Tag: ಜಿತೇಶ್‌ ಶರ್ಮಾ

  • ಮಾರ್ಚ್‌ನಲ್ಲಿ ಸ್ಕ್ರಿಪ್ಟ್‌ ಬರೆದು ಜೂನ್‌ನಲ್ಲಿ ‘ಪಿಕ್ಚರ್‌’ ತೆಗೆದ ಜಿತೇಶ್‌ ಶರ್ಮಾ!

    ಮಾರ್ಚ್‌ನಲ್ಲಿ ಸ್ಕ್ರಿಪ್ಟ್‌ ಬರೆದು ಜೂನ್‌ನಲ್ಲಿ ‘ಪಿಕ್ಚರ್‌’ ತೆಗೆದ ಜಿತೇಶ್‌ ಶರ್ಮಾ!

    ಅಹಮದಾಬಾದ್‌: ಐಪಿಎಲ್‌ (IPL) ಆರಂಭವಾಗುವಾಗ ಡ್ರೆಸ್ಸಿಂಗ್‌ ರೂಮ್‌ನಲ್ಲಿ ಬರೆದ ಸ್ಕ್ರಿಪ್ಟ್‌ನಂತೆ ಜಿತೇಶ್‌ ಶರ್ಮಾ (Jitesh Sharma) ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

    ಮಾರ್ಚ್‌ನಲ್ಲಿ ಐಪಿಎಲ್‌ ಆರಂಭಗೊಂಡಿತ್ತು. ಈ ಸಂದರ್ಭದಲ್ಲಿ ಜಿತೇಶ್‌ ಶರ್ಮಾ ಡ್ರೆಸ್ಸಿಂಗ್‌ ಕೊಠಡಿಯಲ್ಲಿ, ಫೈನಲ್‌ನಲ್ಲಿ ಕೊನೆಯ 2 ಎಸೆತಗಳಲ್ಲಿ ಗೆಲುವಿಗೆ 6 ರನ್‌ ಬೇಕಿದ್ದಾಗ ನಾನು ಸಿಕ್ಸ್‌ ಹೊಡೆದು ಜಯ ತಂದುಕೊಡಬೇಕು. ನಾನು ಕಪ್‌ ಹಿಡಿದುಕೊಂಡಿರಬೇಕು. ನನ್ನ ಎಡ ಭಾಗದಲ್ಲಿ ವಿರಾಟ್‌ ಕೊಹ್ಲಿ (Virat Kohli) ಇದ್ದರೆ ಪಕ್ಕದಲ್ಲಿ ದಿನೇಶ್‌ ಕಾರ್ತಿಕ್‌ (Dinesh Karthik) ಇರಬೇಕು. 2025-26ರ ಋತುವಿನಲ್ಲಿ ಇದು ನಿಜವಾಗಲಿ ಎಂದು ಆಶಿಸಿದ್ದರು.

    ಜಿತೇಶ್‌ ಶರ್ಮಾ ಸಿಕ್ಸ್‌ ಹೊಡೆಯದಿದ್ದರೂ ಆರ್‌ಸಿಬಿ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ. ಕನಸು ನನಸಾದ ಕಾರಣ ಈಗ ಕೊಹ್ಲಿ, ದಿನೇಶ್‌ ಕಾರ್ತಿಕ್‌ ಜೊತೆ ಕಪ್‌ ಹಿಡಿದುಕೊಂಡು ಜಿತೇಶ್‌ ಶರ್ಮಾ ಫೋಟೋ ತೆಗೆದುಕೊಂಡಿದ್ದಾರೆ.

    ವಿಕೆಟ್‌ ಕೀಪರ್‌ ಆಗಿರುವ ಜಿತೇಶ್‌ ಶರ್ಮಾ ಈ ಐಪಿಎಲ್‌ನ 15 ಪಂದ್ಯಗಳಿಂದ 261 ರನ್‌ ಹೊಡೆದಿದ್ದಾರೆ. ಫೈನಲ್‌ನಲ್ಲಿ 10 ಎಸೆತಗಳಲ್ಲಿ 24 ರನ್‌ ಹೊಡೆದಿದ್ದರು. ಅದರಲ್ಲೂ ಲಕ್ನೋ ವಿರುದ್ಧದ ಪಂದ್ಯದಲ್ಲಿ 33 ಎಸೆತಗಳಲ್ಲಿ 85 ರನ್‌(8 ಬೌಂಡರಿ, 6 ಸಿಕ್ಸ್‌) ಚಚ್ಚಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.

  • ಆರ್‌ಸಿಬಿಯಲ್ಲಿರುವ ಅಣ್ಣ ಹುರಿದುಂಬಿಸಿದ್ರು, ನಾನು ನನ್ನ ಆಟವಾಡಿದೆ: ಜಿತೇಶ್‌ ಶರ್ಮಾ

    ಆರ್‌ಸಿಬಿಯಲ್ಲಿರುವ ಅಣ್ಣ ಹುರಿದುಂಬಿಸಿದ್ರು, ನಾನು ನನ್ನ ಆಟವಾಡಿದೆ: ಜಿತೇಶ್‌ ಶರ್ಮಾ

    ಲಕ್ನೋ: ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿ ತಂಡವನ್ನು ಕ್ವಾಲಿಫೈಯರ್‌ಗೆ ತೆಗೆದುಕೊಂಡ ಹೋದ ನಾಯಕ ಜಿತೇಶ್‌ ಶರ್ಮಾ (Jitesh Sharma) ಆರ್‌ಸಿಬಿಯಲ್ಲಿರುವ (RCB) ಅಣ್ಣನ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

    ಆರ್‌ಸಿಬಿಯಲ್ಲಿರುವ ಅಣ್ಣ ಯಾರೂ ಅಲ್ಲ. ದಿನೇಶ್‌ ಕಾರ್ತಿಕ್‌ (Dinesh Karthik) ಅವರನ್ನೇ ಜಿತೇಶ್‌ ಶರ್ಮಾ ಅಣ್ಣ ಎಂದು ಸಂಬೋಧಿಸಿ ಗೌರವ ನೀಡಿದ್ದಾರೆ.

    ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದ ಜಿತೇಶ್‌ ಶರ್ಮಾ ಅವರನ್ನು ಮುರಳಿ ಕಾರ್ತಿಕ್‌ ಮಾತನಾಡಿಸಿದರು. ಈ ವೇಳೆ, ವಿರಾಟ್ ಕೊಹ್ಲಿ ಔಟಾದಾಗ ನಾನು ಈ ಬಾರಿ ಆಟ ಆಡಲೇಬೇಕು ಎಂದು ನಿರ್ಧರಿಸಿದೆ. ನನ್ನ ಬಳಿ ಪಂದ್ಯವನ್ನು ಗೆಲ್ಲಿಸುವ ಸಾಮರ್ಥ್ಯ ಇದೆ ಎಂದು ನನ್ನ ಗುರು, ಮಾರ್ಗದರ್ಶಕ ಡಿಕೆ ಅಣ್ಣ ಹೇಳಿ ಹುರಿದುಂಬಿಸಿದರು. ಅದರಂತೆ ನಾನು ನನ್ನ ಆಟವಾಡಿದೆ ಎಂದು ತಿಳಿಸಿದರು. ಇದನ್ನೂ ಓದಿ: IPL 2025 | ಪಂದ್ಯ ಸೋತು ಹೃದಯ ಗೆದ್ದ ಪಂತ್‌

     

     

    ನನಗೆ ಅನಿಸಿಕೆಗಳನ್ನು ವ್ಯಕ್ತಪಡಿಸಲು ಪದಗಳೇ ಸಿಗುತ್ತಿಲ್ಲ. ನಾನು ಆ ರೀತಿಯ ಆಡಿ ಪಂದ್ಯವನ್ನು ಗೆಲ್ಲಿಸಿದ್ದೇನೆ ಎಂದು ನನಗೆ ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಹರ್ಷ ವ್ಯಕ್ತಪಡಿಸಿದರು. ಇದನ್ನೂ ಓದಿ: 9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

    ಎಲ್ಲಾ ಹೊರೆ ನನ್ನ ಮೇಲಿರುವುದರಿಂದ ನನಗೆ ಒತ್ತಡ ಇತ್ತು. ಆದರೆ ನನ್ನೊಂದಿಗೆ ವಿರಾಟ್, ಕೃನಾಲ್, ಭುವಿ ಇದ್ದಾರೆ.  ನಾವು ಚೆನ್ನಾಗಿ ಆಡಲು ಪ್ರಯತ್ನಿಸುತ್ತೇವೆ. ಮುಂದಿನ ಪಂದ್ಯದಲ್ಲೂ ಇದೇ ರೀತಿಯ ಪ್ರದರ್ಶನ ನೀಡಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.

    ಲಕ್ನೋ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 11.2 ಓವರ್‌ಗಳಲ್ಲಿ 123 ರನ್‌ಗಳಿಸಿದ್ದಾಗ 54 ರನ್‌(30 ಎಸೆತ, 10 ಬೌಂಡರಿ) ಹೊಡೆದಿದ್ದ ಕೊಹ್ಲಿ ಔಟಾಗಿದ್ದರು.  ನಂತರ ಮುರಿಯದ 5ನೇ ವಿಕೆಟಿಗೆ ಮಯಾಂಕ್‌ ಅಗರ್‌ವಾಲ್‌ ಮತ್ತು ಜಿತೇಶ್‌ ಶರ್ಮಾ 45 ಎಸೆತಗಳಲ್ಲಿ 107 ರನ್‌ ಜೊತೆಯಾಟವಾಡಿ ಪಂದ್ಯವನ್ನು ಗೆಲ್ಲಿಸಿದ್ದಾರೆ.

    107 ರನ್‌ಗಳ ಜೊತೆಯಾಟದಲ್ಲಿ ಮಯಾಂಕ್‌ 12 ಎಸೆತಗಳಲ್ಲಿ 20 ರನ್‌ ಹೊಡೆದರೆ ಜಿತೇಶ್‌ ಶರ್ಮಾ 85(33 ಎಸೆತ, 8 ಬೌಂಡರಿ, 6 ಸಿಕ್ಸ್‌) ಹೊಡೆಯುವ ಮೂಲಕ ಗೆಲುವಿನ ದಡ ಸೇರಿಸಿದರು.

  • ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

    ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

    ಲಕ್ನೋ: ಸಂಘಟಿತ ಬೌಲಿಂಗ್‌, ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ ಸನ್‌ ರೈಸರ್ಸ್‌ ಹೈದರಾಬಾದ್‌ (SRH) ತಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ವಿರುದ್ಧ 42 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದ ಆರ್‌ಸಿಬಿ 3ನೇ ಸ್ಥಾನಕ್ಕೆ ಕುಸಿದಿದೆ. 12 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 17 ಅಂಕ ಗಳಿಸಿರುವ ಪಂಜಾಬ್‌ ಕಿಂಗ್ಸ್‌ 2ನೇ ಸ್ಥಾನಕ್ಕೆ ಜಿಗಿದಿದೆ.

    ಗೆಲುವಿಗೆ 232 ರನ್‌ಗಳ ಬೃಹತ್‌ ಗುರಿ ಪಡೆದಿದ್ದ ಆರ್‌ಸಿಬಿ ಆರಂಭದಿಂದಲೇ ಕೌಂಟರ್‌ ಅಟ್ಯಾಕ್‌ ಮಾಡಲು ಶುರು ಮಾಡಿತ್ತು. ವಿರಾಟ್‌ ಕೊಹ್ಲಿ-ಫಿಲ್‌ ಸಾಲ್ಟ್‌ (Virat Kohli-Phil Salt) ಅವರ ಆರಂಭಿಕ ಜೊತೆಯಾಟದಿಂದ 43 ಎಸೆತಗಳಲ್ಲಿ 80 ರನ್‌ ತಂಡಕ್ಕೆ ಸೇರ್ಪಡೆಯಾಯಿತು. ಈ ಬೆನ್ನಲ್ಲೇ ಮಯಾಂಕ್‌ ಅಗರ್ವಾಲ್‌ ಫಿಲ್‌ ಸಾಲ್ಟ್‌ ಜೋಡಿ 2ನೇ ವಿಕೆಟಿಗೆ 22 ಎಸೆತಗಳಲ್ಲಿ 40 ರನ್‌ ಕಲೆಹಾಕಿತ್ತು. 4ನೇ ವಿಕೆಟಿಗೆ ಜಿತೇಶ್‌ ಶರ್ಮಾ, ರಜತ್‌ ಪಾಟಿದಾರ್‌ ಜೋಡಿ 26 ಎಸೆತಗಳಲ್ಲಿ 44 ರನ್‌ ಕಲೆಹಾಕಿತ್ತು.

    ಟರ್ನಿಂಗ್‌ ಸಿಕ್ಕಿದ್ದೆಲ್ಲಿ?
    ಒಂದೆಡೆ ವಿಕೆಟ್‌ ಕಳೆದುಕೊಳ್ಳುತ್ತಿದ್ದ ಹೊರತಾಗಿಯೂ ಸ್ಫೋಟಕ ಪ್ರದರ್ಶನ ನೀಡುತ್ತಿದ್ದ ಆರ್‌ಸಿಬಿ 14 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 163 ರನ್‌ ಗಳಿಸಿತ್ತು. ಇದರಿಂದ ಗೆಲುವು ಸುಲಭ ಎಂದೇ ಭಾವಿಸಲಾಗಿತ್ತು. ಆದ್ರೆ 15-16ನೇ ಓವರ್‌ ದುಬಾರಿಯಾಯಿತು. 15ನೇ ಓವರ್‌ ಬೌಲಿಂಗ್‌ನಲ್ಲಿ ಬಿಗಿ ಹಿಡಿತ ಸಾಧಿಸಿದ ನಿತೀಶ್‌ ಕುಮಾರ್‌ ರೆಡ್ಡಿ ಕೇವಲ 4 ರನ್‌ ಬಿಟ್ಟುಕೊಟ್ಟರು. 16ನೇ ಓವರ್‌ನಲ್ಲಿ ಎಶಾನ್ ಮಾಲಿಂಗ 7 ರನ್‌ ಬಿಟ್ಟುಕೊಟ್ಟು 2 ಪ್ರಮುಖ ವಿಕೆಟ್‌ ಕಿತ್ತರು. ಮುಂದಿನ 17, 18ನೇ ಓವರ್‌ನಲ್ಲೂ ಆರ್‌ಸಿಬಿ ತಲಾ ಒಂದೊಂದು ಪ್ರಮುಖ ವಿಕೆಟ್‌ ಕಳೆದುಕೊಂಡಿತು. ಹೀಗಾಗಿ ಗೆಲುವಿನ ಓಟದಲ್ಲಿ ಮುನ್ನುಗ್ಗುತ್ತಿದ್ದ ಆರ್‌ಸಿಬಿ ಸೋಲಿನ ರುಚಿ ಕಂಡಿತು.

    ಆರ್‌ಸಿಬಿ ಪರ ಫಿಲ್‌ ಸಾಲ್ಟ್‌ 62 ರನ್‌ (32 ಎಸೆತ, 5 ಸಿಕ್ಸರ್‌, 4 ಬೌಂಡರಿ), ವಿರಾಟ್‌ ಕೊಹ್ಲಿ 43 ರನ್‌ (25 ಎಸೆತ, 1 ಸಿಕ್ಸರ್‌, 7 ಬೌಂಡರಿ), ರಜತ್‌ ಪಾಟಿದಾರ್‌ 18 ರನ್‌, ಜಿತೇಶ್‌ ಶರ್ಮಾ 24 ರನ್‌, ಮಯಾಂಕ್‌ ಅಗರ್ವಾಲ್‌ 11 ರನ್‌, ಟಿಮ್‌ ಡೇವಿಡ್‌ 1 ರನ್‌, ಭುವನೇಶ್ವರ್‌ ಕುಮಾರ್‌, ಯಶ್‌ ದಯಾಳ್‌ ತಲಾ 3 ರನ್‌, ಕೃನಾಲ್‌ ಪಾಂಡ್ಯ 8 ರನ್‌ ಗಳಿಸಿ ಔಟಾದರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿತ್ತು. ಮೊದಲ ಓವರ್‌ನಿಂದಲೇ ಸ್ಪೋಟಕ ಪ್ರದರ್ಶನ ನೀಡಲು ಮುಂದಾದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಮೊದಲ ವಿಕೆಟ್‌ಗೆ 25 ಎಸೆತಗಳಲ್ಲಿ 54 ರನ್ ಜೊತೆಯಾಟ ನೀಡಿತ್ತು. ಅತ್ತ ಅಭಿಷೇಕ್ ಶರ್ಮಾ 17 ಎಸೆತಗಳಲ್ಲಿ 34 ರನ್ ಗಳಿಸಿ ಔಟಾಗುತ್ತಿದ್ದಂತೆ ಇತ್ತ ಟ್ರಾವಿಸ್ ಹೆಡ್ ಕೂಡ 10 ಎಸೆತಗಳಲ್ಲಿ 17 ರನ್ ಬಾರಿಸಿ ಪೆವಿಲಿಯನ್‌ಗೆ ಮರಳಿದರು.

    3ನೇ ವಿಕೆಟ್‌ಗೆ ಇಶಾನ್ ಕಿಶನ್ ಮತ್ತು ಕ್ಲಾಸೆನ್ ಜೋಡಿ 27 ಎಸೆತಗಳಲ್ಲಿ 48 ರನ್, 4ನೇ ವಿಕೆಟಿಗೆ ಕಿಶನ್-ಅನಿಕೇತ್ ವರ್ಮಾ ಜೋಡಿ 17 ಎಸೆತಗಳಲ್ಲಿ ಸ್ಫೋಟಕ 43 ರನ್ ಚಚ್ಚಿ ತಂಡದ ಮೊತ್ತ ಹೆಚ್ಚಿಸಿತು. ಇನ್ನೂ ಕೊನೆಯಲ್ಲಿ ನ್ಯಾಯಕ ಪ್ಯಾಟ್ ಕಮ್ಮಿನ್ಸ್ ಹಾಗೂ ಇಶಾನ್ ಕಿಶನ್ ಜೋಡಿ ಕೇವಲ 18 ಎಸೆತಗಳಲ್ಲಿ 43 ರನ್ ಚಚ್ಚಿ ತಂಡದ ಮೊತ್ತವನ್ನು 200 ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾಯಿತು. ಹೈದರಾಬಾದ್ ಪರ 195.83 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಇಶಾನ್ ಕಿಶನ್ ಅಜೇಯ 94 ರನ್ (48 ಎಸೆತ, 5 ಸಿಕ್ಸರ್, 7 ಬೌಂಡರಿ) ಚಚ್ಚಿದ್ರೆ , ಅಭಿಷೇಕ್ ಶರ್ಮಾ 34 ರನ್, ಟ್ರಾವಿಸ್ ಹೆಡ್ 17 ರನ್, ಹೆನ್ರಿಕ್ ಕ್ಲಾಸೆನ್ 24 ರನ್, ಅನಿಕೇತ್ ವರ್ಮಾ 26 ರನ್, ಅಭಿನವ್ ಮನೋಹರ್ 12 ರನ್, ಪ್ಯಾಟ್ ಕಮ್ಮಿನ್ಸ್ ಅಜೇಯ 13 ರನ್ ಗಳಿಸಿದರು.

    ಇನ್ನೂ ಆರ್‌ಸಿಬಿ ಪರ ರೊಮಾರಿಯೊ ಶೆಫರ್ಡ್ 2 ವಿಕೆಟ್ ಕಿತ್ತರೆ, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.

  • ಅಭಿಷೇಕ್‌ ಶರ್ಮಾ ಹೊಡೆದ ಸಿಕ್ಸ್‌ಗೆ ಕಾರಿನ ಗ್ಲಾಸ್‌ ಪುಡಿ.. ಪುಡಿ.. – 5 ಲಕ್ಷ ನಷ್ಟ

    ಅಭಿಷೇಕ್‌ ಶರ್ಮಾ ಹೊಡೆದ ಸಿಕ್ಸ್‌ಗೆ ಕಾರಿನ ಗ್ಲಾಸ್‌ ಪುಡಿ.. ಪುಡಿ.. – 5 ಲಕ್ಷ ನಷ್ಟ

    ಲಕ್ನೋ: ಆರ್‌ಸಿಬಿ (Royal Challengers Bengaluru) ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಆಟಗಾರ ಅಭಿಷೇಕ್‌ ಶರ್ಮಾ (Abhishek Sharma) ಎಂದಿನಂತೆ ಸ್ಫೋಟಕ ಪ್ರದರ್ಶನವನ್ನೇ ನೀಡಿದರು. ಈ ವೇಳೆ ಅಭಿ ಹೊಡೆದ ಸಿಕ್ಸ್‌ವೊಂದು ಪ್ರಮೋಷನ್‌ಗಾಗಿ ನಿಲ್ಲಿಸಿದ್ದ ಕಾರಿನ ಗ್ಲಾಸ್‌ಗೆ ಬಡಿದು ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

    ಆರಂಭಿಕನಾಗಿ ಕಣಕ್ಕಿಳಿದಿದ್ದ ಶರ್ಮಾ ಸಿಕ್ಸರ್‌, ಬೌಂಡರಿ ಬಾರಿಸಲು ಮುಂದಾಗಿದ್ದರು. 17 ಎಸೆತಗಳಲ್ಲಿ 34 ರನ್‌ ಸಿಡಿಸಿದರು. ಅಭಿಷೇಕ್ ಶರ್ಮಾ ಸಿಡಿಸಿದ ಒಂದು ಸಿಕ್ಸರ್ ಕ್ರೀಡಾಂಗಣದಲ್ಲಿ ನಿಲ್ಲಿಸಿದ್ದ ಟಾಟಾ ಕಾರಿನ ಗಾಜನ್ನು ಒಡೆದಿದೆ. ಇದರಿಂದ ಐಪಿಎಲ್‌ ಪ್ರಾಯೋಜಕ ಸಂಸ್ಥೆಗೆ 5 ಲಕ್ಷ ರೂ. ನಷ್ಟವಾಗಿದೆ. ಇದನ್ನೂ ಓದಿ: ಇಶಾನ್‌ ಕಿಶನ್‌ ಸಿಡಿಲಬ್ಬರದ ಬ್ಯಾಟಿಂಗ್‌ – ಆರ್‌ಸಿಬಿ ಗೆಲುವಿಗೆ 232 ರನ್‌ಗಳ ಕಠಿಣ ಗುರಿ

    ಇನ್ನಿಂಗ್ಸ್‌ನ 2ನೇ ಓವರ್‌ನಲ್ಲಿ ಆರ್‌ಸಿಬಿ ತಂಡದ ಇಂದಿನ ಪಂದ್ಯದ ನಾಯಕ ಜೀತೇಶ್ ಶರ್ಮಾ ಅವರು ಭುವನೇಶ್ವರ್ ಕುಮಾರ್ ಅವರನ್ನು ಬೌಲಿಂಗ್ ಮಾಡಲು ಕರೆತಂದಾಗ ಈ ಘಟನೆ ಸಂಭವಿಸಿತು.

    ಆ ಓವರ್‌ನ 5ನೇ ಎಸೆತದಲ್ಲಿ ಅಭಿಷೇಕ್ ಮಿಡ್‌ವಿಕೆಟ್ ಕಡೆಗೆ ಭರ್ಜರಿ ಸಿಕ್ಸರ್ ಬಾರಿಸಿದರು. ಚೆಂಡು ನೇರವಾಗಿ ಐಪಿಎಲ್ 2025 ಲೀಗ್‌ನ ಪ್ರಾಯೋಜಕರಾದ ಟಾಟಾ ಅವರ ಕಾರಿನ ಮೇಲೆ ಬಿದ್ದಿತು. ಇದರಿಂದಾಗಿ ಕಾರಿನ ಮುಂಭಾಗದ ಗಾಜು ಬಿರುಕು ಬಿಟ್ಟಿದೆ. ಇದನ್ನೂ ಓದಿ: ಮ್ಯಾಥ್ಯೂ ಫೋರ್ಡ್ ಸ್ಫೋಟಕ ಫಿಫ್ಟಿ – ಎಬಿಡಿ ವಿಶ್ವದಾಖಲೆ ಸರಿಗಟ್ಟಿದ ವಿಂಡೀಸ್‌ ಬ್ಯಾಟರ್

    5 ಲಕ್ಷ ರೂ. ದೇಣಿಗೆ ನೀಡಲಿದೆ
    ಐಪಿಎಲ್ 2025 ಪ್ರಾರಂಭವಾಗುವ ಮೊದಲು, ಪಂದ್ಯದ ಸಮಯದಲ್ಲಿ ಬ್ಯಾಟ್ಸ್‌ಮನ್ ಕಾರಿನ ಮೇಲೆ ನೇರವಾಗಿ ಶಾಟ್ ಹೊಡೆದರೆ ಹಣವನ್ನು ದೇಣಿಗೆ ನೀಡುವುದಾಗಿ ಟಾಟಾ ಘೋಷಿಸಿತ್ತು. ಒಂದು ವೇಳೆ ಚೆಂಡು ಕಾರಿಗೆ ತಗುಲಿದರೆ, ಟಾಟಾ ಸಂಸ್ಥೆಯು 5 ಲಕ್ಷ ರೂ. ಗಳನ್ನು ದೇಣಿಗೆ ನೀಡುತ್ತದೆ. ಈ ಮೊತ್ತವನ್ನು ಗ್ರಾಮೀಣ ಕ್ರಿಕೆಟ್ ಅಭಿವೃದ್ಧಿಗಾಗಿ ಟಾಟಾ ಕಾರ್ ದೇಣಿಗೆ ನೀಡಲಿದೆ.

    ಇನ್ನೂ ಆರ್‌ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 231 ರನ್‌ ಸಿಡಿಸಿದೆ.

  • ಇಶಾನ್‌ ಕಿಶನ್‌ ಸಿಡಿಲಬ್ಬರದ ಬ್ಯಾಟಿಂಗ್‌ – ಆರ್‌ಸಿಬಿ ಗೆಲುವಿಗೆ 232 ರನ್‌ಗಳ ಕಠಿಣ ಗುರಿ

    ಇಶಾನ್‌ ಕಿಶನ್‌ ಸಿಡಿಲಬ್ಬರದ ಬ್ಯಾಟಿಂಗ್‌ – ಆರ್‌ಸಿಬಿ ಗೆಲುವಿಗೆ 232 ರನ್‌ಗಳ ಕಠಿಣ ಗುರಿ

    ಲಕ್ನೋ: ಇಶಾನ್‌ ಕಿಶನ್‌ (Ishan Kishan) ಸಿಡಿಲಬ್ಬರದ ಬ್ಯಾಟಿಂಗ್‌ ನೆರವಿನಿಂದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು ನಿಗದಿತ ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 231 ರನ್‌ ಗಳಿಸಿದೆ. ಈ ಮೂಲಕ ಎದುರಾಳಿ ಆರ್‌ಸಿಬಿಗೆ 232 ರನ್‌ಗಳ ಕಠಿಣ ಗುರಿ ನೀಡಿದೆ.

    ಲಕ್ನೋದ ಏಕನಾ ಕ್ರೀಡಾಂಗಣದಲ್ಲಿಂದು ಜಿತೇಶ್‌ ಶರ್ಮಾ (Jitesh Sharma) ನಾಯಕತ್ವದಲ್ಲಿ ಕಣಕ್ಕಿಳಿದ ಆರ್‌ಸಿಬಿ (RCB) ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿತು. ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಹೈದರಾಬಾದ್‌ ತಂಡಕ್ಕೆ ಬಿಟ್ಟುಕೊಟ್ಟಿತು.

    ಮೊದಲ ಓವರ್‌ನಿಂದಲೇ ಸ್ಪೋಟಕ ಪ್ರದರ್ಶನ ನೀಡಲು ಮುಂದಾದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಮೊದಲ ವಿಕೆಟ್‌ಗೆ 25 ಎಸೆತಗಳಲ್ಲಿ 54 ರನ್‌ ಜೊತೆಯಾಟ ನೀಡಿತ್ತು. ಅತ್ತ ಅಭಿಷೇಕ್‌ ಶರ್ಮಾ 17 ಎಸೆತಗಳಲ್ಲಿ 34 ರನ್‌ ಗಳಿಸಿ ಔಟಾಗುತ್ತಿದ್ದಂತೆ ಇತ್ತ ಟ್ರಾವಿಸ್‌ ಹೆಡ್‌ ಕೂಡ 10 ಎಸೆತಗಳಲ್ಲಿ 17 ರನ್‌ ಬಾರಿಸಿ ಪೆವಿಲಿಯನ್‌ಗೆ ಮರಳಿದರು. ಇದನ್ನೂ ಓದಿ: ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಏಂಜೆಲೊ ಮ್ಯಾಥ್ಯೂಸ್

    3ನೇ ವಿಕೆಟ್‌ಗೆ ಇಶಾನ್‌ ಕಿಶನ್‌ ಮತ್ತು ಕ್ಲಾಸೆನ್‌ ಜೋಡಿ 27 ಎಸೆತಗಳಲ್ಲಿ 48 ರನ್‌, 4ನೇ ವಿಕೆಟಿಗೆ ಕಿಶನ್‌-ಅನಿಕೇತ್‌ ವರ್ಮಾ ಜೋಡಿ 17 ಎಸೆತಗಳಲ್ಲಿ ಸ್ಫೋಟಕ 43 ರನ್‌ ಚಚ್ಚಿ ತಂಡದ ಮೊತ್ತ ಹೆಚ್ಚಿಸಿತು. ಇನ್ನೂ ಕೊನೆಯಲ್ಲಿ ನ್ಯಾಯಕ ಪ್ಯಾಟ್‌ ಕಮ್ಮಿನ್ಸ್‌ ಹಾಗೂ ಇಶಾನ್‌ ಕಿಶನ್‌ ಜೋಡಿ ಕೇವಲ 18 ಎಸೆತಗಳಲ್ಲಿ 43 ರನ್‌ ಚಚ್ಚಿ ತಂಡದ ಮೊತ್ತವನ್ನು 200 ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾಯಿತು. ಇದನ್ನೂ ಓದಿ: IPL 2025 | ಮೋದಿ ಸ್ಟೇಡಿಯಂನಲ್ಲೇ ಫೈನಲ್‌ ಮ್ಯಾಚ್‌

    ಹೈದರಾಬಾದ್‌ ಪರ 195.83 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಇಶಾನ್‌ ಕಿಶನ್‌ ಅಜೇಯ 94 ರನ್‌ (48 ಎಸೆತ, 5 ಸಿಕ್ಸರ್‌, 7 ಬೌಂಡರಿ) ಚಚ್ಚಿದ್ರೆ ,‌ ಅಭಿಷೇಕ್‌ ಶರ್ಮಾ 34 ರನ್‌, ಟ್ರಾವಿಸ್‌ ಹೆಡ್‌ 17 ರನ್‌, ಹೆನ್ರಿಕ್‌ ಕ್ಲಾಸೆನ್‌ 24 ರನ್‌, ಅನಿಕೇತ್‌ ವರ್ಮಾ 26 ರನ್‌, ಅಭಿನವ್‌ ಮನೋಹರ್‌ 12 ರನ್‌, ಪ್ಯಾಟ್‌ ಕಮ್ಮಿನ್ಸ್‌ ಅಜೇಯ 13 ರನ್‌ ಗಳಿಸಿದರು. ಇದನ್ನೂ ಓದಿ: ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಉದ್ಧಟತನ – ಒಂದು ಪಂದ್ಯಕ್ಕೆ ದಿಗ್ವೇಶ್ ಅಮಾನತು, ಭಾರೀ ದಂಡ

    ಇನ್ನೂ ಆರ್‌ಸಿಬಿ ಪರ ರೊಮಾರಿಯೊ ಶೆಫರ್ಡ್‌ 2 ವಿಕೆಟ್‌ ಕಿತ್ತರೆ, ಭುವನೇಶ್ವರ್‌ ಕುಮಾರ್‌, ಲುಂಗಿ ಎನ್‌ಗಿಡಿ, ಸುಯಶ್‌ ಶರ್ಮಾ, ಕೃನಾಲ್‌ ಪಾಂಡ್ಯ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: ಫ್ಯಾಂಟಸಿ ಕ್ರಿಕೆಟ್‌ನಲ್ಲಿ ಗೆದ್ದ ಅಭಿಮಾನಿಗೆ ಲ್ಯಾಂಬೊರ್ಗಿನಿ ಕಾರು ಗಿಫ್ಟ್‌ ಕೊಟ್ಟ ರೋಹಿತ್‌ ಶರ್ಮಾ

  • ಬಾರ್ಬಡೋಸ್‌ನಲ್ಲೇ ಸಿಲುಕಿದ ಟೀಂ ಇಂಡಿಯಾ – ಜಿಂಬಾಬ್ವೆ ಸರಣಿಗೆ ಸುದರ್ಶನ್‌, ರಾಣಾ, ಜಿತೇಶ್‌ ಆಯ್ಕೆ!

    ಬಾರ್ಬಡೋಸ್‌ನಲ್ಲೇ ಸಿಲುಕಿದ ಟೀಂ ಇಂಡಿಯಾ – ಜಿಂಬಾಬ್ವೆ ಸರಣಿಗೆ ಸುದರ್ಶನ್‌, ರಾಣಾ, ಜಿತೇಶ್‌ ಆಯ್ಕೆ!

    ಹರಾರೆ: ಚಂಡಮಾರುತ ಅಪ್ಪಳಿಸಿದ್ದರಿಂದಾಗಿ ಜಿಂಬಾಬ್ವೆ ವಿರುದ್ಧ ಟಿ20 ಸರಣಿಗೆ ಆಯ್ಕೆಯಾಗಿದ್ದ ಯಶಸ್ವಿ ಜೈಸ್ವಾಲ್‌ (Yashasvi Jaiswal), ಶಿವಂ ದುಬೆ ಹಾಗೂ ಸಂಜು ಸ್ಯಾಮ್ಸನ್‌ ಬಾರ್ಬಡೋಸ್‌ನಲ್ಲೇ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಟಿ20 ಆಯ್ಕೆ ಸಮಿತಿ ಮೊದಲ 2 ಪಂದ್ಯಗಳಿಗೆ ಸಾಯಿ ಸುದರ್ಶನ್‌, ಹರ್ಷಿತ್‌ ರಾಣಾ (Harshit Rana) ಹಾಗೂ ಜಿತೇಶ್‌ ಶರ್ಮಾ ಅವರನ್ನ ಆಯ್ಕೆ ಮಾಡಿದೆ.

    ಜೈಸ್ವಾಲ್‌, ಶಿವಂ ದುಬೆ, ಸಂಜು ಸ್ಯಾಮ್ಸನ್‌ (Sanju Samson) ಭಾರತ ಟಿ20 ವಿಶ್ವಕಪ್‌ ತಂಡದ ಭಾಗವಾಗಿದ್ದರು. ಆದ್ರೆ ಚಂಡಮಾರುತದಿಂದಾಗಿ ಇಡೀ ತಂಡ ಬಾರ್ಬಡೋಸ್‌ನಲ್ಲೇ ಬೀಡುಬಿಟ್ಟಿದೆ. ಅವರು ಭಾರತಕ್ಕೆ ಬಂದ ನಂತರ ಜಿಂಬಾಬ್ವೆ ಸರಣಿಗೆ ಕಳುಹಿಸಲಾಗುತ್ತದೆ. ಹಾಗಾಗಿ 5 ಪಂದ್ಯಗಳ ಸರಣಿಯ ಮೊದಲ 2 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಿಗೆ ಸ್ಯಾಮ್ಸನ್‌, ದುಬೆ ಹಾಗೂ ಜೈಸ್ವಾಲ್‌ ಬದಲಿಗೆ ಸುದರ್ಶನ್‌, ರಾಣಾ ಹಾಗೂ ಜಿತೇಶ್‌ ಶರ್ಮಾ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

    ಇದೇ ಜುಲೈ 6 ರಿಂದ ಜುಲೈ 14ರ ವರೆಗೆ ಜಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ 4 ಪಂದ್ಯಗಳು ಸಂಜೆ 4:30ಕ್ಕೆ ಹಾಗೂ ಒಂದು ಪಂದ್ಯ ರಾತ್ರಿ 9:30ಕ್ಕೆ ಆರಂಭವಾಗಲಿದೆ. 5 ಪಂದ್ಯಗಳು ಜಿಂಬಾಬ್ವೆಯ ಹರಾರೆ ಸ್ಫೋರ್ಟ್‌ಕ್ಲಬ್‌ ಮೈದಾನದಲ್ಲಿ ನಡೆಯಲಿದೆ. ಇದನ್ನೂ ಓದಿ: ಭೀಕರ ಚಂಡಮಾರುತ – ಬಾರ್ಬಡೋಸ್‌ನಲ್ಲೇ ಬೀಡುಬಿಟ್ಟ ಟೀಂ ಇಂಡಿಯಾ!

    ಕೆರೀಬಿಯನ್ ದ್ವೀಪಗಳಲ್ಲಿ ಜುಲೈ 1ರ ಬೆಳಗ್ಗಿನ ಜಾವದಿಂದಲೇ ಚಂಡಮಾರುತ ಬೀಸುತ್ತಿರುವುದರಿಂದ ವಿಮಾನಯಾನವೂ ಸೇರಿದಂತೆ ಎಲ್ಲ ನಾಗರಿಕ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮುಖ್ಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸದ್ಯಕ್ಕೆ ಸೇವೆ ಸ್ಥಗಿತಗೊಳಿಸಲಾಗಿದೆ .ಬಾರ್ಬಡೋಸ್ ಮತ್ತು ಸುತ್ತಮುತ್ತಲಿನ ದ್ವೀಪಗಳಲ್ಲಿ ಬಿರುಗಾಳಿಯ ತೀವ್ರತೆಯೂ ಹೆಚ್ಚಾಗಿದ್ದು, ಅಪಾಯಮಟ್ಟದಲ್ಲಿದೆ. ಹಾಗಾಗಿ ಟೀಂ ಇಂಡಿಯಾ ತವರಿಗೆ ಮರಳುವುದು ಇನ್ನೂ ಮೂರು ದಿನ ತಡವಾಗಲಿದೆ ಎಂದು ಬಿಸಿಸಿಐ ತಿಳಿಸಿದೆ.

    ಭಾರತ ತಂಡ:
    ಶುಭಮನ್‌ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಧ್ರುವ್ ಜುರೆಲ್ (ವಿಕೆಟ್‌ ಕೀಪರ್‌), ಶಿವಂ ದುಬೆ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಅವೇಶ್ ಖಾನ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ. ಬದಲಾದ ಆಟಗಾರರು ಸಾಯಿ ಸುದರ್ಶನ್‌, ಹರ್ಷಿತ್‌ ರಾಣಾ ಹಾಗೂ ಜಿತೇಶ್‌ ಶರ್ಮಾ. ಇದನ್ನೂ ಓದಿ: ಐಸಿಸಿ ಕನಸಿನ ತಂಡ ಪ್ರಕಟ – ಕೊಹ್ಲಿಗಿಲ್ಲ ಸ್ಥಾನ, ಪಟ್ಟಿಯಲ್ಲಿದ್ದಾರೆ 6 ಟೀಂ ಇಂಡಿಯಾ ಆಟಗಾರರು

    ಜಿಂಬಾಬ್ವೆ ತಂಡ:
    ಸಿಕಂದರ್‌ ರಾಝಾ (ಸಿ), ಅಕ್ರಮ್ ಫರಾಜ್, ಬೆನೆಟ್ ಬ್ರಿಯಾನ್, ಕ್ಯಾಂಪ್ಬೆಲ್ ಜೊನಾಥನ್, ಚತಾರಾ, ಜೊಂಗ್ವೆ, ಇನೋಸೆಂಟ್, ಮದಂಡೆ ಕ್ಲೈವ್, ಮಾಧೆವೆರೆ, ತಡಿವಾನಾಶೆ, ವೆಲ್ಲಿಂಗ್ಟನ್, ಮಾವುತಾ ಬ್ರಾಂಡನ್, ಮುಜರಾಬಾನಿ, ಮೈಯರ್ಸ್ ಡಿಯೋನ್, ನಖ್ವಿ ಅಂತುಮ್, ನ್ಗರವ ಮತ್ತು ಶುಂಬಾ ಮಿಲ್ಟನ್. ಇದನ್ನೂ ಓದಿ: ವಿಶ್ವಕಪ್‌ ಗೆಲ್ಲಲು ಕಾರಣವಾಗಿದ್ದು 3 ಮಹತ್ವದ ನಿರ್ಧಾರ – ಟೀಂ ಇಂಡಿಯಾ ಸಿದ್ಧಗೊಂಡಿದ್ದು ಹೇಗೆ?