Tag: ಜಿತೇಂದ್ರ ಸಿಂಗ್

  • 2027ಕ್ಕೆ ಚಂದ್ರಯಾನ-4, 2026ಕ್ಕೆ ಗಗನಯಾನ: ಜಿತೇಂದ್ರ ಸಿಂಗ್‌

    2027ಕ್ಕೆ ಚಂದ್ರಯಾನ-4, 2026ಕ್ಕೆ ಗಗನಯಾನ: ಜಿತೇಂದ್ರ ಸಿಂಗ್‌

    ನವದೆಹಲಿ: ಚಂದ್ರನ ಮೇಲ್ಮೈನಲ್ಲಿನ ಕಲ್ಲುಗಳನ್ನು ಭೂಮಿಗೆ ಹೊತ್ತು ತರುವ ಚಂದ್ರಯಾನ-4 ಮಿಷನ್‌ (Chandrayaan-4 Space Missions) ಅನ್ನು 2027ರ ವೇಳೆ ಜಾರಿಮಾಡಲಾಗುವುದು ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್‌ (Jitendra Singh) ಹೇಳಿದ್ದಾರೆ.

    ಕಲ್ಲುಗಳ ಮಾದರಿಗಳನ್ನು ಹೊರುವ ಶಕ್ತಿ ಹೊಂದಿರುವ ಎರಡು ಪ್ರತ್ಯೇಕ ರಾಕೆಟ್‌ಗಳನ್ನು ಉಡ್ಡಯನ ಮಾಡಲಾಗುವುದು. ಈ ರಾಕೆಟ್‌ಗಳಲ್ಲಿ ಐದು ವಿವಿಧ ಕಾಂಪೋನೆಂಟ್‌ಗಳು ಇರಲಿವೆ. ಇವುಗಳನ್ನು ಕ್ಷಕೆಯಲ್ಲಿ ಜೋಡಿಸಲಾಗುವುದು ಎಂದಿದ್ದಾರೆ.

    ಅಲ್ಲದೇ ಮುಂದಿನ ವರ್ಷ ಮಾನವರವನ್ನು ಬಾಹ್ಯಾಕಾಶಕ್ಕೆ ಕಳುಹಿಸಿ, ಸುರಕ್ಷಿತವಾಗಿ ವಾಪಸ್‌ ಕರೆಸಿಕೊಳ್ಳುವ ʻಗಗನಯಾನʼ ಮಿಷನ್‌ ಅನ್ನು ಕೂಡ ಜಾರಿ ಮಾಡಲಾಗುವುದು. 2026ರಲ್ಲಿ ʻಸಮುದ್ರಯಾನʼ ಮಿಷನ್‌ ಅನ್ನೂ ಜಾರಿ ಮಾಡಲಿದ್ದೇವೆ. ಸಮುದ್ರದ 6,000 ಮೀಟರ್‌ನಷ್ಟು ಆಳಕ್ಕೆ ಮೂವರು ವಿಜ್ಞಾನಿಗಳು ತೆರಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ʻರೊಬೊಟ್ ವ್ಯೂಮಿತ್ರಾʼವನ್ನು ಗಗನಯಾನಕ್ಕೆ ಕಳುಹಿಸುವ ಮಹತ್ವದ ಕಾರ್ಯ ಇದೇ ವರ್ಷ ನಡೆಯಲಿದೆ. 1969ರಲ್ಲಿ ಇಸ್ರೋ ಸ್ಥಾಪನೆಯಾದರೂ ಇದರ ಮೊದಲ ಉಡ್ಡಯನ ಕೇಂದ್ರವು 1993ರಲ್ಲಿ ಸ್ಥಾಪನೆಯಾಯಿತು. ಇಸ್ರೋ ಸ್ಥಾಪನೆಯಿಂದ 2014ರ ವರೆಗೆ ಭಾರತೀಯ ಬಾಹ್ಯಾಕಾಶ ಕ್ಷೇತ್ರವು ಅಭಿವೃದ್ಧಿ ಹೊಂದಿದ್ದಕ್ಕಿಂತ ಹೆಚ್ಚಿನ ಅಭಿವೃದ್ಧಿಯು ಕಳೆದ 10 ವರ್ಷಗಳಲ್ಲಾಗಿದೆ ಎಂದರು.

  • ಭಾರೀ ಸ್ಫೋಟ: ಒಬ್ಬರು ಸಾವು, 15 ಮಂದಿಗೆ ಗಾಯ

    ಭಾರೀ ಸ್ಫೋಟ: ಒಬ್ಬರು ಸಾವು, 15 ಮಂದಿಗೆ ಗಾಯ

    ಶ್ರೀನಗರ: ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಗೊಂಡು ಒಬ್ಬರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉದಂಪುರದ ಗ್ಯಾರಿಸನ್ ಟೌನ್‍ನಲ್ಲಿ ರಸ್ತೆಬದಿಯಲ್ಲಿ ನಡೆದಿದೆ.

    ಉಧಂಪುರ ಜಿಲ್ಲೆಯ ದನಾಲ್ ಜಾನು ದಲ್ಪಾಡ್‍ನ ಜುಗಲ್ ಮೃತ ವ್ಯಕ್ತಿ. ಪ್ರಾಥಮಿಕ ತನಿಖೆಯ ಪ್ರಖಾರ ಐಇಡಿ ಸ್ಫೋಟ ಎಂದು ಶಂಕಿಸಲಾಗಿದೆ. ಆದರೆ ತಜ್ಞರ ತನಿಖೆಯ ನಂತರ ಸ್ಫೋಟಕ್ಕೆ ನಿಖರ ಕಾರಣವೇನು ಏನು ಎನ್ನುವುದು ತಿಳಿಯುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಹೇಳಿದ್ದಾರೆ.

    ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟದ ನಿಖರವಾದ ಕಾರಣ ಮತ್ತು ಮೂಲವನ್ನು ಕಂಡುಹಿಡಿಯಲು ಈ ವಿಷಯವನ್ನು ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಸದನ ಬೀಗರ ಮನೆಯಲ್ಲ – ಸಚಿವರ ಗೈರಿಗೆ ಸಭಾಪತಿಗಳು ಗರಂ

    ಘಟನೆಯ ಕುರಿತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಟ್ವೀಟ್ ಮಾಡಿ, ಉದಮ್‍ಪುರದ ತಹಸೀಲ್ದಾರ್ ಕಚೇರಿ ಬಳಿ ರೆಹ್ರಿ ಸುತ್ತ ಸ್ಫೋಟ ಸಂಭವಿಸಿದೆ. ಒಬ್ಬ ಪ್ರಾಣ ಕಳೆದುಕೊಂಡ, 13 ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಾನು ನಿಮಿಷದಿಂದ ನಿಮಿಷಕ್ಕೆ ಡಿಸಿಯಿಂದ ಮಾಹಿತಿ ಪಡೆಯುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: UPಯಲ್ಲಿ ಮತ ಎಣಿಕೆಗೂ ಮುನ್ನ ಚುನಾವಣಾ ಆಯೋಗಕ್ಕೆ ಎಸ್‌ಪಿ ಪತ್ರ

    ಸಲಾಥಿಯಾ ಚೌಕ್ ಬಳಿ ಒಂದು ಸಣ್ಣ ಉದ್ಯಾನವನವಿದೆ. ಅಲ್ಲಿ ಜನರು ತಮ್ಮ ಹಳ್ಳಿಗಳಿಗೆ ಹೋಗಲು ಮಿನಿಬಸ್‍ಗಳಿಗಾಗಿ ಕಾಯುತ್ತಾರೆ. ಕೆಲವು ಕಿಯೋಸ್ಕ್‍ಗಳ ಬಳಿ ರಸ್ತೆಬದಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ವಕೀಲರು ಹೇಳಿದರು.

  • ಗರ್ಭಿಣಿಯರು, ವಿಕಲಚೇತನರು ಮನೆಯಿಂದ್ಲೇ ಸರ್ಕಾರಿ ಕೆಲಸ ಮಾಡ್ಬೋದು: ಜಿತೇಂದ್ರ ಸಿಂಗ್

    ಗರ್ಭಿಣಿಯರು, ವಿಕಲಚೇತನರು ಮನೆಯಿಂದ್ಲೇ ಸರ್ಕಾರಿ ಕೆಲಸ ಮಾಡ್ಬೋದು: ಜಿತೇಂದ್ರ ಸಿಂಗ್

    ನವದೆಹಲಿ: ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದ ಗರ್ಭಿಣಿಯರು ಮತ್ತು ‘ದಿವ್ಯಾಂಗ್’ (ವಿಕಲಚೇತನ) ಉದ್ಯೋಗಿಗಳು ಇನ್ನೂ ಮುಂದೆ ಮನೆಯಲ್ಲಿಯೇ ಕುಳಿತು ಕೆಲಸ ಮಾಡಬಹುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದರು.

    ಧಾರಕ ವಲಯವನ್ನು ಡಿ-ನೋಟಿಫೈ ಮಾಡುವವರೆಗೆ ಕೋವಿಡ್ ಕಂಟೈನ್‍ಮೆಂಟ್ ವಲಯದಲ್ಲಿ ವಾಸಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗೆ ಬರುವುದರಿಂದ ವಿನಾಯಿತಿ ನೀಡಲಾಗಿದೆ. ಅಧೀನ ಕಾರ್ಯದರ್ಶಿ ಮಟ್ಟಕ್ಕಿಂತ ಕೆಳಗಿರುವ ಸರ್ಕಾರಿ ನೌಕರರ ದೈಹಿಕ ಹಾಜರಾತಿಯನ್ನು 50% ಕ್ಕೆ ನಿರ್ಬಂಧಿಸಲಾಗಿದೆ. ಉಳಿದ 50% ರಷ್ಟು ಜನರು ಮನೆಯಿಂದಲೇ ಕೆಲಸ ಮಾಡುತ್ತಾರೆ ಎಂದು ಸಿಬ್ಬಂದಿ ಸಚಿವಾಲಯ ಇಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ನೀವು ಸರಿಯಾಗಿ ಮಾಸ್ಕ್ ಧರಿಸಿದ್ರೆ ಲಾಕ್‍ಡೌನ್ ಮಾಡಲ್ಲ: ಅರವಿಂದ್ ಕೇಜ್ರಿವಾಲ್

    ಈ ಕುರಿತು ಮಾಹಿತಿ ನೀಡಿದ ಸಿಂಗ್ ಅವರು, ಭಾರತದಲ್ಲಿ ಕೋವಿಡ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಗರ್ಭಿಣಿಯರು ಮತ್ತು ‘ದಿವ್ಯಾಂಗ್’ (ವಿಕಲಚೇತನ) ಉದ್ಯೋಗಿಗಳು ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಅವರು ಮನೆಯಿಂದಲೇ ಕೆಲಸ ಮಾಡಬಹುದು ಎಂದು ತಿಳಿಸಿದರು.

    ಸಂಬಂಧಪಟ್ಟ ಎಲ್ಲ ಇಲಾಖೆಗಳಿಂದ ರೋಸ್ಟರ್‍ಗಳನ್ನು ಸಿದ್ಧಪಡಿಸಲಾಗುವುದು. ಕಚೇರಿಗೆ ಹಾಜರಾಗದ ಮತ್ತು ಮನೆಯಿಂದಲೇ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವಾಗಲೂ ದೂರವಾಣಿ ಮತ್ತು ಇತರ ಎಲೆಕ್ಟ್ರಾನಿಕ್ ಸಂವಹನಗಳ ಮೂಲಕ ಲಭ್ಯವಿರುತ್ತಾರೆ ಎಂದು ಹೇಳಿದರು.

    ದೆಹಲಿಯಲ್ಲಿ ನಿನ್ನೆ ಕೋವಿಡ್‍ನಿಂದಾಗಿ ಏಳು ಸಾವುಗಳು ಮತ್ತು 20,181 ಹೊಸ ಪ್ರಕರಣಗಳು ದಾಖಲಾಗಿದೆ. ಪಾಸಿಟಿವ್ ಪ್ರಮಾಣವು 19.60 ಪ್ರತಿಶತಕ್ಕೆ ಏರಿದೆ. ನವೀಕರಿಸಿದ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಇಂದು ದೆಹಲಿಯಲ್ಲಿ ಒಂದೇ ದಿನದಲ್ಲಿ 1,59,632 ಪ್ರಕರಣಗಳು ಮತ್ತು 327 ಸಾವುಗಳು ಸಂಭವಿಸಿವೆ ಎಂದು ಆತಂಕ ವ್ಯಕ್ತಪಡಿಸಿದರು.

    ಕೊರೊನಾ ವೈರಸ್ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆ(ಡಿಒಪಿಟಿ) ಆದೇಶವನ್ನು ಹೊರಡಿಸಿದೆ. ಇದರ ಪ್ರಕಾರ ಸಾಧ್ಯವಾದಷ್ಟು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಅಧಿಕೃತ ಸಭೆಗಳನ್ನು ನಡೆಸಲಾಗುವುದು ಎಂದು ಹೇಳಿದರು.

    ಕಚೇರಿ ಆವರಣದಲ್ಲಿ ನೂಕುನುಗ್ಗಲು ಉಂಟಾಗುವುದನ್ನು ತಪ್ಪಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ಸಮಯ ಪಾಲನೆ ಮಾಡಬೇಕು. ಆಗಾಗ್ಗೆ ಕೈ ತೊಳೆಯುವುದು, ಸ್ವಚ್ಫವಾಗಿರುವುದು, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಬೇಕು. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಟೈರ್ ಕೆಳಗೆ ಸಿಕ್ಕ ನೋಟ್ ತೆಗೆದುಕೊಳ್ಳಲು ವ್ಯಕ್ತಿ ಸರ್ಕಸ್

    ಡಿಒಪಿಟಿ ಆದೇಶದ ಪ್ರಕಾರ, ಪ್ರಸ್ತುತ ಹೊರಡಿಸಲಾದ ಮಾರ್ಗಸೂಚಿಗಳು ಜನವರಿ 31 ರವರೆಗೆ ಜಾರಿಯಲ್ಲಿರುತ್ತವೆ ಎಂದು ಹೇಳಿದರು.

  • ಶಿರಾಡಿ ಘಾಟ್ ನಾಲ್ಕು ಪಥದ ರಸ್ತೆ ಪೂರ್ಣಗೊಳಿಸಿ – ಗಡ್ಕರಿ ಬಳಿ ಸಿಎಂ ಮನವಿ

    ಶಿರಾಡಿ ಘಾಟ್ ನಾಲ್ಕು ಪಥದ ರಸ್ತೆ ಪೂರ್ಣಗೊಳಿಸಿ – ಗಡ್ಕರಿ ಬಳಿ ಸಿಎಂ ಮನವಿ

    ನವದೆಹಲಿ: ಭಾರತಮಾಲಾ ಎರಡನೇ ಯೋಜನೆಯಲಿ ರಾಜ್ಯದ 5 ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಸಿಎಂ ಬೊಮ್ಮಾಯಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್‍ಗಡ್ಕರಿ ಅವರಲ್ಲಿ ಮನವಿ ಮಾಡಿದ್ದಾರೆ

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಾಬಸ್ ಪೇಟೆಯಿಂದ ಹೊಸೂರಿನವರೆಗೆ ರಸ್ತೆ ನಿರ್ಮಾಣದ ಯೋಜನೆ ಆರಂಭಿಸಲು ಮನವಿ ಮಾಡಿದ್ದೇನೆ. ಈ ಯೋಜನೆಯಿಂದ ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗೆಹರಿಯಲಿದೆ ಎಂದರು. ಇದನ್ನೂ ಓದಿ: ಮೇಯರ್ ಸ್ಥಾನ ಕೊಟ್ಟವರ ಜೊತೆ ಮೈತ್ರಿ – ಕಲಬುರಗಿ ಜೆಡಿಎಸ್ ಸದಸ್ಯರು

    ಶಿರಾಡಿ ಘಾಟ್ ನಾಲ್ಕು ಪಥದ ರಸ್ತೆ ಸಂಪೂರ್ಣಗೊಳಿಸುವಂತೆ ಮನವಿ ಮಾಡಲಾಗಿದೆ. ಬಿಜಾಪುರದಿಂದ ಸಂಕೇಶ್ವರ ರಸ್ತೆಯನ್ನು 80 ರಿಂದ 130 ಕಿಲೋಮೀಟರ್ ವರೆಗೆ ರಸ್ತೆ ವಿಸ್ತರಿಸುವಂತೆ ಕೇಳಿದ್ದೇವೆ. ಪ್ರವಾಹ ಪರಿಸ್ಥಿತಿ ವೇಳೆಯಲ್ಲಿ ಹಾಳಾದ ರಸ್ತೆ ಪರಿಹಾರವಾಗಿ 184 ಕೋಟಿ ಬಿಡುಗಡೆಗೆ ಕೇಂದ್ರ ಸಚಿವರು ಒಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.

    ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಬಗ್ಗೆ ಅತಂಕವಿದ್ದು, ರಾಜ್ಯದಲ್ಲಿ ನಿಫಾ ವೈರಸ್ ಬಗ್ಗೆ ಗಮನ ಹರಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ: ಹೊರಟ್ಟಿ

    ಬಾಹ್ಯಕಾಶ ಮತ್ತು ಪರಮಾಣು ಶಕ್ತಿ ಇಲಾಖೆಯ ರಾಜ್ಯ ಸಚಿವರನ್ನು ಬೇಟಿ ಮಾಡಿ ಆಡಳಿತ್ಮಾಕ ವಿಚಾರಗಳ ಬಗ್ಗೆ ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

    ಸಚಿವರಾದ ಜಿತೇಂದ್ರ ಸಿಂಗ್ ಭೇಟಿ ಮಾಡಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಿದ್ದೇನೆ. ಕೌಶಲ್ಯಭಿವೃದ್ಧಿ ಸಚಿವರಾದ ರಾಜೀವ್ ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಎಲೆಕ್ಟಾನಿಕ್ ವಸ್ತುಗಳ ಉತ್ಪಾದಕ ಘಟಕ ಸ್ಥಾಪನೆ ಮತ್ತು ರಾಜ್ಯದಲ್ಲಿ ಆಪ್ಟಿಕಲ್ ಫೈಬರ್ ಇಂಟರ್ ನೆಟ್ ಅಳವಡಿಸುವ ಬಗ್ಗೆ ಚರ್ಚೆ ಮಾಡಿ ರಾಜ್ಯ ಮಟ್ಟದಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಆರಂಭಿಸುವ ಬಗ್ಗೆ ಮಾತುಕತೆಯಾಗಿದೆ ಎಂದರು.

    ಡ್ರಗ್ಸ್ ಕೇಸ್‍ನಲ್ಲಿ ನಟಿ ಮಣಿಯ ಹೆಸರು ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಬಸವರಾಜ್ ಬೊಮ್ಮಾಯಿ, ಅದು ಪೊಲೀಸರ ಕೆಲಸ ಅವರು ಮಾಡುತ್ತಾರೆ ಎಂದರು.

  • ಮುಂದಿನ ವರ್ಷ ಇಸ್ರೋದಿಂದ ಚಂದ್ರಯಾನ-3

    ಮುಂದಿನ ವರ್ಷ ಇಸ್ರೋದಿಂದ ಚಂದ್ರಯಾನ-3

    ನವದೆಹಲಿ: 2021ರಲ್ಲಿ ಮೊದಲ ಆರು ತಿಂಗಳಲ್ಲಿಯೇ ಇಸ್ರೋ ಚಂದ್ರಯಾನ-3 ಉಡಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸುಳಿವು ನೀಡಿದ್ದಾರೆ. ಚಂದ್ರಯಾನ-2 ಕೊನೆ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿದ್ದರಿಂದ ಚಂದ್ರಯಾನ-3ಕ್ಕೆ ಇಸ್ರೋ ಸಿದ್ಧತೆ ನಡೆಸಿಕೊಂಡಿದೆ.

    ಚಂದ್ರಯಾನ-2ರಿಂದ ಕಲಿತ ಪಾಠದಿಂದ ಚಂದ್ರಯಾನ-3ನ್ನು ಸಿದ್ಧಗೊಳಿಸಲಾಗುತ್ತಿದೆ. 2021ರ ಮೊದಲ ಆರು ತಿಂಗಳಲ್ಲಿ ಚಂದ್ರಯಾನ-3 ನಭಕ್ಕೆ ಚಿಮ್ಮುವ ಸಾಧ್ಯತೆಗಳಿವೆ. ಚಂದ್ರಯಾನ-2 ಅಸಫಲತೆಯಲ್ಲಿ ಕಲಿತ ಹಲವು ಪಾಠಗಳಿಂದ ಚಂದ್ರಯಾನ-3 ಡಿಸೈನ್ ಮಾಡಲಾಗ್ತಿದೆ. ಕ್ಷಮತೆ, ತಂತ್ರಜ್ಞಾನ, ಸಂಪರ್ಕ ಸಾಧಕ ಸೇರಿದಂತೆ ಸುಧಾರಿತ ತಂತ್ರಜ್ಞಾನವನ್ನು ಚಂದ್ರಯಾನ-3 ಹೊಂದಲಿದೆ ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

    ಇದೇ ವೇಳೆ ಗಗನಯಾನದ ಬಗ್ಗೆಯೂ ಮಾಹಿತಿ ನೀಡಿರುವ ಜಿತೇಂದ್ರ ಸಿಂಗ್, ಮಾನವ ಸಹಿತ ಗಗನಯಾನ ಯೋಜನೆಗಾಗಿ ಕೆಲಸ ಆರಂಭಗೊಂಡಿದೆ. ಮೈಕ್ರೋಗ್ರೆವಿಟಿ ಹೊಂದಿದ 4 ಬಯೋಲಾಜಿಕಲ್ ಮತ್ತು 2 ಫಿಜಿಕಲ್ ಸೈನ್ಸ್ ಪ್ರಯೋಗ ಮಾಡಲಾಗುತ್ತಿದೆ. ನಾಲ್ವರು ಅಂತರಿಕ್ಷ ಯಾತ್ರಿಗಳಿಗೆ ಸ್ಪೇಸ್ ಫೈಲಟ್ ತರಬೇತಿ ಸಹ ಆರಂಭಗೊಂಡಿರುವ ಕುರಿತು ಮಾಹಿತಿ ನೀಡಿದರು.

  • ನಮ್ಮ ಮುಂದಿನ ಗುರಿ ಪಿಓಕೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್

    ನಮ್ಮ ಮುಂದಿನ ಗುರಿ ಪಿಓಕೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್

    ನವದೆಹಲಿ: ನಮ್ಮ ಮುಂದಿನ ಗುರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (Pakistan-occupied Kashmir -PoK) ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಖಡಕ್ ಸಂದೇಶ ರವಾನಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು, ಕಾಶ್ಮೀರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದಿಟ್ಟತನ ತೋರಿತು. ಅದರಂತೆ ಮುಂದಿನ ದಿನಗಳಲ್ಲಿ ಪಾಕ್ ಆಕ್ರಮಿತ ಕಾಶ್ಮೀರವನ್ನು ಮತ್ತೆ ಭಾರತದ ಸುಪರ್ದಿಗೆ ತರುವ ಅಜೆಂಡಾ ಹೊಂದಿದ್ದೇವೆ. ಈ ನಿರ್ಧಾರ ನಮ್ಮ ಪಕ್ಷದ ತೀರ್ಮಾನ ಮಾತ್ರವಲ್ಲ, 1994ರಲ್ಲಿ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವೇಳೆ ಲೋಕಸಭೆಯಲ್ಲಿ ಇದು ಸರ್ವಾನುಮತದಿಂದ ಅಂಗೀಕಾರವಾಗಿತ್ತು ಎಂದು ತಿಳಿಸಿದರು.

    ಕೇಂದ್ರ ಸಚಿವರು ಪಿಓಕೆ ಬಗ್ಗೆ ಮಾತನಾಡಿದ್ದು ಇದೇ ಮೊದಲೇನಲ್ಲ. ಕಳೆದ ತಿಂಗಳು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಜಿತೇಂದ್ರ ಸಿಂಗ್ ಅವರು, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ತೆಗೆದುಹಾಕಿದ ಬಳಿಕ ಜನರು ಪಿಓಕೆ ಭಾರತದೊಂದಿಗೆ ಸಂಯೋಜನೆಗೊಳ್ಳಬೇಕು ಅಂತ ಪ್ರಾರ್ಥಿಸಬೇಕು. ದೇಶದಲ್ಲಿ ಪಿಒಕೆ ಏಕೀಕರಣಗೊಳ್ಳುವುದನ್ನು ನಾವು ನೋಡಬೇಕು. ಮುಜಫರಾಬಾದ್‍ಗೆ ಹೋಗುವ ಜನರು ಅಡೆತಡೆಯಿಲ್ಲದೆ ಓಡಾಡುವಂತಾಗಲಿ ಎಂದು ಹೇಳಿದ್ದರು.

    ಇದೇ ವಿಚಾರವಾಗಿ ಮಾತನಾಡಿದ್ದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತ ಮತ್ತು ಪಾಕ್ ಮಧ್ಯೆ ಮಾತುಕತೆ ನಡೆಯುವುದಾದರೆ ಅದು ಕೇವಲ ಪಾಕ್ ಆಕ್ರಮಿತ ಕಾಶ್ಮೀರದ (ಪಿಓಕೆ) ಬಗ್ಗೆ ಮಾತ್ರ. ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ್ದು ಜಮ್ಮು-ಕಾಶ್ಮೀರದ ಅಭಿವೃದ್ಧಿಗಾಗಿ. ಈ ನಿರ್ಧಾರ ತಪ್ಪು ಅಂತ ಪಾಕಿಸ್ತಾನವು ವಿಶ್ವಸಂಸ್ಥೆಗೆ ದೂರು ನೀಡಿದೆ. ಭಯೋತ್ಪಾದನೆ ನಿಲ್ಲಿಸಿದರೆ ಮಾತ್ರ ಪಾಕಿಸ್ತಾನದೊಂದಿಗೆ ಭಾರತ ಮಾತುಕತೆಗೆ ಸಿದ್ಧ ಎಂದು ತಿಳಿಸಿದ್ದರು.

  • ಭಾರತದೊಳಗೆ ನುಸುಳುತ್ತಿದ್ದ ಆರು ಉಗ್ರರನ್ನು ಸೆದೆಬಡಿದ ಭಾರತೀಯ ಸೇನೆ

    ಭಾರತದೊಳಗೆ ನುಸುಳುತ್ತಿದ್ದ ಆರು ಉಗ್ರರನ್ನು ಸೆದೆಬಡಿದ ಭಾರತೀಯ ಸೇನೆ

    ಶ್ರೀನಗರ: ಭಾತರದೊಳಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದ ಆರು ಜನ ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

    ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೆರನ್ ಸೆಕ್ಟರ್ ನಲ್ಲಿ ಒಳ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಆರು ಜನ ಭಯೋತ್ಪಾದಕರನ್ನು ಭಾರತೀಯ ಸೇನೆ ಮಟ್ಟ ಹಾಕುವಲ್ಲಿ ಯಶಸ್ವಿಯಾಗಿದೆ.

    ಕಳೆದ ಎರಡು ದಿನಗಳ ಹಿಂದೆ ಶ್ರೀನಗರದಿಂದ 94 ಕಿಮೀ ದೂರದಲ್ಲಿರುವ ಕೆರನ್ ಸೆಕ್ಟರ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಇನ್ನೋರ್ವ ಯೋಧ ಗಾಯಗೊಂಡಿದ್ದರು. ಸ್ಥಳದಲ್ಲಿ ಸೈನಿಕರು ಪಹರೆ ನಡೆಸುತ್ತಿದ್ದ ವೇಳೆ ಒಳ ನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರು ಯೋಧರ ಗುಂಡಿಗೆ ಬಲಿಯಾಗಿದ್ದಾರೆ.

    ಸೇನಾ ಪಡೆಗಳು ಇನ್ನೂ ಸ್ಥಳದಲ್ಲಿಯೇ ಪಹರೆ ಕಾಯುತ್ತಿದ್ದು, ಅಡಗಿಕೊಂಡಿರುವ ಭಯೋತ್ಪಾದಕರಿಗಾಗಿ ಶೋಧ ನಡೆಸುತ್ತಿದ್ದಾರೆ. ಕಳೆದ ಎರಡು ವಾರಗಳಲ್ಲಿ ಇಂದು ಹತರಾದ 6 ಜನ ಭಯೋತ್ಪಾದಕರನ್ನು ಒಳಗೊಂಡಂತೆ ಒಟ್ಟು 21 ಉಗ್ರರು ಹತರಾಗಿದ್ದಾರೆ.

    ಕಳೆದರೆಡು ದಿನಗಳ ಹಿಂದೆಯಷ್ಟೇ ಕೇಂದ್ರ ಗೃಹ ಮಂತ್ರಿ ರಾಜನಾಥ ಸಿಂಗ್ ಸೇರಿದಂತೆ ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಹಾಗೂ ಪ್ರಧಾನಮಂತ್ರಿ ಕಚೇರಿಯ ರಾಜ್ಯ ಮಂತ್ರಿ ಜಿತೇಂದ್ರ ಸಿಂಗ್ ಕುಪ್ವಾರಾ ಜಿಲ್ಲೆಗೆ ಭೇಟಿ ನೀಡಿ ಗಡಿ ಪ್ರದೇಶದ ಜನರನ್ನು ಭೇಟಿಯಾಗಿದ್ದರು.

    ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದಲ್ಲಿ ರಂಜಾನ್ ಒಪ್ಪಂದ ಮಾಡಿಕೊಂಡರು ಭಯೋತ್ಪಾದಕರ ದಾಳಿಗಳು ಇನ್ನೂ ನಿಂತಿಲ್ಲ. ಹಾಗಾಗಿ ರಂಜಾನ್ ಸಂದರ್ಭದಲ್ಲಿ ಈ ದಾಳಿಗಳು ನಡೆದಲ್ಲಿ ಸೇನೆ ಸಮರ್ಥವಾಗಿ ಮುಕ್ತವಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಿ ಎಂದು ರಾಜನಾಥ್ ಸಿಂಗ್ ಆದೇಶಿಸಿದ್ದಾರೆ.