Tag: ಜಿಎಸ್‌ಡಿಪಿ

  • ನಮ್ಮದು ಜನಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಬಜೆಟ್: ಬೊಮ್ಮಾಯಿ

    ನಮ್ಮದು ಜನಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಬಜೆಟ್: ಬೊಮ್ಮಾಯಿ

    ಬೆಂಗಳೂರು: ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ, ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯ (Karnataka Budget 2023) ಮಂಡಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bomma) ತಿಳಿಸಿದರು.

    ವಿಧಾನಸಭೆಯಲ್ಲಿ (Assembly) ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ, ಆಯವ್ಯಯ ಎಂದರೆ ರಾಜ್ಯದ ಹಣಕಾಸಿನ ಸ್ಥಿತಿ. ಜನರ ಆಶೋತ್ತರಗಳನ್ನು ಈಡೇರಿಸುವ ಯೋಜನೆಗಳು, ಹಣಕಾಸಿನ ನಿರ್ವಹಣೆಯ ದಿಕ್ಸೂಚಿಯನ್ನು ತೋರಿಸುವ ಅಂದಾಜು. ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದರೆ, ರಾಜ್ಯದ ಆದಾಯ ಹೆಚ್ಚುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಗೃಹಿಣಿ ಶಕ್ತಿ ಯೋಜನೆಯ ಮೊತ್ತ ಸಾವಿರ ರೂ.ಗಳಿಗೆ ಹೆಚ್ಚಳ: ಬೊಮ್ಮಾಯಿ

    ಬಜೆಟ್ ಗಾತ್ರ ಹೆಚ್ಚಳ ಆರ್ಥಿಕ ಪ್ರಗತಿಯ ಸಂಕೇತ: 2022-23ರಲ್ಲಿ 14,699 ಕೋಟಿ ವಿತ್ತೀಯ ಕೊರತೆ ಆಗಬಹುದೆಂದು ಅಂದಾಜಿಸಲಾಗಿತ್ತು. ಆದರೆ ಜವರಿವರೆಗೆ 5,996 ಕೋಟಿ ರೂ.ಗೆ ಕಡಿಮೆಗೊಳಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಆದಾಯ ಹೆಚ್ಚಳ ಸಾಧಿಸುವ ಸಾಧ್ಯತೆ ಇದೆ. ಕರ್ನಾಟಕ ಆರ್ಥಿಕ ನಿರ್ವಹಣೆಯಲ್ಲಿ ಕ್ರಮಬದ್ಧತೆ ಸಾಧಿಸಿದೆ. ಕೋವಿಡ್ (Covid 19) ನಂತರದ ವರ್ಷದಲ್ಲಿ ರಾಜ್ಯದ ಆರ್ಥಿಕತೆ ಆದಾಯ ಹೆಚ್ಚಳವಾಗುತ್ತಿರುವುದು, ರಾಜ್ಯದ ಅಂತರ್ಗತವಾದ ಆರ್ಥಿಕ ಶಕ್ತಿ, ಜನರ ಪರಿಶ್ರಮದಿಂದ ಸಾಧ್ಯವಾಗಿರುವ ಕಾರಣ, ರಾಜ್ಯದ ಜನರನ್ನ ಅಭಿನಂದಿಸುತ್ತೇನೆ. ಈ ಬಾರಿಯ 3.9 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಲಾಗಿದೆ. ಕಳೆದ ಆಯವ್ಯಯಕ್ಕೆ ಹೋಲಿಸಿದರೆ ಶೇ.16 ರಷ್ಟು ಬಜೆಟ್ ಗಾತ್ರ ಹೆಚ್ಚಾಗಿದೆ. ಇದು ರಾಜ್ಯ ಆರ್ಥಿಕ ಪ್ರಗತಿಯ ವೇಗ ಉನ್ನತ ಮಟ್ಟದಲ್ಲಾಗುತ್ತಿರುವುದನ್ನು ನಿರೂಪಿಸುತ್ತದೆ ಎಂದು ವಿವರಿಸಿದರು.

    402 ಕೋಟಿ ರೂ. ಆದಾಯ ಹೆಚ್ಚಳ: ಕೇಂದ್ರದ ತೆರಿಗೆಯಲ್ಲಿ ರಾಜ್ಯದ ತೆರಿಗೆ ಪಾಲು 37252 ಕೋಟಿ ರೂ. ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ (ಕಳೆದ ಸಾಲಿಗಿಂತ ಶೇ. 25 ರಷ್ಟು ಹೆಚ್ಚಿನ ಗುರಿ). ಕೇಂದ್ರ ಸರ್ಕಾರದಿಂದ ಡಿಬಿಟಿ ಸೇರಿದಂತೆ ರಾಜ್ಯಕ್ಕೆ ಅನುದಾನ ಹೆಚ್ಚಾಗಿದೆ. 2023-24ರಲ್ಲಿ ಕರ್ನಾಟಕ ರಾಜ್ಯ 402 ಕೋಟಿ ಆದಾಯ ಹೆಚ್ಚಳವನ್ನು (Revenue Surplus) ಸಾಧಿಸಿರುವುದು, ರಾಜ್ಯದ ಆರ್ಥಿಕ ನಿರ್ವಹಣೆಯ ಪ್ರತಿಬಿಂಬವಾಗಿದೆ. ರಾಜಸ್ಥಾನ ಹಾಗೂ ಕೇರಳ ರಾಜ್ಯಗಳು ಆದಾಯ ಕೊರತೆಯನ್ನ (Revenue Deficit) ಎತ್ತಿ ತೋರಿಸುತ್ತಿವೆ ಎಂದರು. ಇದನ್ನೂ ಓದಿ: ಗೆಳೆಯರನ್ನ ಸೆಕ್ಸ್‌ಗಾಗಿ ಪೀಡಿಸುತ್ತಿದ್ದ ಮೂರು ಮಕ್ಕಳ ತಾಯಿ- ಕೊಲೆಗೆ ಸ್ಕೆಚ್ ಹಾಕಿದ್ದೇ ರೋಚಕ?

    ಬಂಡವಾಳ ವೆಚ್ಚಕ್ಕಾಗಿ ಸಾಲದ ಬಳಕೆ: ಒಟ್ಟು ಜಿಎಸ್‌ಡಿಪಿಯ ಶೇ.25 ರೊಳಗೆ ರಾಜ್ಯದ ಒಟ್ಟು ಸಾಲವಿರಬೇಕು ಎಂಬ ನಿಯಮವಿದೆ. ಈ ನಿಯಮವನ್ನು ಪಾಲಿಸಲಾಗಿರುವುದರಿಂದ ಈ ಬಾರಿಯ ಬಜೆಟ್ ಸರ್ಪ್ಲಸ್ ಬಜೆಟ್ ಆಗಿದೆ. ಕೋವಿಡ್‌ಗೂ ಮುನ್ನ ಹಾಗೂ ನಂತರದ ಆರ್ಥಿಕತೆ ಹೋಲಿಸುವುದು ಸೂಕ್ತವಲ್ಲ. ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಹಿಂಜರಿಕೆಯಾಯಿತು. ನನ್ನ ಅವಧಿಯಲ್ಲಿ ಹೆಚ್ಚಿನ ಸಾಲ ಪಡೆಯುವ ಅವಕಾಶವಿದ್ದರೂ, ಸಾಲದ ಮೊತ್ತವನ್ನು ಕೇವಲ 67 ಸಾವಿರ ಕೋಟಿ ಸೀಮಿತಗೊಳಿಸಿದ್ದೇನೆ. ಈ ಸಾಲವನ್ನು ಕೇವಲ ಬಂಡವಾಳ ವೆಚ್ಚಗಳಿಗೆ ಬಳಕೆಯಾಗಿದೆ ಎಂದು ಮಾಹಿತಿ ನೀಡಿದರು.

    ಸಾಲ ಹೆಚ್ಚಾಗಿದೆ ಎನ್ನೋದು ಸುಳ್ಳು: ರಾಜ್ಯ ಸರ್ಕಾರ 65 ವರ್ಷಗಳಲ್ಲಿ ಒಟ್ಟು 1,30,000 ಕೋಟಿ ಸಾಲ ಪಡೆದಿರಬಹುದು. ಆದರೆ ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರ ಕಾಲದಲ್ಲಿ ಕೇವಲ 5 ವರ್ಷದ ಅವಧಿಯಲ್ಲಿ 1,30,000 ಕೋಟಿ ಸಾಲ ತೆಗೆದುಕೊಂಡರು. ಅವರ ಅವಧಿಯಲ್ಲಿ ಸಾಲ ಪಡೆಯಬಹುದಾದ ಗರಿಷ್ಟ ಮಿತಿಯಲ್ಲಿ ಶೇ. 82.3 ರಷ್ಟು ತೆಗೆದುಕೊಂಡರೆ, ನಮ್ಮ ಸರ್ಕಾರ ಕೇವಲ ಶೇ.71 ರಷ್ಟು ಅವಕಾಶ ಬಳಸಿಕೊಂಡಿದೆ. 2020-21 ರಲ್ಲಿ ಕೇಂದ್ರ ಸರ್ಕಾರದಿಂದ ಶೇ.5 ರಷ್ಟು ಮಾತ್ರ ಸಾಲ ಪಡೆಯಲು ಅವಕಾಶ ಕಲ್ಪಿಸಿದ್ದರೂ, ನಮ್ಮ ಸರ್ಕಾರ ಕೇವಲ ಶೇ.3 ರಷ್ಟನ್ನು ದಾಟಿಲ್ಲ. ಆದ್ದರಿಂದ ನಮ್ಮ ಅವಧಿಯಲ್ಲಿ ಬಹಳ ಸಾಲ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಸಾಲವನ್ನು ತೀರಿಸುವ ಕ್ಷಮತೆ ನಮ್ಮ ಸರ್ಕಾರಕ್ಕಿದೆ ಎಂದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • BJP ನೀತಿಗಳಿಂದ ಭಾರತದಲ್ಲೂ ತಾಲಿಬಾನ್‌ನಂಥ ಭಯಾನಕ ಪರಿಸ್ಥಿತಿ ಎದುರಾಗುತ್ತೆ: KCR

    BJP ನೀತಿಗಳಿಂದ ಭಾರತದಲ್ಲೂ ತಾಲಿಬಾನ್‌ನಂಥ ಭಯಾನಕ ಪರಿಸ್ಥಿತಿ ಎದುರಾಗುತ್ತೆ: KCR

    ಹೈದರಾಬಾದ್: ಬಿಜೆಪಿ ಸರ್ಕಾರ (BJP Government) ಧಾರ್ಮಿಕ ಮತ್ತು ಜಾತಿ ಮತಾಂಧತೆ ಉತ್ತೇಜಿಸಿದರೆ, ಸಮುದಾಯಗಳನ್ನ ಒಡೆಯುವ ಕೆಲಸ ಮಾಡಿದ್ರೆ ಮುಂದೆ ಭಾರತದಲ್ಲೂ ತಾಲಿಬಾನ್ (Taliban) ನಂತಹ ಭಯಾನಕ ಪರಿಸ್ಥಿತಿ ಸೃಷ್ಟಿಯಾಗುತ್ತದೆ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ (K Chandrasekhar Rao) ಎಚ್ಚರಿಕೆ ನೀಡಿದ್ದಾರೆ.

    ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನಾ ಕಾರ್ಯಕ್ರಮದ ವೇಳೆ ಮಾತನಾಡಿರುವ ಅವರು, ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ದ್ವೇಷದಿಂದ ದೇಶದ ಜೀವನಾಡಿಯೇ ಸುಟ್ಟು ಭಸ್ಮವಾಗುವ ಸಂದರ್ಭ ಎದುರಾಗಲಿದೆ. ಆದ್ದರಿಂದ ವಿಶೇಷವಾಗಿ ಯುವಕರು ಜಾಗೃತರಾಗಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಶನಿವಾರ ಮುಳಬಾಗಿಲು ಶಾಸಕ ಎಚ್.ನಾಗೇಶ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

    2014 ರಲ್ಲಿ ರಾಜ್ಯ ರಚನೆಯ ಸಮಯದಲ್ಲಿ ತೆಲಂಗಾಣದ ರಾಜ್ಯ ಆಂತರಿಕ ಉತ್ಪನ್ನವು (GSDP) 5 ಲಕ್ಷ ಕೋಟಿ ರೂ. ಇತ್ತು. ಇಂದು 11.5 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಆದರೆ ಕೇಂದ್ರ ಸರ್ಕಾರವು ತೆಲಂಗಾಣ ರಾಜ್ಯಕ್ಕೆ ಸರಿಸಮನಾಗಿ ಕಾರ್ಯ ನಿರ್ವಹಿಸದೇ ಇರೋದ್ರಿಂದ ರಾಜ್ಯದ ಜಿಎಸ್‌ಡಿಪಿ ಇಳಿಮುಖವಾಗಿದೆ. ಕೇಂದ್ರದ ಈ ಅಸಮರ್ಥ ನೀತಿಗಳಿಂದಾಗಿ ತೆಲಂಗಾಣ ರಾಜ್ಯವೊಂದರಲ್ಲೇ 3 ಲಕ್ಷ ಕೋಟಿ ನಷ್ಟವಾಗಿದೆ ಎಂದು ಅರ್ಥಶಾಸ್ತ್ರಜ್ಞರು ಅಂಕಿ-ಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ. ಮಾಹಿತಿ ಪ್ರಕಾರ, ಜಿಎಸ್‌ಡಿಪಿ 14.50 ಲಕ್ಷ ಕೋಟಿ ಇರಬೇಕಿತ್ತು. ಆದರೆ 11.50 ಲಕ್ಷ ಕೋಟಿಗೆ ತಲುಪಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ದೇಶದಲ್ಲಿ ಎಲ್ಲ ನಾಗರಿಕರನ್ನು ಸಮಾನವಾಗಿ ನೋಡಿಕೊಳ್ಳುವ ಪಕ್ಷ ಮತ್ತು ಸರ್ಕಾರ ಯಾವಾಗಲೂ ಉತ್ತಮವಾಗಿರುತ್ತೆ. ಆದರೆ ಕೋಮುದ್ವೇಷ, ಜಾತಿವಾದಿಗಳ ರೀತಿಯಲ್ಲಿ ಜನರ ನಡುವೆ ದ್ವೇಷ ಸೃಷ್ಟಿಸೋದು ದೇಶಕ್ಕೆ ನೋವುಂಟು ಮಾಡುತ್ತದೆ ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ಸಂಕ್ರಾಂತಿಗೂ ಇರಲಿದೆ ಮೈ ಕೊರೆವ ಚಳಿ- ಆರೋಗ್ಯದ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ!

    ಭಾರತ ದೇಶವೂ ಇಂತಹ ಗೊಂದಲಗಳನ್ನ ಎದುರಿಸಿದರೆ ನಾವು ತಾಲಿಬಾನ್ ನಂತೆಯೇ ಪರಿಸ್ಥಿತಿ ಎದುರಾಗುತ್ತದೆ. ಆಗ ಹೂಡಿಕೆಗಳನ್ನು ನಿರೀಕ್ಷಿಸಲು ಸಾಧ್ಯವಾ? ಉದ್ಯೋಗಳು ಸೃಷ್ಟಿಯಾಗುತ್ತಾ? ಇರುವ ಉದ್ಯಮಗಳು ಉಳಿಯುತ್ತಾ? ಗಲಭೆಗಳು ಉಂಟಾಗಿ, ಲಾಠಿಚಾರ್ಜ್ ಹಾಗೂ ಗುಂಡಿನ ದಾಳಿ ವಾತಾವರಣ ನಿರ್ಮಾಣ ಅದ್ರೆ ಸಮಾಜ ಹೇಗಿರುತ್ತೆ? ಎಂಬುದನ್ನು ಒಮ್ಮೆ ಯೋಚಿಸಿ. ಇಂದು ದೇಶವನ್ನು ತಪ್ಪುದಾರಿಗೆ ಎಳೆಯುವ ಎಲ್ಲ ದುಷ್ಪ್ರಯತ್ನಗಳು ನಡೆಯುತ್ತಿವೆ. ಇದರಿಂದ ಎಚ್ಚರವಾಗಿರಬೇಕು ಎಂದು ಸಲಹೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆರ್ಥಿಕತೆಯಲ್ಲಿ ವೇಗವಾಗಿ ಬೆಳವಣಿಗೆಯಾಗುತ್ತಿರುವ ಟಾಪ್ 10 ರಾಜ್ಯಗಳು – ಕರ್ನಾಟಕಕ್ಕೆ ಎರಡನೇ ಸ್ಥಾನ

    ಆರ್ಥಿಕತೆಯಲ್ಲಿ ವೇಗವಾಗಿ ಬೆಳವಣಿಗೆಯಾಗುತ್ತಿರುವ ಟಾಪ್ 10 ರಾಜ್ಯಗಳು – ಕರ್ನಾಟಕಕ್ಕೆ ಎರಡನೇ ಸ್ಥಾನ

    ನವದೆಹಲಿ: ಆರ್ಥಿಕತೆಯಲ್ಲಿ ವೇಗವಾಗಿ ಬೆಳವಣಿಗೆಯಾಗುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಗುಜರಾತ್‌(Gujarat) ಮೊದಲ ಸ್ಥಾನವನ್ನು ಪಡೆದರೆ ಕರ್ನಾಟಕ(Karnataka) ಎರಡನೇ ಸ್ಥಾನವನ್ನು ಪಡೆದಿದೆ.

    ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ(RBI) ರಾಜ್ಯದ ಆಂತರಿಕ ಉತ್ಪನ್ನ(GSDP) ಆಧಾರಿಸಿ ಒಂಬತ್ತು ವರ್ಷಗಳ (2012 ಹಣಕಾಸು ವರ್ಷದಿಂದ 2021 ವರೆಗೆ) ಕ್ರೋಢಿಕೃತ ವಾರ್ಷಿಕ ಬೆಳವಣಿಗೆ ದರ(CAGR) ಬಿಡುಗಡೆ ಮಾಡಿದೆ. ಗುಜರಾತ್‌ ಸಿಎಜಿಆರ್ ಶೇ. 8.2 ಇದ್ದರೆ ಕರ್ನಾಟಕದ್ದು ಶೇ.7.3 ಇದೆ. ಇದನ್ನೂ ಓದಿ: ಗುಜರಾತ್ ಆಯ್ತು, ಇಂದಿನಿಂದಲೇ ಕರ್ನಾಟಕ ಚುನಾವಣೆಗೆ ತಯಾರಿ

    2012ರಲ್ಲಿ ಗುಜರಾತ್‌ ಜಿಎಸ್‌ಡಿಪಿ 6.16 ಲಕ್ಷ ಕೋಟಿ ರೂ. ಇದ್ದರೆ 2021ರಲ್ಲಿ ಇದು 12.48 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. 2012ರಲ್ಲಿ ಕರ್ನಾಟಕದ ಜಿಎಸ್‌ಡಿಪಿ 6.06 ಲಕ್ಷ ಕೋಟಿ ರೂ. ಇದ್ದರೆ 2021ರಲ್ಲಿ ಇದು 11.44 ಲಕ್ಷ ಕೋಟಿ ರೂ.ಗೆ ಏರಿಕೆಯಾಗುವ ಮೂಲಕ ಎರಡನೇ ಸ್ಥಾನ ಪಡೆದಿದೆ.

    ಮೂರನೇ ಸ್ಥಾನವನ್ನು ಹರ್ಯಾಣ ಪಡೆದುಕೊಂಡಿದ್ದು 2021ರಲ್ಲಿ 5.36 ಲಕ್ಷ ಕೋಟಿ ರೂ.ಗೆ ಜಿಎಸ್‌ಡಿಪಿ ತಲುಪಿದ್ದು, 2012ರಲ್ಲಿ ಇದು 2.97 ಲಕ್ಷ ಕೋಟಿ ರೂ. ಇತ್ತು.

    ನಾಲ್ಕನೇ ಸ್ಥಾನವನ್ನು ಮಧ್ಯಪ್ರದೇಶ ಪಡೆದುಕೊಂಡರೆ ಆಂಧ್ರಪ್ರದೇಶ ಐದನೇ ಸ್ಥಾನವನ್ನು ಪಡೆದುಕೊಂಡಿದೆ. ತೆಲಂಗಾಣ, ತಮಿಳುನಾಡು, ಒಡಿಶಾ, ದೆಹಲಿ, ಅಸ್ಸಾಂ  ಅನುಕ್ರಮವಾಗಿ ನಂತರದ ಸ್ಥಾನವನ್ನು ಪಡೆದಿದೆ.

    ಕೇರಳ ಶೇ.3.9, ಜಮ್ಮು ಕಾಶ್ಮೀರ ಶೇ.4.1, ಜಾರ್ಖಂಡ್‌ ಶೇ.4.2 ಸಿಎಜಿಆರ್ ಹೊಂದಿದ್ದು ಅತ್ಯಂತ ನಿಧಾನ ಬೆಳವಣಿಗೆಯಾಗುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

    Live Tv
    [brid partner=56869869 player=32851 video=960834 autoplay=true]