ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಜಾಲಿವುಡ್ ಸ್ಟುಡಿಯೋದ ಆಡಳಿತ ಮಂಡಳಿ ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆ ಮನವಿ ಮಾಡಿದೆ.
ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಪ್ರವೇಶದಿಂದ ಮತ್ತೆ ಬಿಗ್ ಬಾಸ್ ಮನೆಯಲ್ಲಿ ಶೂಟಿಂಗ್ ಆರಂಭವಾಗಿದೆ. ಗುರುವಾರ ಮುಂಜಾನೆ ಬಿಡದಿ ರೆಸಾರ್ಟ್‌ನಲ್ಲಿದ್ದ ಸ್ಪರ್ಧಿಗಳು ಮನೆ ಪ್ರವೇಶ ಮಾಡಿದ್ದಾರೆ.
ಜಾಲಿವುಡ್ ಸ್ಟುಡಿಯೋಸ್ (Jollywood Studios) ಬೀಗ ಓಪನ್ ಆಗಿದೆ. ಒಂದು ಕಡೆ ಜಾಲಿವುಡ್ ಹಾಗೂ ಬಿಗ್‌ಬಾಸ್‌ಗೆ (Bigg Boss Kannada 12) ಗುಡ್ ನ್ಯೂಸ್ ಸಿಕ್ಕಿದೆ. ರಾತ್ರೋರಾತ್ರಿ ಬಿಗ್‌ಬಾಸ್ ಸ್ಪರ್ಧಿಗಳು ವಾಪಸ್ ಬಿಗ್‌ಹೌಸ್ ಸೇರಿದ್ದಾರೆ. ಆದರೆ, ಬಿಗ್‌ಬಾಸ್ ಮನೆಯೊಳಗೆ ಹೋದರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ.
ಬಿಗ್‌ಬಾಸ್ ಆಡಳಿತ ಮಂಡಳಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಆದೇಶ ಕಾಪಿ ಬರೋವರೆಗೂ ಶೂಟಿಂಗ್ ಶುರು ಮಾಡಲು ಹಿಂದೇಟು ಹಾಕಿದೆ. ಡಿಸಿಎಂ ಡಿಕೆ ಶಿವಕುಮಾರ್ ಜಾಲಿವುಡ್ ಸ್ಟುಡಿಯೋಸ್ ಓಪನ್ ಮಾಡಿಸಿದರೂ ಶುರುವಾಗಿಲ್ಲ ಬಿಗ್‌ಬಾಸ್ ಶೂಟಿಂಗ್. ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಸಿಗುವ ತನಕ ಬಿಗ್‌ಬಾಸ್ ಆಯೋಜಕರ ತಂಡ ಶೂಟಿಂಗ್ ಶುರು ಮಾಡುತ್ತಿಲ್ಲ. ಇದನ್ನೂ ಓದಿ: ಡಿಕೆಶಿ ವೈಲ್ಡ್ ಕಾರ್ಡ್‌ಎಂಟ್ರಿ – ಬಿಗ್‌ಬಾಸ್ ಮನೆ ಓಪನ್ | ರಾತ್ರಿ ಏನೇನಾಯ್ತು? ಇಲ್ಲಿದೆ ಇನ್‌ಸೈಡ್ ಸ್ಟೋರಿ
ಅಂದಹಾಗೆ ಇನ್ನು ಎರಡು ದಿನಗಳ ಕಾಲ ಆಗುವಷ್ಟು ಎಪಿಸೋಡ್ ಬ್ಯಾಂಕಿಂಗ್ ಇರುವ ಧೈರ್ಯ ಬಿಗ್‌ಬಾಸ್ ಆಡಳಿತ ಮಂಡಳಿಗಿದೆ. ಹೀಗಾಗಿ, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಸಿಗುವವರೆಗೂ ಕಾಯುತ್ತಿದೆ. ಬಿಗ್‌ಬಾಸ್ ಆಡಳಿತ ಮಂಡಳಿ. ‘ಪಬ್ಲಿಕ್ ಟಿವಿ’ಗೆ ಬಿಗ್‌ಬಾಸ್ ಆಡಳಿತ ಮಂಡಳಿಯ ಉನ್ನತ ಮೂಲಗಳ ಮಾಹಿತಿ ಸಿಕ್ಕಿದೆ.
ಬೆಂಗಳೂರು: ಪರಿಸರ ನಿಯಮ ಉಲ್ಲಂಘನೆ ಆರೋಪದಿಂದಾಗಿ ಬಂದ್ ಆಗಿರೋ `ಬಿಗ್‌ಬಾಸ್’ (Bigg Boss Kannada) ರಿಯಾಲಿಟಿ ಶೋಗೆ ಕ್ಷಣಕ್ಕೊಂದು ಟ್ವಿಸ್ಟ್ ಸಿಕ್ತಿದೆ. ಬಿಗ್ ಬಾಸ್ ರಿಯಾಲಿಟಿ ಶೋ ಮಾದರಿ ಕ್ಷಣಕ್ಕೊಂದು ತಿರುವು ಸಿಗುತ್ತಿದ್ದು, ಇಡೀ ಪ್ರಸಂಗ ಗೊಂದಲಮಯವಾಗಿದೆ. ಇವತ್ತು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಮಧ್ಯಸ್ಥಿಕೆ ವಹಿಸಿ, ತಪ್ಪು ಸರಿಪಡಿಸಿಕೊಳ್ಳಲು ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ಕೂಡ ಕೊಟ್ಟಿದ್ದರು.
ಡಿಕೆಶಿ ಸೂಚನೆ ಬೆನ್ನಲ್ಲೇ, ಬೆಂಗಳೂರು ದಕ್ಷಿಣ ಡಿಸಿಯನ್ನು ಭೇಟಿಯಾಗಿದ್ದ ಜಾಲಿವುಡ್ ಸ್ಟುಡಿಯೋಸ್ ಆಡಳಿತ ಮಂಡಳಿ, 10 ದಿನಗಳ ಕಾಲಾವಕಾಶ ನೀಡುವಂತೆ ಪರಿಪರಿಯಾಗಿ ಬೇಡಿಕೊಂಡಿತ್ತು. ಇದರ ಬೆನ್ನಲ್ಲೇ ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್, ಕೋರ್ಟ್ ಅಫಿಡವಿಟ್ ಸಲ್ಲಿಕೆ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಪಡೆದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ವರ್ಗಾವಣೆ ಮಾಡಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಜಾಲಿವುಡ್ ಸ್ಟುಡಿಯೋಸ್ ಮೇಲಿನ ಹಳೆ ಆರೋಪದ ಅರ್ಜಿ ನಾಳೆ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಮಾಲಿನ್ಯ ನಿಯಂತ್ರಣ ಮಂಡಳಿಗೂ ನಾಳೆ ಜಾಲಿವುಡ್ ಅರ್ಜಿ ಸಲ್ಲಿಸಲಿದ್ದು, 10ರಿಂದ 15 ದಿನಗಳ ತಾತ್ಕಾಲಿಕ ರಿಲೀಫ್ ನೀಡೋ ಸಾಧ್ಯತೆ ಇದೆ. ಆದ್ರೆ, ಈಗಾಗಲೇ ನಮಗೆ ಜಿಲ್ಲಾಡಳಿತದಿಂದ ರಿಲೀಫ್ ಸಿಕ್ಕಿದೆ ಅಂತ ಜಾಲಿವುಡ್ ಪರ ವಕೀಲರು ಹೇಳಿದ್ದಾರೆ. ಆದ್ರೆ, ಇದನ್ನು ನಿರಾಕರಿಸಿರೋ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರ ಸ್ವಾಮಿ, ಪ್ರಕರಣ ಕೋರ್ಟ್‌ನಲ್ಲಿದೆ. ಮಾನವೀಯತೆ ದೃಷ್ಟಿಯಿಂದ ಏನಾದ್ರೂ ಮಾಡಬಹುದು ಅಂದಿದ್ದಾರೆ.
ಜಿಲ್ಲಾಡಳಿತಕ್ಕೆ ಜಾಲಿವುಡ್ ಕೊಟ್ಟ ಅರ್ಜಿಯಲ್ಲಿ ಏನಿದೆ..?
* ಜಾಲಿವುಡ್ ಸ್ಟುಡಿಯೋದಲ್ಲಿ 400ಕ್ಕೂ ಕಾರ್ಮಿಕರಿದ್ದಾರೆ
* ಬಿಗ್‌ಬಾಸ್ ರಿಯಾಲಿಟಿ ಶೋ ಕೂಡ ನಡೆಯುತ್ತಿದೆ
* ಏಕಾಏಕಿ ಬಂದ್ ಮಾಡಿದ್ರೆ ಕಾರ್ಮಿಕರಿಗೆ ಕುತ್ತು
* ತಮ್ಮಿಂದ ತಪ್ಪಾಗಿದೆ.. ತಪ್ಪು ಸರಿಪಡಿಸಿಕೊಳ್ಳಲು ಕಾಲಾವಕಾಶ ನೀಡಿ
* 10 ದಿನಗಳ ಸಮಯಾವಕಾಶ ಕೊಟ್ಟರೆ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ
ರಾಮನಗರ ಜಿಲ್ಲಾಧಿಕಾರಿಯ ನಿಲುವೇನು..?
* ಜಾಲಿವುಡ್ ಸ್ಟುಡಿಯೋ 10 ದಿನಗಳ ಕಾಲಾವಕಾಶ ಕೇಳಿದೆ
* ತಪ್ಪು ಸರಿಪಡಿಸಿಕೊಳ್ಳಲು ಕಾಲಾವಕಾಶ ಕೇಳಿದ್ದಾರೆ
* ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ವರ್ಗಾಯಿಸಿದ್ದೇವೆ
* ಮಂಡಳಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ
ಮಾಲಿನ್ಯ ನಿಯಂತ್ರಣ ಮಂಡಳಿ ಹೇಳೋದೇನು…?
* ಈ ಕೇಸ್ ಕೋರ್ಟಿನಲ್ಲಿದೆ; 10 ದಿನಗಳ ಕಾಲಾವಕಾಶ ನಿರ್ಧರಿಸಿಲ್ಲ
* ಬಿಗ್‌ಬಾಸ್‌ಗೂ ಸ್ಟುಡಿಯೋಗೆ ಸಂಬAಧವಿಲ್ಲ
* ಅಮ್ಯೂಸ್‌ಮೆಂಟ್ ಪಾರ್ಕ್‌ನಿಂದ ಸಮಸ್ಯೆ ಉಂಟಾಗಿದೆ
* ಏಕಾಏಕಿ ಮುಚ್ಚಿಲ್ಲ; 3 ಬಾರಿ ನೋಟಿಸ್ ಕೊಟ್ಟಿದ್ದೇವೆ
* ಅಫಿಡವಿಟ್ ಜೊತೆ ಮನವಿ ಕೊಟ್ಟರೆ ಪರಿಶೀಲನೆ ನಡೆಸಬಹುದು
* ಕ್ಲೋಸರ್ ಆದೇಶ ಶಾಶ್ವತ, ತಾತ್ಕಾಲಿಕವೂ ಅಲ್ಲ.
* ನಿಯಮ ಉಲ್ಲಂಘನಗೆ ದಂಡ ಕಟ್ಟಬೇಕಾಗುತ್ತದೆ.
ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ಸೀಸನ್ 12 ಕಾರ್ಯಕ್ರಮ ಎರಡನೇ ವಾರಕ್ಕೆ ಕಾಲಿಟ್ಟಿತ್ತು. ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಆಟ ಶುರು ಮಾಡುವ ಹೊತ್ತಿಗೆ ಬಿಗ್ ಬಾಸ್‌ಗೆ ಶಾಕ್ ಕೊಟ್ಟಿದ್ದಾರೆ ಅಧಿಕಾರಿಗಳು. ಹೀಗಾಗಿ ಜಾಲಿವುಡ್ ಸ್ಟುಡಿಯೋ ಮ್ಯಾನೇಜ್ಮೆಂಟ್ ವಿರುದ್ಧ ಬಿಗ್ ಬಾಸ್ ತಂಡ ಕೆಂಡಾಮಂಡಲವಾಗಿದೆ.
ಮಾಲಿನ್ಯ ನಿಯಂತ್ರಣ ಮಂಡಳಿ ನೋಟೀಸ್ ಹಾಗೂ ಇತರೆ ವಿಚಾರಗಳನ್ನು ಗೌಪ್ಯವಾಗಿಟ್ಟಿರುವ ಜಾಲಿವುಡ್ ಆಡಳಿತ ಮಂಡಳಿ, ಎಲ್ಲಾ ಅನುಮತಿ ಇದೆ ಅಂತ ಸುಳ್ಳುಗಳನ್ನ ಹೇಳಿತ್ತು. ಇದರಿಂದ ಜಾಲಿವುಡ್ ತಂಡದ ವಿರುದ್ಧ ಬಿಗ್ ಬಾಸ್ ಆಡಳಿತ ಮಂಡಳಿ ಹರಿಹಾಯ್ದಿದೆ. ನಿನ್ನೆ ಜಾಲಿವುಡ್‌ಗೆ ಪೊಲೀಸ್ರು ಬರುವವರೆಗೂ ಗೌಪ್ಯತೆ ಕಾಪಾಡಿದ್ದ ಜಾಲಿವುಡ್, ಜಾಲಿವುಡ್ ಮ್ಯಾನೇಜ್ಮೆಂಟ್ ಎಡವಟ್ಟಿನಿಂದ 2 ದಿನ ಬಿಗ್ ಬಾಸ್ ಚಿತ್ರೀಕರಣ ಸ್ಥಗಿತವಾಗಿದೆ.
ಈ ಎಲ್ಲಾ ಕಾರಣಗಳಿಂದ ಬಿಗ್ ಬಾಸ್ ಮುಂಬರುವ ಎಪಿಸೋಡ್ ಗಳಿಗೆ ತೊಂದರೆಯಾಗಿದೆ. ಜಾಲಿವುಡ್ ಮ್ಯಾನೇಜ್ಮೆಂಟ್ ವಿರುದ್ಧ ಬಿಗ್ ಬಾಸ್ ಗರಂ ಆಗಿದೆ. ಜಾಲಿವುಡ್ ಮ್ಯಾನೇಜ್ಮೆಂಟ್ ವಿರುದ್ಧ ಲೀಗಲ್ ಆಕ್ಷನ್ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಯಿತ್ತಿದೆ. ಸ್ಪರ್ಧಿಗಳನ್ನ ಬಿಗ್ ಬಾಸ್ ಮನೆಯಿಂದ ಹೊರ ತಂದಿರುವ ಕಾರಣ, ಎರಡು ವಾರದ ಪರಿಶ್ರಮ ವ್ಯರ್ಥವೆಂದು ಅಸಮಧಾನ ಹೊರಹಾಕಿದೆ ಬಿಗ್ ಬಾಸ್ ಆಯೋಜನಾ ಮಂಡಳಿ. ಮುಂದಿನ ದಿನಗಳಲ್ಲಿ ಏನಾಗುತ್ತೋ ಕಾದು ನೋಡಬೇಕು.
ಬೆಂಗಳೂರು: ಬಿಗ್ ಬಾಸ್ (Bigg Boss) ಕಾರ್ಯಕ್ರಮದ ಮನೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಬೀಗ ಹಾಕಿಸಿದ ಪ್ರಕರಣ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಮಂಡಳಿಯ ನಡೆಗೆ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಛಲವಾದಿ ನಾರಾಯಣ ಸ್ವಾಮಿ, ಬೀಗ ಹಾಕಲು ಅದೇನು ಫ್ಯಾಕ್ಟರಿಯೇ? ಮಾಲಿನ್ಯ ನಿಯಂತ್ರಣ ಮಂಡಳಿಗೂ ಇದಕ್ಕೂ ಏನು ಸಂಬಂಧ? ಇಲ್ಲಿ ಅನಾರೋಗ್ಯಕರ ಹೊಗೆ ಸೂಸುವ ಕೆಲಸ ನಡೆದಿದೆಯೇ? ಅಂಥ ಫ್ಯಾಕ್ಟರಿಗಳನ್ನು ಇವರು ಮುಚ್ಚಿಲ್ಲ, ಅಲ್ಲಿ ಮಾತ್ರ ಹೊಂದಾಣಿಕೆ. ಇಲ್ಲೇನಿದೆ? ಇದು ಒಂದು ಮನೆಯ ಚಟುವಟಿಕೆ. ಇನ್ನು ಮುಂದೆ ಮನೆ ಮನೆಗೂ ಮಾಲಿನ್ಯ ನಿಯಂತ್ರಣ ಮಂಡಳಿ ಸರ್ಟಿಫಿಕೇಟ್ ಬೇಕೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಇರದಂತೆ ನೋಡಿಕೊಳ್ಳಿ- ಛಲವಾದಿ ನಾರಾಯಣಸ್ವಾಮಿ
ಈ ಮೂಲಕ ಸರ್ಕಾರವು ಸುದೀಪ್ ಅವರನ್ನು ಟಾರ್ಗೆಟ್ ಮಾಡಿದೆ. ರಾಜಣ್ಣ, ನಾಗೇಂದ್ರ ಅವರನ್ನು ಟಾರ್ಗೆಟ್ ಮಾಡಿ ಆಗಿದೆ. ಈಗ ಸುದೀಪ್ ಅವರನ್ನು ಟಾರ್ಗೆಟ್ ಮಾಡಿದ್ದಾರೆ ಎಂದರೆ ಯಾರನ್ನು ಗುರಿ ಮಾಡಿದ್ದಾರೆಂದು ತಿಳಿದುಕೊಳ್ಳಿ. ಇದು ಜನಾಂಗೀಯ ಟಾರ್ಗೆಟ್ ಆಗುತ್ತದೆ. ಎಚ್ಚರದಿಂದ ಇರುವುದು ಒಳ್ಳೆಯದು. ಜನ ಇದನ್ನು ಸಹಿಸುವುದಿಲ್ಲ. ನಟ್ ಬೋಲ್ಟ್ ನೀವು ಯಾರಿಗೆ ಟೈಟ್ ಮಾಡಲು ಹೊರಟಿದ್ದೀರೋ ಅವರೆಲ್ಲ ಸೇರಿ ಸರ್ಕಾರದ ನಟ್ ಮತ್ತು ಬೋಲ್ಟ್ ಟೈಟ್ ಮಾಡುವ ಕಾಲ ಹತ್ತಿರ ಬಂದಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಗ್ ಬಾಸ್‌ಗೆ 10 ದಿನ ಕಾಲಾವಕಾಶ; ನಮಗೆ ಯಾವುದೇ ರೀತಿ ಮನವಿ ಬಂದಿಲ್ಲ: ನರೇಂದ್ರಸ್ವಾಮಿ
– ಹೈಕೋರ್ಟ್‌ನಲ್ಲಿ ಅರ್ಜಿ ಹಿಂದಕ್ಕೆ ಪಡೆಯಲಿರುವ ಜಾಲಿವುಡ್
ಬೆಂಗಳೂರು: ಬಿಗ್‌ಬಾಸ್‌ಗೆ (Bigg Boss) ಬೆಂಗಳೂರು ದಕ್ಷಿಣ ಜಿಲ್ಲಾಡಳಿತದಿಂದ ಬಿಗ್ ರಿಲೀಫ್ ಸಿಕ್ಕಿದೆ. ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಗೆ (Jollywood Studios and Adventures) ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಯವರು ಸಮಸ್ಯೆ ಇತ್ಯರ್ಥ್ಯಕ್ಕೆ 10 ದಿನಗಳ ತಾತ್ಕಾಲಿಕ ಕಾಲಾವಕಾಶ ನೀಡಿದ್ದಾರೆ.
ಅ.6 ರಂದು ನೋಟಿಸ್ ನೀಡಿ ಅ.7 ರಂದು ಬೀಗ ಹಾಕಿದ್ದನ್ನು ಪ್ರಶ್ನಿಸಿ ನಾವು ಹೈಕೋರ್ಟ್‌ಗೆ ರಿಟ್ ಅರ್ಜಿ ಹಾಕಿದ್ದೆವು. ಈಗ ಜಿಲ್ಲಾಡಳಿತ 10 ದಿನಗಳ ಕಾಲಾವಕಾಶ ನೀಡಿದ್ದರಿಂದ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹಿಂದಕ್ಕೆ ಪಡೆಯುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಬಿಗ್‌ಬಾಸ್ ಮನೆಗೆ ಬೀಗ; ಸುದೀಪ್‌ಗೂ ಡಿಕೆಶಿಗೂ ತಂದಿಡೋದು ಬೇಡ: ಶಾಸಕ ಬಾಲಕೃಷ್ಣ
ಇನ್ನು ಬೆಂಗಳೂರು ದಕ್ಷಿಣ ಜಿಲ್ಲಾಡಳಿತದಿಂದ ಯಾವುದೇ ಆದೇಶ ಪ್ರಕಟವಾಗಿಲ್ಲ. ಅಧಿಕೃತ ಆದೇಶ ಪ್ರಕಟಗೊಂಡ ಬಳಿಕ ಎಷ್ಟು ದಿನಗಳವರೆಗೆ ತಾತ್ಕಾಲಿಕ ಕಾಲಾವಕಾಶ ನೀಡಿದ್ದಾರೆ ಎನ್ನುವುದು ತಿಳಿಯಲಿದೆ.
ಬಿಗ್ ಬಾಸ್ (Bigg Boss) ಮನೆಗೆ ಬೀಗ ಜಡಿದ ಬೆನ್ನಲ್ಲೇ ಜಾಲಿವುಡ್ ಸ್ಟುಡಿಯೋ(ವೇಲ್ಸ್ ಸ್ಟುಡಿಯೋ ಆಂಡ್ ಎಂಟರ್‌ಟೈನ್ಮೆಂಟ್ ಪ್ರೈ. ಲಿ.) ಇಂದು ಹೈಕೋರ್ಟ್‌ಗೆ (High Court) ತುರ್ತು ಅರ್ಜಿ ಸಲ್ಲಿಸಿತ್ತು. ಕೋರ್ಟ್ ಈ ಅರ್ಜಿಯನ್ನು ಪುರಸ್ಕರಿಸಿದ್ದು ನ್ಯಾ.ಸೂರಜ್ ಗೋವಿಂದರಾಜ್ ಅವರ ಪೀಠದಲ್ಲಿ ಮಧ್ಯಾಹ್ನ 2:30ಕ್ಕೆ ವಿಚಾರಣೆ ನಿಗದಿಯಾಗಿದೆ.
ಬಿಗ್ ಬಾಸ್ ಕಾರ್ಯಕ್ರಮ ಶುರುವಾಗುವ ಸಮಯದಲ್ಲೇ ನಮ್ಮ ಅಹವಾಲು ಆಲಿಸದೇ ತರಾತುರಿಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 2 ಸಾವಿರ ಮಂದಿ ನೇರವಾಗಿ ಅಥವಾ ಪರೋಕ್ಷವಾಗಿ ತೊಡಗಿಸಿಕೊಂಡಿದ್ದಾರೆ. ವ್ಯವಹಾರಕ್ಕೆ ಹಾನಿ ಮಾಡುವ ಉದ್ದೇಶದಿಂದಲೇ ಈ ಆದೇಶ ಹೊರಡಿಸಲಾಗಿದೆ. ಹೀಗಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶಕ್ಕೆ ತಡೆ ನೀಡಬೇಕು. ಅಷ್ಟೇ ಅಲ್ಲದೇ ಬೇರೆ ಯಾವುದೇ ಸಂಸ್ಥೆ ಹೊರಡಿಸುವ ಆದೇಶಕ್ಕೂ ತಡೆ ನೀಡಬೇಕೆಂದು ಕೋರಿ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.
ಬೆಂಗಳೂರು: ಬಿಗ್ ಬಾಸ್ ಮನೆಗೆ ಬಿಗ ಜಡಿದ ವಿಚಾರದಲ್ಲಿ ಡಿಸಿಎಂ ಡಿಕೆಶಿ ಸಾಫ್ಟ್ ಕಾರ್ನರ್ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ, ಮಾಲಿನ್ಯ ಇಲಾಖೆಯ ಜೊತೆ ಮಾತನಾಡಿದ್ದೇನೆ. ಏನಾದರೂ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಕೊಡಿ ಎಂದು ಸೂಚಿಸಿರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಿಗ್‌ಬಾಸ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾವು ವಿಚಾರಣೆ ನಡೆಸಿದ್ದೇನೆ. ಜನರಿಗೆ ಮನರಂಜನೆ ನೀಡಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿರುತ್ತಾರೆ. ಏನಾದ್ರೂ ತಪ್ಪಾಗಿದ್ದರೂ ಅವಕಾಶ ಕೊಡಲು ಹೇಳಿದ್ದೇನೆ ಎಂದು ತಿಳಿಸಿದರು. ಇದನ್ನೂಓದಿ: ರೆಸಾರ್ಟ್‌ನಲ್ಲೂ ಬಿಗ್‌ಬಾಸ್ ನಿಯಮ ಅನ್ವಯ!
ಜೆಡಿಎಸ್‌ನವರ ನಟ್ಟು ಬೋಲ್ಟ್ ಆರೋಪಕ್ಕೆ ಮಾತನಾಡಿದ ಅವರು, ಅವರಿಗೆ ಶಕ್ತಿ ಬೇಕು ಎಂದಾಗ ನನ್ನ ಹೆಸರು ತೆಗೆದುಕೊಳ್ಳುತ್ತಾರೆ. ಜಾಲಿವುಡ್ ಸ್ಟುಡಿಯೋ ಉದ್ಘಾಟನೆಯನ್ನು ನಾನೇ ಮಾಡಿದ್ದೇನೆ. ಕುಮಾರಸ್ವಾಮಿಯಾದ್ರೂ ಆರೋಪ ಮಾಡಲಿ. ಮೇಲೆ ಇರುವವರನ್ನು ಕರಕೊಂಡು ಬಂದರೂ ನಾನು ತಲೆಕೆಡೆಸಿಕೊಳ್ಳುವುದಿಲ್ಲ ಎಂದರು. ಇದನ್ನೂ ಓದಿ: ಕಲಾವಿದರ ಮೇಲೆ ಸೇಡು ತೀರಿಸಿದ ನಟ್ಟು ಬೋಲ್ಟ್ ಮಿನಿಸ್ಟರ್- ಜೆಡಿಎಸ್ ಕಿಡಿ
ಸ್ಪರ್ಧಿಗಳಿಗೆ ಜಾಲಿವುಡ್ ಸ್ಟುಡಿಯೋ (Jollywood Studios) ಮಾಲಿನ್ಯ ನಿಯಮ ಪಾಲನೆ ಮಾಡದ್ದಕ್ಕೆ ಈ ರೆಸಾರ್ಟ್‌ಗ ನಿಮ್ಮನ್ನು ಕರೆತರಲಾಗಿದೆ ಎಂಬ ವಿಚಾರವನ್ನು ಆಯೋಜಕರು ಸ್ಪರ್ಧಿಗಳಿಗೆ ತಿಳಿಸಿದ್ದಾರೆ. ಹೀಗಾಗಿ ಮರಳಿ ಶೋ ನಡೆಯುವವರೆಗೂ ನೀವು ನಮ್ಮ ಸುಪರ್ದಿಯಲ್ಲೇ ಇರಬೇಕಾಗುತ್ತದೆ ಎಂದು ತಿಳಿಸಿದ್ದು ಸ್ಪರ್ಧಿಗಳು ಒಪ್ಪಿಗೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ ರೆಸಾರ್ಟ್ ಒಳಗಡೆಯೇ ಸ್ಪರ್ಧಿಗಳು ವಾಕಿಂಗ್, ಜಾಗಿಂಗ್, ಬ್ರೇಕ್ ಫಾಸ್ಟ್ ಮಾಡಿದ್ದಾರೆ. ಬಿಗ್‌ಬಾಸ್ ಮನೆಯಂತೆ ರೆಸಾರ್ಟ್‌ನಲ್ಲೂ ಕುಟುಂಬಸ್ಥರು, ಸ್ನೇಹಿತರ ಸಂಪರ್ಕಕ್ಕೆ ಸ್ಪರ್ಧಿಗಳು ಬರುವಂತಿಲ್ಲ. ಆಯೋಜಕರ ತಂಡದವರಿಗೆ ಮಾತ್ರ ಸ್ಪರ್ಧಿಗಳ ಭೇಟಿಗೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಬೀಗ – ರಕ್ಷಿತಾ ಡೈಲಾಗ್ ವೈರಲ್
ಯಾರ ಜೊತೆಯೂ ಸಂಪರ್ಕ ಇಟ್ಟುಕೊಳ್ಳುವಂತಿಲ್ಲ. ರೆಸಾರ್ಟ್ ಸಿಬ್ಬಂದಿಯ ಜೊತೆಯೂ ಮಾತುಕತೆ ಆಡುವಂತಿಲ್ಲ, ಊಟ, ತಿಂಡಿ ಇತ್ಯಾದಿಗಳನ್ನು ಕೋಣೆಗೆ ಕಳುಹಿಸಲಾಗುತ್ತಿದೆ ಎಂದು ಆಯೋಜಕರು ಸ್ಪರ್ಧಿಗಳಿಗೆ ಸೂಚಿಸಿದ್ದಾರೆ.
ಸ್ಪರ್ಧಿಗಳು ಎಲ್ಲಿಯವರೆಗೆ ರೆಸಾರ್ಟ್‌ನಲ್ಲಿ ಇರುತ್ತಾರೆ ಎನ್ನುವುದು ಖಚಿತವಾಗಿಲ್ಲ. ಬಿಗ್ ಬಾಸ್ ಶೋ ನಡೆಸಲು ಕೋರ್ಟ್ ಅನುಮತಿ ನೀಡಬಹುದು ಎಂಬ ವಿಶ್ವಾಸದಲ್ಲಿ ಆಯೋಜಕರು ಇದ್ದಾರೆ. ಕೋರ್ಟ್ ಪ್ರಕ್ರಿಯೆ ತಡವಾದರೆ ಸ್ಪರ್ಧಿಗಳನ್ನು ಖಾಸಗಿ ಹೋಟೆಲಿಗೆ ಶಿಫ್ಟ್ ಮಾಡಲು ವಾಹಿನಿ ಸಿದ್ಧತೆ ನಡೆಸಿದೆ ಎನ್ನಲಾಗುತ್ತಿದೆ.