Tag: ಜಿನಿವಾ

  • ಇಂದು ಜಿನಿವಾ ನಗರದಲ್ಲಿ ‘ಕಾಂತಾರ’ ಚಿತ್ರದ ಪ್ರದರ್ಶನ

    ಇಂದು ಜಿನಿವಾ ನಗರದಲ್ಲಿ ‘ಕಾಂತಾರ’ ಚಿತ್ರದ ಪ್ರದರ್ಶನ

    ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ, ಪರ್ಮನೆಂಟ್ ಮಿಷನ್ ಆಫ್ ಟು ದಿ ಯು ಎನ್ ಹಾಗೂ ಜಿನಿವಾದ ಕೆಲವು ಅಂತರಾಷ್ಟ್ರೀಯ ಸಂಸ್ಥೆಗಳಿಂದ ‘ಕಾಂತಾರ’ (Kantara) ಚಿತ್ರದ ಪ್ರದರ್ಶನನವನ್ನು ಆಯೋಜನೆ ಮಾಡಲಾಗಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಭ್ ಶೆಟ್ಟಿ (Rishab Shetty) ನಟಿಸಿ, ನಿರ್ದಶಿಸಿರುವ ಈ ಚಿತ್ರ ಈಗಾಗಲೇ ವಿಶ್ವದಾದ್ಯಂತ ಜನಮನ್ನಣೆ ಪಡೆದಿದೆ.

    ಸ್ವಿಜರ್ಲ್ಯಾಂಡ್ ಜಿನಿವಾ (Geneva) ನಗರದಲ್ಲಿ ಕಳೆದ ಕೆಲವು ದಿನಗಳಿಂದ ವಿಶ್ವಸಂಸ್ಥೆಯ (United Nations) ವಾರ್ಷಿಕ ಸಭೆ ನಡೆಯುತ್ತಿದೆ. ಇದರಲ್ಲಿ ಪಾಲ್ಗೊಂಡಿರುವ ರಿಷಭ್ ಶೆಟ್ಟಿ ಅವರು ಈಗಾಗಲೇ ಕೆಲವು ಉಪಯುಕ್ತ ವಿಷಯಗಳ ಬಗ್ಗೆ ಅಲ್ಲಿ ಮಾತನಾಡಿದ್ದಾರೆ. ಇಂದು ಸಂಜೆ ಜಿನಿವಾದ ಕಾಲಮಾನದ ಪ್ರಕಾರ ಸಂಜೆ 6.30ಕ್ಕೆ ಹಾಲ್ ಸಂಖ್ಯೆ 13ರ ಪಾಥೆ ಬಾಲೆಕ್ಸರ್ಟ್ ನಲ್ಲಿ ಕಾಂತಾರ ಚಿತ್ರ ಪ್ರದರ್ಶನವಾಗಲಿದೆ. ಇದನ್ನೂ ಓದಿ: ಪೆದ್ದಮ್ಮ ತಲ್ಲಿ ದೇವಿಗೆ ಸೀರೆ, ಗಾಜಿನ ಬಳೆ ಅರ್ಪಣೆ ಮಾಡಿದ ಸಮಂತಾ

    ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ, ಪರ್ಮನೆಂಟ್ ಮಿಷನ್ ಆಫ್ ಟು ದಿ ಯು ಎನ್ ಹಾಗೂ ಕೆಲವು ಅಂತರಾಷ್ಟ್ರೀಯ ಸಂಸ್ಥೆಗಳು(ಜಿನಿವಾ)  ಆಯೋಜಿಸಿರುವ ಈ ಪ್ರದರ್ಶನದಲ್ಲಿ ರಿಷಭ್ ಶೆಟ್ಟಿ ಅವರು ಪಾಲ್ಗೊಳ್ಳಲಿದ್ದಾರೆ. ಪ್ರದರ್ಶನದ ನಂತರ ರಿಷಭ್ ಶೆಟ್ಟಿ ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ ಹಾಗೂ ಕಾಂತಾರ ಚಿತ್ರದ ಕುರಿತು ಮಾತನಾಡಲಿದ್ದಾರೆ.

    ಕನ್ನಡದ ಚಿತ್ರವೊಂದು ವಿಶ್ವದಾದ್ಯಂತ ಈ ರೀತಿ ಮೆಚ್ಚುಗೆಗೆ ಪಾತ್ರವಾಗುತ್ತಿರುವುದು ನಿಜಕ್ಕೂ ಹೆಮ್ಮೆ. ರಿಷಭ್ ಶೆಟ್ಟಿ ಮೊದಲಿನಿಂದಲೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಈ ಚಿತ್ರವನ್ನು ಅರ್ಪಿಸಿರುವುದಾಗಿ ಹೇಳುತ್ತಾ ಬರುತ್ತಿದ್ದಾರೆ. ಇಂದು ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ. ಅದೇ ದಿನ ಈ ಪ್ರದರ್ಶನ ಆಯೋಜನೆಯಾಗಿರುವುದು ವಿಶೇಷ. ಅವರ ಹುಟ್ಟುಹಬ್ಬದ ದಿನ ಪ್ರದರ್ಶನವಾಗಲಿರುವ ಈ ಪ್ರದರ್ಶನವನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಿಸುವುದಾಗಿ ರಿಷಭ್ ಶೆಟ್ಟಿ ತಿಳಿಸಿದ್ದಾರೆ.

  • ಜಿನಿವಾದಲ್ಲಿ ನಾಳೆ ‘ಕಾಂತಾರ’ ಸಿನಿಮಾ ಪ್ರದರ್ಶನ : ರಿಷಬ್ ಶೆಟ್ಟಿ ಭಾಗಿ

    ಜಿನಿವಾದಲ್ಲಿ ನಾಳೆ ‘ಕಾಂತಾರ’ ಸಿನಿಮಾ ಪ್ರದರ್ಶನ : ರಿಷಬ್ ಶೆಟ್ಟಿ ಭಾಗಿ

    ವಿಶ್ವಸಂಸ್ಥೆಯ ಮಾನವ ಮಾನವ ಹಕ್ಕುಗಳ ಮಂಡಳಿ(UNHRC) ವಾರ್ಷಿಕ ಸಭೆಯಲ್ಲಿ ಮಾತನಾಡಲು ಈಗಾಗಲೇ ಸ್ವಿಜರ್ಲ್ಯಾಂಡ್‌ನ ಜಿನಿವಾ (Geneva) ತಲುಪಿರುವ ರಿಷಬ್ ಶೆಟ್ಟಿ (Rishabh Shetty), ಆಗಲೇ ಕನ್ನಡದಲ್ಲಿ ಮಾತುಗಳನ್ನೂ ಆಡಿದ್ದಾರೆ. ಮಾತುಗಳ ನಂತರ ನಾಳೆ ಕಾಂತಾರ  (Kantara) ಸಿನಿಮಾದ ಪ್ರದರ್ಶನಕ್ಕೆ ವಿಶ್ವಸಂಸ್ಥೆ ಸಿದ್ಧತೆ ಮಾಡಿಕೊಂಡಿದೆ. ಮಾರ್ಚ್ 17 ರಂದು ಹಾಲ್ ಸಂಖ್ಯೆ 13ರ ಪಾಥೆ ಬಾಲೆಕ್ಸರ್ಟ್ ನಲ್ಲಿ ಸಿನಿಮಾ ಪ್ರದರ್ಶನಗೊಳ್ಳುತ್ತಿರುವುದಾಗಿ ಸಿಜಿಎಪಿಪಿ ನಿರ್ದೇಶಕಿ ಅನಿಂಧ್ಯಾ ಸೇನ್ ಗುಪ್ತ ತಿಳಿಸಿದ್ದಾರೆ.

    ಸೆಂಟರ್ ಫಾರ್ ಗ್ಲೋಬಲ್ ಅಫೇರ್ಸ್ ಮತ್ತು ಪಬ್ಲಿಕ್ ಪೊಲೀಸ್‍ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ನಲ್ಲಿ ರಿಷಬ್ ಪರಿಸರ, ಹವಾಮಾನ ಮತ್ತು ಸಂರಕ್ಷಣೆಯ ಕುರಿತು ಹಾಗೂ ಕಾಂತಾರ ಸಿನಿಮಾದ ಬಗ್ಗೆಯೂ ಮಾತನಾಡಲಿದ್ದಾರೆ ಎಂದು ನಿರ್ದೇಶಕಿ ಅನಿಂಧ್ಯಾ ಮಾಹಿತಿ ನೀಡಿದ್ದಾರೆ. ಈಗಾಗಲೇ ಮಾತನಾಡುವ ವಿಷಯದ ಮೌಖಿಕ ಸಲ್ಲಿಕೆಯನ್ನು ರಿಷಬ್ ಪೂರ್ಣಗೊಳಿಸಿದ್ದು, ಇನ್ನಷ್ಟೇ ಅವರು ಭಾಷಣವನ್ನು ಮಾಡಬೇಕಿದೆ. ಇದನ್ನೂ ಓದಿ: ಧನಂಜಯ ನಟನೆಯ 25ನೇ ಸಿನಿಮಾ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

    ಇಂದು ಕನ್ನಡದಲ್ಲೇ (Kannada) ರಿಷಬ್ ಭಾಷಣ ಮಾಡಲಿದ್ದು, ನಾಳೆ ಸ್ವಿಝರ್ ಲ್ಯಾಂಡ್ ಕಾಲಮಾನದ ಪ್ರಕಾರ ಸಂಜೆ 6.30ಕ್ಕೆ ಕಾಂತಾರ ಸಿನಿಮಾದ ಪ್ರದರ್ಶನದಲ್ಲೂ ಭಾಗಿಯಾಗಲಿದ್ದಾರೆ. ಸಿನಿಮಾ ಪ್ರದರ್ಶನದ ನಂತರ ಅವರೊಂದಿಗೆ ಮಾತುಕತೆಗೂ ಕೂಡ ಸಂಸ್ಥೆಯು ಆಯೋಜನೆ ಮಾಡಿದೆ.

    ರಿಷಬ್ ಆಪ್ತರು ಹೇಳುವಂತೆ ಕಾಂತಾರ ಸಿನಿಮಾವನ್ನೇ ಆಧಾರವಾಗಿಟ್ಟುಕೊಂಡು, ಕರ್ನಾಟಕ ಸಂಸ್ಕೃತಿ, ದೈವಾರಾಧನೆ, ಕಾಡಿನ ಜನರ ಬದುಕು ಹೀಗೆ ನಾಡಿ ಭವ್ಯ ಸಂಸ್ಕೃತಿಯ ಕುರಿತು ಮಾತನಾಡಲಿದ್ದಾರಂತೆ. ಜೊತೆಗೆ ಭಾರತೀಯ ಸಿನಿಮಾ ರಂಗ ಬೆಳೆದು ಬಂದ ಬಗೆಯನ್ನೂ ವಿವರಿಸಲಿದ್ದಾರಂತೆ. ವಿಶ್ವಸಂಸ್ಥೆಯ ವೇದಿಕೆಯ ಮೇಲೆ ಭಾರತೀಯ ಸಂಸ್ಕೃತಿಯ ಅನಾವರಣ ರಿಷಬ್ ಮೂಲಕ ಆಗುತ್ತಿದೆ.

    ಕಾಂತಾರ ಸಿನಿಮಾದ ಮೂಲಕ ಈಗಾಗಲೇ ಜಗತ್ತಿಗೆ ಕರ್ನಾಟಕದ ಸಂಸ್ಕೃತಿಯನ್ನು ಪರಿಚಯಿಸಿದ ರಿಷಬ್, ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಹಲವು ರಾಷ್ಟ್ರಗಳ ಪ್ರತಿನಿಧಿಗಳ ಮುಂದೆ ಕರ್ನಾಟಕದ ಅದರಲ್ಲೂ ದಕ್ಷಿಣ ಕನ್ನಡದ ಶ್ರೀಮಂತ ಸಂಸ್ಕೃತಿಯನ್ನು ರಿಷಬ್ ಹಂಚಿಕೊಳ್ಳಲಿದ್ದಾರೆ. ಈ ವಿಷಯ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದ್ದು, ರಿಷಬ್ ಮಾತಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.