ರಾಂಚಿ: ಭದ್ರತಾ ಪಡೆ ಹಾಗೂ ಮಾವೋವಾದಿಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ಮಾವೋವಾದಿಯನ್ನು ಭದ್ರತಾ ಪಡೆಗಳು (Security Forces) ಹತ್ಯೆಗೈದಿದ್ದಾರೆ.
ಜಾರ್ಖಂಡ್‌ನ (Jharkhand) ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗೋಯಿಲ್‌ಕೇರಾ ಪೊಲೀಸ್ ಠಾಣಾ (Goilkera Police Station) ವ್ಯಾಪ್ತಿಯಲ್ಲಿ ಬರುವ ಬುರ್ಜುವಾ ಬೆಟ್ಟದಲ್ಲಿ ಭಾನುವಾರ (ಸೆ.7) ಬೆಳಗ್ಗೆ ಎನ್‌ಕೌಂಟರ್ ನಡೆದಿದೆ.
ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಎನ್‌ಕೌಂಟರ್ ಬಳಿಕ ನಡೆದ ಶೋಧ ಕಾರ್ಯಾಚರಣೆಯಲ್ಲಿ ಶವವೊಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಸಿಪಿಐನ (ಮಾವೋವಾದಿ) ಸ್ವಯಂ ಘೋಷಿತ ವಲಯ ಕಮಾಂಡರ್ ಅಮಿತ್ ಹನ್ಸ್ದಾ ಅಲಿಯಾಸ್ ಆಪ್ತಾನ್ ಎಂದು ಗುರುತಿಸಲಾಗಿದೆ. ಈ ಮೊದಲು ಈ ವ್ಯಕ್ತಿಯನ್ನು ಪತ್ತೆಹಚ್ಚಿದರೆ 10 ಲಕ್ಷ ರೂ. ನೀಡುವುದಾಗಿ ಘೋಷಿಸಲಾಗಿತ್ತು. ಸದ್ಯ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಗೋಯಿಲ್‌ಕೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶವೊಂದಕ್ಕೆ ಮಾವೋವಾದಿಗಳು ಬರುವ ಬಗ್ಗೆ ಚೈಬಾಸಾ ಪೊಲೀಸ್ ವರಿಷ್ಠಾಧಿಕಾರಿಗೆ ಸುಳಿವು ಸಿಕ್ಕಿತ್ತು. ಅವರ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಭಾನುವಾರ (ಸೆ.7) ಬೆಳಗ್ಗೆ 6 ಗಂಟೆ ಸುಮಾರಿಗೆ ಸ್ಥಳಕ್ಕೆ ತೆರಳಿದಾಗ ಗುಂಡಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಮಾವೋವಾದಿಗಳು ದಟ್ಟಾರಣ್ಯದೊಳಗೆ ಪರಾರಿಯಾಗಿದ್ದು, ಶೋಧ ಕಾರ್ಯಾಚರಣೆ ವೇಳೆ ಓರ್ವನ ಮೃತದೇಹ ಪತ್ತೆಯಾಗಿದೆ ಎಂದಿದ್ದಾರೆ.
ನವದೆಹಲಿ: ಜಾರ್ಖಂಡ್‌ನ (Jharkhand) ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ (Shibu Soren) ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ.
ಶಿಬು ಸೊರೇನ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ತೆರಳಿದ ಮೋದಿ, ಶಿಬು ಸೊರೇನ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಅಲ್ಲದೇ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತಾಪ ಸೂಚಿಸಿದರು. ಇದನ್ನೂ ಓದಿ: ಬಿಬಿಎಂಪಿ ಚುನಾವಣೆ; ನವೆಂಬರ್ 3ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ
Went to Sir Ganga Ram Hospital to pay homage to Shri Shibu Soren Ji. Also met his family. My thoughts are with Hemant Ji, Kalpana Ji and the admirers of Shri Shibu Soren Ji.@HemantSorenJMM@JMMKalpanaSorenpic.twitter.com/nUG9w56Umc
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮೋದಿ, ಶಿಬು ಸೊರೇನ್ ಅವರು ಸಾರ್ವಜನಿಕ ಜೀವನದ ಶ್ರೇಣಿಯಲ್ಲಿ ಏರಿದ ತಳಮಟ್ಟದ ನಾಯಕರಾಗಿದ್ದರು. ಬುಡಕಟ್ಟು ಸಮುದಾಯಗಳು, ಬಡವರು ಮತ್ತು ದೀನದಲಿತರನ್ನು ಸಬಲೀಕರಣಗೊಳಿಸುವ ಬಗ್ಗೆ ಅವರು ವಿಶೇಷವಾಗಿ ಉತ್ಸುಕರಾಗಿದ್ದರು. ಅಲ್ಲದೇ ತಮ್ಮ ಇಡೀ ಜೀವನವನ್ನು ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದರು. ಅದಕ್ಕಾಗಿ ಅವರನ್ನು ಯಾವಾಗಲೂ ಸ್ಮರಿಸಲಾಗುವುದು. ಅವರ ನಿಧನದಿಂದ ದುಃಖಿತನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಆ.5ರಂದು ಸಾರಿಗೆ ನೌಕರರ ಮುಷ್ಕರ; 40% ಖಾಸಗಿ ಬಸ್ ರಸ್ತೆಗಿಳಿಸಲು ಸರ್ಕಾರ ನಿರ್ಧಾರ
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ ಸ್ಥಾಪಕರಲ್ಲಿ ಒಬ್ಬರಾದ ಶಿಬು ಸೊರೇನ್ ಅವರು 81ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಇತ್ತೀಚೆಗೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು ಎಂದು ತಿಳಿದುಬಂದಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಿಕೆ: ಡಿಕೆಶಿ
ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಸ್ಥಾಪಕರಲ್ಲಿ ಒಬ್ಬರಾದ ಶಿಬು ಸೊರೇನ್ (Shibu Soren) ಅವರು 81ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ.
ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ (Ganga Ram Hospital) ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಇತ್ತೀಚೆಗೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಉತ್ತರ ಪ್ರದೇಶದ 17 ಜಿಲ್ಲೆಗಳಲ್ಲಿ ಪ್ರವಾಹ – 12 ಮಂದಿ ಸಾವು, ಪ್ರಯಾಗ್‌ರಾಜ್ ಬಹುತೇಕ ಮುಳುಗಡೆ
ಜಾರ್ಖಂಡ್ ಮುಕ್ತಿ ಮೋರ್ಚಾದ ಮುಖಂಡರಾದ ಶಿಬು ಸೊರೇನ್ ಅವರು ಕಳೆದ 38 ವರ್ಷಗಳಿಂದ ಪಕ್ಷದ ಚುಕ್ಕಾಣಿ ಹಿಡಿದಿದ್ದರು. 4 ದಶಕಗಳ ಕಾಲ ರಾಜಕೀಯ ಜೀವನದಲ್ಲಿ ಶಿಬು ಸೊರೇನ್ ತಮ್ಮದೇ ಛಾಪು ಮೂಡಿಸಿದ್ದಾರೆ. 8 ಬಾರಿ ಲೋಕಸಭೆಗೆ, ಎರಡು ಅವಧಿಗೆ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದರು. ಇದನ್ನೂ ಓದಿ: ಕೆಲವರು ಅಧಿಕಾರ ಹಂಚಿಕೊಳ್ಳಲು ಒಪ್ಪಲ್ಲ – ಸಿದ್ದರಾಮಯ್ಯಗೆ ಟಾಂಗ್ ಕೊಟ್ರಾ ಡಿಕೆಶಿ?
ರಾಂಚಿ: ಕಾಡಾನೆಯೊಂದು (Elephant) ರೈಲ್ವೆ ಹಳಿಗಳ ಮೇಲೆ ಮರಿಗೆ ಜನ್ಮ ನೀಡಿದ ಪರಿಣಾಮ ಜಾರ್ಖಂಡ್‌ನಲ್ಲಿ (Jarkhand) ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸಿದ ಅಪರೂಪದ ಘಟನೆ ನಡೆದಿದೆ.
ಆನೆ ಮತ್ತು ಅದರ ಮರಿ ಸುರಕ್ಷಿತವಾಗಿವೆ. ಈ ಅಪರೂಪದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಈ ವೀಡಿಯೊವನ್ನು X ನಲ್ಲಿ ಹಂಚಿಕೊಂಡಿದ್ದು, ಇದು ಕರುಣೆಗೆ ಉದಾಹರಣೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಕಳ್ಳ ಸಂಬಂಧ ಆರೋಪ – ಯುವಕನನ್ನ ಥಳಿಸಿ ಚಿಕ್ಕಮ್ಮನೊಂದಿಗೆ ಮದುವೆ ಮಾಡಿಸಿದ ಗ್ಯಾಂಗ್
Beyond the news of human-animal conflicts, happy to share this example of human-animal harmonious existence.
A train in Jharkhand waited for two hours as an elephant delivered her calf. The 📹 shows how the two later walked on happily.
ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC), ರೈಲ್ವೆ ಸಚಿವಾಲಯದ ಸಮನ್ವಯದೊಂದಿಗೆ ಭಾರತದಾದ್ಯಂತ 3,500 ಕಿಮೀ ರೈಲ್ವೆ ಹಳಿಗಳನ್ನು ಸಮೀಕ್ಷೆ ಮಾಡಿದ ನಂತರ 110 ಕ್ಕೂ ಹೆಚ್ಚು ಸೂಕ್ಷ್ಮ ವನ್ಯಜೀವಿ ವಲಯಗಳನ್ನು ಗುರುತಿಸಿದೆ ಎಂದು ಯಾದವ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಈ ಉಪಕ್ರಮವು ಪ್ರಾಣಿಗಳಿಗೆ ಸಂಬಂಧಿಸಿದ ಅಪಘಾತಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ. ವಿಶೇಷವಾಗಿ ಹಳಿಗಳು ಹೆಚ್ಚಾಗಿ ವನ್ಯಜೀವಿ ಕಾರಿಡಾರ್‌ಗಳೊಂದಿಗೆ ಛೇದಿಸುವ ಅರಣ್ಯ ಪ್ರದೇಶಗಳಲ್ಲಿವೆ.
ರಾಂಚಿ: ಜಾರ್ಖಂಡ್‌ನ (Jarkhand Maoist Encounter) ಲತೇಹಾರ್ ಜಿಲ್ಲೆಯಲ್ಲಿ ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿ ಇಬ್ಬರು ಪ್ರಮುಖ ನಕ್ಸಲ್ ನಾಯಕರ ಎನ್‌ಕೌಂಟರ್ ಆಗಿದೆ.
ಶನಿವಾರ ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಕಾರ್ಯಚರಣೆಯಲ್ಲಿ ನಕ್ಸಲ್ ದಂಗೆಕೋರ ಸಂಘಟನೆ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ)ನ ಇಬ್ಬರು ಕಾರ್ಯಕರ್ತರು ಹತರಾಗಿದ್ದಾರೆ. ಮೃತರಲ್ಲಿ ಪಪ್ಪು ಲೋಹ್ರಾನ ತಲೆಗೆ 10 ಲಕ್ಷ ರೂ. ಹಾಗೂ ಪ್ರಭಾತ್ ಗಂಜು ತಲೆಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಇದನ್ನೂ ಓದಿ: ಭಾರತದಲ್ಲಿ ಐಫೋನ್ ತಯಾರಿಸಿದರೆ 25% ಸುಂಕ – ಆಪಲ್‌ಗೆ ಟ್ರಂಪ್ ವಾರ್ನಿಂಗ್
ಈ ಪ್ರದೇಶದಲ್ಲಿ ಶಸ್ತ್ರಸಜ್ಜಿತ ನಕ್ಸಲರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಇತ್ತು. ಮಾಹಿತಿ ಆಧಾರದ ಮೇಲೆ ಜಂಟಿ ಭದ್ರತಾ ಪಡೆಗಳು ಈ ಕಾರ್ಯಾಚರಣೆಯನ್ನು ನಡೆಸಿದ್ದವು. ಭೀಕರ ಗುಂಡಿನ ಚಕಮಕಿಯ ಸಮಯದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಮತ್ತೊರ್ವ ಜೆಜೆಎಂಪಿ ನಕ್ಸಲನನ್ನು ಜೀವಂತವಾಗಿ ಸೆರೆಹಿಡಿಯಲಾಗಿದೆ.
ರಾಂಚಿ: ಕೇಂದ್ರ ಪಡೆಗಳು ನಕ್ಸಲರ ವಿರುದ್ಧ ನಡೆಸಿದ ದಾಳಿಯಲ್ಲಿ ಭಾರಿ ಪ್ರಗತಿ ಸಾಧಿಸಿದ್ದು, ಜಾರ್ಖಂಡ್‌ನ (Jharkhand) ಬೊಕಾರೊದಲ್ಲಿ (Bokaro) ತಲೆಗೆ 1 ಕೋಟಿ ರೂ. ಬಹುಮಾನ ಘೋಷಿಸಿದ್ದ ನಕ್ಸಲ್ ನಾಯಕ ಸೇರಿ 8 ಮಂದಿ ನಕ್ಸಲರನ್ನು ಸದೆಬಡಿಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕನ ಪತ್ತೆಗೆ ಸರ್ಕಾರವು 1 ಕೋಟಿ ರೂ. ಬಹುಮಾನ ಫೋಷಿಸಿತ್ತು. ಇದೀಗ ಕೇಂದ್ರ ಮೀಸಲು ಪೊಲೀಸ್ ಪಡೆ ಆತನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಚರಣೆ ವೇಳೆ 2 ಐಎನ್‌ಎಸ್‌ಎಎಸ್ ರೈಫಲ್‌ಗಳು, 1 ಸೆಲ್ಫ್ ಲೋಡಿಂಗ್ ರೈಫಲ್ ಮತ್ತು 1 ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಲವ್ವರ್ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಹಸೆಮಣೆ ಏರಬೇಕಿದ್ದ ಶಿಕ್ಷಕಿ ಆತ್ಮಹತ್ಯೆ
ಏಪ್ರಿಲ್ ಆರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಹಿಂಸೆಯಿಂದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಹೇಳಿ ನಕ್ಸಲರಿಗೆ ಶಸ್ತ್ರಾಸ್ತ್ರ ತ್ಯಜಿಸುವಂತೆ ಕರೆ ನೀಡಿದ್ದರು. ಛತ್ತೀಸ್‌ಗಢದಲ್ಲಿ ನಕ್ಸಲ್ ಮುಕ್ತ ಎಂದು ಘೋಷಿಸಲಾದ ಎಲ್ಲಾ ಗ್ರಾಮಗಳಿಗೆ ಅಭಿವೃದ್ಧಿ ನಿಧಿಯಾಗಿ 1 ಕೋಟಿ ರೂ.ಗಳನ್ನು ಘೋಷಿಸಿದ ಅವರು, ಶರಣಾದ ನಕ್ಸಲರು ಸರ್ಕಾರದ ಸಹಾಯದಿಂದ ಸುರಕ್ಷಿತ ಮತ್ತು ಗೌರವಾನ್ವಿತ ಜೀವನವನ್ನು ನಡೆಸುತ್ತಾರೆ ಎಂದು ಭರವಸೆ ನೀಡಿದರು.
ಡಿಕ್ಕಿ ಬಳಿಕ ಹೊತ್ತಿ ಉರಿದ ಇಂಜಿನ್ – ಮೂವರು ಸಿಬ್ಬಂದಿಗೆ ಗಾಯ
ರಾಂಚಿ: ಜಾರ್ಖಂಡ್‌ನ (Jharkhand) ಸಾಹಿಬ್‌ಗಂಜ್‌ನಲ್ಲಿ ಎರಡು ಗೂಡ್ಸ್ ರೈಲುಗಳ (Train) ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಲೋಕೋ ಪೈಲಟ್ (Loco Pilot) ಸೇರಿದಂತೆ ಮೂವರು ಸಿಬ್ಬಂದಿ ಸಾವಿಗೀಡಾಗಿದ್ದಾರೆ.
ರಾಂಜಿ: ಜಾರ್ಖಂಡ್‌ನ (Jharkhand) ಗರ್ವಾದಲ್ಲಿನ (Garhwa) ಪಟಾಕಿ ಅಂಗಡಿಯಲ್ಲಿ ಸೋಮವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಮಕ್ಕಳು ಸೇರಿ ಐವರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ರಂಕಾ ಎಸ್‌ಡಿಪಿಒ ರೋಹಿತ್ ರಂಜನ್ ಸಿಂಗ್ ಮಾತನಾಡಿ, ಮಧ್ಯಾಹ್ನ 12.30ರ ಸುಮಾರಿಗೆ ಅಂಗಡಿಯಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಐವರು ಮೃತಪಟ್ಟಿದ್ದಾರೆ. ಕೂಡಲೇ ಗಾಯಾಳುಗಳನ್ನು ಛತ್ತೀಸ್‌ಗಢದ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸತತ 3 ಸಿನಿಮಾ, 500 ಕೋಟಿ ಕಲೆಕ್ಷನ್: ಯಾರು ಮಾಡಿರದ ಸಾಧನೆ ಮಾಡಿದ ರಶ್ಮಿಕಾ ಮಂದಣ್ಣ
ಮುಖ್ಯಮಂತ್ರಿ ಹೇಮಂತ್ ಸೊರೆನ್ ಘಟನೆಯ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ. ಗರ್ವಾ ಜಿಲ್ಲೆಯ ರಾಂಕಾ ಬ್ಲಾಕ್‌ನಲ್ಲಿರುವ ಪಟಾಕಿ ಅಂಗಡಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಐದು ಜನರು ಸಾವನ್ನಪ್ಪಿದ ದುಃಖಕರ ಸುದ್ದಿ ತಲುಪಿದೆ. `ಮರಾಂಗ್ ಬುರು’ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಸ್ಟಾರ್ ಹೋಟೆಲ್ ಮಾಲೀಕನ ಮೊಮ್ಮಗ ಅರೆಸ್ಟ್
ಮಂಡ್ಯ: 3 ದಿನಗಳ ಹಿಂದೆ ಪ್ರೀತಿಸಿದ ಹುಡುಗಿಯೊಂದಿಗೆ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ (Mandya) ಜಿಲ್ಲೆಯ ಕೆ.ಆರ್.ಪೇಟೆ (K R Pete) ಪಟ್ಟಣದಲ್ಲಿ ನಡೆದಿದೆ.
ಕೆ.ಆರ್.ಪೇಟೆ ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರ ಶಶಾಂಕ್(28) ಮೃತ ದುರ್ದೈವಿ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಐಟಿ ಉದ್ಯೋಗಿ ಆಗಿದ್ದ ಶಶಾಂಕ್. ಜಾರ್ಖಂಡ್ (Jharkhand) ಮೂಲದ ಅಷ್ಣಾರ ಎಂಬ ಯುವತಿಯನ್ನು ಪ್ರೀತಿ ಮಾಡುತ್ತಿದ್ದರು. ಈ ವಿಚಾರವನ್ನು ಮನೆಯವರಿಗೆಲ್ಲಾ ತಿಳಿಸಿ, ಒಪ್ಪಿಗೆ ಪಡೆದು ಮಾ.2ರಂದು ಮೈಸೂರಿನ ರೆಸಾರ್ಟ್ವೊಂದರಲ್ಲಿ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದರು. ಇದನ್ನೂ ಓದಿ: ಬೆಂಗಳೂರಲ್ಲಿ ಕುಡಿಯುವ ನೀರು ಅನ್ಯ ಕೆಲಸಗಳಿಗೆ ಬಳಕೆ; 417 ಜನರಿಗೆ 20.85 ಲಕ್ಷ ರೂ. ದಂಡ
ಮದುವೆ ದಿನವೂ ಶಶಾಂಕ್ ಸ್ವಲ್ಪ ಜ್ವರ ಇದೆ ಎಂದು ಸ್ನೇಹಿತರೊಂದಿಗೆ ಹೇಳಿಕೊಂಡಿದ್ದರು. ಮಂಗಳವಾರ ಶಶಾಂಕ್‌ಗೆ ಬೆಂಗಳೂರಿನ ನಿವಾಸದಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಆತನನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಶಶಾಂಕ್ ಪತ್ನಿ, ತಂದೆ-ತಾಯಿ, ಸ್ನೇಹಿತರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ‘ಮಾಣಿಕ್ಯ’ ಸಿನಿಮಾ ನಟಿ ರನ್ಯಾ ರಾವ್ ಫ್ಲಾಟ್ ಮೇಲೆ ದಾಳಿ – ಕೋಟಿ ಕೋಟಿ ಮೌಲ್ಯದ ಚಿನ್ನ ವಶ
ತಿರುವನಂತಪುರಂ: ಕೇಂದ್ರ ಅಬಕಾರಿ ಮತ್ತು ಜಿಎಸ್‌ಟಿ ಇಲಾಖೆಯ ಹೆಚ್ಚುವರಿ ಆಯುಕ್ತ, ಅವರ ತಾಯಿ ಹಾಗೂ ಸಹೋದರಿ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದಲ್ಲಿ (Kerala) ನಡೆದಿದೆ.
ಮನೀಶ್ ವಿಜಯ್ ಮೃತ ಅಧಿಕಾರಿ. ಮೂಲತಃ ಜಾರ್ಖಂಡ್ (Jharkhand) ಮೂಲದ ಮನೀಶ್ ವಿಜಯ್ ಕುಟುಂಬ ಕೇರಳದ ಎರ್ನಾಕುಲಂ (Ernakulam) ಜಿಲ್ಲೆಯ ಕಕ್ಕನಾಡ್ ಕಸ್ಟಮ್ಸ್ ಕ್ವಾಟ್ರಸ್‌ನಲ್ಲಿ ವಾಸಿಸುತ್ತಿದ್ದರು. ಮನೀಶ್ ವೈಯಕ್ತಿಕ ಕಾರಣಕ್ಕೆ ನಾಲ್ಕು ದಿನಗಳ ರಜೆ ತೆಗೆದುಕೊಂಡಿದ್ದರು. ನಾಲ್ಕು ದಿನ ಕಳೆದ ಬಳಿಕವೂ ಕೆಲಸಕ್ಕೆ ಬಾರದ ಕಾರಣ ಮನೀಶ್ ಅವರ ಸಹೋದ್ಯಗಿಗಳು ಅವರ ಮನೆಗೆ ತೆರಳಿದ ಸಂದರ್ಭ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು. ತಕ್ಷಣವೇ ಸಹೋದ್ಯೋಗಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದು ಆತ್ಮಹತ್ಯೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸ್ನೇಹಿತನಿಂದಲೇ ಗೆಳತಿ ಮೇಲೆ ಅತ್ಯಾಚಾರ
ಮನೀಶ್ ಮತ್ತು ಅವರ ಸಹೋದರಿ ಶಾಲಿನಿ ಪ್ರತ್ಯೇಕ ಕೊಠಡಿಗಳಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ತಾಯಿ ಶಕುಂತಲಾ ಹಾಸಿಗೆಯ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ತಾಯಿಯನ್ನು ಬಿಳಿ ಬಟ್ಟೆಯಲ್ಲಿ ಸುತ್ತಿ ಹೂವುಗಳಿಂದ ಮುಚ್ಚಲಾಗಿತ್ತು. ಈ ಹಿನ್ನೆಲೆ ತಾಯಿಯನ್ನು ಕೊಂದು ಮಕ್ಕಳಿಬ್ಬರು ನೇಣಿಗೆ ಶರಣಾಗಿರಬಹುದು ಎಂದು ಪೊಲೀಸರು ಅನುಮಾನಿಸಿದ್ದಾರೆ. ಇದನ್ನೂ ಓದಿ: ಬಸ್, ಮೆಟ್ರೋ ದರ ಏರಿಕೆ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆ ಏರಿಕೆ! – ತೆಂಗಿನ ಎಣ್ಣೆ ದರ ದಿಢೀರ್ ಏರಿಕೆಯಾಗಿದ್ದು ಯಾಕೆ?
ತನಿಖೆ ವೇಳೆ ಕೋಣೆಯಲ್ಲಿ ಒಂದು ಡೈರಿ ಸಿಕ್ಕಿದ್ದು, ಅದರಲ್ಲಿ ಅವರ ಸಹೋದರಿ ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಅವರ ಸಾವಿನ ಬಗ್ಗೆ ಸಹೋದರಿಗೆ ತಿಳಿಸಬೇಕು ಎಂದು ಬರೆಯಲಾಗಿದೆ. ಸದ್ಯ ಮನೀಶ್ ಅವರ ಸಹೋದರಿ ವಿದೇಶದಿಂದ ಬಂದ ನಂತರ ಶವಗಳ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಘಟನೆ ಸಂಬಂಧ ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ನಿಯಂತ್ರಣಕ್ಕೆ ಬಂದ ಕಾಡ್ಗಿಚ್ಚು
ಮನೀಶ್ ಈ ಹಿಂದೆ ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಪ್ರಿವೆಂಟಿವ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಒಂದೂವರೆ ವರ್ಷಗಳ ಹಿಂದೆ ಕೊಚ್ಚಿಗೆ ವರ್ಗಾವಣೆಗೊಂಡರು. ಅವರ ತಾಯಿ ಮತ್ತು ಸಹೋದರಿ ಕೆಲವು ತಿಂಗಳುಗಳಿಂದ ಅವರೊಂದಿಗೆ ನೆಲೆಸಿದ್ದರು. ಪೊಲೀಸರ ಪ್ರಕಾರ, ಶಾಲಿನಿ ಜಾರ್ಖಂಡ್‌ನಲ್ಲಿ ಕಾನೂನು ಪ್ರಕರಣವೊಂದನ್ನು ಎದುರಿಸುತ್ತಿದ್ದರು. ಇದಕ್ಕಾಗಿ ಮನೀಶ್ ಕೆಲಸದಿಂದ ರಜೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಬೌಂಡರಿ ಚಚ್ಚಿ ಆರ್‌ಸಿಬಿ ಗೆಲುವು ಕಸಿದ 16ರ ಹುಡುಗಿ – ಯಾರು ಈ ಕಮಲಿನಿ? ಮುಂಬೈ 1.6 ಕೋಟಿ ನೀಡಿದ್ದು ಯಾಕೆ?
ಶಾಲಿನಿ 2006ರ ಜಾರ್ಖಂಡ್ ಪಬ್ಲಿಕ್ ಸರ್ವಿಸ್ ಕಮಿಷನ್ (ಜೆಪಿಎಸ್‌ಸಿ) ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಈ ಹಿನ್ನೆಲೆ ಅವರನ್ನು ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಿಸಲಾಯಿತು ಎಂದು ವರದಿಗಳು ತಿಳಿಸಿವೆ. ನಂತರ ಅವರ ರ‍್ಯಾಂಕ್ ಅನ್ನು ಪ್ರಶ್ನಿಸಿ ರದ್ದುಗೊಳಿಸಲಾಯಿತು. ಇದರಿಂದ ಶಾಲಿನಿ ಅವರನ್ನು ಕೆಲಸದಿಂದ ವಜಾಗೊಳಿಸಲಾಯಿತು. 2024ರಲ್ಲಿ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸುವ ಸಲುವಾಗಿ ವಿಚಾರಣಾ ಪ್ರಕ್ರಿಯೆಗಳು ನಡೆಯುತ್ತಿದ್ದವು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮಂಡ್ಯ| ಸರ್ಕಾರಿ ನೌಕರಿ ಕೊಡಿಸುತ್ತೇನೆಂದು ಕೋಟಿ ಕೋಟಿ ವಂಚನೆ