ಕ್ಕೂ ಹೆಚ್ಚು ಸ್ಥಳಗಳು, ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ (RAAGA)ನ 50 ಕಂಪನಿಗಳ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಡಿ ದಾಳಿ ನಡೆಸಿರುವುದಾಗಿ ರೆಡ್‌ಬಾಕ್ಸ್ ಗ್ಲೋಬಲ್ ಇಂಡಿಯಾ X ನಲ್ಲಿ ಪೋಸ್ಟ್ ಹಂಚಿಕೊಂಡಿದೆ. ಇದನ್ನೂ ಓದಿ: ED ಭರ್ಜರಿ ಬೇಟೆ – ಟಿಎಂಸಿ ಮಾಜಿ ಸಂಸದನ ಪುತ್ರನಿಗೆ ಸೇರಿದ 127 ಕೋಟಿ ಮೌಲ್ಯದ ಷೇರು ಜಪ್ತಿ

    ಯೆಸ್‌ ಬ್ಯಾಂಕ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿದ್ದ 2 ಎಫ್‌ಐಆರ್‌ಗಳನ್ನು ಆಧರಿಸಿ ಹಾಗೂ ಬ್ಯಾಂಕ್ ಆಫ್ ಬರೋಡಾ, ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಮತ್ತಿತರ ಏಜೆನ್ಸಿಗಳಿಂದ ದೊರೆತ ಮಾಹಿತಿ ಆಧಾರದ ಮೇಲೆ ತೀವ್ರ ಶೋಧ ನಡೆಸುತ್ತಿದೆ. 25ಕ್ಕೂ ಹೆಚ್ಚು ಮಂದಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.

    2017 ಮತ್ತು 2019ರ ನಡುವೆ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಅಡಿಯಲ್ಲಿರುವ ಸಂಸ್ಥೆಗಳಿಗೆ ಯೆಸ್‌ ಬ್ಯಾಂಕ್‌ 3,000 ಕೋಟಿ ರೂ. ಸಾಲ ನೀಡಿತ್ತು. ಆದ್ರೆ ಈ ಸಾಲದ ಹಣವನ್ನ ಗ್ರೂಪ್‌ನ ಇತರ ಶೆಲ್‌ ಕಂಪನಿಗಳಿಗೆ (ಬೇನಾಮಿ ಕಂಪನಿ) ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಮೂಲಕ ಬ್ಯಾಂಕ್‌ಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನ ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಇಡಿ ಪತ್ತೆಹಚ್ಚಿದೆ. ಪ್ರಾಥಮಿಕ ತನಿಖೆಯಲ್ಲಿ ಇದಕ್ಕೆ ಸಾಕ್ಷ್ಯಾಧಾರಗಳೂ ಸಿಕ್ಕಿವೆ ಅಂತ ಇಡಿ ಹೇಳಿದೆ. ಇದನ್ನೂ ಓದಿ: ಬಿಜೆಪಿಯಿಂದ ಮುಂದಿನ ಉಪರಾಷ್ಟ್ರಪತಿ ಆಯ್ಕೆ – ಮೋದಿ ವಿದೇಶಿ ಪ್ರವಾಸದ ಬಳಿಕ ಅಂತಿಮ ನಿರ್ಧಾರ

    ಸಾಲ ಅನುಮೋದನೆ ವಿಚಾರದಲ್ಲಿ ಯೆಸ್ ಬ್ಯಾಂಕ್ ಪ್ರಕ್ರಿಯೆ ಅನುಮಾನಾಸ್ಪದವಾಗಿದೆ. ಸರಿಯಾದ ಹಣಕಾಸು ಸ್ಥಿತಿ ಇಲ್ಲದ ಕಂಪನಿಗಳು, ಸಾಮಾನ್ಯ ನಿರ್ದೇಶಕರಿರುವ ಕಂಪನಿಗಳಿಗೆ ಸಾಲ ಮಂಜೂರು ಮಾಡಲಾಗಿದೆ. ಸರಿಯಾಗಿ ಅವಲೋಕನ ಮಾಡುವ ಪ್ರಯತ್ನ ಆಗಿಲ್ಲ. ಸಾಲಕ್ಕೆ ಅನುಮೋದನೆ ಆಗುವ ಮುನ್ನವೇ ಅಥವಾ ಅದೇ ದಿನವೇ ಸಾಲದ ಹಣ ಬಿಡುಗಡೆ ಮಾಡಲಾಗಿದೆ ಎಂದು ಯೆಸ್ ಬ್ಯಾಂಕ್​ನ ವ್ಯವಸ್ಥೆಯಲ್ಲಿರುವ ಲೋಪಗಳನ್ನು ಇಡಿ ಎತ್ತಿ ತೋರಿಸಿದೆ. ಇಡಿ ನೀಡಿರುವ ಮಾಹಿತಿ ಪ್ರಕಾರ ರಿಲಯನ್ಸ್ ಗ್ರೂಪ್​ಗೆ ಸೇರಿದ 50 ಕಂಪನಿಗಳ ಮೇಲೆ ಇಡಿ ದಾಳಿ ನಡೆಸಿದ್ದು ಶೋಧ ಆರಂಭಿಸಿದೆ.

    ಇಡಿ ಆರೋಪದ ಮುಖ್ಯಾಂಶಗಳು
    * 3,000 ಕೋಟಿ ಸಾಲ ಮಂಜೂರು ಮಾಡಲು ಯೆಸ್‌ ಬ್ಯಾಂಕ್‌ನ ಸಿಇಓ ಹಾಗೂ ಇತರರು ಭಾಗಿಯಾಗಿದ್ದಾರೆ. ದೊಡ್ಡ ಮಟ್ಟದ ಸಾಲ ಮಂಜೂರು ಮಾಡಿಸಲು ಕೆಲ ಬ್ಯಾಂಕ್‌ ಅಧಿಕಾರಿಗಳು ಲಂಚ ಪಡೆದಿರಬಹುದು ಎಂದು ಇಡಿ ಶಂಕಿಸಿದೆ.
    * ಈ ಬೆನ್ನಲ್ಲೇ ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್ (RHFL) ನಲ್ಲಿ ಭಾರೀ ಅಕ್ರಮ ನಡೆದಿರುವ ಬಗ್ಗೆ ಷೇರು ಪೇಟೆ ಮಂಡಳಿ SEBI (ಸೆಬಿ) ವರದಿಯೊಂದನ್ನ ಸಲ್ಲಿದೆ. ವರದಿಯ ಪ್ರಕಾರ, ಸಂಸ್ಥೆಯ ಕಾರ್ಪೊರೇಟ್ ಸಾಲ ಬಂಡವಾಳವು 2017-18ನೇ ಹಣಕಾಸು ವರ್ಷದಲ್ಲಿ 3,742 ಕೋಟಿ ರೂ.ಗಳಷ್ಟಿತ್ತು. ಆದ್ರೆ 2018-19ನೇ ಹಣಕಾಸು ವರ್ಷದಲ್ಲಿ ಇದರ ಪ್ರಮಾಣ 8,670 ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ಸೆಬಿ ತನ್ನ ವರದಿಯಲ್ಲಿ ಹೇಳಿದೆ.  ಇದನ್ನೂ ಓದಿ: ಬ್ರಿಟನ್‌ನಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ – ಇಂದೇ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಸಾಧ್ಯತೆ

  • ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ

    ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ

    ನವದೆಹಲಿ/ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣಕ್ಕೆ (Gold Smuggling Case) ಸಂಬಂಧಿಸಿದಂತೆ ರನ್ಯಾ ರಾವ್‌ಗೆ (Ranya Rao) ಸಂಬಂಧಿಸಿದಂತೆ ಬೆಂಗಳೂರು ಮತ್ತು ತುಮಕೂರಿನಲ್ಲಿರುವ ಒಟ್ಟು 34.12 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿದೆ.

    ವಿಕ್ಟೋರಿಯಾ ಲೇಔಟ್ ಮನೆ, ಅರ್ಕಾವತಿ ಲೇಔಟ್ ನ ಪ್ಲಾಟ್, ಶಿರಾದ ಇಂಡಸ್ಟ್ರಿಯಲ್ ಲ್ಯಾಂಡ್, ಆನೇಕಲ್ ನ ಕೃಷಿ ಭೂಮಿ ಸೇರಿದಂತೆ 34.12 ಕೋಟಿ ರೂ. ಆಸ್ತಿಯನ್ನು ಇಡಿ ವಶಕ್ಕೆ ಪಡೆದಿದೆ. ಇದನ್ನೂ ಓದಿ: ಮಳೆ ಪ್ರಮಾಣದಲ್ಲಿ ಚಿರಾಪುಂಜಿ, ಆಗುಂಬೆಯನ್ನು ಹಿಂದಿಕ್ಕಿದ ಉಡುಪಿ

     

    ಇಡಿ ಹೇಳಿದ್ದೇನು?
    ರನ್ಯಾ ರಾವ್ ಮತ್ತು ತರುಣ್ ಕೊಂಡೂರು ರಾಜು ಮತ್ತು ಇತರರು ದುಬೈ, ಉಗಾಂಡಾ ಮತ್ತು ಬೇರೆ ದೇಶಗಳಲ್ಲಿರುವ ಪೂರೈಕೆದಾರರಿಂದ ಚಿನ್ನವನ್ನು ಖರೀದಿಸಿ ಹವಾಲಾ ಮಾರ್ಗದ ಮೂಲಕ ನಗದು ಹಣವನ್ನು ಪಾವತಿಸುತ್ತಿದ್ದರು. ಇದನ್ನೂ ಓದಿ: ಟ್ರಂಪ್ ಬಿಗ್ ಬ್ಯೂಟಿಫುಲ್ ಬಿಲ್‌ಗೆ ಒಪ್ಪಿಗೆ ಭಾರತೀಯರಿಗೂ ಕಾದಿದೆ ಆಘಾತ

    ಕಳ್ಳಸಾಗಣೆ ಮಾಡಿದ ಚಿನ್ನವನ್ನು ಭಾರತದೊಳಗೆ ಆಭರಣ ವ್ಯಾಪಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ನಗದು ರೂಪದಲ್ಲಿ ಮಾರಾಟ ಮಾಡಲಾಗಿತ್ತು. ಈ ಹಣ ಮತ್ತೆ ಚಿನ್ನ ತರಲು ಬಳಕೆಯಾಗುತ್ತಿತ್ತು.

    ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳು ಮತ್ತು ಡಿಜಿಟಲ್ ಸಾಧನಗಳ ಮೂಲಕ ವಿದೇಶದಲ್ಲಿರುವ ವಿದೇಶಿ ಚಿನ್ನದ ಪೂರೈಕೆದಾರರು, ಹವಾಲಾ ನಿರ್ವಾಹಕರು ಮತ್ತು ದುಬೈ ಮೂಲದ ಕಸ್ಟಮ್ಸ್ ಏಜೆಂಟ್‌ಗಳೊಂದಿಗೆ ಆರೋಪಿಗಳು ಸಂವಹನ ನಡೆಸಿರುವುದು ದೃಢಪಟ್ಟಿದೆ ಎಂದು ಇಡಿ ಹೇಳಿದೆ.

  • 2 ಕೋಟಿಗೂ ಅಧಿಕ ಮೌಲ್ಯದ ಫ್ಲ್ಯಾಟ್‌ ಸೇರಿ ʻಬಂಗಾರಿʼಗೌಡಳ 3.98 ಕೋಟಿ ಆಸ್ತಿ ಜಪ್ತಿ

    2 ಕೋಟಿಗೂ ಅಧಿಕ ಮೌಲ್ಯದ ಫ್ಲ್ಯಾಟ್‌ ಸೇರಿ ʻಬಂಗಾರಿʼಗೌಡಳ 3.98 ಕೋಟಿ ಆಸ್ತಿ ಜಪ್ತಿ

    ಬೆಂಗಳೂರು: ಐಶ್ವರ್ಯಗೌಡ ವಂಚನೆ ಪ್ರಕರಣದಲ್ಲಿ (Fraud Case) ಮಾಜಿ ಸಂಸದ, ಕಾಂಗ್ರೆಸ್ ಮುಖಂಡ ಡಿ.ಕೆ.ಸುರೇಶ್ (DK Suresh) ಇಂದು ಇಡಿ ತನಿಖೆ ಎದುರಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸುದೀರ್ಘ 7 ಗಂಟೆಗಳ ವಿಚಾರಣೆ ಎದುರಿಸಿದ್ದಾರೆ. ಜುಲೈ 8ಕ್ಕೆ ಮತ್ತೆ ವಿಚಾರಣೆಗೆ ಬರುವಂತೆ ಇಡಿ ಸೂಚಿಸಿದೆ.

    ಈ ನಡುವೆ ಐಶ್ವರ್ಯಗೌಡಗೆ (Aishwarya Gowda) ಸೇರಿದ್ದ 3.98 ಕೋಟಿ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ. ಇದರಲ್ಲಿ 2.01 ಕೋಟಿ ಮೌಲ್ಯದ ಫ್ಲ್ಯಾಟ್, 1.97 ಕೋಟಿ ಮೌಲ್ಯದ ನಗದು, ಚಿನ್ನಾಭರಣ ಸೇರಿದೆ. ಆಸ್ತಿ ಸೀಜ್ ಆಗಿರೊ ಬಗ್ಗೆ ಇಡಿ ಅಧಿಕೃತ ಮಾಹಿತಿ ಹಂಚಿಕೊಂಡಿದೆ.ಇದನ್ನೂ ಓದಿ: ಮದ್ವೆಯಾದ ಒಂದೇ ತಿಂಗಳಿಗೆ ಪತಿ ಶವವಾಗಿ ಪತ್ತೆ – ಬ್ಯಾಂಕ್ ಉದ್ಯೋಗಿ ಜೊತೆಗಿನ ಅಫೇರ್ ಕಾರಣ; ರಹಸ್ಯ ಬಯಲು

    ಐಶ್ವರ್ಯಗೌಡಳ ಮೇಲೆ ರಾಜ್ಯದಲ್ಲಿ ವಂಚನೆ ಸಂಬಂಧ ಹಲವು ಎಫ್‌ಐಆರ್‌ಗಳಾಗಿದ್ವು. ಅಕ್ರಮ ಹಣ ವರ್ಗಾವಣೆ ಹಿನ್ನೆಲೆ ಇದೀಗ ಇಡಿ ಐಶ್ವರ್ಯಳ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.

    ಇನ್ನೂ ವಿಚಾರಣೆ ಬಳಿಕ ಮಾತನಾಡಿದ ಡಿ.ಕೆ ಸುರೇಶ್, ಇಡಿ ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ. ಜುಲೈ 8ಕ್ಕೆ ವಿಚಾರಣೆಗೆ ಕರೆದಿದ್ದಾರೆ. ಸಹಕಾರ ಕೊಡ್ತೇನೆ ಅಂದಿದ್ದಾರೆ. ಇದನ್ನೂ ಓದಿ: ಉಪಚುನಾವಣೆ ಫಲಿತಾಂಶ ಪ್ರಕಟ – ಎಎಪಿ 2, ಬಿಜೆಪಿ, ಕಾಂಗ್ರೆಸ್, ಟಿಎಂಸಿ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು

  • Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

    Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

    – ವಾಲ್ಮೀಕಿ ನಿಗಮ ಬಹುಕೋಟಿ ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ; ಇ.ಡಿ

    ಬೆಂಗಳೂರು: ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣ (Valmiki Scam Case) ಮುಗಿದೇ ಹೋಯ್ತು ಅನ್ನೋ ಕಥೆ ಮತ್ತೆ ಚಿಗುರಿಕೊಂಡಿದೆ. ಮಾಜಿ ಸಚಿವ ಬಂಧನ ಆಯ್ತು, ಬಿಡುಗಡೆಯೂ ಆಯ್ತು. ಆದ್ರೆ, ಬಳ್ಳಾರಿ ಚುನಾವಣೆಗೆ 21 ಕೋಟಿ ರೂ. ದುರ್ಬಳಕೆಯಾಗಿದ್ದು ಹೇಗೆ…? 87 ಕೋಟಿ ಹಣದ ವಹಿವಾಟು ಎಲ್ಲೆಲ್ಲಿ ಆಯ್ತು…? ಇಡೀ ಹಗರಣದ ಎಕ್ಸಕ್ಲೂಸಿವ್ ಚಾರ್ಜ್‌ಶೀಟ್ ʻಪಬ್ಲಿಕ್ ಟಿವಿʼಗೆ (Public TV) ಲಭ್ಯವಾಗಿದೆ.

    ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ರೂವಾರಿಯೇ ನಾಗೇಂದ್ರ (BN Nagendra) ಎಂದು ಇಡಿ (ED) ಗಂಭೀರ ಆರೋಪ ಮಾಡಿದೆ. ಇದಕ್ಕೆ ಪೂರಕವಾದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಆದ್ರೆ ನಾನು ಯಾವುದೇ ಅಪರಾಧ ಎಸಗಿಲ್ಲ. ನನಗೂ ಈ ಅವ್ಯವಹಾರಕ್ಕೂ ಸಂಬಂಧವೇ ಇಲ್ಲ ಎಂದು ವಿಚಾರಣೆ ವೇಳೆ ನಾಗೇಂದ್ರ ಹೇಳಿದ್ದಾರೆ. ಅದರ ಎಕ್ಸ್‌ಕ್ಲೂಸಿವ್‌ ಡಿಟೇಲ್ಸ್‌ ಇಲ್ಲಿದೆ.

    ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ – ED ಚಾರ್ಜ್‌ಶೀಟ್‌ನಲ್ಲಿ ಏನಿದೆ?

    A1 – ಮಾಜಿ ಸಚಿವ ನಾಗೇಂದ್ರ
    1. ನಾಗೇಂದ್ರ ಇಡೀ ಹಗರಣದ ಮಾಸ್ಟರ್ ಮೈಂಡ್. ಬಹುಕೋಟಿ ಅಕ್ರಮದ ರೂವಾರಿ. ಅಕ್ರಮ ಹಣ ವರ್ಗಾವಣೆಯ ಸೂತ್ರಧಾರ. ನಿಕಟವರ್ತಿ ನೆಂಕ್ಕಟ್ಟಿ ನಾಗರಾಜ್ ಜೊತೆ ಶಾಮೀಲಾಗಿದ್ದಾರೆ. ವಾಲ್ಮೀಕಿ ನಿಗಮದ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಕೋಟಿ ಕೋಟಿ ಹಣ ವರ್ಗಾವಣೆ. ನಾಗೇಂದ್ರ ಕೈವಾಡದ ಬಗ್ಗೆ ನಿಗಮದ ಮಾಜಿ ಎಂಡಿ ಪದ್ಮನಾಭ ಹಾಗೂ ಅಕೌಂಟ್ ಮ್ಯಾನೇಜರ್ ಪರಶುರಾಂ ದುರ್ಗಣ್ಣನವರ್ ಹೇಳಿಕೆ ನೀಡಿದ್ದಾರೆ.

    2. ವಾಲ್ಮೀಕಿ ನಿಗಮದ ಬಹುಕೋಟಿ ಹಣ ವೈಯಕ್ತಿಕ ಹಾಗೂ ಚುನಾವಣಾ ವೆಚ್ಚಕ್ಕೆ ದುರ್ಬಳಕೆ ಆಗಿದೆ. ನಾಗೇಂದ್ರ ಆಪ್ತ ಸಹಾಯಕ ವಿಜಯ್ ಕುಮಾರ್ ಗೌಡ ಮೂಲಕ ಬಳ್ಳಾರಿ ಲೋಕಸಭೆ ಚುನಾವಣೆಗೆ ದುರ್ಬಳಕೆ. ಇದಕ್ಕೆ ಪೂರಕ ಸಾಕ್ಷಿ ಎಂಬಂತೆ ವಿಜಯ ಕುಮಾರ್ ಗೌಡ ಮೊಬೈಲ್‌ನಲ್ಲಿ ಕ್ಯಾಶ್ ಬಂಡಲ್‌ಗಳು ಪತ್ತೆಯಾಗಿದ್ದವು.

    3. ಬಹುಕೋಟಿ ಅಕ್ರಮ ಬಯಲಾಗಿ ತನಿಖೆ ಆರಂಭಗೊಂಡ ನಂತರ ಆರೋಪಿ ನಾಗೇಂದ್ರ ಮೂರು ಐ-ಫೋನ್ ಬದಲಾಯಿಸಿದ್ದಾರೆ. ತಾಂತ್ರಿಕ ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಮೂರು ಫೋನ್ ಚೇಂಜ್ ಮಾಡಿದ್ದಾರೆ. ಎಫ್‌ಎಸ್‌ಎಲ್‌ ವರದಿಯಲ್ಲಿ ಇದೆಲ್ಲವೂ ಬಹಿರಂಗಗೊಂಡಿದೆ.

    4. ಹಣ ಲಪಟಾಯಿಸುವ ಸಂಚು ಕಳೆದ ವರ್ಷವೇ ಸಿದ್ಧವಾಗಿತ್ತು. ಇದೇ ದುರುದ್ದೇಶದಿಂದ ಪರಿಚಯಸ್ಥ ಪದ್ಮನಾಭನನ್ನು ಎಂಡಿ ಆಗಿ ನೇಮಕ ಮಾಡಲಾಯ್ತು. ಹೊಸ ಬ್ಯಾಂಕ್ ಖಾತೆ ತೆರೆದು.. ಅಲ್ಲಿಗೆ ಹಣ ವರ್ಗಾಯಿಸಲು ಸೂಚಿಸಿದ್ದೇ ನಾಗೇಂದ್ರ. ನಾಗೇಂದ್ರ ಆಜ್ಞೆಯನ್ನು ಶಿರಸಾವಹಿಸಿ ಪಾಲಿಸಿದ್ದು ಮಾಜಿ ಎಂಡಿ ಪದ್ಮನಾಭ.

    5. ನಾಗೇಂದ್ರ ಆಪ್ತರ ಅಕೌಂಟ್‌ಗೆ ಲಕ್ಷ ಲಕ್ಷ ಹಣ ಜಮೆಯಾಗಿದೆ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಸಮರ್ಪಕ ಉತ್ತರ ಕೊಡುವಲ್ಲಿ ನಾಗೇಂದ್ರ ವಿಫಲರಾಗಿದ್ದಾರೆ.

    6. ನಿಗಮದ 187 ಕೋಟಿ ರೂ. ಹಣವನ್ನು ಯೂನಿಯನ್ ಬ್ಯಾಂಕ್‌ನ ಎಂಜಿ ರೋಡ್ ಶಾಖೆಯಲ್ಲಿ ತೆರೆಯಲಾಗಿದ್ದ ಅಕೌಂಟ್ ವರ್ಗಾಯಿಸಲಾಯಿತು. ಅಲ್ಲಿಂದ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅನಧಿಕೃತ ಖಾತೆಗೆಗಳಿಗೆ ವರ್ಗಾಯಿಸಲಾಗಿದೆ. ನಕಲಿ ಕಂಪನಿಗಳ ಹೆಸರಲ್ಲಿ ಅಕೌಂಟ್ ತೆರೆಯಲಾಗಿತ್ತು. ಆ ನಕಲಿ ಅಕೌಂಟ್‌ಗಳಿಂದ ಹಣ ಡ್ರಾ ಮಾಡಿಕೊಳ್ಳಲಾಗಿದೆ.

    7. ಹೀಗೆ ನಗದು ರೂಪದಲ್ಲಿ ಪಡೆದ ಕೋಟ್ಯಂತರ ರೂ. ಹಣವನ್ನು ಬಳ್ಳಾರಿ ಲೋಕಸಭೆ ಚುನಾವಣೆ ಹಾಗೂ ವೈಯಕ್ತಿಕ ವೆಚ್ಚಗಳಿಗೆ ದುರ್ಬಳಿಕೆ ಮಾಡಿಕೊಳ್ಳಲಾಗಿದೆ ಎಂದು ED ದೋಷಾರೋಪ ಪಟ್ಟಿಯಲ್ಲಿ ಆರೋಪಿಸಿದೆ.

    ಬಳ್ಳಾರಿ ಲೋಕಸಭೆ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ:
    ಅಕ್ರಮವಾಗಿ ವರ್ಗಾಯಿಸಿಕೊಂಡ ಹಣದಲ್ಲಿ 15 ಕೋಟಿ ರೂ.ಗಳಷ್ಟು ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಗೆ ವ್ಯಯಿಸಲಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ಆರೋಪಿ ಸತ್ಯನಾರಾಯಣ ವರ್ಮಾ ಮೂರು ಕಂತುಗಳಲ್ಲಿ ಮಾಜಿ ಎಂಡಿ ಪದ್ಮನಾಭನಿಗೆ ಕೊಟ್ಟಿದ್ದಾನೆ.

    * ಮೊದಲ ಕಂತು: ಮಾರ್ಚ್ 7 – ಆನಂದರಾವ್ ಸರ್ಕಲ್ ಹೊಟೇಲ್ ವೊಂದರಲ್ಲಿ 90 ಲಕ್ಷ ರೂ. ಕ್ಯಾಶ್ ಹಸ್ತಾಂತರ
    * ಎರಡನೇ ಕಂತು: ಮಾರ್ಚ್ 7 – ನಾಗೇಂದ್ರ ರವಿ ನೆಕ್ಕಂಟಿಗೆ 1.2 ಕೋಟಿ ಕ್ಯಾಶ್ ಹಸ್ತಾಂತರ
    * ಮೂರನೇ ಕಂತು: ಉಳಿದ 5.25 ಕೋಟಿ ಯಶವಂತಪುರದ ಮಾಲ್ ವೊಂದರ ಬಳಿ ಮಾಜಿ ಎಂಡಿ ಪದ್ಮನಾಭನಿಗೆ ಹಸ್ತಾಂತರ ಆಗಿದೆ.

    ಸತ್ಯನಾರಾಯಣ ವರ್ಮಾ ಬಳಿಯಿಂದ 4.2 ಕೋಟಿ ಕ್ಯಾಶ್ ವೈಯಕ್ತಿಕ ಕಾರಣಗಳಿಗೆ ದುರ್ಬಳಕೆ ಮಾಡಿಕೊಳ್ಳಲಾಗಿದೆ. 4.2 ಕೋಟಿ ಹಣದಲ್ಲಿ 1.5 ಕೋಟಿ ರೂ.ಗಳಷ್ಟು ಸಾಲ ತೀರಿಸಿದ್ದಾನೆ. 1.2 ಕೋಟಿ ಕೊಟ್ಟು ಬೆಂಝ್ ಕಾರ್ ತೆಗೆದುಕೊಂಡಿದ್ದಾನೆ. ಉಳಿದ ಹಣ ರಿಯಲ್ ಎಸ್ಟೇಟ್‌ನಲ್ಲಿ ತೊಡಗಿಸಿದ್ದಾನೆ ಎಂಬ ಸತ್ಯ ಇಡಿ ಚಾರ್ಜ್‌ಶೀಟ್‌ನಲ್ಲಿ ಬಯಲಾಗಿದೆ.

    ಎಲೆಕ್ಷನ್‌ ಖರ್ಚಿಗೆ ಹವಾಲಾ ಗೇಮ್!
    ಆರೋಪಿ ನೆಕ್ಕಂಟಿ ನಾಗರಾಜ್ ಐ ಫೋನ್ ನಲ್ಲಿ 20 ರೂ. ನೋಟ್ ಫೋಟೋ ಪತ್ತೆಯಾಗಿದ್ದು, ಇದನ್ನು ಹವಾಲಾ ವ್ಯವಹಾರಕ್ಕೆ ಬಳಸಿದ್ದಾರೆ ಎಂದು ಇಡಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ತನ್ನ ಸಹೋದರ ನೆಕ್ಕಂಟಿ ರಮೇಶ್‌ಗೆ 20 ರೂ. ನೋಟ್ ಕೊಟ್ಟಿದ್ದ ನೆಕ್ಕಂಟಿ ನಾಗರಾಜ್‌, ಸತ್ಯನಾರಾಯಣ ವರ್ಮಾಗೆ ಈ ನೋಟ್ ಕೊಟ್ಟರೆ 1.5 ಕೋಟಿ ಕ್ಯಾಶ್ ಕೊಡುತ್ತಾನೆ ಅಂತ ಹೇಳಿದ್ದನಂತೆ. ಅದರಂತೆ ನೆಕ್ಕಂಟಿ ರಮೇಶ್ 20 ರೂ. ಕೊಟ್ಟು 1.5 ಕೋಟಿ ಕ್ಯಾಶ್ ಪಡೆದಿದ್ದ. 300 – 042317 ನಂಬರ್ ನ ನೋಟ್‌ನಲ್ಲಿ ಹವಾಲ ವಹಿವಾಟು ನಡೆಸಲಾಗಿತ್ತು. ಇದೇ ರೀತಿ ಬಹುಕೋಟಿ ಹಣವನ್ನ ಚುನಾವಣೆಗೆ ಬಳಕೆ ಮಾಡಲಾಗಿದೆ. ಇದೆಲ್ಲದರ ಅರಿವು ನಾಗೇಂದ್ರಗೆ ಇತ್ತು. ನಾಗೇಂದ್ರ ಸೂಚನೆ ಮೇರೆಗೆ ಇದೆಲ್ಲವೂ ನಡೆದಿತ್ತು ಎಂದು ನಡೆದಿತ್ತು ಎಂದು ಇಡಿ ಚಾರ್ಜ್‌ ಶೀಟ್‌ನಲ್ಲಿ ಉಲ್ಲೇಖಿಸಿದೆ.

    ಕಂತೆ ಕಂತೆ ಹಣದ ಫೋಟೋ
    ಇನ್ನೂ ನಾಗೇಂದ್ರ ಪಿಎ ವಿಜಯ್ ಕುಮಾರ್ ಗೌಡಗೆ ಎಲೆಕ್ಷನ್ ಹಣ ಹಂಚುವ ಹೊಣೆ ವಹಿಸಲಾಗಿತ್ತು ಅನ್ನೋದು ಇಡಿ ತನಿಖೆಯಲ್ಲಿ ಗೊತ್ತಾಗಿದೆ. ಈ ಬಗ್ಗೆ ವಿಜಯ್ ಕುಮಾರ್ ಗೌಡ ಕೂಡ ಇಡಿಗೆ ಹೇಳಿಕೆ ಕೊಟ್ಟಿದ್ದಾರೆ. ನಾಗೇಂದ್ರ ಸೂಚನೆ ಮೇರೆಗೆ ಪಕ್ಷದ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಹಂಚಿರುವುದಾಗಿ ಹೇಳಿಕೆ ನೀಡಿದ್ದಾರೆ. ಜಯಕುಮಾರ್ ಮೊಬೈಲ್ ಫೋನ್‌ನಲ್ಲಿ ಕಂತೆ ಕಂತೆ ಹಣದ ಫೋಟೋ ಸಹ ಪತ್ತೆಯಾಗಿದೆ. ಬಳ್ಳಾರಿ ಲೋಕಸಭೆ ವ್ಯಾಪ್ತಿಯ ಯಾವ ಯಾವ ಕ್ಷೇತ್ರಗಳಿಗೆ ಎಷ್ಟೆಷ್ಟು ಕೋಟಿ ಕೊಡಲಾಗಿದೆ ಎಂಬ ಪಟ್ಟಿಯೂ ಮೊಬೈಲ್ ನಲ್ಲಿ ಸಿಕ್ಕಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ತುಕಾರಾಂ ಪರ ಮತದಾರರಿಗೆ ಹಣ ಹಂಚಲಾಗಿದೆ ಎಂಬ ಗಂಭೀರ ಆರೋಪವನ್ನು ಇಡಿ ಮಾಡಿದೆ. ವಾಲ್ಮೀಕಿ ನಿಗಮದ ಹಣದಲ್ಲಿ ಮತದಾರರಿಗೆ ತಲಾ 200 ರೂ. ಹಂಚಲಾಗಿದೆ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ. ಅಷ್ಟೇ ಅಲ್ಲ…

    ಬಳ್ಳಾರಿ ಗ್ರಾಮಾಂತರಕ್ಕೆ 5,23,72,400 ರೂ.
    ಬಳ್ಳಾರಿ ನಗರಕ್ಕೆ – 3,75,00,000 ರೂ.
    ಕಂಪ್ಲಿ – 3,38,00,000 ರೂ.
    ಕೂಡ್ಲಿಗಿ – 3,16,00,000 ರೂ. ಸೇರಿ ಬಳ್ಳಾರಿ ಲೋಕಸಭೆ ಚುನಾವಣೆಗೆ ವಾಲ್ಮೀಕಿ ನಿಗಮಕ್ಕೆ ಸೇರಿದ ಸುಮಾರು 15 ಕೋಟಿ ಹಣವನ್ನು ಬಳಕೆ ಮಾಡಲಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಆರೋಪಿಸಿದೆ.

    ನಾಗೇಂದ್ರ ವೈಯಕ್ತಿಕ ಖರ್ಚಿಗೂ ವಾಲ್ಮೀಕಿ ನಿಮಗದ ಹಣ?
    ವಾಲ್ಮೀಕಿ ನಿಗಮದ ಹಣದಲ್ಲಿ ನಾಗೇಂದ್ರ ವೈಯಕ್ತಿಕ ವೆಚ್ಚಕ್ಕೆ 16 ಲಕ್ಷ ಹಣ ಬಳಕೆ ಮಾಡಿದ್ದಾರೆ. ಫ್ಲೈಟ್ ಟಿಕೆಟ್ ಬುಕ್ಕಿಂಗ್, ಕಾರ್ ಮೇಂಟೇನೆನ್ಸ್, ವಿದ್ಯುತ್ ಬಿಲ್, ನಾಗೇಂದ್ರ ಮನೆ ನಿರ್ವಹಣೆ ಹಾಗೂ ಮನೆಗೆಲಸದ ಸಿಬ್ಬಂದಿ ಸಂಬಳಕ್ಕೆ ಉಪಯೋಗಿಸಲಾಗಿದೆ ಎಂದು ಆರೋಪಿಸಲಾಗಿದೆ.

  • ಇಡಿ ಅಕೌಂಟ್ಸ್‌ ಮಾಹಿತಿ ಕೇಳಿದೆ, ನಾನು ಯಾವುದನ್ನೂ ಮುಚ್ಚಿಟ್ಟಿಲ್ಲ: ಪರಮೇಶ್ವರ್‌

    ಇಡಿ ಅಕೌಂಟ್ಸ್‌ ಮಾಹಿತಿ ಕೇಳಿದೆ, ನಾನು ಯಾವುದನ್ನೂ ಮುಚ್ಚಿಟ್ಟಿಲ್ಲ: ಪರಮೇಶ್ವರ್‌

    ಬೆಂಗಳೂರು: ನಮ್ಮ ಕಾಲೇಜಿಗೆ ಬಂದು ಅಕೌಂಟ್ಸ್‌ ಮಾಹಿತಿ ಕೇಳಿದ್ದಾರೆ. ಆ ಮಾಹಿತಿಯನ್ನು ನಾವು ನೀಡಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್‌ (Parameshwar) ಹೇಳಿದ್ದಾರೆ.

    ಜಾರಿ ನಿರ್ದೇಶನಾಲಯದ ದಾಳಿಯ (ED) ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇಡಿ ಅಧಿಕಾರಿಗಳು ಯಾವುದೇ ಮಾಹಿತಿ ಕೇಳಿದರೂ ನೀಡಿ ಎಂದು ನಮ್ಮ ಸಿಬ್ಬಂದಿಗೆ ತಿಳಿಸಿದ್ದೇನೆ ಎಂದರು. ಇದನ್ನೂ ಓದಿ: ಪರಂಗೆ ಇಡಿ ಈಟಿ – 140 ಕೋಟಿ ವ್ಯವಹಾರ ನಡೆದ್ರೂ 95 ಕೋಟಿಗೆ ಖರೀದಿ?

     

    ನಿನ್ನೆ ಇಡಿ ದೆಹಲಿಯ ಅಧಿಕಾರಿಗಳು ನಮ್ಮ ಮೂರು ಕಾಲೇಜುಗಳಿಗೆ ಭೇಟಿ ಕೊಟ್ಟಿದ್ದಾರೆ. ಅವರಿಗೆ ಏನು ಸೂಚನೆ ಬಂದಿದೆಯೋ ಗೊತ್ತಿಲ್ಲ. ಅವರು ಕೇಳಿದ ದಾಖಲೆಗಳನ್ನು ನಾವು ಕೊಡುತ್ತೇವೆ ಎಂದು ತಿಳಿಸಿದರು.  ಇದನ್ನೂ ಓದಿ: ಎಡಿಜಿಪಿ ಅಲೋಕ್‌ ಕುಮಾರ್‌ಗೆ ಮುಂಬಡ್ತಿ ನೀಡದೇ 6 ವರ್ಷದ ಹಳೆ ಕೇಸ್‌ ಕೆದಕಿದ ಸರ್ಕಾರ

    ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ. ಅವರಿಗೆ ಸಹಕಾರ ನೀಡುತ್ತೇನೆ. ನಾನು ಯಾವುದನ್ನು ಮುಚ್ಚಿಟ್ಟಿಲ್ಲ. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ನಾನು ಕಾನೂನಿಗೆ ಗೌರವ ಕೊಡುತ್ತೇನೆ. ಇಡಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ಕೊಡುತ್ತೇನೆ ಎಂದು ಹೇಳಿದರು.

  • MUDA Case | ಸಿಎಂ ಸೇಫ್, ಸೈಟ್ ಮಾಡಿಕೊಟ್ಟ ಅಧಿಕಾರಿಗಳು ಲಾಕ್ – ಇನ್ವೆಸ್ಟಿಗೇಷನ್ ಚಾಪ್ಟರ್-2

    MUDA Case | ಸಿಎಂ ಸೇಫ್, ಸೈಟ್ ಮಾಡಿಕೊಟ್ಟ ಅಧಿಕಾರಿಗಳು ಲಾಕ್ – ಇನ್ವೆಸ್ಟಿಗೇಷನ್ ಚಾಪ್ಟರ್-2

    ಬೆಂಗಳೂರು: ಮುಡಾ ಹಗರಣ‌ (MUDA Scam) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಕುಟುಂಬ ಪಾರಾಗಿದ್ದಾರೆ. ಆದ್ರೆ, ಕಾನೂನಿನ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳು ಈಗ ಸಂಕಷ್ಟ ಎದುರಿಸಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ.

    ಹೌದು. 2003-04 ರಿಂದಲೂ ಕೂಡ ಮುಡಾದ ಅಧಿಕಾರಿಗಳು, ಮುಡಾದ ಆಡಳಿತ ಅಧಿಕಾರಿಗಳು ಕಾನೂನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಲೋಕಾಯುಕ್ತ (Lokayukta) ತೀರ್ಮಾನಕ್ಕೆ ಬಂದಿದೆ. 2016 ರಿಂದ 2024ರ ವರೆಗೂ ಮುಡಾದಲ್ಲಿ ಆಯುಕ್ತರಾಗಿದ್ದ ಅಧಿಕಾರಿಗಳು 1,098 ಸೈಟ್‌ಗಳು ದುರ್ಬಳಕೆ ಆಗಿದೆ ಎಂದು ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ – ಮೈಸೂರು KSRTC ಸೂಚನೆ

    ಲೋಕಾಯುಕ್ತ ಬಿಟ್ಟರೂ ಇಡಿ ಬಿಡಲ್ಲ
    ಸಿಎಂ ವಿರುದ್ಧದ ಮುಡಾ ಹಗರಣ ಪ್ರಕರಣಕ್ಕೆ ಲೋಕಾಯುಕ್ತ ತನಿಖೆ ನಿರಾಳ ನೀಡಿದೆ. ನಾಲ್ಕು ತಿಂಗಳ ಕಾಲ‌ ಸುಧೀರ್ಘವಾದ ತನಿಖೆ ನಡೆಸಿದ ನ್ಯಾಯಾಲಯ ಈಗ ಸಿಎಂ ಮತ್ತು ಕುಟುಂಬದ ವಿರುದ್ಧದ ಆರೋಪಿಗಳಿಗೆ ಸಾಕ್ಷ್ಯಾಧಾರಗಳು ಇಲ್ಲ ಅಂತ ಅಂತಿಮ ವರದಿ ಸಲ್ಲಿಕೆ ಮಾಡಿದೆ. ಇದನ್ನೂ ಓದಿ: ದೃಶ್ಯಂ 3 ಸಿನಿಮಾ ಕನ್ಫರ್ಮ್​ – ಕ್ಲೈಮ್ಯಾಕ್ಸ್‌ ಬಗ್ಗೆ ಹೆಚ್ಚಾಯ್ತು ಕುತೂಹಲ

    ಈ ಮೂಲಕ ಸಿಎಂ ಕುಟುಂಬ ನಿರಾಳ ಆಗಿಲ್ಲ, ಇನ್ನೂ ಕೂಡ ಇಡಿ ಕಂಟಕ ಎದುರಿಸಬೇಕಾದ ಅನಿವಾರ್ಯತೆ ಇದೆ. ಕಾನೂನಿನಲ್ಲಿ ಇಡಿ ತನಿಖಾ ಸಂಸ್ಥೆಗೆ ಲೋಕಾಯುಕ್ತ ಸಲ್ಲಿಕೆ ಮಾಡಿರುವ ಬಿ ರಿಪೋರ್ಟ್ ಅನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುವ ಅಧಿಕಾರ ಹೊಂದಿದೆ. ಇದನ್ನೇ ದಾಳ ಮಾಡಿಕೊಂಡಿರೋ ಇಡಿ ದೂರುದಾರ ಸ್ನೇಹಮಯಿ ಕೃಷ್ಣ ಪ್ರೊಟೆಸ್ಟ್ ಅಪ್ಲಿಕೇಷನ್ ಅಂದ್ರೆ ಬಿ ರಿಪೋರ್ಟ್ ಸ್ವೀಕೃತಿ ಮಾಡಬಾರದು ಅಂತ ಅರ್ಜಿ ಹಾಕಿದ್ರೆ, ಇಡಿ ಕೂಡ ಪ್ರತ್ಯೇಕವಾದ ಅರ್ಜಿ ಹಾಕಲು ತಯಾರಿ ನಡೆಸಿದೆ.

    ಜೊತೆಗೆ ಬಿ ರಿಪೋರ್ಟ್ ಸಲ್ಲಿಕೆ ಇಂದ ನಮ್ಮ ತನಿಖೆಗೆ ಯಾವುದೇ ತೊಂದರೆ ಇಲ್ಲ ಅಂತ ತನಿಖೆ ಮುಂದುವರೆಸಿದ್ದು, ಅತೀ ದೊಡ್ಡ ಸಂಕಷ್ಟ ಸಿಎಂ ಮತ್ತು ಕುಟುಂಬ ಎದುರಿಸುತ್ತಾ ಬೇಕಾಗಿದೆ. ಇದನ್ನೂ ಓದಿ: ಮಾನವೀಯತೆ ಮರೆತ ಶೇಷಾದ್ರಿಪುರಂ ಪೊಲೀಸರು – ತಡರಾತ್ರಿವರೆಗೆ ಠಾಣೆಯಲ್ಲಿ ಗರ್ಭಿಣಿ ಪರದಾಟ

  • MUDA ಅಕ್ರಮದಲ್ಲಿ ʼಕೋಕನಟ್‌ʼ ಡೀಲ್‌ – 50, 100 ಕೋಕನಟ್‌ ಕಳುಹಿಸಿ ಸಿಕ್ಕಿಬಿದ್ದ ಬಿಲ್ಡರ್‌

    MUDA ಅಕ್ರಮದಲ್ಲಿ ʼಕೋಕನಟ್‌ʼ ಡೀಲ್‌ – 50, 100 ಕೋಕನಟ್‌ ಕಳುಹಿಸಿ ಸಿಕ್ಕಿಬಿದ್ದ ಬಿಲ್ಡರ್‌

    ಮೈಸೂರು: ಜಾರಿ ನಿರ್ದೇಶನಾಲಯ (ED) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಅಕ್ರಮಕ್ಕೆ ಸಂಬಂಧಿಸಿದಂತೆ 300 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿದ ಬೆನ್ನಲ್ಲೇ ʼಕೋಕನಟ್ʼ ಕೋಡ್‌ವರ್ಡ್‌ ಬಳಸಿ ಅಕ್ರಮ ವ್ಯವಹಾರಗಳನ್ನು ನಡೆಸುತ್ತಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

    ಹೌದು. ಇಡಿ ಅಧಿಕಾರಿಗಳು ಬಿಲ್ಡರ್‌ ಜಯರಾಮ್ (Jayaram) ಮನೆ ಮೇಲೆ ದಾಳಿ ನಡೆಸಿದ್ದರು. ಸತತ ಮೂರು ದಿನ ಇಡಿ ಅಧಿಕಾರಿಗಳು ದಾಳಿ ನಡೆಸಿದಾಗ ಈತನ ಮನೆಯಲ್ಲಿ ಏನಿತ್ತು ಎನ್ನುವ ಅನುಮಾನ ಎಲ್ಲರನ್ನು ಕಾಡುತ್ತಿತ್ತು. ಆದರೆ ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಮುಡಾ ಅಕ್ರಮದ ಕಿಂಗ್‌ಪಿನ್‌ ಜಯರಾಮ್‌ ಆಗಿದ್ದಾನೆ ಎನ್ನಲಾಗುತ್ತಿದೆ.

    ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಬೇನಾಮಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಯರಾಮ್ ಮನೆ ಹಾಗೂ ಕಚೇರಿಯಲ್ಲಿ ಇಡಿ ಅಧಿಕಾರಿಗಳು ನಿರಂತರ 70 ಗಂಟೆಗಳ ಕಾಲ ರೇಡ್‌ ಮಾಡಿದ್ದರು. ಜಯರಾಮ್ ಮನೆಯಲ್ಲೆ ಬಹುತೇಕ ಬೇನಾಮಿ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು ಸಿಕ್ಕಿದೆ. ಈ ಜಯರಾಮ್ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘ ಸ್ಥಾಪನೆ ಮಾಡಿದ್ದ. ಈ ಸಂಘದಲ್ಲಿ ಮುಡಾ ಮಾಜಿ ಆಯುಕ್ತ ದಿನೇಶ್ ಕುಟುಂಬಸ್ಥರು ನಿರ್ದೇಶಕರಾಗಿದ್ದರು. ಬಹುತೇಕ ಬೇನಾಮಿ ವ್ಯವಹಾರಗಳನ್ನು ಈ ಸಹಕಾರ ಸಂಘದ ಹೆಸರಿನಲ್ಲಿ ಮಾಡಲಾಗಿದೆ.  ಇದನ್ನೂ ಓದಿ: MUDA Scam | ಅಕ್ರಮವಾಗಿ ಮಾರಾಟ, ಸಹಕಾರಿ ಸಂಘ ಬಳಸಿ ದುರ್ಬಳಕೆ, 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?

    ಜಯರಾಮ್‌ ಮನೆಯಲ್ಲಿ ದಾಖಲೆಗಳನ್ನು ಶೋಧಿಸುತ್ತಿದ್ದ ಇಡಿಗೆ ವಾಟ್ಸಪ್‌ ಚಾಟ್‌ ಪರಿಶೀಲಿಸಿದ್ದಾರೆ. ಈ ವೇಳೆ 1 ಕೋಕನಟ್‌ ಕಳುಹಿಸಿದ್ದೇನೆ. 50 ಕೋಕನಟ್‌ ಕಳುಹಿಸಿದ್ದ ಮೆಸೇಜ್‌ಗಳು ಅಧಿಕಾರಿಗಳ ಗಮನ ಸೆಳೆದಿದೆ. ರಿಯಲ್‌ ಎಸ್ಟೇಟ್‌ ಕೆಲಸ ಮಾಡುವ ಈತ ಕೋಕನಟ್‌ ಯಾಕೆ ಕಳುಹಿಸುತ್ತಾನೆ ಎಂದು ಅನುಮಾನ ಬಂದು ಜಯರಾಮ್‌ನನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದಾಗ ಕೋಕನಟ್‌ ಸತ್ಯ ಪ್ರಕಟವಾಗಿದೆ.

    ಮುಡಾ ಹಣಕಾಸಿನ ಅಕ್ರಮಕ್ಕೆ ಕೋಕನಟ್‌ ಎಂಬ ಕೋಡ್‌ವರ್ಡ್‌ (Coconut Codeword) ಇಡಲಾಗಿತ್ತು. 1 ಕೋಕನಟ್‌ ಅಂದರೆ 1 ಲಕ್ಷ ರೂ., 50 ಕೋಕನಟ್‌ ಅಂದರೆ 50 ಲಕ್ಷ ರೂ., 100 ಕೋಕನಟ್‌ ಅಂದರೆ 1 ಕೋಟಿ ರೂ. ಕಳುಹಿಸಲಾಗಿದೆ ಎಂದು ಜಯರಾಮ್‌ ಮೆಸೇಜ್‌ ಮಾಡುತ್ತಿದ್ದ.

    ಜಯರಾಮ್‌ ತನ್ನ ಡೈರಿಯಲ್ಲಿ ಮುಡಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಹಲವಾರು ವಿಚಾರಗಳನ್ನು ಬರೆದುಕೊಂಡಿದ್ದ. ಇಡಿಯ ಪ್ರಾಥಮಿಕ ವಿಚಾರಣೆಯಲ್ಲೇ ಹಲವರ ಹೆಸರನ್ನು ಜಯರಾಮ್ ಬಾಯಿಬಿಟ್ಟಿದ್ದಾನೆ. ಜಯರಾಮ್‌ ಮನೆ ಮೇಲೆ ದಾಳಿ ಆಗುತ್ತಿದ್ದಂತೆ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್‌ (Dinesh Kumar) ಪರಾರಿಯಾಗಿದ್ದರು.

    ಹಲವು ಅಧಿಕಾರಿಗಳಿಗೆ ರಾಜಕಾರಣಿಗಳಿಗೆ ಕೋಕನಟ್ ಹೆಸರಿನಲ್ಲಿ ಜಯರಾಮ್ ಹಣ ಕಳುಹಿಸಿದ್ದ. 15 ವರ್ಷದ ಹಿಂದೆ ಗಾರೆ ಕೆಲಸಕ್ಕೆ ಬಂದಿದ್ದ ಜಯರಾಮ್ ಬೇನಾಮಿಯಿಂದಲೇ ಕೋಟ್ಯಾಧೀಶ್ವರನಾಗಿದ್ದಾನೆ ಎನ್ನಲಾಗುತ್ತಿದೆ. ದಿನೇಶ್ ಕುಮಾರ್ ಗೆ ಬಹಳ ಪರಮಾಪ್ತನಾಗಿದ್ದ ಜಯರಾಮ್ 50-50 ಅನುಪಾತದ ಸೈಟ್‌ ಹಂಚಿಕೆಯಲ್ಲಿ ನಂ 1 ಫಲಾನುಭವಿಯಾಗಿದ್ದಾನೆ. ಕೇವಲ 50-50 ಸೈಟ್‌ನಿಂದ ಮಾತ್ರವಲ್ಲದೇ ಬೇನಾಮಿ ಹಣದಿಂದಲೂ ಜಯರಾಮ್ ಈಗ ಶ್ರೀಮಂತನಾಗಿದ್ದಾನೆ.