ರಾಂಚಿ: ಜಾರ್ಖಂಡ್‌ನ (Jharkhand) ಧನ್‌ಬಾದ್‌ನಲ್ಲಿರುವ ಪ್ರತಿಷ್ಠಿತ ಶಾಲೆಯ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿ ಬ್ಲೇಸರ್‌ನಲ್ಲೇ (Blazers) ಮನೆಗೆ ಕಳುಹಿಸಿರುವ ಘಟನೆ ನಡೆದಿದೆ.
ವಿದ್ಯಾರ್ಥಿನಿಯರು (Jharkhand Students) ಶರ್ಟ್ ಮೇಲೆ ಪೆನ್ನಿನಿಂದ ಬರೆದುಕೊಂಡಿದ್ದರು, ಇದರಿಂದ ಗರಂ ಆಗಿ ಅವರ ಶರ್ಟ್ ಬಿಚ್ಚಿಸಿ, ಬರೀ ಬ್ಲೇಸರ್‌ನಲ್ಲೇ ಮನೆಗೆ ಕಳುಹಿಸಿದ್ದಾನೆ. ಪ್ರಾಂಶುಪಾಲರ ಈ ನಡೆಗೆ ಪೋಷಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಜಿಲ್ಲಾಧಿಕಾರಿ ಮಾಧವಿ ಮಿಶ್ರಾ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಟ್ರಕ್ ಗುದ್ದಿದ ರಭಸಕ್ಕೆ ಶಿರ ಛಿದ್ರ – ರಸ್ತೆ ಅಪಘಾತ, ಬಾಲಕ ಸ್ಥಳದಲ್ಲೇ ಸಾವು
ರಾಂಚಿ: ನಾಲ್ಕನೇಯ ಬಾರಿಗೆ ಜಾರ್ಖಂಡ್ (Jharkhand) ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ (Hemant Soren) ಇಂದು (ನ.28) ಪ್ರಮಾಣ ವಚನ ಸ್ವೀಕರಿಸಿದರು.
ರಾಂಚಿಯ ಮೊರಾದಾಬಾದ್ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಪ್ರಮಾಣವಚನ ಬೋಧಿಸಿದರು. ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು INDIA ಒಕ್ಕೂಟದ ಪ್ರಮುಖ ನಾಯಕರು ರಾಂಚಿಯ ಮೊರಾದಾಬಾದ್ ಮೈದಾನಕ್ಕೆ ಆಗಮಿಸಿದ್ದರು.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ನಾಯಕಿ ಮಮತಾ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಇಸ್ಕಾನ್ ಬ್ಯಾನ್‌ಗೆ ಒಪ್ಪದ ಬಾಂಗ್ಲಾ ಹೈಕೋರ್ಟ್
ಮಹಾಘಟಬಂಧನ್ ಮಿತ್ರಪಕ್ಷಗಳು ಕ್ಯಾಬಿನೆಟ್ ಸ್ಥಾನಗಳ ಕುರಿತು ಇನ್ನೂ ಮಾತುಕತೆ ನಡೆಸುತ್ತಿರುವ ಕಾರಣ ಇಂದು ಹೇಮಂತ್ ಸೋರೆನ್ ಮಾತ್ರ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಇದೇ ನವೆಂಬರ್ ತಿಂಗಳು 2 ಹಂತಗಳಲ್ಲಿ ನಡೆದ ಜಾರ್ಖಂಡ್ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಸತತ 2ನೇ ಬಾರಿಗೆ ಅಧಿಕಾರ ಹಿಡಿಯಿತು. 81 ಸ್ಥಾನಗಳಲ್ಲಿ 56 ಸ್ಥಾನಗಳನ್ನು ಗೆಲ್ಲುವ ಮೂಲಕ ಜಯಗಳಿಸಿತು. ಜೆಎಂಎಂ (JMM) 34 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 16, ಆರ್‌ಜೆಡಿ 4 ಮತ್ತು ಸಿಪಿಐ (ಎಂ) ಎರಡು ಸ್ಥಾನಗಳನ್ನು ಗೆದ್ದುಕೊಂಡಿತು.
ರಾಂಚಿ: ಲಿವ್ ಇನ್ ರಿಲೇಶನ್ ಶಿಪ್‌ನಲ್ಲಿದ್ದ ಗೆಳತಿಯ ಮೇಲೆ ಅತ್ಯಾಚಾರ ಮಾಡಿ, ಬಳಿಕ 40-50 ತುಂಡುಗಳಾಗಿ ಕತ್ತರಿಸಿ ಬಿಸಾಡಿರುವ ಘಟನೆ ಜಾರ್ಖಂಡ್‌ನ ಖುಂಟಿ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತನಿಖೆ ಬಳಿಕ, ಆರೋಪಿಯು ತನ್ನ ಗೆಳತಿಯೊಂದಿಗೆ ತಮಿಳುನಾಡಿನಲ್ಲಿ 2 ವರ್ಷಗಳ ಕಾಲ ಲಿವ್ ಇನ್ ರಿಲೇಶನ್ ಶಿಪ್‌ನಲ್ಲಿದ್ದನು. ಅಲ್ಲಿಂದ ಜಾರ್ಖಂಡ್‌ನ ಖುಂಟಿಗೆ ಬಂದಿದ್ದ. ಆತ ತನ್ನ ಗೆಳತಿಗೆ ತಿಳಿಸದೇ ಬೇರೊಂದು ಮದುವೆಯಾಗಿದ್ದ. ಅದಾದ ಸ್ವಲ್ಪ ದಿನಗಳ ನಂತರ ಸಂತ್ರಸ್ತೆ ತನ್ನ ಗೆಳೆಯನ ಭೇಟಿಗಾಗಿ ಜಾರ್ಖಂಡ್‌ಗೆ ಹೋಗಿದ್ದಳು.
ನ.8 ಜಾರ್ಖಂಡ್‌ಗೆ ಬಂದಿಳಿದಳು. ಮನೆಯಲ್ಲಿ ಹೆಂಡತಿಯಿದ್ದ ಕಾರಣ ಆಕೆಯನ್ನು ಮನೆಗೆ ಕರೆದುಕೊಂಡು ಹೋಗಲು ಆರೋಪಿ ತಯಾರಿರಲಿಲ್ಲ. ಹಾಗಾಗಿ ಆಟೋರಿಕ್ಷಾದಲ್ಲಿ ಆಕೆಯನ್ನು ಖುಂಟಿಗೆ ಕರೆದೊಯ್ದು ಮನೆಯ ಸಮೀಪ ನಿಲ್ಲಿಸಿ, ತಾನು ಮರಳಿ ಬರುವುದಾಗಿ ತಿಳಿಸಿ ಮನೆ ಕಡೆಗೆ ಹೋಗಿದ್ದಾನೆ. ಮನೆಯಿಂದ ಮರಳುವಾಗ ಆಯುಧಗಳೊಂದಿಗೆ ಹಿಂದಿರುಗಿದ್ದಾನೆ. ಆಕೆಯ ಮೇಲೆ ಆತ್ಯಾಚಾರ ಎಸಗಿ, ಬಳಿಕ ಕತ್ತು ಹಿಸುಕಿ ಸಾಯಿಸಿದ್ದಾನೆ. ನಂತರ ದೇಹವನ್ನು 40 ರಿಂದ 50 ತುಂಡುಗಳಾಗಿ ಕತ್ತರಿಸಿ ಬಿಸಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಖುಂಟಿ ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್ ಮಾಹಿತಿ ಪ್ರಕಾರ, ಆರೋಪಿ ತಮಿಳುನಾಡಿನ ಮಾಂಸದಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕೋಳಿಯನ್ನು ಕತ್ತರಿಸುವುದರಲ್ಲಿ ನಿಪುಣರಾಗಿದ್ದ. ನ.24 ರಂದು ಜೋರ್ಡಾಗ್ ಗ್ರಾಮದ ಬಳಿ ಬೀದಿ ನಾಯಿಯ ಕಳೇಬರದೊಂದಿಗೆ ಕೈಯೊಂದು ಕಾಣಿಸಿಕೊಂಡಿದ್ದು, ನಂತರ ಪೊಲೀಸರ ಪರಿಶೀಲನೆಯ ಬಳಿಕ ಹಲವು ಭಾಗಗಳನ್ನು ಪತ್ತೆಹಚ್ಚಿದ್ದಾರೆ ಎಂದು ತಿಳಿಸಿದರು.
ಇನ್ನೂ ಘಟನೆ ನಡೆದ ಜಾಗದಲ್ಲಿ ಮಹಿಳೆಯ ಆಧಾರ್ ಕಾರ್ಡ್ ಸೇರಿದಂತೆ ಸಾಮಾನುಗಳಿದ್ದ ಬ್ಯಾಗ್ ಕೂಡ ಪತ್ತೆಯಾಗಿದೆ. ಸಂತ್ರಸ್ತೆಯ ತಾಯಿಗೆ ಸಿಕ್ಕ ಬ್ಯಾಗನ್ನು ನೀಡಿದಾಗ, ಬ್ಯಾಗ್ ತನ್ನ ಮಗಳದ್ದೇ ಎಂದು ಪತ್ತೆ ಹಚ್ಚಿದ್ದಾರೆ. ಜಾರ್ಖಂಡ್‌ಗೆ ಹೊರಡುವ ಮುನ್ನ ತನ್ನ ಗೆಳಯನೊಂದಿಗೆ ವಾಸಿಸುವುದಾಗಿ ತಿಳಿಸಿದ್ದಳು ಎಂದು ಹೇಳಿದ್ದಾರೆ. ಜೊತೆಗೆ ಈ ಕೊಲೆಯ ಹಿಂದೆ ಆರೋಪಿ ಇರುವುದಾಗಿ ತಾಯಿ ಶಂಕಿಸಿದ್ದಾರೆ.ಇದನ್ನೂ ಓದಿ: Exclusive | ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್: ಬಾಂಬ್ ಇಟ್ಟ ಬಳಿಕ ಮಸೀದಿಯಲ್ಲಿ ಪ್ರಾರ್ಥನೆ ಮಾಡಿದ್ದ ಮಾಸ್ಟರ್ ಮೈಂಡ್
ರಾಂಚಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವನ್ನು (INDIA alliance) ನಿರ್ಣಾಯಕ ಗೆಲುವಿನತ್ತ ಮುನ್ನಡೆಸಿದ ಹೇಮಂತ್ ಸೊರೆನ್ (Hemant Soren) ಇಂದು (ನ.28) 4ನೇ ಬಾರಿಗೆ ಜಾರ್ಖಂಡ್‌ನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಂಚಿಯ ಮೊರ್ಹಬಾದಿ ಮೈದಾನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್, 49 ವರ್ಷದ ಹೇಮಂತ್ ಸೊರೆನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಮೈತ್ರಿಕೂಟದ ನಡುವೆ ಸಚಿವ ಸಂಪುಟ ಪಟ್ಟಿ ಅಂತಿಮವಾಗದೇ ಇರುವುದರಿಂದ ಇಂದು ಹೇಮಂತ್ ಸೊರೆನ್ ಏಕೈಕ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಜೆಎಂಎಂ (JMM) ಮುಖ್ಯಮಂತ್ರಿ ಹುದ್ದೆಯೊಂದಿಗೆ 6 ಸಚಿವ ಸ್ಥಾನಗಳನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಕಾಂಗ್ರೆಸ್ (Congress) ನಾಲ್ಕು ಸ್ಥಾನಗಳು ಮತ್ತು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ದಳಕ್ಕೆ ಒಂದು ಸ್ಥಾನ ಸಿಗಲಿದೆ. ಇಬ್ಬರು ಶಾಸಕರನ್ನು ಹೊಂದಿರುವ ಸಿಪಿಐ-ಎಂಎಲ್ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಲಿದೆ. ಇದನ್ನೂ ಓದಿ: ಸಂತ ಚಿನ್ಮಯ್ ಕೃಷ್ಣದಾಸ್ ವಿರುದ್ಧ ದೇಶದ್ರೋಹದ ಕೇಸ್ – ಬಾಂಗ್ಲಾದಲ್ಲಿ ಇಸ್ಕಾನ್ ಬ್ಯಾನ್ ಆಗುತ್ತಾ?
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದೇ ನವೆಂಬರ್ ತಿಂಗಳು 2 ಹಂತಗಳಲ್ಲಿ ನಡೆದ ಜಾರ್ಖಂಡ್ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಸತತ 2ನೇ ಬಾರಿಗೆ ಅಧಿಕಾರ ಹಿಡಿಯಿತು. 81 ಸ್ಥಾನಗಳಲ್ಲಿ ಜೆಎಂಎಂ 34 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 16, ಆರ್‌ಜೆಡಿ 4 ಮತ್ತು ಸಿಪಿಐ (ಎಂಎಲ್) ಎರಡು ಸ್ಥಾನಗಳನ್ನು ಗೆದ್ದುಕೊಂಡಿತು. ಇದನ್ನೂ ಓದಿ: ಮೀಸಲಾತಿ ಲಾಭಕ್ಕಾಗಿ ಮರು ಮತಾಂತರ ಆಗೋದು ಸಂವಿಧಾನಕ್ಕೆ ಮಾಡುವ ವಂಚನೆ: ಸುಪ್ರೀಂ
ಹೇಮಂತ್ ಸೊರೆನ್ ಹಾದಿ ಹೇಗಿತ್ತು?
ಹೇಮಂತ್ ಸೊರೆನ್‌ಗೆ 2024ರ ಆರಂಭ ಮತ್ತು ಅಂತ್ಯವು ಹೆಚ್ಚು ಭಿನ್ನವಾಗಿರಲಿಲ್ಲ. ಪ್ರಕರಣವೊಂದರಲ್ಲಿ ಜೈಲುವಾಸ ಅನುಭವಿಸಿ ಬಂದ ನಾಯಕನ ಕೈ ಹಿಡಿದು ಜನ ಅಭಯ ತುಂಬಿದ್ದಾರೆ. ಜಾರ್ಖಂಡ್‌ನಲ್ಲಿ ಜಯಭೇರಿ ಬಾರಿಸಿದ ಸೊರೆನ್ ಒಂದೇ ವರ್ಷದಲ್ಲಿ 2ನೇ ಬಾರಿಗೆ ಸಿಎಂ ಆಗಿ ಪುನರಾಗಮನಕ್ಕೆ ಸಜ್ಜಾಗಿದ್ದಾರೆ. ಇದನ್ನೂ ಓದಿ: ನಾನ್‌ವೆಜ್ ಸೇವನೆ ಬಿಡುವಂತೆ ಒತ್ತಡ; ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ – ಪ್ರಿಯಕರ ಅರೆಸ್ಟ್
ಈಚೆಗೆ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಸೊರೆನ್‌ರನ್ನು ಭೂಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ವಶಕ್ಕೆ ತೆಗೆದುಕೊಂಡಿತು. ಬಂಧನಕ್ಕೊಳಗಾಗುವ ಮೊದಲು ಅವರು ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈಗ ವರ್ಷ (2024) ಮುಗಿಯಲು ಒಂದು ತಿಂಗಳು ಉಳಿದಿರುವಾಗ, ಸೊರೆನ್ ಅವರು ಅಮೋಘ ವಿಜಯದ ವಾಸ್ತುಶಿಲ್ಪಿಯಾಗಿ ಹೊರಹೊಮ್ಮಿದ್ದಾರೆ. ‘ಇಂಡಿಯಾ’ ಮೈತ್ರಿಕೂಟವು ರಾಜ್ಯದಲ್ಲಿ ಮತ್ತೆ ಅಧಿಕಾರ ಉಳಿಸಿಕೊಂಡಿದೆ. ಸೊರೆನ್ ಮತ್ತೆ ಸಿಎಂ ಆಗಿ ಮುಂದುವರಿಯಲಿದ್ದಾರೆ.
ರಾಂಚಿ: ಜಾರ್ಖಂಡ್‌ನ ಪ್ರಜಾಪ್ರಭುತ್ವದ ಪರೀಕ್ಷೆಯಲ್ಲಿ ನಾವು ಉತ್ತೀರ್ಣರಾಗಿದ್ದೇವೆ ಎಂದು ಇಲ್ಲಿನ ಸಿಎಂ ಹೇಮಂತ್ ಸೊರೆನ್ (Hemant Soren) ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಇಲ್ಲಿನ ವಿಧಾನಸಭಾ ಚುನಾವಣೆಯಲ್ಲಿ (Assembly Elections) ಮತಗಟ್ಟೆ ಸಮೀಕ್ಷೆಗಳನ್ನು ತಲೆಕೆಳಗೆ ಮಾಡಿ ವಿಜಯ ಸಾಧಿಸಿದ ಬಳಿಕ ಮಾತನಾಡಿದ ಅವರು, ನಾವು ಜಾರ್ಖಂಡ್‌ನಲ್ಲಿ ಪ್ರಜಾಪ್ರಭುತ್ವದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದೇವೆ. ಚುನಾವಣಾ ಫಲಿತಾಂಶದ ನಂತರ ನಾವು ನಮ್ಮ ಕಾರ್ಯತಂತ್ರವನ್ನು ಅಂತಿಮಗೊಳಿಸುತ್ತೇವೆ. ಈ ಅದ್ಭುತ ಪ್ರದರ್ಶನಕ್ಕಾಗಿ ನಾನು ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಜಾರ್ಖಂಡ್ ‘ಅಬುವಾ ರಾಜ್, ಅಬುವಾ ಸರ್ಕಾರ್’ (ಸ್ವಂತ ರಾಜ್ಯ, ಸ್ವಂತ ಸರ್ಕಾರ) ಸ್ಕ್ರಿಪ್ಟ್ ಮಾಡಲು ಸಿದ್ಧವಾಗಿದೆ ಎಂದರು. ಇದನ್ನೂ ಓದಿ: 14 ರಾಜ್ಯಗಳ 48 ಕ್ಷೇತ್ರಗಳಿಗೆ ಉಪಚುನಾವಣೆ – 23 ಕ್ಷೇತ್ರಗಳಲ್ಲಿ ಎನ್‌ಡಿಎ ಕಮಾಲ್
ಆದಿವಾಸಿಗಳ ನಾಡು ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಮೈತ್ರಿ ಕೂಟ ಮತ್ತೊಮ್ಮೆ ಗೆಲುವಿನ ನಗಾರಿ ಬಾರಿಸಿದೆ. ಇಡಿ ಕೇಸ್, ಬಂಧನ, ಬಂಡಾಯ, ಆಪರೇಷನ್ ಕಮಲ ಎದುರಾಳಿಗಳ ನಾನಾ ವ್ಯೂಹ, ಹೀಗೆ ಹಲವು ಸವಾಲುಗಳನ್ನು ಎದುರಿಸಿದ ಜಾರ್ಖಂಡ್ ಮುಕ್ತಿ ಮೋರ್ಚಾ, ಮತಗಟ್ಟೆ ಸಮೀಕ್ಷೆಗಳನ್ನು ತಲೆಕೆಳಗೆ ಮಾಡಿ ವಿಜಯವನ್ನು ಸಾಧಿಸಿದೆ. ಬಂಟಿ ಔರ್ ಬಬ್ಲಿ ಖ್ಯಾತಿಯ ಹೇಮಂತ್ ಸೊರೆನ್-ಕಲ್ಪನಾ ಜೋಡಿ ಸೂಪರ್ ಮ್ಯಾಜಿಕ್ ಮಾಡಿದೆ. ರಾಜಕೀಯ ಅಸ್ಥಿರತೆಗೆ ಕೇರಾಫ್ ಅಡ್ರೆಸ್ ಆಗಿರುವ ಜಾರ್ಖಂಡ್‌ನಲ್ಲಿ ಮತ್ತೊಮ್ಮೆ ಜೆಎಂಎಂ ಸ್ಪಷ್ಟವಾದ ಬಹುಮತ ಗಳಿಸಿ ಮತ್ತೊಮ್ಮೆ ಸರ್ಕಾರ ರಚನೆಗೆ ಸಜ್ಜಾಗುತ್ತಿದೆ. ಇಲ್ಲಿ ವಲಸೆವಾದ ಇತರೆ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚುನಾವಣೆ ಮಾಡಿದ್ದ ಬಿಜೆಪಿ ವಿರುದ್ಧ ಜನಾದೇಶ ಬಂದಿದೆ. ಮಾಜಿ ಸಿಎಂ ಚಂಪಾಯ್ ಸೊರೆನ್, ಹೇಮಂತ್ ಸೊರೆನ್ ಅತ್ತಿಗೆ ಸೀತಾ ಸೊರೆನ್ ಪಕ್ಷಾಂತರ ಬಿಜೆಪಿಗೆ ವರವಾಗಲಿಲ್ಲ. ಎಸ್‌ಟಿ-ಎಸ್‌ಸಿ ಮೀಸಲು ಕ್ಷೇತ್ರಗಳು ಜೆಎಂಎಂ ಮೈತ್ರಿಕೂಟದ ಕೈ ಹಿಡಿದಿವೆ. ಬರ್ಹೈತ್‌ನಿಂದ ಸ್ಪರ್ಧಿಸಿದ್ದ ಹೇಮಂತ್ ಸೊರೆನ್ 39,791 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್, ವಯನಾಡಲ್ಲಿ ಕಾಂಗ್ರೆಸ್ ಗೆಲುವಿಗೆ ಧನ್ಯವಾದ ತಿಳಿಸಿದ ರಾಹುಲ್ ಗಾಂಧಿ
ಜಾರ್ಖಂಡ್ ಫಲಿತಾಂಶ (81)
* ಐಎನ್‌ಡಿಐಎ- 56
* ಎನ್‌ಡಿಎ- 24
* ಇತರೆ – 01
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ (Maharashtra Elections) ಎಲ್ಲಾ 288 ಕ್ಷೇತ್ರಗಳು, ಜಾರ್ಖಂಡ್‌ನಲ್ಲಿ (Jarkhand) 2ನೇ ಮತ್ತು ಅಂತಿಮ ಹಂತದಲ್ಲಿ 38 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ.
ಸುಗಮ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿದೆ. ಷೇರುಪೇಟೆ, ಬ್ಯಾಂಕ್, ಶಾಲೆ-ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಈ ಹೊತ್ತಲ್ಲೇ, ಪಾಲ್ಘರ್‌ನ ವಿರಾರ್‌ನಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತದಾರರಿಗೆ ಹಣ ಹಂಚಿಕೆ ಮಾಡ್ತಿದ್ದಾರೆ ಎಂದು ಆರೋಪಿಸಿ ಬಿವಿಎ ಕಾರ್ಯಕರ್ತರು ಮುತ್ತಿಗೆ ಹಾಕಿ ಗದ್ದಲ ಎಬ್ಬಿಸಿದ್ದಾರೆ.
ಬಿಜೆಪಿ ಡೈರಿ, ಹಣದ ಕವರ್‌ಗಳು ಸಿಕ್ಕಿವೆ ಎನ್ನಲಾಗಿದೆ. ಈ ವೀಡಿಯೋ ಹಂಚಿಕೊಂಡ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ಆಯೋಗಕ್ಕೆ ದೂರು ನೀಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಆಯೋಗ, ವಿನೋದ್ ತಾವ್ಡೆ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಆದರೆ, ಈ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ. ಇನ್ನು, ಬಿಜೆಪಿ, ಸಂಘಪರಿವಾರವನ್ನು ವಿಷದ ಹಾವಿಗೆ ಹೋಲಿಸಿದ್ದ ಮಲ್ಲಿಕಾರ್ಜುನ ಖರ್ಗೆಯನ್ನು ಹುಚ್ಚು ನಾಯಿಗೆ ಸಿ.ಟಿ.ರವಿ ಹೋಲಿಕೆ ಮಾಡಿದ್ದಾರೆ. ಇದನ್ನೂ ಓದಿ: ಗುಜರಾತ್ | ಕರಾವಳಿ ಕಾವಲು ಪಡೆಯಿಂದ ಪಾಕ್ ವಶದಲ್ಲಿದ್ದ 7 ಭಾರತೀಯ ಮೀನುಗಾರರ ರಕ್ಷಣೆ
ರಾಂಚಿ: ಜಾರ್ಖಂಡ್‌ನಲ್ಲಿ (Jharkhand) ಮೊದಲ ಹಂತದ ಚುನಾವಣೆ ಶಾಂತಿಯುತವಾಗಿ ಮುಗಿದಿದೆ. 43 ಮತಕ್ಷೇತ್ರಗಳಲ್ಲಿ ಶೇ. 67ಕ್ಕೂ ಹೆಚ್ಚು ಮತದಾನ ನಡೆದಿದೆ. ವಯನಾಡು ಲೋಕಸಭೆ ಕ್ಷೇತ್ರಕ್ಕೂ ಉಪಚುನಾವಣೆ ನಡೆದಿದೆ.
ಶೇ.65ರಷ್ಟು ಮಂದಿ ಮತ ಚಲಾಯಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಇಲ್ಲಿ ಶೇ.74ರಷ್ಟು ಮತದಾನವಾಗಿತ್ತು. ಮತದಾನದ ವೇಳೆ ಪ್ರವಾಹ, ಭೂಕುಸಿತದಿಂದ ಚದುರಿಹೋಗಿದ್ದವರ ಮರು ಸಂಗಮ ಆಗಿದೆ. ತಮ್ಮವರನ್ನು ಕಳೆದುಕೊಂಡಿದ್ದ ಜನ, ಮತಗಟ್ಟೆಗಳಲ್ಲಿ ಸಂಬಂಧಿಗಳು, ಆಪ್ತರನ್ನು ಕಂಡು ಭಾವುಕರಾದರು. ಹಳೆಯ ದಿನಗಳನ್ನು ಮೆಲುಕು ಹಾಕಿದರು. ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧೆ ಮಾಡಿರುವ ಪ್ರಿಯಾಂಕಾ ವಾದ್ರಾ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಚುನಾವಣೆಗಳ (Election) ಫಲಿತಾಂಶ ನ.23ರಂದು ಹೊರಬೀಳಲಿದೆ. ಇದನ್ನೂ ಓದಿ: ನೋಂದಣಿಗೂ ಮುನ್ನವೇ ಶುಲ್ಕ ಪಾವತಿ; ಸಿಎಂ ವಿರುದ್ಧ ಮತ್ತೊಂದು ದಾಖಲೆ ರಿಲೀಸ್!
ರಾಜಸ್ಥಾನದ ಡಿಯೋನಿ ಉಪಚುನಾವಣೆ ವೇಳೆ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ, ಚುನಾವಣಾಧಿಕಾರಿ ಕಪಾಳಕ್ಕೆ ಭಾರಿಸಿದ್ದಾರೆ. ಈ ಮಧ್ಯೆ, ಮಹಾರಾಷ್ಟ್ರ (Maharashtra) ಚುನಾವಣೆ ವೇಳೆಯೇ ಡಿಸಿಎಂ ಅಜಿತ್ ಪವಾರ್‌ಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಫೋಟೋವನ್ನು ಪ್ರಚಾರದಲ್ಲಿ ಬಳಸಿಕೊಳ್ಳದಂತೆ ಸೂಚಿಸಿದೆ. ಸ್ವಂತ ಕಾಲಲ್ಲಿ ನಿಲ್ಲೋದನ್ನು ಕಲಿಯಿರಿ ಎಂದು ಅಜಿತ್ ಪವಾರ್‌ಗೆ ಚಾಟಿ ಬೀಸಿದೆ. ಇದನ್ನೂ ಓದಿ: ಬಿಡಿಗಾಸು ಅನುದಾನ ಬಿಡುಗಡೆ ಮಾಡದೆ ಹಗರಣದ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ: ಸುನಿಲ್ ಕುಮಾರ್ ತಿರುಗೇಟು
ಜಾರ್ಖಂಡ್‌ನ 15 ಜಿಲ್ಲೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಚುನಾವಣಾ ಆಯೋಗವು ರಾಜ್ಯಾದ್ಯಂತ ಒಟ್ಟು 15,344 ಮತಗಟ್ಟೆಗಳನ್ನು ಸ್ಥಾಪಿಸಿದ್ದು, 225 ಸೂಕ್ಷ್ಮ ಮತಗಟ್ಟೆಗಳು ಎಂದು ಘೋಷಿಸಿದೆ. ಭದ್ರತಾ ಸುವ್ಯವಸ್ಥೆ ಕಾಪಾಡಲು 200 ಕಂಪನಿಗಳ ಭದ್ರತಾ ಪಡೆಗಳನ್ನು ನಿಯೋಜಿಸಿದೆ. ಒಟ್ಟು 2.60 ಕೋಡಿ ಮತದಾರರ ಪೈಕಿ ಈ ಹಂತದಲ್ಲಿ 1 ಕೋಟಿ 37 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ.
झारखंड विधानसभा चुनाव में आज पहले दौर की वोटिंग है। सभी मतदाताओं से मेरा आग्रह है कि वे लोकतंत्र के इस उत्सव में पूरे उत्साह के साथ मतदान करें। इस मौके पर पहली बार वोट देने जा रहे अपने सभी युवा साथियों को मेरी बहुत-बहुत बधाई! याद रखें- पहले मतदान, फिर जलपान!
ಎನ್‌ಡಿಎ ಮೈತ್ರಿಕೂಟದ ಬಿಜೆಪಿ, ಜೆಡಿ(ಯು), ಎಲ್‌ಜೆಪಿ ಮತ್ತು ಎಜೆಎಸ್ ಮತ್ತು ಇಂಡಿಯಾ ಮೈತ್ರಿಕೂಟಗಳ ಜೆಎಂಎಂ, ಕಾಂಗ್ರೆಸ್, ಆರ್‌ಜೆಡಿ ನಡುವೆ ನೇರ ಏರ್ಪಟ್ಟಿದೆ. ಮೊದಲ ಹಂತದ ಚುನವಾಣೆಯ ಪಶ್ಚಿಮದಲ್ಲಿ ಅತಿ ಹೆಚ್ಚು ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಪ್ರಮುಖ ಅಭ್ಯರ್ಥಿಗಳೆಂದರೆ ಚಂಪೈ ಸೊರೆನ್, ಮಹುವಾ ಮಜಿ, ಗೀತಾ ಕೋಡಾ, ಅಜೋಯ್ ಕುಮಾರ್, ಬನ್ನಾ ಗುಪ್ತಾ ಮತ್ತು ಸುಖರಾಮ್ ಓರಾನ್ ಸ್ಪರ್ಧಿಸುತ್ತಿದ್ದಾರೆ. ಜಗನ್ನಾಥಪುರದಲ್ಲಿ ಅತಿ ಕಡಿಮೆ ಅಭ್ಯರ್ಥಿಗಳಿದ್ದು, ಕೇವಲ ಎಂಟು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ.
झारखंड विधानसभा चुनाव में आज पहले दौर की वोटिंग है।सभी मतदाताओं से मेरा आग्रह है कि वे जितनी जल्दी हो सके मतदान करने के अपने संवैधानिक अधिकार का प्रयोग करें और लोकतंत्र के इस उत्सव में पूरे उत्साह के साथ मतदान करें।
ರಾಂಚಿ: ಜಾರ್ಖಂಡ್ ವಿಧಾನಸಭೆಗೆ (Jharkhand Assembly Elections) ನಾಳೆ ಮೊದಲ ಹಂತದ ಮತದಾನ ನಡೆಯಲಿದೆ. ಮೊದಲ ಸುತ್ತಿನಲ್ಲಿ 15 ಜಿಲ್ಲೆಗಳ 43 ಸ್ಥಾನಗಳಿಗೆ ಮತದಾನ (Voting) ನಡೆಯಲಿದೆ.
ಮೊದಲ ಹಂತದಲ್ಲಿ 683 ಅಭ್ಯರ್ಥಿಗಳು ಅಖಾಡದಲ್ಲಿದ್ದು, ನಾಳೆ (ಬುಧವಾರ) ಅವರ ಭವಿಷ್ಯ ಇವಿಎಂಗಳಲ್ಲಿ (EVM) ಭದ್ರವಾಗಲಿದೆ. ಮೊದಲ ಸುತ್ತಿನಲ್ಲಿ ಗರಿಷ್ಠ ಆರು ಸ್ಥಾನಗಳು ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿವೆ. ಪಲಮು, ಪಶ್ಚಿಮ ಸಿಂಗ್‌ಭೂಮ್ ಮತ್ತು ರಾಂಚಿ ಜಿಲ್ಲೆಗಳಲ್ಲಿ ತಲಾ ಐದು ವಿಧಾನಸಭಾ ಸ್ಥಾನಗಳಿದ್ದು, ಕೊಡೆರ್ಮಾ ಮತ್ತು ರಾಮಗಢ ಜಿಲ್ಲೆಯಲ್ಲಿ ತಲಾ ಒಂದು ಸ್ಥಾನವಿದೆ. ಇಂಡಿಯಾ ಒಕ್ಕೂಟದ ಭಾಗವಾಗಿರುವ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ, ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್, ಜನತಾ ದಳ ಯುನೈಡೆಟ್ ಒಳಗೊಂಡು ಎನ್‌ಡಿಎ ಒಕ್ಕೂಟದ ವಿರುದ್ಧ ಸ್ಪರ್ಧೆ ಮಾಡಿದೆ. ಇದನ್ನೂ ಓದಿ: ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ನಿಷೇಧ ವಾಪಸ್? – ಹೈಕಮಾಂಡ್ ಲಾಬಿಗೆ ಮಣಿದ್ರಾ ಡಿಕೆಶಿ?
ಮೊದಲ ಹಂತದಲ್ಲಿ ಒಟ್ಟು 43 ಸ್ಥಾನಗಳ ಪೈಕಿ ಜೆಎಂಎಂ 23 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 17 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಒಟ್ಟು ಐದು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಎನ್‌ಡಿಎಯಲ್ಲಿ ಬಿಜೆಪಿ 43ರಲ್ಲಿ 36 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಸುದೇಶ್ ಮಹತೋ ಅವರ ಎಜೆಎಸ್‌ಯು ನಾಲ್ಕು ಸ್ಥಾನಗಳಲ್ಲಿ, ನಿತೀಶ್ ಕುಮಾರ್ ಅವರ ಜೆಡಿಯು ಎರಡು ಸ್ಥಾನಗಳಲ್ಲಿ ಮತ್ತು ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ (ಆರ್) ಒಂದು ಸ್ಥಾನದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದಲ್ಲದೇ ಇತರೆ ಸಣ್ಣ ಪಕ್ಷಗಳೂ ಸ್ಪರ್ಧೆಯನ್ನು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ಮೀಸಲಾತಿ ಕೊಡಿ: ಸರ್ಕಾರಕ್ಕೆ ಮುಸ್ಲಿಂ ಸಮುದಾಯ ಬೇಡಿಕೆ
ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್, ಆರೋಗ್ಯ ಸಚಿವ ಬನ್ನಾ ಗುಪ್ತಾ, ರಾಜ್ಯಸಭಾ ಸಂಸದ ಮಹುವಾ ಮಜಿ, ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರ ಪತ್ನಿ ಗೀತಾ ಕೋಡಾ ಮತ್ತು ಮಾಜಿ ಮುಖ್ಯಮಂತ್ರಿ ರಘುಬರ್ ದಾಸ್ ಅವರ ಸೊಸೆ ಪೂರ್ಣಿಮಾ ದಾಸ್ ಅವರಂತಹ ಪ್ರಮುಖ ಮುಖಗಳು ಮೊದಲ ಹಂತದ ಚುನಾವಣಾ ಅಖಾಡದಲ್ಲಿ ಗಮನ ಸೆಳೆದಿವೆ. ಇದನ್ನೂ ಓದಿ: Assam| ನಿರ್ಮಾಣ ಹಂತದ ಮೋರಿಗೆ ಬಿದ್ದ ಕಾರು – ನಾಲ್ವರು ಸಾವು, ಇಬ್ಬರು ಗಂಭೀರ
ಚುನಾವಣೆಗಾಗಿ ಚುನಾವಣಾ ಆಯೋಗವು ಸಕಲ ತಯಾರಿ ಮಾಡಿಕೊಂಡಿದೆ. ರಾಜ್ಯಾದ್ಯಂತ ಒಟ್ಟು 15,344 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 225 ಸೂಕ್ಷ್ಮ ಮತಗಟ್ಟೆಗಳು ಎಂದು ಘೋಷಿಸಿದೆ. ಭದ್ರತಾ ಸುವ್ಯವಸ್ಥೆ ಕಾಪಾಡಲು ಮತ್ತು ಚುನಾವಣಾ ಪ್ರಕ್ರಿಯೆಯನ್ನು ಸುಗಮಗೊಳಿಸಲು 200 ಕಂಪನಿಗಳ ಭದ್ರತಾ ಪಡೆಗಳನ್ನು ನಿಯೋಜಿಸಿದೆ. ಮೊದಲ ಹಂತದಲ್ಲಿ 1.37 ಕೋಟಿ ಮಂದಿ ಮತದಾರರು ಮತ ಚಲಾಯಿಸಲಿದ್ದಾರೆ. ಇದನ್ನೂ ಓದಿ: ತಲೆ ಮೇಲೆ ಹರಿದ ಸರ್ಕಾರಿ ಬಸ್- ವಿದ್ಯಾರ್ಥಿ ಸ್ಥಳದಲ್ಲೇ ಸಾವು
ರಾಂಚಿ: ಜಾರ್ಖಂಡ್‌ನ (Jharkhand) ಕೆಲವು ಭಾಗಗಳಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹಿರಿಯ ಹವಾಮಾನ ತಜ್ಞ ಉಪೇಂದ್ರ ಶ್ರೀವಾಸ್ತವ ತಿಳಿಸಿದ್ದಾರೆ.
ರಾಂಚಿಯಿಂದ (Ranchi) ಸುಮಾರು 35 ಕಿಮೀ ದೂರದಲ್ಲಿರುವ ಖುಂತಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದರ ಆಳವು ಐದು ಕಿ.ಮೀಗಳಷ್ಟಿತ್ತು ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ವರದಿ ತಿಳಿಸಿದೆ. ಇದನ್ನೂ ಓದಿ: ಒಂದು ಚುನಾವಣೆಗೆ ಸಲಹೆ ನೀಡಲು 100 ಕೋಟಿ ಪಡೆಯುತ್ತೇನೆ: ಪ್ರಶಾಂತ್ ಕಿಶೋರ್